Tag: summons

  • ಸಿಎಂ ಎಚ್‍ಡಿಕೆಗೆ ಕೋರ್ಟ್ ನಿಂದ ಸಮನ್ಸ್ ಜಾರಿ!

    ಸಿಎಂ ಎಚ್‍ಡಿಕೆಗೆ ಕೋರ್ಟ್ ನಿಂದ ಸಮನ್ಸ್ ಜಾರಿ!

    ಬೆಂಗಳೂರು: ಬಜೆಟ್ ದಿನದಂದೇ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಗೆ ಕಂಟಕ ಎದುರಾಗಿದೆ. 2006ರ ಬೆಂಗಳೂರಿನ ಥಣಿಸಂದ್ರದ 3 ಎಕರೆ 24 ಗುಂಟೆ ಭೂಮಿ ಡಿನೋಟಿಫಿಕೇಷನ್ ಕೇಸ್ ಪ್ರಕರಣ ಸಂಬಂಧ ಸಿಎಂ ಕುಮಾರಸ್ವಾಮಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

    ಅಲ್ಲದೆ ಬಜೆಟ್ ದಿನವಾದ ಜುಲೈ ಐದರಂದೇ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮತ್ತೊಂದೆಡೆ ಅಸಮಾಧಾನ ವಿಡಿಯೋಗಳ ಬಿಡುಗಡೆ ಬೆನ್ನಲ್ಲೇ ಸಿದ್ದರಾಮಯ್ಯಗೆ ಸಿಎಂ ಕುಮಾರಸ್ವಾಮಿ ಗುನ್ನಾ ಇಟ್ಟಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮೂಲಕ ಬಿಸಿಮುಟ್ಟಿಸಿದ್ದಾರೆ. ಸಿದ್ದರಾಮಯ್ಯ ಆಪ್ತರಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಮತ್ತು ಸಿದ್ದು ಅವಧಿಯಲ್ಲಿ ಸಿಎಂ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಶಂಕರಪ್ಪರನ್ನು ವರ್ಗಾವಣೆ ಮಾಡಲಾಗಿದೆ. ಸಿಎಡಿಎ ನಿರ್ದೇಶಕರಾಗಿ ಬಿಎಸ್ ಶಂಕರಪ್ಪರನ್ನು ನೇಮಿಸಲಾಗಿದೆ. ಇದನ್ನೂ ಓದಿ: ಜುಲೈ 5ರ ರಾಜ್ಯ ಬಜೆಟ್ ದಿನ ನಾ ಬರಲ್ಲ: ಡಿಕೆಶಿ

    https://www.youtube.com/watch?v=0dRcuolGcKM

  • ಡಿ.ಕೆ. ಶಿವಕುಮಾರ್ ವಿರುದ್ಧ ಐಟಿಯಿಂದ ಮತ್ತೊಂದು ದೂರು- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

    ಡಿ.ಕೆ. ಶಿವಕುಮಾರ್ ವಿರುದ್ಧ ಐಟಿಯಿಂದ ಮತ್ತೊಂದು ದೂರು- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

    ಬೆಂಗಳೂರು: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತೊಂದು ದೂರು ಸಲ್ಲಿಕೆ ಮಾಡಿದೆ.

    ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಶಿವಕುಮಾರ್ ವಿರುದ್ಧ ದೂರು ಸಲ್ಲಿಕೆ ಆಗಿದೆ. ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ಸೋಮವಾರ ದೂರು ಸಲ್ಲಿಸಿದ್ದಾರೆ. ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ದೂರು ದಾಖಲಾಗಿದೆ.

    ಈ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ನ್ಯಾ.ಎಂ.ಎಸ್. ಆಳ್ವಾ ಅವರು ಡಿಕೆ ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಆಗಸ್ಟ್ 2 ರಂದು ಡಿಕೆಶಿ ಸೇರಿ ಎಲ್ಲಾ ಆರೋಪಿಗಳು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.

    ಈ ಹಿಂದೆ ಡಿ.ಕೆ. ಶಿವಕುಮಾರ್ ಐಟಿ ಇಲಾಖೆ ದಾಖಲಿಸಿದ್ದ ದೂರಿಗೆ ಜಾಮೀನು ಪಡೆದಿದ್ದರು. ಡಿ.ಕೆ.ಶಿವಕುಮಾರ್ ಜೊತೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧವೂ ಸಮನ್ಸ್ ಜಾರಿಯಾಗಿದೆ.

  • ಸೋಮವಾರದಿಂದ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಮನ್ಸ್

    ಸೋಮವಾರದಿಂದ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಮನ್ಸ್

    ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ ಡಿಕೆಶಿ ಮತ್ತು ಅವರ ಕುಟುಂಬಕ್ಕೆ ಸಮನ್ಸ್ ಜಾರಿಯಾಗಿದೆ.

    ನಾಳೆಯಿಂದ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ಈ ಸಮನ್ಸ್ ಜಾರಿ ಮಾಡಿದ್ದಾರೆ. ಆದ್ರೆ, ವೈಯುಕ್ತಿಕ ಕೆಲಸಗಳು ಇದ್ದಾವೆ ಅಂತ ಡಿಕೆಶಿ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದಾರೆ. ಅವರ ಈ ಬೇಡಿಕೆಗೆ ಐಟಿ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬುವುದಾಗಿ ತಿಳಿದುಬಂದಿದೆ.

    ಡಿಕೆಶಿ ಗುರುಗಳಾದ ದ್ವಾರಕನಾಥ್‍ಗೂ ಸಮನ್ಸ್ ಜಾರಿ ಮಾಡಿದ್ದು, ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ದ್ವಾರಕನಾಥ್ ಸೋಮವಾರ ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

     

  • ಮಹದಾಯಿ ಹೋರಾಟಗಾರರಿಗೆ ಸಮನ್ಸ್- ಅಂಬ್ಯುಲೆನ್ಸ್ ಸಿಬ್ಬಂದಿ, ಸೈನಿಕ, ಎಂಜಿನೀಯರ್‍ಗೂ ನೋಟಿಸ್

    ಮಹದಾಯಿ ಹೋರಾಟಗಾರರಿಗೆ ಸಮನ್ಸ್- ಅಂಬ್ಯುಲೆನ್ಸ್ ಸಿಬ್ಬಂದಿ, ಸೈನಿಕ, ಎಂಜಿನೀಯರ್‍ಗೂ ನೋಟಿಸ್

    ಗದಗ: ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರಿಗೆ ಮತ್ತೆ ನರಗುಂದ ಜೆಎಮ್‍ಎಫ್‍ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನರಗುಂದ ತಾಲೂಕಿನ 32 ರೈತರು ಇಂದೇ ಜೆಎಮ್‍ಎಫ್‍ಸಿ ಕೋರ್ಟ್‍ಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.

    ವಿಪರ್ಯಾಸವೆಂದರೆ ಹೊರಾಟದಲ್ಲಿ ಇಲ್ಲದೆ ಇರುವವರ ಮೇಲೆಯೂ ಕೇಸ್ ದಾಖಲಿಸಿ ಸಮನ್ಸ್ ಜಾರಿ ಮಾಡಲಾಗಿದೆ. 108 ಸಿಬ್ಬಂದಿ, ಸೈನಿಕ ಹಾಗೂ ಎಂಜಿನೀಯರ್ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ.

    ನರಗುಂದ ತಾಲೂಕಿನ ಜಗಾಪೂರ ಗ್ರಾಮದ ಸೈನಿಕ ಶಂಕರಗೌಡ ಸಿದ್ದನಗೌಡ್ರ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅದೇ ಗ್ರಾಮದ ಕುಮಾರ ಬಾರಕೇರ್ ಉಡಪಿಯಲ್ಲಿ 108 ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದಾರೆ. ಇನ್ನು ರೋಣ ಮೂಲದ ಚರಣ್ ರಾಜ್ ಜಾಣಮಟ್ಟಿ ತೊರಣಗಲ್ ನಲ್ಲಿ ಎಂಜನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೂ ಸಮನ್ಸ್ ಜಾರಿಯಾಗಿರುವುದು ದುರದೃಷ್ಟಕರ.

    ಹೋರಾಟಗಾರರ ಮೇಲೆ ಐಪಿಸಿ ಕಲಂ 143, 147, 323, 353, 427, 436, 504, 506, 149 ರ ಕೇಸ್ ದಾಖಲು ಮಾಡಿದೆ. ಹಿಂದೆ ಸಿಎಂ ಸಿದ್ದರಾಮಯ್ಯನವರು ರೈತ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆದುಕೊಳ್ಳುವುದಾಗಿ ಹೇಳಿದ್ದರು. ಆದರೆ ಮತ್ತೆ ನೋಟೀಸ್ ನೀಡಿ ಇಂದೇ ಕೋರ್ಟ್ ಗೆ ಹಾಜರಾಗುವಂತೆ ಆದೇಶಿಸಿದ್ದು, ಸರ್ಕಾರದ ನಡಾವಳಿಗಳನ್ನ ಖಂಡಿಸಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.