Tag: Supplementary Exam

  • ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ ಫಲಿತಾಂಶ ಪ್ರಕಟ – ಬಾಲಕಿಯರೇ ಮೇಲುಗೈ

    ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ ಫಲಿತಾಂಶ ಪ್ರಕಟ – ಬಾಲಕಿಯರೇ ಮೇಲುಗೈ

    ಬೆಂಗಳೂರು : ಮೇ- ಜೂನ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ (2nd PUC Supplementary Result) ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಪ್ರಕಟಗೊಂಡಿದೆ. ಮುಖ್ಯ ಪರೀಕ್ಷೆಯಂತೆ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ‌ ಮೇಲುಗೈ ಸಾಧಿಸಿದ್ದಾರೆ‌

    ಇಲಾಖೆ ವೆಬ್ ಸೈಟ್‌ನಲ್ಲಿ ‌ಫಲಿತಾಂಶ ಲಭ್ಯವಿದೆ. ಪೂರಕ ಪರೀಕ್ಷೆಯಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದು, ರಾಜ್ಯದಲ್ಲಿ 32% ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದವರ ಪೈಕಿ 28,901 ಬಾಲಕರು (30.22%) ಹಾಗೂ 21,577 ಬಾಲಕಿಯರು (34.75%) ತೇರ್ಗಡೆಯಾಗಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.

    ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿದೆ.

    ಪರೀಕ್ಷೆಯ ಫಲಿತಾಂಶದ ವೆಬ್‌ಸೈಟ್‌ ವೀಕ್ಷಿಸಲು ಕ್ಲಿಕ್‌ ಮಾಡಿ: Karnataka 2nd PUC supplementary result

  • ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ (PUC) ಪೂರಕ ಪರೀಕ್ಷೆ (Exam) ಫಲಿತಾಂಶ ಸೆಪ್ಟೆಂಬರ್ 12ಕ್ಕೆ ಪ್ರಕಟಿಸುವುದಾಗಿ ಪಿಯುಸಿ ಬೋರ್ಡ್ ತಿಳಿಸಿದೆ.

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ಸೆಪ್ಟೆಂಬರ್ 12 ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್ ಸೈಟ್‍ನಲ್ಲಿ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟಿಸಲಿದೆ. karresults.nic.in ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಆಗಸ್ಟ್‌ 12 ರಿಂದ 25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಬಗ್ಗೆ ಬಿಗ್‍ ಬುಲೆಟಿನ್‍ನಲ್ಲಿ ಪ್ರಸ್ತಾಪ – ಸಿದ್ದರಾಮಯ್ಯ ಪ್ರಶಂಸೆ

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

    ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

    ಬೆಂಗಳೂರು: ಇಂದಿನಿಂದ ಜುಲೈ 4ರವರೆಗೆ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ(SSLC) ಪೂರಕ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ಇಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

    ಪೂರಕ ಪರೀಕ್ಷೆಗೆ ಒಟ್ಟು 94,649 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 63,363 ಬಾಲಕರು ಹಾಗೂ 31,283 ಬಾಲಕಿಯರು ಪರೀಕ್ಷೆ ನೋಂದಣಿಯಾಗಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪ್ರಮುಖ ಪರೀಕ್ಷೆಗೆ ಇದ್ದ ಕೋವಿಡ್ ಮಾರ್ಗಸೂಚಿಗಳೇ ಪೂರಕ ಪರೀಕ್ಷೆಗೆ ಇರಲಿವೆ. ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್‍ನಲ್ಲಿ ನಾಯಿಗಳಿಗೆ ನಿಷೇಧ

    ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಉಚಿತ ಬಸ್ ಸೇವೆ ನೀಡುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿಗಳು ಎಕ್ಸಾಂ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತೆ ಅಂತ ಎಸ್‍ಎಸ್‍ಎಲ್ಸಿ ಬೋರ್ಡ್ ತಿಳಿಸಿದೆ.

    Live Tv

  • ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

    ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

    ಬೆಂಗಳೂರು: ಕೊರೊನಾ ಮಧ್ಯೆಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದೀಗ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿದೆ.

    ರಾಜ್ಯಾದ್ಯಂತ 2 ಲಕ್ಷದ 12 ಸಾವಿರದ 652 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 1,29,975 ವಿದ್ಯಾರ್ಥಿಗಳು, 82,677 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಸೆಪ್ಟೆಂಬರ್ 19ರವರೆಗೂ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ಇಂದು ಉರ್ದು, ಸಂಸ್ಕೃತ ವಿಷಯಗಳ ಪರೀಕ್ಷೆ ನಡೆಯಲಿದೆ.

    ಸುಮಾರು 305 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೊರೊನಾ ಮಾರ್ಗಸೂಚಿ ಅನ್ವಯದಂತೆಯೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ, ಸಿಇಟಿ ಪರೀಕ್ಷೆಗೆ ಇದ್ದ ಮಾರ್ಗಸೂಚಿ ಈ ಪರೀಕ್ಷೆಗೂ ಅನ್ವಯ ಆಗಿದೆ. ಪರೀಕ್ಷೆಗೆ ಈಗಾಗಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗಿದೆ. 305 ಪರೀಕ್ಷಾ ಕೇಂದ್ರಗಳಿಗೂ ವಿಶೇಷ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್‍ಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವುದಕ್ಕೂ ನಿರ್ಬಂಧ ಹೇರಲಾಗಿದೆ.

  • ಪೂರಕ ಪರೀಕ್ಷೆ, ಮರು ಮೌಲ್ಯಮಾಪನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

    ಪೂರಕ ಪರೀಕ್ಷೆ, ಮರು ಮೌಲ್ಯಮಾಪನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

    ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ.

    ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, ಜೂನ್ 21ರಿಂದ 28ವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮೇ 11 ರಿಂದ ಮೇ 21 ಕೊನೆ ದಿನವಾಗಿದ್ದು, ಉತ್ತರ ಪತ್ರಿಕೆ ಫೋಟೋ ಕಾಪಿ ಪಡೆಯಲು ಒಂದು ವಿಷಯಕ್ಕೆ 305 ರೂ. ನೀಡಬೇಕಾಗುತ್ತದೆ.

    ಮರು ಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 705 ರೂ. ಆಗಿದ್ದು, ಆನ್ ಲೈನ್ ಮೂಲಕ ಉತ್ತರ ಪತ್ರಿಕೆ, ಮರು ಮೌಲ್ಯಮಾಪನ ಅರ್ಜಿ ಸಲ್ಲಿಸಬೇಕು. ಮಧ್ಯಾಹ್ನ 1 ಗಂಟೆಯ ನಂತರ ಎಸ್.ಎಸ್.ಎಲ್.ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೇ 8 ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

    ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ಈ ಕೆಳಗಿನಂತಿದೆ.

    http://sslc.kar.nic.in

    http://karresults.nic.in

  • ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರು ಮೌಲ್ಯಮಾಪನಕ್ಕೆ ಶುಲ್ಕ ಎಷ್ಟು?

    ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರು ಮೌಲ್ಯಮಾಪನಕ್ಕೆ ಶುಲ್ಕ ಎಷ್ಟು?

    ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜೂನ್ 8ರಿಂದ 20ವರೆಗೆ ಪರೀಕ್ಷೆ ನಡೆಯಲಿದೆ.

    ಮರು ಮೌಲ್ಯಮಾಪನ, ಮರು ಎಣಿಗೆ ಅರ್ಜಿ ಸಲ್ಲಿಸಲು ಮೇ 14 ಕೊನೆ ದಿನಾಂಕ ಆಗಿದ್ದು, ಮರು ಮೌಲ್ಯಮಾಪನ ಒಂದು ವಿಷಯಕ್ಕೆ 1,670 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ: ಶೇ.59.56 ವಿದ್ಯಾರ್ಥಿಗಳು ಪಾಸ್, ದಕ್ಷಿಣ ಕನ್ನಡ ಫಸ್ಟ್

    ಪರೀಕ್ಷಾ ಅಕ್ರಮ ಎಸೆಗಿದ 17 ವಿದ್ಯಾರ್ಥಿಗಳು ಡಿಬಾರ್ ಆಗಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಹಾಗೂ ಮರು ಮೌಲ್ಯಮಾಪನ ಶುಲ್ಕ ಪಾವತಿಸಲು ಆನ್ ಲೈನ್ ವ್ಯವಸ್ಥೆ ಮಾಡಲಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಒಂದು ವಿಷಯಕ್ಕೆ 530 ರೂಪಾಯಿ ಆಗಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಮೇ 7 ಕೊನೆ ದಿನಾಂಕವಾಗಿದೆ.  

    ಈ ಬಾರಿ ಉನ್ನತ ಶ್ರೇಣಿಯಲ್ಲಿ 54,692 ವಿದ್ಯಾರ್ಥಿಗಳು ಪಾಸಾಗಿದ್ದು, 2,13,611 ಪ್ರಥಮ ದರ್ಜೆ, 82,532 ದ್ವಿತೀ ದರ್ಜೆ, 57,586 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.