Tag: Suicide Police

  • ಗಡಿಪಾರು ನೋಟಿಸ್‌ಗೆ ಹೆದರಿ ಆತ್ಮಹತ್ಯೆಗೆ ಯತ್ನ – ಕ್ರಿಮಿನಲ್ ಆರೋಪಿ ಕೋಬ್ರಾ ಸುಹೇಲ್ ಸಾವು

    ಗಡಿಪಾರು ನೋಟಿಸ್‌ಗೆ ಹೆದರಿ ಆತ್ಮಹತ್ಯೆಗೆ ಯತ್ನ – ಕ್ರಿಮಿನಲ್ ಆರೋಪಿ ಕೋಬ್ರಾ ಸುಹೇಲ್ ಸಾವು

    ಶಿವಮೊಗ್ಗ: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಪೊಲೀಸರಿಂದ ಗಡಿಪಾರು ಆದೇಶದ(Deportation Notice) ನೋಟಿಸ್‌ಗೆ ಬೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಕೋಬ್ರಾ ಸುಹೇಲ್(Cobra Suhail) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

    ಜಿಲ್ಲೆಯ ತೀರ್ಥಹಳ್ಳಿ ನಿವಾಸಿಯಾದ ಕೋಬ್ರಾ ಸುಹೇಲ್ ತೀರ್ಥಹಳ್ಳಿ ಹಾಗೂ ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ. ಈ ಕಾರಣಕ್ಕೆ ಪೊಲೀಸರು(Police) ಆರೋಪಿ ಸುಹೇಲ್‌ಗೆ ಗಡಿಪಾರು ಆದೇಶದ ನೋಟಿಸ್‌ ಜಾರಿಗೊಳಿಸಿದ್ದರು‌. ಇದನ್ನೂ ಓದಿ: ಮೈಸೂರು ರಿಂಗ್ ರಸ್ತೆ – ಬೀದಿ ದೀಪಗಳ MCBಯನ್ನೇ ಕದ್ದ ಕಳ್ಳರು

    2 ವರ್ಷಗಳ ಗಡಿಪಾರು ಆದೇಶದ‌ ನೋಟಿಸ್ ಹಿಡಿದುಕೊಂಡು ಪೊಲೀಸರು ಮನೆಯ ಬಳಿ ತೆರಳಿದ್ದರು. ಪೊಲೀಸರ ನೋಟಿಸ್ ಸ್ವೀಕರಿಸಿದ ನಂತರ ಸುಹೇಲ್ ಭಯಭೀತನಾಗಿದ್ದ. ಅಲ್ಲದೇ ಭಯದಿಂದಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆತ್ಮಹತ್ಯೆಗೆ ಯತ್ನಿಸಿದ್ದ ಸುಹೇಲ್‌ಗೆ ತೀರ್ಥಹಳ್ಳಿ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೋಬ್ರಾ ಸುಹೇಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಮಂಡ್ಯ: ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೃಹಿಣಿ

    ಮಂಡ್ಯ: ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೃಹಿಣಿ

    ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಚಾವಡಘಟ್ಟ ಗ್ರಾಮದಲ್ಲಿ ನಡೆದಿದೆ.

    32 ವರ್ಷದ ಅನ್ನಪೂರ್ಣ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಚಾವಡಘಟ್ಟ ಗ್ರಾಮದ ಕಪನೀಗೌಡ, ಚಿಕ್ಕಮ್ಮ ದಂಪತಿಗಳ ಪುತ್ರಿಯಾಗಿರುವ ಅನ್ನಪೂರ್ಣರನ್ನು ಹೆಮ್ಮಡಹಳ್ಳಿ ಗ್ರಾಮದ ಮೋಹನ್ ಕುಮಾರ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಅನ್ನಪೂರ್ಣ ಚಾವಡಘಟ್ಟ ಗ್ರಾಮದ ಬಳಿ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೂವರು ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

    ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.