Tag: suicide

  • ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ | ಲವರ್‌ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು

    ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ | ಲವರ್‌ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು

    – ಪ್ರಿಯತಮೆಯ ಸ್ನೇಹಿತೆಯ ಜೊತೆ ಮದುವೆ

    ಮಂಡ್ಯ: ಪ್ರೇಮ ಪುರಾಣಕ್ಕೆ ಇಬ್ಬರು ವಿವಾಹಿತ ಪ್ರೇಮಿಗಳು (Lovers) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದೆದೆ.

    ಮದುವೆಯಾಗಿದ್ದರೂ ಗೆಳೆಯನಿಗಾಗಿ ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಅತ್ತ ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ.

    ಕಳೆದ ಕೆಲವು ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪ್ರೀತಿಸುತ್ತಿದ್ದರು. ಈ ಮಧ್ಯೆ ಪ್ರಸನ್ನ ಸೃಷ್ಟಿಯ ಸ್ನೇಹಿತೆ ಸ್ಪಂದನಾಳನ್ನು ಪ್ರೀತಿ ಮಾಡುತ್ತಿದ್ದ ಅಂತಿಮವಾಗಿ ಪ್ರಸನ್ನ ಮತ್ತು ಸ್ಪಂದನಾ ಮದುವೆಯಾದರೆ ಒಂದೂವರೆ ವರ್ಷದ ಹಿಂದೆ ದಿನೇಶ್ ಜೊತೆ ಸೃಷ್ಟಿಯ ಮದುವೆ ನಡೆದಿತ್ತು.

    ಬೇರೆ ಬೇರೆ ಮದುವೆಯಾಗಿದ್ದರೂ ಪ್ರಸನ್ನ ಸೃಷ್ಟಿ ನಡುವೆ ಪ್ರೀತಿ ಮಾತುಕತೆ ನಡೆಯುತ್ತಿತ್ತು. ಈ ವಿಚಾರಕ್ಕೆ ಸೃಷ್ಟಿ ಹಾಗೂ ಪತಿ ದಿನೇಶ್ ನಡುವೆ ಆಗಾಗ ಜಗಳ ನಡೆಯುತ್ತಿರುತ್ತದೆ. ಡಿ.11 ರಂದು ಪತಿ ಮನೆಯಿಂದ ಸೃಷ್ಟಿ ನಾಪತ್ತೆಯಾಗಿದ್ದಳು. ಪತ್ನಿ ನಾಪತ್ತೆ ಬೆನ್ನಲ್ಲೇ ದಿನೇಶ್‌ ಅವರು ಕೆಸ್ತೂರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸುತ್ತಾರೆ.

    ಡಿ.16 ರಂದು ಶಿಂಷಾ ನದಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗುತ್ತದೆ. ಈ ಶವ ಯಾರದ್ದೂ ಎಂದು ಪರಿಶೀಲಿಸಿದಾಗ ನಾಪತ್ತೆಯಾದ ಸೃಷ್ಟಿಯದ್ದೇ ಎನ್ನುವುದು ದೃಢಪಡುತ್ತದೆ. ಸೃಷ್ಟಿ ಆತ್ಮಹತ್ಯೆ ವಿಚಾರ ತಿಳಿದು ಪ್ರಸನ್ನ ವಿಚಲಿತಗೊಂಡಿದ್ದ.

    ಸೃಷ್ಟಿ ಆತ್ಮಹತ್ಯೆಗೆ ಶರಣಾಗಿದ್ದು ಯಾಕೆ ಎಂದು ತನಿಖೆ ನಡೆಸಲು ಪೊಲೀಸರು ಮುಂದಾಗುತ್ತಿದ್ದಂತೆ ಪ್ರಸನ್ನ ಈಗ ತನ್ನ ಮನೆಯಲ್ಲಿ ‌ನೇಣಿಗೆ ಶರಣಾಗಿದ್ದಾನೆ. ಈ ಮೂಲಕ ಮೂವರ ಪ್ರೇಮ ಕಥೆ ಇಬ್ಬರ ಸಾವಿನ ಮೂಲಕ ಮುಕ್ತಾಯವಾಗಿದೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕುತೂಹಲದ ವಿಚಾರ ಏನೆಂದರೆ ಸೃಷ್ಟಿ ಹಾಗೂ ಸ್ಪಂದನಾ ಇಬ್ಬರು ಒಂದೇ ತರಗತಿಯಲ್ಲಿ ಓದುತ್ತಿದ್ದರು. ಪ್ರಸನ್ನ ಸೃಷ್ಟಿಯನ್ನು ಪ್ರೀತಿಸುತ್ತಿದ್ದ ವಿಚಾರ ಸ್ಪಂದನಾಗೆ ಗೊತ್ತಿರಲಿಲ್ಲ. ಮದುವೆಗೂ ಮೊದಲು ಪ್ರಸನ್ನ ಸೃಷ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೂ ಯತ್ನಿಸಿದ್ದ ವಿಚಾರ ಈಗ ತಿಳಿದುಬಂದಿದೆ.

     

  • ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವಿವಿ ಕ್ಯಾಂಪಸ್ ನಲ್ಲಿ ಇರುವ ಕೃಷ್ಣ ಹಾಸ್ಟೆಲ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.‌

    ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಚೇತನ್‌ ನಾಯಿಕ (25) ಮೃತ ವಿದ್ಯಾರ್ಥಿ. ಹಾಸ್ಟೆಲ್‌ನಿಂದ ಜಿಗಿದ ವಿದ್ಯಾರ್ಥಿಗೆ ಗಂಭೀರ ಗಾಯವಾಗಿತ್ತು.‌ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.‌ ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಪ್ರಕರಣ ಸಂಬಂಧ ಡಿಸಿಎಂ ರೋಹನ್ ಜಗದೀಶ್ ಮಾಹಿತಿ ಮಾಹಿತಿ ನೀಡಿದ್ದು, ಹಾಸ್ಟೆಲ್ ಮೇಲಿನಿಂದ ಬಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚೇತನ್‌ ಅವರನ್ನು ಕುಟುಂಬಸ್ಥರು ಡಿಸ್ಚಾರ್ಜ್ ಮಾಡಿದ್ದಾರೆ. ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ವಿದ್ಯಾರ್ಥಿ ತಂದೆ ಇದುವರೆಗೂ ದೂರನ್ನು ನೀಡಿಲ್ಲ ಎಂದರು.

    ಪ್ರಜ್ಞಾಹೀನ ಸ್ಥಿತಿಯಲ್ಲಿ ಚೇತನ್‌ನನ್ನು ಪೋಷಕರು ಮನೆಗೆ ಕರೆದುಕೊಂಡು ಹೊಗಿದ್ದರು. ಚೇತನ್‌ ಮನೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.‌

     

  • ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣು

    ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣು

    ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು (Real Estate Businessman) ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

    ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ ದಂಪತಿ.  ಇದನ್ನೂ ಓದಿ: ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?

    ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ (Suicide) ಶರಣಾಗಿದ್ದಾರೆ.

    ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸುರೇಶ್‌ ಅವರು ಡೆತ್‌ನೋಟ್‌ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಮೇಲೂರು ಕೆರೆಯಲ್ಲಿ ತಾಯಿ-ಮಗನ ಶವ ಪತ್ತೆ; ಆತ್ಮಹತ್ಯೆ ಶಂಕೆ

    ಮೇಲೂರು ಕೆರೆಯಲ್ಲಿ ತಾಯಿ-ಮಗನ ಶವ ಪತ್ತೆ; ಆತ್ಮಹತ್ಯೆ ಶಂಕೆ

    ಚಾಮರಾಜನಗರ: ತಾಲೂಕಿನ ಯಾನಗಳ್ಳಿ ಬಳಿಯ ಮೇಲೂರು ತಾಲೂಕಿನ ಕೆರೆಯಲ್ಲಿ ತಾಯಿ ಮತ್ತು ಮಗನ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

    ಕೆರೆಯಲ್ಲಿ ಶವಗಳು ಪತ್ತೆ ಹಿನ್ನೆಲೆ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ 40ರ ಹರೆಯದ ಮಹಿಳೆ ಮತ್ತು 10 ವರ್ಷದ ಬಾಲಕನ ಶವ ಎಂದು ಗುರುತಿಸಲಾಗಿದೆ.

    ಮೃತರ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ. ತಮಿಳುನಾಡಿನಿಂದ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಲಕ್ಷ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • KFCSC ವ್ಯವಸ್ಥಾಪಕ ಆತ್ಮಹತ್ಯೆ

    KFCSC ವ್ಯವಸ್ಥಾಪಕ ಆತ್ಮಹತ್ಯೆ

    ತುಮಕೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (KFCSC) ಸಗಟು ಮಳಿಗೆ ವ್ಯವಸ್ಥಾಪಕ ಆರ್.ರವಿಕುಮಾ‌ರ್ (59) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ತುರುವೇಕೆರೆ (Turuvekere) ತಾಲ್ಲೂಕಿನ ಎಲ್ಲಾ ಸೊಸೈಟಿ, ವಿವಿಧ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಸೇರಿದಂತೆ ಇನ್ನಿತರ ಆಹಾರ ಪದಾರ್ಥ ಸರಬರಾಜು ಮಾಡುವ ಸಗಟು ನಿರ್ವಾಹಕ ಅಧಿಕಾರಿಯಾಗಿ ಅವರು ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಇಸ್ರೆಲ್‌ ರಕ್ಷಣಾ ಸಚಿವನನ್ನೇ ವಜಾಗೊಳಿಸಿದ ಪ್ರಧಾನಿ ನೆತನ್ಯಾಹು

    ಶಿರಾ (Sira) ತಾಲ್ಲೂಕಿನ ದೇವನಹಳ್ಳಿ ರವಿಕುಮಾರ್ (Ravikumar) ಪಟ್ಟಣದ ಮಾಯಸಂದ್ರ ರಸ್ತೆ ಓಂಕಾ‌ರ್ ಆಸ್ಪತ್ರೆ ಹಿಂಭಾಗದ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ಹಲವು ದಿನಗಳಿಂದ ವಾಸವಾಗಿದ್ದರು. ಅವರ ಕುಟುಂಬ ತುಮಕೂರಿನಲ್ಲಿ ನೆಲೆಸಿದೆ.

    ಬೆಳಿಗ್ಗೆ ಕರೆ ಮಾಡಿದರೂ ಸ್ವೀಕರಿಸದ ಕಾರಣ ಪತ್ನಿ, ಪತಿ ವಾಸವಾಗಿದ್ದ ಬಾಡಿಗೆ ಮನೆಗೆ ಬಂದು ವಿಚಾರಿಸಿದ್ದಾರೆ. ಅನುಮಾನಗೊಂಡು ಮನೆ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ರುದ್ರಣ್ಣ ಆತ್ಮಹತ್ಯೆ – ತಹಶೀಲ್ದಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌, ಆರೋಪಿಗಳು ಪರಾರಿ

    ರುದ್ರಣ್ಣ ಆತ್ಮಹತ್ಯೆ – ತಹಶೀಲ್ದಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌, ಆರೋಪಿಗಳು ಪರಾರಿ

    ಬೆಳಗಾವಿ: ಎಸ್‌ಡಿಎ ರುದ್ರಣ್ಣ (SDA Rudresh) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಪಿಎ ವಿರುದ್ಧ ಪ್ರಕರಣ ದಾಖಲಾಗಿದೆ.

    ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್‌ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ಮೇಲೆ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಎಡನೀರು ಮಠದ ಶ್ರೀಗಳ ಕಾರಿನ ಮೇಲೆ ಅನ್ಯ ಕೋಮಿನ ಯುವಕರಿಂದ ದಾಳಿ

    ಪ್ರಕರಣ ‌ದಾಖಲಾಗ್ತಿದ್ದಂತೆ‌‌ ಮೂವರು ಆರೋಪಿಗಳು ನಾಪತ್ತೆ ಆಗಿದ್ದು ಆರೋಪಿಗಳ ಬಂಧನಕ್ಕೆ‌ ವಿಶೇಷ ‌ತಂಡ‌ವನ್ನ ನಗರ ಪೊಲೀಸ್ ‌ಆಯುಕ್ತ‌ ಯಡಾ ಮಾರ್ಟಿನ್ ರಚಿಸಿದ್ದಾರೆ.

    ವಾಟ್ಸಪ್‌ನಲ್ಲಿ ನನ್ನ ಸಾವಿಗೆ ಮೂರು ಜನ ಕಾರಣ ಅಂತಾ ಬರೆದು ಇಂದು ಬೆಳಗ್ಗೆ ತಹಶಿಲ್ದಾರ್‌ ಕಚೇರಿಯಲ್ಲೇ ರುದ್ರಣ್ಣ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

  • ಬೆಳಗಾವಿ| ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

    ಬೆಳಗಾವಿ| ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

    ಬೆಳಗಾವಿ: ಇಲ್ಲಿನ ತಹಸೀಲ್ದಾರ್‌ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್‌ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.

    ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್‌ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಂದು ಪೋಸ್ಟ್‌ ಕೂಡ ಹಾಕಿದ್ದರು.

    ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್‌ ಹಾಗೂ ಡಿಸಿ ಕಾರಣ ಎಂದು ಡಿಪಾರ್ಟ್‌ಮೆಂಟ್‌ ವಾಟ್ಸಪ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಘಟನೆ ನಂತರ ಪೋಸ್ಟ್‌ ಡಿಲೀಟ್‌ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಸ್ಥಳಕ್ಕೆ ಡಿಸಿಪಿ ರೊಹಬ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಮರಣೋತ್ತರ ಪರೀಕ್ಷೆಯಲ್ಲಿ ಗುರುಪ್ರಸಾದ್‌ ಸಾವಿನ ಸತ್ಯ ಸ್ಫೋಟ!

    ಮರಣೋತ್ತರ ಪರೀಕ್ಷೆಯಲ್ಲಿ ಗುರುಪ್ರಸಾದ್‌ ಸಾವಿನ ಸತ್ಯ ಸ್ಫೋಟ!

    ಬೆಂಗಳೂರು: ನಿರ್ದೇಶಕ ಗುರುಪ್ರಸಾದ್‌ (Guruprasad) ಅವರು ಆತ್ಮಹತ್ಯೆಯಿಂದ (Suicide) ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ (Post Mortem Exam) ದೃಢಪಟ್ಟಿದೆ.

    ನ್ಯೂ ಹೆವನ್ ಅಪಾರ್ಟ್‌ಮೆಂಟ್‌ನಲ್ಲಿದ್ದ ಮೃತದೇಹವನ್ನು ಇಳಿಸಿದ ಬಳಿಕ ಸಂಜೆ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಮರಣೋತ್ತರ ಪರೀಕ್ಷೆಗೆ ತರಲಾಯಿತು. ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ  ತಿಳಿದು ಬಂದಿದೆ. ಇದನ್ನೂ ಓದಿ: ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ: ಗುರುಪ್ರಸಾದ್‌ ಪತ್ನಿ ನೀಡಿದ ದೂರಿನಲ್ಲಿ ಏನಿದೆ?

     

    ಸಾವನ್ನಪ್ಪಿ 78 ಗಂಟೆಗಳು ಆಗಿದ್ದು, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ದೇಹ ಉಸಿರುಗಟ್ಟಿ ಪ್ರಾಣ ಹೋಗಿದೆ. ದೇಹ ಕೊಳೆತು ಹೋಗಿದ್ದರಿಂದ ರಕ್ತ ಹೊರಬಂದಿದೆ.  ಇದನ್ನೂ ಓದಿ: ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!

    ಹೊಟ್ಟೆಯಲ್ಲಿದ್ದ ದ್ರವ ರೂಪ ಮತ್ತು ಆಹಾರ ಪದಾರ್ಥವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಮಾತ್ರೆ ಸೇವನೆ ಮಾಡಿದ್ದಾರಾ ಎನ್ನುವುದು ಎಫ್‌ಎಸ್‌ಎಲ್‌ ಪರೀಕ್ಷೆಯಲ್ಲಿ ಬಯದಲಾಗಬೇಕಿದೆ.

     

  • ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ: ಗುರುಪ್ರಸಾದ್‌ ಪತ್ನಿ ನೀಡಿದ ದೂರಿನಲ್ಲಿ ಏನಿದೆ?

    ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ: ಗುರುಪ್ರಸಾದ್‌ ಪತ್ನಿ ನೀಡಿದ ದೂರಿನಲ್ಲಿ ಏನಿದೆ?

    ಬೆಂಗಳೂರು: ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ, ಸಾಲದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ ಎಂದು ನಿರ್ದೇಶಕ ಗುರುಪ್ರಸಾದ್‌ (Guruprasad) ಅವರ ಎರಡನೇ ಪತ್ನಿ ಸುಮಿತ್ರಾ (Sumithra) ದೂರು ನೀಡಿದ್ದಾರೆ.

    ಸುಮಿತ್ರಾ (Sumithra) ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ  ಅಸಹಜ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!

     

    ದೂರಿನಲ್ಲಿ ಏನಿದೆ?
    2020 ರಲ್ಲಿ ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಅವರನ್ನು ನಾನು ವಿವಾಹವಾದೆ. ನಮಗೆ ಮೂರೂವರೆ ವರ್ಷದ ಹೆಣ್ಣು ಮಗುವಿದೆ. ಈ ಹಿಂದೆ ಗುರುಪ್ರಸಾದ್‌ಗೆ ಆರತಿ ಜೊತೆ ಮದುವೆಯಾಗಿ ನಂತರ ಡಿವೋರ್ಸ್‌ ಆಗಿತ್ತು. ಮದುವೆಯಾದ ನಂತರ 4 ವರ್ಷಗಳ ಕಾಲ ಕನಕಪುರ ರಸ್ತೆಯಲ್ಲಿ ಎನ್.ಎ.ಪಿ.ಎ ವ್ಯಾಲಿ, ರಾಜರಾಜೇಶ್ವರಿ ನಗರದ ಈಸಿ ಡಿವೈನ್ ಬ್ಲಾಕ್ ಹಾಗೂ ಬಸವೇಶ್ವರನಗರದ ಬಾಲಾಜಿ ರೆಸಿಡೆನ್ಸಿಯಲ್ಲಿ ಜೀವನ ಸಾಗಿಸುತ್ತಿದ್ದೆವು. ನಂತರ ನಾನು ನನ್ನ ಯಜಮಾನರು 6 ತಿಂಗಳಿನಿಂದ ಮನೆ ಖಾಲಿ ಮಾಡಿಕೊಂಡು ಹುಸ್ಕೂರು ರಸ್ತೆಯಲ್ಲಿರುವ ನ್ಯೂ ಹೆವನ್ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆಗೆ ವಾಸವಾಗಿದ್ದೆವು.

    ನನಗೆ ಆರೋಗ್ಯ ಸರಿಯಿಲ್ಲದ ಕಾರಣ ನಮ್ಮ ಯಜಮಾನರು ನನ್ನನ್ನು ತಾಯಿಯ ಮನೆಯಲ್ಲಿ ಇರಲು ಹೇಳಿ ಕಳುಹಿಸಿಕೊಟ್ಟರು. ಲೋಕಸಭಾ ಚುನಾವಣಾ ಸಮಯದಲ್ಲಿ ಕೊನೆಯ ಬಾರಿ ನಾವಿಬ್ಬರು ಭೇಟಿಯಾಗಿದ್ದೆವು. ಗುರುಪ್ರಸಾದ್‌ ಚಲನಚಿತ್ರ ಕೆಲಸದಲ್ಲಿ ಬ್ಯುಸಿಯಾಗಿದ್ದ ಕಾರಣ ನಾನು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದೆ. ಅಕ್ಟೋಬರ್‌ 25 ರಂದು ನಾನು ಕೊನೆಯಾದಾಗಿ ಫೋನ್‌ ಮಾಡಿದ್ದೆ. ಆದರೆ ಅವರು ರಿಸೀವ್‌ ಮಾಡಿರಲಿಲ್ಲ. ಪತಿ ಬ್ಯುಸಿ ಇರಬಹುದು ಎಂದು ಸುಮ್ಮನಾಗಿದ್ದೆ. ಇದನ್ನೂ ಓದಿ: ವರ್ಷದಲ್ಲಿ ಮೂರು ಮನೆಯನ್ನು ಬದಲಿಸಿದ್ದ ಗುರುಪ್ರಸಾದ್‌

     

    ನವೆಂಬರ್‌ 3 ರಂದು ಬೆಳಗ್ಗೆ 11 ಗಂಟೆಯ ವೇಳೆಗೆ ಅಪಾರ್ಟ್‌ಮೆಂಟ್ ನಿವಾಸಿ ಜಯರಾಮ್ ಎಂಬುವರು ದೂರವಾಣಿ ಮೂಲಕ ನೀವು ವಾಸವಿದ್ದ ಮನೆಯಿಂದ ಏನೋ ಒಂದು ರೀತಿಯ ವಾಸನೆ ಬರುತ್ತಿದೆ. ಮನೆಯ ಬಾಗಿಲು ಬಳಿ ಹೋಗಿ ಬಾಗಿಲು ತಟ್ಟಿದರೂ ಯಾರು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ತಿಳಿಸಿದರು.

    ನಾನು ಗಾಬರಿಯಿಂದ ಕುಟುಂಬದವರ ಜೊತೆ ಅಪಾರ್ಟ್‌ಮೆಂಟ್‌ಗೆ ಆಗಮಿಸಿದೆ. ಅಕ್ಕಪಕ್ಕದವರ ಸಹಾಯದಿಂದ ಹಾಗೂ ಪೊಲೀಸರ ನೆರವಿನೊಂದಿಗೆ ಬಾಗಿಲನ್ನು ಒಡೆದು ನೋಡಿದಾಗ ಪತಿ ಗುರುಪ್ರಸಾದ್‌ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ನೋಡಿದೆ. ಪತಿಯ ಶರೀರ ಊದಿಕೊಂಡಿತ್ತು. ಇದನ್ನೂ ಓದಿ: ಗುರುಪ್ರಸಾದ್ ಮಗುವಿಗೆ ಸಹಾಯ ಮಾಡುತ್ತೇನೆ: ನಟ ಜಗ್ಗೇಶ್

    ನಮ್ಮ ಯಜಮಾನರು ಸಿನಿಮಾ ವಿಚಾರದಲ್ಲಿ ಸಾಲ ಮಾಡಿಕೊಂಡ ವಿಚಾರ ನನಗೆ ತಿಳಿದಿದೆ. ಸಾಲವನ್ನು ಹೇಗಾದರೂ ತೀರಿಸೋಣ ಎಂದು ನಾನು ಧೈರ್ಯ ಹೇಳಿದ್ದೆ. ಆದರೆ ಪತಿ ಸಾಲ ಬಾಧೆಯಿಂದ ಖಿನ್ನತೆಗೆ ಜಾರಿ ಜೀವನದಲ್ಲಿ ಜಿಗುಪ್ಸೆಗೊಂಡು 3-4 ದಿನಗಳ ಹಿಂದೆ ಮನೆಯ ಬಾಗಿಲನ್ನು ಒಳಗಡೆಯಿಂದ ಲಾಕ್ ಮಾಡಿಕೊಂಡು ನೂಲಿನ ಹಗ್ಗದಿಂದ ಮಹಡಿಯ ಕಬ್ಬಿಣದ ಕೊಕ್ಕೆಗೆ ಕುಣಿಕೆ ಮಾಡಿ ಕತ್ತನ್ನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಗಂಡನ ಸಾವಿನಲ್ಲಿ ಯಾವುದೇ ಅನುಮಾನ ಇರುವುದಿಲ್ಲ. ತಾನು ಸ್ಥಳಕ್ಕೆ ಬಂದು ಮುಂದಿನ ಕ್ರಮ ಜರುಗಿಸಬೇಕೆಂದು ಕೋರುತ್ತೇನೆ.

     

  • ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!

    ನಾಲ್ಕು ಅನುಮಾನಗಳಿಗೆ ಕಾರಣವಾದ ಗುರುಪ್ರಸಾದ್ ಸಾವು!

    ಬೆಂಗಳೂರು: ಮಠ ಖ್ಯಾತಿಯ ಗುರುಪ್ರಸಾದ್‌ (Guruprasad) ಸಾವಿನ ಬೆನ್ನಲ್ಲೇ ನಾಲ್ಕು ಅನುಮಾನಗಳು ಎದ್ದಿದೆ.

    ಗುರುಪ್ರಸಾದ್‌ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

    ಅನುಮಾನ 1 – ಸಾಲಗಾರರ ಕಾಟ
    ಸದ್ಯ ಸಿಕ್ಕಿದ ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು ಮೂರು ಕೋಟಿ ರೂ.ನಷ್ಟು ಸಾಲವನ್ನು ಗುರುಪ್ರಸಾದ್‌ ಮಾಡಿಕೊಂಡಿದ್ದರು. ಸಾಲಗಾರರ ಹಣ ಪಾವತಿಸುವಂತೆ ಕೇಳುತ್ತಿದ್ದಂತೆ ಗುರುಪ್ರಸಾದ್‌ ಪದೇ ಮನೆ ಬದಲಾವಣೆ ಮಾಡುತ್ತಿದ್ದರು. ಸಾಲ ನೀಡಿದವರು ಹಲವು ಪ್ರಕರಣವನ್ನು ದಾಖಲಿಸಿದ್ದರು. ರಂಗನಾಯಕ ಸಿನಿಮಾ ಸೋತಿದ್ದು ಗುರುಪ್ರಸಾದ್‌ ಅವರಿಗೆ ಭಾರೀ ಸಂಕಷ್ಟ ತಂದಿಟ್ಟಿತ್ತು. ಇದನ್ನೂ ಓದಿ: ವರ್ಷದಲ್ಲಿ ಮೂರು ಮನೆಯನ್ನು ಬದಲಿಸಿದ್ದ ಗುರುಪ್ರಸಾದ್‌

     

    ಅನುಮಾನ 2 – ಸಿನಿಮಾ ಬಿಡುಗಡೆಗೆ ಒದ್ದಾಟ
    ಯಶಸ್ವಿ ನಿರ್ದೇಶಕನಾಗಿದ್ದರೂ ಸಿನಿಮಾ ಬಿಡುಗಡೆಗೆ ಒದ್ದಾಟ ನಡೆಸುತ್ತಿದ್ದರು. ಎದ್ದೇಳು‌ ಮಂಜುನಾಥ 2 (Eddelu Manjunatha) ಚಿತ್ರೀಕರಣ ಮುಕ್ತಾಯವಾಗಿ ಎರಡು ವರ್ಷವಾಗಿದ್ದರೂ ಬಿಡುಗಡೆ ಆಗಿರಲಿಲ್ಲ. ಈ ಚಿತ್ರದ ನಿರ್ದೇಶನ ಮಾಡುವುದರ ಜೊತೆಗೆ ಗುರುಪ್ರಸಾದ್‌ ಅಭಿನಯಿಸಿದ್ದರು. ಈ ಸಿನಿಮಾ ನಿರ್ಮಾಣ ಬಿಡುಗಡೆಗಾಗಿ ಕೋಟ್ಯಂತರ ರೂ. ಸಾಲ ಮಾಡಿದ್ದರು.

    ಅನುಮಾನ 3 – ಬಂಧನ ಭೀತಿ
    ಸಾಲ ವಾಪಸು ನೀಡದ ಪ್ರಕರಣದಲ್ಲಿ ಗುರುಪ್ರಸಾದ್ ಅವರನ್ನು ಈ ವರ್ಷದ ಜನವರಿಯಲ್ಲಿ ಬೆಂಗಳೂರಿನ ಗಿರಿನಗರ ಠಾಣೆ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದರು. ಅರೆಸ್ಟ್ ಆಗುವ ಭಯದಲ್ಲಿ ಸಾವಿಗೆ ಶರಣಾಗಿರುವ ಸಾಧ್ಯತೆಯಿದೆ. ಇದನ್ನೂ ಓದಿ: ಕುಡಿತದ ಚಟಕ್ಕೆ ಬಿದ್ದಿದ್ದ, ಪದೇ ಪದೇ ಸಾಯುತ್ತೇನೆ ಎಂದಿದ್ದ: ಗುರುಪ್ರಸಾದ್‌ ಬಗ್ಗೆ ಜಗ್ಗೇಶ್‌ ಮಾತು

     

    ಅನುಮಾನ 4 – ಕೌಟುಂಬಿಕ ಕಲಹ
    ಇತ್ತೀಚೆಗೆ ಎರಡನೇ ಮದುವೆಯಾಗಿದ್ದ ಗುರುಪ್ರಸಾದ್ ಮೊದಲ ಪತ್ನಿಯಿಂದ ದೂರವಾಗಿ ಎರಡನೇ ಮದುವೆಯಾಗಿದ್ದರು. ಎರಡನೇ ಮದುವೆಯಾಗಿದ್ದರೂ ಗುರುಪ್ರಸಾದ್‌ ಪ್ರತ್ಯೇಕವಾಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸಗಿದ್ದರು. ಕೊನೆ ದಿನಗಳಲ್ಲಿ ಏಕಾಂಗಿಯಾಗಿದ್ದ ಗುರುಪ್ರಸಾದ್‌ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದಾರೆ.