ಬೆಂಗಳೂರು: ಬೆಲ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ಗೆ ಸೇರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಪಿ.ಎಫ್.ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು. ಇದನ್ನೂ ಓದಿ:ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ
ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು. ಇದನ್ನೂ ಓದಿ:ಬಿಜೆಪಿ ಹಿಂದುತ್ವದ ಮೇಲೆ ಪೇಟೆಂಟ್ ಹೊಂದಿಲ್ಲ: ಉದ್ಧವ್ ಠಾಕ್ರೆ
ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.
ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತೇದ್ದೇನೆ ಎಂದರು.
ಮಂಡ್ಯ: ಯಾರೋ ಏನೋ ಅಂದ್ಬಿಟ್ರು, ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸುವುದು ಯಾವಾಗಲೂ ನಡೆಯಲ್ಲ ಎಮದು ಹೇಳುವ ಮೂಲಕ ಸಂಸದೆ ಸುಮಲತಾಗೆ ನಟ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.
ಅಭಿವೃದ್ಧಿ ಆಗಿಲ್ಲ ಅಂದ್ರೆ, ಶಾಸಕರನ್ನ ಜನರು ಪ್ರಶ್ನೆ ಮಾಡ್ತಾರೆ. ಇವರನ್ನ ಪ್ರಶ್ನೆ ಮಾಡೋರು ಯಾರು..?, ಪ್ರತಿ ಬಾರಿ ಕಾಲು ಕೆರೆದುಕೊಂಡು ಜಗಳ ಹುಟ್ಟುಹಾಕಿ. ಯಾರೋ ಏನೋ ಅಂದ್ಬಿಟ್ರು, ಯಾರೋ ಏನೋ ಅಂದ್ಬಿಟ್ರು ಅಂತ ಅನುಕಂಪ ಗಿಟ್ಟಿಸಲು ಆಗಲ್ಲ. 2024ರ ವರೆಗೂ ಅವರ ಅಧಿಕಾರ ಇದೆ. ಜನಗಳ ಜೊತೆ ನಿಂತು ಕೆಲಸ ಮಾಡಲಿ ಎಂದು ಗರಂ ಆದರು.
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿದ್ದಾರೆ.
ಮಂಡ್ಯದ ಹೊನಗನಹಳ್ಳಿಯಲ್ಲಿ ಚರ್ಚೆ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಸದ್ಯಕ್ಕೆ ಎಂಪಿಯಾಗಿದ್ದರೂ ಎಂಎಲ್‍ಎಗಳ ಕೆಲಸಗಳನ್ನು ಹೊತ್ತುಕೊಂಡು ಮಾಡುತ್ತಿದ್ದೇನೆ. ರಾಜ್ಯ ರಾಜಕಾರಣಕ್ಕೆ ಬಂದು ಮಾಡಬೇಕು ಎಂಬುದೇನೂ ಇಲ್ಲ. ಮಂಡ್ಯ ಜಿಲ್ಲೆಗೆ ಮಾಡಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಬೇರೆಯವರು ಮಾಡಿದ್ದಾರೆ. ಆದರೆ ನಾನು ಪ್ರಯತ್ನ ಪಟ್ಟಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನಾನು ಸಚಿವರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಜಿಲ್ಲೆ ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.
ಇದೇ ವೇಳೆ ಕ್ರೆಡಿಟ್ ವಾರ್ ಬಗ್ಗೆ ಮಾತನಾಡಿ, ಸಂಸದೆಯಾಗಿ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ. ಈ ನಡುವೆ ನಾನು ಮಾಡಿದ ಕೆಲಸಗಳಿಗೆ ಕ್ರೆಡಿಟ್ ತೆಗೆದುಕೊಳ್ಳಲು ಅವರುಗಳು ಮುಂದಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಎಲ್ಲೆಂದರಲ್ಲಿ ಕಾಣಿಸುತ್ತಿದೆ Z ಸಿಂಬಲ್ – ಇದು ರಷ್ಯಾದ ಯುದ್ಧದ ಸಂಕೇತ!
ಶಿಂಷಾ ನದಿಗೆ ಸೇತುವೆ ನಿರ್ಮಾಣ ವಿಚಾರವಾಗಿ ಸಂಸದೆಯಾಗಿ ನಾನು ಕೆಲಸ ಮಾಡಿದ್ದೇನೆ. ದೇವೇಗೌಡರು, ಪ್ರತಾಪ್ ಸಿಂಹ ಪ್ರಯತ್ನ ಪಟ್ಟಿಲ್ಲ ಎಂದು ಹೇಳಿದ್ದಿಲ್ಲ. ನಾನು ನಿತಿನ್ ಗಡ್ಕರಿಯನ್ನು ಎಷ್ಟು ಬಾರಿ ಭೇಟಿಯಾಗಿದ್ದೇನೆ ಎಂಬುದನ್ನ ಅವರ ಸಚಿವಲಾಯದಿಂದ ತಿಳಿದುಕೊಳ್ಳಬಹುದು. ಬೇರೆ ಜಿಲ್ಲೆ ಸಮಸ್ಯೆ ತೆಗೆದುಕೊಂಡು ಹೋದರೆ ನಿಮ್ಮ ಜಿಲ್ಲೆ ಸಮಸ್ಯೆ ತೆಗೆದುಕೊಂಡು ಬಾ ಅನ್ನೋ ಉತ್ತರ ಬರುತ್ತೆ. ನನ್ನ ಕ್ಷೇತ್ರದ ಸಮಸ್ಯೆಗೆ ಪರಿಹಾರ ಕೇಳಿದಾಗ ಗಡ್ಕರಿಯವರು ಸ್ಪಂದಿಸಿದ್ದಾರೆ. ಈಗ ಸಂಸದರ ಕೆಲಸಕ್ಕು ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ. ಆದರೆ ಅವರು ಮಾಡಬೇಕಾದ ಕೆಲಸ ಮಾಡುತ್ತಿಲ್ಲ ಎಂದರು.
ಎಂಎಲ್‍ಎ ಗೆ ಎರಡು ಕೋಟಿ ಅನುದಾನ ಸಿಗುತ್ತೆ. ಆದರೆ ನನಗೆ ಒಂದು ತಾಲೂಕಿಗೆ ಸಿಗೋದು 40 ಲಕ್ಷ ಮಾತ್ರ. ಶಾಸಕರು ಕೆಲಸ ಮಾಡಿದ್ದರೆ ಜನರು ನನ್ನನ್ನು ಏಕೆ ಕೇಳುತ್ತಾರೆ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯುವ ಕಾಲ ಇತ್ತು. ಆದರೆ ಈಗ ಜನರು ಎಚ್ಚೆತ್ತಕೊಂಡಿದ್ದಾರೆ ಎಲ್ಲವನ್ನು ಗಮನಿಸುತ್ತಿದ್ದಾರೆ. ಇಂತಹ ರಾಜಕಾರಣಿಗಳಿಗೆ ಜನಗಣಮನ ಹೇಳಿ ಕಳುಹಿಸಲು ಜನರು ಕಾಯುತ್ತಿದ್ದಾರೆ. ಹೆಸರೇಳದೆ ಜೆ.ಡಿ.ಎಸ್ ಶಾಸಕರಿಗೆ ಟಾಂಗ್ ಕೊಟ್ಟರು.
ಮೈಶುಗರ್ ಕಾರ್ಖಾನೆ ಪ್ರಾರಂಭಕ್ಕೆ ಬಜೆಟ್ ನಲ್ಲಿ 50 ಕೋಟಿ ವಿಚಾರ ಬಗ್ಗೆ ಮಾತನಾಡಿ, ಮೂರು ವರ್ಷಗಳ ನನ್ನ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಎಲ್ಲರ ಶ್ರಮದ ಜೊತೆಗೆ ನನ್ನ ಶ್ರಮವು ಇದೆ. ಹಿಂದೆ 400 ಕೋಟಿ ಬಿಡುಗಡೆಯಾಗಿತ್ತು ಆ ಹಣವೆಲ್ಲ ಎಲ್ಲೊಯ್ತು ಎಂದು ಎಲ್ಲರ ಗೊತ್ತಿದೆ. ಈ ಹಣ ಭ್ರಷ್ಟಾಚಾರ ಎಂಬ ಇಲಾಖೆಗೆ ಸೇರಿತ್ತು. ಇದರಿಂದ ಏನು ಕಾರ್ಖಾನೆ ಉದ್ದಾರ ಆಗಲಿಲ್ಲ. ಎರಡು ವರ್ಷ ಸರ್ಕಾರವೆ ಕಾರ್ಖಾನೆ ನಡೆಸುತ್ತೆ ಎಂದು ಹೇಳಿದೆ. ಅದು ಯಾವ ರೀತಿಯಲ್ಲಾದರೂ ಪ್ರಾರಂಭವಾಗಲಿ. ಅಥವಾ ಎಷ್ಟು ಕೋಟಿಯಾದರೂ ಹಾಕಲಿ. ಆದರೆ ಚಾಲನೆ ಮಾಡುತ್ತಾರೋ ಇಲ್ಲವೋ ಎಂಬುದಷ್ಟೆ ನಾವು ಕೇಳಬೇಕು. ನಮ್ಮ ಬೇಡಿಕೆಯು ಕಾರ್ಖಾನೆ ಆರಂಭವಾಗಬೇಕಿರೋದು ಎಂಬುದಷ್ಟೆ ಇರೋದು ಎಂದು ಹೇಳಿದರು.
ಈ ಸಿನಿಮಾ ತೆರೆಗೆ ಬಂದು ಮೂರುವರೆ ದಶಕಗಳಾದರೂ, ಪ್ರತಿ ಪ್ರೇಮಿಯ ಎದೆಯಲ್ಲೂ ಈ ಚಿತ್ರದ ಹಾಡಿನ ಗುನುಗಿದೆ. ಅದರಲ್ಲೂ ಫೆ.14 ರಂದು ಪ್ರಣಯ ಹಕ್ಕಿಗಳ ಪ್ರತಿ ಮೊಬೈಲ್ ನಲ್ಲೂ ಈ ಚಿತ್ರದ ಹಾಡಿನ ಸಾಲಿದೆ. ಕನ್ನಡದ ಸಾರ್ವಕಾಲಿಕ ಶ್ರೇಷ್ಠ ಸಿನಿಮಾಗಳ ಮತ್ತು ಅತ್ಯುತ್ತಮ ಪ್ರೇಮಕಥೆ ಹೊಂದಿರುವ ಚಿತ್ರಗಳ ಸಾಲಿನಲ್ಲಿ ಮೊದಲ ಸಾಲಿನಲ್ಲಿ ಕಾಣಿಸಿಕೊಳ್ಳುವ ಚಿತ್ರ ‘ಒಲವಿನ ಉಡುಗೊರೆ’. ಇದನ್ನೂ ಓದಿ : ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ
ಈ ಚಿತ್ರಕ್ಕೀಗ 35ರ ಹರೆಯ. ನಿಮ್ಮ ಅತ್ಯುತ್ತಮ ಸಿನಿಮಾಗಳಲ್ಲಿ ನಿಮಗೆ ಇಷ್ಟವಾಗುವ ಚಿತ್ರ ಯಾವುದು ಎಂದು ಅಂಬರೀಶ್ ಅವರನ್ನು ಕೇಳಿದಾಗ, ಕ್ಷಣವೂ ಯೋಚನೆ ಮಾಡಿದೆ ಅವರು ಕೊಡುತ್ತಿದ್ದ ಉತ್ತರ ‘ಒಲವಿನ ಉಡುಗೊರೆ’. ಅನುಮಾನವೇ ಬೇಡ, ಅವರು ಈ ಸಿನಿಮಾದ ಟೈಟಲ್ ಟ್ರ್ಯಾಕ್ ಅನ್ನು ಅದೆಷ್ಟೋ ಬಾರಿ ಹೇಳಿದ್ದಿದೆ. ಪತ್ನಿ ಸುಮಲತಾ ಅವರ ಜತೆ ಈ ಹಾಡಿಗೆ ಅಂಬರೀಶ್ ಕುಣಿದು, ಟಿಕ್ ಟಾಕ್ ಮಾಡಿದ್ದೂ ಇದೆ. ಅಷ್ಟರ ಮಟ್ಟಿಗೆ ಈ ಸಿನಿಮಾ ಅಂಬರೀಶ್ ಅವರನ್ನು ಪ್ರಭಾವಿಸಿತ್ತು. ಇದನ್ನೂ ಓದಿ : ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?
1987ರಲ್ಲಿ ತೆರೆಕಂಡ ಒಲವಿನ ಉಡುಗೊರೆ ಚಿತ್ರವು ಆ ಕಾಲಕ್ಕೆ ಪ್ರೇಮಿಗಳ ಫೇವರಿಟ್ ಸಿನಿಮಾವಾಗಿತ್ತು. ಈ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ಪ್ರೇಮಿಗಳು ಅಂಬರೀಶ್ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಶೀರ್ವಾದ ಪಡೆದ ಉದಾಹರಣೆಗಳಿವೆ. ಈ ಚಿತ್ರದಲ್ಲಿ ಅಂಬರೀಶ್ ಪ್ರೇಮಿಯಾಗಿ ನಟಿಸಿದರೆ, ನಟಿ ಮಂಜುಳಾ ಶರ್ಮಾ ಪ್ರೇಯಸಿಯಾಗಿ ಜನರ ಮನಸ್ಸಲ್ಲಿ ಛಾಪು ಒತ್ತಿದ್ದರು. ಡಿ ರಾಜೇಂದ್ರ ಬಾಬು ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾ ಕೇವಲ ಜನರ ಮನಸ್ಸನ್ನು ಮಾತ್ರ ಗೆಲ್ಲಲಿಲ್ಲ. ಬಾಕ್ಸ್ ಆಫೀಸಿನಲ್ಲೂ ಕೊಳ್ಳೆ ಹೊಡೆದಿತ್ತು. ಇದನ್ನೂ ಓದಿ : ಉಪೇಂದ್ರ ಅಣ್ಣನ ಮಗನ ಬೆನ್ನುಬಿದ್ದ ಸ್ಯಾಂಡಲ್ ವುಡ್
ಈ ಸಿನಿಮಾದಲ್ಲಿ ಕಥೆ ಒಂದು ತೂಕವಾದರೆ, ರಂಗರಾವ್ ಸಂಗೀತ ನಿರ್ದೇಶನ ಮತ್ತು ಆರ್.ಎನ್. ಜಯಗೋಪಾಲ್ ಅವರ ಸಾಹಿತ್ಯದಲ್ಲಿ ಮೂಡಿ ಬಂದ ಹಾಡುಗಳು ಈ ಚಿತ್ರದ ಗೆಲುವಿಗೆ ನೇರವಾಗಿಯೇ ಕಾರಣವಾಗಿದ್ದವು. ಮೂವತ್ತೈದು ವರ್ಷಗಳ ನಂತರವು ಈ ಸಿನಿಮಾದ ‘ಒಲವಿನ ಉಡುಗೊರೆ ಕೊಡಲೇನು’ ಹಾಡು ಇವತ್ತಿಗೂ ಪ್ರೇಮಿಗಳಿಗೆ ನಿತ್ಯಮಂತ್ರ. ಇದನ್ನೂ ಓದಿ : ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್
ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಮುಖ ಸುಟ್ಟುಕೊಳ್ಳುತ್ತಾನೆ. ಈ ಕಾರಣಕ್ಕಾಗಿ ಅವನ ಪ್ರೇಯಸಿ ದೂರವಾಗುತ್ತಾಳೆ. ಇವನ ಬಾಳಲ್ಲಿ ಬರುವ ಪ್ರೇಯಸಿಯ ತದ್ರೂಪ ಸಹೋದರಿ ಆತನ ಬದುಕಿನಲ್ಲಿ ಏನೆಲ್ಲ ಬದಲಾವಣೆ ತರುತ್ತಾಳೆ ಎಂಬ ಸಿಂಪಲ್ ಕಥೆಗೆ ಅದ್ಭುತವಾಗಿ ಚಿತ್ರಕಥೆ ಹೆಣೆಯಲಾಗಿತ್ತು. ಅಂಬರೀಶ್ ಕೂಡ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದರು. ನಾಯಕಿ ಮಂಜುಳಾ ಶರ್ಮಾ ದ್ವಿಪಾತ್ರ ಮಾಡಿ ಸೈ ಅನಿಸಿಕೊಂಡಿದ್ದರು. ಈ ನಟನೆಗಾಗಿ ಅಂಬಿಗೆ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಬಂತು. ಅಷ್ಟರ ಮಟ್ಟಿಗೆ ಕಲಾವಿದರು ಪಾತ್ರಗಳೇ ತಾವಾಗಿ ನಟಿಸಿದ್ದರು. ಇದನ್ನೂ ಓದಿ : ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!
ಈ ಸಿನಿಮಾಗೆ 35 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಅಂಬಿ ಪತ್ನಿ ಸುಮಲತಾ ಅಂಬರೀಶ್ ಈ ಚಿತ್ರವನ್ನು ನೆನಪಿಸಿಕೊಂಡಿದ್ದಾರೆ. “ಕನ್ನಡದ ಅತ್ಯುತ್ತಮ ಪ್ರೇಮಕಥೆಗಳಲ್ಲಿ ಒಂದಾದ ಒಲವಿನ ಉಡುಗೊರೆ ಸಿನಿಮಾಕ್ಕೆ 35ರ ಸಂಭ್ರಮದಂದು ಅದರ ಹಲವಾರು ಸವಿ ನೆನಪುಗಳು ಕಣ್ಣಮುಂದೆ ಬರುತ್ತಿವೆ. ವೈಯಕ್ತಿಕವಾಗಿ ಅಂಬರೀಶ್ ಅವರ ನೆಚ್ಚಿನ ಚಿತ್ರಗಳಲ್ಲಿ ಒಂದಾಗಿದ್ದ ಅದು ಸಾರ್ವಕಾಲಿಕ ಶ್ರೇಷ್ಠ ಸಿನೆಮಾಗಳ ಸಾಲಿನಲ್ಲಿದೆ ಎನ್ನುವ ಹೆಮ್ಮೆ ಇದೆ” ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅಷ್ಟೇ ಅಲ್ಲ, ಅಂಬಿ ಪುತ್ರ ಅಭಿಷೇಕ್ ಅಂಬರೀಶ್ ನಟನೆಯ ‘ಅಮರ್’ ಸಿನಿಮಾದಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಹಾಡನ್ನು ಮರು ಬಳಕೆ ಮಾಡಿಕೊಂಡಿದ್ದರು ನಿರ್ದೇಶಕ ನಾಗಶೇಖರ್.
ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಕೆಲವು ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರನ್ನು ಭೇಟಿಯಾಗಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿಷೇಕ್ ಈಗ ಅವರಿಗೆ 28 ವರ್ಷ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೆ 20 ತಿಂಗಳು ಇದೆ. ಆಗ ನೋಡೋಣ ಏನಾಗಲಿದೆಯೋ ಅಭಿಮಾನಿಗಳಿಂದ ಒತ್ತಾಯ ಬಂದರೆ ನೋಡೋಣ. ಸದ್ಯಕ್ಕಂತೂ ಸಿನಿಮಾಗಳ ಕಡೆ ಗಮನಹರಿಸಿದ್ದಾರೆ ಎಂದಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರನ್ನು ಸಂಸದೆ ಸುಮಲತಾ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆಯ ಬಳಿಕ ಗಣಿ ಸಚಿವರನ್ನು ಭೇಟಿ ಮಾಡಿದ್ದಾರೆ. ಸುಮಲತಾ ಅಕ್ರಮ ಗಣಿಗಾರಿಕೆ ಕುರಿತ ಮಾಹಿತಿಯನ್ನು ನೀಡಿದ್ದಾರೆ. ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ
ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಸಚಿವರ ಜೊತೆ ಚರ್ಚಿಸಿದೆ. ಸಚಿವರನ್ನೂ ಜಿಲ್ಲೆಗೆ ಭೇಟಿ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ಮೊದಲ ಹೆಜ್ಜೆ ಇಟ್ಟು ಆಗಿದೆ. ಕದ್ದು ಮುಚ್ಚಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆದು ನಿಯಂತ್ರಣಕ್ಕೆ ತರುವ ಸಮಯವಾಗಿದೆ. ಓಪನ್ ಆಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಗಿತವಾಗಿದೆ. ಊಹೆ ಮಾಡಿಕೊಂಡು ಇರುವವರಿಗೆ ನಾನು ಬಂದು ಉತ್ತರ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅತ್ಯಾಚಾರನೂ ಇಲ್ಲ, ಏನೂ ಇಲ್ಲ ಅವರಿಬ್ಬರು ನಾಟಕವಾಡುತ್ತಿದ್ರು: ಎಸ್‍ಟಿಎಸ್
ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವೇತನ ಕಡಿಮೆ ಇದೆ. ಅವರು ಕೊರೊನಾ ಸಮಯದಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಹೀಗಾಗಿ ನಾವು ಅವರಿಗೆ ಸಂಬಳ ಹೆಚ್ಚು ಮಾಡಬೇಕು ಎಂದು ನಾವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರಿಗೆ ಮನವಿ ಮಾಡಿದ್ದೇನೆ ಅವರು ಕೆಲವು ಸಲಹೆಯನ್ನು ಕೊಟ್ಟಿದ್ದಾರೆ. ಆರೋಗ್ಯ ಕಾರ್ಯಕರ್ತರ ಮೇಲೆ ನಡೆಯುತ್ತಿದ್ದ ಹಲ್ಲೆ ಕುರಿತಾಗಿ ನಾವು ಪಾರ್ಲಿಮೆಂಟ್‍ನಲ್ಲಿ ಚರ್ಚೆ ಮಾಡಿದ್ದೇವೆ. ಆರೋಗ್ಯ ಕಾರ್ಯಕರ್ತರು, ವೈದ್ಯರ ಮೇಲೆ ನಡೆಯುವ ಹಲ್ಲೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.
ಮಂಡ್ಯ: ಅವರು ಏನು ಬೇಕಾದರು ಮಾತನಾಡಲಿ. ಅವರು ಹೃದಯವಂತರು ಹೃದಯವಂತಿಕೆ ಇರೋರು. ಮನೆ ಮಾಡುವ ಸಂದರ್ಭಗಳಲ್ಲಿ ಒಳ್ಳೆಯ ಹಾರೈಕೆ ಮಾಡಿದ್ರೆ ಸಂತೋಷ ಪಡುತ್ತಿದ್ದೆ. ಬೇರೆ ಮಾತನಾಡಿದ್ದರೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಮನೆ ವಿಚಾರ ಎಚ್‍ಡಿಕೆ ಹೇಳಿಕೆಗೆ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸುಮಲತಾ ಅಂಬರೀಶ್, ಅವರು ಮಾತನಾಡಿರುವ ಅರ್ಥ ಏನು ಅಂತಾ ಗೊತ್ತಿಲ್ಲ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಅವರೇ ಹೇಳಬೇಕು. ನಾನು ಮಾತುಗಳಲ್ಲಿ ಮಾತ್ರ ಅಲ್ಲ ಕೆಲಸ ಮಾಡಿ ತೋರಿಸುತ್ತೇನೆ. ಅವರು ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ರೆ ಧನ್ಯವಾದ ಹೇಳುತ್ತೇನೆ. ನಾವು ಮಾತನಾಡಬಾರದು ನಮ್ಮ ಕೆಲಸ ಮಾತನಾಡಬೇಕು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ
ಎಚ್‍ಡಿಕೆ ಪ್ರತಿಕ್ರಿಯೆ
ಮಂಡ್ಯದಲ್ಲಿ ಸುಮಲತಾ ಅವರು ಮನೆ ಮಾಡಿದರೆ ಸಂತೋಷ. ಇದರಿಂದ ನಮ್ಮ ಮೇಲಿನ ಒತ್ತಡ ಕಡಿಮೆ ಆಗುತ್ತದೆ. ಮಂಡ್ಯದ ಜನರ ಸಮಸ್ಯೆ ಕೇಳಿ ಅವರು ಬಗೆಹರಿಸಲಿ ಎಂದರು. ಬಳಿಕ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಮನೆ ಮಾಡುವ ವಿಚಾರವಾಗಿ ಪ್ರಶ್ನೆ ಮಾಡಿದಾಗ ಅದರ ಅಗತ್ಯವೇನೂ ಇಲ್ಲ. ಕ್ಷೇತ್ರದಲ್ಲಿ ಮನೆ ಮಾಡುವುದೇ ಮುಖ್ಯವಲ್ಲ. ಮನೆ ಮಾಡುವುದರಿಂದಲೇ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪರೋಕ್ಷವಾಗಿ ಕುಟುಕಿದರು.
ಕ್ಷೇತ್ರದಲ್ಲಿ ಮನೆ ಮಾಡಿದ ಬಳಿಕ ಮನೆಯೊಳಗೆ ಕುಳಿತರೆ ಪ್ರಯೋಜನ ಆಗಲ್ಲ. ನಾನು ರಾಮನಗರ, ಚನ್ನಪಟ್ಟಣದಲ್ಲಿ ಮನೆ ಮಾಡಿದ್ದೀನಾ? ಸಾ.ರಾ.ಮಹೇಶ್ ಕೂಡ ಕೆ.ಆರ್.ನಗರದಲ್ಲಿ ಮನೆ ಮಾಡಿಲ್ಲ. ಆದರು ನಾವು ಜನರೊಂದಿಗೆ ಸಂಪರ್ಕದಲ್ಲಿದ್ದೇವೆ. ಜನರೊಂದಿಗೆ ಹೇಗೆ ಸಂಪರ್ಕದಲ್ಲಿ ಇರಬೇಕು ಎನ್ನುವುದು ನಮ್ಮ ಮೇಲೆಯೇ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ
ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಆಪ್ತ ಹನಕೆರೆ ಶಶಿಕುಮಾರ್ ಅವರ ಮುಕ್ಕಾಲು ಎಕರೆ ಜಮೀನಿನಲ್ಲಿ ಮನೆ ನಿರ್ಮಾಣ ಮಾಡಲು ಭೂಮಿ ಪೂಜೆ ನೆರವೇರಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ
ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿಯೇ ಮನೆ ನಿರ್ಮಾಣ ಮಾಡಿ ವಾಸವಿರುವುದಾಗಿ ಮಾತು ನೀಡಿದ್ದರು. ಅದರಂತೆ ಮುಕ್ಕಾಲು ಎಕರೆ ಜಮೀನು ಖರೀದಿಸಲಾಗಿದ್ದು, ಇನ್ನು 6 ತಿಂಗಳಲ್ಲಿಯೇ ಮನೆ ನಿರ್ಮಾಣ ಪೂರ್ಣಗೊಳಿಸಲು ಸಜ್ಜಾಗಿದ್ದಾರೆ. ಈಗಾಗಲೇ ಮಂಡ್ಯ ನಗರದ ಚಾಮುಂಡೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿರುವ ಸುಮಲತಾ ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
6-7 ತಿಂಗಳಲ್ಲಿ ಮನೆ ನಿರ್ಮಿಸಿ ಅಲ್ಲಿಂದಲೇ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸುವ ಚಿಂತನೆ ನಡೆಸಲಾಗುತ್ತಿದೆ. ಸ್ವಂತ ಮನೆ ನಿರ್ಮಾಣದಲ್ಲಿ ಪುತ್ರ ಹಾಗೂ ನಟ ಅಭಿಷೇಕ್ ಅಂಬರೀಶ್ ರಾಜಕೀಯ ಭವಿಷ್ಯ ಅಡಗಿದೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಹಲವು ದಿನಗಳ ಹಿಂದೆ ಮದ್ದೂರಿಗೆ ಭೇಟಿ ನೀಡಿದ್ದ ಅಭಿಷೇಕ್ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಮದ್ದೂರಿನಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ
ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟೂರು ಕೂಡ ಮದ್ದೂರಿನ ದೊಡ್ಡರಸಿನಕೆರೆ ಗ್ರಾಮವಾಗಿದ್ದು, ತಂದೆ ಹುಟ್ಟೂರು ಕ್ಷೇತ್ರದಿಂದಲೇ ಮಗನ ಸ್ಪರ್ಧೆಗೆ ಸಿದ್ಧತೆ ನಡೆಸಲು ಮನೆ ಕಟ್ಟುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‍ನನ್ನು ಕಣಕ್ಕಿಸಲು ಸುಮಲತಾ ರಾಜಕೀಯ ಸಿದ್ಧತೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕಾರಣಕ್ಕೆ ಜಿಲ್ಲಾಕೇಂದ್ರ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡದೆ ಹನಕೆರೆಯಲ್ಲೇ ಸ್ವಂತ ಮನೆ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಸುಮಲತಾ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದ್ದರೂ ಇದರ ಹಿಂದೆ ರಾಜಕೀಯ ತಂತ್ರವೂ ಅಡಗಿದೆ.
ಮೈಸೂರು: ನಾನೇ ಮಾಡಿದೇ, ನಾನೇ ಕಟ್ಟಿದೆ ಅಂತ ಹೇಳುವುದು ತಪ್ಪು ಎಂದು ತಮ್ಮದೇ ಪಕ್ಷದ ಸಂಸದ ಪ್ರತಾಪ್ ಸಿಂಹ ಅವರನ್ನ ಎಂಎಲ್‍ಸಿ ಹೆಚ್.ವಿಶ್ವನಾಥ್ ಕುಟುಕಿದ್ದಾರೆ. ಬೆಂಗಳೂರು-ಮೈಸೂರ ದಶಪಥದ ರಸ್ತೆಗೆ ಈ ಹಿಂದೆಯೇ ಚಾಲನೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
ಮೈಸೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಈ ಹಿಂದೆ ಆಸ್ಕರ್ ಫರ್ನಾಂಡೀಸ್ ಕೇಂದ್ರ ಸಚಿವರಾಗಿದ್ದಾಗ ಸುಮಾರು ಸಭೆಗಳನ್ನು ನಡೆಸಿ 1,882 ಕಿಲೋ ಮೀಟರ್ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಪರಿವರ್ತಿಸುವ ಬಗ್ಗೆ ತೀರ್ಮಾನವಾಯ್ತು. ಧೃವ ನಾರಾಯಣ್, ರಮ್ಯಾ, ಡಿ.ಕೆ.ಸುರೇಶ್ ಸೇರಿದಂತೆ ನಾವೆಲ್ಲರೂ ಸುಮಾರು ಸಭೆಗಳಲ್ಲಿ ಭಾಗಿಯಾಗಿದ್ದೇವೆ. ಆನಂತರ ಕೇಂದ್ರದಲ್ಲಿ ಯುಪಿಎ ಸರ್ಕಾರ ಹೋಗಿ ಎನ್‍ಡಿಎ ಅಧಿಕಾರಕ್ಕೆ ಬಂತು. ಆದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಸಿಎಂ ಸಿದ್ದರಾಮಯ್ಯ, ಸಚಿವರಾಗಿದ್ದ ಮಹದೇವ ಪ್ರಸಾದ್ ಹೆದ್ದಾರಿ ನಿರ್ಮಾಣದ ಕೆಲಸ ಆರಂಭಿಸಿದ್ದರು.
ಹೊಸದಾಗಿ ಬಂದವರು ನಾನು ಈ ಯೋಜನೆ ತಂದೆ ಅಂತ ಹೇಳೋದು ಸರಿಯಲ್ಲ. ನೀವು ಸಂಸದರಾಗಿ ಏನು ಮಾಡಿದ್ದೀರಿ ಅದನ್ನ ಜನರ ಮುಂದೆ ಹೇಳಿ. ಅದನ್ನು ಬಿಟ್ಟು, ನಾನೇ ಎಲ್ಲ ಮಾಡಿದೆ ಅಂತ ಹೇಳುವುದು ತಪ್ಪು. ಕೆಲ ದಿನಗಳ ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಸಹ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರೋದು ಗಮನಿಸಿದ್ದೇನೆ ಎಂದರು.
ಪ್ರತಾಪ್ ಸಿಂಹ ಹೇಳಿದ್ದೇನು?:
ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಂದಿರುವುದು ಮೈಸೂರಿಗೋಸ್ಕರ ಮಾತ್ರ. ಮೈಸೂರು ಡೆಸ್ಟಿನೇಷನ್ ಎಂಬ ಕಾರಣಕ್ಕಾಗಿ ನಾನು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಮಂಡ್ಯದ ಮೇಲೆ ಹೋಗುತ್ತೆ ಅಂತಾ ಮಂಡ್ಯದವರು, ರಾಮನಗರದ ಮೇಲೆ ಹೋಗುತ್ತೆ ಅಂತಾ ರಾಮನಗರದವರು. ಈ ಕಾಮಗಾರಿ ನನ್ನದು ಅಂತಾ ಹೇಳಿಕೊಂಡರೇ ಅದಕ್ಕೆ ಅರ್ಥ ಇದೆಯಾ? ಎಂದು ಪ್ರಶ್ನಿಸಿದ ಅವರು ಇದು ಮೋದಿ ಸರ್ಕಾರದ ಯೋಜನೆ. ಈ ಯೋಜನೆಗೆ ಕಾಂಗ್ರೆಸ್ ನವರಿಂದ ಬಿಡಿಗಾಸು ಕೂಡ ಸಿಕ್ಕಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದರು. ಇದನ್ನೂ ಓದಿ:ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ
ಮೈಸೂರು: ನನ್ನ 37 ವರ್ಷದ ರಾಜಕೀಯ ಜೀವನದ ಎದುರಾಳಿಗಳು ಈಗ ನಮ್ಮ ಮುಂದೆ ಇಲ್ಲ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ನನಗೆ ಬುದ್ದಿ ಹೇಳಿ ಸರಿ ದಾರಿ ತೋರಿದವರೂ ಇದ್ದಾರೆ, ಖ್ಯಾತೆ ತೆಗೆದು ಕಣ್ಮರೆಯಾದವರೂ ಇದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಶಾಸಕ ಸಿ.ಎಸ್ ಪುಟ್ಟರಾಜು ಆಕ್ರೋಶ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುಟ್ಟರಾಜು ಅವರು, 1983ರಲ್ಲೇ ನಾನು ಸಕ್ರಿಯವಾಗಿ ರಾಜಕೀಯಕ್ಕೆ ಬಂದವನು. ಗಣಿಗಾರಿಕೆ ವಿಚಾರದಲ್ಲಿ ಯಾರೇ ಅಕ್ರಮ ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಿ. ಆದರೆ ಸಕ್ರಮ ಇರುವ ಕ್ರಷರ್ ಗಳನ್ನು ಅಭಿವೃದ್ಧಿ ದೃಷ್ಟಿಯಿಂದ ಆರಂಭಿಸಬೇಕು. ಈ ಬಗ್ಗೆ ದಿಶಾ ಮೀಟಿಂಗ್ ನಲ್ಲಿ ಚರ್ಚೆ ಮಾಡಿದ್ದೇವೆ. ಅಕ್ರಮ ಗಣಿಗಾರಿಕೆ ಎಂದು ಎರಡು ತಿಂಗಳಿಂದ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ದಿಶಾ ಸಭೆಯಲ್ಲಿ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡುವಂತೆ ತೀರ್ಮಾನ ಮಾಡಲಾಗಿದೆ. ಕಾನೂನು ಚೌಕಟ್ಟಿನಲ್ಲೇ ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ
ನನಗೆ ಎಸ್.ಎಂ ಕೃಷ್ಣ ರಂತಹ ಮುಖ್ಯಮಂತ್ರಿ ಇಷ್ಟ. ಎಸ್.ಎಂ ಕೃಷ್ಣ ಅವರು ರಾಜ್ಯದ ಸಿಎಂ ಆಗಿದ್ದಾಗ ಕೈಗಾರಿಕೆ ಬೆಳವಣಿಗೆಗೆ ಉತ್ತೇಜನ ನೀಡಿದ್ದರು. ಕೃಷ್ಣ ಅವರ ಮುಂದಾಲೋಚನೆ ಕೆಲಸಗಳನ್ನು ಫಾಲೋ ಮಾಡಬೇಕು. ಆದರೂ ನಾನು ಎಲ್ಲ ಮುಖ್ಯಮಂತ್ರಿಗಳಿಗಿಂತ ಎಸ್.ಎಂ ಕೃಷ್ಣ ಅವರನ್ನು ಬಹಳ ಇಷ್ಟ ಪಡುತ್ತೇನೆ. ಅವರ ಕಾರ್ಯವೈಖರಿ ನನಗೆ ವೈಯಕ್ತಿಕವಾಗಿ ಇಷ್ಟ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ
ಮೈಸೂರು: ದಶಪಥದ ರಸ್ತೆ ಮೈಸೂರಿಗಾಗಿ ಇರೋದರಿಂದ ನಾನು ಹೆಚ್ಚು ಆಸಕ್ತಿ ತೆಗೆದುಕೊಂಡಿದ್ದೇನೆ ಎಂದು ಹೇಳುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂಬ ಸುಮಲತಾ ಅಂಬರೀಶ್ ಹೇಳಿಕೆಗೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಯಾರಿಗೆ ಕಾಮಗಾರಿ ಬಗ್ಗೆ ಅನುಮಾನ ಇದೆಯೋ ಅಂತಹವರು ತಜ್ಞರನ್ನು ಕರೆದುಕೊಂಡು ಬಂದು ಪರಿಶೀಲನೆ ಮಾಡಿಸಿಕೊಳ್ಳಿ ಎಂದರು.
ಇದು ಮೋದಿ ಸರ್ಕಾರದ ಯೋಜನೆ:
ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಮೂರು ಸಂಸದರಿಗೆ ಸೇರುತ್ತದೆ ಎಂಬ ಹೇಳಿಕೆಗೂ ಸ್ಪಷ್ಟೀಕರಣ ರೂಪದ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಂದಿರುವುದು ಮೈಸೂರಿಗೋಸ್ಕರ ಮಾತ್ರ. ಮೈಸೂರು ಡೆಸ್ಟಿನೇಷನ್ ಎಂಬ ಕಾರಣಕ್ಕಾಗಿ ನಾನು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಮಂಡ್ಯದ ಮೇಲೆ ಹೋಗುತ್ತೆ ಅಂತಾ ಮಂಡ್ಯದವರು, ರಾಮನಗರದ ಮೇಲೆ ಹೋಗುತ್ತೆ ಅಂತಾ ರಾಮನಗರದವರು. ಈ ಕಾಮಗಾರಿ ನನ್ನದು ಅಂತಾ ಹೇಳಿಕೊಂಡರೇ ಅದಕ್ಕೆ ಅರ್ಥ ಇದೆಯಾ? ಎಂದು ಪ್ರಶ್ನಿಸಿದ ಅವರು ಇದು ಮೋದಿ ಸರ್ಕಾರದ ಯೋಜನೆ. ಈ ಯೋಜನೆಗೆ ಕಾಂಗ್ರೆಸ್ ನವರಿಂದ ಬಿಡಿಗಾಸು ಕೂಡ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ
ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ:
ಸಿದ್ದರಾಮಯ್ಯ ಅವರ ಹೇಳಿಕೆಗೂ ಅರ್ಥವಿಲ್ಲ. ಪದೇ ಪದೇ ಜನರಿಂದ ತಿರಸ್ಕೃತರಾದವರ ಮಾತಿಗೆ ಅರ್ಥವಿಲ್ಲ ಎಂದರು. ಸುಮಲತಾ ಅವರು ಈ ಯೋಜನೆಯ ಕಾಮಗಾರಿ ನನ್ನ ರಸ್ತೆ ಮೇಲೆ ಹೋಗುತ್ತದೆ ಎಂದರೆ ಏನು ಮಾಡಲು ಆಗಲ್ಲ. ಅವರಿಗೆ ಅವಶ್ಯಕತೆ ಇದ್ದರೆ ಮಂಡ್ಯದವರು ಮಂಡ್ಯದವರಗೆ, ರಾಮನಗರದವರು ರಾಮನಗರದವರೆಗೂ ಕಾಮಗಾರಿ ತರಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಟಿ20 ವರ್ಲ್ಡ್ ಕಪ್ – ಅಕ್ಟೋಬರ್ 24ರಂದು ಭಾರತ Vs ಪಾಕಿಸ್ತಾನ
ಈಗ ಕೆಲವರಿಗೆ ಅರ್ಥವಾಗಿದೆ:
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಭಾರತೀಯರಿಗೆ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಯಿತು ಎಂಬುದು ಈಗ ಅರ್ಥವಾಗಬೇಕು. ಮೋದಿಯವರು ಪರಿಸ್ಥಿತಿಯನ್ನು ಮೊದಲೇ ಅರ್ಥ ಮಾಡಿಕೊಂಡು ಸಿಎಎ ಕಾಯ್ದೆಯನ್ನು ಜಾರಿಗೊಳಿಸಿದರು. ಪ್ರತಿಯೊಬ್ಬ ಭಾರತೀಯರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
The Mysuru-Bengaluru 10 lane Highway will be completed by Dasara 2022. Guess what, you can travel from Blr to Mys in just 90 minutes! Take a look at how this project is progressing!
ಇವತ್ತು ಅಫ್ಘಾನಿಸ್ತಾನದ ಸುತ್ತಮುತ್ತ ಹಲವಾರು ಮುಸ್ಲಿಂ ರಾಷ್ಟ್ರಗಳಿದ್ದರೂ ಅವರನ್ನು ಕರೆಸಿಕೊಳ್ಳುತ್ತಿಲ್ಲ. ಷರಿಯಾ, ತಾಲಿಬಾನ್ ಮಾನವ ವಿರೋಧಿಯೆಂಬುದು ಇದೀಗ ಸಾಬೀತಾಗಿದೆ. ಕೇವಲ ಅಫ್ಘಾನಿಸ್ತಾನದ ಮನಃಸ್ಥಿತಿಯ ಜನರಿಲ್ಲ, ಭಾರತದಲ್ಲೂ ಅದೇ ಮನಃಸ್ಥಿತಿಯ ಜನರಿದ್ದಾರೆ. ಸಿಎಎ ಜಾರಿಗೆ ತಂದದ್ದು ಅಫ್ಘಾನಿಸ್ತಾನದ ಕಾರಣಕ್ಕಾಗಿ ಮಾತ್ರವಲ್ಲ. ಇತರ ಕಡೆಗಳಲ್ಲಿ ಈ ರೀತಿಯ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ. ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆ ಮುಸ್ಲಿಂ ರಾಷ್ಟ್ರಗಳಿಗೂ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್