Tag: Sundar

  • ಪ್ರಕರಣ ತನಿಖಾ ಹಂತದಲ್ಲಿದೆ: ಜಬರ್ದಸ್ತ್ ಟೈಟಲ್ ಟ್ರ್ಯಾಕ್ ರಿಲೀಸ್

    ಪ್ರಕರಣ ತನಿಖಾ ಹಂತದಲ್ಲಿದೆ: ಜಬರ್ದಸ್ತ್ ಟೈಟಲ್ ಟ್ರ್ಯಾಕ್ ರಿಲೀಸ್

    ರಂಗಭೂಮಿಯಲ್ಲಿ ವರ್ಷಾಂತರಗಳ ಕಾಲ ಪಳಗಿಕೊಂಡಿರುವ ಪ್ರತಿಭಾನ್ವಿತರ ತಂಡವೊಂದು ಚಿತ್ರರಂಗಕ್ಕೆ ಆಗಮಿಸಿದೆ. ಈ ಸಿನಿಮಾ ವ್ಯಾಮೋಹಿಗಳ ತಂಡದ ಕಡೆಯಿಂದ ರೂಪುಗೊಂಡಿರುವ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ’. (Prakarana Tanika Hantadallide)  ಶೀರ್ಷಿಕೆಯಲ್ಲಿಯೇ ಕಥೆಯ ಬಗೆಗಿನ ನಿಗೂಢ ಬಚ್ಚಿಟ್ಟುಕೊಂಡಂತಿರುವ ಈ ಚಿತ್ರವನ್ನು ಸುಂದರ್.ಎಸ್ ನಿರ್ದೇಶನ ಮಾಡಿದ್ದಾರೆ. ಇದೀಗ ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಟೈಟಲ್ ಟ್ರ್ಯಾಕ್ (Trital Track) ಬಿಡುಗಡೆಗೊಂಡಿದೆ. ಈ ಮೂಲಕವೇ ಸದರಿ ಚಿತ್ರದ ಬಗ್ಗೆ ನಾನಾ ಆಯಾಮಗಳಲ್ಲಿ ನಿರೀಕ್ಷೆಗಳು ಮೂಡಿಕೊಂಡಿವೆ.

    ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿಂತನ್ ಕಂಬಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇದರ ಪೋಸ್ಟರ್ ಒಂದು ಬಿಡುಗಡೆಗೊಂಡಿತ್ತು. ಆ ಮೂಲಕ ಕುತೂಹಲ ಮೂಡಿಸಿದ್ದ ಚಿತ್ರತಂಡವೀಗ ಟೈಟಲ್ ಟ್ರ್ಯಾಕ್ ಮೂಲಕ ಪ್ರೇಕ್ಷಕರನ್ನು ಮತ್ತಷ್ಟು ತೀವ್ರವಾಗಿ ಸೆಳೆದುಕೊಂಡಿದೆ. ಇದು ಕ್ರೈಂ ಜಾನರಿನ ಚಿತ್ರ. ಒಂದು ಪ್ರಕರಣದ ತನಿಖೆಯ ಸುತ್ತಾ ಸಾಗುವ ರೋಚಕ ಕಥನದೊಂದಿಗೆ ಇದನ್ನು ರೂಪಿಸಲಾಗಿದೆಯಂತೆ. ಆಗಾಗ ಕನ್ನಡದಲ್ಲಿ ಈ ಜಾನರಿನ ಚಿತ್ರಗಳು ತೆರೆಗಾಣುತ್ತಿರುತ್ತವೆ. ಅದೆಲ್ಲಕ್ಕಿಂತಲೂ ಭಿನ್ನವಾದ ಅಂಶಗಳು ಇಲ್ಲಿವೆ ಎಂಬ ತುಂಬು ಭರವಸೆ ಚಿತ್ರತಂಡದಲ್ಲಿದೆ.

     

    ರಂಗಭೂಮಿಯಲ್ಲಿ ಸಕ್ರಿಯವಾಗಿದ್ದುಕೊಂಡು, ವರ್ಷಾಂತರಗಳಿಂದ ತಯಾರಿ ನಡೆಸಿದ್ದ ತಂಡವೊಂದು ಈ ಚಿತ್ರದ ಹಿಂದಿದೆ. ಅವರೆಲ್ಲರೂ ರಂಗಭೂಮಿಗೆ ಹಳಬರಾದರೂ, ಚಿತ್ರರಂಗಕ್ಕೆ ಹೊಸಬರು. ಸಿದ್ಧಸೂತ್ರದಾಚೆಗೆ ಏನೋ ಮಾಡಬೇಕೆಂಬ ತುಡಿತವನ್ನು ಈ ತಂಡ `ಪ್ರಕರಣ ತನಿಖಾ ಹಂತದಲ್ಲಿದೆ’ ಮೂಲಕ ಸಾಕಾರಗೊಳಿಸಿದೆಯಂತೆ. ಮಹೀನ್ ಕುಬೇರ್ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ. ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್.ಜೆ  ಛಾಯಾಗ್ರಹಣ, ಶಿವೋಂ ಸಂಗೀತ ನಿರ್ದೇಶನ ಮತ್ತು ನಾನಿಕೃಷ್ಣ  ಸಂಕಲನ ಈ ಚಿತ್ರಕ್ಕಿದೆ. ವಿಎಫ್ ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ನಿಭಾಯಿಸಿದ್ದಾರೆ. ಬೆಂಗಳೂರು, ಕನಕಪುರ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಟ್ರೈಲರ್ ಬಿಡುಗಡೆಗೊಳಿಸಿ, ಅದಾದ ಬಳಿಕ ಈ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

  • ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ಹೊಸ ಚಿತ್ರಕ್ಕೆ ಚಾಲನೆ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ಹೊಸ ಚಿತ್ರಕ್ಕೆ ಚಾಲನೆ

    ದಿಪು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ.  ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಚಿತ್ರ. ಇದು ತೊಂಭತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಭಾವನೆಗಳೇ ಇಲ್ಲಿನ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಚಿತ್ರದ ಮುಖ್ಯ ಕಥಾಹಂದರ. ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ ಮತ್ತೊಂದು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ.ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ.ಮಠ, ವಿನ್ಯಾ, ಉಗ್ರಂ ಮಂಜು, ಜೆಜಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಚೇತನ್ ಮುಂಡಾಡಿ ಚಿತ್ರದ ಕುರಿತು ಮಾಹಿತಿ ನೀಡಿದರು.

    ಈ ಚಿತ್ರದಲ್ಲಿ ಧರ್ಮಣ್ಣ ಎನ್ನುವ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಅನ್ವೇಷಣೆಯ ಮೇಲೆ ಕಥೆ ಸಾಗುತ್ತದೆ ಎಂದು ರಮೇಶ್ ಪಂಡಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನನಗೆ ಅಳುವ ಹಾಗೂ ಸಂದೇಶ ನೀಡುವ ಚಿತ್ರಗಳಲ್ಲಿ ಆಸಕ್ತಿ ಇಲ್ಲ. ಜನ ಸಿನಿಮಾ ನೋಡಲು ಬರುವುದು ತಮ್ಮ ನಿತ್ಯದ ಕಷ್ಟಗಳನ್ನು ಮರೆಯುವುದಕ್ಕಾಗಿ. ಚಿತ್ರದಲ್ಲೂ ದುಖದ ಸಂಗತಿ ಇದ್ದರೆ ಯಾರು ಇಷ್ಟ ಪಡುವುದಿಲ್ಲ. ಹಾಗಾಗಿ ಚೇತನ್ ಮುಂಡಾಡಿ ಒಳ್ಳೆಯ ಮನೋರಂಜನೆಯಿರುವ ಕಥೆ ಮಾಡಿಕೊಂಡಿದ್ದಾರೆ. ಅವರಿಗೆ ಬೇಕಾದನ್ನು ಒದಗಿಸುವುದನ್ನು ನಾನು ಮಾಡುತ್ತೇನೆ ಎಂದರು ನಿರ್ಮಾಪಕ ಪ್ರಶಾಂತ್ ಅಂಜನಪ್ಪ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ

    “ಭಾವಪೂರ್ಣ” ದ ಬಗ್ಗೆ ಸವಿಸ್ತಾರವಾಗಿ ಸಂಭಾಷಣೆ ಬರೆದಿರುವ ಸುಂದರ್ ವಿವರಿಸಿದರು. ಮತ್ತೊಬ್ಬ ಮುಖ್ಯ ಪಾತ್ರಧಾರಿ ಮಂಜುನಾಥ್ ಹೆಗಡೆ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿ.ಮನೋಹರ್ ಸಂಗೀತ ನಿರ್ದೇಶನ, ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನ ಹಾಗೂ ಅನಂತರಾಜ್ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಸುಂದರ್ ವೀಣಾ ಸಂಭಾಷಣೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]