Tag: suicde

  • ಅಕ್ರಮ ಸಂಬಂಧ ಇಟ್ಟುಕೊಂಡು ಚಿತ್ರಹಿಂಸೆ ಕೊಟ್ಟ: ಪವಿತ್ರಾ ಬರೆದ ಡೆತ್‍ನೋಟ್‍ನಲ್ಲೇನಿದೆ?

    ಅಕ್ರಮ ಸಂಬಂಧ ಇಟ್ಟುಕೊಂಡು ಚಿತ್ರಹಿಂಸೆ ಕೊಟ್ಟ: ಪವಿತ್ರಾ ಬರೆದ ಡೆತ್‍ನೋಟ್‍ನಲ್ಲೇನಿದೆ?

    ಬೆಂಗಳೂರು: ಪತಿ ಹಾಗೂ ಆತನ ಗರ್ಲ್‍ಫ್ರೆಂಡ್ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆ (Pavithra Suicide Case) ಪ್ರಕರಣ ಸಂಬಂಧ ಇದೀಗ ಪತ್ನಿ ಬರೆದಿರುವ ಡೆತ್‍ನೋಟ್ ಪೊಲೀಸರ ಕೈ ಸೇರಿದೆ.

    ಡೆತ್‍ನೋಟ್‍ನಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡು ಚಿತ್ರಹಿಂಸೆ ಕೊಟ್ಟ ಪತಿ ಚೇತನ್ ನನಗೆ ಚಿತ್ರಹಿಂಸೆ ಕೊಟ್ಟಿದ್ದಾನೆ. ಹೀಗಾಗಿ ಅವರಿಗೆ ಶಿಕ್ಷೆ ಆಗಬೇಕು ಎಂದು ಮೃತ ಪವಿತ್ರಾ ಆಗ್ರಹಿಸಿದ್ದಾರೆ.

    ಡೆತ್‍ನೋಟ್‍ನಲ್ಲೇನಿದೆ..?: ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂದ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ.

    ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೌಡಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್‍ನೋಟ್‍ನಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪಬ್‍ಜಿ ಗೆಳೆಯನ ಭೇಟಿಗೆ 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕ್ ಮಹಿಳೆ!

    ಏನಿದು ಪ್ರಕರಣ..?: ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ್ ಗೌಡರನ್ನು ಪವಿತ್ರಾ ಎರಡನೇ ಮದುವೆಯಾಗಿದ್ದಳು. ಚೇತನ್ ಕೆಲಸ ಮಡುತ್ತಿದ್ದ ಖಾಸಗಿ ಕಂಪನಿಯೊಂದರಲ್ಲಿಯೇ ಪವಿತ್ರಾ ಕೂಡ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೋರ್ವ ಯುವತಿಯ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಜಗಳವಾಗುತ್ತಿತ್ತು. ಈ ಬಗ್ಗೆ ಪವಿತ್ರಾ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಬಳಿಕ ಮನನೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್‍ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ.

    ಮೃತಳ ತಾಯಿ ಪದ್ಮಮ್ಮರ ದೂರಿನನ್ವಯ ಐಪಿಸಿ 306 ಆತ್ಮಹತ್ಯೆ ಪ್ರಚೋದನೆ ಅಡಿ ದೂರು ದಾಖಲಾಗಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ (Kengeri Police Station) ಚೇತನ್ ಗೌಡ ಹಾಗೂ ಮತ್ತೋರ್ವ ಯುವತಿ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೃತ ಶಂಕರಣ್ಣನ ಪತ್ನಿ ಮೇಘನಾ ಗರ್ಭಿಣಿ

    ಮೃತ ಶಂಕರಣ್ಣನ ಪತ್ನಿ ಮೇಘನಾ ಗರ್ಭಿಣಿ

    ತುಮಕೂರು: ಬೆಳಿಗ್ಗೆಯಷ್ಟೇ ಆತ್ಮಹತ್ಯೆಗೆ ಶರಣಾಗಿರುವ ಶಂಕರಣ್ಣನ ಪತ್ನಿ ಮೇಘನಾ 4 ತಿಂಗಳ ಗರ್ಭಿಣಿಯಾಗಿದ್ದಾರೆ ಎನ್ನುವ ವಿಚಾರ ಖಚಿತ ಮೂಲಗಳಿಂದ ತಿಳಿದು ಬಂದಿದೆ.

    ಮೇಘನಾ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾರೆ. ಮನೆಯಲ್ಲಿ ಖುಷಿ ಪಡಬೇಕಾದ ಈ ಸಂದರ್ಭದಲ್ಲಿ ಶಂಕರಣ್ಣನ ಅಗಲಿಕೆಯಿಂದ ಶೋಕಾಚರಣೆ ಮಾಡುವ ದುರ್ವಿಧಿ ಬಂದೊದಗಿದೆ ಎನ್ನಲಾಗಿದೆ. ಇದನ್ನೂ ಓದಿ: ಪತಿ ಶಂಕರಣ್ಣ ಸಾವಿಗೆ ಅತ್ತೆಯೇ ಕಾರಣ: ಪತ್ನಿ ಮೇಘನಾ ಆರೋಪ

    Shankaranna

    ಘಟನೆ ಕುರಿತು ಮಾತನಾಡಿರುವ ಶಂಕರಣ್ಣ ಅವರ ತಾಯಿ ರಂಗಮ್ಮ, ಸೊಸೆ ದಿನಾಲೂ ಜಗಳ ಮಾಡುತ್ತಿದ್ದಳು, ಕಿರಿಕಿರಿ ಕೊಡುತ್ತಿದ್ದಳು, ಮಗನಿಗಿದ್ದ 3 ಎಕರೆ ಜಮೀನು ಮಾರಿ ಬೆಂಗಳೂರಿಗೆ ಹೋಗೋಣ ಅನ್ನುತ್ತಿದ್ದಳು ಎಂದು ಮೇಘನಾ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಓದಿ: ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ಅತ್ತೆ-ಸೊಸೆ ನಡುವೆ ಜಗಳ ಇರಲಿಲ್ಲ. ಮೇಘನಾ ಒಂದೊಮ್ಮೆ ನಾನು ಮಾತನಾಡುವುದನ್ನು ರೆಕಾರ್ಡ್ ಮಾಡಿಕೊಳ್ಳಲು ತಮ್ಮನನ್ನು ಕರೆಸಿದ್ದರು. ನಾನು ಆಗ ಏನೂ ಮಾತನಾಡದೇ ಆಚೆಗೆ ಬಂದುಬಿಟ್ಟಿದ್ದೆ. ಆಗ ಅವರಿಬ್ಬರ ನಡುವೆ ಜಗಳ ನಡೆದಿತ್ತು. ಮಗನಿಗೆ ವಿಷಯ ತಿಳಿಸಿದಾಗ, ನನ್ನ ತಮ್ಮನೊಂದಿಗೆ ಜಗಳ ಕಾದಿದ್ದಕ್ಕೆ ಏನಾಯ್ತು? ಎಂದು ಗದರಿದ್ದಳು. ಅಂದಿನಿಂದ ನನ್ನೊಂದಿಗೆ ಮಾತನಾಡುವುದನ್ನೂ ಬಿಟ್ಟು, ನನ್ನನ್ನು ಹೊರಹಾಕಿ – ಹೊರಹಾಕಿ ಎಂದು ಪೀಡಿಸುತ್ತಿದ್ದಳು. ಆದರೆ, ಮಗ ಮಾತ್ರ ನಾನು ನಮ್ಮಮ್ಮನನ್ನು ಬಿಟ್ಟು ಬರುವುದಿಲ್ಲ. ಇಲ್ಲಿಂದ ಆಚೆ ಬಂದರೆ ಸತ್ತು ಹೋಗುತ್ತೇನೆ ಎಂದು ಹೇಳಿದ್ದ ಎಂದು ಅಳಲು ತೋಡಿಕೊಂಡಿದ್ದಾರೆ.

  • ಕಾಲೇಜಿನಲ್ಲೇ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

    ಕಾಲೇಜಿನಲ್ಲೇ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

    ಬೆಂಗಳೂರು: ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಹೆಣ್ಣೂರು ಬಳಿಯ ವಿಬಿಆರ್ ಕಾಲೇಜಿನಲ್ಲಿ ನಡೆದಿದೆ.

    ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿಯನ್ನು ಸೋನಿ (17) ಎಂದು ಗುರುತಿಸಲಾಗಿದೆ. ಈಕೆ ವಿಬಿಆರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾಳೆ. ಯುವತಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇನ್ನು ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಶಿಕ್ಷಕಿ, ಸಿಆರ್‍ಪಿ ಆತ್ಮಹತ್ಯೆ- ಸಹೋದ್ಯೋಗಿಗಳಿಂದ ಕಿರುಕುಳ ಆರೋಪ

    ಶಿಕ್ಷಕಿ, ಸಿಆರ್‍ಪಿ ಆತ್ಮಹತ್ಯೆ- ಸಹೋದ್ಯೋಗಿಗಳಿಂದ ಕಿರುಕುಳ ಆರೋಪ

    ತುಮಕೂರು: ಸಹೋದ್ಯೋಗಿಗಳ ಕಿರುಕುಳದಿಂದ ಬೇಸತ್ತ ಶಿಕ್ಷಕಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ(ಸಿಆರ್‍ಪಿ)ಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ದುಗುಡಿಹಳ್ಳಿಯ ತನ್ನ ಮನೆಯಲ್ಲಿ ಶಿಕ್ಷಕಿ ಮಮತಾ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತಘಟ್ಟ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿದ್ದ ಮಮತಾಗೆ ಕೆಲ ಶಿಕ್ಷಕರು ಹಾಗೂ ನೌಕರರ ಸಂಘದ ಅಧ್ಯಕ್ಷರು ಕಿರುಕುಳ ನೀಡುತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಮತಾ ತಾಯಿ ಯಶೋಧಾ ಪೊಲೀಸರಿಗೆ ದೂರು ನೀಡಿದ್ದಾರೆ.

    ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಲಕ್ಷ್ಮಿಕಾಂತ, ಬರಗೂರು ಕ್ಲಸ್ಟರ್ ಸಿಆರ್ ಪಿ ಪ್ರಸನ್ನ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶಿವಮೂರ್ತಿ ಮಮತಾಗೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಶಾಲಾ ದಾಖಲಾತಿ, ಕಾಮಗಾರಿ ತನಿಖೆ ಸಂದರ್ಭದಲ್ಲಿ ಈ ಮೂವರು ತನಗೆ ಕಿರುಕುಳ ನೀಡುತಿದ್ದರು ಎಂದು ಮಮತಾ ಮನೆಯವರಲ್ಲಿ ಹೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಮೂವರ ವಿರುದ್ದ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.