Tag: Sunanda Palanethra

  • ಇತಿಹಾಸದಲ್ಲೇ ಮೊದಲು -ಮೈಸೂರು ಪಾಲಿಕೆಯಲ್ಲಿ ಬಿಜೆಪಿಗೆ ಮೇಯರ್ ಪಟ್ಟ

    ಇತಿಹಾಸದಲ್ಲೇ ಮೊದಲು -ಮೈಸೂರು ಪಾಲಿಕೆಯಲ್ಲಿ ಬಿಜೆಪಿಗೆ ಮೇಯರ್ ಪಟ್ಟ

    ಮೈಸೂರು: ಮೈಸೂರು ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ದೊರೆತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಒಳಜಗಳದಲ್ಲಿ ಬಿಜೆಪಿಗೆ ಲಾಭವಾಗಿದ್ದು, ಇದೀಗ ಬಿಜೆಪಿಯ ಸುನಂದ್ರಾ ಪಾಲನೇತ್ರಾ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

    ಸುನಂದಾ ಅವರು ಯಡಿಯೂರಪ್ಪ ಅವರ ಸಂಬಂಧಿಯಾಗಿದ್ದಾರೆ. ಕಳೆದ ಬಾರಿ ಸುನಂದಾ ಪಾಲನೇತ್ರಾಗೆ ಮೇಯರ್ ಗಾದಿ ನೀಡುವುದಾಗಿ ಬಿಎಸ್‍ವೈ ಭರವಸೆ ನೀಡಿದ್ದರು. ಅಂತೆಯೇ ಇದೀಗ ಸುನಂದಾ ಅವರು ಇಂದು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಎಚ್ಚರಿಕೆಯನ್ನೇ ಧಿಕ್ಕರಿಸಿ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರ‍್ಯಾಲಿ!

    ಮೇಯರ್ ಚುನಾವಣೆಗೆ ಮೂರು ಪಕ್ಷಗಳಿಂದಲೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮೇಯರ್ ಅಭ್ಯರ್ಥಿ ಸುನಂದಾ ಪಾಲನೇತ್ರ, ಜೆಡಿಎಸ್ ಮೇಯರ್ ಅಭ್ಯರ್ಥಿ ಅಶ್ವಿನಿ ಅನಂತ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್.ಎಂ. ಶಾಂತಕುಮಾರಿ ನಾಮಪತ್ರ ಸಲ್ಲಿಸಿದ್ದರು. ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಕೊಡದೆ ಕಾಂಗ್ರೆಸ್ ಬಹಿಷ್ಕಾರ ಹಾಕಿದೆ. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮೈಸೂರು ಪಾಲಿಕೆಯಲ್ಲಿ ಮುರಿದುಬಿದ್ದಿದೆ.

    ಹೀಗಾಗಿ ಬಿಜೆಪಿಗೆ ಕೊನೆಗೂ ಅದೃಷ್ಟ ಒಲಿದಿದೆ. ಮೈಸೂರು ಪಾಲಿಕೆಯ 23ನೇ ಅವಧಿಗೆ 35ನೇ ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ. ಸದ್ಯ ಬಿಜೆಪಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ಜೆಡಿಎಸ್ ಸದಸ್ಯರಿಂದ ಬಿಜೆಪಿ ನೂತನ ಮೇಯರ್ ಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

  • ಒಳಸಂಚಿನಿಂದ ಸೋತೆ: ಸುನಂದ ಪಾಲನೇತ್ರ

    ಒಳಸಂಚಿನಿಂದ ಸೋತೆ: ಸುನಂದ ಪಾಲನೇತ್ರ

    ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಯಾವುದೋ ಒಳಸಂಚಿನಿಂದಾಗಿ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುನಂದ ಅವರು, ಕೆ.ಆರ್ ಕ್ಷೇತ್ರ ಮತ್ತು ಪಕ್ಷಕ್ಕೆ ಪ್ರಥಮ ಮೇಯರ್ ಆಗುವ ನೀರಿಕ್ಷೆ ಇತ್ತು ಆದರೆ ಅದು ನಿರಾಸೆ ಆಗಿದೆ ಹಾಗಾಗಿ ತುಂಬಾ ಬೇಸರವಾಗಿದೆ ಎಂದು ತಿಳಿಸಿದರು.

    ನಮ್ಮ ವಾರ್ಡ್‍ನಲ್ಲಿ ತುಂಬ ಧೈರ್ಯವಾಗಿ ಕೆಲಸ ನಿರ್ವಹಿಸುತ್ತಿದ್ದೆ. ಆದರೆ ಈ ಸೋಲು ನನ್ನನ್ನು ಮಾನಸಿಕವಾಗಿ ಕುಗ್ಗಿಸಿದೆ. ನಾನು ಮುಖ್ಯಮಂತ್ರಿಗಳಿಂದ ಫಂಡ್ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ವಿನಿಯೋಗಿಸಬೇಕೆಂದು ಅಂದುಕೊಂಡಿದ್ದೆ. ಆದರೆ ಅದು ನಿರಾಸೆ ಆಗಿರುವುದು ತುಂಬ ದುಃಖ ತರಿಸಿದೆ ಎಂದರು.

    ನನಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನನ್ನ ಸೋಲಿನಿಂದ ಎಲ್ಲರಿಗೂ ನೋವಾಗಿದೆ. ಪತ್ರಿಯೊಬ್ಬರೂ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡುತ್ತಿದ್ದಾರೆ. ನಮ್ಮ ಸಮುದಾಯದವರು ಪರಿಶ್ರಮ ಪಟ್ಟಿದ್ದರೆ ಗೆಲ್ಲುತ್ತಿದ್ದೆ. ಗೆದ್ದಿದ್ದರೆ ಮಹಾನಗರ ಪಾಲಿಕೆಯನ್ನು ಅಭಿವೃದ್ದಿಯತ್ತ ಕೊಂಡೊಯ್ಯಬೇಕೆಂಬ ಆಶಯ ಇತ್ತು. ಆದರೆ ಇದು ಸಾಧ್ಯವಾಗಿಲ್ಲ ಎಂಬ ಕೊರಗು ಇದೆ. ಪಕ್ಷದ ಸೋಲು ನನ್ನಿಂದ ಅಗಿಲ್ಲ ಆರೀತಿ ಆರೋಪ ಕೇಳಿಬಂದರೆ ಅದು ಪಿತೂರಿಯಿಂದಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಬಳಿ ಕ್ಷಮೆ ಕೇಳುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯಿಂದಾಗಿ ನಿನ್ನೆ ನಡೆದ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.