Tag: sukri bommagowda

  • ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ

    ಪದ್ಮಶ್ರೀ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ

    ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ (91) ನಿಧನರಾಗಿದ್ದಾರೆ.

    ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಯಿಂದಾಗಿ ಇಂದು ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ.‌

    ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನ ದಿಲ್ಲಿಗೆ ಕೊಂಡೊಯ್ದ ಕೀರ್ತಿ ಹೊಂದಿದ್ದಾರೆ. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸಿದರು. 2017 ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

    ರಾಜ್ಯ, ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರು. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು‌. ಆದರೆ, ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇಬ್ಬರು ಮೊಮ್ಮೊಕ್ಕಳು, ಓರ್ವ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇರಿಯಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಲಿದೆ.

  • ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತರಿಗೆ ಆಹ್ವಾನ

    ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತರಿಗೆ ಆಹ್ವಾನ

    ಕಾರವಾರ: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ನಡೆಯಲಿರುವ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಪದ್ಮಶ್ರೀ ಪುರಸ್ಕೃತರನ್ನು ಆಹ್ವಾನಿಸಲಾಗಿದೆ.

    ಅಂಕೋಲಾದ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ (Sukri Bommagowda), ತುಳಸಿ ಗೌಡ (Tulasi Gowda) ಅವರನ್ನು ಆಹ್ವಾನಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ್ಯ ಪ್ರಚಾರಕರು ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಮಲ ಪೀಠದ ಮೇಲೆ 36 ಅಡಿ ಅಭಯರಾಮನ ಪ್ರತಿಷ್ಠಾಪನೆ

    ಹಾಲಕ್ಕಿ ಹಾಡುಗಳ ಒಡತಿ ಸುಕ್ರಜ್ಜಿ
    ಸುಮಾರು 5,000 ಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳನ್ನು ಸುಕ್ರಿ ಬೊಮ್ಮಗೌಡ ಹಾಕಿದ್ದಾರೆ. ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರವನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

    ವೃಕ್ಷಮಾತೆ ತುಳಸಿ ಗೌಡ
    ವೃಕ್ಷಮಾತೆ ಎಂದೇ ಹೆಸರಾಗಿರುವ ತುಳಸಿ ಗೌಡ ಸಾವಿರಾರು ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ‘ರಾಮಾಯಣ’ ಪ್ರಸಾರಕ್ಕೆ ಸಿದ್ಧತೆ

    ಜನವರಿ 22 ರಂದು ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಜರುಗಲಿದೆ. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ರಾಮಜಪ, ಶ್ರೀರಾಮ ಭಜನೆ ಮಾಡಲಾಗುತ್ತಿದೆ. ದೇಶದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

  • ಸಸಿ ನೆಟ್ಟು ಹುಟ್ಟುಹಬ್ಬ ಆಚರಿಸಿದ ‘ರಾಮ ರಾಮ ರೇ’ ಖ್ಯಾತಿಯ ನಟರಾಜ್

    ಸಸಿ ನೆಟ್ಟು ಹುಟ್ಟುಹಬ್ಬ ಆಚರಿಸಿದ ‘ರಾಮ ರಾಮ ರೇ’ ಖ್ಯಾತಿಯ ನಟರಾಜ್

    ‘ರಾಮಾ ರಾಮಾ ರೇ’, ‘ಮ್ಯಾನ್ ಆಫ್ ದಿ ಮ್ಯಾಚ್’ ಹಾಗೂ ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರಗಳ ಅಮೋಘ ಅಭಿನಯದ ಮೂಲಕ ಅಪಾರ ಮೆಚ್ಚುಗೆ ಗಳಿಸಿಕೊಂಡಿರುವ ಕಲಾವಿದ ನಟರಾಜ್. ಸ್ಯಾಂಡಲ್ ವುಡ್ ಭರವಸೆಯ ಕಲಾವಿದರೆಸಿಕೊಂಡಿರುವ ನಟರಾಜ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ವಿಶೇಷ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಳ್ಳುವ ಮೂಲಕ ನಟರಾಜ್ ಗಮನ ಸೆಳೆದಿದ್ದಾರೆ.

    ಹುಟ್ಟುಹಬ್ಬದ ಪ್ರಯುಕ್ತ ಗೋಕರ್ಣದ ಅಂಕೋಲಕ್ಕೆ ಪ್ರವಾಸ ಕೈಗೊಂಡು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾಗೂ ಹೋರಾಟಗಾರರಾದ ಸುಕ್ರಿ ಬೊಮ್ಮಗೌಡ ಅವರೊಂದಿಗೆ ಕೆಲಕಾಲ ಸಮಯ ಕಳೆದಿದ್ದಾರೆ. ಇದನ್ನೂ ಓದಿ:ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್

    ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿರುವ, ವೃಕ್ಷಮಾತೆ, ಪರಿಸರ ಪ್ರೇಮಿ, ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದಂತಹ ತುಳಸಿ ಅಜ್ಜಿ ಅವರನ್ನು ಭೇಟಿ ಮಾಡಿ ಅವರೊಂದಿಗೆ ಗಿಡ ನೆಡುವುದರ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಂತರ ಅಲ್ಲಿಯೇ ಇದ್ದ ಹೊನ್ನಳ್ಳಿ ಶಾಲೆಯ ಮಕ್ಕಳ ಜೊತೆಯಲ್ಲಿ ಕಾಲ ಕಳೆದು ಮೂರು ದಿನಗಳ ಕಾಲ ಉತ್ತಮ ಕೆಲಸಗಳನ್ನು ಮಾಡುತ್ತಾ, ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ನಟರಾಜ್ ಎಲ್ಲರಿಗೂ ಮಾದರಿಯಾಗಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಹಾಲಕ್ಕಿಯನ್ನು ಪರಿಶಿಷ್ಟ ಜನಾಂಗಕ್ಕೆ ಸೇರ್ಪಡೆ ಮಾಡದಿದ್ರೆ ಪದ್ಮಶ್ರೀ ಪ್ರಶಸ್ತಿ ಮರಳಿಸುವೆ’

    ‘ಹಾಲಕ್ಕಿಯನ್ನು ಪರಿಶಿಷ್ಟ ಜನಾಂಗಕ್ಕೆ ಸೇರ್ಪಡೆ ಮಾಡದಿದ್ರೆ ಪದ್ಮಶ್ರೀ ಪ್ರಶಸ್ತಿ ಮರಳಿಸುವೆ’

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೀಮಿತವಾಗಿರುವ ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ತನಗೆ ನೀಡದ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡರವರು ನಿರ್ಧಾರ ಮಾಡಿದ್ದಾರೆ.

    ಅಲ್ಲದೆ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿರುವ ಕಾಡನ್ನು ನಂಬಿ ಬದುಕು ಕಟ್ಟಿಕೊಂಡ ಹಾಲಕ್ಕಿ ಜನಾಂಗ ಈವರೆಗೂ ಸಂಕಷ್ಟದಲ್ಲಿದೆ. ನಮ್ಮಲ್ಲಿ ಶಿಕ್ಷಣ ಪಡೆದವರೇ ಕಮ್ಮಿ ಜನರಿದ್ದಾರೆ. ಅವರಿಗೆ ಉತ್ತಮ ಕೆಲಸ ಸಹ ಇಲ್ಲ. ಹೀಗಿರುವಾಗ ಕಳೆದ 20 ವರ್ಷದಿಂದ ನಮ್ಮ ಜನಾಂಗವನ್ನು ಪ.ಪಂಗಡಕ್ಕೆ ಸೇರಿಸಬೇಕು ಎಂಬ ಹೋರಾಟ ನಡೆಯುತ್ತಲೇ ಇದೆ ಎಂದರು. ಇದನ್ನೂ ಓದಿ: ಮೀರಾಬಾಯಿ ಕೊಪ್ಪಿಕರ್‌ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

    ಈ ಕುರಿತು ಕೇಂದ್ರ ಸರ್ಕಾರ ಈವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಹೀಗಿರುವಾಗ ಉಪಯೋಗಕ್ಕೆ ಬಾರದ ಈ ಪ್ರಶಸ್ತಿಯನ್ನು ಇಟ್ಟುಕೊಂಡು ಏನು ಮಾಡಲಿ. ನಮ್ಮ ಜನರಿಗೆ ಸಿಗಬೇಕಾದ ಹಕ್ಕು ಸಿಗದಿದ್ದರೆ ನಾನು ಇದ್ದು ಏನು ಪ್ರಯೋಜನ ಹೀಗಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಪರಿಶಿಷ್ಠ ಪಂಗಡಕ್ಕೆ ಸೇರಿಸದಿದ್ದರೆ ವಿಧಾನಸೌಧಕ್ಕೆ ತೆರಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.