Tag: Sumalatha Ambareesh

  • ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ: ಸುಮಲತಾ ಬಣ್ಣನೆ

    ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ: ಸುಮಲತಾ ಬಣ್ಣನೆ

    ನ್ನಡ ಚಿತ್ರರಂಗದ ಇತಿಹಾಸದಲ್ಲಿ ಕಾಂತಾರ-1 (Kantara-1) ಚಿತ್ರ ವಿಶೇಷ ಸ್ಥಾನ ಪಡೆಯಲಿದೆ ಎಂದು ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ (Sumalatha Ambareesh) ಶ್ಲಾಘಿಸಿದ್ದಾರೆ.

    ಶುಕ್ರವಾರ ಕಾಂತಾರ-1 ಚಿತ್ರ ವೀಕ್ಷಿಸಿದ ಬಳಿಕ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ ಅವರು, ರಿಷಬ್ ಶೆಟ್ಟಿ ನಿರ್ದೇಶನ, ಹಾಗೂ ಸಿನಿಮಾದ ಬಗ್ಗೆ ಕೊಂಡಾಡಿದ್ದಾರೆ.

    ಎಕ್ಸ್‌ನಲ್ಲಿ ಏನಿದೆ?
    ಆತ್ಮೀಯ ರಿಷಭ್ ಅವರೇ, ಶುಕ್ರವಾರ ಕಾಂತಾರ-1 ನೋಡಿದೆ. ಕಾಂತಾರದ ಅದ್ಭುತ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ನಿರ್ದೇಶನ ಹಾಗೂ ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ ಪರಿ ನನ್ನನ್ನು ಮೂಕವಿಸ್ಮಿತಗೊಳಿಸಿದೆ. ಈ ದೃಶ್ಯ ವೈಭವವನ್ನು ತೆರೆಯ ಮುಂದೆ ತರಲು ಹಾಕಿದ ಪರಿಶ್ರಮ ಹಾಗೂ ಕರ್ನಾಟಕದ ಜಾನಪದ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸೌಂದರ್ಯವನ್ನು ಪ್ರದರ್ಶಿಸಲು ನಿಮ್ಮ ಶ್ರಮವನ್ನು ಅತ್ಯಂತ ಗೌರವ ಹಾಗೂ ಹೆಮ್ಮೆಯಿಂದ ಶ್ಲಾಘಿಸುತ್ತೇನೆ.

    ಅಕ್ಷರಶಃ ಇದೊಂದು ಸಿನಿಮಾಟಿಕ್ ಮಾಸ್ಟರ್‌ಪೀಸ್. ಕಾಂತಾರ-1 ಕನ್ನಡ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕಲೆಯ ಬಗ್ಗೆ ನಿಮಗಿರುವ ಉತ್ಸಾಹ ಮತ್ತು ಶ್ರದ್ಧೆ ಯುವ ಕಲಾವಿದರು ಹಾಗೂ ಚಿತ್ರರಂಗಕ್ಕೆ ಸ್ಫೂರ್ತಿಯಾಗಿದೆ.

    ಇಡೀ ಕಾಂತಾರ ತಂಡವು ತಮ್ಮ ಅತ್ಯುತ್ತಮ ಕೆಲಸಕ್ಕಾಗಿ ಪ್ರಶಂಸೆಗೆ ಅರ್ಹವಾಗಿದೆ. ಕನ್ನಡ ಚಿತ್ರರಂಗದ ಪಯಣಕ್ಕೆ ಹೊಸ ಆಯಾಮವನ್ನು ಹಾಕಿಕೊಟ್ಟಿರುವ ಈ ದಂತಕಥೆ ಕನ್ನಡ ಚಿತ್ರರಂಗದ ಇತಿಹಾಸ ಪುಟದಲ್ಲಿ ವಿಶೇಷ ಸ್ಥಾನ ಪಡೆಯಲಿದೆ.

    ನಮ್ಮ ಚಿತ್ರರಂಗಕ್ಕೆ ವಿಶ್ವದಾದ್ಯಂತ ಗೌರವ ಮತ್ತು ಕೀರ್ತಿಯನ್ನು ತಂದಿರುವ ನಿಮ್ಮ ಮುಂದಿನ ಎಲ್ಲಾ ಯೋಜನೆಗಳು ಇನ್ನಷ್ಟು ಯಶಸ್ಸನ್ನು ತಂದುಕೊಡಲಿ ಎಂದು ಶುಭ ಹಾರೈಸುವೆ ಎಂದು ಬಣ್ಣಿಸಿದ್ದಾರೆ.

  • ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ

    ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ

    – ವಿಷ್ಣು ಸರ್ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದ ನೆನಪಿರಲಿ ಪ್ರೇಮ್

    ಬೆಂಗಳೂರು: ಅಭಿಮಾನಿಗಳ ನೋವಲ್ಲಿ ಅರ್ಥ ಇದೆ. ಇದು ನೋವಾಗುವಂತಹ ವಿಷಯವೇ. ಏಕೆ ಹೀಗಾಗಿದೆ ಅನ್ನೋದು ಗೊತ್ತಿಲ್ಲ. ಹೈಕೋರ್ಟ್ ಆದೇಶದ ಮುಂದೆ ನಾವೆಲ್ಲರು ನಿಸ್ಸಹಾಯಕರಾಗಿದ್ದೇವೆ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಾಲತಾ (Sumalatha Ambareesh) ಬೇಸರ ಹೊರಹಾಕಿದ್ದಾರೆ.

    ಮೇರುನಟ ಡಾ. ವಿಷ್ಣುವರ್ಧನ್ ಸಮಾಧಿ (Vishnuvardhan Memorial) ತೆರವು ವಿಚಾರವಾಗಿ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಅವರು, ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌

    ಅಭಿಮಾನಿಗಳ (Vishnuvardhan Fans) ನೋವಲ್ಲಿ ಅರ್ಥ ಇದೆ. ಇದು ನೋವಾಗುವಂತಹ ವಿಷಯವೇ. ಏಕೆ ಹೀಗಾಗಿದೆ ಅನ್ನೋದು ಗೊತ್ತಿಲ್ಲ. ಹೈಕೋರ್ಟ್ ಆದೇಶ. ಅದರ ಮುಂದೆ ನಾವೆಲ್ಲರು ನಿಸ್ಸಹಾಯಕರು. ನೋವನ್ನ ಮಾತ್ರ ವ್ಯಕ್ತಪಡಿಸುವ ಪರಿಸ್ಥಿತಿಯಲ್ಲಿದ್ದೀವಿ. ಒಂದು ಕಡೆ ಅಧಿಕೃತ ಸಮಾಧಿ ಮೈಸೂರಿನಲ್ಲಿ ಸುಂದರವಾಗಿ ಬಂದಿದೆ. ಅದೊಂದು ಸ್ವಲ್ಪ ಸಮಾಧಾನ ಮಾಡಿಕೊಳ್ಳುವ ಅವಕಾಶ. ತೆರವು ಮಾಡುವ ಬಗ್ಗೆ ಮುಂಚೆನೇ ತಿಳಿಸಿ ಮಾಡಬೇಕಿತ್ತು. ಅಂತ್ಯಕ್ರಿಯೆ ನಡೆದ ಜಾಗವಾದ ಕಾರಣ ಸಣ್ಣದಾಗಿಯಾದ್ರು ಅಭಿಮಾನಿಗಳಿಗೆ ತಿಳಿಸುವ ಕೆಲಸ ಮಾಡಬೇಕಿತ್ತು. ಮೊದಲೇ ಘೋಷಣೆ ಮಾಡಿದ್ರೆ, ಅಭಿಮಾನಿಗಳಿಗೆ ಸಮಾಧಾನ ಇರುತ್ತಿತ್ತು. ಇದು ತಪ್ಪು ಅಂತ ನನಗೂ ಕೂಡ ಅನ್ನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ

    ವಿಷ್ಣು ಸರ್ ನಮ್ಮ ಜೊತೆ ಜೀವಂತವಾಗಿದ್ದಾರೆ: ನೆನಪಿರಲಿ ಪ್ರೇಮ್
    ಇನ್ನೂ ಇದೇ ವಿಚಾರಕ್ಕೆ ನಟ ನೆನಪಿರಲಿ ಪ್ರೇಮ್‌ ಮಾತನಾಡಿ, ನಾನು ಕೂಡ ವಿಷ್ಣುವರ್ಧನ್‌ರ ಅಭಿಮಾನಿ. ಸಮಾಧಿ ಕಟ್ಟೋದು ಸತ್ತವರಿಗೆ. ಆದರೆ ವಿಷ್ಣು ಸರ್ ಸತ್ತಿಲ್ಲ. ನಮ್ಮಂತ ನಿಮ್ಮಂತ ಅಭಿಮಾನಿಗಳ ಮನಸ್ಸಿನಲ್ಲಿದ್ದಾರೆ. ಈ ಬಗ್ಗೆ ಅಭಿಮಾನಿಗಳು ತಲೆಕೆಡಿಸಿಕೊಳ್ಳೋದು ಬೇಡ. ಅವರು ನಮ್ಮ ಜೊತೆ ಇದ್ದಾರೆ. ಸಮಾಧಿ ನೋಡಿದಾಗ, ಅವರು ಇಲ್ಲ ಅನ್ನೋ ನೋವು ಕಾಡುತ್ತೆ. ಅವರು ನಟನೆ ಮೂಲಕ ನಮ್ಮ ಜೊತೆ ಜೀವಂತವಾಗಿ ಇದ್ದಾರೆ. ಹಾಗಾಗಿ ಅಭಿಮಾನಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳೋದು ಬೇಡ ಎಂದು ಕಿವಿ ಮಾತು ಹೇಳಿದ್ದಾರೆ.  ಇದನ್ನೂ ಓದಿ: `ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್

  • KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

    KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

    ಮಂಡ್ಯ: ಕೆಆರ್‌ಎಸ್‌ (KRS) ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ (Amusement Park) ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ತಿಳಿಸಿದ್ದಾರೆ.

    ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅವರು ಸರ್ಕಾರದ ನಡೆಗೆ ಸೋಷಿಯಲ್‌ ಮೀಡಿಯಾ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಮಳೆ ಆರ್ಭಟ – ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

    ಪೋಸ್ಟ್‌ನಲ್ಲಿ ಏನಿದೆ?
    ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ. ಇದು ಕೇವಲ ಒಂದು ಅಣೆಕಟ್ಟಲ್ಲ; ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

    ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ಸರ್ಕಾರಕ್ಕೆ ಮಾಜಿ ಸಂಸದೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ – ಫಲ್ಗುಣಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ನೆರೆ

    ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರದ ನಡೆಗೆ ಮಂಡ್ಯ ಜನತೆ ಹಾಗೂ ರೈತ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೂಡ ವಿರೋಧ ವ್ಯಕ್ತಪಡಿಸಿದ್ದರು.

  • ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ

    ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ

    – ಸರ್ಕಾರದ ನಿರ್ಲಕ್ಷ್ಯದಿಂದ 11 ಅಮಾಯಕರು ಬಲಿಯಾಗಿದ್ದಾರೆ ಎಂದ ಮಾಜಿ ಸಂಸದೆ

    ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿರುವುದಕ್ಕೆ ಆರ್‌ಸಿಬಿಯ (RCB) ವಿರಾಟ್‌ ಕೊಹ್ಲಿ (Virat Kohli) ವಿರುದ್ಧ ಮಾತನಾಡುವವರನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ತರಾಟೆಗೆ ತೆಗೆದುಕೊಂಡಿದ್ದಾರೆ.

    ಕಾಲ್ತುಳಿತ ಪ್ರಕರಣ (Bengaluru Stampede) ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ. ಶಕ್ತಿ ಸರವಣನ್ ಅವರ ಫೇಸ್‌ಬುಕ್‌ನಲ್ಲಿನ ಪೋಸ್ಟ್‌ ಅನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕತ್ತು, ಬೆನ್ನು ತುಳ್ಕೊಂಡು ಹೋಗ್ತಿದ್ರು, ಉಸಿರಾಡೋಕೂ ಆಗ್ತಿರಲಿಲ್ಲ – ಗಾಯಾಳು ಪ್ರಶಾಂತ್

    ಒಂದು ದುರಂತ ಘಟನೆಯನ್ನು ಬಳಸಿಕೊಂಡು ವಿರಾಟ್ ಕೊಹ್ಲಿ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಲು ಪ್ರಯತ್ನಿಸುತ್ತಿರುವ ಎಲ್ಲಾ ಮೂರ್ಖರಿಗೆ ಎಂದು ಸಂಸದೆ ಕಟುವಾದ ಸಂದೇಶ ರವಾನಿಸಿದ್ದಾರೆ.

    ಕೊಹ್ಲಿಯನ್ನು ಟೀಕಿಸುವ ಮೊದಲು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ಸಾರ್ವಜನಿಕ ಸುರಕ್ಷತೆಯ ಏಕೈಕ ಜವಾಬ್ದಾರಿ ರಾಜ್ಯ ಸರ್ಕಾರ ಮತ್ತು ಆಡಳಿತದ ಮೇಲಿದೆ. ಪರಿಸ್ಥಿತಿ ನಿಭಾಯಿಸುವಲ್ಲಿ ಅವರು ವಿಫಲರಾಗಿದ್ದಾರೆ. ಈ ದುರಂತಕ್ಕೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಬದಲಾಗಿ ಅವರ ಅಪರಾಧವನ್ನು ಮರೆಮಾಚುವ ಪ್ರಯತ್ನದಲ್ಲಿ ಬೇರೆಯವರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿಯೇ 11 ಅಮಾಯಕರ ಜೀವಗಳು ಬಲಿಯಾಗಿವೆ. ಮೃತರಿಗೆ ನ್ಯಾಯ ಸಿಗಬೇಕಾದರೆ, ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಬೇಕು. ಇದಕ್ಕಾಗಿ ಕಠಿಣ ಶಿಕ್ಷೆ ವಿಧಿಸಬೇಕು.
    ಒಂದು ತಂಡ ಅಥವಾ ಆಟಗಾರರ ಮೇಲೆ ಆರೋಪ ಹೊರಿಸುವುದು ನಿಮ್ಮ ಅಜ್ಞಾನ ಅಥವಾ ಸಣ್ಣತನವನ್ನು ತೋರಿಸುತ್ತದೆ ಎಂದು ಸಂಸದೆ ತಿಳಿಸಿದ್ದಾರೆ. ಇದನ್ನೂ ಓದಿ: ಗೋವಿಂದರಾಜ್‌ ಎಸಗಿದ ತಪ್ಪನ್ನು ಜನರ ಮುಂದೆ ಹೇಳಿ – ಗಾಢ ಮೌನಕ್ಕೆ ಜಾರಿದ್ದು ಯಾಕೆ: ಸಿಎಂಗೆ ಸುನಿಲ್‌ ಕುಮಾರ್‌ ಪ್ರಶ್ನೆ

    ಶಕ್ತಿ ಸರವಣನ್‌ ಪೋಸ್ಟ್‌ನಲ್ಲಿ ಏನಿತ್ತು?
    ವಿರಾಟ್ ಕೊಹ್ಲಿ ವಿರುದ್ಧ ಅಭಿಯಾನ ನಡೆಯುತ್ತಿರುವುದು ಸರಿಯಲ್ಲ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತ ಘಟನೆಗೆ ವಿರಾಟ್ ಕೊಹ್ಲಿಯನ್ನು ಹೊಣೆಗಾರನನ್ನಾಗಿಸಿ, ದ್ವೇಷ ಹರಡುತ್ತಿರುವುದನ್ನು ನೋಡಿ ನನಗೆ ಬೇಸರವಾಗಿದೆ. ಕೊಹ್ಲಿ ಜನಸಮೂಹವನ್ನು ಸಂಘಟಿಸಲಿಲ್ಲ, ಅವರು ಲಾಜಿಸ್ಟಿಕ್ಸ್ ಅನ್ನು ನಿಯಂತ್ರಿಸಲಿಲ್ಲ, ಖಂಡಿತವಾಗಿಯೂ ಯಾವುದೇ ಹಾನಿ ಸಂಭವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ವರ್ಷಗಳಿಂದಲೂ ಆರ್‌ಸಿಬಿ ಪರ ಇರುವ ಅಭಿಮಾನಿಗಳ ಸಂಭ್ರಮ ನೋಡಲು ಕೊಹ್ಲಿ ಅಲ್ಲಿದ್ದರು. ದುರಂತಕ್ಕೆ ಕೊಹ್ಲಿಯನ್ನು ದೂಷಿಸುವುದು ತಪ್ಪು ಭಾವನೆ. ಅದು ವ್ಯವಸ್ಥೆಯ ವೈಫಲ್ಯ. ಜನಸಂದಣಿ ನಿರ್ವಹಣೆ ವೈಫಲ್ಯ, ಅಸಮರ್ಪಕ ಸುರಕ್ಷತಾ ಯೋಜನೆ ಮತ್ತು ಅಧಿಕಾರಿಗಳಿಂದ ನಿರೀಕ್ಷೆಯ ಕೊರತೆ ಇತ್ತು. ಈ ಹೊತ್ತಲ್ಲಿ, ರಾಷ್ಟ್ರಕ್ಕೆ ಹೆಮ್ಮೆ ಮತ್ತು ಸ್ಫೂರ್ತಿ ನೀಡಿದ ವ್ಯಕ್ತಿಯ ಕಡೆಗೆ ಬೆರಳು ತೋರಿಸುವುದು ಅನ್ಯಾಯ. ತನ್ನ ಅಭಿಮಾನಿಗಳಿಗೆ ಮಾತ್ರ ಪ್ರತಿಫಲ ನೀಡಲು ಬಯಸುವ ಆಟಗಾರನನ್ನು ಟಾರ್ಗೆಟ್‌ ಮಾಡಬಾರದು. ಇದು ಆತ್ಮಾವಲೋಕನಕ್ಕೆ ಸಮಯ, ಆರೋಪಕ್ಕಲ್ಲ. ನಾವು ಉತ್ತಮರಾಗೋಣ. ಮನುಷ್ಯರಾಗೋಣ ಎಂದು ಸಿನಿಮಾಟೋಗ್ರಾಫರ್‌ ಶಕ್ತಿ ಸರವಣನ್‌ ಪೋಸ್ಟ್‌ ಹಂಚಿಕೊಂಡಿದ್ದರು.

  • ‘ರಾಣಾ ಅಮರ್‌ ಅಂಬರೀಶ್‌’ ಎಂದು ಅಂಬಿ ಮೊಮ್ಮಗನಿಗೆ ನಾಮಕರಣ

    ‘ರಾಣಾ ಅಮರ್‌ ಅಂಬರೀಶ್‌’ ಎಂದು ಅಂಬಿ ಮೊಮ್ಮಗನಿಗೆ ನಾಮಕರಣ

    ಸ್ಯಾಂಡಲ್‌ವುಡ್‌ ನಟಿ ಸುಮಲತಾ ಅಂಬರೀಶ್‌ (Sumalatha Ambareesh) ಮೊಮ್ಮಗನ ನಾಮಕರಣ ಅದ್ಧೂರಿಯಾಗಿ ನಡೆದಿದೆ. ಮುದ್ದು ಮೊಮ್ಮಗನಿಗೆ ‘ರಾಣಾ ಅಮರ್‌ ಅಂಬರೀಶ್‌’ ಎಂದು ನಾಮಕರಣ ಮಾಡಿದ್ದಾರೆ.

    ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವ ಪುತ್ರನಿಗೆ ‘ರಾಣಾ ಅಮರ್‌ ಅಂಬರೀಶ್‌’ (Raana Amar Ambareesh) ಎಂದು ಹೆಸರಿಡಲಾಗಿದೆ.

    ಇನ್ನೂ ಅಂಬರೀಶ್‌ ಅವರ ಮೂಲ ಹೆಸರು ಅಮರನಾಥ್.‌ ಸಿನಿಮಾ ಇಂಡಿಸ್ಟ್ರಿಗೆ ಎಂಟ್ರಿ ಕೊಟ್ಮೇಲೆ ಅಂಬರೀಶ್‌ ಎಂದು ಅವರು ಬದಲಿಸಿದ್ದರು. ಅವರ ಮೂಲ ಹೆಸರನ್ನೇ ರಾಣಾ ಹೆಸರಿನ ಜೊತೆ ಅಮರ್‌ ಮತ್ತು ಅಂಬರೀಶ್‌ ಎಂದು ಸೇರಿಸಲಾಗಿದೆ.

  • ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?

    ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?

    ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ನಾಮಕರಣ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮೊಮ್ಮಗನ ನಾಮಕರಣ ಇಂದು ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಲಿದೆ.

    ಈ ನಾಮಕರಣ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಈ ನಾಮಕರಣ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿ ಆಗ್ತಾರಾ ಅನ್ನೋ ಪ್ರಶ್ನೆ ಕೂಡ ಮೂಡಿದೆ.

    ಮೊನ್ನೆಯಷ್ಟೇ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅಭಿಷೇಕ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಅನ್‌ಫಾಲೋ ಮಾಡಿದ್ದರು. ಅಂಬರೀಶ್ ಕುಟುಂಬದ ಮೇಲೆ ದರ್ಶನ್‌ಗೆ ಮುನಿಸು ಎಂದು ಹೇಳಲಾಗಿತ್ತು. ಆದರೆ, ಆ ರೀತಿಯ ಮುನಿಸು ಯಾವುದೂ ಇಲ್ಲ ಅಂತ ಈಗಾಗಲೇ ಸುಮಲತಾ ಅಂಬರೀಶ್ ಸ್ಪಷ್ಟ ಪಡಿಸಿದ್ದಾರೆ. ಅಲ್ಲದೇ, ಯಾವತ್ತಿದ್ದರೂ ದರ್ಶನ್ ಮನೆಮಗ ಅಂತಾನೂ ಹೇಳಿದ್ದಾರೆ.

    ಅಭಿಷೇಕ್ ಮತ್ತು ಅವಿವಾ ದಂಪತಿಯ ಮಗುವಿನ ನಾಮಕರಣಕ್ಕೆ ಮನೆಮಗ ದರ್ಶನ್ ರ‍್ತಾರಾ? ಬರಲ್ವಾ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

  • ಡೆವಿಲ್ ಚಿತ್ರೀಕರಣ ಶುರುವಾಗೋ ಹೊತ್ತಲ್ಲೇ ಆಪ್ತರನ್ನ ಇನ್‌ಸ್ಟಾದಿಂದ ಅನ್‌ಫಾಲೋ ಮಾಡಿದ ʻದಾಸʼ

    ಡೆವಿಲ್ ಚಿತ್ರೀಕರಣ ಶುರುವಾಗೋ ಹೊತ್ತಲ್ಲೇ ಆಪ್ತರನ್ನ ಇನ್‌ಸ್ಟಾದಿಂದ ಅನ್‌ಫಾಲೋ ಮಾಡಿದ ʻದಾಸʼ

    ನಟ ದರ್ಶನ್‌ ಮತ್ತೆ ʻದಿ ಡೆವಿಲ್ʼ (The Devil) ಶೂಟಿಂಗ್‌ಗೆ ಎಂಟ್ರಿ ಕೊಡಲಿದ್ದಾರೆ. ಮೈಸೂರಿನಲ್ಲಿ ಸ್ಥಗಿತಗೊಂಡಿದ್ದ ಶೂಟಿಂಗ್ ಮತ್ತೆ ಚಾಲನೆ ನೀಡಲಾಗುತ್ತಿದೆ. ಆದ್ರೆ ಡೆವಿಲ್ ಚಿತ್ರೀಕರಣ ಶುರುವಾಗುವ ಹೊತ್ತಿನಲ್ಲೇ ಆಪ್ತರಿಗೆ ಇನ್‌ಸ್ಟಾದಿಂದ ದರ್ಶನ್‌ (Darshan) ಕೊಕ್‌ ಕೊಟ್ಟಿದ್ದಾರೆ.

    ಹೌದು. ತಮ್ಮ ಇನ್‌ಸ್ಟಾಗ್ರಾಮ್‌ (Instagram) ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ದರ್ಶನ್‌ 6 ಜನರನ್ನ ಫಾಲೋ ಮಾಡ್ತಾ ಇದ್ದರು. ಮದರ್‌ ಇಂಡಿಯಾ ಸುಮಲತಾ ಅಂಬರೀಶ್, ಸಹೋದರ ಸಮಾನರಾದ ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿವಾ, ಅಧಿಕೃತ ಫ್ಯಾನ್ಸ್ ಪೇಜ್ ಡಿ ಕಂಪೆನಿ ಮತ್ತು ಸಹೋದರ ದಿನಕರ್ ಮತ್ತು ಪುತ್ರ ವಿನೀಶ್ ಅವರನ್ನು ಫಾಲೋ ಮಾಡ್ತಿದ್ದರು. ಈಗ ಯಾರನ್ನೂ ದರ್ಶನ್ ಫಾಲೋ ಮಾಡ್ತಿಲ್ಲ. ಫಾಲೋ ಮಾಡುವವರ ಸಂಖ್ಯೆ ʻ0ʼ ಆಗಿದೆ. ಆದ್ರೆ ಇಂಥ ನಿರ್ಧಾರಕ್ಕೆ ಕಾರಣ ಏನು ಅಂತ ದರ್ಶನ್‌ ಫ್ಯಾನ್ಸ್‌ ತಲೆ ಕೆಡಿಸಿಕೊಂಡಿದ್ದಾರೆ.

    ಮಾರ್ಚ್ 12ರಿಂದ 15ರ ವರೆಗೆ ಮೈಸೂರಿನಲ್ಲಿ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ಮಾಡಲು ಅನುಮತಿ ಸಿಕ್ಕಿದೆ. ಮಾ.12ರಿಂದ ಮಾ.14ರವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ಚಿತ್ರತಂಡ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲಿದ್ದಾರೆ. ಮಾ.15ರಂದು ಲಲಿತಮಹಲ್ ಪ್ಯಾಲೆಸ್‌ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದೆ.

    ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದಾರೆ. ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಟನ ಭದ್ರತೆಗಾಗಿ ಸಿಬ್ಬಂದಿ ನಿಯೋಜಿಸಲು 1,64,785 ರೂ. ‘ದಿ ಡೆವಿಲ್’ ಚಿತ್ರತಂಡ ಪಾವತಿಸಿದೆ.

  • ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು: ಚಲುವರಾಯಸ್ವಾಮಿ ಬಾಂಬ್‌ | ಏನಿದು ಕಾರ್‌ ಕಿರಿಕ್‌?

    ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು: ಚಲುವರಾಯಸ್ವಾಮಿ ಬಾಂಬ್‌ | ಏನಿದು ಕಾರ್‌ ಕಿರಿಕ್‌?

    ಮಂಡ್ಯ: ರಾಜಕೀಯ ಹಾಗೂ ವೈಯಕ್ತಿಕ ಜೀವನದಲ್ಲಿ ಕುಚುಕುಗಳ ರೀತಿ ಇದ್ದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಚಲುವರಾಯಸ್ವಾಮಿ (Chaluvaraya Swamy) ಇದೀಗ ಬದ್ಧ ವೈರಿಗಳಾಗಿ ಬದಲಾಗಿದ್ದಾರೆ. ಇಬ್ಬರ ನಡುವೆ ಈಗ ಒಂದಲ್ಲ ಒಂದು ವಿಚಾರಕ್ಕೆ ಮಾತಿನ ಯುದ್ಧ ನಡೆಯುತ್ತಿದೆ. ಇದೀಗ ಕಾರಿನ (Car) ವಿಚಾರಕ್ಕೆ ಇಬ್ಬರ ನಡುವೆ ವಾಕ್ ಸಮರ ಆರಂಭವಾಗಿದೆ.

    ಎರಡು ದಿನಗಳ ಹಿಂದೆ ಕೇಂದ್ರ ಸಚಿಚ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಾರು ವಿಚಾರದ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ನಾನು ಒಬ್ಬ ಕೇಂದ್ರ ಸಚಿವನಾಗಿದ್ದರೂ ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡಿಕೊಂಡು ಶಿಷ್ಟಾಚಾರ (Protocol) ಪಾಲನೆ ಮಾಡುತ್ತಿಲ್ಲ ಎಂದು ದೂರಿದ್ದರು.

    ನಾನು ದೆಹಲಿಯಿಂದ (Delhi) ಬೆಂಗಳೂರಿಗೆ (Bengaluru) ಬಂದಾಗ ಪೋಟೋಕಾಲ್ ಪ್ರಕಾರ ಕಾರನ್ನು ಕಳಿಸಿಲ್ಲ. ಕೊನೆಗೆ ನಾನು ನನ್ನ ಇಲಾಖೆಯಾದ ಬೃಹತ್ ಕೈಗಾರಿಕೆ ಇಲಾಖೆಯ ಕಾರನ್ನು ತರಿಸಿಕೊಂಡು ಓಡಾಡುತ್ತಿದ್ದೇನೆ ಎಂದಿದ್ದರು. ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದರು.

    ಚಲುವರಾಯಸ್ವಾಮಿ ಹೇಳಿದ್ದೇನು?
    ಕುಮಾರಸ್ವಾಮಿ ಈ ಹೇಳಿಕೆಯ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ ಇನ್ನೊಂದು ಬಾಂಬ್‌ನ್ನು ಸಿಡಿಸಿದ್ದಾರೆ. ಕುಮಾರಸ್ವಾಮಿ ನನಗೆ ಕಾರು ಕೊಟ್ಟಿಲ್ಲ ಎಂದು ಹೇಳಿರೋದು ನೋಡಿದ್ರೆ ಅದನ್ನು ಕೇಳಲು ಆಗುತ್ತಿಲ್ಲ. ಕುಮಾರಸ್ವಾಮಿ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಳಸುತ್ತಿದ್ದ ಕಾರನ್ನು ನನಗೆ ಬೇಡ ಅಂದಿದ್ದಾರೆ. ನಾವು ಏನು ಮಾಡಲು ಸಾಧ್ಯ, ಸುಮಲತಾ ಬಳಸುತ್ತಿದ್ದ ಕಾರನ್ನು ಕುಮಾರಸ್ವಾಮಿ ಏಕೆ ಬೇಡ ಎಂದಿದ್ದಾರೆ ಗೊತ್ತಿಲ್ಲ. ನಾವು ಕಾರು ಕೊಡಲ್ಲ ಎಂದು ಹೇಳಿಲ್ಲ, ಅವರೇ ಕಾರು ಬೇಡ ಎಂದಿದ್ದಾರೆ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ʻಶೀಷ್‌ ಮಹಲ್‌ʼ ನವೀಕರಣ – ಮೋದಿ ಮತ್ತೆ ಕಿಡಿ

     

    ನಮಗೂ ಸಹ ಹೊಸ ಕಾರು ಬರಲು ಒಂದು ವರ್ಷವಾಗಿದೆ. ಅಲ್ಲಿಯವರೆಗೆ ಹಿಂದೆ ಉಪಯೋಗಿಸುತ್ತಿದ್ದ ಸಚಿವರ ಕಾರನ್ನು ನಾನು ಬಳಸುತ್ತಿದ್ದೆ. ನಾನು ಸಂಸದನಾದ ಬಳಿಕ ಒಂದು ವರ್ಷ ಅಂಬರೀಶ್ ಅವರ ಕಾರನ್ನು ಬಳಸಿದ್ದೆ. ಆ ಮೇಲೆ ನನಗೆ ಹೊಸ ಕಾರು ಬಂತು. ಹೊಸ ಸಂಸದರಿಗೆ ಹಳೆ ಕಾರನ್ನು ಮೊದಲು ನೀಡುವುದು ವಾಡಿಕೆ. ಬಳಿಕ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಪಡೆದು ಹೊಸ ಕಾರು ಖರೀದಿಸಿ ಕೊಡಲಾಗುತ್ತದೆ. ಆದರೆ ಕುಮಾರಸ್ವಾಮಿ ನೋಡಿದರೆ ಸುಮಲತಾ ಅಂಬರೀಶ್ ಬಳಸಿದ ಕಾರನ್ನು ಬೇಡ ಅಂದಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

    ಕುಮಾರಸ್ವಾಮಿ ಸುಮಲತಾ ಅಂಬರೀಶ್ ಬಳಸಿದ ಕಾರನ್ನು ಅವರ ಮೇಲಿನ ಮುನಿಸಿನಿಂದ ಬೇಡಾ ಎಂದು ಹೇಳಿದ್ರಾ? ಅಥವಾ ರಾಜ್ಯ ಸರ್ಕಾರ ಪ್ರೋಟೋಕಾಲ್ ಪಾಲನೆ ಮಾಡದೇ ಇರುವುದನ್ನು ಮುಚ್ಚಿಕೊಳ್ಳಲು ಚಲುವರಾಯಸ್ವಾಮಿ ಹೀಗೆ ಮಾತಾಡಿದ್ದರಾ ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

  • ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

    ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

    – ಸುಮಲತಾ ಸೇರಿ ಹಲವು ಪ್ರಮುಖರಿಗೆ ಕೈ ತಪ್ಪಿದ ಟಿಕೆಟ್‌

    ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ (Vidhan Parishad Elections) ಹಿನ್ನೆಲೆಯಲ್ಲಿ ಬಿಜೆಪಿ ಸಿ.ಟಿ ರವಿ ಸೇರಿ ಮೂವರು ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ.

    ಪರಿಷತ್‌ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ ರವಿ (CT Ravi), ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ ಮುಳೆ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಸೋಮವಾರ (ಜೂ. 3) ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಹಿನ್ನೆಲೆಯಲ್ಲಿ ಇಂದು ಅಭ್ಯರ್ಥಿಗಳ (BJP Candidates) ಪಟ್ಟಿ ಬಿಡುಗಡೆ ಮಾಡಿದೆ.

    ಹೈಕಮಾಂಡ್‌ ಕೋಟಾದಿಂದ ಸಿ.ಟಿ ರವಿ, ರಾಜ್ಯ ಬಿಜೆಪಿ ಕೋಟಾದಿಂದ ಎನ್. ರವಿಕುಮಾರ್ ಹಾಗೂ ಆರ್‌ಎಸ್‌ಎಸ್‌ ಕೋಟಾದ ಅಡಿಯಲ್ಲಿ ಮಾರುತಿರಾವ್ ಗೋವಿಂದರಾವ್ ಮುಳೆ (ಎಂ.ಜಿ ಮುಳೆ) ಅವರಿಗೆ ಟಿಕೆಟ್‌ ನೀಡಲಾಗಿದೆ. ಇದನ್ನೂ ಓದಿ: ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

    ಮಾಜಿ ಶಾಸಕರೂ ಆಗಿರುವ ಎಂ.ಜಿ ಮುಳೆ ಮರಾಠ ಸಮುದಾಯದ ಪ್ರಭಾವಿ ನಾಯಕರೂ ಆಗಿದ್ದಾರೆ. ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದ ಮುಳೆ ಕಳೆದ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಸಾದಲಮ್ಮ ದೇವಿಯ ಮೊರೆ ಹೋದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

    ಸುಮಲತಾಗೆ ಟಿಕೆಟ್‌ ಮಿಸ್‌:
    ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡ ಸಂಸದೆ ಸುಮಲತಾ ಅವರಿಗೆ ಪರಿಷತ್‌ನಲ್ಲಿ ಟಿಕೆಟ್‌ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದ್ರೆ ಕೊನೇ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದೆ. ಇದರೊಂದಿಗೆ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಎನ್.ಮಹೇಶ್ ಅವರಿಗೂ ಟಿಕೆಟ್‌ ಕೈತಪ್ಪಿದೆ.

  • ಸುಮಲತಾ ಮಂಡ್ಯ ಪ್ರಚಾರ ರದ್ದು

    ಸುಮಲತಾ ಮಂಡ್ಯ ಪ್ರಚಾರ ರದ್ದು

    ಬೆಂಗಳೂರು: ಸುಮಲತಾ ಅಂಬರೀಶ್‌ (Sumalatha Ambareesh) ಅವರ ಮಂಡ್ಯ ಪ್ರಚಾರ ರದ್ದಾಗಿದೆ.

    ಇಂದಿನ ಪ್ರಚಾರದ ಬಗ್ಗೆ ಪಕ್ಷದಿಂದ ಯಾವುದೇ ಸ್ಪಷ್ಟ ನಿರ್ಧಾರ ತಿಳಿಸದ ಕಾರಣ ರದ್ದಾಗಿದೆ. ಮಂಡ್ಯಕ್ಕೆ (Mandya) ತೆರಳದೇ ಬೆಂಗಳೂರಲ್ಲಿ ಸುಮಲತಾ ಅಂಬರೀಶ್ ಉಳಿದಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಇಂದು ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪರ ಸುಮಲತಾ ಮತಯಾಚನೆ ಮಾಡುವ ಕಾರ್ಯಕ್ರಮ ಮಂಗಳವಾರ ನಿಗದಿಯಾಗಿತ್ತು. ಇದನ್ನೂ ಓದಿ: ಸುಣ್ಣ ಬಣ್ಣ ಬಳಿದು ಮನೆ ಸ್ವಚ್ಛ – ಈ ಬಾರಿಯೂ ಅಮೇಠಿಯಿಂದ ರಾಹುಲ್‌ ಸ್ಪರ್ಧೆ?

     

    ಮಂಡ್ಯ ಸಂಸದೆಯಾಗಿ ಇಲ್ಲಿಯವರೆಗೆ ಹೆಚ್‌ಡಿಕೆ ಜೊತೆ ಪ್ರಚಾರದಲ್ಲಿ ಕಾಣಿಸಿಲ್ಲ. ಸುಮಲತಾ ನಡೆ ಬಗ್ಗೆ ದೋಸ್ತಿ ಪಾಳಯದಲ್ಲಿ ಈಗ ಭಾರೀ ಚರ್ಚೆ ನಡೆಯುತ್ತಿದೆ.  ಇದನ್ನೂ ಓದಿ: ಕಾಂಗ್ರೆಸ್‌ನವ್ರಿಗೆ ಚೊಂಬು ಈಗಲೇ ಫಲಿತಾಂಶದ ರೂಪದಲ್ಲಿ ಕಾಣ್ತಿದೆ: ಅಮಿತ್ ಶಾ ತಿರುಗೇಟು

    ಕಳೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಪಕ್ಷೇತರವಾಗಿ ನಿಂತಿದ್ದ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಈ ಬಾರಿ ಸುಮಲತಾ ಮಂಡ್ಯ ಟಿಕೆಟ್‌ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ.