Tag: Sunita Kejriwal

  • 24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    ಚಂಡೀಗಢ: ಮುಂದಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ (Assembly Election) ಆಮ್‌ ಆದ್ಮಿ ಪಕ್ಷ ಹರಿಯಾಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದೆ. ಪ್ರಚಾರದ ವೇಳೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮಾದರಿಯಲ್ಲೇ ಹಲವು ಉಚಿತ ಗ್ಯಾರಂಟಿಗಳನ್ನ (AAP Guarantees) ಘೋಷಣೆ ಮಾಡಿದೆ.

    ಹರಿಯಾಣದಲ್ಲಿಂದು ನಡೆದ ಆಮ್‌ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ʻಕೇಜ್ರಿವಾಲ್ ಕಿ ಗ್ಯಾರಂಟಿʼ (Kejriwal ki guarantees) ಘೋಷಣೆ ಮಾಡಿದ್ದಾರೆ. ಸುನೀತಾ ಕೇಜ್ರಿವಾಲ್ (Sunita Kejriwal), ಆಪ್ ಹಿರಿಯ ನಾಯಕ ಸಂಜಯ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಇತರ ಆಪ್‌ ನಾಯಕರು ಗ್ಯಾರಂಟಿ ಪತ್ರಗಳನ್ನ ಬಿಡುಗಡೆ ಮಾಡಿದ್ದಾರೆ.

    ಆಪ್‌ ಗ್ಯಾರಂಟಿ ಏನು?
    24 ಗಂಟೆ ಉಚಿತ ವಿದ್ಯುತ್‌ ಸರಬರಾಜು, ಪ್ರತಿಯೊಬ್ಬರಿಗೂ ಉಚಿತ ವೈದ್ಯಕೀಯ ಚಿಕಿತ್ಸೆ, ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ನಿರುದ್ಯೋಗ ಯುವಕರಿಗೆ ಉದ್ಯೋಗ ಮತ್ತು ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ಆಪ್‌ ಘೋಷಣೆ ಮಾಡಿದೆ.

    ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸುನೀತಾ ಕೇಜ್ರಿವಾಲ್‌, ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ದೆಹಲಿ ಮತ್ತು ಪಂಜಾಬ್‌ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಮುಂದುವರಿದು ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಚಿಸಿದ್ದಾರೆಂದು ತಿಳಿಸಿದಾರೆ.

    ಕೇಜ್ರಿವಾಲ್‌ ಹುಟ್ಟಿ ಬೆಳೆದಿದ್ದು ಹರಿಯಾಣದ ಹಿಸಾರ್‌ನಲ್ಲಿ. ಇಲ್ಲಿ ಹುಟ್ಟಿದ ಹುಡುಗನೊಬ್ಬ ರಾಷ್ಟ್ರ ರಾಜಧಾನಿಯನ್ನು ಆಳುತ್ತಾನೆ ಅಂತ ಯಾರೊಬ್ಬರು ಸಹ ಕನಸಿನಲ್ಲೂ ಊಹಿಸಿರಲಿಲ್ಲ. ಇದು ಯಾವುದೇ ಪವಾಡಕ್ಕಿಂತ ಕಡಿಮೆಯೇನಿಲ್ಲ. ಅವರು ಇನ್ನೂ ಏನಾದರೂ ಮಹತ್ಕಾರ್ಯ ಮಾಡಬೇಕು ಆ ದೇವರು ಬಯಸಿದ್ದಾನೆ ಎಂದು ಭಾವುಕರಾದರು.

    ಇದೇ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ದೆಹಲಿ, ಹರಿಯಾಣ ಮತ್ತು ಗುಜರಾತ್‌ನ ಆಪ್‌ ಅಭ್ಯರ್ಥಿಗಳ ಪರ ಸಕ್ರೀಯವಾಗಿ ಪ್ರಚಾರ ಮಾಡಿದ್ದರು. ಇದೀಗ ಮುಂಬರುವ ವಿಧಾನಸಭಾ ಚುನಾವಣೆಗೆ ಹರಿಯಾಣದ ಎಲ್ಲಾ 90 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಪ್‌ ನಿರ್ಧರಿಸಿದೆ.

  • ಕೇಜ್ರಿವಾಲ್ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಿಸಿದೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ

    ಕೇಜ್ರಿವಾಲ್ ನೇರ ಭೇಟಿಗೆ ಪತ್ನಿ ಸುನಿತಾಗೆ ಅನುಮತಿ ನಿರಾಕರಿಸಿದೆ: ತಿಹಾರ್ ಅಧಿಕಾರಿಗಳ ವಿರುದ್ಧ ಆಪ್ ಆರೋಪ

    ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ (Liquor Policy Case) ಬಂಧನಕ್ಕೊಳಗಾಗಿ ಸದ್ಯ ನ್ಯಾಯಂಗ ಬಂಧನದಡಿ ತಿಹಾರ್ ಜೈಲಿನಲ್ಲಿರುವ (Tihar Jail) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನೇರ ಭೇಟಿ ಮಾಡಲು ಪತ್ನಿ ಸುನೀತಾ (Sunita) ಅವರಿಗೆ ಅನುಮತಿ ನಿರಾಕರಿಸಲಾಗಿದೆ. ಕೇವಲ ಕಿಟಕಿಯ ಮೂಲಕ ಭೇಟಿಗೆ ಅವಕಾಶ ನೀಡಲಾಗಿದೆ. ಇದು ಅಮಾನವೀಯ ನಡೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.

    ಕಳೆದ ಅಕ್ಟೋಬರ್‌ನಲ್ಲಿ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ತಿಹಾರ್‌ನಲ್ಲಿ ಆರು ತಿಂಗಳು ಕಳೆದು ಈ ತಿಂಗಳ ಆರಂಭದಲ್ಲಿ ಜಾಮೀನು ಪಡೆದ ಸಂಜಯ್ ಸಿಂಗ್ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಅಪರಾಧಿಗಳು ಕುಟುಂಬಸ್ಥರನ್ನು ಭೇಟಿಯಾಗಲು ಜೈಲಿನಲ್ಲಿ ಅನುಮತಿ ಇದೆ. ಆದರೆ ಕೇಜ್ರಿವಾಲ್ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ಅರವಿಂದ್ ಕೇಜ್ರಿವಾಲ್ ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದವರು ತಮ್ಮ ಪತ್ನಿಯನ್ನು ನಡುವೆ ಗಾಜಿನಿಂದ ಕಿಟಕಿಯ ಮೂಲಕ ಭೇಟಿಯಾಗುವಂತೆ ಮಾಡುತ್ತಿದ್ದಾರೆ. ಇಂತಹ ಅಮಾನವೀಯ ವರ್ತನೆ ಏಕೆ? ಎಂದು ಸಂಜಯ್ ಸಿಂಗ್ ಪ್ರಶ್ನಿಸಿದರು. ನಮ್ಮನ್ನು ಅವಮಾನಿಸಲು ಮತ್ತು ನೈತಿಕತೆ ಸ್ಥೈರ್ಯ ಕುಗ್ಗಿಸಲು ಇದನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಬೇಕರಿಯಲ್ಲಿ ಗುಲಾಬ್ ಜಾಮೂನು ಖರೀದಿಸಿದ ರಾಹುಲ್ ಗಾಂಧಿ

    ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರ ಒತ್ತಾಯದ ಮೇರೆಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಜೈಲಿನಲ್ಲಿ ಅವರು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ನಡುವಿನ ಸಭೆಯನ್ನು ಕೊನೆಯ ಕ್ಷಣದಲ್ಲಿ ಅಧಿಕಾರಿಗಳು ರದ್ದುಗೊಳಿಸಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

    ಸಹಾರಾ ಇಂಡಿಯಾದ ದಿವಂಗತ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತಾ ರಾಯ್ ಅವರು ತಿಹಾರ್‌ನಲ್ಲಿ ಇಂಟರ್‌ನೆಟ್, ಫೋನ್ ಮತ್ತು ಕಚೇರಿ ಸೌಲಭ್ಯಗಳನ್ನು ಹೊಂದಿದ್ದರು. ಚಂದ್ರ ಬ್ರದರ್ಸ್ಗೆ ಜೈಲು ಆವರಣದಲ್ಲಿ ನಿಯಮಿತ ಸಭೆಗಳನ್ನು ನಡೆಸಲು ಮತ್ತು ಫೈಲ್‌ಗಳಿಗೆ ಸಹಿ ಹಾಕಲು ಅವಕಾಶವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಬಗ್ಗೆ ನೀವು ಯಾಕೆ ಹೆದರುತ್ತೀರಿ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ ತೊರೆದ 400 ಕಾರ್ಯಕರ್ತರು

  • ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಪತ್ರ

    ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ- ಜೈಲಿನಿಂದ್ಲೇ ಕೇಜ್ರಿವಾಲ್‌ ಪತ್ರ

    ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಜೈಲಿನಿಂದಲೇ ಇದೀಗ ಮತ್ತೊಂದು ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು ತಮ್ಮ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ.

    ಈ ಪತ್ರವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್‌ (Sunita Kejriwal) ಅವರು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ..?: ತಮ್ಮ ಗೈರುಹಾಜರಿಯಲ್ಲಿ ದೆಹಲಿ ಜನ ಯಾವುದೇ ತೊಂದರೆಗಳನ್ನು ಎದುರಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಪ್ (AAP) ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೈಲು ಸೇರಿದ ಕೇಜ್ರಿವಾಲ್‌ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್‌ ಗಂಭೀರ ಆರೋಪ

    ನಾನು ಜೈಲಿನಲ್ಲಿರುವ ಮಾತ್ರಕ್ಕೆ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು (Delhi MLA) ಪ್ರತಿದಿನ ತಮ್ಮ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.

    ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾದ ಕೇಜ್ರಿವಾಲ್‌ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸೋಮವಾರ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಆಹಾರವನ್ನು ನೀಡಲಾಗುತ್ತದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ಕ್ವಿಕ್‌ ರೆಸ್ಪಾನ್ಸ್‌ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

  • ಬಹುಶ:  ಕೇಜ್ರಿವಾಲ್‌ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು, ಅಂದು ಹುತಾತ್ಮರಾಗಿದ್ದ ಅವರು ಈಗಲೂ ಹೋರಾಡುತ್ತಿದ್ದಾರೆ: ಸುನಿತಾ ಕೇಜ್ರಿವಾಲ್‌

    ಬಹುಶ: ಕೇಜ್ರಿವಾಲ್‌ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು, ಅಂದು ಹುತಾತ್ಮರಾಗಿದ್ದ ಅವರು ಈಗಲೂ ಹೋರಾಡುತ್ತಿದ್ದಾರೆ: ಸುನಿತಾ ಕೇಜ್ರಿವಾಲ್‌

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ದೇಶಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಪತ್ನಿ ಸುನಿತಾ ಕೇಜ್ರಿವಾಲ್‌ (Sunita Kejriwal) ಹೇಳಿದ್ದಾರೆ.

    ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದನ್ನು ಖಂಡಿಸಿ ದೆಹಲಿಯಲ್ಲಿ INDIA ಒಕ್ಕೂಟದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

    ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ (BJP) ಹೇಳುತ್ತಿದೆ. ಕೇಜ್ರಿವಾಲ್ ರಾಜೀನಾಮೆ ನೀಡಬೇಕಾ? ದೇಶಕ್ಕಾಗಿ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಬಹುಶ: ಕೇಜ್ರಿವಾಲ್‌ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು ಅನಿಸುತ್ತದೆ. ಹೋರಾಟದಲ್ಲಿ ಹುತಾತ್ಮರಾಗಿದ್ದ ಅವರು ಈಗಲೂ ಮತ್ತೆ ಹೋರಾಟ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಎಲ್‌ಕೆ ಅಡ್ವಾಣಿ ನಿವಾಸದಲ್ಲೇ ಭಾರತ ರತ್ನ ಪ್ರದಾನ

    ಅರವಿಂದ್ ಕೇಜ್ರಿವಾಲ್ ಬರೆದ ಪತ್ರ ಓದಿದ ಅವರು, ನಾನು ಮತ ಕೇಳುವುದಿಲ್ಲ. ಭಾರತ ಒಂದು ಮಹಾನ್ ದೇಶವಾಗಿದ್ದು ತನ್ನದೇಯಾದ ಸಂಸ್ಕೃತಿ ಇದೆ. ಆದರೂ ಭಾರತದಲ್ಲಿ (India) ಬಡತನ ಯಾಕಿದೆ? ನಾನು ಜೈಲಿನಲ್ಲಿ ಭಾರತ ಮಾತೆಗಾಗಿ ಯೋಚನೆ ಮಾಡುತ್ತೇನೆ. ಭಾರತ ಮಾತೆ ದು:ಖದಲ್ಲಿದ್ದಾಳೆ, ನೋವಿನಲ್ಲಿದ್ದಾಳೆ. ನಾವು ಸೇರಿ 140 ಕೋಟಿ ಜನರ ಹೊಸ ಭಾರತ ಕಟ್ಟೋಣ. ಬಡತನ, ನಿರುದ್ಯೋಗ ಇಲ್ಲದ ದೇಶ ಕಟ್ಟೋಣ. ಒಳ್ಳೆಯ ಶಿಕ್ಷಣ, ವೈದ್ಯಕೀಯ ಸೌಲಭ್ಯ ಸಿಗುವ ದೇಶ ನಿರ್ಮಿಸೋಣ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವಿಶ್ವ ನಾಯಕನಾಗುವ ದೇಶ ನಿರ್ಮಾಣ ಮಾಡೋಣ. ಆ ದೇಶದಲ್ಲಿ ದ್ವೇಷ ವೈರತ್ವ ಮುಕ್ತವಾಗಿರಲಿದೆ. INDIA ಒಕ್ಕೂಟ ಹೃದಯದಲ್ಲಿದೆ ಎಂದು ಹೇಳಿದರು.

    ಬಂದನದಲ್ಲಿರುವ ಕೇಜ್ರಿವಾಲ್ 6 ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಪೂರ್ತಿ ದೇಶದಲ್ಲಿ 24 ಗಂಟೆ ವಿದ್ಯುತ್, ಬಡವರಿಗೆ ವಿದ್ಯುತ್ ಉಚಿತ, ಪ್ರತಿ ಊರಿನಲ್ಲಿ ಒಳ್ಳೆಯ ಶಾಲೆ, ಪ್ರತಿ ನಗರದಲ್ಲಿ ಅತ್ಯುತ್ತಮ ಸರ್ಕಾರಿ ಆಸ್ಪತ್ರೆ ನಿರ್ಮಿಸಿ ಉಚಿತ ಚಿಕಿತ್ಸೆ, ರೈತರಿಗೆ ಸ್ವಾಮಿನಾಥನ್ ವರದಿ ಅನುಷ್ಠಾನ, ದೆಹಲಿ ಪೂರ್ಣ ರಾಜ್ಯದ ಅಸ್ತಿತ್ವ ನೀಡುವ ಘೋಷಣೆ ಮಾಡಿದ್ದಾರೆ ಎಂದು ಸುನಿತಾ ಕೇಜ್ರಿವಾಲ್‌ ತಿಳಿಸಿದರು.

     

  • ಸುನೀತಾ ಕೇಜ್ರಿವಾಲ್ ಭೇಟಿಯಾದ ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಪತ್ನಿ

    ಸುನೀತಾ ಕೇಜ್ರಿವಾಲ್ ಭೇಟಿಯಾದ ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಪತ್ನಿ

    ನವದೆಹಲಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ (Hemant Soren) ಅವರ ಪತ್ನಿ ಕಲ್ಪನಾ ಸೊರೆನ್ (Kalpana Soren) ಅವರು ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ.

    ಸುನಿತಾ ಅವರು, ಕಲ್ಪನಾ ಸೊರೆನ್ ಭೇಟಿಯ ನಂತರ, ದೆಹಲಿಯ ಸಚಿವೆ ಅತಿಶಿ ಅವರು ಎಕ್ಸ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಸುನಿತಾ ಅವರು, ಕಲ್ಪನಾ ಸೊರೆನ್ ಅವರನ್ನು ನೋಡಿದ ನಂತರ ಬಿಜೆಪಿಯು ಹೆದರುತ್ತಿದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳ ನೇತೃತ್ವ ವಹಿಸುತ್ತಿರುವ ಸೊರೆನ್ ಮತ್ತು ಕೇಜ್ರಿವಾಲ್ ವಿರುದ್ಧ ಕೇಂದ್ರೀಯ ಸಂಸ್ಥೆಗಳ ಕ್ರೂರ ನಡೆಗೆ ಬೆದರದ ಇಬ್ಬರು ಬಲಿಷ್ಠ ಮಹಿಳೆಯರ ಈ ವೀಡಿಯೊವನ್ನು ನೋಡಿದರೆ ಬಿಜೆಪಿ ಭಯಪಡಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

    ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯದ ಕ್ರಮದ ನಂತರ ಕಲ್ಪನಾ ಸೊರೆನ್, ಸುನೀತಾ ಕೇಜ್ರಿವಾಲ್ ಅವರೊಂದಿಗೆ ಚರ್ಚಿಸಿದ್ದಾರೆ. ಬಳಿಕ ಅವರು ಎಕ್ಸ್‍ನಲ್ಲಿ ಸುನೀತಾ ಕೇಜ್ರಿವಾಲ್ ಅವರ ಸಮಸ್ಯೆಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರೊಂದಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಲು ಪ್ರಯತ್ನಿಸಿದೆ. ಸ್ನೇಹಿತೆಯಾಗಿ ಅವರ ಸಮಸ್ಯೆಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿ ಪ್ರಕಟವಾದಾಗ ಅಕ್ರಮ ಬಂಧನದ ಈ ಘಟನೆ ಪ್ರಜಾಸತ್ತಾತ್ಮಕ ದೇಶಕ್ಕೆ ಸಾಮಾನ್ಯ ಘಟನೆಯಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ, ಹೇಮಂತ್ ಸೊರೆನ್ ನೇತೃತ್ವದಲ್ಲಿ ಇಡೀ ಜಾರ್ಖಂಡ್ ಕೇಜ್ರಿವಾಲ್ ಅವರೊಂದಿಗೆ ನಿಂತಿದೆ ಎಂದು ಕಲ್ಪನಾ ಸೊರೆನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್

    ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್

    – ದೆಹಲಿಯನ್ನ ನಾಶ ಮಾಡಲು ಬಯಸಿದ್ದಾರೆ – ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಪತ್ನಿ ಕೆಂಡ

    ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? ಎಂದು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಬಹಿರಂಗ ಪಡಿಸಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂದು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ (Sunita Kejriwal) ತಿಳಿಸಿದ್ದಾರೆ.

    ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ನಮ್ಮ‌ ನಿವಾಸದ ಮೇಲೆ ದಾಳಿ ನಡೆಸಿದಾಗ ಇಡಿ ಅಧಿಕಾರಿಗಳಿಗೆ ಕೇವಲ 75,000 ರೂ. ಲಭಿಸಿದೆ. ಇಡಿ (ED Raid) ಈವರೆಗೆ 250ಕ್ಕೂ ಹೆಚ್ಚು ದಾಳಿಗಳನ್ನ ನಡೆಸಿದೆ ಹಣಕ್ಕಾಗಿ ಹುಡುಕುತ್ತಿದ್ದಾರೆ ಅವರಿಗೆ ಈವರೆಗೂ ಏನೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

    ಎರಡು ದಿನಗಳ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಜಲಸಚಿವ ಅತಿಶಿ ಅವರಿಗೆ ಪತ್ರ ಕಳುಹಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಅವರ ವಿರುದ್ಧ ಕೇಸ್ ದಾಖಲಿಸಿದೆ. ಒಟ್ಟಿನಲ್ಲಿ ಅವರು ದೆಹಲಿಯನ್ನ ನಾಶಮಾಡಲು ಬಯಸುತ್ತಾರೆ? ಜನರು ನರಳುತ್ತಲೇ ಇರಬೇಕೆಂದು ಅವರು ಬಯಸುತ್ತಾರೆಯೇ? ಅರವಿಂದ್ ಕೇಜ್ರಿವಾಲ್‌ಗೆ ಈ ಘಟನೆಯಿಂದ ತುಂಬಾ ನೋವಾಗಿದೆ ಎಂದು ಭಾವುಕರಾಗಿದ್ದಾರೆ.

    ನನ್ನ ಪತಿ ನಿಜವಾದ ದೇಶಭಕ್ತ, ನಿರ್ಭೀತ ಮತ್ತು ಧೈರ್ಯಶಾಲಿ ವ್ಯಕ್ತಿ ಅವರಿಗೆ ದೀರ್ಘಾಯುಷ್ಯ, ಆರೋಗ್ಯ ಮತ್ತು ಯಶಸ್ಸು ಸಿಗಲಿ ಎಂದು ಜನ ಬಯಸುತ್ತಾರೆ. ಅವರು ದೈಹಿಕವಾಗಿ ಜೈಲಿನಲ್ಲಿದ್ದರೂ, ಅವರ ಆತ್ಮವು ಜನರ ನಡುವೆ ಇದೆ ಎಂದು ಸುನೀತಾ ಕೇಜ್ರಿವಾಲ್ ಹೇಳಿದ್ದಾರೆ. ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿರುವ ಇಡಿ ಮಾರ್ಚ್ 28 ವರೆಗೂ ಕಸ್ಟಡಿಗೆ ಪಡೆದುಕೊಂಡಿದೆ.

  • ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ಬಿಗ್ ರಿಲೀಫ್

    ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ಬಿಗ್ ರಿಲೀಫ್

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಪತ್ನಿ ಸುನೀತಾ ಕೇಜ್ರಿವಾಲ್ (Sunita Kejriwal) ವಿರುದ್ಧ ತೀಸ್ ಹಜಾರಿ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ಗೆ ದೆಹಲಿ ಹೈಕೋರ್ಟ್ (High Court) ತಡೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ (Justice Amit Bansal) ಫೆಬ್ರವರಿ 1 ರವರೆಗೂ ಮಧ್ಯಂತರ ತಡೆ ನೀಡಿದ್ದಾರೆ.

    ಎರಡು ವಿಭಿನ್ನ ಕ್ಷೇತ್ರಗಳಿಗೆ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಸೇರ್ಪಡೆಗೊಳ್ಳುವ ಮೂಲಕ 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು ಆಗಸ್ಟ್ 29ರಂದು ಸಮನ್ಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ

    2019ರಲ್ಲಿ ಸುನೀತಾ ಕೇಜ್ರಿವಾಲ್ ವಿರುದ್ಧ ಖುರಾನಾ ದೂರು ದಾಖಲಿಸಿದ್ದರು, ಸುನೀತಾ ದೆಹಲಿಯ ಸಾಹಿಬಾಬಾದ್ (ಗಾಜಿಯಾಬಾದ್ ಕ್ಷೇತ್ರ) ಮತ್ತು ಚಾಂದಿನಿ ಚೌಕ್‌ನ ಮತದಾರರ ಪಟ್ಟಿಯಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 17ಅನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು. ಇದನ್ನೂ ಓದಿ: ‘ಮೈ ಲಾರ್ಡ್’ ಹೇಳೋದು ಬಿಟ್ರೆ ನನ್ನ ಸಂಬಳದಲ್ಲಿ ಅರ್ಧ ಕೊಡ್ತೀನಿ: ಸುಪ್ರೀಂ ಜಡ್ಜ್

    ಸಮನ್ಸ್ ಜಾರಿ ಮಾಡಿರುವ ಆದೇಶವನ್ನು ಪ್ರಶ್ನಿಸಿ ಸುನೀತಾ ಕೇಜ್ರಿವಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರೆಬೆಕಾ ಜಾನ್ ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ವ್ಯಕ್ತಿಯೊಬ್ಬರು ಸುಳ್ಳು ಹೇಳಿಕೆ ನೀಡಿದರೆ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್ಗೆ ತಿಳಿಸಿದರು. ಸುಳ್ಳು ಘೋಷಣೆ ಮಾಡಲಾಗಿದೆ. ಸರಿಯಾದ ಮನಸ್ಸಿನ ಅನ್ವಯವಿಲ್ಲದೆ ಸಮನ್ಸ್ ನೀಡಲಾಗಿದೆ ಎಂದು ಜಾನ್ ವಾದಿಸಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ

    ಇದು ಖಾಸಗಿ ದೂರು. ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡುವ ಮೊದಲು, ಚುನಾವಣಾ ಆಯೋಗದಿಂದ ಮಾಹಿತಿ ಪಡೆಯಬೇಕು ಜಾನ್ ಹೇಳಿದ್ದರು. ರಾಜ್ಯದ ಪರ ಹಾಜರಾದ ವಕೀಲರು ದೂರನ್ನು ಮಿತಿಯಿಂದ ನಿರ್ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು