Tag: Sumalatha Ambarish

  • ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಹೇಳಿದ್ದೇನು?

    ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ: ಸಂಸದೆ ಸುಮಲತಾ ಹೇಳಿದ್ದೇನು?

    ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ‍(Darshan) ಪ್ರಚಾರಕ್ಕೆ ಆಗಮಿಸಿದ್ದರು. ಈವೆಗೂ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸುತ್ತಾ ಬಂದಿದ್ದು ದರ್ಶನ್, ಈಗ ಸುಮಲತಾ ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದರೂ, ಅಮ್ಮನ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ದರ್ಶನ್ ಪ್ರಚಾರ ಮಾಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಸುಮಲತಾ (Sumalatha Ambarish) ಅವರೇ ದರ್ಶನ್ ಅವರನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಕಳುಹಿಸಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತಂತೆ ಉಡುಪಿಯಲ್ಲಿ ಸುಮಲತಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ಉಡುಪಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಭಾಗಿಯಾದ ಸುಮಲತಾ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರದ ವಿಚಾರವಾಗಿ ಮಾತನಾಡಿದ್ದು, ಸುಮಲತಾ ಅವರೇ  ದರ್ಶನ್ ಅವರನ್ನ ಪ್ರಚಾರಕ್ಕೆ ಕಳಿಸಿದ್ದಾರೆ ಎಂಬ ಊಹಾಪೋಹದ ಈ ವಾದದಲ್ಲಿ ಸೆನ್ಸ್ ಲಾಜಿಕ್ ಎರಡು ಇಲ್ಲ. ದರ್ಶನ್ ರನ್ನ ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ರಾಜಕೀಯವಾಗಿ ಬೇರೆಯವರ ಬಗ್ಗೆ ನಾವು ಪ್ರತಿದಿನ ಚರ್ಚೆ ಮಾಡಲ್ಲ. ಪ್ರತಿದಿನ ಫೋನು ಮಾಡಿ ಎಲ್ಲಿಗೆ ಹೋಗ್ತಿದ್ದೀಯ ಯಾರ ಪರ ಪ್ರಚಾರ ಮಾಡ್ತಿದ್ದೀಯಾ ಅಂತ ಕೇಳಲ್ಲ. ಪ್ರಚಾರ ಯಾರಿಗೆ ಮಾಡಬೇಕು ಅನ್ನೋದು ಅವರ ಇಚ್ಛೆ ಎಂದೆಲ್ಲ ಮಾತನಾಡಿದ್ದಾರೆ.

    sumalatha ambarish

    ಮುಂದುವರೆದು ಮಾತನಾಡಿದ ಸುಮಲತಾ, ಹೋಗು ಹೋಗಬೇಡ ಅನ್ನಲು ನಾನು ಯಾರು? ಅಸೆಂಬ್ಲಿ ಚುನಾವಣೆಯಲ್ಲಿ ಮಂಡ್ಯದಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದರು. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರ ಮಾಡಿದರು. ಪಕ್ಷ ಮುಖ್ಯ ಅಲ್ಲ ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆ. ವ್ಯಕ್ತಿ ನನಗೆ ಇಷ್ಟವಾದರೆ ಹೋಗ್ತೀನಿ ಅಂತ ಹೇಳಿದ್ದಾರೆ. ಆ ರೀತಿ ದರ್ಶನ್ ನನ್ನ ಕಳಿಸುವುದಾದರೆ ನಾನ್ಯಾಕೆ ಬಿಜೆಪಿ ಸೇರಬೇಕು. ನಾನು ಪಕ್ಷೇತರ ನೇರವಾಗಿ ಸಪೋರ್ಟ್ ಮಾಡಬಹುದಲ್ವಾ?. ನನಗೆ ಯಾರೂ ಏನನ್ನೂ ಫೋರ್ಸ್ ಮಾಡೋಕೆ ಆಗಲ್ಲ. ಈ ಪಕ್ಷಕ್ಕೆ ಸೇರು ಆ ಪಕ್ಷ ಬೇಡ ಅಂತ ಒತ್ತಡ ಮಾಡೋಕೆ ಆಗ್ತಿರ್ಲಿಲ್ಲ. ನಾನು ನನ್ನ ಇಚ್ಛೆಯಿಂದ ಬಿಜೆಪಿಗೆ ಬಂದಿದ್ದೇನೆ. ಬೇರೆ ಪಕ್ಷಕ್ಕೆ ಸಪೋರ್ಟ್ ಮಾಡು ಅಂತ ಹೇಳುವ ಪ್ರಶ್ನೆ ಬರಲ್ಲ ಎಂದಿದ್ದಾರೆ.

     

    ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸದೆ ಇರುವ ವಿಚಾರ ಕುರಿತು ಮಾತನಾಡಿದ ಅವರು, ನಾನು ಯಾವ ರೀತಿ ಪ್ರಚಾರ ಮಾಡಬೇಕು ಎಂದು ಪಕ್ಷ ಡಿಸೈಡ್ ಮಾಡುತ್ತದೆ.  ನಾನು ನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೆ ಕುಮಾರಸ್ವಾಮಿ ಪರವಾಗಿ ಖಂಡಿತ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ ಸುಮಲತಾ.

  • ಅಮ್ಮ ಯಾವುದೇ ನಿರ್ಧಾರ ತಗೆದುಕೊಂಡರೂ ನಾನು ಬದ್ಧ: ನಟ ದರ್ಶನ್

    ಅಮ್ಮ ಯಾವುದೇ ನಿರ್ಧಾರ ತಗೆದುಕೊಂಡರೂ ನಾನು ಬದ್ಧ: ನಟ ದರ್ಶನ್

    ಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರ ಗೆಲುವಿನಲ್ಲಿ ನಟ ದರ್ಶನ್ (Darshan) ಪಾತ್ರ ತುಂಬಾ ಇದೆ. ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಅವರ ಬೆನ್ನೆಲುಬಾಗಿ ನಿಂತರವರು ಯಶ್ ಮತ್ತು ದರ್ಶನ್. ಇದೀಗ ಮತ್ತೆ ಸುಮಲತಾ ಅವರ ಬೆಂಬಲಕ್ಕೆ ನಿಂತಿದ್ದಾರೆ.

    ಈ ಬಾರಿ ಸುಮಲತಾ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದೇ ನಂಬಲಾಗಿತ್ತು. ಆದರೆ, ಮಂಡ್ಯ  (Mandya) ಕ್ಷೇತ್ರಕ್ಕೆ ಈ ಬಾರಿ ಹೆಚ್.ಡಿ. ಕುಮಾರಸ್ವಾಮಿಗೆ ಟಿಕೆಟ್ ಸಿಕ್ಕಿದೆ. ಹಾಗಾಗಿ ಸುಮಲತಾ ಅವರ ನಡೆಯ ಬಗ್ಗೆ ಇಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್ ಮಾತನಾಡಿದ್ದಾರೆ.

     

    ಅಮ್ಮ ಯಾವತ್ತಿಗೂ ಅಮ್ಮನೆ. ಅವರು ಹಾಳು ಬಾವಿ ಬೀಳು ಅಂದರೆ ಬೀಳ್ತೀನಿ. ಅವರು ಏನೇ ನಿರ್ಧಾರ ತಗೆದುಕೊಂಡರೂ ನಾನು ಅವರ ಪರವಾಗಿ ನಿಲ್ಲುತ್ತೇನೆ ಎಂದು ಮತ್ತೆ ದರ್ಶನ್ ಹೇಳಿದ್ದಾರೆ. ಈ ಮೂಲಕ ಮತ್ತೆ ಸುಮಲತಾ ಅವರ ಬೆನ್ನಿಗೆ ನಿಂತಿದ್ದಾರೆ.

  • ನಾಳೆ ಸುಮಲತಾ ಮಹತ್ವದ ಘೋಷಣೆ: ದರ್ಶನ್, ಅಭಿಷೇಕ್ ಸಾಥ್

    ನಾಳೆ ಸುಮಲತಾ ಮಹತ್ವದ ಘೋಷಣೆ: ದರ್ಶನ್, ಅಭಿಷೇಕ್ ಸಾಥ್

    ಮಂಡ್ಯ (Mandya) ಲೋಕಸಭಾ ಕ್ಷೇತ್ರ ರಾಜ್ಯ ಮಟ್ಟದಲ್ಲಿ ಮಾತ್ರವಲ್ಲ, ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ದಾಖಲೆ ಸೃಷ್ಟಿ ಮಾಡಿದ್ದ ನಟಿ ಸುಮಲತಾ ಅಂಬರೀಶ್ (Sumalatha Ambarish), ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ ಅವರ ಮುಂದಿನ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಂತೆ ಅವರು ನಾಳೆ ತಮ್ಮ ನಿರ್ಧಾರವನ್ನು ಪ್ರಕಟ ಮಾಡಲಿದ್ದಾರಂತೆ. ಈ ಕುರಿತಂತೆ ಅವರು ಫೇಸ್ ಬುಕ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

    ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

    ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ  ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ  ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್ (Darshan), ಅಭಿಷೇಕ್ ಅಂಬರೀಶ್ ಇರಲಿದ್ದಾರೆ.  ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ.

  • ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟಿಸುವಾಗ ದರ್ಶನ್ ಕೂಡ ಹಾಜರ್

    ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟಿಸುವಾಗ ದರ್ಶನ್ ಕೂಡ ಹಾಜರ್

    ಮಂಡ್ಯ (Mandya) ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ (Sumalatha Ambarish), ಈ ಬಾರಿಯ ಚುನಾವಣೆಯ 9Election) ಕುರಿತಂತೆ ಏಪ್ರಿಲ್ 3ರಂದು ಮಂಡ್ಯದಲ್ಲೇ ಮಹತ್ವದ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಟ ದರ್ಶನ್ ಕೂಡ ಹಾಜರಿರಲಿದ್ದಾರೆ.  ಕಳೆದ ಚುನಾವಣೆಯಲ್ಲೂ ದರ್ಶನ್ ಮತ್ತು ಯಶ್ ಜೊತೆಗಿದ್ದರು. ಈ ಬಾರಿಯೂ ಜೊತೆಗಿರುವುದಾಗಿ ದರ್ಶನ್ (Darshan) ಘೋಷಣೆ ಮಾಡಿದ್ದರು.

    3ನೇ ತಾರೀಖಿನ ಮಹತ್ವದ ಘೋಷಣೆ ಕುರಿತಂತೆ ಸ್ವತಃ ಸುಮಲತಾ ಅವರೇ ತಮ್ಮ ಅಭಿಮಾನಿಗಳನ್ನು ಮತ್ತು ಹಿತೈಷಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ.

    ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು.

    ಏಪ್ರಿಲ್ 3ನೇ ತಾರೀಖು ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ  ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಮಂಡ್ಯದಲ್ಲಿ ಪ್ರಕಟಿಸುತ್ತೇನೆ. ತಮ್ಮ ಸಲಹೆ ಮತ್ತು ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ ಎಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದರು.

  • ಸಂಸದೆ ಸುಮಲತಾರನ್ನ ಭೇಟಿ ಮಾಡಿದ ವಿಜಯೇಂದ್ರ

    ಸಂಸದೆ ಸುಮಲತಾರನ್ನ ಭೇಟಿ ಮಾಡಿದ ವಿಜಯೇಂದ್ರ

    ರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಅವರು ಮಂಡ್ಯದ ಸಂಸದೆ ಸುಮಲತಾರನ್ನು (Sumalatha Ambarish) ಇಂದು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

    ಈ ಬಾರಿ ಬಿಜೆಪಿಯಿಂದ ಸುಮಲತಾ ಅವರಿಗೆ ಮಂಡ್ಯ (Mandya) ಟಿಕೆಟ್ (Ticket) ಸಿಗಲಿದೆ ಎಂದು ಹೇಳಲಾಗಿತ್ತು. ಸುಮಲತಾ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ, ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ಸಿಗಲಿಲ್ಲ.

    ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಆಗುತ್ತಿದ್ದಂತೆಯೇ ತಟಸ್ಥ ನಿಲುವನ್ನು ಸುಮಲತಾ ತಾಳಿದರು. ಯಾವುದೇ ಸಭೆಯಲ್ಲೂ ಅವರು ಭಾಗಿಯಾಗಿರಲಿಲ್ಲ. ತಮ್ಮ ಬೆಂಬಲಿಗರ ಸಭೆ ಕರೆದು, ತೀರ್ಮಾನ ತಗೆದುಕೊಳ್ಳೋದಾಗಿ ತಿಳಿಸಿದ್ದರು. ನಾಳೆ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ. ಅದಕ್ಕೂ ಮುನ್ನ ವಿಜಯೇಂದ್ರ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

     

    ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದ್ದರಿಂದ, ಸುಮಲತಾ ಅವರನ್ನು ಭೇಟಿ ಮಾಡುತ್ತೀರಾ ಎಂದು ವಿಜಯೇಂದ್ರ ಅವರಿಗೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮಾಧ್ಯಮಗಳು ಪದೇ ಪದೇ ಪ್ರಶ್ನೆ ಮಾಡುತ್ತಿದ್ದವು. ಮೊದಲ ಭಾಗಿವಾಗಿ ವಿಜಯೇಂದ್ರ ಭೇಟಿ ಮಾಡಿದ್ದಾರೆ.

  • ಅಬುಧಾಬಿ ಹಿಂದೂ ದೇವಾಲಯ ಲೋಕಾರ್ಪಣೆಯಲ್ಲಿ ನಟಿ, ಸಂಸದೆ ಸುಮಲತಾ ಭಾಗಿ

    ಅಬುಧಾಬಿ ಹಿಂದೂ ದೇವಾಲಯ ಲೋಕಾರ್ಪಣೆಯಲ್ಲಿ ನಟಿ, ಸಂಸದೆ ಸುಮಲತಾ ಭಾಗಿ

    ರಬ್ಬರ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಕನ್ನಡದ ಹೆಸರಾಂತ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರು ಪಾಲ್ಗೊಂಡಿದ್ದರು. ಅರಬ್‌ ಸಂಯುಕ್ತ ಸಂಸ್ಥಾನದ (ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (Bochasanwasi Akshar Purushottam Swaminarayan Sanstha) ಹಿಂದೂ ದೇವಾಲಯವನ್ನು ನಿರ್ಮಾಣ ಮಾಡಿದೆ.

    ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್‌ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಲತಾ ಅಂಬರೀಶ್ ಅವರು ಆ ಕ್ಷಣವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ (Abudhavi) ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS) ನಿರ್ಮಿಸಿರುವ ಬೃಹತ್​ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಆಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ.

    ವಸುದೈವ ಕುಟುಂಬಕಂ ಸಿದ್ಧಾಂತವನ್ನು ಯಾವಾಗಲೂ ಪ್ರತಿಪಾದಿಸುವ, ಜಗತ್ತೇ ಮೆಚ್ಚುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟಿಸಿ, ಅಬುಧಾಬಿಯಲ್ಲಿ ಆಡಿದ ಸ್ಪೂರ್ತಿದಾಯಕ ಮಾತುಗಳು ಯುಎಇ ಮತ್ತು ಭಾರತದ ನಡುವಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತರುವುದರಲ್ಲಿ ಎರಡು ಮಾತಿಲ್ಲ.ಇಂತಹ ಪ್ರಧಾನಿ ಪಡೆದಿರುವುದು ನಮ್ಮೆಲ್ಲರ ಪುಣ್ಯ.

    ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆಯಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ BAPS ಸಂಸ್ಥೆಯ ಸರ್ವರಿಗೂ ಮನತುಂಬಿದ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದಾರೆ.

  • ‘ಮೆಗಾಸ್ಟಾರ್’ಗೆ ಪದ್ಮವಿಭೂಷಣ: ಅಭಿನಂದಿಸಿದ ಸಂಸದೆ ಸುಮಲತಾ

    ‘ಮೆಗಾಸ್ಟಾರ್’ಗೆ ಪದ್ಮವಿಭೂಷಣ: ಅಭಿನಂದಿಸಿದ ಸಂಸದೆ ಸುಮಲತಾ

    ಭಾರತದ ಅತ್ಯುನ್ನತ ನಾಗರೀಕ ಗೌರವ ಪದ್ಮ ಪ್ರಶಸ್ತಿಗಳು ನಿನ್ನೆ ಪ್ರಕಟಗೊಂಡಿವೆ. ತೆಲುಗಿನ ಮೆಗಾಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದ್ದು ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರು ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಚಿರಂಜೀವಿ ಅವರನ್ನು ಅಭಿನಂದಿಸಿದ್ದಾರೆ.

    ಈ ಗೌರವಕ್ಕೆ ನೀವು ಅರ್ಹವಾದ ವ್ಯಕ್ತಿ. ಪ್ರಶಸ್ತಿ ಪ್ರಕಟಗೊಂಡಿದ್ದು ಕೇಳಿ ಅತ್ಯಂತ ಹೆಮ್ಮೆ ಅನಿಸಿತು. ನಿಮ್ಮೊಂದಿಗೆ ಸುಂದರವಾದ ಚಿತ್ರಗಳಲ್ಲಿ ಅಭಿನಯಿಸಿದ್ದಕ್ಕೆ ಮತ್ತು ಸಾಕಷ್ಟು ಕ್ಷಣಗಳನ್ನು ಒಟ್ಟಿಗೆ ಕಳೆದಿದ್ದಕ್ಕೆ ಹೆಮ್ಮೆ ಅನಿಸುತ್ತದೆ. ಅದೊಂದು ಅದ್ಭುತವಾದ ಜರ್ನಿ. ನಿಮ್ಮ ಮುಂದಿನ ಜೀವನಕ್ಕೆ ಈ ಪ್ರಶಸ್ತಿ ಒಂದು ಗರಿ ಎಂದು ಅವರು ಬರೆದುಕೊಂಡಿದ್ದಾರೆ.

    ಗಣರಾಜ್ಯೋತ್ಸವದ ಮುನ್ನಾ ದಿನ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ದೊರೆತಿದೆ. ಸಾಧಕರಿಗೆ ಪದ್ಮ ವಿಭೂಷಣ, ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಅದರಂತೆ ಹಲವು ವರ್ಷಗಳಿಂದ ಕಲಾ ಸೇವೆ ಮಾಡಿರುವ ಅನೇಕ ಗಣ್ಯರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

    ಕಲೆ ಕ್ಷೇತ್ರದಲ್ಲಿ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದವರು

    1.ವೈಜಯಂತಿಮಾಲಾ ಬಾಲಿ (ತಮಿಳುನಾಡು)

    2.ಮೆಗಾಸ್ಟಾರ್ ಚಿರಂಜೀವಿ (ಆಂಧ್ರಪ್ರದೇಶ)

    3.ಪದ್ಮ ಸುಬ್ರಹ್ಮಣ್ಯಂ (ತಮಿಳುನಾಡು)

    ಕಲೆ ಕ್ಷೇತ್ರದಲ್ಲಿ ಪದ್ಮ ಭೂಷಣ ಪ್ರಶಸ್ತಿ ಭಾಜನರಾದವರು

    ಮಿಥುನ್ ಚಕ್ರವರ್ತಿ

    ದತ್ತಾತ್ರೇಯ ಅಂಬಾದಾಸ್ ಮೇಲು

    ಉಷಾ ಉತ್ತುಪ್

    ತಮಿಳಿನ ನಟ ವಿಜಯಕಾಂತ್

  • ‘ಕಥಾನಾಯಕ’ ಚಿತ್ರದಲ್ಲಿ ಲೀಲಾವತಿ ಅವರ ಜೊತೆ ನಟಿಸಿದ್ದೆ: ನಟಿ ಸುಮಲತಾ

    ‘ಕಥಾನಾಯಕ’ ಚಿತ್ರದಲ್ಲಿ ಲೀಲಾವತಿ ಅವರ ಜೊತೆ ನಟಿಸಿದ್ದೆ: ನಟಿ ಸುಮಲತಾ

    ಗಲಿದ ಕನ್ನಡದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಕ್ಕೆ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್  (Sumalatha Ambarish) ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಜೊತೆಗೆ ಅವರ ಜೊತೆ ನಟಿಸಿರುವ ಸಿನಿಮಾದ ಕುರಿತು ಹೇಳಿಕೊಂಡಿದ್ದಾರೆ.

    ಕನ್ನಡದ ಹೆಸರಾಂತ ಹಿರಿಯ ನಟಿ ಡಾ.ಲೀಲಾವತಿ ಅವರ ನಿಧನದ (Death) ಸುದ್ದಿ ತೀವ್ರ ಆಘಾತ ತಂದಿದೆ. ದಕ್ಷಿಣದ ಸಿನಿಮಾ ರಂಗಕ್ಕೆ ಇದು ತುಂಬಲಾರದ ನಷ್ಟ. ಆರನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೀಲಾವತಿ ಅವರು ನಾನಾ ಭಾಷೆಗಳಲ್ಲಿ ನಟಿಸುವ ಮೂಲಕ ದಕ್ಷಿಣ ಯಶಸ್ವಿ ನಟಿಯಾಗಿದ್ದರು. ಅವರೊಂದಿಗೆ ನನಗೂ ಕಥಾನಾಯಕ ಸಿನಿಮಾದಲ್ಲಿ ಪಾತ್ರ ಮಾಡಲು ಅವಕಾಶ ಸಿಕ್ಕಿತ್ತು ಎಂದು ಸುಮಲತಾ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.

    ಅಗಲಿಕೆ ನೋವನ್ನು ಭರಿಸುವಂತಹ ಶಕ್ತಿಯನ್ನು ಲೀಲಾವತಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಅವರು ಹೇಳಿದ್ದಾರೆ. ಲೀಲಾವತಿ ಅವರ ಜೊತೆಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಸುಮಲತಾ ಅವರು ವಿಷ್ಣುವರ್ಧನ್ ನಾಯಕನಾಗಿ ನಟಿಸಿದ್ದ ಕಥಾ ನಾಯಕ ಚಿತ್ರದಲ್ಲಿ ಲೀಲಾವತಿ ಅವರ ಜೊತೆ ನಟಿಸಿದ್ದಾರೆ. ಇದು ಪಿ. ವಾಸು ನಿರ್ದೇಶನದ ಸಿನಿಮಾ.

    ಉಮಾಶ್ರೀ ಕಂಬನಿ

    ಲೀಲಾವತಿ ಅವರು ಬಹಳಷ್ಟು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ನಿರ್ಮಾಪಕಿಯಾಗಿ, ನಟಿಯಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಿನಿಮಾಗೆ ಬಂದವರು ಲೀಲಾವತಿ ಅವರು. ಆನಂತರ ದೊಡ್ಡ ರೀತಿಯಲ್ಲಿ ನಾಯಕಿ ನಟಿಯಾಗಿ ಬೆಳೆದರು. ಸಾಕಷ್ಟು ಸಿನಿಮಾಗಳನ್ನು ಕೊಟ್ಟವರು. ಅಂತಹ ಕಲಾವಿದರು ನಮ್ಮೊಂದಿಗೆ ಇದ್ದರು ಎನ್ನೋದೇ ಹೆಮ್ಮೆ ಅನಿಸುತ್ತಿದೆ ಎನ್ನುವುದು ನಟಿ ಉಮಾಶ್ರೀ ಮಾತು.

     

    ಲೀಲಾವತಿ ಅವರದ್ದು ಮಾದರಿ ಜೀವನ. ಆ ತಾಯಿ ಸಾಕಷ್ಟು ಕಷ್ಟ ಪಟ್ಟಿದ್ಧಾರೆ. ಸನ್ಮಾನ, ಅವಮಾನ ಎರಡನ್ನೂ ಪಡೆದಿದ್ದಾರೆ. ತಾಯಿ ಮತ್ತು ಮಗನ ಬಾಂಧವ್ಯಕ್ಕೆ ಮಾದರಿ ಆದಂತಹ ಜೀವವದು. ಈಗ ತಾಯಿ ಮಗ ದೂರವಾಗಿದ್ದು ನೋವು ತಂದಿದೆ. ಅವರು ಇಲ್ಲ ಅನ್ನೋದು ನಂಬೋಕೆ ಆಗ್ತಿಲ್ಲ. ಮಹಿಳೆಯಾಗಿ ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಲೀಲಮ್ಮ. ಅವರ ಹಾಕಿಟ್ಟ ದಾರಿ ನಮಗೆಲ್ಲ ಮಾದರಿಯಾಗಬೇಕು ಎಂದಿದ್ದಾರೆ ನಟಿ, ಮಾಜಿ ಸಚಿವೆ ಉಮಾಶ್ರೀ.

  • ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

    ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

    ಮಂಡ್ಯ: ನಾನು ಮಂಡ್ಯದ ಸೊಸೆ, ಯಾವತ್ತೂ ಮಂಡ್ಯವನ್ನು ಬಿಡುವುದಿಲ್ಲ. ರಾಜಕಾರಣ ಬಿಟ್ಟರೂ ಸ್ವಾಭಿಮಾನ ಹಾಗೂ ಸಿದ್ಧಾಂತವನ್ನು ಬಿಡುವುದಿಲ್ಲ. ಇದನ್ನೂ ರಕ್ತದಲ್ಲಿ ಬರೆದು ಕೊಡಬೇಕಾ? ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಹೇಳಿದ್ದಾರೆ.

    ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗುವುದಿಲ್ಲ. ಜೆಡಿಎಸ್ (JDS) ಬಿಜೆಪಿ (BJP) ಮೈತ್ರಿ ಆಗಿದೆ. ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈ ಬಗ್ಗೆ ಈಗ ಎದ್ದಿರುವ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಬಗ್ಗೆ ನಾನು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಿತ್ಯ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ದೀಪಾವಳಿಗೆ ಟಫ್‌ ರೂಲ್ಸ್‌

    ಕ್ಷೇತ್ರ ಹಂಚಿಕೆ ಬಗ್ಗೆ ನೂರಾರು ಮಾತುಕತೆ ನಡೆದಿರಬಹುದು. ಆದರೆ ಯಾವುದೇ ಕ್ಷೇತ್ರ ಹಂಚಿಕೆ ಇನ್ನೂ ಖಚಿತವಾಗಿಲ್ಲ. ಮಂಡ್ಯ ಜನ ನನ್ನ ಜೊತೆ ಯಾವಾಗಲೂ ಇದ್ದಾರೆ. ನನಗೆ ಆ ಆತ್ಮವಿಶ್ವಾಸವಿದೆ, ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ನಾನು ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ ಎಂದಿದ್ದಾರೆ.

    ಬೆಂಗಳೂರು ಉತ್ತರ ಕ್ಷೇತ್ರದ ಆಫರ್ ಅನ್ನು ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ. ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು. ಬೇರೆ ಕ್ಷೇತ್ರದ ಆಫರ್ ಅನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಈ ವಿಷಯವನ್ನು ನೂರಾರು ಬಾರಿ ಹೇಳಿದ್ದೇನೆ. ಇದನ್ನು ನನ್ನ ರಕ್ತದಲ್ಲಿ ಬರೆದು ಕೊಡಬೇಕಾ? ಎಂದಿದ್ದಾರೆ.

    ಮಂಡ್ಯ ಜಿಲ್ಲೆಯ ರಾಜಕಾರಣ ಯಾವಾಗಲೂ ಒಂದು ಸವಾಲು. ಈ ಸವಾಲಿಗೆ ಹೆದರುವ ಸ್ವಭಾವ ನನ್ನದಲ್ಲ ಎಂದು ಅವರು ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ  ಸ್ಯಾಂಡಲ್ ವುಡ್ ಸ್ಟಾರ್ಸ್

    ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್ ವುಡ್ ಸ್ಟಾರ್ಸ್

    ಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ (Cauvery ) ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇವತ್ತು ಹಲವು ಕಡೆ ಚಿತ್ರರಂಗದವರ (Sandalwood) ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದರು. ವಿರೋಧದ ಹೋರಾಟ ಹೆಚ್ಚಾಗುತ್ತಿದ್ದಂತೆಯೇ ಒಬ್ಬೊಬ್ಬ ನಟರು ಸೋಷಿಯಲ್ ಮೀಡಿಯಾ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

    ಹಿರಿಯ ನಟಿ, ಮಂಡ್ಯ ಕ್ಷೇತ್ರದ ಸಂಸದೆಯೂ ಆಗಿರುವ ಸುಮಲತಾ ಅಂಬರೀಶ್ (Sumalatha Ambarish) ಅವರು ನಿರಂತರವಾಗಿ ರೈತರ ಹೋರಾಟಗಳಿಗೆ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಜಲಶಕ್ತಿ ಸಚಿವರನ್ನು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನಿನ್ನೆಯಷ್ಟೇ ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ, ನೇರವಾಗಿ ಅವರು ಹೋರಾಟಕ್ಕೂ ಇಳಿದಿದ್ದರು. ಇವರ ಹೊರತಾಗಿ ಬೇರೆ ಯಾವ ಕಲಾವಿದರೂ ಹೋರಾಟದಲ್ಲಿ ಭಾಗಿಯಾಗಿಲ್ಲ ಎನ್ನುವ ಅಸಮಾಧಾನ ಹೋರಾಟಗಾರರಲ್ಲಿ ಇತ್ತು.

    ಬೆಳಗ್ಗೆ ನಟ ದರ್ಶನ್ (Darshan) ಟ್ವೀಟ್ ಮಾಡಿ, ‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ, ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’ ಎಂದು ಬರೆದಿದ್ದರು. ಇದನ್ನೂ ಓದಿ:ವೈಟ್‌ ಡ್ರೆಸ್‌ನಲ್ಲಿ ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ

    ಕೆಲ ಗಂಟೆಗಳು ಹಿಂದೆ ಸುದೀಪ್ (Sudeep) ಕೂಡ ಟ್ವೀಟ್ ಮಾಡಿದ್ದು, ‘ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು  ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ’ ಎಂದು ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

     

    ಮೈಸೂರಿನ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) , ‘ನಮ್ಮ ಕುಟುಂಬ ಮತ್ತು ಚಿತ್ರರಂಗಕ್ಕೆ ನಾಡು ನುಡಿಯ ವಿಚಾರದಲ್ಲಿ ಹೋರಾಟಕ್ಕೆ ಯಾವಾಗಲೂ ಮುಂದು. ಫಿಲ್ಮ್ ಚೇಂಬರ್ ಕರೆಗಾಗಿ ನಾವು ಕಾಯುತ್ತಿದ್ದೇವೆ. ಹೋರಾಟದಲ್ಲಿ ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲವೆಂದು’ ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]