Tag: Sumalatha Ambareesh

  • ಸಂಸದೆ ಸುಮಲತಾ ಕಾಂಗ್ರೆಸ್‌ಗೆ ಬರಬಹುದು – ಸಚಿವ ಬೋಸರಾಜು ಹೊಸ ಬಾಂಬ್‌

    ಸಂಸದೆ ಸುಮಲತಾ ಕಾಂಗ್ರೆಸ್‌ಗೆ ಬರಬಹುದು – ಸಚಿವ ಬೋಸರಾಜು ಹೊಸ ಬಾಂಬ್‌

    ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ (BJP-JDS Alliance) ಚುನಾವಣಾ ಪೂರ್ವ ಮೈತ್ರಿ ಹಿನ್ನೆಲೆ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ ಅನ್ನೋ ಚರ್ಚೆ ಶುರುವಾಗಿದೆ. ಈ ಬೆನ್ನಲ್ಲೇ ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ಸುಮಲತಾ (Sumalatha Ambareesh) ಕಾಂಗ್ರೆಸ್‌ ಪಕ್ಷಕ್ಕೆ ಬರಬಹುದು, ಈಗಲೇ ಏನೂ ಹೇಳೋದಕ್ಕೆ ಸಾಧ್ಯವಿಲ್ಲ ಅಂತ ಹೇಳಿದ್ದಾರೆ.

    ರಾಯಚೂರಿನಲ್ಲಿ (Raichur) ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ರಮ್ಯಾ (ನಟಿ/ಮಾಜಿ ಸಂಸದೆ) (Ramya) ಬೇಕಂತಿಲ್ಲ, ಇಬ್ಬರು ಮೂವರು ಅಭ್ಯರ್ಥಿ ರೆಡಿ ಇದ್ದಾರೆ. ಸರ್ವೆ ನಡೆಯುತ್ತಿದೆ, ಜನರ ಅಭಿಪ್ರಾಯದ ಮೇಲೆ ಅಭ್ಯರ್ಥಿ ಅಂತಿಮವಾಗುತ್ತೆ. ಸುಮಲತಾ ಪಕ್ಷಕ್ಕೆ ಬಂದರೂ ಬರಬಹುದು. ತುಂಬಾ ಪವರಫುಲ್ ಕ್ಯಾಂಡಿಡೇಟ್ಸ್ ಪೈಪೋಟಿಯಲ್ಲಿದ್ದಾರೆ. 100% ಗೆಲ್ಲುವಂತ ಅಭ್ಯರ್ಥಿ ಮಂಡ್ಯದಲ್ಲಿ ಇದ್ದಾರೆ. ಯಾರು ಸೂಕ್ತ ಅನ್ನೋದನ್ನ ಮುಂದೆ ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಎಂದು ತಿಳಿಸಿದ್ದಾರೆ.

    ಇನ್ನೂ ಖಾಸಗಿ ವಾಹನ ಮಾಲೀಕರ ಹೋರಾಟ ಕುರಿತು ಪ್ರತಿಕ್ರಿಯಿಸಿದ ಎನ್.ಎಸ್.ಬೋಸರಾಜು, ಖಾಸಗಿ ವಾಹನಗಳ ಮಾಲೀಕರು ಅವರ ಲಾಭಕ್ಕೆ ಹೋರಾಟ ಮಾಡುತ್ತಿದ್ದಾರೆ. ಶಕ್ತಿಯೋಜನೆ ಬಗ್ಗೆ ಅವರಿಗೆ ವಿರೋಧ, ಅಸಮಧಾನವಿಲ್ಲ. ಅವರ ಬಸ್‌ಗಳಿಗೆ ಯೋಜನೆ ಕೊಟ್ಟಿಲ್ಲ, ಅವರ ವ್ಯವಹಾರ ಕಡಿಮೆಯಾಗುತ್ತೆ ಅಂತ ಹೋರಾಟ ಮಾಡ್ತಿದ್ದಾರೆ. ಸಾಧಕ-ಬಾಧಕಗಳನ್ನ ನೋಡಿ ಸರ್ಕಾರ ತೀರ್ಮಾನ ಮಾಡುತ್ತದೆ. ಅವರಿಗೆ ತೊಂದರೆ ಕೊಡಬೇಕು ಅನ್ನೋದು ಸರ್ಕಾರದ ಉದ್ದೇಶವಲ್ಲ ಎಂದಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೊರಗಿನವರು ನಮ್ಮವರೂ ಮೋಸ ಮಾಡ್ತಾರೆ, ಅನುಭವವಿದೆ: ಪರಮೇಶ್ವರ್

    ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳು ಹೆಚ್ಚಾಗಿ ಓಡಾಡುತ್ತವೆ. ಅವರಿಗೆ ಯಾವ ರೀತಿ ಅನುಕೂಲ ಮಾಡಬೇಕು ಅನ್ನೋದನ್ನ ಸರ್ಕಾರ ತೀರ್ಮಾನ ಮಾಡುತ್ತೆ. ರಾಜ್ಯ ಮಾತ್ರವಲ್ಲ ಇಡೀ ದೇಶದಲ್ಲಿ ಶಕ್ತಿ ಯೊಜನೆ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ. ಮಧ್ಯವರ್ತಿಗಳಿಗೆ ಒಂದು ಪೈಸೆ ಸಿಗದಂತೆ 5 ಗ್ಯಾರೆಂಟಿಗಳನ್ನ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್, ದರ್ಶನ್ ಸಂಧಾನದ ಬಗ್ಗೆ ಸುಮಲತಾ ಪ್ರತಿಕ್ರಿಯೆ

    ಸುದೀಪ್, ದರ್ಶನ್ ಸಂಧಾನದ ಬಗ್ಗೆ ಸುಮಲತಾ ಪ್ರತಿಕ್ರಿಯೆ

    60ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆ ಅಂಬಿ ಸಮಾಧಿ ಬಳಿ ಆಗಮಿಸಿ ವಿಶೇಷ ಪೂಜೆಯನ್ನ ಸುಮಲತಾ ಸಲ್ಲಿಸಿದ್ದಾರೆ. ಈ ವರ್ಷದ ಹುಟ್ಟುಹಬ್ಬ ಆಚರಣೆಯ ಬಗ್ಗೆ ಮತ್ತು ಸುದೀಪ್- ದರ್ಶನ್ (Darshan) ಸಂಧಾನದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

    ಇದು ನಮ್ಮ ವೈಯಕ್ತಿಕ ಬದುಕಿನ ಕಾರ್ಯಕ್ರಮವಾಗಿದೆ. ಫ್ಯಾಮಿಲಿ ಅಂದ ಮೇಲೆ ಎಲ್ಲರೂ ಒಂದೇನೆ. ಅವರು ಬೇರೇ ರೀತಿಯಲ್ಲಿ ಇರೋಲ್ಲ. ನಾವೆಲ್ಲರೂ ಒಂದೇ ಕುಟುಂಬದವರು ಅನ್ನೋ ಹಾಗೆ ಇರುತ್ತಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡೋಕೆ ಇಷ್ಟಪಡಲ್ಲ, ಇದು ತೀರಾ ಪರ್ಸನಲ್‌ ವಿಚಾರ ಎಂದು ಸುಮಲತಾ ಮಾತನಾಡಿದ್ದಾರೆ. ಇದನ್ನೂ ಓದಿ:60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ- ಸಂಭ್ರಮದಲ್ಲಿ ಭಾಗಿಯಾದ ಸ್ಟಾರ್ಸ್

    ಸುಮಲತಾ (Sumalatha) ಹುಟ್ಟುಹಬ್ಬದ ಪ್ರಯುಕ್ತ ಗ್ರ್ಯಾಂಡ್ ಬರ್ತ್‌ಡೇ ಪಾರ್ಟಿಯನ್ನ ಶನಿವಾರ ರಾತ್ರಿ (ಆಗಸ್ಟ್ 26) ಆಯೋಜಿಸಲಾಗಿತ್ತು. ಈ ವೇಳೆ ಒಂದೇ ವೇದಿಕೆಯಲ್ಲಿ ಸುಮಲತಾ ಬರ್ತ್‌ಡೇ ಸೆಲೆಬ್ರೇಶನ್‌ನಲ್ಲಿ ಸುದೀಪ್(Sudeep)- ದರ್ಶನ್ ಭಾಗಿಯಾಗಿದ್ದರು. ಪಾರ್ಟಿ ಫೋಟೋ ವೈರಲ್ ಬೆನ್ನಲ್ಲೇ ಕಿಚ್ಚ-ದಚ್ಚು ರಾಜಿ ಸಂಧಾನ ನಡೆದಿದೆ ಎನ್ನಲಾಗಿತ್ತು. ಸುಮಲತಾ ಅವರೇ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಹೇಳಲಾಗಿತ್ತು. ಇದು ನಿಜಾನಾ? ಇಬ್ಬರು ಸ್ಟಾರ್ ನಟನ ರಾಜಿ ಸಂಧಾನ ಆಗಿದ್ಯಾ? ಅಸಲಿ ವಿಚಾರವೇನು ಎಂಬುದನ್ನ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ- ಸಂಭ್ರಮದಲ್ಲಿ ಭಾಗಿಯಾದ ಸ್ಟಾರ್ಸ್

    60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ- ಸಂಭ್ರಮದಲ್ಲಿ ಭಾಗಿಯಾದ ಸ್ಟಾರ್ಸ್

    ಬಹುಭಾಷಾ ನಟಿ, ಸುಮಲತಾ (Sumalatha Ambareesh) ಅವರಿಗೆ ಈ ವರ್ಷ ಸಖತ್ ಸ್ಪೆಷಲ್. 60ನೇ ವರ್ಷಕ್ಕೆ ಕಾಲಿಟ್ಟಿರುವ ಅಂಬರೀಶ್ ಪತ್ನಿ ಸುಮಲತಾ ಹುಟ್ಟುಹಬ್ಬವನ್ನ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಸಂಭ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು ಸಾಕ್ಷಿಯಾಗಿದ್ದಾರೆ.

    ಸುಮಲತಾ ಹುಟ್ಟುಹಬ್ಬವನ್ನು ಶನಿವಾರ (ಆಗಸ್ಟ್ 26) ರಾತ್ರಿಯೇ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಎಲ್ಲರನ್ನೂ ಅಂಬರೀಷ್ ಕುಟುಂಬದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.‌ ಇದನ್ನೂ ಓದಿ:ಮುಂದಿನ ತಿಂಗಳು ಪತ್ನಿಗೆ ಡೆಲಿವರಿ ಡೇಟ್- 2ನೇ ಮಗುವಿನ ಬಗ್ಗೆ ಧ್ರುವ ಪ್ರತಿಕ್ರಿಯೆ

    ಇದು 60ನೇ ವರ್ಷದ ಬರ್ತ್‌ಡೇ ಎಂಬ ಖುಷಿ ಒಂದು ಕಡೆ. ಅಭಿಷೇಕ್-ಅವಿವಾ ಬಿಡಪ (Aviva Bidapa) ಮದುವೆ ಬಳಿಕ ಸುಮಲತಾ ಅಂಬರೀಷ್ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಎಂಬ ಖುಷಿ ಇನ್ನೊಂದು ಕಡೆ. ಈ ಸಂಭ್ರಮದಲ್ಲಿ ಜೋರಾಗಿ ಸೆಲೆಬ್ರೇಟ್ ಮಾಡಲಾಗಿದೆ.

    ಈ ಸಂಭ್ರಮದಲ್ಲಿ ಸುಮಲತಾ ಕುಟುಂಬದ ಜೊತೆ ರಾಕ್‌ಲೈನ್‌ ವೆಂಕಟೇಶ್‌, ಕಿಚ್ಚ ಸುದೀಪ್(Kichcha Sudeep), ದರ್ಶನ್(Darshan), ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ (Rishab Shetty) ದಂಪತಿ, ಪ್ರಮೋದ್ ಶೆಟ್ಟಿ, ಮದಗಜ ನಿರ್ದೇಶಕ ಮಹೇಶ್‌, ಮಾಲಾಶ್ರೀ ಕುಟುಂಬ ಸೇರಿದಂತೆ ಹಲವು ನಟ-ನಟಿಯರು ಭಾಗಿಯಾಗಿ ಶುಭಕೋರಿದ್ದಾರೆ.

    ಬಹುಭಾಷೆಗಳಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಸಿನಿಮಾರಂಗದ ಜೊತೆ ರಾಜಕೀಯ ರಂಗದಲ್ಲಿ ಸುಮಲತಾ ಹೈಲೆಟ್ ಆಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  •  6 ವರ್ಷದ ಬಳಿಕ ಕಿಚ್ಚ, ದಚ್ಚು ಮುಖಾಮುಖಿ- ಮನಸ್ತಾಪಕ್ಕೆ ತೆರೆ ಎಳೆದ್ರಾ ಸುಮಲತಾ?

     6 ವರ್ಷದ ಬಳಿಕ ಕಿಚ್ಚ, ದಚ್ಚು ಮುಖಾಮುಖಿ- ಮನಸ್ತಾಪಕ್ಕೆ ತೆರೆ ಎಳೆದ್ರಾ ಸುಮಲತಾ?

    ಬೆಂಗಳೂರು: ಬರೋಬ್ಬರಿ ಆರು ವರ್ಷದ ಬಳಿಕ ಸ್ಯಾಂಡಲ್‍ವುಡ್ ಸ್ಟಾರ್ ನಟರಾದ ಕಿಚ್ಚ ಸುದೀಪ್ (Kichcha Sudeepa) ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಮುಖಾಮುಖಿಯಾಗಿದ್ದಾರೆ.

    ಹೌದು. ಶನಿವಾರ ಖಾಸಗಿ ಹೋಟೆಲ್‍ನಲ್ಲಿ ಸುಮಲತಾ (Sumalatha Ambareesh) ಹುಟ್ಟುಹುಬ್ಬದ ಪಾರ್ಟಿ (Birthday Party) ನಡೆದಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್-ಸುದೀಪ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ 6 ವರ್ಷಗಳ ಮುನಿಸಿಗೆ ಬ್ರೇಕ್ ಬೀಳುತ್ತಾ..?, ದಚ್ಚು-ಕಿಚ್ಚ ಮನಸ್ತಾಪಕ್ಕೆ ಸುಮಲತಾ ತೆರೆ ಎಳೆದ್ರಾ ಎಂಬ ಪ್ರಶ್ನೆ ಎದ್ದಿದೆ.

    ಸುದೀಪ್ ಹಾಗೂ ದರ್ಶನ್ ಮುಖಾಮುಖಿಯಾದರೂ ಮಾತುಕತೆ ನಡೆದಿಲ್ಲ ಎನ್ನಲಾಗಿದೆ. ಒಬ್ಬರನ್ನು ಒಬ್ಬರು ನೋಡಿ ಬರೀ ಮುಗುಳ್ನಕ್ಕು ಸುಮ್ಮನಾಗಿದ್ದಾರೆ. ಇಬ್ಬರನ್ನೂ ಒಂದು ಮಾಡಲು ಸುಮಲತಾ ಪ್ರಯತ್ನಿಸ್ತಿದ್ದು, ಅಂಬಿ ಬಳಿಕ ಸುಮಲತಾ ಮಾತನ್ನು ಕಿಚ್ಚ-ದಚ್ಚು ಅಲ್ಲಗಳೆಯಲಿಲ್ಲ. ತಡರಾತ್ರಿ 3 ಗಂಟೆಯವರೆಗೂ ಇಬ್ಬರೂ ನಟರು ಪಾರ್ಟಿಯಲ್ಲಿದ್ದರು. ಹೀಗಾಗಿ ಸುಮಲತಾ ಇವರಿಬ್ಬರನ್ನು ಒಂದು ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

    6 ವರ್ಷದ ಹಿಂದೆ ಸುದೀಪ್ ನನ್ನ ಸ್ನೇಹಿತರಲ್ಲ ಎಂದು ದರ್ಶನ್ ಹೇಳಿದ್ದರು. ಇನ್ಮುಂದೆ ನಾನು ಸುದೀಪ್ ಸ್ನೇಹಿತರಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಅದಾದ ಬಳಿಕ ಒಂದು ಬಾರಿಯೂ ಇಬ್ಬರೂ ಭೆಟಿಯಾಗಿರಲಿಲ್ಲ. ಆದರೆ ದಚ್ಚು ಪೋಸ್ಟ್ ಬಳಿಕವೂ ದರ್ಶನ್ ನನ್ನ ಸ್ನೇಹಿತ ಎಂದು ಕಿಚ್ಚ ಸುದೀಪ್ ಹೇಳಿದ್ದರು. ದರ್ಶನ್ ನನ್ನ ಸ್ನೇಹಿತ, ಈಗ ಇಲ್ಲ ಅಂದ್ರೆ ಆಗ ಸ್ನೇಹಿತ ಆಗಿರೋಕೆ ಹೇಗೆ ಸಾಧ್ಯ? ಒಂದು ಸ್ಥಾನ ಕೊಟ್ಮೇಲೆ ಸ್ನೇಹ ಕೊನೆಯವರೆಗೆ ಇರುತ್ತೆ ಎಂದಿದ್ದರು. ಇದೀಗ ಇಬ್ಬರ ಚಿಕ್ಕ, ಪುಟ್ಟ ಮನಸ್ತಾಪಕ್ಕೆ ಬ್ರೇಕ್ ಬೀಳುತ್ತಾ ಎಂಬ ಪ್ರಅಶ್ನೆ ಎದ್ದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ನೀರಿಗೆ ತಮಿಳುನಾಡು ಬೇಡಿಕೆ – ಯಾವ ತಿಂಗಳು ಎಷ್ಟು ನೀರು ಬಿಡಬೇಕು?

    ಕಾವೇರಿ ನೀರಿಗೆ ತಮಿಳುನಾಡು ಬೇಡಿಕೆ – ಯಾವ ತಿಂಗಳು ಎಷ್ಟು ನೀರು ಬಿಡಬೇಕು?

    ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ಕುಗ್ಗಿದ್ದು, ಅಲ್ಪ ಮಳೆ ಬಿದ್ದ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) ಕೊಂಚ ಪ್ರಮಾಣದಲ್ಲಿ ಮಾತ್ರ ನೀರು ಶೇಖರಣೆಯಾಗಿದೆ.

    ಸದ್ಯ ಡ್ಯಾಂನಲ್ಲಿ 89 ಅಡಿಯಲ್ಲಿ 15.349 ಟಿಎಂಸಿ ನೀರು ಇದೆ. ಈ ಪೈಕಿ 8 ಟಿಎಂಸಿಯಷ್ಟು ನೀರನ್ನು ಮಾತ್ರ ಬಳಕೆ ಮಾಡಿಕೊಳ್ಳಬಹುದು. ಈ ಹೊತ್ತಿನಲ್ಲಿ ತಮಿಳುನಾಡು (Tamil Nadu) ಪ್ರತಿವರ್ಷ ನೀಡುವಂತೆ ಈ ತಿಂಗಳ ಹಂಚಿಕೆ ನೀರನ್ನು ಬಿಡುವಂತೆ ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ಪ್ರಸ್ತಾಪ ಮಾಡಿದೆ. ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    ಡ್ಯಾಂನಲ್ಲಿ ಇರುವ ನೀರು ಎರಡು ತಿಂಗಳು ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬಹದು. ಇತ್ತ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಬೆಳೆಗಳಿಗೆ ನೀರು ಇಲ್ಲದ ಕಾರಣ ಬೆಳೆಗಳು ಒಣಗುತ್ತಿವೆ. ಹೀಗಿರುವಾಗ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಕಷ್ಟಸಾಧ್ಯವಾಗಿದೆ. ಈ ಬಗ್ಗೆ ಸಿಎಂ ಹಾಗೂ ನೀರಾವರಿ ಸಚಿವರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಹೇಳಿದ್ದಾರೆ. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌

    ಈ ಕುರಿತು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh), ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಕೊಡುವುದು ಕಷ್ಟ ಇದೆ. ಟ್ರಿಬ್ಯೂನಲ್ ಪ್ರಕಾರ ನೀರಿನ ಹಂಚಿಕೆ ವಿಚಾರದಲ್ಲಿ ನಿಯಮಗಳು ಇವೆ. ಸದ್ಯ ಮಳೆ ತುಂಬಾ ಕಡಿಮೆ ಬೀಳುತ್ತಿದ್ದು, ಕೆಆರ್‌ಎಸ್ ನೀರಿನ ಮಟ್ಟ ಆತಂಕಕರವಾಗಿ ಇದೆ. ಈ ಬಗ್ಗೆ ಮೊದಲು ರಾಜ್ಯದ ಸಚಿವರ ಜೊತೆ ತುರ್ತು ಸಭೆ ನಡೆಸಿ ಬಳಿಕ ಕೇಂದ್ರ ಸರ್ಕಾರ ಹಾಗೂ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ – AAP ಆರೋಪ

    ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
    ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ನ್ಯಾಯಾಧಿಕರಣ 192 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಹರಿಸುವಂತೆ ಆದೇಶಿಸಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಸೂಚಿಸಿತು. ಇದನ್ನೂ ಓದಿ: ಎರಡು ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿ UAEಯತ್ತ ಹೊರಟ ಮೋದಿ

    ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
    ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು. ಇದನ್ನೂ ಓದಿ: ಗ್ರಾಹಕರಿಗೆ ಶಾಕ್ ಮೇಲೆ ಶಾಕ್ – ಆಷಾಢ ಮುಗಿಯುತ್ತಿದ್ದಂತೆ ಹೋಟೆಲ್ ದರ ಏರಿಕೆ ಬರೆ ಫಿಕ್ಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರೆಂಟ್ ಶಾಕ್ – ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮೈಶುಗರ್ ಕಾರ್ಖಾನೆ

    ಕರೆಂಟ್ ಶಾಕ್ – ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮೈಶುಗರ್ ಕಾರ್ಖಾನೆ

    ಮಂಡ್ಯ: ವಿದ್ಯುತ್ ದರ ಏರಿಕೆಯಾಗಿದ್ದು ರಾಜ್ಯಾದ್ಯಂತ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇತ್ತೀಚೆಗಷ್ಟೇ ಪುನರಾರಂಭಗೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ (Mysugar Sugar Factory) ಕೋಟಿ ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವುದು ಕಂಡುಬಂದಿದೆ.

    ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾಗಿರುವ ಮೈಶುಗರ್ 2000 ಇಸವಿಯಿಂದಲೂ ಕರೆಂಟ್ ಬಿಲ್ (Electricity Bill) ಕಟ್ಟದೇ ಬರೋಬ್ಬರಿ 40 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ

    ರೋಗಗ್ರಸ್ಥ ಕಾರ್ಖಾನೆ ಎಂದೇ ಬಿಂಬಿಸಿಕೊಂಡಿದ್ದ ಕಾರ್ಖಾನೆಯ ಪುನರಾರಂಭಕ್ಕೆ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ 50 ಕೋಟಿ ಬಿಡುಗಡೆ ಮಾಡಿತ್ತು. ಸಂಸದೆ ಸುಮಲತಾ (Sumalatha Ambareesh) ಕಾರ್ಖಾನೆ ಪುನರಾರಂಭಕ್ಕೆ ಚಾಲನೆ ನೀಡಿದ್ದರು. ಕಾರ್ಯಾರಂಭಕ್ಕೆ ಸಿದ್ಧವಾಗಿರುವ ಕಾರ್ಖಾನೆ ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್ ಕಬ್ಬು ನುರಿಯುವ ಗುರಿ ಹೊಂದಿದೆ. ಇದಕ್ಕೆ ವಿದ್ಯುತ್ ಪೂರೈಕೆಯ ಅವಶ್ಯಕತೆಯಿದೆ. ಆದರೆ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿರೋದು ಆರಂಭದಲ್ಲೇ ವಿಘ್ನ ಉಂಟಾಗಿದೆ.

    ವಿದ್ಯುತ್ ಪೂರೈಕೆಗೆ ಮನವಿ:
    ಮೈಶುಗರ್ ಕಾರ್ಖಾನೆಗೆ ವಿದ್ಯುತ್ ಪೂರೈಕೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ (Dinesh Guligowda) ಮನವಿ ಮಾಡಿ ಇಂಧನ ಸಚಿವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

    ಮೈಶುಗರ್ ಹಲವು ವರ್ಷಗಳಿಂದ ನಷ್ಟಕ್ಕೆ ಸಿಲುಕಿದ್ದು, 40.86 ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯುವ ಅವಶ್ಯಕತೆ ಇರುವುದರಿಂದ ವಿದ್ಯುತ್ ಪೂರೈಕೆ ಮಾಡಿದರೆ, ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತದೆ. ಆದ್ದರಿಂದ ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಅಭಿ-ಅವಿವಾ ಬೀಗರ ಔತಣ – ಬಾಡೂಟದ ಮೆನು ಏನು?

    ಇಂದು ಅಭಿ-ಅವಿವಾ ಬೀಗರ ಔತಣ – ಬಾಡೂಟದ ಮೆನು ಏನು?

    ಮಂಡ್ಯ: ಅಭಿಷೇಕ್ ಅಂಬರೀಶ್ (Abhishek Ambareesh) ಮತ್ತು ಅವಿವಾ (Aviva) ಅವರ ವಿವಾಹವು ಜೂನ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಇಂದು (ಶುಕ್ರವಾರ) ಬೀಗರ ಔತಣಕೂಟ ನಡೆಯಲಿದೆ.

    ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ಬೀಗರ ಔತಣ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 50 ಸಾವಿರ ಜನರ ಆಗಮನದ ನಿರೀಕ್ಷೆಯಲ್ಲಿರುವ ಸುಮಲತಾ ಅಂಬರೀಶ್ (Sumalatha Ambareesh) ಕುಟುಂಬ ಅಭಿಮಾನಿಗಳಿಗೆ ಬೊಂಬಾಟ್ ಬಾಡೂಟ ಹಾಕಿಸಲು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಇದನ್ನೂ ಓದಿ: ಬೀಗರೂಟಕ್ಕೆ ಬನ್ನಿ: ಮಂಡ್ಯದ ಜನತೆಗೆ ಆಹ್ವಾನ ನೀಡಿದ ಸುಮಲತಾ ಅಂಬರೀಶ್

    ವಿಶಾಲವಾದ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4,500 ಮಂದಿ ಕುಳಿತು ಊಟ ಮಾಡಬಹುದಾಗಿದೆ. ಇಂದು ಬೆಳಗ್ಗೆ 11:30ರಿಂದ ಔತಣಕೂಟ ಆರಂಭವಾಗಲಿದ್ದು, ಕಳೆದ ರಾತ್ರಿಯಿಂದಲೇ ಬೀಗರ ಬಾಡೂಟ ಸಿದ್ಧಗೊಳ್ಳುತ್ತಿದೆ.

    ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿಗೊಳ್ಳುತ್ತಿದ್ದು, ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದ 900 ಮಂದಿಯಿಂದ ಅಡುಗೆ ತಯಾರಿ ಕಾರ್ಯಗಳು ಬಿರುಸಿನಿಂದ ನಡೆಯುತ್ತಿದೆ. 7 ಟನ್ ಮಟನ್, 8 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟವನ್ನು ಸಿದ್ಧಗೊಳಿಸಲಾಗುತ್ತಿದೆ. ಇದನ್ನೂ ಓದಿ: ಹೊಸ ಐಷಾರಾಮಿ ಕಾರು ಖರೀದಿಸಿದ ‘ಕೆಜಿಎಫ್’ ಸ್ಟಾರ್ ಯಶ್

    ಊಟದ ಮೆನು ಏನು?
    ರಾಗಿಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ನಾಟಿಕೋಳಿ ಸಾಂಬಾರ್, ಕಬಾಬ್, ಮೊಟ್ಟೆ, ರೈಸ್, ತಿಳಿ ಸಾಂಬಾರ್, ಬಾದುಶಾ, ಪಾಯಸ, ಬೀಡಾ, ಐಸ್‌ಕ್ರೀಂ, ಬಾಳೆಹಣ್ಣು ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

  • ಸುಮಲತಾ ಅನೈತಿಕ ಬೆಂಬಲದಿಂದ ಮೆಲುಕೋಟೆಯಲ್ಲಿ ಬಿಜೆಪಿಗೆ ಕಡಿಮೆ ಮತ: ಪರಾಜಿತ ಅಭ್ಯರ್ಥಿ ಇಂದ್ರೇಶ್ ಆಕ್ರೋಶ

    ಸುಮಲತಾ ಅನೈತಿಕ ಬೆಂಬಲದಿಂದ ಮೆಲುಕೋಟೆಯಲ್ಲಿ ಬಿಜೆಪಿಗೆ ಕಡಿಮೆ ಮತ: ಪರಾಜಿತ ಅಭ್ಯರ್ಥಿ ಇಂದ್ರೇಶ್ ಆಕ್ರೋಶ

    ಮಂಡ್ಯ: ಸುಮಲತಾ (Sumalatha Ambareesh) ಅವರ ಅನೈತಿಕ ಬೆಂಬಲದಿಂದ ಮೇಲುಕೋಟೆ (Melukote) ಕ್ಷೇತ್ರದಲ್ಲಿ ಬಿಜೆಪಿಗೆ (BJP) ಕಡಿಮೆ ಮತ ಬಂದಿದೆ. ಮೇಲುಕೋಟೆ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಸುಮಲತಾ ಅವರ ಹೇಳಿಕೆಗೆ ನನ್ನ ಧಿಕ್ಕಾರ ಎಂದು ಮೇಲುಕೋಟೆ ಬಿಜೆಪಿ ಪರಾಜಿತ ಅಭ್ಯರ್ಥಿ ಡಾ.ಇಂದ್ರೇಶ್ (Dr. Indresh) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮಂಡ್ಯ (Mandya) ಜಿಲ್ಲೆಯಲ್ಲಿ ಹೊಸ ಅಧ್ಯಾಯ ಬರೆಯಬೇಕೆಂದು ಹೊರಟಿತ್ತು. ಆದರೆ ಬಿಜೆಪಿಗೆ ಮಂಡ್ಯದಲ್ಲಿ ತೀವ್ರ ಆಘಾತವಾಗಿದೆ. ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್ 6,470 ಮತಗಳನ್ನು ಪಡೆದುಕೊಳ್ಳುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಪ್ತಚರ ಮಾಹಿತಿ ಪ್ರಕಾರ 38 ಸಾವಿರ ಮತಗಳನ್ನು ಪಡೆದುಕೊಳ್ಳುತ್ತೇನೆ ಎಂದು ಹೇಳಲಾಗುತ್ತಿತ್ತು. ಆದರೆ ಸುಮಲತಾ ಅಂಬರೀಶ್ ಅವರು ರೈತ ಸಂಘಕ್ಕೆ ನೀಡಿದ ಅನೈತಿಕ ಬೆಂಬಲದಿಂದ ನಾನು ಕಡಿಮೆ ಮತಗಳನ್ನು ಗಳಿಸಲು ಸಾಧ್ಯವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ:‌ `ಸಿದ್ದು ಪೂರ್ಣಾವಧಿ ಸಿಎಂ’ – ಕಾಂಗ್ರೆಸ್ ಒಳಗೆ ಬೆಂಕಿ ಹಚ್ಚಿದ ಎಂಬಿಪಿ

    ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಸುಮಲತಾ ಹೇಳಿದ್ದರು. ಚುನಾವಣೆಗೆ (Election) 6 ದಿನಗಳ ಮುಂಚೆ ಸುಮಲತಾ ಅವರ ಹೇಳಿಕೆಗೆ ನನ್ನ ಧಿಕ್ಕಾರ. ದರ್ಶನ್ ಪುಟ್ಟಣ್ಣ (Darshan Puttanna) ಚುನಾವಣೆಯಲ್ಲಿ ಗೆದ್ದರೆ ಖುಷಿ. ಮೇಲುಕೋಟೆಯಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಎಂದು ನೋಡಬೇಕು. ನಮ್ಮ ಗುರಿ ಜೆಡಿಎಸ್ (JDS) ಸೋಲಿಸುವುದರ ಮೂಲಕ ರೈತ ಸಂಘದ ಪರ ಎಂದು ಸುಮಲತಾ ಮಾತನಾಡಿದ್ದರು ಎಂದು ಸುಮಲತಾ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಇಂದಿನಿಂದ 2,000 ಮುಖಬೆಲೆ ನೋಟು ವಿನಿಮಯ ಪ್ರಕ್ರಿಯೆ ಆರಂಭ

    ಈ ವಿಚಾರದ ಬಗ್ಗೆ ಪಕ್ಷದ ಸಭೆಯಲ್ಲಿ ಮಾತನಾಡುತ್ತೇನೆ. ಸುಮಲತಾ ಮಾಡಿರುವ ಕೆಲಸ ಯಾರು ಒಪ್ಪಲ್ಲ. ಸುಮಲತಾ ಹೇಳಿಕೆಯ ನಂತರ ಕ್ಷೇತ್ರದಲ್ಲಿ ಬಿಜೆಪಿಗೆ ಮತ ಕಡಿಮೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾದ ವಿಪಕ್ಷ ನಾಯಕನ ಆಯ್ಕೆ

  • ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ

    ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ

    – ಕಾಂಗ್ರೆಸ್ ಪಕ್ಷಕ್ಕೆ ನನಗೆ ಆಹ್ವಾನವಿರಲಿಲ್ಲ
    – ಕಾಂಗ್ರೆಸ್ ಪಕ್ಷ ಅಂಬರೀಶ್‌ಗೆ ಅವಮಾನ ಮಾಡಿದೆ ಅಂದ ಸಂಸದೆ

    ಮಂಡ್ಯ: ನಾಗಮಂಗಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಸಂಸದೆ ಸುಮಲತಾ (Sumalatha Ambareesh) ಕಾಂಗ್ರೆಸ್ ಕಾರ್ಯಕರ್ತರ (Congress Workers) ಬಳಿ ಕ್ಷಮೆಯಾಚಿಸಿದ್ದಾರೆ.

    ಬಿಜೆಪಿಗೆ (BJP) ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ನಾನು ಮಂಡ್ಯದವಳೇ, ಗೌಡ್ತಿ, ನಾನು ಗೌಡ್ತಿ ಎನ್ನುವುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ: ರಮ್ಯಾ

    ನಿಮ್ಮ ರಾಜ್ಯಾಧ್ಯಕ್ಷರು ನನ್ನ ಬಗ್ಗೆ ಕೊಟ್ಟಿರುವ ಹೇಳಿಕೆಗಳನ್ನು ಗಮನಿಸಿ. ಆ ನಂತರ ನನ್ನ ನಿರ್ಧಾರ ಬಗ್ಗೆ ಪ್ರಶ್ನೆ ಮಾಡಿ ಎಂದ ಅವರು, ಬಿಜೆಪಿ ಪಕ್ಷದ ಅತ್ಯಂತ ಗೌರವದಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

    ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದು ಬಿಜೆಪಿ: ನೀವು ಪಕ್ಷಕ್ಕೆ ಬಂದ್ರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದ್ರು. ಬಿಜೆಪಿ ಸರ್ಕಾರ ಬೆಂಗಳೂರು – ಮೈಸೂರಲ್ಲಿ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದಾರೆ. 12 ಕೋಟಿ ವೆಚ್ಚದಲ್ಲಿ ಸುಂದರ ಸ್ಮಾರಕ ನಿರ್ಮಿಸಿದ್ದಾರೆ. ಅಂಬರೀಶ್ ಅವರು ಬಿಜೆಪಿ ಪಕ್ಷದಲ್ಲಿದ್ರಾ? 27 ವರ್ಷ ಕಾಂಗ್ರೆಸ್ ಸೇವೆ ಸಲ್ಲಿಸಿದ್ದಾರೆ. ಈ ನಡುವೆ ಜೆಡಿಎಸ್‌ನ ಹಲವರು ಅಂಬರೀಶ್ ಆತ್ಮೀಯರು ಎಂದು ಹೇಳಿಕೊಂಡು ಓಡಾಡ್ತಿದ್ದಾರೆ. ಆತ್ಮೀಯತೆ ಇದ್ದಮೇಲೆ ಅಧಿಕಾರದಲ್ಲಿದ್ದಾಗ ಇವರೇಕೆ ಸ್ಮಾರಕ ಮಾಡುವ ಕೆಲಸ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯದಲ್ಲಿ ದಾಳಿ ನಡೆಸುತ್ತಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

    ಅಂಬರೀಶ್‌ಗೆ ಸ್ವಾಭಿಮಾಣ ಇತ್ತು: ಅಂಬರೀಶ್ ಅವರಿಗೆ ಕೊನೆಯ ಎರಡು ವರ್ಷ ಕಾಂಗ್ರೆಸ್ ಅವಮಾನದಿಂದ ನಡೆಸಿಕೊಂಡಿದೆ. ಅದಕ್ಕೆಲ್ಲಾ ನಾನೇ ಸಾಕ್ಷಿ. ಅವಮಾನ ಆಗಿದ್ದರಿಂ ದ ಚುನಾವಣೆಗೆ ನಿಲ್ಲಬಾರದು ಎಂದು 2018ರಲ್ಲಿ ಬಿ-ಫಾರಂ ಎಸೆದಿದ್ದರು. ಅಂತಹ ಸ್ವಾಭಿಮಾನ ಅಂಬರೀಶ್ ಅವರಿಗೆ ಇತ್ತು ಎಂದು ಗುಡುಗಿದ್ದಾರೆ.

  • ಆಯಮ್ಮನನ್ನ ಗೆಲ್ಲಿಸಿದ್ದು ಸರಿಯಲ್ಲ – ಸುಮಲತಾ ಗೆಲುವಿಗೆ ಸಿದ್ದು ಪಶ್ಚಾತಾಪ

    ಆಯಮ್ಮನನ್ನ ಗೆಲ್ಲಿಸಿದ್ದು ಸರಿಯಲ್ಲ – ಸುಮಲತಾ ಗೆಲುವಿಗೆ ಸಿದ್ದು ಪಶ್ಚಾತಾಪ

    – ಅಚ್ಚೇದಿನ್‌ ಬಂತೇನ್ರಪ್ಪ – ಸಿದ್ದು ಪಂಚ್

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ (JDS) ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ, ಆದ್ರೆ ಜನರು ನನ್ನ ಮಾತು ಕೇಳಲಿಲ್ಲ. ಆಯಮ್ಮನನ್ನ ಗೆಲ್ಲಿಸಿದ್ದು ಸರಿಯಲ್ಲ ಅಂತಾ ಈವಾಗ ನನಗೆ ಅನಿಸ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಸುಮಲತಾ (Sumalatha Ambareesh) ಗೆಲುವಿಗೆ ಪಶ್ಚಾತಾಪ ಸೂಚಿಸಿದ್ದಾರೆ.

    ಮಂಡ್ಯದ (Mandya) ನಾಗಮಂಗಲದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಚುನಾವಣಾ ಪ್ರಚಾರ (Election Campaign) ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ವೇಳೆ ಚಲುವರಾಯಸ್ವಾಮಿ, ನರೇಂದ್ರ ಎಲ್ಲರಿಗೂ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದ್ರೆ ಜನರು ನನ್ನ ಮಾತು ಕೇಳಲಿಲ್ಲ. ಆಯಮ್ಮನ್ನ ಗೆಲ್ಲಿಸಿದ್ದು ಸರಿಯಲ್ಲ ಅಂತಾ, ನನಗೆ ಈಗ ಅನಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಕಾವೇರಿ- 229 ಭಾರತೀಯರನ್ನು ಹೊತ್ತ 7ನೇ ವಿಮಾನ ಜೆಡ್ಡಾದಿಂದ ಬೆಂಗಳೂರಿನತ್ತ

    ಮುಂದವರಿದು, ಬಿಜೆಪಿ ಸರ್ಕಾರ (BJP Government) ಭ್ರಷ್ಟಚಾರದಲ್ಲಿ ಮುಳುಗಿ ಹೋಗಿದೆ. ಬೀದಿ ಬೀದಿಯಲ್ಲಿ ಭ್ರಷ್ಟಚಾರದ ವಿಚಾರ ಚರ್ಚೆಯಾಗ್ತಿದೆ. ವಿಧಾನಸೌಧದ ಪ್ರತಿಗೋಡೆಗಳೂ ದುಡ್ಡು ದುಡ್ಡು ಅನ್ನುತ್ತಿವೆ. ಇಂತಹ 40 ಪರ್ಸೆಂಟ್ ಸರ್ಕಾರ ಇರಬೇಕಾ? ಮೋದಿ ಅಚ್ಚೇದಿನ್ ಆಯೇಗಾ ಅಂತಾರಲ್ಲ, ನಿಮಗೇನಾದ್ರು ಅಚ್ಚೇದಿನ್‌ ಬಂತೇನ್ರಪ್ಪ.? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರೇಪ್‍ನಿಂದ ರಕ್ಷಿಸಲು ಮೃತ ಹೆಣ್ಣು ಮಕ್ಕಳ ಸಮಾಧಿಗೆ ಬೀಗ ಹಾಕಿದ ಪಾಕ್‌ ಪಾಲಕರು

    ನಾಗಮಂಗಲ ಜನತೆ ತುಂಬಾ ಸಜ್ಜನರಿದ್ದಾರೆ. ನಿಮ್ಮ ಉತ್ಸಾಹ ನೋಡಿದ್ರೆ ನಮ್ಮ ಅಭ್ಯರ್ಥಿ ಚಲುವರಾಯಸ್ವಾಮಿ ಗೆಲ್ಲೋದು ಸೂರ್ಯ ಚಂದ್ರರಷ್ಟೇ ಸತ್ಯ ಅನ್ನಿಸುತ್ತಿದೆ. ಅವರು ಒಕ್ಕಲಿಗ ಸಮಾಜದ ಪ್ರಮುಖ ನಾಯಕರಲ್ಲಿ ಚಲುವರಾಯಸ್ವಾಮಿ ಕೂಡ ಒಬ್ಬರು. ಚೆಲುವರಾಯಸ್ವಾಮಿಗೆ ನಾಯಕತ್ವದ ಗುಣ ಇದೆ. ಅಂತಹವರನ್ನ ನೀವು ಗೆಲ್ಲಿಸಲೇಬೇಕು ಎಂದು ಮನವಿ ಮಾಡಿದ್ದಾರೆ.

    ಅತಂತ್ರ ಬರಲಿ ಅಂತಾ ಕಾಯ್ತಿದ್ದಾರೆ:
    ಇದೇ ವೇಳೆ ಜೆಡಿಎಸ್ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಜೆಡಿಎಸ್‌ನವರು ಅವಕಾಶವಾದಿಗಳು. ಅತಂತ್ರ ಸರ್ಕಾರ ಬರಲಿ ಅಂತಾ ಕಾಯುತ್ತಿದ್ದಾರೆ. ಯಾವುದೇ ಪೂರ್ಣ ಪ್ರಮಾಣದ ಸರ್ಕಾರ ಬರದಿರಲಿ ಅಂತಾ ನಿತ್ಯವೂ ಹೋಮ, ಹವನ, ಪೂಜೆ ಮಾಡ್ತಿದ್ದಾರೆ. ಎರಡೂ ಪಕ್ಷದವರು ನಮ್ಮ ಮನೆ ಬಾಗಿಲಿಗೆ ಬರಲಿ ಅಂತಾ ಪೂಜೆ ಮಾಡಿಸ್ತಿದ್ದಾರೆ. ಅವಕಾಶ ಸಿಕ್ಕರೇ ಕಾಂಗ್ರೆಸ್ ಜೊತೆಯಾದ್ರೂ ಹೋಗ್ತಾರೆ, ಬಿಜೆಪಿ ಜೊತೆಯಾದ್ರೂ ಹೋಗ್ತಾರೆ. ಈ ಬಾರಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ ಎಂದು ಬೀಗಿದ್ದಾರೆ.