Tag: Sukanta Majumdar

  • ಕೋಲ್ಕತ್ತಾದಲ್ಲಿ ಹಿಂಸಾಚಾರ – ಬಿಜೆಪಿ ರಾಜ್ಯಾಧ್ಯಕ್ಷನ ಬಂಧನ

    ಕೋಲ್ಕತ್ತಾದಲ್ಲಿ ಹಿಂಸಾಚಾರ – ಬಿಜೆಪಿ ರಾಜ್ಯಾಧ್ಯಕ್ಷನ ಬಂಧನ

    ಕೋಲ್ಕತ್ತಾ: ನಗರದ ಮೊಮಿನ್‌ಪೋರ್ (Mominpore) ಪ್ರದೇಶದಲ್ಲಿ ಧ್ವಜ ಹಾಕುವ ವಿಚಾರವಾಗಿ ಶನಿವಾರ 2 ಸಮುದಾಯಗಳ ನಡುವೆ ಘರ್ಷಣೆ (Violence) ನಡೆದಿತ್ತು. ಕಲ್ಲು ತೂರಾಟ ನಡೆದಿದ್ದು, ಕೆಲ ಮನೆಗಳಿಗೆ ಹಾನಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 38 ಜನರನ್ನು ಬಂಧಿಸಿದ್ದು, ಹೆಚ್ಚುವರಿಯಾಗಿ ಬಿಜೆಪಿ (BJP) ರಾಜ್ಯಾಧ್ಯಕ್ಷ ಸುಕಾಂತ್ ಮಜುಂದಾರ್ (Sukanta Majumdar) ಅವರನ್ನೂ ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.

    ವರದಿಗಳ ಪ್ರಕಾರ ಪ್ರಕ್ಷುಬ್ಧ ಪ್ರದೇಶಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಮಜುಂದಾರ್ ಅವರು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲು ತೆರಳಿದ್ದ ಸಂದರ್ಭ ಅವರನ್ನು ಪೊಲೀಸರು ತಡೆದು ಬಂಧಿಸಿದ್ದಾರೆ. ಇದನ್ನೂ ಓದಿ:  ಪ್ರಯಾಣಿಕ ಖರೀದಿಸಿದ್ದ ಸಮೋಸಾದಲ್ಲಿ ಯೆಲ್ಲೋ ಕಲರ್ ಪೇಪರ್ – IRCTC ಹೇಳೋದೇನು?

    ಬಂಧನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಜುಂದಾರ್, ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಮನೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸರ ಪಾತ್ರ ಶೋಚನೀಯವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಸ್ ಹತ್ತುವಾಗ ಬಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ- ಜ್ಞಾನಭಾರತಿ ಆವರಣದಲ್ಲಿ ಉದ್ವಿಗ್ನ ಸ್ಥಿತಿ

    ಬಂಗಾಳ (West Bengal) ಪೊಲೀಸರಿಗೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾಧ್ಯವಾಗದಿದ್ದರೆ, ರಾಜ್ಯ ಆಡಳಿತ ಕೇಂದ್ರದ ಪಡೆಗಳಿಂದ ಸಹಾಯ ಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಇದೀಗ ಪ್ರದೇಶದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ.

    ಇದೇ ವೇಳೆ ಗಲಭೆ ಪೀಡಿತ ಪ್ರದೇಶವಾದ ಹೌರಾ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ನನ್ನು ಪೊಲೀಸರು ಬಂಧಿಸಿ, ಸುಮಾರು ನಾಲ್ಕು ಗಂಟೆಗಳ ಬಳಿಕ ಬಿಡುಗಡೆಗೊಳಿಸಿದ್ದಾರೆ. ಹೌರಾ ಜಿಲ್ಲೆಯಲ್ಲಿ ಹಿಂಸಾತ್ಮಕ ಪತ್ರಿಭಟನೆ ನಡೆಯುತ್ತಿದ್ದರಿಂದ ಮಜುಂದಾರ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ಬಿಡುಗಡೆಯಾದ ಬಳಿಕ ಮಜುಂದಾರ್ ಇತರ ಬಿಜೆಪಿ ನಾಯಕರೊಂದಿಗೆ ಸೇರಿ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿದ್ದಾರೆ. ಹೌರಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಬಂಗಾಳ ರಾಜ್ಯದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿದ್ದಾರೆ.

    ಜೆ.ಪಿ.ನಡ್ಡಾ ಖಂಡನೆ: ಮಜುಂದಾರ್ ಬಂಧನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಖಂಡಿಸಿದ್ದಾರೆ. ಬಂಗಾಳ ಸರ್ಕಾರವು ಅಪರಾಧಿಗಳ ಉತ್ಸಾಹವನ್ನು ಹೆಚ್ಚಿಸುತ್ತಿದೆ. ಸಮಾಜ ವಿರೋಧಿಗಳಿಗೆ ಆಶ್ರಯ ನೀಡುತ್ತಿದೆ. ಮತ್ತೊಂದೆಡೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರ ಹಕ್ಕುಗಳ ವಿರುದ್ಧ ಹೋರಾಡುವವರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಹೌರಾ ಜಿಲ್ಲೆಯ ಪಾಂಚ್ಲಾದಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಕಲ್ಲು ಹಾಗೂ ಇಟ್ಟಿಗೆಗಳನ್ನು ಎಸೆದಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಪಂಚ್ಲಾ ಮಾರುಕಟ್ಟೆಯ ಸಮೀಪದ ಕೆಲ ಅಂಗಡಿ ಹಾಗೂ ಮನೆಗಳನ್ನು ದರೋಡೆ ಮಾಡಲಾಗಿದೆ. ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

    ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೌರಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೆಲ ರಾಜಕೀಯ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಯತ್ನಿಸುತ್ತಿವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

  • ಬಂಗಾಳದ ಐವರು ಬಿಜೆಪಿ ಶಾಸಕರು ಪಕ್ಷ ತೊರೆಯಬಹುದು: ಬಾಬುಲ್ ಸುಪ್ರಿಯೋ

    ಬಂಗಾಳದ ಐವರು ಬಿಜೆಪಿ ಶಾಸಕರು ಪಕ್ಷ ತೊರೆಯಬಹುದು: ಬಾಬುಲ್ ಸುಪ್ರಿಯೋ

    ಕೋಲ್ಕತ್ತಾ: ಬಿಜೆಪಿ ವಾಟ್ಸಾಪ್ ಗ್ರೂಪ್‍ನಿಂದ ಹೊರಬಂದ ಪಶ್ಚಿಮ ಬಂಗಾಳದ ಐವರು ಅತೃಪ್ತ ಶಾಸಕರು ಕೇಸರಿ ಪಕ್ಷವನ್ನು ತೊರೆಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಬಾಬುಲ್ ಸುಪ್ರಿಯೋ ಹೇಳಿದ್ದಾರೆ.

    ಮೂರು ತಿಂಗಳ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಸೇರ್ಪಡೆಗೊಂಡ ಕೇಂದ್ರದ ಮಾಜಿ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಬಾಬುಲ್ ಸುಪ್ರಿಯೋ ಅವರು ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ಬಿಜೆಪಿಯಲ್ಲಿ ಒಂದರ ಹಿಂದೆ ಒಂದು ವಿಕೆಟ್ ಬೀಳುತ್ತಿದೆ. ಇನ್ನೂ ಐದು ವಿಕೆಟ್ ಬೀಳಲಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಪ್ರಚಾರದ ಮೇಲ್ವಿಚಾರಣೆ ನಡೆಸಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್ ಇದೀಗ ಕೈಲಾಸ ಪರ್ವತಕ್ಕೆ ಹೋಗಿದ್ದಾರೆ. ನಿಮ್ಮನ್ನು ಹಿಂದಿನಿಂದ ಎಳೆಯುವ ಬಂಗಾಳಿ ಹೇಡಿಗಳನ್ನು ಹುಡುಕಲು ಪ್ರಯತ್ನಿಸುತ್ತದ್ದರೆ ಮುರಳೀಧರ್ ಲೇನ್‍ಗೆ ಹೋಗಿ ಎಂದಿದ್ದಾರೆ.

    ಪಶ್ಚಿಮ ಬಂಗಾಳದ ಐವರು ಶಾಸಕರಾದ ಮುಕುತ್ಮೋನಿ ಅಧಿಕಾರಿ (ರಣಘಾಟ್ ದಕ್ಷಿಣ), ಸುಬ್ರತಾ ಠಾಕೂರ್ (ಗೈಘಾಟ), ಅಂಬಿಕಾ ರಾಯ್ (ಕಲ್ಯಾಣಿ), ಅಶೋಕ್ ಕೀರ್ತಾನಿಯಾ (ಬೊಂಗಾವ್ ಉತ್ತರ), ಮತ್ತು ಅಸಿಮ್ ಸರ್ಕಾರ್ (ಹರಿಂಘಟ) ಬಿಜೆಪಿ ವಾಟ್ಸಾಪ್ ಗ್ರೂಪ್ ತೊರೆದಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿ ನಮ್ಮ ದೇಶದ ಹೆಮ್ಮೆ: ಗುಲಾಂ ನಬಿ ಆಜಾದ್

    ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು, ಐವರು ಶಾಸಕರಲ್ಲಿ ಯಾರನ್ನು ಸಹ ಬಿಡುವುದಿಲ್ಲ, ಹೊಸ ಸಮಿತಿಗಳಲ್ಲಿ ಅವರಿಗೆ ಅವಕಾಶ ಕಲ್ಪಿಸುತ್ತೇವೆ. ಎಲ್ಲರೂ ಸ್ವಲ್ಪ ತಾಳ್ಮೆಯಿಂದಿರಬೇಕು ಎಂದಿದ್ದಾರೆ. ಇದನ್ನೂ ಓದಿ: 40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್