Tag: suicide

  • ಸೀನಿಯರ್‌ನಿಂದ ಪ್ರೀತಿಸುವಂತೆ ಕಿರುಕುಳ ಆರೋಪ – ಬೆಂಗಳೂರಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

    ಸೀನಿಯರ್‌ನಿಂದ ಪ್ರೀತಿಸುವಂತೆ ಕಿರುಕುಳ ಆರೋಪ – ಬೆಂಗಳೂರಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

    ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ.

    ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಬೆಳಗಾವಿ | ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

    ಸಹ ವಿದ್ಯಾರ್ಥಿ ಪ್ರೀತಿಸುವಂತೆ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸನಾ ಪರ್ವಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಸನಾ ಪರ್ವಿನ್‌ ಮಡಿಕೇರಿ ಮೂಲದ ಯುವತಿ. ಈಕೆಗೆ ಕೇರಳದ ಮೂಲದ ಯುವಕ, ಪಿಜಿ ಮತ್ತು ಕಾಲೇಜು ಬಳಿ ಬಂದು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಅಸಭ್ಯವಾಗಿ ಮೆಸೇಜ್‌ ಮಾಡುತ್ತಿದ್ದ. ಕಳೆದ 10 ತಿಂಗಳಿಂದ ಆಕೆಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು -‌ ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ

    ಯುವಕನ ಕಿರುಕುಳದ ವಿಚಾರವನ್ನು ಯುವತಿ ತನ್ನ ಪೋಷಕರಿಗೂ ತಿಳಿಸಿದ್ದಳು. ಆದರೆ, ನಿನ್ನೆ ರಾತ್ರಿ ತನ್ನ ಪಿಜಿ ಸಹಪಾಠಿಗಳು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.

  • 27 ತಿಂಗಳಿನಿಂದ ಸಂಬಳ ಇಲ್ಲ – ಪಂಚಾಯತ್‌ ಕಚೇರಿ ಮುಂದೆಯೇ ವಾಟರ್‌ಮ್ಯಾನ್‌ ನೇಣಿಗೆ ಶರಣು

    27 ತಿಂಗಳಿನಿಂದ ಸಂಬಳ ಇಲ್ಲ – ಪಂಚಾಯತ್‌ ಕಚೇರಿ ಮುಂದೆಯೇ ವಾಟರ್‌ಮ್ಯಾನ್‌ ನೇಣಿಗೆ ಶರಣು

    ಚಾಮರಾಜನಗರ: 27 ತಿಂಗಳಿಂದ ಸಂಬಳ (Salary) ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ.

    ವಾಟರ್‌ಮ್ಯಾನ್‌ ಚಿಕ್ಕೂಸನಾಯಕ (60) ಅವರು ಗ್ರಾಮ ಪಂಚಾಯತ್‌ (Village Panchayat) ಕಚೇರಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಆತ್ಮಹತ್ಯೆಗೆ ಶರಣಾಗುವ ಮುನ್ನ ಚಿಕ್ಕೂಸನಾಯಕ ಡೆತ್ ನೋಟ್ ಬರೆದು ಗೋಡೆಗೆ ಅಂಟಿಸಿದ್ದಾರೆ. ಗ್ರಾಪಂ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್, ಪಿಡಿಒ ರಾಮೇಗೌಡ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ನನಗೆ ರಜೆ ಬೇಕೆಂದರೂ ಕೊಡದೇ ಕಿರುಕುಳ ಕೊಡುತ್ತಿದ್ದರು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ವರೆಗೂ ಕೆಲಸ ಮಾಡಿಸುತ್ತಿದ್ದರು. ಎಷ್ಟು ಬಾರಿ ಮನವಿ ಮಾಡಿದರೂ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ದರು.

    ಬಿಲ್ ಕಲೆಕ್ಷನ್ ಮಾಡಿಕೊಂಡು ಬಂದರಷ್ಟೇ ಸಂಬಳ ಕೊಡುವುದಾಗಿ ಪಿಡಿಒ ರಾಮೇಗೌಡ ಪೀಡಿಸಿಸುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಡಿಒ ಹಾಗೂ ಗ್ರಾ.ಪಂ.ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಲು ಕುಟುಂಬಸ್ಥರ ಆಗ್ರಹಿಸಿದ್ದಾರೆ.

  • ಜಾತಿ ಕಿರುಕುಳಕ್ಕೆ ಬೇಸತ್ತು IPS ಅಧಿಕಾರಿ ಸಾವು – IAS ಪತ್ನಿ ದೂರು ನೀಡಿದ್ರೂ FIR ದಾಖಲಿಸದ ಪೊಲೀಸರು

    ಜಾತಿ ಕಿರುಕುಳಕ್ಕೆ ಬೇಸತ್ತು IPS ಅಧಿಕಾರಿ ಸಾವು – IAS ಪತ್ನಿ ದೂರು ನೀಡಿದ್ರೂ FIR ದಾಖಲಿಸದ ಪೊಲೀಸರು

    – ಡಿಜಿಪಿ, ಎಸ್ಪಿ ವಿರುದ್ಧವೇ ಪೊಲೀಸರಿಗೆ ಪತ್ನಿ ದೂರು; ಸಿಎಂಗೆ ಪತ್ರ ಬರೆದು ನ್ಯಾಯಕ್ಕೆ ಮನವಿ
    – ಒಂದಲ್ಲ 3 ಸೂಸೈಡ್ ನೋಟ್ ಬರೆದಿಟ್ಟಿದ್ದ ಐಪಿಎಸ್ ಅಧಿಕಾರಿ

    ಚಂಡೀಗಢ: ಇದೇ ಅಕ್ಟೋಬರ್ 7 ರಂದು ಚಂಡೀಗಢದ (Chandigarh) ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಪತ್ನಿ ಹಿರಿಯ ಐಎಎಸ್ ಅಧಿಕಾರಿ (IPS officer) ಅಮ್ನೀತ್ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದಾರೆ.

    8 ಪುಟಗಳ ಆತ್ಮಹತ್ಯೆ ಟಿಪ್ಪಣಿ ಮತ್ತು ಔಪಚಾರಿಕ ದೂರಿನ ಹೊರತಾಗಿಯೂ ಯಾವುದೇ ಎಫ್‌ಐಆರ್ (FIR) ದಾಖಲಿಸಲಾಗಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಪತಿಯ ಆತ್ಮಹತ್ಯೆ ಪತ್ರವನ್ನು ಉಲ್ಲೇಖಿಸಿ ಬರೆದ ಪತ್ರದಲ್ಲಿ, ಕಿರುಕುಳ, ಅವಮಾನ ಮತ್ತು ಮಾನಸಿಕ ಹಿಂಸೆಯಲ್ಲಿ ಭಾಗಿಯಾಗಿರುವ ಹಿರಿಯ ಅಧಿಕಾರಿಗಳ ಎಲ್ಲಾ ವಿವರಗಳನ್ನು ನೀಡಿದರು, ಚಂಡೀಗಢ ಪೊಲೀಸರು, ನಿರ್ಲಕ್ಷಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್‌

    ಹರಿಯಾಣ ಪೊಲೀಸ್ (Haryana Police) ಮತ್ತು ಆಡಳಿತದ ಪ್ರಭಾವಿ ಉನ್ನತ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಅವರು ಚಂಡೀಗಢ ಪೊಲೀಸರ ಮೇಲೆ ಪ್ರಭಾವ ಬೀರುತ್ತಿರುವುದೇ ಯಾವುದೇ ಕ್ರಮ ಕೈಗೊಳ್ಳದಿರಲು ಕಾರಣ. ಈ ಉನ್ನತ ಹುದ್ದೆಯಲ್ಲಿರುವ, ಪ್ರಭಾವಿ ಅಧಿಕಾರಿಗಳು ನನ್ನ ಮತ್ತು ನನ್ನ ಕುಟುಂಬದ ಮೇಲೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಾರೆ ಮತ್ತು ಬೇರೆ ರೀತಿಯಲ್ಲಿ ನನ್ನನ್ನು ಸಿಲುಕಿಸಲು ಪ್ರಯತ್ನಿಸಬಹುದು ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿ ನಯಾಬ್‌ ಸಿಂಗ್​ ಸೈನಿ ನೇತೃತ್ವದಲ್ಲಿ ಹರಿಯಾಣ ಸರ್ಕಾರದ ನಿಯೋಗದೊಂದಿಗೆ ಅಮ್ನೀತ್ ಅವರು ಜಪಾನ್​ಗೆ ತೆರಳಿದಾಗ ಪತಿ ಆತ್ಮಹತ್ಯೆಗೆ ಶರಣಾಗಿದ್ದು, ವಿಷಯ ತಿಳಿದು ಅವರು ತಕ್ಷಣವೇ ಅವರು ಪ್ರವಾಸದಿಂದ ಹಿಂತಿರುಗಿದ್ದರು. ಇದನ್ನೂ ಓದಿ: ಭಾರತದಲ್ಲಿ 9 ಬ್ರಿಟಿಷ್‌ ವಿವಿ ಕ್ಯಾಂಪಸ್‌ಗಳ ಸ್ಥಾಪನೆ: ಬ್ರಿಟನ್‌ ಪ್ರಧಾನಿ ಘೋಷಣೆ

    ತಾವು ಜಪಾನ್​ನಿಂದ ಮರಳಿದ ತಕ್ಷಣ ಪತಿಯ ಲ್ಯಾಪ್​ಟಾಪ್​ ಬ್ಯಾಗ್​ನಲ್ಲಿ ಡೆತ್‌ನೋಟ್‌ನ 2ನೇ ಪ್ರತಿ ಸಿಕ್ಕಿದೆ. ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಹಿನ್ನೆಲೆಯಲ್ಲಿ ಜಾತಿ ತಾರತಮ್ಯಕ್ಕೆ ಒಳಗಾಗಿದ್ದರು. ರೋಹ್ಟಕ್​ ಎಸ್​ಪಿ ನರೇಂದ್ರ ಬಿಜರ್ನಿಯಾ, ಡಿಜಿಪಿ ಕಪೂರ್​ ಅವರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಅರ್ಬನ್​ ಎಸ್ಟೇಟ್​​ ಪೊಲೀಸ್​ ಠಾಣೆಯಲ್ಲಿ ಅವರ ವಿರುದ್ಧ ಸುಳ್ಳು ಎಫ್​ಐಆರ್​ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಪತಿ ಹೆಚ್ಚು ಒತ್ತಡಕ್ಕೆ ಒಳಗಾಗಿದ್ದರು. ಈ ವಿಷಯವನ್ನು ಡಿಜಿಪಿ ಮತ್ತು ಎಸ್ಪಿ ಜೊತೆ ಚರ್ಚಿಸಲು ಪತಿ ಮಾಡಿದ ಪ್ರಯತ್ನಗಳು ವಿಫಲವಾದ ಕಾರಣ ಅವರು ಈ ರೀತಿಯ ನಿರ್ಧಾರ ತೆಗೆದುಕೊಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪೆಷಲ್‌ ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲಾ, ಬಾಲಕೋಟ್ ತಿರಮಿಸು ತಿಂದ ಭಾರತೀಯ ವಾಯುಸೇನೆ

    ಅಮ್ನಿತ್‌ ತಮ್ಮ ಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರು ಮತ್ತು ಅವರ ಆತ್ಮಹತ್ಯೆ ಪತ್ರ ಮತ್ತು ಉಯಿಲು ಪತ್ರವನ್ನು ಸ್ವೀಕರಿಸಿದ ನಂತರ ಅವರಿಗೆ 15 ಬಾರಿ ಕರೆ ಮಾಡಿರುವುದಾಗಿ ಹೇಳಿದರು. ಅವರ ಕರೆಗಳಿಗೆ ಉತ್ತರಿಸದ ಹಿನ್ನಲೆ ತಮ್ಮ ಚಿಕ್ಕ ಮಗಳಿಗೆ ವಿಚಾರಿಸಲು ಕರೆ ಮಾಡಲಾಯಿತು, ಅವರು ಮನೆಗೆ ಧಾವಿಸಿದಾಗ, ನೆಲಮಾಳಿಗೆಯಲ್ಲಿ ರೆಕ್ಲೈನರ್ ಮೇಲೆ ತನ್ನ ಪತಿಯ ನಿರ್ಜೀವ ದೇಹವು ಕಂಡುಬಂದಿತು ಎಂದು ವಿವರಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಧಿಕಾರಿಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ತನಿಖೆಯ ಮೇಲೆ ಹಸ್ತಕ್ಷೇಪ, ಸಾಕ್ಷ್ಯಾಧಾರಗಳ ತಿರುಚುವಿಕೆ ಅಥವಾ ಪ್ರಭಾವ ತಡೆಯಲು ಆರೋಪಿತರನ್ನು ಅಮಾನತುಗೊಳಿಸುವಂತೆಯೂ ಅವರು ಕೋರಿದ್ದಾರೆ.

  • ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಬೆಂಗಳೂರು: ಪ್ರಿಯತಮ ಬೇರೊಂದು ಮಹಿಳೆಯೊಟ್ಟಿಗೆ ಲಾಡ್ಜ್‌ನಲ್ಲಿರುವುದನ್ನು ಕಂಡು ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಯಶೋಧ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯತಮ ಬೇರೊಂದು ಮಹಿಳೆಯೊಂದಿಗೆ ಇದ್ದ ಓಯೋ ರೂಂ ಮೇಲೆ ದಾಳಿ ಮಾಡಿ ಗಲಾಟೆ ಮಾಡಿದ್ದಳು. ಗಲಾಟೆಗೆ ಪ್ರಿಯತಮ ವಿಶ್ವನಾಥ್ ಸರಿಯಾಗಿ ರೆಸ್ಪಾನ್ಸ್ ಮಾಡಿದಿದ್ದಾಗ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    ಆತ್ಮಹತ್ಯೆಗೆ ಶರಣಾದ ಯಶೋಧಗೆ ಗಂಡ ಇದ್ದು ಇಬ್ಬರು ಮಕ್ಕಳಿದ್ದಾರೆ. ಹೀಗಿದ್ದರೂ, ಆಕೆ ಪಕ್ಕದ ಏರಿಯಾದ ಮನೆಯಲ್ಲಿ ಆಡಿಟರ್‌ ಆಗಿದ್ದ ವಿಶ್ವನಾಥ್‌ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕಳೆದ 9 ವರ್ಷಗಳಿಂದ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಆದರೆ, ಇತ್ತೀಚೆಗೆ ಯಶೋಧ ತನ್ನ ಸ್ನೇಹಿತೆಯೊಬ್ಬರನ್ನು ಪ್ರಿಯಕರನಿಗೆ ಪರಿಚಯಿಸಿದ್ದರು. ಪ್ರಿಯಕರ ಯಶೋಧ ಸ್ನೇಹಿತೆ ಜೊತೆ ಸಲುಗೆ ಬೆಳೆಸಿ ಪ್ರೇಮದ ಬಲೆಗೆ ಬೀಳಿಸಿದ್ದಾನೆ. ಅಲ್ಲದೇ, ಆಕೆಯನ್ನು ಓಯೋ ರೂಂಗೆ ಕರೆದುಕೊಂಡು ಹೋಗಿದ್ದಾನೆ.

    ಈ ವಿಚಾರ ಯಶೋಧ ಕಿವಿಗೆ ಬಿದ್ದಿದೆ. ಪ್ರಿಯಕರ ಸ್ನೇಹಿತೆಯೊಟ್ಟಿಗೆ ಇರುವ ಲಾಡ್ಜ್‌ಗೆ ಹೋಗಿ ಗಲಾಟೆ ಮಾಡಿದ್ದಾಳೆ. ಆಗ ಪ್ರಿಯಕರ ಸರಿಯಾಗಿ ಸ್ಪಂದಿಸದೇ ಇದ್ದಾಗ, ಮನನೊಂದು ಅಲ್ಲೇ ಪಕ್ಕದ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

  • ಮಡಿಕೇರಿ | ನೇಣು ಬಿಗಿದು 20ರ ಯುವತಿ ಆತ್ಮಹತ್ಯೆ

    ಮಡಿಕೇರಿ | ನೇಣು ಬಿಗಿದು 20ರ ಯುವತಿ ಆತ್ಮಹತ್ಯೆ

    ಮಡಿಕೇರಿ: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ (Kushalnagar)  ತಾಲೂಕಿನ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ನಡೆದಿದೆ.

    ಸಂಜನಾ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಸೋಮವಾರ (ಸೆ.22) ಮನೆಯ ಎರಡನೇ ಮಹಡಿಯಲ್ಲಿರುವ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾಳೆ.ಇದನ್ನೂ ಓದಿ: ದಾವಣಗೆರೆ | ಪತ್ನಿಯ ಅಕ್ರಮ ಸಂಬಂಧಕ್ಕೆ ರೋಸಿ 20 ಬಾರಿ ಇರಿದು ಕೊಂದ ಪತಿ

    ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿ ದಿನೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವತಿಯ ತಂದೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಸದ್ಯ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.ಇದನ್ನೂ ಓದಿ ಹಿಂದೂಗಳ ಜನಸಂಖ್ಯೆ ಕಡಿಮೆ ಮಾಡಲು ಜಾತಿಗಣತಿ: ಎ.ನಾರಾಯಣಸ್ವಾಮಿ ಆಕ್ಷೇಪ

     

  • ತುಮಕೂರಲ್ಲಿ ಇಬ್ಬರು ಮಕ್ಕಳ ಜೊತೆ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಕೇಸ್;‌ ಮಹಿಳೆಯ ಪತಿ, ಅತ್ತೆ ಬಂಧನ

    ತುಮಕೂರಲ್ಲಿ ಇಬ್ಬರು ಮಕ್ಕಳ ಜೊತೆ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಕೇಸ್;‌ ಮಹಿಳೆಯ ಪತಿ, ಅತ್ತೆ ಬಂಧನ

    ತುಮಕೂರು: ಇಬ್ಬರು ಮಕ್ಕಳ ಜೊತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪತಿ, ಅತ್ತೆ ಮತ್ತು ಅಜ್ಜಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಮೃತ ಸರಿತಾ ಗಂಡ ಸತೋಷ್, ಅತ್ತೆ ಅಂಜಿನಮ್ಮ, ಹಾಗೂ ಸಂತೋಷ್ ಅಜ್ಜಿ ಹನುಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಸರಿತಾ ಕುಟುಂಬಸ್ಥರಿಂದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: Hassan | ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

    ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮೂವರನ್ನು ಪಾವಗಡ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಬ್ಬರು ಮಕ್ಕಳ ಜೊತೆ ಸೇರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದರು.

    ಕಡಪಲಕೆರೆ ಗ್ರಾಮದ ಸರಿತಾಳನ್ನು ಅದೇ ಗ್ರಾಮದ ಸಂತೋಷ್ ಎಂಬಾತನಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಳೆದ 6 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ಸಂತೋಷ್ ಆಟೋ ಚಾಲಕನಾಗಿದ್ದ. ಮದುವೆಯಾದಾಗಿಂದಲೂ ಗಂಡ ಸಂತೋಷ್ ಹಾಗೂ ಆತನ ತಾಯಿ, ಅಜ್ಜಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಇತ್ತು. ಇದನ್ನೂ ಓದಿ: ಮಹಾಲಯ ಅಮಾವಾಸ್ಯೆ; ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು

    ಕಿರುಕುಳಕ್ಕೆ ಮನನೊಂದು ಇಬ್ಬರು ಮಕ್ಕಳ ಜೊತೆ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪವಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾರೆ.

  • ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

    ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ (Second PUC) ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ (Koppa) ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.

    ಮೃತನನ್ನ 17 ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ. ಮೃತ ಸುಶಾಂತ್ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್‌ ಗ್ರಾಮದ ನಿವಾಸಿ. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

     

    ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದವರು ಗಮನಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

    ವಿದ್ಯಾಭ್ಯಾಸದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಓದಿನ ಒತ್ತಡ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಕಾರಣ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಶಿವಮೊಗ್ಗ | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

    ಶಿವಮೊಗ್ಗ | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

    ಶಿವಮೊಗ್ಗ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ (Sagara) ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನಡೆದಿದೆ.

    ರಂಜಿತಾ (28) ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಬೆಂಗಳೂರಲ್ಲಿ ಈದ್ ಮಿಲಾದ್ ಹೆಸರಲ್ಲಿ ಧರ್ಮಪ್ರಚಾರ – ಸಚಿವ ಜಮೀರ್ ನೇತೃತ್ವದ ಕಾರ್ಯಕ್ರಮಕ್ಕೆ ಭಾರಿ ವಿರೋಧ

    ವೈಯಕ್ತಿಕ ವಿಚಾರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರಂಜಿತಾ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಿಕ್ಷಣ ಸಚಿವರೇ ಗಮನಿಸಿ, ಉದುರಿ ಬೀಳ್ತಿದೆ ಮೇಲ್ಛಾವಣಿ – ಆತಂಕದಲ್ಲಿಯೇ ಹಾಜರಾಗುತ್ತಿದ್ದಾರೆ ವಿದ್ಯಾರ್ಥಿಗಳು

  • ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ – ನೇಣಿಗೆ ಶರಣಾದ ಗೃಹಿಣಿ

    ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ – ನೇಣಿಗೆ ಶರಣಾದ ಗೃಹಿಣಿ

    ಬೆಂಗಳೂರು: ವರದಕ್ಷಿಣೆ ಕಿರುಕುಳ (Dowry Harassment) ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ (Suicide) ಶರಣಾದ ಘಟನೆ ಬೆಂಗಳೂರು (Bengaluru) ಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ.

    ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.

    ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಪೂಜಾಶ್ರೀ ಮತ್ತು ನಂದೀಶ್‌ ಮದುವೆಯಾಗಿದ್ದು ಹೆಣ್ಣು ಮಗುವಿದೆ. ದಂಪತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

    ಒಂದು ವರ್ಷದ ನಂತರ ನಂದೀಶ್‌ಗೆ ಅಕ್ರಮ ಸಂಬಂಧ ಇರುವ ವಿಚಾರ ಪೂಜಾಗೆ ಗೊತ್ತಾಗಿದೆ. ಇದೇ ವಿಚಾರಕ್ಕೆ ಪ್ರಶ್ನೆ ಮಾಡಿದ್ದಕ್ಕೆ ನಂದೀಶ್ ನಿಮ್ಮ ತಾಯಿ ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಹೇಳಿ ಜಗಳವಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

    ಎರಡು ಮೂರು ಬಾರಿ ಹಿರಿಯರ ಸಮ್ಮುಖದಲ್ಲಿ ಇಬ್ಬರ ಮಧ್ಯೆ ರಾಜಿ ಪಂಚಾಯಿತಿ ನಡೆದಿತ್ತು. ಈ ವೇಳೆ ನಾನು ಪತ್ನಿಗೆ ಕಿರುಕುಳ ನೀಡುವುದಿಲ್ಲ ಎಂದು ನಂದೀಶ್‌ ಭರವಸೆ ನೀಡಿದ್ದ.

    ಮೂರು ದಿನಗಳ ಹಿಂದೆ ಇದೇ ರೀತಿ ಜಗಳ ಮಾಡಿ ನಂದೀಶ್ ಹಲ್ಲೆ ಮಾಡಿದ್ದ. ಪತಿಯ ಕಿರುಕುಳ ತಾಳಲಾರದೇ ಪೂಜಾಶ್ರೀ ತವರು ಮನೆಗೆ ಬಂದಿದ್ದರು. ಈ ವಿಚಾರ ತಿಳಿದು ನಂದೀಶ್‌ ಅತ್ತೆ ಮನೆಗೆ ಬಂದು ಕಥೆ ಕಟ್ಟಿ ಮತ್ತೆ ಪತ್ನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ ಭಾನುವಾರ ಬೆಳಗ್ಗೆ ಪೂಜಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ‌ ಪತ್ತೆಯಾಗಿದೆ.

    ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ಹಾವೇರಿ| ಶೀಲ ಶಂಕಿಸಿ ಪತ್ನಿ ಬರ್ಬರ ಹತ್ಯೆ – ಕೆರೆಗೆ ಹಾರಿ ಪತಿ ಆತ್ಮಹತ್ಯೆ

    ಹಾವೇರಿ| ಶೀಲ ಶಂಕಿಸಿ ಪತ್ನಿ ಬರ್ಬರ ಹತ್ಯೆ – ಕೆರೆಗೆ ಹಾರಿ ಪತಿ ಆತ್ಮಹತ್ಯೆ

    ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆ, ಶೀಲ ಶಂಕಿಸಿ ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿ ಪತಿ ಕೆರೆಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾವೇರಿ ತಾಲೂಕು ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ.

    ಲಲಿತವ್ವ (55) ಬರ್ಬರವಾಗಿ ಹತ್ಯೆಯಾದ ಮಹಿಳೆ. ಆಕೆಯ ಪತಿ ಸಿದ್ದಪ್ಪ ಡಬ್ಬಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿ ಹತ್ಯೆ ಮಾಡಿ ಗ್ರಾಮದ ಹೊರವಲಯದಲ್ಲಿರುವ ಕೆರೆಗೆ ಹಾರಿ ಸಿದ್ದಪ್ಪ ಆತ್ಮಹತ್ಯೆ ಶರಣಾಗಿದ್ದಾನೆ. ಇದನ್ನೂ ಓದಿ: ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ

    ನಿನ್ನೆ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆಯಿತು. ಜಗಳ ವಿಕೋಪಕ್ಕೆ ಹೋಗಿ ಪತ್ನಿ ಲಲಿತವ್ವಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳು, ಒಬ್ಬ ಮಗ ಇದ್ದಾನೆ. ಮೊದಲಿನಿಂದಲೂ ಸಿದ್ದಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ. ಆಗಾಗ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.

    ಇಬ್ಬರ ಜಗಳ ಕೇಸ್ ಹಲವು ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ನಿನ್ನೆ ರಾತ್ರಿ ಜಗಳ ವಿಕೋಪಕ್ಕೆ ಹೋಗಿ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ʼಡೆತ್‌ನೋಟ್‌ʼ ನೋಡಿ ಡೆತ್‌ನೋಟ್‌ ಬರೆದು 14ರ ಬಾಲಕ ಆತ್ಮಹತ್ಯೆ!

    ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.