ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ (ATM) ಹಣ (Money) ಕದ್ದೋಯ್ದ ಘಟನೆ ಸೂಲಿಬೆಲೆಯ (Sulibele) ದೇವನಹಳ್ಳಿ ಕ್ರಾಸ್‍ನಲ್ಲಿ ನಡೆದಿದೆ.
ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಕಳ್ಳತನ ನಡೆದಿದೆ. ಎಟಿಎಂನಲ್ಲಿ 30 ಲಕ್ಷ ರೂ.ಗೂ ಹೆಚ್ಚು ಹಣ ಕಳ್ಳತನ ಮಾಡಲಾಗಿದೆ. ಎಟಿಎಂನ ಶೆಟರ್‌ನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ, ದುಷ್ಕರ್ಮಿಗಳು ಒಳಗೆ ನುಗ್ಗಿದ್ದಾರೆ.
ಎಟಿಎಂ ಒಳಗೆ ತಮ್ಮ ಮುಖ ಕಾಣದಂತೆ ಸಿಸಿಟಿವಿಗೆ ಸ್ಪ್ರೇ ಬಳಸಿ ಬಣ್ಣ ಹಾಕಿದ್ದಾರೆ. ಬಳಿಕ ಕಾರಿನಿಂದಲೇ ಗ್ಯಾಸ್ ಕಟರ್ ಬಳಸಿ ಶೆಟರ್ ಕತ್ತರಿಸಲಾಗಿದೆ. ಆಂಧ್ರ ಪ್ರದೇಶದ ನೋಂದಣಿ ಸಂಖ್ಯೆಯ ಕಾರಿನಲ್ಲಿ ದುಷ್ಕರ್ಮಿಗಳು ಬಂದಿರುವುದು ತಿಳಿದು ಬಂದಿದೆ. ಎಟಿಎಂ ದರೋಡೆ ನಂತರ ಹೊಸಕೋಟೆ ಮಾರ್ಗದಲ್ಲಿ ದುಷ್ಕರ್ಮಿಗಳು ಭಾಗಿಯಾಗಿದ್ದಾರೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‍ಪಿ ಸಿ.ಕೆ ಬಾಬಾ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಡ್‌ನಿಂದ (Rod) ಹೊಡೆದು ಮನೆಯಲ್ಲಿದ್ದ ವೃದ್ಧ ದಂಪತಿಯನ್ನು (Old Couple) ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ (Sulibele) ನಡೆದಿದೆ.
ರಾಮಕೃಷ್ಣಪ್ಪ (70) ಹಾಗೂ ಮುನಿರಾಮಕ್ಕ (65) ಕೊಲೆಯಾದ ದಂಪತಿ. ಇನ್ನು ಆಸ್ತಿ (Property) ವಿಚಾರವಾಗಿ ಮಗ ತಂದೆ ತಾಯಿಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಾದಗಲಿನಿಂದಲೂ ನರಸಿಂಹ ತಂದೆ ತಾಯಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದು, ಒಬ್ಬನೇ ಮಗನಾದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ಇದನ್ನೂ ಓದಿ: ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ
ವೃದ್ಧ ದಂಪತಿಗೆ ಒಟ್ಟು 5 ಜನ ಮಕ್ಕಳಿದ್ದು, ಈ ಪೈಕಿ ನಾಲ್ಕು ಮಂದಿ ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗ. ಮದುವೆಯಾದಗಿನಿಂದ ನರಸಿಂಹಮೂರ್ತಿ ಬೇರೆ ಇದ್ದು, ತನ್ನ ಎಲ್ಲಾ ಮಕ್ಕಳನ್ನು ಸಾಕಿ ವೃದ್ಧ ದಂಪತಿ ಮದುವೆ ಮಾಡಿಕೊಟ್ಟಿದ್ದರು. ಹೆಣ್ಣು ಮಕ್ಕಳಿಗೆಲ್ಲಾ ಮದುವೆ ಮಾಡಿಕೊಡಲಾಗಿದೆ, ಇನ್ನು ಯಾವುದೇ ಆಸ್ತಿಯನ್ನು ಭಾಗ ಮಾಡುವಂತಿಲ್ಲ ಎಂದು ನರಸಿಂಹಮೂರ್ತಿ ಹೇಳುತ್ತಿದ್ದ. ಅಲ್ಲದೇ ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ತಂದೆ ತಾಯಿಗೆ ಹಿಂಸೆ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ತನ್ನ ಹೆಣ್ಣು ಮಕ್ಕಳಿಗೆ ಆಸ್ತಿ ಭಾಗ ನೀಡಬೇಕು ಎಂದು ವೃದ್ಧ ದಂಪತಿ ಹೇಳುತ್ತಿದ್ದು, ಇದೇ ವಿಚಾರವಾಗಿ ಕಳೆದ ಶನಿವಾರ ಸಂಜೆ ನರಸಿಂಹಮೂರ್ತಿ ತಂದೆ ತಾಯಿ ವಾಸವಿದ್ದ ಮನೆಗೆ ಹೋಗಿದ್ದ. ಈ ವೇಳೆ ಜಗಳ ಮಾಡಿ ರಾಮಕೃಷ್ಣಪ್ಪನಿಗೆ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದು, ನಂತರ ತಾಯಿಯನ್ನು ದಾರುಣವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ
ಕೊಲೆ ಮಾಡಿ ತಲೆ ಮರೆಸಿಕೊಳ್ಳದೆ ತನಗೆ ಏನು ತಿಳಿಯದ ಹಾಗೆ ನರಸಿಂಹಮೂರ್ತಿ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ. ಪ್ರತಿ ದಿನ ತನ್ನ ಹೆಣ್ಣುಮಕ್ಕಳಿಗೆ ವೃದ್ಧ ದಂಪತಿ ಕರೆ ಮಾಡುತ್ತಿದ್ದರು. ಆದರೆ ಶನಿವಾರದಿಂದ ಕರೆ ಮಾಡಿರಲಿಲ್ಲ. ಹೀಗಾಗಿ ಹೆಣ್ಣುಮಕ್ಕಳು ಅನುಮಾನಗೊಂಡಿದ್ದು, ಕೊನೆಯ ಮಗಳು ಶಾಕುಂತಲ ಮನೆಯ ಬಳಿ ಬಂದು ನೋಡಿದ್ದಾರೆ. ಈ ವೇಳೆ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ತಕ್ಷಣ ಶಾಕುಂತಲ ತನ್ನ ತಂದೆ ತಾಯಿಗೆ ಕರೆ ಮಾಡಿದ್ದು, ಇಬ್ಬರ ನಂಬರ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಈ ಹಿನ್ನೆಲೆ ಶಾಕುಂತಲ ಆತಂಕಗೊಂಡು ಸೂಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿಯ ಮನೆಯ ಬಳಿ ಬಂದಿದ್ದರು. ಇದನ್ನೂ ಓದಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1
ಈ ವೇಳೆ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ ಅವರು, ತಕ್ಷಣ ಮನೆಯ ಬಾಗಿಲನ್ನು ಒಡೆದು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿಯ ಮೃತ ದೇಹ ನೋಡಿ ಶಾಕುಂತಲ ಶಾಕ್ ಆಗಿದ್ದು, ಸದ್ಯ ಆರೋಪಿ ನರಸಿಂಹಮೂರ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ (Hoskote) ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
ಹೊಸಕೋಟೆ: ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಸೂಲಿಬೆಲೆಯಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದ ಸಮಾವೇಶದಲ್ಲಿ ಅಲ್ಪಸಂಖ್ಯಾತ ಅಭಿಮಾನಿಗಳ ಒತ್ತಾಯದ ಮೇರೆಗೆ ಸಚಿವ ಎಂಟಿಬಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಅಭಿಮಾನಿಗಳು ಡ್ಯಾನ್ಸ್ ಮಾಡಲು ನಿಂಬೆಹಣ್ಣು ಕೊಟ್ಟಿದ್ದರು. ಆದರೆ ನಿಂಬೆಹಣ್ಣು ಜೇಬಿನಲ್ಲಿಟ್ಟುಕೊಂಡು ನಾಗಿಣಿ ಹಾಡಿಗೆ ಎಂಟಿಬಿ ನಾಗರಾಜ್ ಸ್ಟೆಪ್ ಹಾಕಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್
ಬೆಂಗಳೂರು: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಪರ ಘೋಷಣೆ ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ವಿದ್ಯಾಪೀಠ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಸೂಲೆಬೆಲೆ ಆಗಮಿಸಿದ್ದರು. ಈ ವೇಳೆ ಅವರು ವಿದ್ಯಾಪೀಠದಲ್ಲಿ ಮತಯಾಚನೆ ಮಾಡಲು ಬಂದಿದ್ದು, ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದರು.
ಇದಕ್ಕೂ ಮುನ್ನ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಪರ ಘೋಷಣೆಗಳನ್ನು ಕೂಗುವ ಮೂಲಕ ಸೂಲಿಬೆಲೆಯ ಭಾಷಣಕ್ಕೆ ಅಡ್ಡಿಪಡಿಸಿದರು. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.