Tag: Sumalatha Ambareesh

  • ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ

    ಅವರದ್ದು ಬರೀ ಕುಟುಂಬ ರಾಜಕಾರಣ, ಯಾರೂ ಪ್ರಶ್ನೆ ಮಾಡಬಾರದು ಅಂದರೆ ಹೇಗೆ: ಎಚ್‌ಡಿಕೆ ವಿರುದ್ಧ ಸುಮಲತಾ ಕಿಡಿ

    ಮಂಡ್ಯ: ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

    ನಮ್ಮ ಕುಟುಂಬ ಸುಮಲತಾ ಅವರಿಗೆ ಏನು ಅನ್ಯಾಯ ಮಾಡಿದೆ ಎಂಬ ಕುಮಾರಸ್ವಾಮಿ (H.D.Kumaraswamy) ಹೇಳಿಕೆ ಕುರಿತು ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಚುನಾವಣೆಯಲ್ಲಿ (Election) ಒಬ್ಬರ ವಿರುದ್ಧವಾಗಿ ಸ್ಫರ್ಧೆ ಮಾಡಿದರೆ ಅದು ದ್ವೇಷ ಎಂದು ಅರ್ಥನಾ? ಚುನಾವಣೆ ಎಂದಮೇಲೆ ಅದು ಸ್ಪರ್ಧೆ. ಅದರಲ್ಲಿ ನಿಮಗೂ ಹಕ್ಕಿದೆ, ನನಗೂ ಹಕ್ಕಿದೆ ಎಂದರು. ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ 

    ಚುನಾವಣೆ ಎಂದರೆ ಭಾರತ-ಪಾಕಿಸ್ತಾನದ ರೀತಿ ನಾವು ಶತ್ರುಗಳು ಎಂದು ಅರ್ಥ ಅಲ್ಲ. ನಾವು ಒಂದೇ ಸ್ಪರ್ಧೆಯಲ್ಲಿ ವಿರೋಧಿಗಳು ಅಷ್ಟೇ. ಅದನ್ನು ಅವರು ನನ್ನ ಮೇಲೆ ದ್ವೇಷವಿದೆ, ನನ್ನ ಪಕ್ಷದ ಮೇಲೆ ದ್ವೇಷವಿದೆ ಎಂದು ಹೇಳುವುದು ವಿಚಿತ್ರ. ಯಾಕೆಂದರೆ ಅವರದ್ದು ಬರೀ ಕುಟುಂಬ ರಾಜಕಾರಣ. ನಮ್ಮನ್ನು ಯಾರೂ ಎಲ್ಲಿಯೂ ವಿರೋಧಿಸಬಾರದು ಎನ್ನುವ ಮನೋಭಾವನೆ ಅವರದ್ದು. ಚುನಾವಣೆ ಅಂದಮೇಲೆ ಅವರ ಮಗನೇ ಆಗಲಿ, ಅವರೇ ಆಗಲಿ ಅಥವಾ ಅವರ ಶ್ರೀಮತಿಯೇ ಆಗಲಿ ಯಾರೇ ಬಂದರೂ ವಿರೋಧ ಮಾಡುವವರು ಇದ್ದೇ ಇರುತ್ತಾರೆ. ಇಲ್ಲಿಯವರೆಗೆ ಏನಾಗಿದೆ ಎಂದರೆ ರಾಜಕಾರಣದಲ್ಲಿ (Politics) ಯಾವ ಅಭ್ಯರ್ಥಿಗಳೂ ಅವರನ್ನು ಎದುರಿಸಿ ನಿಲ್ಲುತ್ತಿರಲಿಲ್ಲ. ಈಗ ಅದು ಆಗುತ್ತಿದೆ ಎಂಬ ವಿಷಯವನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು

    ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ (Ashok  Jayaram) ಅವರಿಗೆ 20 ವರ್ಷಗಳಿಂದ ಜೆಡಿಎಸ್ (JDS) ಪಕ್ಷದಿಂದ ಅನ್ಯಾಯವಾಗುತ್ತಾ ಬಂದಿದೆ. ಎಸ್.ಡಿ ಜಯರಾಮ್ ಅಂತಹ ನಾಯಕರು ಜೆಡಿಎಸ್ ಪಕ್ಷವನ್ನು ಬೆಳೆಸಿದಂತಹ ನಾಯಕರು. ಅವರ ಕುಟುಂಬಕ್ಕೆ ಮೊದಲಿನಿಂದಲೂ ಅನ್ಯಾಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆಶಿ ಟಿಕೆಟ್ ಮಾರಾಟ ಮಾಡಿದ್ದಾರೆ : ಮೊಯಿದ್ದಿನ್ ಬಾವಾ ಆರೋಪ 

    ಜೆಡಿಎಸ್ ಅಶೋಕ್ ಜಯರಾಮ್ ಅವರ ಭವಿಷ್ಯವನ್ನೇ ಹಾಳು ಮಾಡಿದೆ. ಅವರ ಕುಟುಂಬದ ಪರವಾಗಿ ನಾವು ನಿಂತುಕೊಳ್ಳಬೇಕು. ಅಂತಹ ಕೆಲಸವನ್ನು ನಾವು ಮಾಡಬಾರದು. ಅಶೋಕ್ ಜಯರಾಮ್ ಅವರನ್ನು ನಿಲ್ಲಿಸಿ ಗೆಲ್ಲಿಸಬಹುದು ಎಂಬ ವಿಶ್ವಾಸ ನಮಗಿದೆ. ಕುಮಾರಸ್ವಾಮಿಯವರೇ ಅಭ್ಯರ್ಥಿಯಾಗಿ ಬಂದರೂ ಅಶೋಕ್ ಅವರನ್ನು ಗೆಲ್ಲಿಸುವ ತಾಕತ್ತು ನಮಗಿದೆ ಎಂದರು. ಇದನ್ನೂ ಓದಿ: ಏ.28ಕ್ಕೆ ಕೋಲಾರಕ್ಕೆ ಮೋದಿ – 1 ವಾರ 20+ ಸಮಾವೇಶದಲ್ಲಿ ಭಾಗಿ 

    ನಾಮಪತ್ರ ಸಲ್ಲಿಸದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಅದು ವದಂತಿ ಅಷ್ಟೇ. ಆದರೆ ಪಕ್ಷದಲ್ಲಿ ಆ ರೀತಿಯಾದ ಚರ್ಚೆಗಳು ನಡೆದಿತ್ತು. ಜನತಾ ದಳದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಯಾದರೆ ನೀವು ನಿಲ್ಲಬೇಕು ಎಂದು ಹೈಕಮಾಂಡ್ ಸಹ ಸೂಚಿಸಿತ್ತು. ನಮ್ಮಲ್ಲಿ ಸಮರ್ಥರಾದ ಅಭ್ಯರ್ಥಿ ಇದ್ದಾರೆ. ಅವರಿಗೆ ಶಕ್ತಿಯನ್ನು ತುಂಬಿಸಿ ಬಳಸಬೇಕಾಗಿದೆ. ನಾನು ನಾಮಪತ್ರ ಸಲ್ಲಿಸಲು ಕಾಲಾವಕಾಶ ಕೇಳಿದ್ದೇನೆ ಎಂಬ ಅನುಮಾನಗಳಿದ್ದಲ್ಲಿ ಡಿಸಿ ಕಚೇರಿಯಲ್ಲಿ ವಿಚಾರಿಸಿಕೊಳ್ಳಲಿ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ 

    ಕುಮಾರಸ್ವಾಮಿ ಅಭ್ಯರ್ಥಿಯಾದರೆ ನೀವು ಸ್ಪರ್ಧೆ ಮಾಡುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ. ನಮ್ಮ ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಎಲ್ಲರೂ ನೀವೇ ಬನ್ನಿ ಎಂದು ಕೇಳುತ್ತಿದ್ದರು. ನನಗೆ ಅದರ ಅಗತ್ಯವಿಲ್ಲ. ನಾವು ಏನು ಎಂಬುದನ್ನು ಈ ಚುನಾವಣೆಯಲ್ಲಿ ನಿರೂಪಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

  • ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

    ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

    ಮಂಡ್ಯ: ಜೆಡಿಎಸ್ (JDS) ಮಂಡ್ಯ (Mandya) ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಷಣ ಮಾಡುವ ವೇಳೆ ಸುಮಲತಾ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜನರಿಗಾಗಿ ಇರುವುದು ಜೆಡಿಎಸ್ ಪಕ್ಷ. ಇಂತಹ ಪಕ್ಷವನ್ನು ಯಾರು ಧೂಳೀಪಟ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಜನರಿಗೆ ಗೊತ್ತು ಎಂದು ಕಿಡಿಕಾರಿದರು.

    ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಮುಗಿಸಿದ್ದೇನೆ ಎಂದು ಹೇಳುತ್ತಾರೆ. ಇದಕ್ಕೆ ಉತ್ತರ ಮಂಡ್ಯ ಜಿಲ್ಲೆಯ ಜನರಿಂದ ನಾನು ಬಯಸುತ್ತಾ ಇದ್ದೇನೆ. ನನ್ನ ಕೈಯಲ್ಲಿ ಶಕ್ತಿ ಇಲ್ಲ, ನಮ್ಮದು ಸಣ್ಣ ಪಕ್ಷ. ರೈತರ ಈ ಪಕ್ಷವನ್ನು ಮುಗಿಸುತ್ತೇವೆ ಎಂದು ಸವಾಲು ಸ್ವೀಕಾರ ಮಾಡಿದ್ದಾರೆ. ನನಗೆ ಆಶ್ಚರ್ಯವಾಗಿದೆ ಕುಮಾರಣ್ಣ ಮಂಡ್ಯಗೆ ಬರ್ತಾರೆ ಎನ್ನುವುದು. ಯಾರು ಈ ಸುದ್ದಿಯನ್ನು ಹೊರಡಿಸಿದ್ದಾರೋ ಗೊತ್ತಿಲ್ಲ. ಈ ಸುದ್ದಿಯನ್ನು ಗಂಭೀರವಾಗಿ ತೆಗೆದುಕೊಂಡು, ಬರಲಿ ನಾನೇ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಉದ್ಧಟತನದ ಮಾತನ್ನು ಆಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯ ಫೀಲ್ಡ್‌ಗೆ ಎಂಟ್ರಿ

    ಕುಮಾರಣ್ಣ ಮಂಡ್ಯದಲ್ಲಿ ಬಂದು ನಿಲ್ಲಬೇಕಿಲ್ಲ. ಕುಮಾರಣ್ಣ ಮಂಡ್ಯ ಜಿಲ್ಲೆಯ ಜನರ ಮನಸ್ಸಿನಲ್ಲಿ ನೆಲೆಸಿದ್ದಾನೆ. ಮಂಡ್ಯ ಜನರಿಗೆ ದೇವೇಗೌಡರ ಕುಟುಂಬ ಮೋಸ ಮಾಡಿಲ್ಲ. ಜೆಡಿಎಸ್ ವಿರುದ್ಧ ಮಾತನಾಡುತ್ತಿರುವ ವ್ಯಕ್ತಿಯ ಪತಿಗೆ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾಗ ಗೌರವ ಕೊಟ್ಟಿದ್ದು ಜೆಡಿಎಸ್. ನಾನು ದುರಹಂಕಾರದ ಮಾತು ಆಡಲ್ಲ, ನಾನು ನಿಮ್ಮನ್ನು ನಂಬಿದ್ದೇನೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವವರು ಸರ್ಟಿಫಿಕೇಟ್ ಕೊಡಲ್ಲ. ಮಂಡ್ಯದ ಜನರು ಸರ್ಟಿಫಿಕೇಟ್ ಕೊಡಬೇಕು. ಈ ಬಾರಿಯೂ ಮತ್ತೆ ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಅಮವಾಸ್ಯೆ ದಿನದಂದು ಸತೀಶ್‌ ಜಾರಕಿಹೊಳಿ‌ ನಾಮಪತ್ರ ಸಲ್ಲಿಕೆ

  • ಜೂನ್‌ 9-10ರಂದು ನಡೆಯಲಿದೆ ಅಭಿಷೇಕ್‌- ಅವಿವಾ ಮದುವೆ

    ಜೂನ್‌ 9-10ರಂದು ನಡೆಯಲಿದೆ ಅಭಿಷೇಕ್‌- ಅವಿವಾ ಮದುವೆ

    ಜ್ಯೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್- ಅವಿವಾ ಬಿದ್ದಪ್ಪ (Aviva Bidapa) ಮದುವೆ ದಿನಾಂಕ ಫಿಕ್ಸ್ ಆಗಿದೆ. ಈ ಮೂಲಕ ಸುಮಲತಾ ಅಂಬರೀಶ್ (Sumalatha Ambareesh) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಹಲವು ವರ್ಷಗಳ ಅಭಿ- ಅವಿವಾ ಪ್ರೀತಿಗೆ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ.

    ಫ್ಯಾಷನ್ ಈವೆಂಟ್‌ವೊಂದರಲ್ಲಿ ಅಭಿಷೇಕ್-ಅವಿವಾ ಭೇಟಿ, 3-4 ವರ್ಷಗಳ ಡೇಟಿಂಗ್ ನಂತರ ಇತ್ತೀಚಿಗೆ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿತ್ತು. ಖ್ಯಾತ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಮಗಳು ಅವಿವಾ ಜೊತೆ ಇದೀಗ ಹಸೆಮಣೆ ಏರಲು ಅಂಬಿ ಪುತ್ರ ಸಜ್ಜಾಗಿದ್ದಾರೆ. ಇದನ್ನೂ ಓದಿ:ಕೆಂಪು ಗುಲಾಬಿ ಅವತಾರ ತಾಳಿದ ನಟಿ ಕಿಯಾರಾ

    ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೆ ಸ್ಯಾಂಡಲ್‌ವುಡ್ ಸ್ಟಾರ್ ವೆಡ್ಡಿಂಗ್‌ಗೆ ಸಾಕ್ಷಿಯಾಗಲಿದೆ. ನಟ ಅಭಿಷೇಕ್- ಅವಿವಾ ವಿವಾಹ ಇದೇ ಜೂನ್ 9 ಮತ್ತು 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಜೂನ್ 12ರಂದು ಮಂಡ್ಯದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಸುಮಾರು 10 ಸಾವಿರ ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ.

    ಏಪ್ರಿಲ್ 5ರಂದು ಅಭಿಷೇಕ್ (Abhishek Ambareesh) ಮತ್ತು ಸುಮಲತಾ ಅಂಬರೀಷ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ಪತ್ರ ನೀಡಿದ್ದರು. ಈ ವಿಷಯವನ್ನು ಅವರು ಸೋಷಿಯಲ್ ಮೀಡಿಯಾ ಮೂಲಕ ಫೋಟೊ ಸಹಿತ ಹಂಚಿಕೊಂಡಿದ್ದರು. ಈ ಮೂಲಕ ಗಣ್ಯರನ್ನು ಆಹ್ವಾನಿಸಲು ಆರಂಭಿಸಿದ್ದರು.

    ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಇನ್ನೂ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್‌ನಿಂದ ಶತ್ರುಘ್ನ ಸಿನ್ಹಾ ಇನ್ನೂ ಹಲವು ಪ್ರಮುಖ ತಾರೆಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಮದುವೆಗೆ ಆಭರಣ, ವಸ್ತ್ರಗಳ ಖರೀದಿ ಜೋರಾಗಿ ನಡೆದಿದ್ದು, ಸ್ವತಃ ವಸ್ತ್ರ ವಿನ್ಯಾಸಕಿ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ ತೊಡಲಿರುವ ಉಡುಗೆಯನ್ನು ಡಿಸೈನ್ ಮಾಡುತ್ತಿರುವುದು ವಿಶೇಷ.

  • ಜೆಡಿಎಸ್ ಭದ್ರಕೋಟೆ ಒಡೆಯಲು ಸುಮಲತಾ ರಣತಂತ್ರ

    ಜೆಡಿಎಸ್ ಭದ್ರಕೋಟೆ ಒಡೆಯಲು ಸುಮಲತಾ ರಣತಂತ್ರ

    ಮಂಡ್ಯ: ಕಳೆದ ಲೋಕಸಭಾ ಚುನಾವಣೆ ವೇಳೆಯಿಂದ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಹಾಗೂ ಜೆಡಿಎಸ್ (JDS) ನಾಯಕರ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಲೇ ಹೋಗುತ್ತಿದೆ. ಮಂಡ್ಯದಲ್ಲಿ (Mandya) ದಳಪತಿಗಳ ಕೋಟೆಯನ್ನು ಛಿದ್ರ ಮಾಡಿ ಬಿಜೆಪಿ ಸಾರ್ವಭೌಮತ್ವ ಸ್ಥಾಪಿಸಬೇಕೆಂದು ರೆಬಲ್ ಲೇಡಿ ಪಣತೊಟ್ಟಂತೆ ಕಾಣುತ್ತಿದ್ದು, ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿ ಜೆಡಿಎಸ್ ವಿರುದ್ಧ ರಣಕಹಳೆ ಊದಿದ್ದಾರೆ.

    ಸಂಸದೆ ಸುಮಲತಾ ಅಂಬರೀಶ್ ರಾಷ್ಟ್ರ ರಾಜಕೀಯಕ್ಕೆ ಗುಡ್ ಬಾಯ್ ಹೇಳಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯ ರಾಜಕೀಯಕ್ಕೆ ಗ್ರ‍್ಯಾಂಡ್ ಎಂಟ್ರಿ ಕೊಡುತ್ತಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿ ಬರುತ್ತಿದ್ದವು. ಈ ಮಾತುಗಳಿಗೆ ಸುಮಲತಾ ಅಂಬರೀಶ್ ಕಡ್ಡಿ ತುಂಡರಿಸಿದ ಹಾಗೆ ನಾನು ರಾಜ್ಯ ರಾಜಕೀಯಕ್ಕೆ ಬರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಸಂದರ್ಭಕ್ಕೆ ತಕ್ಕ ಹಾಗೆ ನಾನು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳುತ್ತಿದ್ದಾರೆ. ಈ ಮಾತಿನ ಹಿಂದೆ ರೆಬೆಲ್ ಲೇಡಿ ದಳಪತಿಗಳ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಸಾರ್ವಭೌಮತ್ವ ಸ್ಥಾಪನೆ ಮಾಡುವ ಲೆಕ್ಕಾಚಾರವಿದೆ. ಇದೇ ತಿಂಗಳ 17ರಂದು ಬಿಜೆಪಿ (BJP) ಪಕ್ಷಕ್ಕೆ ಬೆಂಬಲ ಸೂಚಿಸಿದ ಸುಮಲತಾ ಅಂಬರೀಶ್ ಅಂದಿನಿಂದ ಮಂಡ್ಯ ಜಿಲ್ಲೆಯ ಚುನಾವಣೆಯ ಅಖಾಡದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ಇದನ್ನೂ ಓದಿ: ನಾಯಕರ ಹಠಮಾರಿತನ- ಬಿಜೆಪಿ ಕಾರ್ಯಕರ್ತರ ನಡುವೆಯೇ ಡಿಶುಂ ಡಿಶುಂ! 

    ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಸೂಚನೆ ನೀಡಿದ ದಿನದಿಂದ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಬಿಜೆಪಿಯ ಪರವಾಗಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳನ್ನು ಭೇಟಿ ಮಾಡಿ ಚುನಾವಣೆಯ (Election) ರಣತಂತ್ರದ ಬಗ್ಗೆ ಚರ್ಚೆಯನ್ನು ಮಾಡಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡುತ್ತಿದ್ದಾರೆ. ಇದನ್ನೂ ಓದಿ: ರಾಮಪಾದ ಊರಿದ ಏರಿಯಾ ಪಾದರಾಯನಪುರದಲ್ಲಿ ರಾಮ ನವಮಿ ಸಂಭ್ರಮ 

    sumalatha ambarish

    ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಮೂಲಕ ಮೊದಲ ಬಾರಿಗೆ ಜೆಡಿಎಸ್ ಭದ್ರಕೋಟೆ ಒಡೆದಿದೆ. ಇದಾದ ಬಳಿಕ ಕೆಆರ್‌ಪೇಟೆ ಉಪಚುನಾವಣೆಯಲ್ಲಿ ಕಮಲ ಅರಳುವ ಮೂಲಕ ಮತ್ತೊಮ್ಮೆ ಜೆಡಿಎಸ್‌ಗೆ ಪೆಟ್ಟು ನೀಡಲಾಗಿದೆ. ಇದೀಗ ಮಗದೊಮ್ಮೆ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡುವ ಸದಾವಕಾಶ ಒದಗಿ ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಪಡೆದು ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಬೇಕು. ಇದು ತಾಲೂಕಾದ ಮದ್ದೂರಿನಿಂದಲೇ (Maddur) ಪ್ರಾರಂಭವಾಗಲಿ. ಇದು ನಿಮ್ಮಿಂದ ಸಾಧ್ಯ ಎಂದು ಬಿಜೆಪಿ ಕಾರ್ಯಕರ್ತರಲ್ಲಿ ಹಾಗೂ ತಮ್ಮ ಅಭಿಮಾನಿಗಳಿಗೆ ಹೇಳುವ ಮೂಲಕ ಸುಮಲತಾ ಅಂಬರೀಶ್ ಮಂಡ್ಯ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಕಿಚ್ಚನ್ನು ಹಚ್ಚಿದ್ದಾರೆ. ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ಮೂವರು ಮಕ್ಕಳು ಸೇರಿ 6 ಜನ ಸಾವು 

    ಒಟ್ಟಾರೆ ದಳಪತಿಗಳ ಮೇಲೆ ರೆಬೆಲ್ ಲೇಡಿಗಿರುವ ಕಿಡಿ ಸ್ವಲ್ಪವೂ ಆರಿದಂತೆ ಕಾಣುತ್ತಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ಗೆ ಎಷ್ಟರ ಮಟ್ಟಿಗೆ ಮಣೆ ಹಾಕುತ್ತಾರೆ ಎನ್ನುವುದನ್ನು ಚುನಾವಣೆಯ ಫಲಿತಾಂಶದ ಬಳಿಕ ನೋಡಬೇಕಿದೆ. ಇದನ್ನೂ ಓದಿ: ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ!

  • ಅಂಬಿ ಸ್ಮಾರಕ ಲೋಕಾರ್ಪಣೆ, ಸುಮಲತಾ ಅಂಬರೀಶ್ ಕಣ್ಣೀರು

    ಅಂಬಿ ಸ್ಮಾರಕ ಲೋಕಾರ್ಪಣೆ, ಸುಮಲತಾ ಅಂಬರೀಶ್ ಕಣ್ಣೀರು

    ರೆಬೆಲ್ ಸ್ಟಾರ್ ಅಂಬರೀಶ್ (Rebel Star Ambareesh) ಅವರ ಸ್ಮಾರಕ ಇಂದು (ಮಾ.27) ಕಂಠೀರವ ಸ್ಟುಡಿಯೋದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆ ಆಗಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರು ನಾಮಕರಣ ಮಾಡಿದ ಬಳಿಕ ಅಂಬಿ ಸ್ಮಾರಕ (Memorial) ಉದ್ಘಾಟನೆ ಕಾರ್ಯಕ್ರಮ ನೆರವೇರಿದೆ.

    12 ಕೋಟಿ ರೂ. ವೆಚ್ಚದಲ್ಲಿ ವಿಶೇಷ ವಿನ್ಯಾಸದಲ್ಲಿ ಅಂಬಿ ಸ್ಮಾರಸ ನಿರ್ಮಾಣವಾಗಿದೆ. ಸ್ಮಾರಕ ಬಳಿ 32 ಅಡಿಯ ಅಂಬಿ ಪ್ರತಿಮೆ ಕೂಡ ಉದ್ಘಾಟನೆ ಆಗಿದೆ. ಒಂದು ಎಕರೆ 37 ಗುಂಟೆ ಜಾಗದಲ್ಲಿ ಅಂಬಿ ಸ್ಮಾರಕ ನಿರ್ಮಾಣ ಆಗಿದೆ. ಈ ವೇಳೆ ಸುಮಲತಾ ಅಂಬರೀಶ್ ಅವರು ಭಾವುಕರಾಗಿದ್ದಾರೆ.

    ಅಂಬರೀಶ್ ಅವರನ್ನು 10 ವರ್ಷಗಳಿಂದ ಪ್ರೀತಿಯಿಂದ ಸಾಕಿ ಬೆಳೆಸಿದ ಅಭಿಮಾನಿಗಳಿಗೆ ನನ್ನ ನಮಸ್ಕಾರಗಳು. ಇದು ಅಂಬರೀಶ್ 50 ವರ್ಷ ಪೂರೈಸಿದ ವರ್ಷವಾಗಿದೆ. ಅಭಿಮಾನಿಗಳು ಈ ದಿನ ಯಾವಾಗ ಬರುತ್ತೆ ಅಂತ ಕಾಯ್ತಾ ಇದ್ದರು. ಕರ್ನಾಟಕ ಸರ್ಕಾರದ ಅನುದಾನದ ಅಡಿಯಲ್ಲಿ ಈ ಸುಂದರ ಸ್ಮಾರಕ ನಿರ್ಮಾಣ ಆಗಿದೆ. ನಾನು ಅಭಿಮಾನಿಗಳಿಗೆ ಹೇಳ್ತಾನೇ ಇದ್ದೆ. ಆ ದಿನ ಇಂದು ಬಂದಿದೆ ಎಂದು ಸುಮಲತಾ ಮಾತನಾಡಿದರು.

    ಈ ಸಂದರ್ಭದಲ್ಲಿ ನಾನು ಓರ್ವರನ್ನು ಸ್ಮರಿಸೋಕೆ ಇಷ್ಟಪಡ್ತೀನಿ ಅವರೇ ಮಾಜಿ ಸಿಎಂ ಯಡಿಯೂರಪ್ಪನವರು. ನಮ್ಮ ಬೇಡಿಗೆ ಅವರ ಮುಂದೆ ಇಟ್ಟಾಗ ಕೊಂಚವೂ ನಿಧಾನಿಸದೇ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಚಾಲನೆ ಕೊಟ್ಟರು. 12 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗಿದೆ. ಅಂಬರೀಶ್ ಅವರು ಯಾವತ್ತೂ ತಮಗಾಗಿ ಏನು ಬೇಕು ಅಂತ ಬಯಸಿದವರಲ್ಲ. ಯಾರ ಬಳಿಯೂ ಕೈಚಾಚಿದವರಲ್ಲ. ಅವರದ್ದು ಕೊಟ್ಟ ಕೈ, ತಗೊಳ್ಳೊ ಕೈ ಅಲ್ಲ. ಅವರು ಮಂತ್ರಿ ಆಗಿದ್ದಾಗ ಸೈರನ್ ರೆಡ್ ಲೈಟ್ ಇರುವ ವೆಹಿಕಲ್ ಕಳಿಸಿದ್ದರು. ಇದನ್ನ ಮೊದಲು ಕಿತ್ತು ಬಿಸಾಕು ಅಂದಿದ್ದರು. ಇವತ್ತು ಇರುತ್ತೆ ನಾಳೆ ಇರಲ್ಲ, ಇದಕ್ಕೆಲ್ಲಾ ನಾನು ಅಡಿಕ್ಟ್ ಆಗಲ್ಲ ಅಂದಿದ್ದರು. ಎಲ್ಲರಿಗೂ ಅವರು ಇದ್ದಾಗ ಪ್ರೀತಿಸಿದ್ದೀರಿ. ನಿಮ್ಮ ಪ್ರೀತಿ ಒಂದೇ ಸಾಕು ಇನ್ನೇನು ಬೇಕಿಲ್ಲ ಎಂದು ಹೇಳ್ತಿದ್ದವರು. ಅಂಬರೀಶ್ ಎಲ್ಲೇ ಇದ್ರೂ ಅವರಿಗೆ ಈಗ ಖುಷಿಯಾಗುತ್ತೆ. ಅವರು ಎಲ್ಲರ ಪ್ರೀತಿ ಪಡೆದಿದ್ದರು. ಅವರು ನಿಜಕ್ಕೂ ದೇವರ ಮಗ ಎಂದು ಸುಮಲತಾ ಕಣ್ಣೀರಿಟ್ಟರು.

  • ʻಅಂಬರೀಶ್ ರಸ್ತೆ’ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

    ʻಅಂಬರೀಶ್ ರಸ್ತೆ’ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

    ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಅವರ ಹೆಸರನ್ನು ಇಂದು (ಮಾ.27)ರಂದು ನಾಮಕರಣ ಮಾಡಲಾಯಿತು. ಸಿಎಂ ಬೊಮ್ಮಾಯಿ ಅವರು `ಅಂಬರೀಶ್ ರಸ್ತೆ’ (Ambareesh Road) ಅನ್ನು ಉದ್ಘಾಟನೆ ಮಾಡಿದರು.

    ಸಿಲಿಕಾನ್ ಸಿಟಿಯ ಜಂಕ್ಷನ್‌ಗಳನ್ನ ಪಾದಾಚಾರಿಗಳಿಗೆ ಸುರಕ್ಷಿತವಾಗಿಸಲು ಬೃಹತ್ ಬೆಂಗಳೂರು ಪಾಲಿಕೆಯು `ಸುರಕ್ಷ 75 ಮಿಷನ್ 2023′ ಅನ್ನು ಲೋಕಾರ್ಪಣೆಗೊಳಿಸಿದ ಸಿಎಂ ಇದೇ ವೇಳೆ ಶಿವಾಜಿನಗರದ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿದರು.

    ಸಿಎಂ ಬೊಮ್ಮಾಯಿ (Cm Bommai) ಮಾತನಾಡಿ, ಕರ್ನಾಟಕದ ಜನತೆಯ ಮನಸ್ಸನ್ನ ಗೆದ್ದಂತಹ ನೇರ ದಿಟ್ಟ ನಿರಂತರ ಶ್ರೀಮಾನ್ ಅಂಬರೀಶ್ ಅವರ ನೆನಪಿಗಾಗಿ ಇವತ್ತು ರೇಸ್ ಕೋರ್ಸ್ ರಸ್ತೆಯನ್ನ ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ. ಅಂಬರೀಶ್ ಅವರು ರೇಸ್ ಕೋರ್ಸ್ ರೋಡ್ ಹೆಚ್ಚು ಓಡಾಡಿದ ಸ್ಥಳವಾಗಿದೆ. ಎಲ್ಲಾ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವತ್ತು ಅಂಬರೀಶ್ ಹೆಸರನ್ನ ಇಟ್ಟಿದ್ದೇವೆ. ಹಲವು ಪ್ರತಿಭೆ ಇರುವ ವ್ಯಕ್ತಿತ್ವ ಅವರದ್ದು, ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನ ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಇತ್ತು. ಅವರಿಗೆ ರೀಲ್ ಲೈಫ್ ಮತ್ತು ರಿಯಲ್ ಲೈಫ್ ವ್ಯತ್ಯಾಸ ಇಲ್ಲ. ನೇರವಾಗಿ ಮಾತನಾಡುವ ವ್ಯಕ್ತಿತ್ವ ಅವರದ್ದು, ಕ್ರೀಡೆಯಲ್ಲೂ ಪ್ರತಿಭೆಯಿತ್ತು.

    ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾವೇರಿ ವಿಚಾರ ಬಂದಾಗ ಅಂಬರೀಶ್ ಗುಡುಗಿದ್ದರು. ಅವರು ಎಂದೂ ಅಧಿಕಾರದ ಹಿಂದೆ ಹೋದವರಲ್ಲ. ಅವರ ಹಿಂದೆ ಅಧಿಕಾರ ಬಂದಿದೆ ಎಂದು ಅಂಬರೀಶ್ ಸಿಎಂ ಮಾತನಾಡಿದರು. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ಕೊಟ್ಟಿದ್ದರು. ಅಧಿಕಾರ ಅವರನ್ನು ಹುಡುಕಿ ಬರುತ್ತಿತ್ತು. ನನಗೆ ಇವತ್ತು ಬಹಳ ಸಂತೋಷವಾಗಿದೆ. ಅವರು ನನ್ನ ಮಿತ್ರರು, ಹಲವಾರು ಬಾರಿ ಭೇಟಿಯಾಗಬೇಕು ಅಂದಾಗ ಅಲ್ಲೇ ರೇಸ್ ಕೋರ್ಸ್ನಲ್ಲಿ ಇರ್ತಿನಿ ಬಾರಯ್ಯ ಎನ್ನುತ್ತಿದ್ದರು. ಅವರ ಹೆಸರನ್ನ ಬಿಟ್ಟು ಬೇರೆ ಯಾರ ಹೆಸರು ಕೂಡ ಈ ರಸ್ತೆಗೆ ಸೂಕ್ತವಲ್ಲ. ಅವರ ಕುಟುಂಸ್ಥರು ಒಪ್ಪಿ ಬಂದಿದ್ದಾರೆ ಧನ್ಯವಾದಗಳು. ಅವರ ಸ್ಮಾರಕ ಕೂಡ ಉದ್ಘಾಟನೆ ಮಾಡ್ತೀವಿ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಸಿಎಂ ಹೇಳಿದರು.

    ಈ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಶ್ (Sumalatha Ambareesh), ಅಭಿಷೇಕ್ ಅಂಬರೀಶ್, ರಾಕ್‌ಲೈನ್ ವೆಂಕಟೇಶ್, ರಾಘವೇಂದ್ರ ರಾಜ್‌ಕುಮಾರ್, ಕಂದಾಯ ಸಚಿವರಾದ ಆರ್.ಅಶೋಕ್, ಡಾ.ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

  • ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು – ಸುರೇಶ್‌ಗೌಡ

    ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು – ಸುರೇಶ್‌ಗೌಡ

    ಮಂಡ್ಯ: ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು ಎನ್ನುವ ಮೂಲಕ ಬಿಜೆಪಿಗೆ ಸಂಸದೆ ಸುಮಲತಾ (Sumalatha Ambareesh) ಬೆಂಬಲ ಘೋಷಣೆ ವಿಚಾರವಾಗಿ ಜೆಡಿಎಸ್ (JDS) ಶಾಸಕ ಸುರೇಶ್‌ಗೌಡ (Suresh Gowda) ಕುಟುಕಿದರು.

    ಮಂಡ್ಯ (Mandya) ಜಿಲ್ಲೆಯ ನಾಗಮಂಗಲದಲ್ಲಿ (Nagamangala) ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಬಿಜೆಪಿಗೆ ಬೆಂಬಲ ನೀಡಿದ್ದು ಅವರ ವೈಯಕ್ತಿಕ ನಿರ್ಧಾರ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಂದು ಬಿಟ್ಟು ಕಾಂಗ್ರೆಸ್, ಬಿಜೆಪಿ, ರೈತ ಸಂಘ, ಸ್ವಾಭಿಮಾನ ಎಲ್ಲಾ ಒಂದೇ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಜಿಲ್ಲೆಯಲ್ಲಿ ಪರಸ್ಪರ ಅವರು ಎಂದಿಗೂ ಬೈದುಕೊಳ್ಳುವುದಿಲ್ಲ. ಎರಡೂ ಪಕ್ಷದವರು ಸೇರಿ ಜೆಡಿಎಸ್ ಪಕ್ಷವನ್ನು ಬೈಯುತ್ತಾರೆ ಎಂದರು. ಇದನ್ನೂ ಓದಿ: ಸಾರ್ವಜನಿಕರಿಂದ ಕ್ಲಾಸ್‌ -ಶಂಕುಸ್ಥಾಪನೆ ಮಾಡದೇ ಕಾಗೇರಿ ವಾಪಸ್

    ಸುಮಲತಾ ದೊಡ್ಡವರಿದ್ದಾರೆ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಸುಮಲತಾ ಮೇಲೆ ಹಲ್ಲೆ ನಡೆದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬಹುದು, ಆ ಕೆಲಸ ಮಾಡಲಿ. ನಾವು ಅಭಿವೃದ್ಧಿ ಮಾಡಿದರೆ ಜನ ನಮ್ಮ ಕೈ ಹಿಡಿಯುತ್ತಾರೆ. ಇಲ್ಲದಿದ್ದರೆ ಮನೆಗೆ ಕಳುಹಿಸುತ್ತಾರೆ. ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು. ಮೋದಿ (Narendra Modi) ಅವರಿಗೆ ದೇವೇಗೌಡರ (H.D.Deve Gowda) ಮೇಲೆ ಗೌರವವಿದೆ. ಹಾಗಾಗಿ ಅವರು ಜೆಡಿಎಸ್ ವಿರುದ್ಧ ಮಾತನಾಡುವುದಿಲ್ಲ. ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಸುಮಲತಾ ಅವರ ಕಾಲೆಳೆದರು. ಇದನ್ನೂ ಓದಿ: ಸ್ವಾಭಿಮಾನಿ ಅನ್ನೋ ಪದ ಬಳಸಬೇಡಿ: ಸುಮಲತಾ ವಿರುದ್ಧ ರವೀಂದ್ರ ವಾಗ್ದಾಳಿ

  • ಸ್ವಾಭಿಮಾನಿ ಅನ್ನೋ ಪದ ಬಳಸಬೇಡಿ: ಸುಮಲತಾ ವಿರುದ್ಧ ರವೀಂದ್ರ ವಾಗ್ದಾಳಿ

    ಸ್ವಾಭಿಮಾನಿ ಅನ್ನೋ ಪದ ಬಳಸಬೇಡಿ: ಸುಮಲತಾ ವಿರುದ್ಧ ರವೀಂದ್ರ ವಾಗ್ದಾಳಿ

    ಮಂಡ್ಯ: ಇನ್ಮುಂದೆ ಸ್ವಾಭಿಮಾನಿ ಅನ್ನೋ ಪದ ಬಳಸಬೇಡಿ, ನೀವು ಕೊಲೆಗಡುಕರಾಗಿದ್ದೀರಿ, ಕತ್ತು ಹಿಸುಕುದ್ದೀರಿ. ತಾವೂ ಬೆನ್ನಿಗೆ ಚೂರಿ ಹಾಕುವವರು ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ರವೀಂದ್ರ (Ravindra) ವಾಗ್ದಾಳಿ ನಡೆಸಿದರು.

    ಸುಮಲತಾ ಅಂಬರೀಶ್ ಬಿಜೆಪಿಗೆ (BJP) ಬೆಂಬಲ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಸುಮಲತಾ ಅವರಿಗೆ ಜಿಲ್ಲೆಯ ಅಸ್ಮಿತೆ, ಸ್ವಾಭಿಮಾನಕ್ಕಾಗಿ 249 ಕಿ.ಮೀ ಪಾದಯಾತ್ರೆ ಮಾಡಿದ್ದೆ. ಹಲವರ ಹೋರಾಟದಿಂದಾಗಿ ಸುಮಲತಾ ಅವರು ಗೆಲುವು ಸಾಧಿಸಿದ್ದಾರೆ. ಆದರೆ ಅವರು ಗೆಲುವು ಸಾಧಿಸಿದ ಬಳಿಕ ಜಿಲ್ಲೆಗೆ ಏನಾದರೂ ಅಭಿವೃದ್ಧಿ ಕೆಲಸವನ್ನು ಮಾಡಬೇಕು ಎನ್ನುವ ಪ್ರಯತ್ನವನ್ನು ಮಾಡಲಿಲ್ಲ. ಅಷ್ಟೇ ಅಲ್ಲದೇ ಅವರಿಗೆ ಅದ್ಯಾರು ಮಾರ್ಗದರ್ಶಕರು ಗೊತ್ತಿಲ್ಲ, ಜಿಲ್ಲೆಯ ಬೆಳವಣಿಗೆಗೆ ಏನು ಬೇಕು ಎಂದು ನಮಗೆ ಹೇಳಬೇಕಿತ್ತು. ಆ ಯೋಗ್ಯತೆ ನಮಗಿಲ್ಲ ಅಂತಾ ಯಾಕೆ ಅನ್ಕೊಂಡರು? ಇವತ್ತು ಯಾಕೆ ಸ್ವಾಭಿಮಾನಿ ಅಂತಾ ಪದೇ ಪದೇ ಬಳಸುತ್ತಾರೆ. ಸ್ವಾಭಿಮಾನಕ್ಕೂ ಅವರಿಗೂ ಎಲ್ಲಿಂದೆಲ್ಲಿ ಸಂಬಂಧ ಯಾವ ಸ್ವಾಭಿಮಾನಿ ಕೆಲಸವನ್ನು ಅವರು ಮಾಡಿದ್ದಾರೆ. ಅವರು ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಕಾದಿದ್ದು ಒಂದೇ ಜಿಲ್ಲೆಗೆ ಭಾಗ್ಯ ಎಂದು ಕಿಡಿಕಾರಿದರು.

    ಇವತ್ತು ನರೇಂದ್ರ ಮೋದಿಯವರ (Narendra Modi) ಅದ್ಭುತ ಕಾರ್ಯದಿಂದ ಅವರನ್ನ ಸಂಪೂರ್ಣ ಬೆಂಬಲಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಅವತ್ತು ಸುಮಲತಾ ಅವರನ್ನು ಗೆಲ್ಲಿಸಲು ಹೋರಾಟ ಮಾಡಿದವರ ಕಥೆ ಏನು? ನಾನು, ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡೀಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಬಿ.ಚಂದ್ರಶೇಖರ್ ಎಲ್ಲರೂ ಅವರ ಜೊತೆ ನಿಂತಿದ್ದೆವು. ಇವತ್ತು ಅವರು ಯಾರಿಗೆ ನ್ಯಾಯ ಕೊಡುತ್ತಿದ್ದಾರೆ? ಈ ಬಗ್ಗೆ ಈಗಲೇ ಉತ್ತರ ಕೊಡಿ. ಅಷ್ಟೇ ಅಲ್ಲದೇ ಅವರ ಬಾಯಲ್ಲಿ ಇಂದಿನಿಂದ ಸ್ವಾಭಿಮಾನ ಅನ್ನೋ ಪದ ಬರಬಾರದು ಎಂದು ಗುಡುಗಿದರು. ಇದನ್ನೂ ಓದಿ: ಸಹಜ ಸ್ಥಿತಿಗೆ ಮರಳಿದ ದಶಪಥ ಹೈವೇ ಟೋಲ್

    ನಮ್ಮ ಜಿಲ್ಲೆಯ ಸ್ವಾಭಿಮಾನವನ್ನು ನೀವು ಅಡವಿಡಲು ಹೋಗಬೇಡಿ. ನಿಮಗೆ ಸ್ವಾಭಿಮಾನ ಅಂತೇಳಲು ಯಾವುದೇ ಹಕ್ಕಿಲ್ಲ, ಇದಕ್ಕೆಲ್ಲ ಈಗಲೇ ಉತ್ತರಕೊಡಿ. ನೀವು ಯಾವ ರೀತಿ ಕತ್ತು ಹಿಸುಕುತ್ತಿದ್ದೀರಿ, ಕೊಲೆಗಡುಕರು ಅನ್ನೋದನ್ನ ಹೇಳಿ. ನೀವು ಬೆನ್ನಿಗೆ ಚೂರಿ ಹಾಕೋರು ಅನ್ನೋದನ್ನ ಹೇಳಿ ಸಚ್ಚಿದಾನಂದನನ್ನ ಬಿಟ್ಟುಕೊಡಲು ನಿಮಗೆ ಆಗಲ್ಲ. ಹಾಗಿದ್ರೆ ರಮೇಶ್ ಬಂಡೀಸಿದ್ದೇಗೌಡ, ಬೆಂಬಲವಾಗಿ ನಿಂತ ರೈತ ಸಂಘಕ್ಕೆ ಏನು ನ್ಯಾಯ ಕೊಡುತ್ತೀರಿ. ನಮ್ಮಣ್ಣನ ಮರ್ಯಾದೆ ಕಳೆಯಲು ಹೋಗಬೇಡಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಎಂಎಲ್‍ಸಿ ಆರ್.ಶಂಕರ್ ಮನೆ ಮೇಲೆ ಐಟಿ ದಾಳಿ -ಸಾರ್ವಜನಿಕರಿಗೆ ಹಂಚಲು ತಂದಿದ್ದ ಸೀರೆಗಳು ಪತ್ತೆ

  • ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

    ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್

    ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (B.L Santhosh) ಹಾಡಿಹೊಗಳಿದ್ದಾರೆ.

    ಮಂಡ್ಯದಲ್ಲಿ ದಶಪಥ ಸಮಾವೇಶ ಹಾಗೂ ಮೋದಿ ರೋಡ್ ಶೋ ಸಕ್ಸಸ್ ಹಿನ್ನೆಲೆಯಲ್ಲಿ ಮಂಡ್ಯ ಬಿಜೆಪಿ ಪದಾಧಿಕಾರಿಗಳಿಗೆ ಹಾಗೂ ಮಂಡ್ಯ ಬಿಜೆಪಿ ಕಾರ್ಯಕರ್ತರಿಗೆ ಬಿ.ಎಲ್ ಸಂತೋಷ್ ಪತ್ರ ಬರೆದಿದ್ದಾರೆ. ಈ ಮೂಲಕ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

    ಮಂಡ್ಯದಲ್ಲಿ ನಡೆದ ಬೃಹತ್ ರೋಡ್ ಶೋ ಕಾರ್ಯಕ್ರಮದ ಸಂಪೂರ್ಣ ಯಶಸ್ಸು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಸಲ್ಲುತ್ತದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ಇತರ ಅಧಿಕಾರಿಗಳು ಹಗಲು ಇರುಳೆನ್ನದೆ ಶ್ರಮವಹಿಸಿ ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಮಾತೇನಲ್ಲ. 41 ವರ್ಷಗಳ ಬಳಿಕ ದೇಶದ ಪ್ರಧಾನಿಯೊಬ್ಬರು ಮಂಡ್ಯಕ್ಕೆ ಭೇಟಿ ನೀಡುವ ಅಪರೂಪದ ಸಂದರ್ಭ ಇದಾಗಿತ್ತು. ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಪರೂಪದ ವಿಷಯ. ಮಂಡ್ಯ ಬಿಜೆಪಿ ಘಟಕದ ಶಕ್ತಿ ಮತ್ತು ಅಲ್ಲಿಯ ಅವಕಾಶಗಳ ಬಗ್ಗೆ ಅನೇಕ ನಾಯಕರು ಸಂಶಯ ವ್ಯಕ್ತಪಡಿಸುತ್ತಾರೆ. ಬಹಳ ಅಪರೂಪವೇ ಎನ್ನುವಂತೆ ಬಿಜೆಪಿ ಕಛೇರಿಯ ಬಳಿ ನಾಯಕರ ಕಾರುಗಳು ನಿಲ್ಲುತ್ತವೆ ಎಂದಿದ್ದಾರೆ.

    ಹೆಚ್ಚಾಗಿ ಎಲ್ಲರ ಗಮನ ಮೈಸೂರು – ಕೊಡಗು ಅಥವಾ ಬೆಂಗಳೂರಿನ ಇನ್ನೊಂದು ಭಾಗದ ಕಡೆಗೆ ಇರುತ್ತದೆ. ಈ ಬಾರಿಯೂ ನಾಯಕರ ಒತ್ತಾಸೆ ಮೈಸೂರು ಅಥವಾ ಕೆಂಗೇರಿ ಕಡೆಗಿತ್ತು. ಅದಲ್ಲದೆ ಎರಡು ತಿಂಗಳು ಹಿಂದೆಯಷ್ಟೇ ಮಂಡ್ಯದಲ್ಲಿ ಗೃಹಸಚಿವ ಅಮಿತ್ ಶಾ ಅವರ ಅದ್ಧೂರಿ ಕಾರ್ಯಕ್ರಮ ನಡೆದಿತ್ತು. ಕೆಲವು ದಿನಗಳ ಹಿಂದೆ ವಿಜಯ ಸಂಕಲ್ಪ ಯಾತ್ರೆಯು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಹಾದುಹೋಗಿತ್ತು. ಆದರೆ ರಾಜ್ಯಪಕ್ಷದ ದೃಢನಿಲುವು, ಜಿಲ್ಲಾ ಘಟಕದ ದೃಢಸಂಕಲ್ಪವು ಈ ಕಾರ್ಯಕ್ರಮ ಮಂಡ್ಯದಲ್ಲಿಯೇ ನಡೆಯುವಂತೆ ಮಾಡಿತು. ಕಾರ್ಯಕ್ರಮಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿಗೆ ದೊರೆತ ಬೂಸ್ಟರ್ ಎಂದರೆ ಸಂಸದರಾದ ಸುಮಲತಾ ಅವರಿಂದ ದೊರೆತ ಬೆಂಬಲ. ಅವರು ಹೆಚ್ಚಿನ ಜನಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆನೀಡಿದ್ದರು ಎಂದಿದ್ದಾರೆ. ಇದನ್ನೂ ಓದಿ: Bengaluru Mysuru Expressway- ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ

    ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯದ ಜನಸಾಮಾನ್ಯರ ಮನ ಗೆದ್ದಿದ್ದಾರೆ. ಯೋಜನೆಗಳು ಜನರನ್ನು ತಲಪುವುದು ಎಂದಿಗೂ ಅರಿವಿಗೆ ಬಾರದೇ ಇರದು. ಕಾರ್ಯಕ್ರಮ ಮಾಡಲು ತೆಗೆದುಕೊಂಡ ಧೈರ್ಯವೂ ಸಾರ್ಥಕವೆನಿಸಿತು. ಇಂದು ಮಂಡ್ಯದ ಬಿಜೆಪಿಯಲ್ಲಿ ನಗುಮುಖಗಳು ಮಾತ್ರ ಇವೆ. ಈ ರೋಡ್ ಶೋ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಹೊಸ ತಿರುವನ್ನು ನೀಡಿದೆ. ಮುಂಬರುವ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಾರ್ಗದರ್ಶನ ಉಲ್ಲೇಖನಾರ್ಹವಾದದ್ದು. ಬಿ.ಎಸ್. ಯಡಿಯೂರಪ್ಪನವರು ತಮ್ಮ ತವರು ಜಿಲ್ಲೆಯಾದ ಮಂಡ್ಯಕ್ಕೆ ಸದಾ ಮಾರ್ಗದರ್ಶಕರಾಗಿದ್ದಾರೆ. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ದೊಡ್ಡಪಾತ್ರವನ್ನು ವಹಿಸಿದ ಪ್ರತಾಪ್ ಸಿಂಹ ಅವರು ಯಶಸ್ಸಿಗೆ ಸಾಥ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಮೆಗಾ ಶೋಗಾಗಿ ಮಂಡ್ಯ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರನ್ನು ನನ್ನ ಹೃದಯದಾಳದಿಂದ ಅಭಿನಂದಿಸುತ್ತೇನೆ. ಮುಂದಿನ ದಿನಗಳು ಇನ್ನಷ್ಟು ತಾಕತ್ತಿನದ್ದಾಗಿರಲಿದೆ. ಇನ್ನು ಮುಂದೆ ಹೆಚ್ಚಿನ ನಿರೀಕ್ಷೆಯ ಜೊತೆಜೊತೆಗೆ ವಿರೋಧವೂ ಇರಲಿದೆ. ಈ ಹಿಂದೆ ಇದ್ದ ಸಂದೇಹಗಳೆಲ್ಲವೂ ತಪ್ಪು ಎಂದು ಸಾಬೀತಾಗಿರುವುದರಿಂದ ಆರಂಭಿಸಿರುವ ಓಟವನ್ನು ಯಶಸ್ವಿಯಾಗಿ ಮುಗಿಸುವುದು ನಮ್ಮ ಕರ್ತವ್ಯವಾಗಿದೆ. ಸಂಘಟನೆಗೆ ಹೊಸ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರಗಳ ಗೆಲುವು ಸದಾ ವಿಶೇಷ ವಿಷಯವೇ. ಮಂಡ್ಯವನ್ನು ಗೆಲ್ಲುವುದು ಕರ್ನಾಟಕ ಬಿಜೆಪಿ ಬಹಳ ವಿಶೇಷವಾದದ್ದು. ನಮ್ಮ ಸಮಯವು ಈಗ ಬಂದಿದೆ. ಒಂದೇ ಮನಸ್ಸಿನಿಂದ ಗುರಿಯನ್ನು ಸಾಧಿಸೋಣ. ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್ ಎಂದು ಬಿ.ಎಲ್ ಸಂತೋಷ್ ಗುಣಗಾನ ಮಾಡಿದ್ದಾರೆ.