Tag: summons

  • ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ಆರೋಪ – ಭಾರತಕ್ಕೆ ಅಮೆರಿಕ ಕೋರ್ಟ್ ಸಮನ್ಸ್

    ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ಆರೋಪ – ಭಾರತಕ್ಕೆ ಅಮೆರಿಕ ಕೋರ್ಟ್ ಸಮನ್ಸ್

    ವಾಷಿಂಗ್ಟನ್: ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಹೂಡಿರುವ ಸಿವಿಲ್ ಮೊಕದ್ದಮೆ ಹಿನ್ನೆಲೆಯಲ್ಲಿ ಅಮೆರಿಕ ಕೋರ್ಟ್ (United States Court) ಭಾರತ ಸರ್ಕಾರಕ್ಕೆ (Indian Government ) ಸಮನ್ಸ್ (Summons) ಜಾರಿ ಮಾಡಿದೆ.

    ನ್ಯೂಯಾರ್ಕ್‍ನ ಸದರ್ನ್‌ನ ಜಿಲ್ಲಾ ನ್ಯಾಯಾಲಯದ ಸಮನ್ಸ್‌ನಲ್ಲಿ ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval), ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಉದ್ಯಮಿ ನಿಖಿಲ್ ಗುಪ್ತಾ ಅವರನ್ನು ಹೆಸರಿಸಲಾಗಿದೆ. ಸಮನ್ಸ್‌ನಲ್ಲಿ ಹೆಸರಿಸಿದವರು 21 ದಿನಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿದೆ.

    ಸಮನ್ಸ್‌ಗೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಸಮನ್ಸ್‌ನ ಪ್ರತಿಯನ್ನು ಹಂಚಿಕೊಂಡ ಪನ್ನು ಅವರ ಎಕ್ಸ್ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ. ಅಲ್ಲದೇ ಈ ವಿಷಯವು ಭಾರತ-ಯುಎಸ್ ಬಾಂಧವ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಮೂಲಭೂತ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್‍ನ ಮುಖ್ಯಸ್ಥ ಮತ್ತು ಅಮೆರಿಕ ಮತ್ತು ಕೆನಡಾದ ದ್ವಿ ಪೌರತ್ವವನ್ನು ಹೊಂದಿರುವ ಪನ್ನುನ್‍ನನು ಕೊಲ್ಲುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ನವೆಂಬರ್‌ನಲ್ಲಿ ಪತ್ರಿಕೆಯೊಂದು ವರದಿ ಮಾಡಿತ್ತು. ಬಳಿಕ ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿದ್ದರು.

    ಇದರ ಬೆನ್ನಲ್ಲೇ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಇದು ಕಳವಳಕಾರಿ ವಿಷಯ ಎಂದು ಹೇಳಿತ್ತು. ಅಲ್ಲದೇ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅವರು ಭಾರತವು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಇದು ಭಾರತ-ಅಮೆರಿಕದ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಒತ್ತಿ ಹೇಳಿದ್ದರು.

    ಪನ್ನುನ್ ಭಾರತೀಯ ನಾಯಕರ ವಿರುದ್ಧ ದ್ವೇಷ ಭಾಷಣ ಮತ್ತು ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಕೇಂದ್ರ ಸರ್ಕಾರ 2020ರಲ್ಲಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿತು.

  • ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಮತ್ತೆ ಸಮನ್ಸ್

    ಪೋಕ್ಸೋ ಪ್ರಕರಣದಲ್ಲಿ ಬಿಎಸ್‍ವೈಗೆ ಮತ್ತೆ ಸಮನ್ಸ್

    ಬೆಂಗಳೂರು: ಪೋಕ್ಸೋ ಕೇಸ್‍ನಲ್ಲಿ (POCSO case) ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ (B.S Yediyurappa) ಬೆಂಗಳೂರಿನ 1ನೇ ತ್ವರಿತಗತಿಯ ಕೋರ್ಟ್ ಸಮನ್ಸ್ ನೀಡಿದೆ.

    ಆರೋಪಪಟ್ಟಿಯನ್ನು ವಿಚಾರಣೆಗೆ ಪರಿಗಣಿಸಿದ ಕೋರ್ಟ್, ಜುಲೈ 15ರಂದು ಖುದ್ದಾಗಿ ಕೋರ್ಟ್‍ಗೆ ಹಾಜರಾಗುವಂತೆ ಬಿಎಸ್‍ವೈ ಹಾಗೂ ಇತರೆ ಆರೋಪಿಗಳಿಗೆ ಸಮನ್ಸ್ ನೀಡಿದೆ.

    ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಗೆ ಹಾಜರಾಗುವಂತೆ ಬಿಎಸ್‍ವೈಗೆ ನೋಟಿಸ್ ಕೊಟ್ಟಿದ್ದರಿಂದ ಅವರು ಕಾಲಾವಕಾಶ ಕೇಳಿದ್ದರು. ಬಳಿಕ ತನಿಖೆಗೆ ಹಾಜರಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು, ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಪಡೆದಿದ್ದರು. ನಂತರ ಮಾಜಿ ಸಿಎಂ ಮಧ್ಯಂತರ ಜಾಮೀನು ಪಡೆದಿದ್ದರು.

    ಜಾಮೀನು ಪಡೆದ ಬಳಿಕ ಕೋರ್ಟ್ ನಿರ್ದೇಶನದಂತೆ ಸಿಐಡಿ ಅಧಿಕಾರಿಗಳ ಎದುರು ಬಿಎಸ್‍ವೈ ತನಿಖೆಗೆ ಹಾಜರಾಗಿದ್ದರು. ತನಿಖೆ ನಡೆಸಿರುವಸಿಐಡಿ ಅಧಿಕಾರಿಗಳು ಈ ಹಿಂದೆ ಕೋರ್ಟ್‍ಗೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಯಡಿಯೂರಪ್ಪ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಎಂಬವರ ವಿರುದ್ಧ ಸಿಐಡಿ ಅಧಿಕಾರಿಗಳು 1ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

  • ಎಎಪಿ ಸಚಿವೆ ಅತಿಶಿಗೆ ಕೋರ್ಟ್ ಸಮನ್ಸ್

    ಎಎಪಿ ಸಚಿವೆ ಅತಿಶಿಗೆ ಕೋರ್ಟ್ ಸಮನ್ಸ್

    ನವದೆಹಲಿ: ಬಿಜೆಪಿಯ ಮಾಧ್ಯಮ ಮುಖ್ಯಸ್ಥ ಪ್ರವೀಣ್ ಶಂಕರ್ ಕಪೂರ್ (Praveen Shankar Kapoor) ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸಚಿವೆ, ಎಎಪಿ ನಾಯಕಿ ಅತಿಶಿಗೆ ಸಮನ್ಸ್ ನೀಡಿದೆ. ಜೂನ್ 29 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.

     ಆಪ್ ಶಾಸಕರಿಗೆ ಬಿಜೆಪಿ ಲಂಚ ನೀಡಿ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಅತಿಶಿ (AAP Minister Atishi) ಆರೋಪಿಸಿದ್ದರು. ಈ ಹೇಳಿಕೆ ವಿರುದ್ಧ ಪ್ರವೀಣ್ ಶಂಕರ್ ಕಪೂರ್ ಮಾನನಷ್ಟ ಮೊಕದಮ್ಮೆ ದಾಖಲಿಸಿದ್ದರು. ಅತಿಶಿ ಹೇಳಿಕೆಯಿಂದ ಬಿಜೆಪಿ ಪಕ್ಷದ ಪ್ರತಿಷ್ಠೆಗೆ ಹಾನಿಯಾಗಿದೆ ಎಂದು ಅವರು ದೂರಿದ್ದರು. ಈ ಆರೋಪಗಳನ್ನು ಪರಿಗಣಿಸಿದ ಕೋರ್ಟ್‌, ಅತಿಶಿಯನ್ನು ಆರೋಪಿ ಎಂದು ಗುರುತಿಸಿ ಜೂನ್ 29 ರಂದು ಹಾಜರಾಗುವಂತೆ ಆದೇಶಿಸಿದೆ.

    ಈ ಬಗ್ಗೆ ವಾದ ಮಂಡಿಸಿದ್ದ ಕಪೂರ್ ಪರ ವಕೀಲರು, ಬಿಜೆಪಿಯು 7 ಮಂದಿ ಎಎಪಿ ಶಾಸಕರನ್ನು ಸಂಪರ್ಕಿಸಿದೆ ಮತ್ತು ಪಕ್ಷವನ್ನು ಬದಲಾಯಿಸಲು ಅವರಿಗೆ 25 ಕೋಟಿ ರೂಪಾಯಿಗಳನ್ನು ನೀಡುತ್ತಿದೆ ಎಂದು ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಆರೋಪಿಸಿದ್ದಾರೆ. ಎಎಪಿ ನಾಯಕರು ತಮ್ಮ ಆರೋಪಗಳನ್ನು ರುಜುವಾತುಪಡಿಸಲು ಮತ್ತು ಸಾಕ್ಷ್ಯಗಳನ್ನು ಒದಗಿಸಲು ವಿಫಲರಾಗಿದ್ದಾರೆ. ಇದನ್ನೂ ಓದಿ: ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ಪಕ್ಷದ ಸಹೋದ್ಯೋಗಿಗಳಾದ ಸೌರಭ್ ಭಾರದ್ವಾಜ್, ರಾಘವ್ ಚಡ್ಡಾ ಮತ್ತು ದುರ್ಗೇಶ್ ಪಾಠಕ್ ಅವರನ್ನು ಮುಂದಿನ ಎರಡು ತಿಂಗಳಲ್ಲಿ ಬಂಧಿಸಲಾಗುವುದು ಎಂದು ಎಎಪಿ ನಾಯಕಿ ಹೇಳಿದ್ದಾರೆ. ತನ್ನ ಅರ್ಜಿಯಲ್ಲಿ ಅತಿಶಿ ಮಾಡಿದ ಟೀಕೆಗಳನ್ನು ಹಿಂಪಡೆಯಬೇಕು ಮತ್ತು ಟಿವಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು.

  • ಮುಂಬೈ ಪೊಲೀಸರಿಂದ ನಟಿ ತಮನ್ನಾಗೆ ಸಮನ್ಸ್

    ಮುಂಬೈ ಪೊಲೀಸರಿಂದ ನಟಿ ತಮನ್ನಾಗೆ ಸಮನ್ಸ್

    ಕ್ರಮವಾಗಿ ಐಪಿಎಲ್ (IPL) ಪಂದ್ಯವನ್ನು ಪ್ರಸಾರ ಮಾಡಿದ್ದಕ್ಕಾಗಿ ದಕ್ಷಿಣದ ಹೆಸರಾಂತ ತಾರೆ ತಮನ್ನಾ ಭಾಟಿಯಾಗೆ (Tamannaah Bhatia) ಮುಂಬೈ ಸೈಬರ್ ಪೊಲೀಸ್ ಸಮನ್ಸ್ (Summons) ಜಾರಿ ಮಾಡಿದ್ದಾರೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

    2023ರಲ್ಲಿ ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದ್ದು, ವಯಾಕಾಮ್‌ಗೆ ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ನಟ ಸಂಜಯ್ ದತ್ ಅವರಿಗೆ ಸಮನ್ಸ್ ನೀಡಲಾಗಿತ್ತು. ವಿದೇಶ ಪ್ರವಾಸ ಹಿನ್ನಲೆ ವಿಚಾರಣೆಯಿಂದ ವಿನಾಯಿತಿ ಕೇಳಿದ್ದರು ಸಂಜಯ್ ದತ್.

     

    ಐಪಿಎಲ್ ಪಂದ್ಯ ಪ್ರಸಾರದ ಹಕ್ಕನ್ನು ಹೊಂದಿರುವ ವಯಾಕಾಮ್, ಈ ನಟ ನಟಿಯರ ವಿರುದ್ಧ ದೂರು ನೀಡಿತ್ತು. ದೂರಿಗೆ ಸಂಬಂಧಿಸಿದಂತೆ ಈ ಹಿಂದೆ ಸಂಜಯ್ ದತ್ ಅವರಿಗೆ, ಈಗ ತಮನ್ನಾಗೆ ನೋಟಿಸ್ ಜಾರಿ ಮಾಡಿದೆ.

  • ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್

    ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್

    ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ (Excise Policy Case) ಜಾಮೀನು (Bail) ಪಡೆದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ (ED) ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ದೆಹಲಿ ಜಲಮಂಡಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾನುವಾರ ಮತ್ತೊಂದು ಸಮನ್ಸ್ (Summons) ಜಾರಿ ಮಾಡಿದೆ.

    ಹಿಂದಿನ ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಎರಡು ದೂರುಗಳನ್ನು ನೀಡಿತ್ತು. ಶನಿವಾರ ಇ.ಡಿ ನೀಡಿದ ದೂರಿನ ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್ ಶನಿವಾರ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಹಾಗೂ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್‌ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್‌ ರಾವತ್‌

    ಒಂಬತ್ತನೇ ಸಮನ್ಸ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಗಾಯಕ ಸಿಧು ಮೂಸೆವಾಲಾ ತಾಯಿ

     

  • ಆರನೇ ಸಮನ್ಸ್‌ಗೂ ಗೈರಾದ ಸಿಎಂ ಅರವಿಂದ್ ಕೇಜ್ರಿವಾಲ್

    ಆರನೇ ಸಮನ್ಸ್‌ಗೂ ಗೈರಾದ ಸಿಎಂ ಅರವಿಂದ್ ಕೇಜ್ರಿವಾಲ್

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Excise Policy) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ED) ನೀಡಿದ ಆರನೇ ಸಮನ್ಸ್‌ಗೂ (Summons) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿಚಾರಣೆಗೆ ಹಾಜರಾಗಿಲ್ಲ. ಪ್ರಕರಣ ಕೋರ್ಟ್‌ನಲ್ಲಿರುವಾಗ ಸಮನ್ಸ್ ನೀಡುವುದು ಕಾನೂನು ಬಾಹಿರ ಎಂದು ಆಪ್ ಸಮರ್ಥಿಸಿಕೊಂಡಿದೆ.

    ಜಾರಿ ನಿರ್ದೇಶನಾಲಯವೇ ನ್ಯಾಯಾಲಯದ ಮೊರೆ ಹೋಗಿದ್ದು, ಮತ್ತೆ ಮತ್ತೆ ಸಮನ್ಸ್ ಕಳುಹಿಸುವ ಬದಲು ಇಡಿ ನ್ಯಾಯಾಲಯದ ತೀರ್ಪಿಗಾಗಿ ಕಾಯಬೇಕು ಎಂದು ಪಕ್ಷ ಹೇಳಿದೆ. ಫೆಬ್ರವರಿ 14 ರಂದು, ತನಿಖಾ ಸಂಸ್ಥೆಯು ಕೇಜ್ರಿವಾಲ್‌ಗೆ ತನ್ನ ಆರನೇ ಸಮನ್ಸ್ ಜಾರಿ ಮಾಡಿತು. ಫೆಬ್ರವರಿ 19 ರಂದು ತನ್ನ ಮುಂದೆ ಹಾಜರಾಗುವಂತೆ ಕೇಳಿಕೊಂಡಿತು. ಇದನ್ನೂ ಓದಿ: ಕೇಂದ್ರ ಸರ್ಕಾರದ ಜೊತೆ ಚರ್ಚೆ, ಐದು ಬೆಳೆಗೆ ಬೆಂಬಲ ಬೆಲೆ ಖಾತರಿ ಕಾನೂನು ಪ್ರಸ್ತಾವನೆ

    ಕೇಜ್ರಿವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್‌ಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 174 ರ ಅಡಿಯಲ್ಲಿ ತನಿಖಾ ಸಂಸ್ಥೆ ದೂರು ದಾಖಲಿಸಿದೆ. ಕೇಜ್ರಿವಾಲ್ ಸಮನ್ಸ್‌ಗಳನ್ನು ತಪ್ಪಿಸಿರುವುದನ್ನು ನ್ಯಾಯಾಲಯವು ಗಮನಿಸಿದೆ. ಅರವಿಂದ್ ಕೇಜ್ರಿವಾಲ್ ಅವರು ಅಪರಾಧ ಎಸಗಿದ್ದಾರೆ ಎಂದು ನ್ಯಾಯಾಲಯ ಒಪ್ಪಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ; ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಬಿಜೆಪಿ ಸೇರ್ಪಡೆ

    ನ್ಯಾಯಾಲಯದ ಮುಂದಿರುವ ಪ್ರಶ್ನೆಯು ಸಮನ್ಸ್‌ಗಳ ಸಿಂಧುತ್ವದ ಬಗ್ಗೆ ಅಲ್ಲ. ಬದಲಿಗೆ ಕೇಜ್ರಿವಾಲ್ ಅವರು ಹೇಳಿದ ಮೂರು ಸಮನ್ಸ್‌ಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಕಾನೂನುಬಾಹಿರ ಕೃತ್ಯ ಎಂದು ಇಡಿ ಅಧಿಕಾರಿಗಳು ಆರೋಪಿಸಿದರು. ಕೇಜ್ರಿವಾಲ್ ಇದುವರೆಗಿನ ಎಲ್ಲಾ ತನಿಖಾ ಸಂಸ್ಥೆಯ ಸಮನ್ಸ್‌ಗಳನ್ನು ‘ಕಾನೂನುಬಾಹಿರ’ ಮತ್ತು ‘ರಾಜಕೀಯ ಪ್ರೇರಿತ’ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆಫರ್‌ ಒಪ್ಪಿಕೊಂಡರೆ ಮಾತ್ರ INDIA ದಲ್ಲಿ ಮುಂದುವರಿಕೆ- ಕಾಂಗ್ರೆಸ್‌ಗೆ ಎಸ್‌ಪಿ ಷರತ್ತು

    ಇತ್ತೀಚಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾದ ಅರವಿಂದ್ ಕೇಜ್ರಿವಾಲ್, ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯದ ಚರ್ಚೆ ನಡೆಯುತ್ತಿದೆ. ಅಧಿವೇಶನದಿಂದಾಗಿ ಅವರು ನ್ಯಾಯಾಲಯದ ಮುಂದೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಕೇಜ್ರಿವಾಲ್ ಮನವಿ ಆಲಿಸಿದ ನ್ಯಾಯಾಲಯವು ಮಾರ್ಚ್ 16 ರಂದು ಬೆಳಿಗ್ಗೆ 10 ಗಂಟೆಗೆ ದೈಹಿಕವಾಗಿ ಹಾಜರಾಗಲು ಮುಂದಿನ ದಿನಾಂಕವನ್ನು ನಿಗದಿಪಡಿಸಿದೆ. ಇದನ್ನೂ ಓದಿ: NDA ಸೇರುತ್ತಾರಾ ನವನಿರ್ಮಾಣ ಸೇನೆಯ ರಾಜ್‌ ಠಾಕ್ರೆ?

  • ನಟ ಸಾಹಿಲ್ ಖಾನ್ ಗೆ ಸಮನ್ಸ್ ಜಾರಿ ಮಾಡಿದ ಪೊಲೀಸ್

    ನಟ ಸಾಹಿಲ್ ಖಾನ್ ಗೆ ಸಮನ್ಸ್ ಜಾರಿ ಮಾಡಿದ ಪೊಲೀಸ್

    ಬಾಲಿವುಡ್ (Bollywood) ನಟ ಸಾಹಿಲ್ ಖಾನ್ (Sahil Khan) ಸೇರಿದಂತೆ ಇನ್ನೂ ಇಬ್ಬರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಮಹಾದೇವ್ ಬೆಟ್ಟಿಂಗ್ (Mahadev Betting) ಆಪ್ ಅ ವ್ಯವಹಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸಮನ್ಸ್ (Summons) ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

    ಬೆಟ್ಟಿಂಗ್ ಆಪ್ ನಲ್ಲಿ 15 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದ್ದು, ಆಪ್ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಭೋಪಾಲ್, ಮುಂಬೈ, ಕೋಲ್ಕತ್ತಾ ನಗರಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ಸಮಯದಲ್ಲಿ ಹವಾಲಾ ನಡೆದಿರುವುದು ಪತ್ತೆ ಆಗಿದೆ ಎನ್ನಲಾಗಿತ್ತು.

     

    ರವಿ ಉಪ್ಪಾಲ್ ಮತ್ತು ಸೌರಭ್ ಚಂದ್ರಕಾರ್ ಎನ್ನುವವರು ಈ ಆಪ್ ಅನ್ನು ದುಬೈನಿಂದ ನಡೆಸುತ್ತಿದ್ದರು. ಬೇನಾಮಿ ಖಾತೆಗಳಿಂದ ಅಕ್ರ ಹಣ ವರ್ಗಾವಣೆ ಆಗುತ್ತಿದೆ ಎಂದು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಇನ್ನೂ ಅನೇಕ ಸಿಲೆಬ್ರಿಟಿಗಳು ನೋಟಿಸ್ ಜಾರಿ ಆಗಿದೆ.

  • ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ಬಿಗ್ ರಿಲೀಫ್

    ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ಬಿಗ್ ರಿಲೀಫ್

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಪತ್ನಿ ಸುನೀತಾ ಕೇಜ್ರಿವಾಲ್ (Sunita Kejriwal) ವಿರುದ್ಧ ತೀಸ್ ಹಜಾರಿ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ಗೆ ದೆಹಲಿ ಹೈಕೋರ್ಟ್ (High Court) ತಡೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ (Justice Amit Bansal) ಫೆಬ್ರವರಿ 1 ರವರೆಗೂ ಮಧ್ಯಂತರ ತಡೆ ನೀಡಿದ್ದಾರೆ.

    ಎರಡು ವಿಭಿನ್ನ ಕ್ಷೇತ್ರಗಳಿಗೆ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಸೇರ್ಪಡೆಗೊಳ್ಳುವ ಮೂಲಕ 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು ಆಗಸ್ಟ್ 29ರಂದು ಸಮನ್ಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ

    2019ರಲ್ಲಿ ಸುನೀತಾ ಕೇಜ್ರಿವಾಲ್ ವಿರುದ್ಧ ಖುರಾನಾ ದೂರು ದಾಖಲಿಸಿದ್ದರು, ಸುನೀತಾ ದೆಹಲಿಯ ಸಾಹಿಬಾಬಾದ್ (ಗಾಜಿಯಾಬಾದ್ ಕ್ಷೇತ್ರ) ಮತ್ತು ಚಾಂದಿನಿ ಚೌಕ್‌ನ ಮತದಾರರ ಪಟ್ಟಿಯಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 17ಅನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು. ಇದನ್ನೂ ಓದಿ: ‘ಮೈ ಲಾರ್ಡ್’ ಹೇಳೋದು ಬಿಟ್ರೆ ನನ್ನ ಸಂಬಳದಲ್ಲಿ ಅರ್ಧ ಕೊಡ್ತೀನಿ: ಸುಪ್ರೀಂ ಜಡ್ಜ್

    ಸಮನ್ಸ್ ಜಾರಿ ಮಾಡಿರುವ ಆದೇಶವನ್ನು ಪ್ರಶ್ನಿಸಿ ಸುನೀತಾ ಕೇಜ್ರಿವಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರೆಬೆಕಾ ಜಾನ್ ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ವ್ಯಕ್ತಿಯೊಬ್ಬರು ಸುಳ್ಳು ಹೇಳಿಕೆ ನೀಡಿದರೆ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್ಗೆ ತಿಳಿಸಿದರು. ಸುಳ್ಳು ಘೋಷಣೆ ಮಾಡಲಾಗಿದೆ. ಸರಿಯಾದ ಮನಸ್ಸಿನ ಅನ್ವಯವಿಲ್ಲದೆ ಸಮನ್ಸ್ ನೀಡಲಾಗಿದೆ ಎಂದು ಜಾನ್ ವಾದಿಸಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ

    ಇದು ಖಾಸಗಿ ದೂರು. ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡುವ ಮೊದಲು, ಚುನಾವಣಾ ಆಯೋಗದಿಂದ ಮಾಹಿತಿ ಪಡೆಯಬೇಕು ಜಾನ್ ಹೇಳಿದ್ದರು. ರಾಜ್ಯದ ಪರ ಹಾಜರಾದ ವಕೀಲರು ದೂರನ್ನು ಮಿತಿಯಿಂದ ನಿರ್ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು

  • ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್

    ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್

    ನವದೆಹಲಿ: ಪ್ರಸ್ತುತ ರದ್ದಾಗಿರುವ ದೆಹಲಿಯ ಅಬಕಾರಿ ನೀತಿಗೆ (Delhi Excise Policy Case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸಮನ್ಸ್ ನೀಡಿದೆ.

    ಈ ವರ್ಷದ ಫೆಬ್ರವರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಕ್ಟೋಬರ್ 4 ರಂದು ಆಪ್ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇದೀಗ ಅದೇ ಪ್ರಕರಣದಲ್ಲಿ ದೆಹಲಿ ಸಿಎಂಗೆ ಇಡಿ ಸಮನ್ಸ್ ನೀಡಿದೆ. ನವೆಂಬರ್ 2 ರಂದು (ಗುರುವಾರ) ತನ್ನ ಕಚೇರಿಯಲ್ಲಿ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ತಿಳಿಸಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳ ಬಳಿಕ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಈ ಪ್ರಕರಣದಲ್ಲಿ 338 ಕೋಟಿ ರೂ. ಹಣ ವರ್ಗಾವಣೆ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಪಾಕ್‌ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್‌ ಪತನ

    ದೆಹಲಿ ಸರ್ಕಾರ 2021ರ ನವೆಂಬರ್ 17ರಂದು ಈ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರ ಆರೋಪದ ಮೇಲೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಯಿತು. ಈ ಅಬಕಾರಿ ನೀತಿ ಆರ್ಥಿಕ ಲಾಭವನ್ನು ಪಡೆಯುವ ಸಲುವಾಗಿ ಮದ್ಯದ ಪರವಾನಗಿಯನ್ನು ಅನರ್ಹರಿಗೂ ನೀಡುವಲ್ಲಿ ಸರ್ಕಾರ ಒಲವು ತೋರಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ದೆಹಲಿ ಸರ್ಕಾರ ಮತ್ತು ಸಿಸೋಡಿಯಾ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ವಿಜಯಲಕ್ಷ್ಮಿಗೆ ಶಾಕ್ ಕೊಟ್ಟ ಮದ್ರಾಸ್ ಹೈಕೋರ್ಟ್: ರಾಜಕಾರಣಿ ವಿರುದ್ಧದ ಆರೋಪಕ್ಕೆ ಸಮನ್ಸ್

    ನಟಿ ವಿಜಯಲಕ್ಷ್ಮಿಗೆ ಶಾಕ್ ಕೊಟ್ಟ ಮದ್ರಾಸ್ ಹೈಕೋರ್ಟ್: ರಾಜಕಾರಣಿ ವಿರುದ್ಧದ ಆರೋಪಕ್ಕೆ ಸಮನ್ಸ್

    ಮಿಳು ನಾಡಿನ ಪ್ರಸಿದ್ಧ ರಾಜಕಾರಣಿ ಸೀಮನ್ ವಿರುದ್ಧ ಗರ್ಭಪಾತ ಮತ್ತು ಲೈಂಗಿಕ ಆರೋಪಗಳನ್ನು ಮಾಡಿದ್ದ ನಟಿ ವಿಜಯಲಕ್ಷ್ಮಿ, ಇದೀಗ ತಾವೇ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. 2011ರಲ್ಲಿ ಸೀಮನ್ ತಮ್ಮನ್ನು ಮದುವೆಯಾಗಿ, ಹಲವಾರು ರೀತಿಯ ಹಿಂಸೆಗಳನ್ನು ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದರು. ಆನಂತರ 2012ರಲ್ಲಿ ವಿಜಯಲಕ್ಷ್ಮಿ ದೂರು ಹಿಂಪಡೆದಿದ್ದರು. ಆದರೂ, ಇತ್ತೀಚೆಗಷ್ಟೇ ಹಳೆಯ ದೂರನ್ನು ಮರುಪರೀಶಿಲಿಸಬೇಕು ಎಂದು ಮನವಿ ಮಾಡಿದ್ದರು. ಹಾಗಾಗಿ ಕೇಸ್ ಮತ್ತೆ ಕೋರ್ಟ್ ಮೆಟ್ಟಿಲು ಏರಿತ್ತು. ಸೀಮನ್‍ ಗೆ ನೋಟಿಸ್ ಕೂಡ ಜಾರಿಯಾಗಿತ್ತು.

    ಇತ್ತೀಚೆಗಷ್ಟೇ ನಟಿ ವಿಜಯಲಕ್ಷ್ಮಿ ಮತ್ತೆ ದೂರನ್ನು ವಾಪಸ್ಸು ಪಡೆದು, ಸೀಮನ್ ವಿರುದ್ಧ ನನಗೆ ಸೋಲಾಗಿದೆ. ನಾನು ಸೋಲು ಒಪ್ಪಿಕೊಂಡು ಕೇಸ್ ವಾಪಸ್ಸು ಪಡೆಯುತ್ತಿದ್ದೇನೆ. ಅವರ ರಾಜಕೀಯ ಭವಿಷ್ಯ ಉಜ್ವಲವಾಗಲಿ. ನಾನು ತಮಿಳು ನಾಡಿನಲ್ಲಿ ಇರಲಾರೆ ಎಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಕೇಸ್ ಹಿಂಪಡೆದ ವಿಚಾರವನ್ನು ಪೊಲೀಸರು ಕೋರ್ಟ್ ಗೆ ಸಲ್ಲಿಸಿದ್ದರು. ಹೀಗಾಗಿ ಕೋರ್ಟ್ ವಿಜಯಲಕ್ಷ್ಮಿಗೆ ಸೆಪ್ಟೆಂಬರ್ 29ಕ್ಕೆ ಕೋರ್ಟಿಗೆ ಹಾಜರಾಗುವಂತೆ  ಮದ್ರಾಸ್ ಹೈಕೋರ್ಟ್ (Madras High Court) ಸಮನ್ಸ್ ನೀಡಿದೆ.

    ಏನಿದು ಪ್ರಕರಣ?

    ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ(Vijayalakshmi), ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ (Seaman) ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದರು. ತಮ್ಮನ್ನು ಸೀಮನ್ ಮದುವೆಯಾಗಿ ಏಳು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ಅವರು ದೂರಿನಲ್ಲಿ ಬರೆದಿದ್ದರು.

    ತಿರುವಳ್ಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನೂ ನೀಡಿರುವ ನಟಿ ವಿಜಯಲಕ್ಷ್ಮಿ, ‘200ರಲ್ಲಿ ತಾವು  ನಾಮ್‍ ತಮಿಳರ್ ಕಟ್ಚಿ (ಎನ್.ಟಿಕೆ) ನಾಯಕರೂ ಆಗಿರುವ ಸೀಮನ್ ಜೊತೆ ಮದುವೆಯಾಗಿದ್ದೇನೆ.  ಆನಂತರ ಅವರು ನನಗೆ ಮೋಸ ಮಾಡುತ್ತಲೇ ಹೋದರು. ನನ್ನ ಚಿನ್ನಾಭರಣ ದೋಚಿದರು. ಏಳು ಬಾರಿ ಗರ್ಭಪಾತ ಮಾಡಿಸಿದ್ದಾರೆ. ಅವರಿಂದ ನನಗೆ ಲೈಂಗಿಕ ದೌರ್ಜನ್ಯ ಕೂಡ ಆಗಿದೆ’ ಎಂದು ಹೇಳಿಕೆ ದಾಖಲಿಸಿದ್ದರು.

    ಚೆನ್ನೈನ ಪೊಲೀಸ್ (Police) ಆಯುಕ್ತರ ಸಹಾಯ ಪಡೆದುಕೊಂಡು ದೂರು ದಾಖಲಿಸಿದ್ದ ವಿಜಯಲಕ್ಷ್ಮಿ ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದ್ದರು. ಅಲ್ಲದೇ, ಫೇಸ್ ಬುಕ್ ಲೈವ್ ಗೆ ಬಂದು, ಈ ವಿಚಾರವನ್ನೂ ಮಾತನಾಡಿದ್ದರು. ದೂರು ಸ್ವೀಕರಿಸಿರುವ ಪೊಲೀಸ್ ಅಧಿಕಾರಿಗಳು ಸೀಮನ್ ಅವರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದ್ದರು. ಅಷ್ಟರಲ್ಲಿ ವಿಜಯಲಕ್ಷ್ಮಿ ದೂರು ವಾಪಸ್ಸು ಪಡೆದರು.

     

    ಈ ಘಟನೆಯ ಕುರಿತು ವಿಜಯಲಕ್ಷ್ಮಿ ಪರ ಹೋರಾಟ ಮಾಡುತ್ತಿರುವ ತಮಿಳರ್ ಮುನ್ನೆಟ್ರ ಪಡೈಯ ಅಧ್ಯಕ್ಷೆ ವೀರಲಕ್ಷ್ಮಿ ಕೂಡ ಪ್ರತಿಕ್ರಿಯೆ ನೀಡಿದ್ದು, ಹಲವಾರು ವರ್ಷಗಳಿಂದ ಈ ಕುರಿತು ಹೋರಾಟ ಮಾಡುತ್ತಿದ್ದೇವೆ. ಅವರು ಪ್ರಭಾವಿ ರಾಜಕಾರಣಿ ಆಗಿರುವುದರಿಂದ ನ್ಯಾಯ ಸಿಗುತ್ತಿಲ್ಲ. ಈ ಬಾರಿ ನಮಗೆ ಶಿಕ್ಷೆ ಕೊಡಿಸುತ್ತೇವೆ ಎಂಬ ನಂಬಿಕೆ ಬಂದಿದೆ ಎಂದಿದ್ದರು. ಈ ಎಲ್ಲ ಬೆಳವಣಿಗೆ ನಂತರ ವಿಜಯಲಕ್ಷ್ಮಿ ಕೇಸ್ ನಿಂದ ದೂರ ಉಳಿಯುವುದಾಗಿ ಘೋಷಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]