Tag: suicide attempte

  • ಮಂಡ್ಯ ಎಸ್ಪಿ ಕಚೇರಿ ಮುಂದೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಮಂಡ್ಯ ಎಸ್ಪಿ ಕಚೇರಿ ಮುಂದೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಮಂಡ್ಯ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಎಸ್ಪಿ ಕಚೇರಿಯಲ್ಲಿ ನಡೆದಿದೆ.

    ಮಂಡ್ಯ ತಾಲೂಕು ಹೊಳಲು ಗ್ರಾಮದ ಸುಕನ್ಯಾ(35) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಸುಕನ್ಯಾ ಅವರ ಪುತ್ರಿ ಜೂನ್ 22ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಆದರೆ ಈ ಕುರಿತು ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡಿರಲಿಲ್ಲ. ಇದರಿಂದ ಮನನೊಂದ ಸುಕನ್ಯಾ ಅವರು ಮಗಳ ಸಾವಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಇಂದು ಎಸ್ಪಿ ಕಚೇರಿಗೆ ಬಂದಿದ್ದರು.

    ಎಸ್ಪಿ ಕಚೇರಿ ಮುಂದೆ ನಿಂತಿದ್ದ ಸುಕನ್ಯಾ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಸಿದ್ದರು. ತಕ್ಷಣವೇ ಜಾಗೃತಗೊಂಡ ಪೊಲೀಸರು ಬೆಂಕಿ ಹತ್ತದಂತೆ ಎಚ್ಚರಿಕೆ ವಹಿಸಿ, ನಂತರ ಸುಕನ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ.

  • ಗಂಗಾವತಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಗಂಗಾವತಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಕೊಪ್ಪಳ: ಪೊಲೀಸ್ ಠಾಣೆಯ ಮುಂದುಗಡೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

    ಈ ಹಿಂದೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿತ್ತು. ಈ ಫೋಟೋದಲ್ಲಿ ಕಾಣಿಸಿ ಕೊಂಡಿದ್ದ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದ್ದು, ತಮ್ಮ ಮೇಲಿನ ಆರೋಪದಿಂದ ಎರಡು ತಿಂಗಳಿನಿಂದ ತೀವ್ರ ಮನನೊಂದು ಗುರುವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, 15 ವರ್ಷಗಳಿಂದ ನಾನು ಅಲ್ಲಿ ಕೆಲಸ ಮಾಡುತ್ತಿದ್ದೇನೆ. ಆದರೆ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಬಾಬಾ ಹಾಗೂ ನನ್ನ ನಡುವೆ ಯಾವುದೇ ಅಕ್ರಮ ಸಂಬಂಧವಿಲ್ಲ. ಗ್ರಾಮಸ್ಥರ ಭಯದಿಂದ ಕಳೆದ 2 ತಿಂಗಳಿಂದ ನಮ್ಮ ಕುಟುಂಬದೊಂದಿಗೆ ಗ್ರಾಮ ತೊರೆದಿದ್ದೇನೆ. ಆದರೆ ಈಗ ಮತ್ತೆ ಗ್ರಾಮಕ್ಕೆ ಹಿಂದಿರುಗಿದರೆ ಕೊಲೆ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ವ್ಯವಸ್ಥಿತ ಸಂಚಿನ ಮೂಲಕ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಇದರ ಹಿಂದೆ ದೇವಸ್ಥಾನದ ಕೆಲಸಗಾರರ ಕೈವಾಡವಿದೆ ಎಂದು ಆರೋಪಿಸಿದ್ದರು.

    ಈ ಸುಳ್ಳು ಆರೋಪ ನನ್ನ ಮಗಳ ಭವಿಷ್ಯದ ಮೇಲೆಯೂ ಪರಿಣಾಮ ಬೀರಿದೆ. ಬಾಬಾ ಹಾಗೂ ಅವರ ನಡುವಿನ ಒಳ ಜಗಳಕ್ಕೆ ಬಡ ಕುಟುಂಬವಾದ ನಮ್ಮನ್ನು ಬಲಿಪಶು ಮಾಡುವುದು ಎಷ್ಟು ಸರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.