Tag: Summit

  • ಸವಾಲಿಗೆ ಸವಾಲು ಹಾಕುವುದು ನನ್ನ ಡಿಎನ್‌ಎಯಲ್ಲಿದೆ: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೋದಿ ಮಾತು

    ಸವಾಲಿಗೆ ಸವಾಲು ಹಾಕುವುದು ನನ್ನ ಡಿಎನ್‌ಎಯಲ್ಲಿದೆ: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೋದಿ ಮಾತು

    ನವದೆಹಲಿ/ ಮಾಸ್ಕೋ: ಚುನಾವಣೆ ಸಂದರ್ಭದಲ್ಲಿ ಹತ್ತು ವರ್ಷದ ಆಡಳಿತ ಟ್ರೇಲರ್ ಎಂದು ಹೇಳಿದ್ದೆ. ಮುಂದಿನ ಹತ್ತು ವರ್ಷಗಳಲ್ಲಿ ನಾವು ಅತ್ಯಂತ ವೇಗವಾಗಿ ಬೆಳೆಯಲಿದ್ದೇವೆ. ಸೆಮಿ ಕಂಡಕ್ಟರ್‌ನಿಂದ ಹಿಡಿದು ಗ್ರೀನ್ ಎನರ್ಜಿವರೆಗೂ ಎಲ್ಲಾ ವಲಯದಲ್ಲಿ ನಾವು ಬೆಳೆಯಲಿದ್ದೇವೆ. ವಿಶ್ವದ ಹೊಸ ಅಧ್ಯಾಯವನ್ನು ನಾವು ಬರೆಯಲಿದ್ದೇವೆ ಎಂದು ಅತ್ಯಂತ ವಿಶ್ವಾಸದಿಂದ ಹೇಳಬಲ್ಲೆ. ಸವಾಲಿಗೆ ಸವಾಲು ಹಾಕುವುದು ನನ್ನ ಡಿಎನ್‌ಎಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ರಷ್ಯಾ (Russia) ಪ್ರವಾಸದಲ್ಲಿರುವ ಮೋದಿ ಮಾಸ್ಕೋದಲ್ಲಿ (Moscow) ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಇಂದು ಭಾರತ ಜಾಗತಿಕವಾಗಿ ಮೂರನೇ ದೊಡ್ಡ ಸ್ಟಾರ್ಟ್ಅಪ್ ಇಕೋ ಸಿಸ್ಟಮ್ ಹೊಂದಿದೆ. 2014ರಲ್ಲಿ ಮೊದಲ ಬಾರಿಗೆ ನನಗೆ ಸೇವೆ ಮಾಡುವ ಅವಕಾಶ ಸಿಕ್ಕಿತು. ಆಗ ಬಹಳ ವಿರಳ ಪ್ರಮಾಣದಲ್ಲಿ ಸ್ಟಾರ್ಟ್ಅಪ್‌ಗಳಿದ್ದವು. ಇಂದು ಲಕ್ಷಾಂತರ ಸ್ಟಾರ್ಟ್ಅಪ್‌ಗಳಿದೆ. ಭಾರತೀಯ ಯುವಕರ ಸಾಮರ್ಥ್ಯ ಕಂಡು ವಿಶ್ವವೂ ಆಕರ್ಷಿತಗೊಂಡಿದೆ ಎಂದರು.

    ವಿಶ್ವದ ಜನರು ಭಾರತಕ್ಕೆ ಬಂದು ಈ ದೇಶ ಬದಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಭಾರತ ಜಿ20 ಅಂತಹ ಸಭೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ. ಭಾರತ ಕಳೆದ ಹತ್ತು ವರ್ಷದಲ್ಲಿ ವಿಮಾನ ನಿಲ್ದಾಣ ಎರಡು ಪಟ್ಟು ಹೆಚ್ಚಿಸಿದೆ. ಹತ್ತು ವರ್ಷಗಳಲ್ಲಿ 40 ಸಾವಿರ ಕಿ.ಮೀಗೂ ಅಧಿಕ ರೈಲ್ವೆಲೈನ್ ವಿದ್ಯುಧೀಕರಣ ಮಾಡಿದೆ. ಈಗ ಭಾರತದ ಶಕ್ತಿ ಎಲ್ಲರಿಗೂ ತಿಳಿಯುತ್ತಿದೆ ಎಂದು ಹೇಳಿದರು.

    ಡಿಜಿಟಲ್ ಪೇಮೆಂಟ್‌ನಲ್ಲಿ ಭಾರತ ದೊಡ್ಡ ಶಕ್ತಿಯಾಗಿದೆ. ಎಲ್1 ಪಾಯಿಂಟ್‌ನಿಂದ ಭಾರತ ಸೂರ್ಯನ ಅಧ್ಯಯನ ಮಾಡುತ್ತಿದೆ. ಭಾರತ ವಿಶ್ವದ ಅತಿ ಎತ್ತರದ ರೈಲ್ವೆಬ್ರಿಡ್ಜ್ ಹೊಂದಿದೆ. ವಿಶ್ವದ ಅತಿ ಎತ್ತರದ ಪ್ರತಿಮೆಯನ್ನು ನಿರ್ಮಾಣ ಮಾಡಿದೆ. 140 ಕೋಟಿ ಜನರ ಸಾಮರ್ಥ್ಯದ ಮೇಲೆ ಮತ್ತು ಅನಿವಾಸಿ ಭಾರತೀಯರ ಮೇಲೆ ನಂಬಿಕೆ ಇರಿಸಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    140 ಕೋಟಿ ಭಾರತೀಯರನ್ನು ಕೋವಿಡ್ ಸಂಕಷ್ಟದಿಂದ ಹೊರ ತಂದಿದೆ. ಸಂಕಷ್ಟದ ಸಂದರ್ಭದಲ್ಲೂ ಆರ್ಥಿಕತೆಯನ್ನು ಸಧೃಡವಾಗಿಟ್ಟಿದೆ. ಮೂಲ ಸೌಕರ್ಯಗಳ ನಿರ್ಮಾಣದಲ್ಲಿ ನಾವು ಹೊಂದಾಣಿಕೆ ಮಾಡಿಕೊಂಡಿಲ್ಲ. ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಹೆಲ್ತ್ ಮಿಷನ್. ಇದೆಲ್ಲವೂ 140 ಕೋಟಿ ಜನರಿಂದ ಸಾಧ್ಯವಾಗಿದೆ. ಅವರು ಕನಸು ಕಾಣುತ್ತಾರೆ, ಅದನ್ನು ನನಸು ಮಾಡಲು ಪ್ರಯತ್ನಿಸುತ್ತಾರೆ. ಜನರ ಈ ಬದಲಾವಣೆ ಅವರ ವಿಶ್ವಾಸದಲ್ಲಿ ಕಾಣುತ್ತಿದೆ ಎಂದರು.

    ಕ್ರೀಡೆಯಲ್ಲೂ ನಮ್ಮ ಆಟಗಾರರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್‌ಗೆ ಅತ್ಯುತ್ತಮ ತಂಡ ಕಳುಹಿಸಲಾಗಿದೆ. ಅವರು ಹೇಗೆ ಪ್ರದರ್ಶನ ಮಾಡಲಿದ್ದಾರೆ ನೀವೂ ನೋಡಿ. ಇದೇ ಆತ್ಮ ವಿಶ್ವಾಸ ಭಾರತದ ಯುವ ಶಕ್ತಿ. ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ ಭಾರತದ ಪಾಲು 15% ರಷ್ಟಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಳವಾಗಲಿದೆ. ಮುಂದಿನ ಹತ್ತು ವರ್ಷ ಅತ್ಯಂತ ವೇಗವಾಗಿ ಎಲ್ಲಾ ವಲಯದಲ್ಲಿ ನಾವು ಬೆಳೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ರಷ್ಯಾದಲ್ಲಿರುವ ಜನರು ಭಾರತ-ರಷ್ಯಾ ಸಂಬಂಧ ಹೆಚ್ಚುಸುತ್ತಿದ್ದೀರಿ. ರಷ್ಯಾ-ಭಾರತದ ನಡುವಿನ ಸಂಬಂಧವನ್ನು ಕಾಪಾಡಲಾಗುತ್ತಿದೆ. ರಷ್ಯಾ ಭಾರತದ ಸುಖ-ದುಃಖದ ಜೊತೆಗಾರ. ಇದನ್ನು ಸ್ನೇಹ ಎನ್ನುತ್ತಾರೆ. ಈ ಸಂಬಂಧ ಪರಸ್ಪರ ಸ್ನೇಹ ಮತ್ತು ಗೌರವದಿಂದ ಬೆಳೆದಿದೆ. ಭಾರತದ ಯಶಸ್ವಿ ಸಂಬಂಧಕ್ಕೆ ಅಧ್ಯಕ್ಷ ಪುಟಿನ್ ಕಾರಣ. ಕಳೆದ ಹತ್ತು ವರ್ಷದಲ್ಲಿ ನಾನು ಅವರನ್ನು 17 ಬಾರಿ ಭೇಟಿಯಾಗಿದ್ದೇನೆ. ಯುದ್ಧದ ಅವಧಿಯಲ್ಲಿ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾಗ ಭಾರತಕ್ಕೆ ಪುಟಿನ್ ಸಹಾಯ ಮಾಡಿದರು ಎಂದು ನುಡಿದರು.

    ಎಲ್ಲಾ ರಾಷ್ಟ್ರೀಯ ಹಬ್ಬಗಳು, ಭಾರತೀಯ ಹಬ್ಬಗಳನ್ನು ಅದ್ಧೂರಿಯಾಗಿ ಇಲ್ಲಿ ಆಚರಿಸಲಾಗುತ್ತದೆ. ಮುಂದೆ ಆಗಸ್ಟ್ 15 ಕೂಡಾ ಅದ್ಧೂರಿಯಾಗಿ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಆಸಕ್ತಿಯಿಂದ ರಷ್ಯನ್ನರು ಭಾಗಿಯಾಗಿದ್ದರು. ನಮ್ಮ ಆಚರಣೆಯಲ್ಲಿ ಮುಕ್ತವಾಗಿ ಭಾಗಿಯಾಗುತ್ತಾರೆ. ರಷ್ಯಾದಲ್ಲಿ ಎರಡು ಹೊಸ ಕೌನ್ಸಿಲೇಟ್ ತೆರೆಯುತ್ತೇವೆ. ಇದರಿಂದ ಪ್ರಯಾಣ ಮತ್ತು ವ್ಯಾಪಾರಕ್ಕೆ ಹೆಚ್ಚು ಸಹಕಾರವಾಗಲಿದೆ ಎಂದು ಮೋದಿ ತಿಳಿಸಿದರು.

  • ಪಿ20 ಶೃಂಗಸಭೆ ವಿಶ್ವದ ಸಂಸದೀಯ ಆಚರಣೆಗಳ ಮಹಾಕುಂಭ: ಮೋದಿ

    ಪಿ20 ಶೃಂಗಸಭೆ ವಿಶ್ವದ ಸಂಸದೀಯ ಆಚರಣೆಗಳ ಮಹಾಕುಂಭ: ಮೋದಿ

    ನವದೆಹಲಿ: ದೇಶದ ಸಂಸದೀಯ ಅಭ್ಯಾಸಗಳು ವಿಕಸನಗೊಂಡಿವೆ ಮತ್ತು ಬಲಗೊಂಡಿವೆ. ದೆಹಲಿಯಲ್ಲಿ ನಡೆಯುತ್ತಿರುವ ಪಿ20 ಶೃಂಗಸಭೆಯು (P20 Summit) ವಿಶ್ವದ ಸಂಸದೀಯ ಆಚರಣೆಗಳ ‘ಮಹಾಕುಂಭ’. ಪ್ರಪಂಚದಾದ್ಯಂತ ವಿವಿಧ ಸಂಸದೀಯ ಅಭ್ಯಾಸಗಳ ವಿಶಿಷ್ಟ ಸಂಗಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ದೆಹಲಿಯ (Delhi) ಭಾರತ್ ಮಂಟಪದಲ್ಲಿ ನಡೆದ ಪಿ20 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಜಿ20, ಚಂದ್ರಯಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಚುನಾವಣೆಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತವು ಇದುವರೆಗೆ 17 ಸಾರ್ವತ್ರಿಕ ಚುನಾವಣೆಗಳು ಮತ್ತು 300 ಕ್ಕೂ ಹೆಚ್ಚು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ನಡೆಸಿದೆ ಎಂದು ಹೇಳಿದರು.

    2019ರ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಸತತ 2ನೇ ಬಾರಿಗೆ ನನ್ನ ಪಕ್ಷವನ್ನು ಗೆಲ್ಲುವಂತೆ ಮಾಡಿದರು. ಇದು ವಿಶ್ವದ ಅತಿದೊಡ್ಡ ಚುನಾವಣೆಯಾಗಿದೆ. ಇವಿಎಂಗಳ ಬಳಕೆಯು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಿದೆ. ಏಕೆಂದರೆ ಈಗ ಮತ ಎಣಿಕೆಯ ಕೆಲವೇ ಗಂಟೆಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ವಿಭಜಿತ ಜಗತ್ತಿನಿಂದ ಭಯೋತ್ಪಾದನೆ ವಿರುದ್ಧ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ: ಮೋದಿ

    ಭಾರತವು ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲು ನಿರ್ಧರಿಸಿದೆ. ಭಾರತದಲ್ಲಿ ಸ್ಥಳೀಯ ಸ್ವ-ಆಡಳಿತ ಸಂಸ್ಥೆಗಳಲ್ಲಿ ಸುಮಾರು 32 ಲಕ್ಷ ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಭಾರತವು ಇಂದು ಪ್ರತಿಯೊಂದು ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುತ್ತದೆ. ಭಾರತದಲ್ಲಿ ನೂರಾರು ಭಾಷೆಗಳನ್ನು ಮಾತನಾಡುತ್ತಾರೆ. ಭಾರತದಲ್ಲಿ 28 ಭಾಷೆಗಳಲ್ಲಿ 900 ಕ್ಕೂ ಹೆಚ್ಚು ಟಿವಿ ಚಾನೆಲ್‌ಗಳಿವೆ. 33,000 ಕ್ಕೂ ಹೆಚ್ಚು ವಿಭಿನ್ನವಾಗಿ ಪತ್ರಿಕೆಗಳು ಸುಮಾರು 200 ಭಾಷೆಗಳಲ್ಲಿ ಪ್ರಕಟವಾಗಿವೆ ಎಂದರು. ಇದನ್ನೂ ಓದಿ: ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ

    G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ

    ನವದೆಹಲಿ: ಜಿ20 ಒಕ್ಕೂಟ ರಾಷ್ಟ್ರಗಳ ಪಟ್ಟಿಗೆ ಆಫ್ರಿಕನ್ ಯೂನಿಯನ್ (African Union) ಸೇರ್ಪಡೆಯಾಗಿದ್ದು ಈ ಮೂಲಕ ದೆಹಲಿಯಲ್ಲಿ (Delhi) ನಡೆಯುತ್ತಿರುವ ಜಿ20 ಶೃಂಗಸಭೆ (G20 Summit) ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಜಿ20 ಅಧ್ಯಕ್ಷ ರಾಷ್ಟ್ರ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಲಿ ಅಸ್ಸೌಮಾ ಅವರನ್ನು ಅಪ್ಪಿಕೊಳ್ಳುವ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಿದರು.

    ಜಿ20 ಸೇರ್ಪಡೆಯಾಗುತ್ತಿದ್ದಂತೆ ಸಭೆ ಉದ್ದೇಶಿಸಿ ಮಾತು ಆರಂಭಿಸಿದ ನರೇಂದ್ರ ಮೋದಿ, ನಿಮ್ಮೆಲ್ಲರ ಬೆಂಬಲದೊಂದಿಗೆ ನಾನು ಆಫ್ರಿಕನ್ ಯೂನಿಯನ್ ಅನ್ನು ಜಿ20 ಗೆ ಸೇರಲು ಆಹ್ವಾನಿಸುತ್ತೇನೆ ಎಂದು ಹೇಳಿದರು. ಬಳಿಕ ಆಫ್ರಿಕನ್ ಯೂನಿಯನ್ ಅನ್ನು ಜಿ20ಗೆ ಸೇರಲು ಆಹ್ವಾನಿಸಿದರು. ಪ್ರಧಾನಿ ಮೋದಿ ಪ್ರಸ್ತಾಪವನ್ನು ಎಲ್ಲಾ ಸದಸ್ಯ ರಾಷ್ಟ್ರಗಳು ಒಪ್ಪಿಕೊಂಡ ಬಳಿಕ ಕೊಮೊರೊಸ್ ಒಕ್ಕೂಟ ಮತ್ತು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಲಿ ಅಸ್ಸೌಮಾನಿ ಅವರನ್ನು ಜಿ20 ಹೈ ಟೇಬಲ್‌ನಲ್ಲಿ ತಮ್ಮ ಸ್ಥಾನವನ್ನು ಪಡೆದುಕೊಳ್ಳಲು ಆಹ್ವಾನಿಸಲಾಯಿತು.

    ಆಫ್ರಿಕನ್ ಯೂನಿಯನ್ 55 ರಾಷ್ಟ್ರಗಳನ್ನು ಒಳಗೊಂಡಿದೆ ಜಿ20ನಲ್ಲಿ ಅದರ ಸೇರ್ಪಡೆಯೊಂದಿಗೆ, ಈ ಮೂಲಕ ಯುರೋಪಿಯನ್ ಒಕ್ಕೂಟದ ಬಳಿಕ 2ನೇ ಅತಿದೊಡ್ಡ ಯೂನಿಯನ್ ಇದಾಗಿದೆ. ಆಫ್ರಿಕನ್ ಯೂನಿಯನ್ ಪ್ರವೇಶದ ಬಳಿಕ ಜಿ20 ಅನ್ನು ಜಿ21 ಎಂದು ಮರುನಾಮಕರಣ ಮಾಡುವ ನಿರೀಕ್ಷೆಯಿದೆ. ಇದನ್ನೂ ಓದಿ: ಜಿ20 ಸಭೆಯಲ್ಲಿ ಮತ್ತೆ ‘ಭಾರತ್’ ನಾಮಸ್ಮರಣೆ – ಪ್ರಧಾನಿ ಆಸನದ ಮುಂದೆ ಭಾರತ್ ಪದ ಬಳಕೆ

    ಜಿ20ಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಯಾದ ಬಳಿಕ ಟ್ವೀಟ್ ಮಾಡಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸಾ ಸಂತಸ ವ್ಯಕ್ತಪಡಿಸಿದ್ದಾರೆ. ಜಿ20 ಸದಸ್ಯತ್ವ ಸ್ವೀಕರಿಸಿರುವುದು ನಮಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾಗತಿಕ ಒಳಿತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯಬೇಕಾದ ಸಮಯ ಇದು: ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಂಗಾಪುರ ಭೇಟಿ ರದ್ದು – ನಾನು ಯಾರನ್ನೂ ದೂಷಿಸಲ್ಲ: ಕೇಜ್ರಿವಾಲ್

    ಸಿಂಗಾಪುರ ಭೇಟಿ ರದ್ದು – ನಾನು ಯಾರನ್ನೂ ದೂಷಿಸಲ್ಲ: ಕೇಜ್ರಿವಾಲ್

    ನವದೆಹಲಿ: ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡದೇ ಇರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಈ ವಿಚಾರವಾಗಿ ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದ್ದಾರೆ.

    ನನ್ನ ಪ್ರಯಾಣದ ಪ್ರಸ್ತಾಪವನ್ನು ರಾಷ್ಟ್ರ ರಾಜಧಾನಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ತಿರಸ್ಕರಿಸಿದ್ದಾರೆ. ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಿ, ನನ್ನ ಅಭಿಪ್ರಾಯ ಹಾಗೂ ಭಾರತದಲ್ಲಿ ನಡೆಯುತ್ತಿರುವ ಕೆಲಸಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ಅನುಮತಿ ಸಿಕ್ಕಿದ್ದರೆ ಚೆನ್ನಾಗಿರುತ್ತಿತ್ತು. ಆದರೂ ನಾನು ಈ ವಿಚಾರವಾಗಿ ಯಾರನ್ನೂ ದೂಷಿಸುವುದಿಲ್ಲ ಎಂದಿದ್ದಾರೆ.

    ನಿನ್ನೆಯಷ್ಟೇ ದೆಹಲಿ ಸರ್ಕಾರ ಸಿಂಗಾಪುರ ಭೇಟಿಗೆ ಅನುಮತಿ ನೀಡದ್ದಕ್ಕೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದು ದೇಶಕ್ಕೆ ಅವಮಾನ ತಂದಿದೆ. ಪ್ರಯಾಣದ ವಿಧಿ ವಿಧಾನಗಳನ್ನು ಪೂರ್ಣಗೊಳಿಸಲು ಜುಲೈ 20 ಕೊನೆಯ ದಿನಾಂಕವಾಗಿದ್ದು, ಅದೀಗ ಮೀರಿ ಹೋಗಿದೆ. ಈಗಾಗಲೇ ಅನುಮತಿಗೆ ಅತ್ಯಂತ ವಿಳಂಬವಾಗಿದೆ ಎಂದು ದೆಹಲಿ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಇದನ್ನೂ ಓದಿ: ಭಾರೀ ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

    ಕೇಜ್ರಿವಾಲ್ ಅವರು ಸಿಂಗಾಪುರಕ್ಕೆ ಭೇಟಿ ನೀಡಿದರೆ, ಮುಂದೆ ದೇಶ ಅವಮಾನ ಎದುರಿಸಬೇಕಾಗುತ್ತದೆ ಎಂಬ ಭಯದಲ್ಲಿ ಕೇಂದ್ರ ಅವರ ಪ್ರಯಾಣಕ್ಕೆ ತಡೆಯೊಡ್ಡಿದೆ ಎಂದು ಕೇಜ್ರಿವಾಲ್ ನೇತೃತ್ವದ ಸರ್ಕಾರ ತಿಳಿಸಿದೆ. ಆದರೂ ಇದೀಗ ಕೇಜ್ರಿವಾಲ್ ತಾವೇ ಈ ವಿಚಾರವಾಗಿ ಯಾರನ್ನೂ ದೂಷಿಸಲ್ಲ ಎಂದಿದ್ದಾರೆ. ಇದನ್ನೂ ಓದಿ: ಗಿಫ್ಟ್‌ ಸಿಟಿಯಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ವಿನಿಮಯ ಕೇಂದ್ರಕ್ಕೆ ಚಾಲನೆ – ವಿಶೇಷತೆ ಏನು?

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಷರೀಫ್-ಮೋದಿ ಭೇಟಿ ಸಾಧ್ಯತೆ

    ಶೀಘ್ರವೇ ಷರೀಫ್-ಮೋದಿ ಭೇಟಿ ಸಾಧ್ಯತೆ

    ನವದೆಹಲಿ: ಅಪರೂಪದ ವರದಿಯಂತೆ ಭಾರತ ಹಾಗೂ ಪಾಕಿಸ್ತಾನದ ಪ್ರಧಾನಿಗಳು ಶೀಘ್ರವೇ ಭೇಟಿಯಾಗಲಿದ್ದಾರೆ. ಉಜ್ಬೇಕಿಸ್ತಾನದಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

    ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಪ್ರಧಾನ ಕಾರ್ಯದರ್ಶಿ ಜಾಂಗ್ ಮಿಂಗ್ ಶುಕ್ರವಾರ 3 ದಿನಗಳ ಕಾಲ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದು, ಸೆಪ್ಟೆಂಬರ್ 15-16 ರಂದು ಉಜ್ಬೇಕಿಸ್ತಾನದ ಸಮರ್‌ಕಂಡ್‌ನಲ್ಲಿ ನಡೆಯಲಿರುವ ಎಸ್‌ಸಿಒ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಆಹ್ವಾನಿಸಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ದೇಶದಲ್ಲಿ ಮಂಕಿಪಾಕ್ಸ್ ಭೀತಿ – ಆತಂಕ ಹೆಚ್ಚಿಸಿದ ಆಫ್ರಿಕನ್ ಹಂದಿಜ್ವರ

    ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪಾಕಿಸ್ತಾನ ಮತ್ತು ಭಾರತದ ಪ್ರಧಾನ ಮಂತ್ರಿಗಳು ಮುಖಾಮುಖಿಯಾಗುವ ಅವಕಾಶ ಇಲ್ಲಿ ಒದಗಿಬರುವ ಸಾಧ್ಯತೆಯಿರುತ್ತದೆ. ಒಂದು ವೇಳೆ ಇಬ್ಬರೂ ಪ್ರಧಾನಿಗಳು ಭೇಟಿಯಾದಲ್ಲಿ, ಕಳೆದ 6 ವರ್ಷಗಳಲ್ಲೇ ಮೊದಲ ಬಾರಿಗೆ ಇಬ್ಬರೂ ಪ್ರಧಾನಿಗಳು ಭೇಟಿಯಾದಂತಾಗುತ್ತದೆ. ಇದನ್ನೂ ಓದಿ: ಚೀನಾದಿಂದ ಪಾಲಿಸ್ಟರ್‌ ಧ್ವಜ ಆಮದು ಮಾಡಿಕೊಂಡು ರಾಷ್ಟ್ರಧ್ವಜ, ಖಾದಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದು ಕಿಡಿ

    ಚೀನಾ, ಪಾಕಿಸ್ತಾನ, ರಷ್ಯಾ, ಭಾರತ, ತಜಕಿಸ್ತಾನ, ಉಜ್ಬೇಕಿಸ್ತಾನ, ಕಿರ್ಗಿಸ್ತಾನ ಮತ್ತು ಕಝಾಕಿಸ್ತಾನ ದೇಶಗಳು ಎಸ್‌ಸಿಒ ಸದಸ್ಯತ್ವ ಹೊಂದಿವೆ. ಈ ಸಂಘಟನೆ ಸಾಮರ್ಥ್ಯ ಹಾಗೂ ಅಧಿಕಾರವನ್ನು ಹೆಚ್ಚಿಸಲು, ದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು, ಬಡತನವನ್ನು ಕಡಿಮೆ ಮಾಡಲು ಹಾಗೂ ಆಹಾರ ಭದ್ರತೆಯನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮಾಡುತ್ತವೆ.

    Live Tv
    [brid partner=56869869 player=32851 video=960834 autoplay=true]

  • ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ಆಗಸ್ಟ್ 1 ರಂದು ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ ಅನುಮತಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ವಿ.ಕೆ ಸಕ್ಸೇನಾ ಗುರುವಾರ ತಿರಸ್ಕರಿಸಿದ್ದಾರೆ.

    ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆ ಮೇಯರ್‌ಗಳಿಗೆ ಮೀಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಸಿಎಂ ಹಾಜರಾಗುವುದು ಸರಿಯಲ್ಲ ಎಂದು ಸಕ್ಸೇನಾ ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ಶೃಂಗಸಭೆಯ ಭೇಟಿಗೆ ಅನುಮತಿ ನೀಡದಿದ್ದರೂ ಕೇಜ್ರಿವಾಲ್ ಸಿಂಗಾಪುರಕ್ಕೆ ಭೇಟಿ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ

    ಅನುಮತಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ವಿಷಯಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ನಿಮ್ಮ ಮಾತಿನಂತೆ ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ವಿದೇಶಿ ಭೇಟಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಹೆಚ್ಚಿನ ಭೇಟಿಗಳಲ್ಲಿ ರಾಜ್ಯದ ಪಟ್ಟಿಯಲ್ಲಿ ಹಾಗೂ ಅಧಿಕಾರದ ವ್ಯಾಪ್ತಿಯಲ್ಲಿ ಬಾರದ ವಿಷಯಗಳನ್ನೇ ಚರ್ಚಿಸುತ್ತಾರೆ ಎಂದಿದ್ದಾರೆ.

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕಳೆದ ವಾರ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಿಂಗಾಪುರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

    ಕೇಂದ್ರ ತನಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡದೇ ಹೋದಾಗ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿ, ನಾನು ಅಪರಾಧಿಯಲ್ಲ, ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾನು ಅಪರಾಧಿಯಲ್ಲ: ಸಿಂಗಾಪುರ ಭೇಟಿಗೆ ಅನುಮತಿ ಸಿಗದೇ ಕೇಜ್ರಿವಾಲ್ ಅಸಮಾಧಾನ

    ನಾನು ಅಪರಾಧಿಯಲ್ಲ: ಸಿಂಗಾಪುರ ಭೇಟಿಗೆ ಅನುಮತಿ ಸಿಗದೇ ಕೇಜ್ರಿವಾಲ್ ಅಸಮಾಧಾನ

    ನವದೆಹಲಿ: ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ಭೇಟಿ ನೀಡಲು ಬಯಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಕೇಂದ್ರದ ಅನುಮತಿ ವಿಳಂಬವಾಗಿದೆ. ಇದರಿಂದ ಅಸಮಾಧಾನ ವ್ಯಕ್ತಪಡಿಸಿರುವ ಕೇಜ್ರಿವಾಲ್ ಇದರ ಹಿಂದೆ ರಾಜಕೀಯ ಕಾರಣವಿದೆ ಎಂದು ಆರೋಪಿಸಿದ್ದಾರೆ.

    ನಾನು ಅಪರಾಧಿಯಲ್ಲ, ನಾನು ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗಿಯಾಗುವುದೇ ಒಂದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಸಿಂಗಾಪುರ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಶೃಂಗಸಭೆಗೆ ಭೇಟಿ ನೀಡದಂತೆ ನನ್ನನ್ನು ಏಕೆ ತಡೆಯಲಾಗುತ್ತಿದೆ ಎಂಬುದು ನನ್ನ ತಿಳುವಳಿಕೆಯನ್ನೇ ಮೀರಿದ ವಿಚಾರ. ದೇಶದ ಆಂತರಿಕ ಭಿನ್ನಾಭಿಪ್ರಾಯಗಳು ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸಬಾರದು. ಈ ಭೇಟಿ ಇಡೀ ದೇಶಕ್ಕೆ ಹೆಮ್ಮೆ ತಂದು ಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: 7,500 ಭಾರತೀಯ ಸೈನಿಕರಿಗೆ ಆಭರಣ ಸಂಸ್ಥೆಯಿಂದ ಉಂಗುರ ಗಿಫ್ಟ್

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕೇಜ್ರಿವಾಲ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಆದರೆ ಅವರ ಭೇಟಿಗೆ ಇನ್ನೂ ಅನುಮತಿ ಸಿಕ್ಕಿಲ್ಲ.

    ಜಾಗತಿಕ ಶೃಂಗಸಭೆಯಲ್ಲಿ ದೆಹಲಿ ಮಾದರಿಯನ್ನು ಪ್ರಸ್ತುತಪಡಿಸಲು ಸಿಂಗಾಪುರ ಸರ್ಕಾರ ನಮ್ಮನ್ನು ಆಹ್ವಾನಿಸಿದೆ. ಶೃಂಗಸಭೆಯಲ್ಲಿ ವಿಶ್ವದ ಅನೇಕ ದೊಡ್ಡ ನಾಯಕರ ಮುಂದೆ ದೆಹಲಿ ಮಾದರಿಯನ್ನು ಪ್ರಸ್ತುತಪಡಿಸಬೇಕಾಗಿದೆ. ಇಂದು ಇಡೀ ಜಗತ್ತು ದೆಹಲಿ ಮಾದರಿಯ ಬಗ್ಗೆ ತಿಳಿದುಕೊಳ್ಳಲು ಬಯಸುತ್ತದೆ. ಈ ಆಹ್ವಾನ ದೇಶಕ್ಕೆ ಹೆಮ್ಮೆ ಹಾಗೂ ಗೌರವದ ವಿಷಯವಾಗಿದೆ ಎಂದು ಕೇಜ್ರಿವಾಲ್ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    Live Tv
    [brid partner=56869869 player=32851 video=960834 autoplay=true]

  • I2U2 ಶೃಂಗಸಭೆ – 6 ಕ್ಷೇತ್ರಗಳಲ್ಲಿ 4 ದೇಶಗಳು ಜಂಟಿಯಾಗಿ ಹೂಡಿಕೆ

    I2U2 ಶೃಂಗಸಭೆ – 6 ಕ್ಷೇತ್ರಗಳಲ್ಲಿ 4 ದೇಶಗಳು ಜಂಟಿಯಾಗಿ ಹೂಡಿಕೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು I2U2(ಭಾರತ, ಇಸ್ರೇಲ್, ಅಮೆರಿಕ ಹಾಗೂ ಯುನೈಟೆಡ್ ಅರಬ್ ಎಮಿರೆಟ್ಸ್) ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್, ಇಸ್ರೇಲ್ ಪಿಎಂ ಯೈರ್ ಲ್ಯಾಪಿಡ್ ಹಾಗೂ ಯುನೈಟೆಡ್ ಅರಬ್ ಎಮಿರೆಟ್ಸ್‌ನ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

    ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಮೊದಲ ಶೃಂಗಸಭೆಯಿಂದಲೇ I2U2 ಸಕಾರಾತ್ಮಕ ಕಾರ್ಯಸೂಚಿಯನ್ನು ಸ್ಥಾಪಿಸಿದೆ. ನಾವು ವಿವಿಧ ವಲಯಗಳಲ್ಲಿ ಜಂಟಿ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೇವೆ ಹಾಗೂ ಮುಂದುವರಿಯಲು ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದೇವೆ ಎಂದು ಹೇಳಿದರು.

    I2U2 ಚೌಕಟ್ಟಿನ ದೇಶಗಳು ನೀರು, ಇಂಧನ, ಸಾರಿಗೆ, ಬಾಹ್ಯಾಕಾಶ, ಆರೋಗ್ಯ ಹಾಗೂ ಆಹಾರ ಭದ್ರತೆಯಂತಹ 6 ಪ್ರಮುಖ ಕ್ಷೇತ್ರಗಳಲ್ಲಿ ಜಂಟಿಯಾಗಿ ಹೂಡಿಕೆಯನ್ನು ಹೆಚ್ಚಿಸಲು ಒಪ್ಪಿಕೊಂಡಿದ್ದೇವೆ. I2U2ನ ದೃಷ್ಟಿ ಮತ್ತು ಕಾರ್ಯಸೂಚಿ ಪ್ರಗತಿಪರ ಮತ್ತು ಪ್ರಾಯೋಗಿಕವಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಮೋದಿ ತಿಳಿಸಿದರು. ಇದನ್ನೂ ಓದಿ: ಇತಿಹಾಸದ ಪುಟ ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ – ಕೊನೆಯ ಅಧಿವೇಶನಕ್ಕೆ ಸಿದ್ಧತೆ

    ಹೆಚ್ಚುತ್ತಿರುವ ಜಾಗತಿಕ ಅನಿಶ್ಚಿತತೆಯ ನಡುವೆ ನಮ್ಮ ಚೌಕಟ್ಟು ಪ್ರಾಯೋಗಿಕ ಸಹಕಾರಕ್ಕೆ ಉತ್ತಮ ಮಾದರಿಯಾಗಿದೆ. ನಮ್ಮ ಪರಸ್ಪರ ಸಹಕಾರ, ಶಕ್ತಿ, ಬಂಡವಾಳಗಳಿಂದ ನಮ್ಮ ಕಾರ್ಯಸೂಚಿಯನ್ನು ವೇಗಗೊಳಿಸಬಹುದು ಹಾಗೂ ಜಾಗತಿಕ ಆರ್ಥಿಕತೆಗೆ ಪ್ರಮುಖ ಕೊಡುಗೆಗಳನ್ನು ನೀಡಬಹುದು ಎಂದರು.

    ಈ ವೇಳೆ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಇಂದು ನಾವು ಎದುರಿಸುತ್ತಿರುವ ಬಹಮುಖ್ಯ ಸವಾಲುಗಳೆಂದರೆ ಹವಾಮಾನ ವೈಪರಿತ್ಯ ಹಾಗೂ ಬೆಳೆಯುತ್ತಿರುವ ಆಹಾರ ಕೊರತೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯಿಂದ ಇಂಧನ ಮಾರುಕಟ್ಟೆಯೂ ಹದಗೆಟ್ಟಿದೆ ಎಂದರು. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

    ಇದೀಗ I2U2 ಗುಂಪು ಮುಂದಿನ 3 ವರ್ಷಗಳಲ್ಲಿ ಜಂಟಿಯಾಗಿ ಹೂಡಿಕೆ ಮಾಡಿ, ಒಟ್ಟಿಗೆ ಅಭಿವೃದ್ಧಿಪಡಿಸಬಹುದಾದ ಯೋಜನೆಗಳಲ್ಲಿ ಕೆಲಸ ಮಾಡಲಿವೆ. ನಾವೆಲ್ಲರೂ ಜೊತೆಯಾಗಿ ದೊಡ್ಡ ಸಾಧನೆಯನ್ನು ಮಾಡಬಹುದಾಗಿದೆ ಎಂದು ಬೈಡನ್ ಹೇಳಿದರು.

    ಇಸ್ರೇಲ್ ಪ್ರಧಾನಿ ಯೈರ್ ಲ್ಯಾಪಿಡ್ ಮಾತನಾಡಿ, ನಾವು ಜಗತ್ತನ್ನು ಉತ್ತಮವಾಗಿ ಬದಲಿಸಲು ಬಯಸುತ್ತೇವೆ. ಇದನ್ನು ಸಾಧಿಸಲು ಸಂಪನ್ಮೂಲಗಳನ್ನು ಹೇಗೆ ಒಟ್ಟುಗೂಡಿಸಬೇಕು ಎಂದು ತಿಳಿದಿರುವ ದೇಶಗಳಿಂದ ಮಾತ್ರವೇ ಪರಿಹಾರ ಸಿಗಲು ಸಾಧ್ಯ ಎಂದರು.

    ಖಾಸಗಿ ಮಾರುಕಟ್ಟೆಯನ್ನು ಪಾಲುದಾರರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. 4 ವಿಭಿನ್ನ ದೇಶಗಳಾಗಿದ್ದರೂ ಮೂಲಸೌಕರ್ಯ ಅಭಿವೃದ್ಧಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪರಿಸರದ ಮೇಲೆ ಉಂಟಾಗುವ ಹಾನಿಯನ್ನು ಕಡಿಮೆ ಮಾಡುವುದು ಸೇರಿದಂತೆ ನಾವೆಲ್ಲರೂ ಒಂದೇ ಗುರಿಯನ್ನು ಹೊಂದಿದ್ದೇವೆ ಎಂಬುದು ಸ್ಪಷ್ಟವಾಗಿದೆ ಎಂದು ಇಸ್ರೇಲ್ ಪ್ರಧಾನಿ ತಿಳಿಸಿದರು.

    ಒಟ್ಟಿನಲ್ಲಿ I2U2 ಮೊದಲ ನಾಯಕರ ಸಭೆಯಲ್ಲಿ ಭಾರತ, ಇಸ್ರೇಲ್, ಅಮೆರಿಕ ಹಾಗೂ ಯುನೈಟೆಡ್ ಅರಬ್ ಎಮಿರೆಟ್ಸ್ ದೇಶಗಳು ಜಂಟಿಯಾಗಿ ನೀರು, ಶಕ್ತಿ, ಸಾರಿಗೆ, ಬಾಹ್ಯಾಕಾಶ, ಆರೋಗ್ಯ ಹಾಗೂ ಆಹಾರಕ್ಕಾಗಿ ಹೂಡಿಕೆ ಮಾಡುವ ಬಗ್ಗೆ ನಿರ್ಧರಿಸಿವೆ.

    Live Tv
    [brid partner=56869869 player=32851 video=960834 autoplay=true]

  • ‘I2U2’ ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ಮೋದಿ

    ‘I2U2’ ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು I2U2(ಇಂಡಿಯಾ, ಇಸ್ರೇಲ್, ಯುಎಸ್‍ಎ, ಯುಎಇ) ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಇಂದು ಭಾಗಿಯಾಗಲಿದ್ದಾರೆ.

    ಯುಎಸ್ ಅಧ್ಯಕ್ಷ ಜೋ ಬೈಡೆನ್, ಇಸ್ರೇಲ್ ಪಿಎಂ ಯೈರ್ ಲ್ಯಾಪಿಡ್ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

    ಒಕ್ಕೂಟದ ಚೌಕಟ್ಟಿನಡಿಯಲ್ಲಿ ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಜಂಟಿ ಆರ್ಥಿಕ ಯೋಜನೆಗಳ ಕುರಿತು ಈ ನಾಯಕರು ಚರ್ಚಿಸುವ ನಿರೀಕ್ಷೆಯಿದೆ. ಉಕ್ರೇನ್ ಸಂಘರ್ಷದಿಂದ ಉಂಟಾಗುವ ಜಾಗತಿಕ ಆಹಾರ ಮತ್ತು ಇಂಧನ ಬಿಕ್ಕಟ್ಟು ಕುರಿತು ಮಾತುಕತೆ ನಡೆಯಲಿದೆ. ಈ ಸಭೆಯು ಇಂದು ಸಂಜೆ 4 ಗಂಟೆಗೆ ನಡೆಯಲಿದೆ. 2021ರಲ್ಲಿ ‘I2U2’ ಅಸ್ತಿತ್ವಕ್ಕೆ ಬಂದಿದೆ. ಇದನ್ನೂ ಓದಿ:  ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್ 

    I2U2 grouping of India, Israel, UAE and US to hold first virtual summit next month

    ‘ಐ2ಯು2’ ಚೌಕಟ್ಟಿನೊಳಗೆ ಸಂಭವನೀಯ ಜಂಟಿ ಯೋಜನೆಗಳ ಬಗ್ಗೆ ಚರ್ಚೆಯಾಗುತ್ತೆ. ಆಯಾ ಪ್ರದೇಶಗಳಲ್ಲಿ ವ್ಯಾಪಾರ ಮತ್ತು ಹೂಡಿಕೆಯಲ್ಲಿ ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸಲು ಪರಸ್ಪರ ಆಸಕ್ತಿಯ ಇತರ ಸಾಮಾನ್ಯ ಕ್ಷೇತ್ರಗಳ ಕುರಿತು ಎಲ್ಲ ನಾಯಕರು ಚರ್ಚಿಸುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

    ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

    ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ದಾವೋಸ್ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರತಿ ಬಾರಿಯೂ ದಾವೋಸ್ ಆರ್ಥಿಕ ಶೃಂಗಸಭೆ ಜನವರಿಯಲ್ಲಿ ನಡೆಯುತ್ತದೆ. ಆದರೆ ಎರಡು ವರ್ಷಗಳಿಂದ ಕೋವಿಡ್-19 ಕಾರಣ ನಡೆದಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಹಿಂದೆ ನಮ್ಮ ರಾಜ್ಯದಿಂದ ದೇವೇಗೌಡರು, ಎಸ್‍ಎಂ ಕೃಷ್ಣ, ಯಡಿಯೂರಪ್ಪ ಭಾಗವಹಿಸಿದ್ದರು ಎಂದರು. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

    ಈ ಬಾರಿಯ ಶೃಂಗಸಭೆ ಕುತೂಹಲ ಹುಟ್ಟಿಸಿತ್ತು. ಕೋವಿಡ್ ಬಳಿಕ ಆರ್ಥಿಕ ಹಿಂಜರಿತ ಇತ್ತು. ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ದಾವೋಸ್ ಶೃಂಗ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆಗೆ ಹೆಚ್ಚು ಆಸಕ್ತಿ ನೀಡಿಲಾಗಿತ್ತು. ಅತೀ ಹೆಚ್ಚು ಆಕರ್ಷಣೆ ಆಗಿದ್ದು ಕರ್ನಾಟಕ. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.

    ಉದ್ಯಮಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಮಣ್ಣಿನ ಕುರಿತ ಒಂದು ಸಮಾಲೋಚನೆಯಲ್ಲೂ ನಾನು ಭಾಗವಹಿಸಿದ್ದೆ. ಹಲವು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನಿರ್ಧಾರಿದೆ. ದೇವನಹಳ್ಳಿ ಬಳಿ ಇವರು 10 ಎಕರೆ ಜಮೀನು ಖರೀದಿಸಿದ್ದಾರೆ. ಹಿಟಾಚಿ ಎನರ್ಜಿ ಸಂಸ್ಥೆಯೂ ಹೂಡಿಕೆಗೆ ಮುಂದಾಗಿದೆ. ಇವರು 2 ಸಾವಿರ ಇಂಜಿನಿಯರ್‌ಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

    ಸೀಮೆನ್ಸ್ ಹೆಲ್ದೀನಿಯರ್ಸ್ ಗ್ರೂಪ್‍ನವರು ಆರೋಗ್ಯ ಕ್ಷೇತ್ರದಲ್ಲಿ 1,600 ಕೋಟಿ ಬಂಡವಾಳ ಹೂಡುತ್ತಿದೆ. ಅನ್ ಇನ್ಬೇವ್ ಸಂಸ್ಥೆಯು ನಾನ್ ಆಲ್ಕೋಹಾಲಿಕ್ ಪಾನೀಯ ಉತ್ಪಾದನೆಗೆ ಮುಂದೆ ಬಂದಿದ್ದಾರೆ. ನೆಸ್ಲೆ ಸಂಸ್ಥೆಯವರ ಉದ್ಯಮ ಈಗಾಗಲೇ ನಂಜನಗೂಡಿನಲ್ಲಿದೆ. ಹೆಚ್ಚುವರಿಯಾಗಿ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನೆಸ್ಲೆ ಮುಂದಾಗಿದೆ. ದಸ್ಸಾಲ್ಸ್ ಸಿಸ್ಟಮ್ಸ್‍ನವರು 300 ಕೋಟಿ ರೂ. ಹೂಡಿಕೆಗೆ ಉತ್ಸುಕತೆ ತೋರಿದ್ದಾರೆ. ಮಿತ್ತಲ್ ಸಂಸ್ಥೆಯವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಹೇಳಿದರು.

    ಭಾರತಿ ಎಂಟರ್ ಪ್ರೈಸಸ್ ಮೆಗಾ ಡಾಟಾ ಸೆಂಟರ್ ತೆರೆಯಲು ಮುಂದಾಗಿದೆ. ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಕ್, ಐಬಿಎಂ, ಐಕಿಯ ಸ್ಟೋರ್ಸ್, ಆಕ್ಸಿಸ್ ಬ್ಯಾಂಕ್‍ಗಳು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಚರ್ಚಿಸಲಾಗಿದೆ. ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ರಾಜ್ಯಕ್ಕೆ ಒಟ್ಟು 59,350 ಕೋಟಿ ರೂಗಳ ಬಂಡವಾಳ ಹೂಡಿಕೆ ಆಕರ್ಷಿಸಲು ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ನವೆಂಬರ್‍ನಲ್ಲಿ ಎರಡು ಸಮ್ಮೇಳನಗಳು ನಡೆಯಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮ್ಮೇಳನ ಮತ್ತು ಬೆಂಗಳೂರು ಟೆಕ್ ಸಮ್ಮಿಟ್‍ಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದರು.

    ಇದೇ ವೇಳೆ ಲಕ್ಷ್ಮಿ ಮಿತ್ತಲ್ ಜೊತೆ ಆಪರೇಷನ್ ಕಮಲದ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಲಕ್ಷ್ಮಿ ಮಿತ್ತಲ್ ಅವರ ಜೊತೆ ಹೂಡಿಕೆ ಬಗ್ಗೆ ಮಾತಾಡಿದ್ದೇವೆ. ಆ ಮಾತುಕತೆ ಬಳಿಕ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇವೆ. ಉದ್ಯಮಿಗಳು ಸಹಜವಾಗಿ ರಾಜ್ಯಗಳ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳುತ್ತಾರೆ. ಎಲ್ಲ ಉದ್ಯಮಿಗಳೂ ರಾಜಕೀಯ ಪರಿಸ್ಥಿತಿ ಕೇಳಿದರು ಎಂದು ಹೇಳಿದರು.

    ನಂತರ ಯಾರೇ ಹೂಡಿಕೆಗೆ ಮುಂದಾದರೂ ಇಲ್ಲಿನ ಕಾನೂನು ಪಾಲಿಸಿ ಅವಕಾಶ ಕೊಡುತ್ತೇವೆ. ಲುಲು ಸಂಸ್ಥೆ ಜೊತೆ ಹೂಡಿಕೆ ಮಾಡಿಕೊಳ್ಳಬಾರದು ಅಂತ ಏನಿಲ್ಲ. ರಾಜಾಜಿನಗರದಲ್ಲಿರುವ ಲುಲು ಮಾರ್ಕೆಟ್ ಹಿಂದಿನ ಸರ್ಕಾರವಿದ್ದಾಗ ಬಂತು. ಅದು ಕಾನೂನು ಬದ್ಧವಾಗಿದೆಯಾ ಇಲ್ಲವೋ ಮಾಹಿತಿ ತರಿಸಿಕೊಳ್ಳುತ್ತೇನೆ. ದಾವೋಸ್ ಒಪ್ಪಂದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.