ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೀಡಿರುವ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಕಳೆದೆರಡು ದಿನಗಳಿಂದ ಇಷ್ಟೆಲ್ಲ ಹಿಂಸ್ಮಾತಕ ಪ್ರತಿಭಟನೆಗಳಿಗೆ ಕಾರಣರಾದ ನೂಪುರ್ ಶರ್ಮಾ ಅವರನ್ನು ಈವರೆಗೂ ಪೊಲೀಸರು ಬಂಧಿಸಿಲ್ಲ. ಆದರೆ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಜೂನ್ 25ರಂದು ನೂಪುರ್ ಶರ್ಮಾ ಅವರು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಆಕೆಯನ್ನು ಬಂಧಿಸಲಾಗುತ್ತದೆಯೇ? ಇಲ್ಲವೇ ಎಂಬ ವಿಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ನಾಯಕರು ನೂಪುರ್ ಶರ್ಮಾ ವಿರುದ್ಧ ಸಮಯಕ್ಕೆ ಸರಿಯಾಗಿ ಕ್ರಮ ತೆಗೆದುಕೊಂಡಿದ್ದರೆ, ಪೊಲೀಸರು ಆಕೆಯನ್ನು ಕೂಡಲೇ ಬಂಧಿಸಿದ್ದರೆ ದೇಶದಲ್ಲಿ ಇಷ್ಟೆಲ್ಲಾ ಸಮಸ್ಯೆ, ಹಿಂಸೆ ಆಗುತ್ತಲೇ ಇರಲಿಲ್ಲ ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳುವ ಅಗತ್ಯವಿಲ್ಲ, ನೂಪುರ್ ಶರ್ಮಾರನ್ನು ಕಾನೂನಿನ ಪ್ರಕಾರ ಬಂಧಿಸಿ: ಓವೈಸಿ

ದೇಶದಲ್ಲಿ ಶಾಂತಿ ಸೌಹಾರ್ದತೆಯನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಹಾಳು ಮಾಡುತ್ತಿದೆ. ಕಾನೂನು ಪ್ರಕಾರವಾಗಿ ನೂಪುರ್ ಶರ್ಮಾ ಬಂಧನ ಆಗಬೇಕು. ಆದರೆ ಆಕೆಯನ್ನು ಪೊಲೀಸರು ಏಕೆ ಬಂಧಿಸುತ್ತಿಲ್ಲ. ಕನಿಷ್ಠ ಕಾನೂನು ಕ್ರಮ ಕೂಡ ಏಕೆ ತೆಗೆದುಕೊಂಡಿಲ್ಲ. ಪೊಲೀಸರನ್ನು ತಡೆಯುತ್ತಿರುವ ಆ ಶಕ್ತಿ ಯಾವುದು ಎಂದು ಓವೈಸಿ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ


























