Tag: Sumalatha Ambareesh

  • ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್‌

    ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್‌

    ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

    ತನಗೆ ಪಾಸಿಟಿವ್‌ ಬಂದಿರುವ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಸುಮಲತಾ ಅವರು ಪ್ರಕಟಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ.

    ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೇನೆ.

     

    https://www.facebook.com/SumalathaAmbi/posts/900728177071075

    ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.

  • ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

    ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

    ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ ಕೋವಿಡ್-19 ಪರೀಕ್ಷೆಗೆ ಅಡ್ಡಿಪಡೆಸಿ, ರೌಡಿಗಿರಿ ಮೆರೆದಿದ್ದು ಖಂಡನೀಯ. ಶ್ರೀಕಂಠೇಗೌಡರು ತಪ್ಪು ಮಾಡಿದ್ದಾರೆ. ಅವರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುತ್ತೆ, ಅದನ್ನು ಅವರು ಎದುರಿಸಲೇಬೇಕು. ಅವರು ನಿಯಮಗಳನ್ನು ಉಲ್ಲಂಘಿಸಿ ಕಾನೂನಿನ ವಿರುದ್ಧ ಹೋಗಿದ್ದಾರೆ. ಸರ್ಕಾರದ ಅನುಮತಿ ಪಡೆದು ಮಂಡ್ಯದಲ್ಲಿ ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಫೀಲ್ಡ್ ಅಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಸೋಂಕು ತಗುಲಿದರೆ ಅದು ಬೇರೆ ಅವರಿಗೆ ಹರಡುವ ಸಾಧ್ಯತೆ ಹೆಚ್ಚು, ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಪರೀಕ್ಷೆ ಕೈಗೊಳ್ಳಲಾಗಿದೆ ಅದನ್ನು ಶ್ರೀಕಂಠೇಗೌಡರು ಅರ್ಥ ಮಾಡಿಕೊಳ್ಳಬೇಕು ಎಂದು ಹರಿಹಾಯ್ದರು.

    ಇಲ್ಲಿ ಪರೀಕ್ಷೆ ಮಾಡಬೇಡಿ, ನಮ್ಮ ಮನೆ ಇದೆ ಎಂದರೆ ಬೇರೆ ಕಡೆ ಪರೀಕ್ಷೆ ಮಾಡಿದರೂ ಮನೆಗಳು ಇರುತ್ತೆ ಅಲ್ವಾ? ಪರಿಸ್ಥಿತಿ ಅರ್ಥಮಾಡಿಕೊಳ್ಳದೇ ಹೀಗೆ ಗಲಾಟೆ ಮಾಡಿದರೆ ಈ ಘಟನೆಗೂ ಪಾದರಾಯನಪುರದಲ್ಲಿ ನಡೆದ ಘಟನೆಗೂ ಏನು ವ್ಯತ್ಯಾಸ? ಇಲ್ಲಿ ಕೋವಿಡ್-19 ಪರೀಕ್ಷೆ ನಡೆಸಿದರೆ ನಿಮಗೂ ಕೊರೊನಾ ಬರುತ್ತೆ, ಇದನ್ನು ವಿರೋಧಿಸಿ ಎಂದು ಶ್ರೀಕಂಠೆಗೌಡರು ಸ್ಥಳೀಯರಿಗೆ ಹೇಳಿರುವುದು ಅವರ ಸಂಸ್ಕಾರವನ್ನು ತೋರಿಸುತ್ತದೆ. ಇದು ಬಹಳ ಶೋಷನೀಯ. ಒಬ್ಬರು ಎಂಎಲ್‍ಸಿ ಆಗಿ ಈ ರೀತಿ ಹೇಳಿಕೆ ಕೊಡುತ್ತಾರೆ ಎಂದರೆ ಅವರ ಶಿಕ್ಷಣ ಹಾಗೂ ಮಾಹಿತಿ ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದಾರೆ ಎನ್ನೋದನ್ನ ನಾವು ಪ್ರಶ್ನಿಸಬೇಕಾಗಿದೆ ಎಂದರು.

    ಕೊರೊನಾ ಪರೀಕ್ಷೆ ಮಾಡಿದರೆ ಸೋಂಕು ಹರಡುತ್ತೆ ಎಂದು ಎಲ್ಲೂ ಹೇಳಿಲ್ಲ. ಬದಲಾಗಿ ಅತೀ ಹೆಚ್ಚು ಪರೀಕ್ಷೆ ಮಾಡಿ ಎಂದಿದ್ದಾರೆ. ಕೊರೊನಾ ಇರುವ ಅದೆಷ್ಟೋ ಮಂದಿಗೆ ಸೋಂಕಿನ ಲಕ್ಷಣಗಳು ಇರುವುದಿಲ್ಲ. ಹೀಗಾಗಿ ಪರೀಕ್ಷೆ ಮಾಡುವುದು ಅಗತ್ಯ. ಇದನ್ನು ಅರ್ಥ ಮಾಡಿಕೊಳ್ಳದೇ ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಬೇರೆ ಸಮಯದಲ್ಲಿ ಮಾಡುವಂತೆ ಗೂಂಡಾಗಿರಿ, ಗಲಾಟೆ, ರಾಜಕಾರಣ ಮಾಡುವುದು ಸರಿಯಲ್ಲ. ಹೀಗೆ ಮಾಡಿ ಜನಪ್ರತಿನಿಧಿಯಾಗುವ ಅರ್ಹತೆಯನ್ನೇ ಇವರು ಕಳೆದುಕೊಂಡಿದ್ದಾರೆ ಎನ್ನಬಹುದು ಎಂದು ಕಿಡಿಕಾರಿದ್ದಾರೆ.

    ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಅವರು ಎಫ್‍ಐಆರ್ ದಾಖಲಾದ ಮೇಲೆ ಅದರ ಕಾಫಿಯನ್ನ ಕಳುಹಿಸುವುದಾಗಿ ಹೇಳಿದ್ದಾರೆ. ಈ ರೀತಿ ತಪ್ಪು ಮಾಡಿದರೆ ಸಾಮಾನ್ಯ ವ್ಯಕ್ತಿ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೋ ಅದೇ ರೀತಿ ಕ್ರಮವನ್ನು ಎಂಎಲ್‍ಸಿ ಮೇಲೂ ತೆಗೆದುಕೊಳ್ಳಬೇಕು. ತಪ್ಪು ಯಾರೇ ಮಾಡಿದರು ತಪ್ಪು ತಪ್ಪೇ. ಎಂಎಲ್‍ಸಿ, ಎಂಪಿ, ಎಂಎಲ್‍ಎ ಯಾರೇ ಮಾಡಿದರೂ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಎಷ್ಟೆಲ್ಲಾ ರಿಸ್ಕ್ ತೆಗೆದುಕೊಂಡು ಅಗತ್ಯ ಸೇವೆಗಳಲ್ಲಿ ಇರುವವರು ಕೆಲಸ ಮಾಡುತ್ತಿದ್ದಾರೆ ಎನ್ನುವುದು ಇವರಿಗೆ ಅರ್ಥ ಆಗುತ್ತಿಲ್ಲ. ಇವರು ನಾವು ಮಾತ್ರ ಸುರಕ್ಷಿತವಾಗಿರಬೇಕು ಎನ್ನುವ ಉದ್ದೇಶದಲ್ಲಿ ಇದ್ದಾರೋ ಏನೋ ಗೊತ್ತಿಲ್ಲ. ಆದರೆ ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸುಮಲತಾ ಅವರು ಒತ್ತಾಯಿಸಿದ್ದಾರೆ.

  • ಸಿಎಂ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಪವರ್ ಸ್ಟಾರ್

    ಸಿಎಂ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಪವರ್ ಸ್ಟಾರ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಡೀ ರಾಜ್ಯ ಮಾತ್ರವಲ್ಲದೇ ದೇಶವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

    ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಪುನೀತ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‍ವೈ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಫೋಟೋ ಸಮೇತ ಬರೆದುಕೊಂಡಿದ್ದಾರೆ.

    ಈ ಹಿಂದೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ 50 ಲಕ್ಷ ದೇಣಿಗೆ ನೀಡಿದ್ದರು. ಅವರು ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದರು.

    ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಾಡಿದ್ದರು.

  • 50 ಲಕ್ಷ ದೇಣಿಗೆ ನೀಡಿದ ಸುಮಲತಾ ಅಂಬರೀಶ್

    50 ಲಕ್ಷ ದೇಣಿಗೆ ನೀಡಿದ ಸುಮಲತಾ ಅಂಬರೀಶ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ದೇಣಿಗೆ  ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಡಿದ್ದಾರೆ.

    ನಿನ್ನೆಯಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕೊರೊನಾದಿಂದ ಕಂಗೆಟ್ಟವರಿಗೆ ಪ್ರಧಾನಿ ಮಂತ್ರಿ ನಿಧಿಯಿಂದ 1.70 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಇದು ಜೀವನ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ, ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

  • ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ: ಸುಮಲತಾ

    ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ: ಸುಮಲತಾ

    ಬೆಂಗಳೂರು: ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಇಂದು ನಟಿ, ಸಂಸದೆ ಸುಮಲತಾ ಅಂಬರೀಶ್ ಭಾಗಿಯಾಗಿದ್ದಾರೆ. ಈ ವೇಳೆ ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ.

    ಮುಹೂರ್ತದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಕ್ ಲೈನ್ ಪ್ರೊಡಕ್ಷನ್ ಹಾಗೂ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದ ದರ್ಶನ್ ನಟನೆಯ ಸಿನಿಮಾ ಇದಾಗಿದ್ದು, ಸಿನಿಮಾ ಯಶಸ್ಸಿನಲ್ಲಿ ಇತಿಹಾಸ ಸೃಷ್ಟಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ: ದರ್ಶನ್

    ಐತಿಹಾಸಿಕ ಚಿತ್ರದಲ್ಲಿ ದರ್ಶನ್ ನಟಿಸುತ್ತಿರುವುದೇ ಒಂದು ಖುಷಿಯ ವಿಚಾರವಾಗಿದೆ. ದರ್ಶನ್ ನಟಿಸುತ್ತಿರುವುದು ಒಂದು ಹಿಸ್ಟರಿ ಕ್ರಿಯೇಟ್ ಮಾಡುತ್ತದೆ. ದರ್ಶನ್ ನನ್ನ ದತ್ತು ಮಗ ಅಲ್ಲ ನನ್ನ ಸ್ವಂತ ಮಗನೇ. ಐತಿಹಾಸಿಕ ಚಿತ್ರದಲ್ಲಿ ನಾನು ರಾಜಮಾತೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇದನ್ನೂ ಓದಿ: ಗಂಡುಗಲಿ ಮದಕರಿ ನಾಯಕ ಸಿನಿಮಾ ಮೂಹೂರ್ತದಲ್ಲಿ ಸುಮಲತಾ ಭಾಗಿ

    ಇದಕ್ಕೂ ಮೊದಲು ದರ್ಶನ್ ಮಾತನಾಡಿ, ಇಂದು ಸುಮಲತಾ ಅಮ್ಮ ಚಿತ್ರದ ಮುಹೂರ್ತಕ್ಕೆ ಚಾಲನೆ ಕೊಟ್ಟಿದ್ದಾರೆ. ಚಿತ್ರದಲ್ಲಿ ಎಲ್ಲರೂ ಹಿರಿಯ ಕಲಾವಿದರಿದ್ದಾರೆ. ಅವರು ದರ್ಶನ್ ಕೂತ್ಕೋ ಅಂದರೆ ಕುತ್ಕೋಬೇಕು, ನಿಂತ್ಕೋ ಅಂದರೆ ನಿಂತ್ಕೋಬೇಕು. ಯಾಕೆಂದರೆ ಎಲ್ಲರೂ ನನ್ನ ಸಿನಿಯರ್ಸ್ ಎಂದು ಹೇಳಿದರು.

    ಚಿತ್ರದಲ್ಲಿರುವ ಬಹಳ ಕಲಾವಿದರು ನಮ್ಮ ತಂದೆ ಜೊತೆಗೆ ಕೆಲಸ ಮಾಡಿದ್ದಾರೆ. ಗಂಡುಗಲಿ ಮದಕರಿ ನಾಯಕನ ಚಿತ್ರಕ್ಕಾಗಿ ದೊಡ್ಡ ಟೀಮ್ ಸೇರಿದ್ದೀವಿ. ಮದಕರಿ ನಾಯಕನ ಪಾತ್ರದಿಂದ ಚಿತ್ರ ಇನ್ನಷ್ಟು ಜನರಿಗೆ ಹತ್ತಿರವಾಗಲಿದೆ. ಅಲ್ಲದೆ ರಾಜಮಾತೆ ಪಾತ್ರದಲ್ಲಿ ಸುಮಲತಾ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಆರಂಭವಾಗಿದೆ, ತಯಾರಿಗಳು ನಡೆಯುತ್ತಿದೆ ಎಂದು ದರ್ಶನ್ ತಿಳಿಸಿದರು. ಇದನ್ನೂ ಓದಿ: ದುರ್ಗದ ಕೋಟೆಯಲ್ಲಿ ‘ವೀರ ಮದಕರಿ ನಾಯಕ’ನಾಗಿ ಸಾರಥಿಯ ಪಯಣ

    ದರ್ಶನ್ ಅಭಿನಯದ ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮಹೂರ್ತ ಇಂದು ನೆರವೇರಿದೆ. ಪುರಾತನ ಗವಿ ಗಂಗಾಧರೆಶ್ವರ ದೇವಸ್ಥಾನದಲ್ಲಿ ಮಹೂರ್ತ ನಡೆದಿದ್ದು, ಚಿತ್ರದ ಮೊದಲ ಸೀನ್ ಗೆ ಚಾಲನೆ ನೀಡಲಾಗಿದೆ. ಮಹೂರ್ತ ಕಾರ್ಯಕ್ರಮದಲ್ಲಿ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಶ್ರೀನಿವಾಸ್ ಮೂರ್ತಿ ಭಾಗಿಯಾಗಿದ್ದಾರೆ.

  • ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ: ದರ್ಶನ್

    ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ: ದರ್ಶನ್

    ಬೆಂಗಳೂರು: ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತಕ್ಕೆ ಇಂದು ಚಾಲನೆ ಸಿಕ್ಕಿದ್ದು, ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ನಟ ದರ್ಶನ್, ಇಂದು ಸುಮಲತಾ ಅಮ್ಮ ಚಿತ್ರದ ಮುಹೂರ್ತಕ್ಕೆ ಚಾಲನೆ ಕೊಟ್ಟಿದ್ದಾರೆ. ಚಿತ್ರದಲ್ಲಿ ಎಲ್ಲರೂ ಹಿರಿಯ ಕಲಾವಿದರಿದ್ದಾರೆ. ಅವರು ದರ್ಶನ್ ಕೂತ್ಕೊ ಅಂದರೆ ಕುತ್ಕೋಬೇಕು, ನಿಂತ್ಕೊ ಅಂದರೆ ನಿಂತ್ಕೋಬೇಕು. ಯಾಕೆಂದರೆ ಎಲ್ಲರೂ ನನ್ನ ಸಿನಿಯರ್ಸ್ ಎಂದು ಹೇಳಿದರು. ಇದನ್ನೂ ಓದಿ: ಗಂಡುಗಲಿ ಮದಕರಿ ನಾಯಕ ಸಿನಿಮಾ ಮೂಹೂರ್ತದಲ್ಲಿ ಸುಮಲತಾ ಭಾಗಿ

    ಚಿತ್ರದಲ್ಲಿರುವ ಬಹಳ ಕಲಾವಿದರು ನಮ್ಮ ತಂದೆ ಜೊತೆಗೆ ಕೆಲಸ ಮಾಡಿದ್ದಾರೆ. ಗಂಡುಗಲಿ ಮದಕರಿ ನಾಯಕನ ಚಿತ್ರಕ್ಕಾಗಿ ದೊಡ್ಡ ಟೀಮ್ ಸೇರಿದ್ದೀವಿ. ಮದಕರಿ ನಾಯಕನ ಪಾತ್ರದಿಂದ ಚಿತ್ರ ಇನ್ನಷ್ಟು ಜನರಿಗೆ ಹತ್ತಿರವಾಗಲಿದೆ. ಅಲ್ಲದೆ ರಾಜಮಾತೆ ಪಾತ್ರದಲ್ಲಿ ಸುಮಲತಾ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಆರಂಭವಾಗಿದೆ, ತಯಾರಿಗಳು ನಡೆಯುತ್ತಿದೆ ಎಂದು ದರ್ಶನ್ ತಿಳಿಸಿದರು. ಇದನ್ನೂ ಓದಿ: ದುರ್ಗದ ಕೋಟೆಯಲ್ಲಿ ‘ವೀರ ಮದಕರಿ ನಾಯಕ’ನಾಗಿ ಸಾರಥಿಯ ಪಯಣ

    ದರ್ಶನ್ ಅಭಿನಯದ ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮಹೂರ್ತ ಇಂದು ನೆರವೇರಿದೆ. ಪುರಾತನ ಗವಿ ಗಂಗಾಧರೆಶ್ವರ ದೇವಸ್ಥಾನದಲ್ಲಿ ಮಹೂರ್ತ ನಡೆದಿದ್ದು, ಚಿತ್ರದ ಮೊದಲ ಸೀನ್ ಗೆ ಚಾಲನೆ ನೀಡಲಾಗಿದೆ. ಮಹೂರ್ತ ಕಾರ್ಯಕ್ರಮದಲ್ಲಿ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಶ್ರೀನಿವಾಸ್ ಮೂರ್ತಿ ಭಾಗಿಯಾಗಿದ್ದಾರೆ.

    ದರ್ಶನ್ ಅವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ, ಕುರುಕ್ಷೇತ್ರ ಚಿತ್ರಗಳ ನಂತ ಇದೀಗ ಮತ್ತೊಂದು ಐತಿಹಾಸಿಕ ಚಿತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಿ.ಎಲ್.ವೇಣು ಕಾದಂಬರಿಯನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಬಿಗ್ ಬಜೆಟ್ ಚಿತ್ರವಾಗಿದೆ. ತಾರಾಗಣ, ತಂತ್ರಜ್ಞರ ತಂಡ ಕೂಡ ತುಂಬಾ ವಿಶಾಲವಾಗಿರಲಿದೆ. ಬೆಂಗಳೂರು, ರಾಜಸ್ಥಾನ, ಚಿತ್ರದುರ್ಗ, ಮುಂಬೈನಲ್ಲೂ ಕೂಡ ಶೂಟಿಂಗ್ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

  • ಕೆಆರ್‌ಪೇಟೆ ಬೈಎಲೆಕ್ಷನ್- ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದವ್ರಿಗೆ ಶಾಕ್

    ಕೆಆರ್‌ಪೇಟೆ ಬೈಎಲೆಕ್ಷನ್- ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದವ್ರಿಗೆ ಶಾಕ್

    ಬೆಂಗಳೂರು: ನಮ್ಮ ನೆರವಿಗೆ ಬರುತ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದ ಎರಡೂ ಬಣದವರ ನಿರೀಕ್ಷೆ ಹುಸಿಯಾಗಿದೆ. ನನಗೆ ನೀವೂ ಬೇಕು, ಅವರೂ ಬೇಕು. ಹೀಗಾಗಿ ನಾನು ಯಾರ ಪರವೂ ಪ್ರಚಾರಕ್ಕೆ ಬರಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

    ಹೌದು. ಮಂಡ್ಯ ಅಖಾಡದ ಲೇಟೆಸ್ಟ್ ಬೆಳವಣಿಗೆಯಾಗಿದ್ದು, ಕೆ.ಆರ್. ಪೇಟೆ ಅಖಾಡದಲ್ಲಿ ಸಂಸದೆ ಸುಮಲತಾ ಸೈಲೆಂಟಾಗಿರಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸುಮಲತಾ ಅವರು ತನ್ನ ಬೆಂಬಲ ನಿರೀಕ್ಷಿಸಿದವರಿಗೆ ಶಾಕ್ ನೀಡಿದ್ದಾರೆ.

    ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಬಣದವರು ತಮ್ಮ ಪರವಾಗಿ ಪ್ರಚಾರಕ್ಕೆ ಬರುವಂತೆ ಸುಮಲತಾರ ಮೇಲೆ ಒತ್ತಡ ಹೇರತೊಡಗಿದ್ರು. ಸುಮಲತಾ ಅವರು ಮಂಡ್ಯದ ಅಖಾಡದಿಂದ ಸ್ಪರ್ಧೆ ಮಾಡಿದಾಗ ಬಿಜೆಪಿ ಬಾಹ್ಯ ಬೆಂಬಲ ಘೋಷಣೆ ಮಾಡಿತ್ತು. ಕಾಂಗ್ರೆಸ್ಸಿನ ಚಲುವರಾಯ ಸ್ವಾಮಿ ಮತ್ತು ಟೀಮ್ ಪರವಾಗಿ ಕೆಲಸ ಮಾಡಿದ್ದರು. ಅಸಹಜವಾಗಿಯೇ ಕೆ.ಆರ್.ಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ ಚಂದ್ರಶೇಖರ್ ನಾನು ನಿಮ್ಮನ್ನ ಬೆಂಬಲಿಸಿದ್ದೆ. ಉಪ ಚುನಾವಣೆಯಲ್ಲಿ ನೀವು ನಮ್ಮನ್ನು ಬೆಂಬಲಿಸಿ ಎಂದು ಒತ್ತಡ ಹೇರತೊಡಗಿದ್ದರು. ಇನ್ನೊಂದೆಡೆ ಲೋಕಸಭಾ ಚುನಾವಣೆಯಲ್ಲಿ ಬಾಹ್ಯ ಬೆಂಬಲ ಘೋಷಿಸಿದ್ದ ಬಿಜೆಪಿ ಉಪ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುವಂತೆ ಒತ್ತಡ ಹೇರತೊಡಗಿತ್ತು. ಹೀಗಾಗಿ ಧರ್ಮ ಸಂಕಟಕ್ಕೆ ಸಿಲುಕಿದ್ದ ಸಂಸದೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು.

    ಈಗ ಎರಡು ಬಣದವರಿಗೂ ಸ್ಪಷ್ಟವಾಗಿ ಸಂಸದೆ ತಿಳಿಸಿದ್ದಾರೆ. ಯಾವ ಕಾರಣಕ್ಕೂ ಯಾರ ಪರವಾಗಿಯೂ ಪ್ರಚಾರಕ್ಕೆ ಬರಲ್ಲ ಎಂದಿದ್ದಾರೆ. ಈ ಮೂಲಕ ಸಂಸದೆ ಸುಮಲತಾರನ್ನು ಕರೆತಂದು ತಮ್ಮ ಪರವಾಗಿ ಪ್ರಚಾರ ಮಾಡಿಸಿ ಸುಲಭವಾಗಿ ಗೆಲ್ಲಬಹುದು ಎಂದುಕೊಂಡಿದ್ದ ಕೆ.ಆರ್ ಪೇಟೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಈಗ ನಿರಾಸೆ ಅನುಭವಿಸುವಂತಾಗಿದೆ ಎನ್ನಲಾಗಿದೆ.

  • ಧರ್ಮ ಸಂಕಟದಲ್ಲಿ ಸುಮಲತಾ ಅಂಬರೀಶ್

    ಧರ್ಮ ಸಂಕಟದಲ್ಲಿ ಸುಮಲತಾ ಅಂಬರೀಶ್

    ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ನೀಡ್ತಾರೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇರವಾಗಿ ಸುಮಲತಾರಿಗೆ ಬೆಂಬಲ ನೀಡಿತ್ತು. ಇತ್ತ ಕಾಂಗ್ರೆಸ್‍ನಲ್ಲಿದ್ದ ಚಲುವರಾಯಸ್ವಾಮಿ & ಟೀಂ ಸಹ ಪರೋಕ್ಷವಾಗಿ ಬೆಂಬಲ ನೀಡಿತ್ತು. ಹೀಗಾಗಿ ಯಾರಿಗೆ ಬೆಂಬಲ ನೀಡಬೇಕು ಎಂದು ಸುಮಲತಾ ಅಂಬರೀಶ್ ಧರ್ಮಸಂಕಟದಲ್ಲಿದ್ದಾರೆ ಎನ್ನಲಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಸಂಪೂರ್ಣ ಬೆಂಬಲ ನೀಡಿತ್ತು. ಅಂದು ನಾವು ಬೆಂಬಲಿಸಿದ್ದೀವಿ, ಇಂದು ನೀವು ಬೆಂಬಲಿಸಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅವರಿಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

    ನವೆಂಬರ್ 24ರಂದು ಅಂಬರೀಶ್ ಅವರ ಮೊದಲ ಪುಣ್ಯಸ್ಮರಣೆಯ ದಿನವೇ ನಿರ್ಧಾರವನ್ನು ತಿಳಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಬಿಗಿಪಟ್ಟು ಹಿಡಿದಿವೆಯಂತೆ. ಹೀಗಾಗಿ ಸುಮಲತಾ ಅಂಬರೀಶ್ ಆಪ್ತ ಬೆಂಬಲಿಗರ ಸಭೆ ಕರೆದು ಚರ್ಚಿಸಿ ನವೆಂಬರ್ 24ರಂದು ತಮ್ಮ ನಿರ್ಧಾರವನ್ನು ತಿಳಿಸುವ ಸಾಧ್ಯತೆಗಳಿವೆ.

    ಕೆಲವು ದಿನಗಳ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ಅಭಿಮಾನಿಗಳು ಒತ್ತಾಯಿಸಿದ್ದರಿಂದ ಚುನಾವಣೆಗೆ ನಿಂತೆ. ನನಗಿಂತ ಅವರೇ ಓಡಾಡಿ ಚುನಾವಣೆಯಲ್ಲಿ ಗೆಲ್ಲಿಸಿದರು. ಉಪಚುನಾವಣೆಯಲ್ಲಿ ಪಕ್ಷೇತರ ಸಂಸದೆಯಾಗಿರುವ ನಾನು ಯಾರನ್ನಾದರನ್ನ ಬೆಂಬಲಿಸಬೇಕಾ ಅಥವಾ ತಟಸ್ಥವಾಗಿರಬೇಕಾ ಎಂಬುದನ್ನು ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು.

  • ಮಂಡ್ಯ ರೈಲು ಚಾಲನೆ ವಿಚಾರದಲ್ಲಿ ಯಾವುದೇ ತಪ್ಪಾಗಿಲ್ಲ – ಸ್ಪಷ್ಟನೆ ನೀಡಿದ ಸುಮಲತಾ

    ಮಂಡ್ಯ ರೈಲು ಚಾಲನೆ ವಿಚಾರದಲ್ಲಿ ಯಾವುದೇ ತಪ್ಪಾಗಿಲ್ಲ – ಸ್ಪಷ್ಟನೆ ನೀಡಿದ ಸುಮಲತಾ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಗುರುವಾರ ಮಂಡ್ಯದ ರೈಲಿನಲ್ಲಿ ಮಹಿಳೆಯರಿಗಾಗಿ ಇದ್ದ ವಿಶೇಷ ಬೋಗಿಗಳಿಗೆ ಚಾಲನೆ ನೀಡುವಾಗ, ರೈಲನ್ನು ತಾವಿದ್ದ ಜಾಗಕ್ಕೆ ಕರೆಸಿಕೊಂಡಿದ್ದಾರೆ ಎಂದು ಆರೋಪಿಸಿ ಭಾರೀ ಚರ್ಚೆನಡೆದಿತ್ತು. ಈ ಬಗ್ಗೆ ಇಂದು ಸುಮಲತಾ ಅವರು ಪ್ರತಿಕ್ರಿಯಿಸಿ ಈ ಕಾರ್ಯಕ್ರಮದಲ್ಲಿ ಯಾವುದೇ ತಪ್ಪಾಗಿಲ್ಲ ಎಂದು ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನನ್ನ ಬಗ್ಗೆ ವಿರೋಧ ಸುದ್ದಿಗಳು ಬರಬಾರದು ಎಂದು ನಾನು ಹೇಳೋದಿಲ್ಲ. ಆದರೆ ನಾನು ತಪ್ಪು ಮಾಡಿದ್ದನ್ನು ವಿರೋಧಿಸಿ ಬೇಸರವಿಲ್ಲ. ಆದರೆ ಗುರುವಾರ ಮಂಡ್ಯ ರೈಲು ಚಾಲನೆ ವಿಚಾರವಾಗಿ ಪ್ರಸಾರವಾದ ಸುದ್ದಿಯಿಂದ ನನಗೆ ಬೇಸರವಾಗಿದೆ ಎಂದು ತಿಳಿಸಿದರು.

    ನಿನ್ನೆ ನಾನು ರೈಲಿನ ಮಹಿಳಾ ಬೋಗಿಗಳಿಗೆ ಚಾಲನೆ ನೀಡುವಾಗ, ನಾನು ನಿಂತ ಸ್ಥಳದಲ್ಲೆ ಚಾಲನೆ ನೀಡಬೇಕು ಎಂದು ನಿಗದಿಯಾಗಿತ್ತು. ಅಧಿಕಾರಿಗಳು ಕೂಡ ರೈಲು ಇಲ್ಲಿಗೆ ಬಂದಾಗಲೇ ಚಾಲನೆ ನೀಡಬೇಕೆಂದು ತಿಳಿಸಿದ್ದರು. ಆ ಪ್ರಕಾರ ನಾನು ಆ ಸ್ಥಳದಲ್ಲಿಯೇ ನಿಂತಿದ್ದೆ. ರೈಲು ಅಲ್ಲಿಗೆ ಬಂದಮೇಲೆ ಚಾಲನೆ ಕೊಟ್ಟೆ ಎಂದು ಸ್ಪಷ್ಟಪಡಿಸಿದರು.

    ನಿಲ್ದಾಣಕ್ಕೆ ಆಗ ತಾನೇ ರೈಲು ಬಂದು ಸ್ವಲ್ಪ ದೂರ ನಿಂತಿತ್ತು. ರೈಲಿನಲ್ಲಿ ಇರುವ ಪ್ರಯಾಣಿಕರು ಇಳಿಯುವಾಗ ನೂಕುನುಗ್ಗಲು ಆಗಬಾರದು ಎಂದು ರೈಲಿನ ಲೊಕೋ ಪೈಲಟ್ ನಾವು ನಿಂತಿದ್ದ ಸ್ಥಳದಿಂದ ಸುಮಾರು 10 ಹೆಜ್ಜೆ ದೂರದಲ್ಲಿ ರೈಲು ನಿಲ್ಲಿಸಿದ್ದರು. ಆದರೆ ಕೊನೆ ಬೋಗಿಗಳಲ್ಲಿ ಇದ್ದ ಜನರು ಇಳಿಯುವ ಸ್ಥಳದಲ್ಲಿ ಪ್ಲಾಟ್‍ಫಾರ್ಮ್ ಇಲ್ಲದಿದ್ದ ಕಾರಣ, ಅಧಿಕಾರಿಗಳು ರೈಲನ್ನು ಮುಂದೆ ತರುವಂತೆ ಸೂಚಿಸಿದ್ದಕ್ಕೆ ರೈಲನ್ನು ಸ್ವಲ್ಪ ಮುಂದೆ ತರಲಾಯಿತು. ಆಗ ನಿಗದಿಯಾದ ಸ್ಥಳಕ್ಕೆ ರೈಲು ಬಂದಮೇಲೆ ನಾನು ಬೋಗಿಗಳಿಗೆ ಚಾಲನೆ ನೀಡಿದೆ ಅಷ್ಟೇ. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ ಎಂದು ನಡೆದ ವಿಚಾರವನ್ನು ತಿಳಿಸಿದರು.

    ಗುರುವಾರ ಮಂಡ್ಯದ ರೈಲು ನಿಲ್ದಾಣದಲ್ಲಿ ಮೆಮೋ ರೈಲಿನ ಮಹಿಳಾ ವಿಶೇಷ ಬೋಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡಿದ್ದ ಅವರು, ಮೆಮು ರೈಲಿಗೆ ಅಳವಡಿಸಿದ ಮಹಿಳಾ ಮೀಸಲು ಬೋಗಿಗಳಿಗೆ ಚಾಲನೆ ನೀಡಿದ್ದು ತುಂಬಾ ಖುಷಿಯಾಗಿದೆ. ಇದು ಹೆಮ್ಮೆಯ ವಿಷಯ ನಾನು ಚುನಾವಣೆ ಸಮಯದಲ್ಲಿ ಪ್ರಚಾರ ಮಾಡುವ ವೇಳೆ ಜಿಲ್ಲೆಯ ಮಹಿಳೆಯರು ವಿಶೇಷ ಮಹಿಳಾ ಮೀಸಲು ಬೋಗಿಗಾಗಿ ಮನವಿ ಮಾಡಿದ್ದರು ಎಂದು ತಿಳಿಸಿದ್ದರು.

    ನಾನು ಈ ವಿಚಾರವಾಗಿ ರೈಲ್ವೆ ಸಚಿವರಾದ ಪಿಯುಷ್ ಗೋಯಲ್ ಹಾಗೂ ಸುರೇಶ್ ಅಂಗಡಿ ಅವರಲ್ಲಿ ಮನವಿ ಮಾಡಿದ್ದೆ. ನನ್ನ ಮನವಿಯಂತೆ ಮೆಮೋ ರೈಲಿಗೆ ಎರಡು ಬೋಗಿಗಳನ್ನು ಅಳವಡಿಸಲು ಅವಕಾಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇದ್ದರೆ ಹೆಚ್ಚಿನ ಬೋಗಿ ಅಳವಡಿಸಲಾಗುವುದು ಎಂದು ಹೇಳಿದರು.

    ಈ ಮೆಮೋ ರೈಲು ಬೆಂಗಳೂರು- ಮೈಸೂರು ಮಾರ್ಗವಾಗಿ ಸಂಚರಿಸುತ್ತದೆ. ರೈಲಿನಲ್ಲಿ ಮಹಿಳಾ ಬೋಗಿಯನ್ನು ಅಳವಡಿಸಲಾಗಿರಲಿಲ್ಲ. ಇದಕ್ಕಾಗಿ ಸುಮಲತಾ ಅವರು ಕೇಂದ್ರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಈ ಬೋಗಿಯಲ್ಲಿ 80 ಆಸನಗಳಿದ್ದು, ಪ್ರತ್ಯೇಕ ಮಹಿಳಾ ಬೋಗಿ ಅಳವಡಿಕೆಯಿಂದ ನಿತ್ಯ ಬೆಂಗಳೂರಿಗೆ ತೆರಳುವ ಮಹಿಳಾ ಕಾರ್ಮಿಕರಿಗೆ ಅನುಕೂಲವಾಗಿಲಿದೆ.

  • ನಾನೇನೂ ಕೆಲಸ ಮಾಡ್ತಿಲ್ಲ, ಎಲ್ಲ ಸುಮಲತಾ ಮೇಡಂ ಮಾಡ್ತಿದ್ದಾರೆ: ಶಾಸಕ ಅನ್ನದಾನಿ ಟಾಂಗ್

    ನಾನೇನೂ ಕೆಲಸ ಮಾಡ್ತಿಲ್ಲ, ಎಲ್ಲ ಸುಮಲತಾ ಮೇಡಂ ಮಾಡ್ತಿದ್ದಾರೆ: ಶಾಸಕ ಅನ್ನದಾನಿ ಟಾಂಗ್

    – ಮೇಡಂ ಅವರೇ ಕೆರೆಗೆ ಪೂಜೆ, ಕೆರೆ ತುಂಬಿಸಿದ್ದು

    ಮಂಡ್ಯ: ನಾನು ಏನೂ ಕೆಲಸ ಮಾಡ್ತಾ ಇಲ್ಲ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಓಡಾಡುತ್ತಿದ್ದೇನೆ. ಮಳವಳ್ಳಿಯಲ್ಲಿ ನಂಗೆ ಇದೇ ಕೆಲಸ. ಆದರೆ ಸುಮಲತಾ ಅವರೇ ಪ್ರತಿದಿನ ಇಲ್ಲಿನ ಜನರ ಕಷ್ಟ ಸುಖವನ್ನು ನೋಡ್ತಾ ಇರೋದು ಎಂದು ಸಂಸದೆ ಸುಮಲತಾ ಅಂಬರೀಶ್‍ಗೆ ಜೆಡಿಎಸ್ ಶಾಸಕ ಅನ್ನದಾನಿ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

    ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರ ಬಗ್ಗೆ ಸುಮಲತಾ ಅವರ ಹೇಳಿಕೆಗೆ ತಿರುಗೇಟು ಕೊಟ್ಟ ಶಾಸಕರ ಅನ್ನದಾನಿ, ತಾಲೂಕು ಆಫೀಸ್, ಪೊಲೀಸ್ ಸ್ಟೇಷನ್ ಎಲ್ಲವನ್ನೂ ಅವರೇ ಮಾಡುತ್ತಿದ್ದಾರೆ. ಕೆರೆಗೆ ಪೂಜೆ, ಕೆರೆ ತುಂಬಿಸಿದ್ದು ಅಲ್ಲದೇ ಪಿಂಚಣಿ ಕೂಡ ಮೇಡಂ ಅವರೇ ಕೊಡಿಸುತ್ತಿರೋದು. ಅವರೇ ಜಗಳಗಳನ್ನು ಇತ್ಯರ್ಥ ಮಾಡುತ್ತಾ ಇರೋದು. ಈ ತಾಲೂಕಿನ ಕೆಲಸವನ್ನೆಲ್ಲಾ ಅವರೇ ಮಾಡುತ್ತಾ ಇರೋದು. ನಾನು ಏನೂ ಕೆಲಸ ಮಾಡುತ್ತಾ ಇಲ್ಲ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಓಡಾಡುತ್ತಿದ್ದೇನೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ದರ್ಶನ್, ಯಶ್ ನಟನೆ ಸಿನಿಮಾರಂಗಕ್ಕೆ ಸೀಮಿತವಾಗಿರಲಿ ರಾಜಕೀಯಕ್ಕೆ ಬೇಡ: ಶಿವರಾಮೇಗೌಡ

    ಈ ಜಿಲ್ಲೆಯಲ್ಲಿ ನಾರಾಯಣಗೌಡರನ್ನು ಬಿಟ್ಟು ನಾವು ಈಗ 6 ಜನ ಇದ್ದೇವೆ. ನಾವು ಏನೂ ಕೆಲಸ ಮಾಡುತ್ತಿಲ್ಲ. ಊಟ ಮಾಡಿಕೊಂಡು ತಿರುಗಾಡುತ್ತಾ ಇದ್ದೇವೆ. ದಯವಿಟ್ಟು ಸುಮಲತಾ ಅವರು ಇನ್ನೂ ಹೆಚ್ಚಿನ ರೀತಿ ಕೆಲಸ ಮಾಡಬೇಕು. ನಮ್ಮ ಹೊರೆಯನ್ನು ಇಳಿಸಬೇಕು ಎಂದು ಕೈ ಜೋಡಿಸಿ ಮನವಿ ಮಾಡುತ್ತೇನೆ. ಶಾಸಕರೇನು ಇಲ್ಲ, ಅವರ ಕೆಲಸ ನಾನೇ ಮಾಡುತ್ತಿದ್ದೇನೆ ಎಂದು ಅವರೇ ಹೇಳಿದ್ದಾರಲ್ಲ. ಎಲ್ಲಾ ಅವರೇ ಕೆಲಸ ಮಾಡುವಾಗ ನಮಗೇನೂ ಇಲ್ಲ. ನಮ್ಮ ಜವಾಬ್ದಾರಿಯನ್ನು ಮೇಡಂ ಅವರೇ ತೆಗೆದುಕೊಂಡಿದ್ದಾರಂತೆ. ನಮ್ಮ ಜವಾಬ್ದಾರಿ ಏನೂ ಇಲ್ಲ ಎಂದು ಜನರಿಗೆ ಹೇಳಿ ತಿರುಗಾಡಿಕೊಂಡು ಇರುತ್ತೇವೆ ಎಂದು ಕಿಡಿಕಾರಿದರು.

    ಸುಮಲತಾ ಅವರಿಗೆ ರಾಜಕೀಯ ಪ್ರಬುದ್ಧತೆ ಇದೆ. ಅದಕ್ಕೆ ಅವರು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರು ಕರೆದರೂ ಹೋಗುತ್ತೇನೆ ಅಂತಾರೆ. ಈ ಪ್ರಬುದ್ಧತೆಯಿಂದಲೇ ಅವರು ಈ ಬಾರಿ ಚುನಾವಣೆಯಲ್ಲಿ ಆಯ್ಕೆ ಆಗಿರೋದು. ಅವರು ಎಲ್ಲಾ ಪಾರ್ಟಿಗಳಿಗೂ ಹೋಗಲಿ ಎಲ್ಲರನ್ನೂ ಮಾತಾಡಿಸಲಿ ಎಂದು ನಗು-ನಗುತ್ತಲೇ ವ್ಯಂಗ್ಯವಾಗಿ ಸುಮಲತಾ ಅವರ ವಿರುದ್ಧ ಅನ್ನದಾನಿ ಹರಿಹಾಯ್ದರು.

    ಸಂಸದೆ ಹೇಳಿದ್ದೇನು?
    ಅ. 9ರಂದು ಮಂಡ್ಯ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕೋರ್ ಕಮಿಟಿ ಸದಸ್ಯರ ಸಭೆಯಲ್ಲಿ ಭಾಗಿಯಾಗಿದ್ದ ಸಂಸದೆ ಸುಮಲತಾ, ಜೋಡೆತ್ತುಗಳು ಈಗ ಎಲ್ಲಿ ಹೋದರು ಎಂಬ ಟೀಕೆಗೆ ತಿರುಗೇಟು ನೀಡಿದ್ದರು. ಜೆಡಿಎಸ್ ಪಕ್ಷದ ಎಂಟು ಜನ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಸಂಸದರು ಗೆದ್ದ ತಕ್ಷಣ, ಆ ಎಂಟು ಜನ ಶಾಸಕರು ಕೆಲಸ ಮಾಡಬಾರದು ಎಂದು ನಿಯಮ ಇದೆಯೇ ಎಂದು ಪ್ರಶ್ನಿಸಿದ್ದರು.