Tag: summons

  • ಖುದ್ದು ಕೋರ್ಟಿಗೆ ಹಾಜರಾಗುವಂತೆ ನಿರ್ಮಾಪಕ ಕುಮಾರ್, ಸುರೇಶ್ ಗೆ ಸಮನ್ಸ್

    ಖುದ್ದು ಕೋರ್ಟಿಗೆ ಹಾಜರಾಗುವಂತೆ ನಿರ್ಮಾಪಕ ಕುಮಾರ್, ಸುರೇಶ್ ಗೆ ಸಮನ್ಸ್

    ಕಿಚ್ಚ ಸುದೀಪ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ನಿರ್ಮಾಪಕರಾದ ಎನ್.ಎಂ. ಸುರೇಶ್ (N.M. Suresh) ಮತ್ತು ಎಂ.ಎನ್. ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮೊನ್ನೆಯಷ್ಟೇ ನಟ ಸುದೀಪ್ ಖುದ್ದು ಕೋರ್ಟಿಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.

    ಸುದೀಪ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ 13ನೇ ಎಸಿಎಂಎಂ ಕೋರ್ಟ್ ಆರೋಪಿಗಳ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವುದರ ಜೊತೆಗೆ ಆಗಸ್ಟ್ 26ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ (Summons) ಜಾರಿ ಮಾಡಿದೆ.

    ಈವರೆಗೂ ಆಗಿದ್ದೇನು?

    ನಿರ್ಮಾಪಕ ಕುಮಾರ್ ಮತ್ತು ನಟ ಸುದೀಪ್‌ ನಡುವೆ ಜಟಾಪಟಿ ಮತ್ತೊಂದು ಹಂತ ತಲುಪಿದೆ. ಮೊನ್ನೆಯಷ್ಟೇ ಸುದೀಪ್ ಈ ವಿಚಾರವಾಗಿ ಕೋರ್ಟಿಗೆ ಹಾಜರಾಗಿದ್ದರು. ಸುದೀಪ್ ಅವರ ಹೇಳಿಕೆಯನ್ನು ಆಲಿಸಿದ್ದ 13ನೇ ಎಸಿಎಂಎಂ ಕೋರ್ಟನ ನ್ಯಾ.ವೆಂಕಣ್ಣ ಬಸಪ್ಪ ಹೊಸಮನಿ ಅವರು ತೀರ್ಪು ಕಾಯ್ದಿರಿಸಿದ್ದರು. ನಿನ್ನೆಯಷ್ಟೇ ತೀರ್ಪು ಪ್ರಕಟವಾಗಿದ್ದು, ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ‌ ಅಂಗೀಕಾರವಾಗಿದೆ. ಜೊತೆಗೆ ನಿರ್ಮಾಪಕರಾದ ಎಂ.ಎನ್.ಕುಮಾರ್ ಹಾಗೂ ಸುರೇಶ್‌ಗೆ ಸಮನ್ಸ್  ಜಾರಿಯಾಗಿದೆ.

    ನಿರ್ಮಾಪಕ ಎಂ.ಎನ್‌. ಕುಮಾರ್‌ (M.n Kumar) ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಿ ನಟ ಸುದೀಪ್‌ (Sudeep) ತಮ್ಮ ಹೇಳಿಕೆಯನ್ನು ನಿನ್ನೆ ದಾಖಲಿಸಿದ್ದರು. ಹಲವು ಫೋಟೋಗಳೊಂದಿಗೆ ಕೋರ್ಟ್‌ ಮುಂದೆ ದಾಖಲೆಗಳನ್ನೂ ಅವರು ಸಲ್ಲಿಸಿದ್ದರು.

    13ನೇ ಎಸಿಎಂಎಂ ಕೋರ್ಟ್‌ ಮುಂದೆ ಗುರುವಾರ ಹಾಜರಾದ ನಟ ಸುದೀಪ್‌, ತಾವು ಹೂಡಿದ್ದ ಮಾನನಷ್ಟ ಮೊಕದ್ದಮೆ ಬಗ್ಗೆ ಹೇಳಿಕೆ ದಾಖಲಿಸಿದ್ದರು. ನ್ಯಾ. ವೆಂಕಣ್ಣ ಬಸಪ್ಪ ಹೊಸಮನಿ ಎದುರು ಹೇಳಿಕೆ ದಾಖಲಿಸಿದ ನಟ, ಪ್ರಕರಣ ಸಂಬಂಧ ರಾಜೀ ಆಗುವ ಪ್ರಮೇಯ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    ಸುದೀಪ್‌ (Sudeep) ಹೇಳಿಕೆ ದಾಖಲಿಸಿಕೊಳ್ಳುವ ವೇಳೆ ನ್ಯಾಯಾಧೀಶರು, ನಿರ್ಮಾಪಕರು ಕ್ಷಮಾಪಣೆ ಕೇಳಿದರೆ ಕ್ಷಮಿಸುತ್ತೀರಾ? ರಾಜೀ ಸಂಧಾನ ಮಾಡಿಕೊಂಡು ಕಕ್ಷಿದಾರರಿಗೆ ಮಾದರಿಯಾಗುತ್ತೀರಾ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಉತ್ತರಿಸಿದ ಸುದೀಪ್‌, ಅವರ ಹೇಳಿಕೆಯಿಂದ ನಾನು ಇಷ್ಟು ವರ್ಷ ಕಷ್ಟಪಟ್ಟು ಗಳಿಸಿದ ವರ್ಚಸ್ಸಿಗೆ ಹಾನಿಯಾಗಿದೆ. ಒಬ್ಬ ಸುದೀಪ್‌ನನ್ನು ಬಗ್ಗಿಸಿದರೆ ಹಲವರನ್ನು ಬಗ್ಗಿಸಬಹುದೆಂದು ತಿಳಿದಿದ್ದಾರೆ ಎನ್ನುವ ಮೂಲಕ ತಾವು ರಾಜೀ ಸಂಧಾನಕ್ಕೆ ಸಿದ್ಧರಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು.

    ಎಂ.ಎನ್.ಕುಮಾರ್ (M.n Kumar) ಹೇಳಿಕೆಯನ್ನು ಎಂ.ಎನ್.ಸುರೇಶ್ ಬೆಂಬಲಿಸಿದ್ದಾರೆ. ಇವರ ಸುದ್ದಿಗೋಷ್ಠಿಯಿಂದ ಮಾನಹಾನಿಯಾಗಿದೆ. ಹಲವರು ನನ್ನನ್ನು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಂ.ಎನ್.ಕುಮಾರ್ ಮಾಡಿದ ಆರೋಪಗಳೆಲ್ಲ ಸುಳ್ಳು. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ಹಣದ ನೆರವಿನ ಆರೋಪವೂ ಸುಳ್ಳು. ಮನೆ ದುರಸ್ತಿಗೆ ಹಣ ನೀಡಿದ್ದಾಗಿ ಮಾಡಿದ ಆರೋಪ ಸುಳ್ಳು ಎಂದು ಪ್ರಾಮಾಣಿಕ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ಸುದೀಪ್‌ ದಾಖಲಿಸಿದ್ದರು.

     

    ವಕೀಲ ಅಜಯ್ ಕಡಕೋಳ್ ಅವರೊಡನೆ ನಟ ಸುದೀಪ್‌ ಕೋರ್ಟ್‌ಗೆ ಹಾಜರಾಗಿದ್ದರು. ಸುದೀಪ್‌ಗೆ ಆಪ್ತ ಚಂದ್ರಚೂಡ್, ನಿರ್ಮಾಪಕ ಜಾಕ್ ಮಂಜು (Jack Manju) ಸಾಥ್‌ ನೀಡಿದರು. ಸುದೀಪ್ ಪರ ವಕೀಲ ಅಜಯ್ ಮಾತನಾಡಿ, ಸೆಕ್ಷನ್ 300 ಅಡಿಯಲ್ಲಿ ಕೇಸ್ ಫೈಲ್ ಮಾಡಿದ್ದರು. ಕುಮಾರ್ ಮತ್ತು ಸುರೇಶ್ ವಿರುದ್ಧ ಕೇಸ್ ಫೈಲ್ ಮಾಡಿದ್ದರು. ಕುಮಾರ್ ಮತ್ತು ಸುರೇಶ್ ಮಾತನಾಡಿರೋ ದಾಖಲೆಗಳು ಹಾಗೂ ಪೋಟೋಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಜರಂಗದಳಕ್ಕೆ ಪಿಎಫ್‍ಐ ಹೋಲಿಕೆ –  ಖರ್ಗೆಗೆ ಕೋರ್ಟ್ ಸಮನ್ಸ್

    ಬಜರಂಗದಳಕ್ಕೆ ಪಿಎಫ್‍ಐ ಹೋಲಿಕೆ – ಖರ್ಗೆಗೆ ಕೋರ್ಟ್ ಸಮನ್ಸ್

    ಚಂಡೀಗಢ: ಬಜರಂಗದಳದ (Bajrang Dal) ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‍ನ (Punjab) ಸಂಗ್ರೂರ್‌ ಸ್ಥಳೀಯ ನ್ಯಾಯಾಲಯ (Local Court) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ (Mallikarjun Kharge) ಸಮನ್ಸ್ ಜಾರಿ ಮಾಡಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

    ಕಾಂಗ್ರೆಸ್ (Congress) ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯನ್ನು ಸೋಲಿಸಿದ್ದಕ್ಕೆ ಡಿವಿಎಸ್‌, ಕಟೀಲ್‌ ಫೋಟೋಗೆ ಚಪ್ಪಲಿ ಹಾರ ಹಾಕಿದ ಹಿಂದೂ ಕಾರ್ಯಕರ್ತರು

    ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ (Karnataka Election) ಪ್ರಚಾರದ ವೇಳೆ ಖರ್ಗೆಯವರು ಪಿಎಫ್‍ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

    ಹಿತೆಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ. ಇದನ್ನೂ ಓದಿ: ಹಿಂಡನ್‍ಬರ್ಗ್ ವರದಿ ವಿವಾದ – ತನಿಖೆಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ

  • ಸಮನ್ಸ್ ಹಿಡಿದು ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಸಮನ್ಸ್ ಹಿಡಿದು ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಚಿಕ್ಕಮಗಳೂರು: ಮಹಿಳೆಯೊಬ್ಬರು ಸಮನ್ಸ್ (Summons) ಹಿಡಿದು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ (Suicide) ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ (Mudigere) ನಡೆದಿದೆ.

    ಹಳೇ ಮೂಡಿಗೆರೆಯ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಮಹಿಳೆಯನ್ನು ರಕ್ಷಿಸಿ ಸಮಾಧಾನ ಮಾಡಿದ್ದಾರೆ. ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್ (Court) ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವರನಿಗೆ ಅಶ್ಲೀಲ ಫೋಟೋ ಕಳಿಸಿ ಮದುವೆ ನಿಲ್ಲಿಸಿದ ವಧುವಿನ ಮಾಜಿ ಪ್ರಿಯತಮ!

    ಮಹಿಳೆ ಹಾಗೂ ಅವರ ಅಕ್ಕನ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಳು. ಇದೇ ವಿಚಾರಕ್ಕೆ 2022 ರಲ್ಲಿ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಮಹಿಳೆ ನ್ಯಾಯಾಲಯಕ್ಕೆ ಹಾಜರಾಗಿರದ ಕಾರಣ ಸಮನ್ಸ್ ಜಾರಿಗೊಳಿಸಲಾಗಿತ್ತು.

    ಇದೀಗ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social media) ಹರಿದಾಡುತ್ತಿದೆ. ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘನೆ – AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

  • ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು

    ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು

    ರಾಯಚೂರು: ಸಿದ್ದರಾಮಯ್ಯ (Siddaramaiah) ಹರಕೆಯ ಕುರಿಯಾಗಿದ್ದಾರೆ. ಅವರು ಹರಕೆಯ ಕುರಿಯಾಗಬಾರದು. ಕಾಂಗ್ರೆಸ್‍ಗೆ (Congress) ದಮ್, ತಾಕತ್ ಇದ್ರೆ ಸಿದ್ದರಾಮಯ್ಯ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ ಎಂದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಸವಾಲು ಹಾಕಿದ್ದಾರೆ.

    ರಾಯಚೂರಿನ (Raichuru) ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya sankalpa yatre) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇವರಾಜ ಅರಸು (Devaraj Arasu), ನಿಜಲಿಂಗಪ್ಪ (Nijalingappa), ವೀರೇಂದ್ರ ಪಾಟೀಲ್, ಬಂಗಾರಪ್ಪ (Bangarappa) ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಂಡರೋ, ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ನಡೆಸಿಕೊಳ್ಳುತ್ತಿದೆ. ಆ ಪರಿಸ್ಥಿತಿ ಸಿದ್ದರಾಮಯ್ಯ ಅವರಿಗೆ ಬರಬಾರದು ಎಂದಿದ್ದಾರೆ. ಇದನ್ನೂ ಓದಿ: ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿಲ್ಲ, ಒಳ ಜಗಳಗಳು ಪ್ರಾರಂಭವಾಗಿ ಮನೆಯೊಂದು ಮೂರು ಬಾಗಿಲಾಗಿದೆ ಎಂದು ವ್ಯಂಗ್ಯಮಾಡಿದ್ದಾರೆ.

    ನಾನು ಉಪ ಮುಖ್ಯಮಂತ್ರಿ ಸ್ಥಾನ ಕೇಳವ ಕಾಲ ಹೋಗಿದೆ. ಈಗ ಪ್ರಮೋಷನ್ ಆಗಿ ಸಿಎಂ ಸ್ಥಾನ ಕೇಳುವ ಸಮಯ ಬಂದಿದೆ. ಪಕ್ಷ ಮುಂದೆ ನನ್ನನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಬಹುದು ಎಂದು ಸಿಎಂ ಬಯಕೆಯನ್ನು ತೆರೆದಿಟ್ಟಿದ್ದಾರೆ.

    ಬಿಎಂಟಿಸಿ (BMTC) ಬಸ್‍ನಲ್ಲಿ ಕಂಡಕ್ಟರ್ ಸಜೀವ ದಹನ ವಿಚಾರವಾಗಿ, ಮೃತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶ ಮಾಡಿದ್ದೇನೆ. ಕುಟುಂಬದವರಿಗೆ ಉದ್ಯೋಗ ನೀಡಲು ಆದೇಶಿಸಿಸಲಾಗಿದೆ. ಇನ್ಸೂರೆನ್ಸ್ ಬಗ್ಗೆಯೂ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ಸಾರಿಗೆ ನೌಕರರ ಮುಷ್ಕರ ವಿಚಾರದಲ್ಲಿ, ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುತ್ತೇವೆ. 10% ವೇತನ ಹೆಚ್ಚಳಕ್ಕೆ ನಾವು ಒಪ್ಪಿದ್ದೇವೆ. ಆದರೆ ನೌಕರರು ಒಪ್ಪುತ್ತಿಲ್ಲ ಎಂದಿದ್ದಾರೆ.

    ಜನಾರ್ದನ ರೆಡ್ಡಿಗೆ (Janardhana Reddy) ಸಿಬಿಐ (CBI) ಸಮನ್ಸ್ (Summons) ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಸಾಮಾನ್ಯ ಪ್ರಕ್ರಿಯೆ, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಬಿಜೆಪಿಗರ (BJP) ಮೇಲೂ ದಾಳಿಯಾಗಿವೆ. ಕಾನೂನು ಚೌಕಟ್ಟಿನಲ್ಲಿ ಸಿಬಿಐ ಕಾರ್ಯ ನಿರ್ವಹಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

  • ನಟಿ ಉರ್ಫಿ ಜಾವೇದ್  ಗೆ ಸಮನ್ಸ್ ನೀಡಿದ ಮುಂಬೈ ಪೊಲೀಸ್

    ನಟಿ ಉರ್ಫಿ ಜಾವೇದ್ ಗೆ ಸಮನ್ಸ್ ನೀಡಿದ ಮುಂಬೈ ಪೊಲೀಸ್

    ಬಿಗ್ ಬಾಸ್ ಮಾಜಿ ಸ್ಪರ್ಧಿ ನಟಿ ಉರ್ಫಿ ಜಾವೇದ್ ಸಾರ್ವಜನಿಕವಾಗಿ ಅಶ್ಲೀಲತೆ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ವಾಘ್, ಎರಡು ದಿನಗಳ ಹಿಂದೆಯಷ್ಟೇ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಮುಂಬೈ ಪೊಲೀಸರು ಉರ್ಫಿ ಜಾವೇದ್ ಗೆ ಸಮನ್ಸ್ ನೀಡಿದ್ದಾರೆ. ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.

    ನಿನ್ನೆಯಷ್ಟೇ ನಟಿ ಉರ್ಫಿ ಜಾವೇದ್ ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದಾರೆ. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ರಕ್ಷಣೆ ನೀಡುವಂತೆ ಉರ್ಫಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳ ಸಮಾಗಮ: ವೈಷ್ಣವಿ ಜೊತೆ ದಿವ್ಯಾ- ಅರವಿಂದ್ ಕೆ.ಪಿ ಜೋಡಿ

    ನಟಿ ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಅಲ್ಲದೇ, ಅಸಹ್ಯ ಎನ್ನುವಂತಹ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಚಿತ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದಾರೆ.

    ತನ್ನ ವಿಚಿತ್ರ ಕಾಸ್ಟ್ಯೂಮ್ ಮೂಲಕ ಬಾಲಿವುಡ್ ಸಿನಿ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಉರ್ಫಿ ಜಾವೇದ್ ಮೇಲೆ ಉರಿದುಕೊಂಡವರೇ ಹೆಚ್ಚು. ಅವಳು ಧರಿಸುವ ಅರೆಬರೆ ಬಟ್ಟೆಯ ಬಗ್ಗೆ ಸಾಕಷ್ಟು ದೂರುಗಳು ಇವೆ. ಈ ವಿಚಾರವಾಗಿ ಅವಳು ಪೊಲೀಸ್ ಸ್ಟೇಶನ್ ಮೆಟ್ಟಿಲೂ ಹತ್ತಿದ್ದಾರೆ. ದುಬೈನಲ್ಲಿ ಪೊಲೀಸ್ ವಿಚಾರಣೆಗೂ ಒಳಗಾಗಿದ್ದಾರೆ. ಸದಾ ವಿವಾದವನ್ನೇ ಬೆನ್ನತ್ತಿ ಹೋಗುವ ಉರ್ಫಿ ಬಗ್ಗೆ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಹೆಮ್ಮೆಯಿಂದ ಮಾತನಾಡಿದ್ದಾರೆ. ಅವರನ್ನು ಮಾದರಿಯಾಗಿ ತಗೆದುಕೊಳ್ಳುವಂತೆ ಕರೆಕೊಟ್ಟಿದ್ದಾರೆ.

    ಬಾಲಿವುಡ್ ಸಿಂಗರ್ ಯೋ ಯೋ ಹನಿ ಸಿಂಗ್, ಸದ್ಯ ತಮ್ಮ ಆಲ್ಬಂವೊಂದರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಉರ್ಫಿ ಜಾವೇದ್ ಬಗ್ಗೆ ಹಾಡಿಹೊಗಳಿದ್ದಾರೆ. ಉರ್ಫಿ ತನ್ನಿಷ್ಟದಂತೆ ಬದುಕುತ್ತಿರುವ ನಟಿ. ತುಂಬಾ ಧೈರ್ಯವಂತೆ. ಯಾರಿಗೂ ಹೆದರದೇ ತನ್ನ ಬದುಕನ್ನು ಕಟ್ಟಿಕೊಂಡಿದ್ದಾಳೆ. ಹಾಗಾಗಿ ದೇಶದ ಹುಡುಗಿಯರು ಅವಳನ್ನು ನೋಡಿ ಕಲಿತುಕೊಳ್ಳಬೇಕು’ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದ ಗಂಭೀರ್‌ಗೆ ಕೋರ್ಟ್‍ನಿಂದ ಸಮನ್ಸ್

    ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದ ಗಂಭೀರ್‌ಗೆ ಕೋರ್ಟ್‍ನಿಂದ ಸಮನ್ಸ್

    ನವದೆಹಲಿ: ಕರ್ಕರ್ಡೂಮಾ ನ್ಯಾಯಾಲಯದ (Karkardooma court) ಬಳಿಯ ಪ್ರಿಯಾ ಎನ್‍ಕ್ಲೇವ್‍ನಲ್ಲಿ (Priya Enclave) ಡಂಪಿಂಗ್ ಯಾರ್ಡ್‍ಗಾಗಿ ಎಂಸಿಡಿ ನಿಗದಿಪಡಿಸಿದ್ದ ಭೂಮಿಯಲ್ಲಿ ಅನಧಿಕೃತವಾಗಿ ಗ್ರಂಥಾಲಯವನ್ನು ನಿರ್ಮಿಸಿದ ಆರೋಪದಡಿ ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ (Gautam Gambhir)  ದೆಹಲಿ ನ್ಯಾಯಾಲಯ ( Delhi court) ಸಮನ್ಸ್ ಜಾರಿ ಮಾಡಿದೆ.

    court order law

    ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಿಮಾಂಶು ರಮಣ್ ಸಿಂಗ್ ಅವರು ಸೋಮವಾರ ಗೌತಮ್ ಗಂಭೀರ್ ಅವರಿಗೆ 2022ರ ಡಿಸೆಂಬರ್ 13ಕ್ಕೆ ಈ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿಯೇ ಹೈದರಾಬಾದ್‍ಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್

    ಗಂಭೀರ್ ಮತ್ತು ಎಂಸಿಡಿ ವಿರುದ್ಧ ಅರ್ಜಿದಾರರಾದ ರವಿ ಭಾರ್ಗವ ಮತ್ತು ರೋಹಿತ್ ಕುಮಾರ್ ಮಹಿಯಾ ಅವರು ಸಿವಿಲ್ ಮೊಕದ್ದಮೆ ಹೂಡಿದ್ದು, ಗಂಭೀರ್ ಅಕ್ರಮವಾಗಿ ನಿರ್ಮಿಸಿರುವ ಗ್ರಂಥಾಲಯದ ಕಟ್ಟಡವನ್ನು ಬಳಸದಂತೆ ತಡೆಯಲು ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಸ್ತುತ ಮೊಕದ್ದಮೆಯನ್ನು ಸೆಕ್ಷನ್ 91 ಸಿಪಿಸಿ ಅಡಿಯಲ್ಲಿ ಪರಿಗಣಿಸಬಹುದು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ ಕೊಡಲ್ಲ ಎಂದಿದ್ದಕ್ಕೆ ಮಗ, ಸೊಸೆ ಸೇರಿ ತಾಯಿಗೆ ಬೆಂಕಿ ಹಚ್ಚಿದ್ರು

    Live Tv
    [brid partner=56869869 player=32851 video=960834 autoplay=true]

  • ಸಿಸೋಡಿಯಾಗೆ CBI ಸಮನ್ಸ್ – ಬಂಧಿಸುವ ಹುನ್ನಾರ ನಡೆದಿದೆ: AAP ಆರೋಪ

    ಸಿಸೋಡಿಯಾಗೆ CBI ಸಮನ್ಸ್ – ಬಂಧಿಸುವ ಹುನ್ನಾರ ನಡೆದಿದೆ: AAP ಆರೋಪ

    ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ (Delhi) ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಕೇಂದ್ರೀಯ ತನಿಖಾ ಸಂಸ್ಥೆ (CBI) ವಿಚಾರಣೆಗೆ ಕರೆಸಿದೆ. ಸಮನ್ಸ್ ಬಳಿಕ ಆಮ್ ಆದ್ಮಿ ಪಕ್ಷ (AAP), ಸಿಸೋಡಿಯಾ ಅವರನ್ನು ಬಂಧಿಸಲು ಹುನ್ನಾರ ನಡೆಸಲಾಗಿದೆ ಎಂದು ಆರೋಪಿಸಿದೆ.

    MANISH SISODIA

    ಸಮನ್ಸ್ ಬಳಿಕ ಮಾತನಾಡಿದ ಆಪ್ ಹಿರಿಯ ನಾಯಕ ಸೌರಭ್ ಭಾರದ್ವಾಜ್ (Saurabh Bhardwaj), ಸಿಸೋಡಿಯಾ ಅವರಿಗೆ ಸಮನ್ಸ್ ನೀಡಿರುವುದರ ಹಿಂದೆ ಬಿಜೆಪಿ (BJP) ಹಾಗೂ ಆಪ್ ಪಕ್ಷ ನೇರ ಸ್ಪರ್ಧೆಯಲ್ಲಿರುವ ಗುಜರಾತ್ ಚುನಾವಣೆಗೆ (Gujarat elections) ಸಂಬಂಧವಿದೆ. ಈ ಬಗ್ಗೆ ಬಿಜೆಪಿ ಭಯ ಪಟ್ಟಿದೆ. ಇದಕ್ಕಾಗಿ ಸಿಸೋಡಿಯಾ ಅವರನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

    ಸಿಬಿಐ ಸಮನ್ಸ್ ನೀಡಿರುವ ಬಗ್ಗೆ ಟ್ವೀಟ್ ಮಾಡಿರುವ ಮನೀಶ್ ಸಿಸೋಡಿಯಾ, ಸಿಬಿಐ ನನ್ನ ಮನೆ ಮೇಲೆ 14 ಗಂಟೆಗಳ ಕಾಲ ದಾಳಿ ನಡೆಸಿತ್ತು. ನನ್ನ ಬ್ಯಾಂಕ್ ಲಾಕರ್ ಅನ್ನು ಕೂಡಾ ತೆರೆದು ಹುಡುಕಿದ್ದರು. ಆದರೆ ಎಲ್ಲೂ ಏನೂ ಅವರಿಗೆ ಸಿಕ್ಕಿರಲಿಲ್ಲ. ಈಗ ಅವರು ನಾಳೆ ಬೆಳಗ್ಗೆ ನನ್ನನ್ನು 11 ಗಂಟೆಗೆ ಸಿಬಿಐ ಕಚೇರಿಗೆ ಕರೆದಿದ್ದಾರೆ. ನಾನು ತನಿಖಾ ಸಂಸ್ಥೆಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುತ್ತೇವೆ ಎಂದ ಹೋರಾಟಗಾರಿಗೆ ಬಿಸಿ ಮುಟ್ಟಿಸಿದ ಪೊಲೀಸರು

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ತಮ್ಮ ಉಪನಾಯಕನಿಗೆ ಸಮನ್ಸ್ ನೀಡಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿ, ಕೋಟ್ಯಂತರ ಬಡವರ ಪ್ರಾರ್ಥನೆ ನಿಮ್ಮೊಂದಿಗಿದೆ. ಜೈಲಿನ ಕಂಬಿಗಳು ಮತ್ತು ಗಲ್ಲು ಶಿಕ್ಷೆ ಭಗತ್ ಸಿಂಗ್ ಅವರ ದೃಢ ಉದ್ದೇಶವನ್ನು ತಡೆಯಲಿಲ್ಲ. ಇದು ನಮ್ಮ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸುತ್ತಿದೆ. 75 ವರ್ಷಗಳ ಬಳಿಕ ದೇಶ ಉತ್ತಮ ಶಿಕ್ಷಣ ಸಚಿವರನ್ನು ಪಡೆದಿದ್ದು, ಬಡವರಿಗೆ ಉತ್ತಮ ಶಿಕ್ಷಣದ ಮೂಲಕ ಉಜ್ವಲ ಭವಿಷ್ಯ ನೀಡುತ್ತಿದೆ ಎಂದು ಸಿಸೋಡಿಯಾ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ರಾಯಚೂರು ಏಮ್ಸ್ ಹೋರಾಟಗಾರರಿಂದ ಶಾಸಕನ ಮನೆಗೆ ಮುತ್ತಿಗೆ

    Live Tv
    [brid partner=56869869 player=32851 video=960834 autoplay=true]

  • ಪಾವಗಡ ಸೋಲಾರ್ ಪಾರ್ಕ್ ಪ್ರಕರಣವನ್ನು CBIಗೆ ಒಪ್ಪಿಸಿ- ಬೊಮ್ಮಾಯಿಗೆ ಡಿಕೆಶಿ ಸವಾಲು

    ಪಾವಗಡ ಸೋಲಾರ್ ಪಾರ್ಕ್ ಪ್ರಕರಣವನ್ನು CBIಗೆ ಒಪ್ಪಿಸಿ- ಬೊಮ್ಮಾಯಿಗೆ ಡಿಕೆಶಿ ಸವಾಲು

    ನವದೆಹಲಿ: ಪಾವಗಡ ಸೋಲಾರ್ ಪಾರ್ಕ್ (Pawagada Solar Park) ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI)ಗೆ ಒಪ್ಪಿಸಿ ಎಂದು ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

    ಇಡಿ ಅಧಿಕಾರಿಗಳ ಮುಂದೆ ಹಾಜರಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ (DK Shivakumar), ಯಾಕೆ ನಿವೃತ್ತ ಜಡ್ಜ್ ಸಿಬಿಐಗೆ ಒಪ್ಪಿಸಿ. ತಪ್ಪಾಗಿದ್ದರೇ ನನ್ನ ಗಲ್ಲಿಗೇರಿಸಿ. ಅತ್ಯುತ್ತಮ ಪ್ರಾಜೆಕ್ಟ್ ಅಂತ ಮೋದಿ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿ, ಸರ್ಟಿಫಿಕೇಟ್ ಕೊಟ್ಟಿದೆ. ದೇಶಕ್ಕೆ ಮಾದರಿ ಅಂತ ಮೋದಿ (Narendra Modi) ಸರ್ಕಾರ ಹೇಳಿದೆ ಎಂದರು.

    ಯಾವ ಪ್ರಕರಣದಲ್ಲಿ ಸಮನ್ಸ್ ನೀಡಿದ್ದಾರೆ ಗೊತ್ತಿಲ್ಲ. ಸಮನ್ಸ್ ನಿಂದ ವಿನಾಯಿತಿ ಕೋರಿ ಮನವಿ ಮಾಡಿದ್ದೆವು. ನಾವು ಸಾರ್ವಜನಿಕ ಜೀವನದಲ್ಲಿರುವವರು. ಶಾಸಕ ಮತ್ತು ಸಂಸದರಾಗಿರುವವರು ಕಾನೂನು ಪಾಲಿಸುವ ನಾಗರಿಕರಾಗಿದ್ದೇವೆ. ಆದರೆ ನಮ್ಮ ಮನವಿಯನ್ನ ತಿರಸ್ಕರಿಸಿ ಹಾಜರಾಗಲು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಭಾರತ್ ಜೋಡೋ ಯಾತ್ರೆ (Bharat Jodo Yatre) ಮೊಟಕುಗೊಳಿಸಿ ವಿಚಾರಣೆಗೆ ಇಂದು ಆಗಮಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ:  ಇಡಿ ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡ್ತೀವಿ – ಡಿಕೆಶಿ

    ಬೇರೊಬ್ಬ ತನಿಖಾಧಿಕಾರಿ ಈ ಬಾರಿ ಸಮನ್ಸ್ ಮಾಡಿದ್ದಾರೆ. ಸಮನ್ಸ್ ಯಾವುದಕ್ಕೆ ಅಂತ ಗೊತ್ತಿಲ್ಲ. ಯಂಗ್ ಇಂಡಿಯಾಕೆ ದೇಣಿಗೆ ನೀಡಿರೊ ಬಗ್ಗೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ ಬಾರಿ ಕೂಡ ಯಂಗ್ ಇಂಡಿಯಾ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಬಾರಿ ತನಿಖಾಧಿಕಾರಿ ಬದಲಾಗಿರುವುದರಿಂದ ಪ್ರಕರಣ ಯಾವುದೆಂದು ಸ್ಪಷ್ಟತೆ ಇಲ್ಲ ಎಂದು ಹೇಳಿ ಡಿಕೆಶಿ ಇಡಿ ಕಚೇರಿಯೊಳಗೆ ತೆರಳಿದರು.

    Live Tv
    [brid partner=56869869 player=32851 video=960834 autoplay=true]

  • ಹೊನ್ನಾವರ ಮೀನುಗಾರರ ಮೇಲೆ ದೌರ್ಜನ್ಯ – ಜಿಲ್ಲಾಧಿಕಾರಿ, ಎಸ್ಪಿಗೆ ಸಮನ್ಸ್ ಜಾರಿ

    ಹೊನ್ನಾವರ ಮೀನುಗಾರರ ಮೇಲೆ ದೌರ್ಜನ್ಯ – ಜಿಲ್ಲಾಧಿಕಾರಿ, ಎಸ್ಪಿಗೆ ಸಮನ್ಸ್ ಜಾರಿ

    ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ(DC) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಸಮನ್ಸ್ ಜಾರಿ ಮಾಡಲಾಗಿದೆ.

    ಹೊನ್ನಾವರದ ಕಾಸರಕೋಡದ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿ ಮಾಡಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತಗೊಳಿಸುವಂತೆ ಹಾಗೂ ಬಂದರಿಗೆ ರಸ್ತೆ ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ಜ.24ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರನ್ನು ಎಫ್‍ಐಆರ್ ಸಹ ದಾಖಲಿಸದೇ ಬಂಧಿಸಿ ಸಂಜೆ ವೇಳೆ ಬಿಡುಗಡೆಗೊಳಿಸಲಾಗಿತ್ತು. ಇದನ್ನೂ ಓದಿ: ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಅತ್ಯಾಚಾರ

    ಈ ವೇಳೆ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿ ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೆ ಮೇ 6ರಂದು ದೂರು ದಾಖಲಿಸಿದ್ದರು. ಈ ದೂರಿನನ್ವಯ ಜುಲೈ 19ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆಯಿಂದ ಯಾವುದೇ ವರದಿ ಸಹ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ

    Live Tv
    [brid partner=56869869 player=32851 video=960834 autoplay=true]

  • 200 ಕೋಟಿ ವಂಚನೆ ಕೇಸ್ : ಸುಕೇಶ್ ಬಗ್ಗೆ ಎಲ್ಲವೂ ಗೊತ್ತಿದ್ದೂ ಸ್ನೇಹ ಬೆಳೆಸಿ ಇಕ್ಕಟ್ಟಿಗೆ ಸಿಲುಕಿಕೊಂಡ್ರಾ ನಟಿ ಜಾಕ್ವೆಲಿನ್

    200 ಕೋಟಿ ವಂಚನೆ ಕೇಸ್ : ಸುಕೇಶ್ ಬಗ್ಗೆ ಎಲ್ಲವೂ ಗೊತ್ತಿದ್ದೂ ಸ್ನೇಹ ಬೆಳೆಸಿ ಇಕ್ಕಟ್ಟಿಗೆ ಸಿಲುಕಿಕೊಂಡ್ರಾ ನಟಿ ಜಾಕ್ವೆಲಿನ್

    ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ 200 ಕೋಟಿ ವಂಚನೆ ಪ್ರಕರಣದಲ್ಲಿ ಅತೀ ಹೆಚ್ಚು ಸುದ್ದಿ ಆಗುತ್ತಿರುವುದು ನಟಿ ಜಾಕ್ವೆಲಿನ್ ಫರ್ನಾಂಡಿಸ್.  ದಂಪತಿಯೊಬ್ಬರಿಗೆ ಮೋಸ ಮಾಡಿ ಅವರಿಗೆ 200 ಕೋಟಿ ವಂಚನೆ ಮಾಡಿದ್ದಾರೆ ಅನ್ನುವ ಆರೋಪದಲ್ಲಿ ಜೈಲು ಪಾಲಾಗಿರುವ ಸುಕೇಶ್ ಜೊತೆ ಜಾಕ್ವೆಲಿನ್ ಸಂಬಂಧ ಇಟ್ಟುಕೊಂಡಿದ್ದರು. ಈ ಕಾರಣಕ್ಕಾಗಿಯೇ ಜಾಕ್ವೆಲಿನ್ ಗೆ ದುಬಾರಿ ಗಿಫ್ಟ್ ಗಳನ್ನು ಸುಕೇಶ್ ನೀಡಿದ್ದಾನೆ ಎಂದು ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

    ಹಣಕ್ಕಾಗಿಯೇ ಸುಕೇಶ್ ಸ್ನೇಹ ಬೆಳೆಸಿದ್ದು, ಇಲ್ಲದೇ ಹೋದರೆ ಈ ಪ್ರಮಾಣದ ದುಬಾರಿ ಗಿಫ್ಟ್ ಗಳನ್ನು ಕೊಡುವುದಕ್ಕೆ ಹೇಗೆ ಸಾಧ್ಯ? ಸುಕೇಶ್ ಬಗ್ಗೆ ಎಲ್ಲವೂ ತಿಳಿದಿದ್ದರೂ, ಗಿಫ್ಟ್ ಗಳನ್ನು ನಿರಾಕರಿಸದೇ ಪಡೆದಿದ್ದಾರೆ ಎಂದು ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಜಾಕ್ವೆಲಿನ್ ಬಗ್ಗೆ ಉಲ್ಲೇಖಿಸಲಾಗಿದೆ. ಇದೊಂದು ದುಡ್ಡಿಗಾಗಿ ನಡೆದಿರುವ ಸ್ನೇಹ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಕೋರ್ಟಿಗೆ ಹಾಜರಾಗುವಂತೆ ಜಾಕ್ವೆಲಿನ್ ಗೆ ಕೋರ್ಟ್ ಸಮನ್ಸ್ ನೀಡಿದ್ದು, ಈ ತಿಂಗಳು ಕೊನೆಯ ವಾರದಲ್ಲಿ ದಿನಾಂಕವನ್ನೂ ನಿಗಧಿ ಮಾಡಲಾಗಿದೆ. ಹಾಗಾಗಿ ಜಾಕ್ವೆಲಿನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುತಿಸಿದ ಅಷ್ಟೂ ವಸ್ತುಗಳನ್ನು ನಾನು ನನ್ನ ಸ್ವಂತ ದುಡಿಮೆಯಿಂದ ತಂದಿದ್ದು ಎಂದು ಜಾಕ್ವೆಲಿನ್ ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಸುಕೇಶ್ ತಮಗೆ ಯಾವುದೇ ಗಿಫ್ಟ್ ನೀಡಿಲ್ಲವೆಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]