Tag: Supriya Shrinate

  • ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ಸಂಸದ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಚು‌ನಾವಣಾ ಆಯೋಗ ಛೀಮಾರಿ

    ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ಸಂಸದ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಚು‌ನಾವಣಾ ಆಯೋಗ ಛೀಮಾರಿ

    ನವದೆಹಲಿ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ದಿಲೀಪ್ ಘೋಷ್ (Dilip Ghosh) ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ (Supriya Shrinate) ಅವರಿಗೆ ಚುನಾವಣಾ ಆಯೋಗ (Election Commission) ಛೀಮಾರಿ ಹಾಕಿದೆ. ಇಬ್ಬರೂ ನಾಯಕರ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಆಯೋಗ ಎಚ್ಚರಿಕೆ ನೀಡಿದ್ದು, ಚುನಾವಣಾ ಸಮಯದಲ್ಲಿ ಆಯೋಗವು ಅವರ ಮೇಲೆ ವಿಶೇಷ ನಿಗಾ ಇಡಲಿದೆ ಎಂದು ತಿಳಿಸಿದೆ.

    ನೀತಿ ಸಂಹಿತೆ ಉಲ್ಲಂಘಿಸಿ ವೈಯಕ್ತಿಕ ದಾಳಿ ನಡೆಸಿದ ಹಿನ್ನೆಲೆ ಚುನಾವಣಾ ಆಯೋಗ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನೋಟಿಸ್‌ಗೆ ಉತ್ತರಿಸಿದ ಉಭಯ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿ ವೈಯಕ್ತಿಕ ದಾಳಿ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

    ಉತ್ತರವನ್ನು ಸ್ವೀಕರಿಸಿದ ನಂತರ ಆಯೋಗವು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಮುಂದೆ ಇಂತಹ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಚುನಾವಣಾ ಸಮಯದಲ್ಲಿ ಇಬ್ಬರೂ ನಾಯಕರ ಹೇಳಿಕೆಗಳನ್ನು ಚುನಾವಣಾ ಆಯೋಗವು ವಿಶೇಷವಾಗಿ ಪರಿಶೀಲಿಸುತ್ತದೆ. ಇಬ್ಬರೂ ನಾಯಕರು ಕೀಳು ಮಟ್ಟದ ವೈಯಕ್ತಿಕ ದಾಳಿ ನಡೆಸಿದ್ದು, ಇದು ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಉಲ್ಲಂಘನೆಯಾಗಿದೆ ಎಂದು ಆಯೋಗ ಹೇಳಿದೆ.

    ಸೋಮವಾರದಿಂದ ಈ ಇಬ್ಬರು ನಾಯಕರ ಚುನಾವಣಾ ಸಂಬಂಧಿತ ಸಂವಹನಗಳ ಮೇಲೆ ಆಯೋಗವು ವಿಶೇಷ ಮತ್ತು ಹೆಚ್ಚುವರಿ ನಿಗಾ ಇರಿಸಲಿದೆ. ಇದೇ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ತಮ್ಮ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡುವಂತೆ ಆಯೋಗವು ಆಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸೂಚನಾ ಪ್ರತಿಯನ್ನು ಕಳುಹಿಸಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ – ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ ದೆಹಲಿ ಸಿಎಂ

    ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ವಿರುದ್ಧ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯವಾಗಿ ಪೋಸ್ಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಕಾರಣವಾಗಿತ್ತು‌. ಬಿಜೆಪಿ ಸಂಸದ ದಿಲೀಪ್ ಘೋಷ್ ಅವರು ಚುನಾವಣಾ ಪ್ರಚಾರದ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

  • ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌

    ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌

    ಜೈಪುರ: ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಕಂಗನಾ ರಣಾವತ್ (Kangana Ranaut) ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌ ಮಾಡಿದ್ದಾರೆ. ನಟಿ ಕಂಗನಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಅಧ್ಯಕ್ಷೆ ಸುಪ್ರಿಯಾ ಶ್ರೀನಾಥೆ ತಾ (Supriya Shrinate) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿನ್‌ ಪೈಲಟ್‌ (Sachin Pilot) ಅವರು, ಯಾರಾದರೂ ತಪ್ಪು ಮಾಡಿದರೆ, ತಪ್ಪು ಹೇಳಿಕೆಗಳನ್ನು ನೀಡಿದರೆ, ಯಾವುದೇ ಪಕ್ಷದವರಾಗಿದ್ದರೂ ಸರಿ ಅದನ್ನು ನಾವು ಸಹಿಸಲ್ಲ. ರಾಜಕೀಯದಲ್ಲಿ ವಾದ-ಪ್ರತಿವಾದಗಳು ಇರಬೇಕು, ಆದ್ರೆ ಭಾಷೆ ಅಸಂಸದೀಯವಾಗಿರಬಾರದು ಎಂದು ಎಚ್ಚರಿಸಿದ್ದಾರೆ.

    ಇಂತಹ ದೊಡ್ಡ ಚುನಾವಣೆಯಲ್ಲಿ, ನಾವು ಸಮಸ್ಯೆಗಳತ್ತ ಗಮನ ಹರಿಸಬೇಕು. ಮತದಾರರು, ಸಾಮಾನ್ಯ ಜನರಿಗೆ ನೇರವಾಗಿ ಸಂಬಂಧಿಸಿದ ಸಮಸ್ಯೆಗಳನ್ನು ನಾವು ಒತ್ತಿಹೇಳಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಅಕ್ರಮ ಗೋಮಾಂಸ ಮಾರಾಟಕ್ಕೆ 60 ಕ್ಕೂ ಹೆಚ್ಚು ಗೋವುಗಳ ವಧೆ – 10 ಸಾವಿರ ಕೆಜಿ ಗೋಮಾಂಸ ಪೊಲೀಸರ ವಶಕ್ಕೆ

    ಟೀಕಿಸಿದ ಸುಪ್ರಿಯಾಗೆ ಟಿಕೆಟ್‌ ಮಿಸ್‌:
    ನಟಿ ಕಂಗನಾ ರಣಾವತ್ ಕುರಿತು ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಅಧ್ಯಕ್ಷೆ ಸುಪ್ರಿಯಾ ಶ್ರೀನಾಥೆ ಅವರನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸದಿರಲು ಪಕ್ಷವು ನಿರ್ಧರಿಸಿದೆ. ಅವರ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಲ್ಲಿ ಸೇತುವೆ ಮೇಲಿಂದ ಬಸ್‌ ಬಿದ್ದು  45 ಪ್ರಯಾಣಿಕರು ಸಾವು – 8 ವರ್ಷದ ಬಾಲಕಿ ಸೇಫ್‌

    ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಅವರನ್ನು ಘೋಷಿಸಿದ ನಂತರ ಸುಪ್ರಿಯಾ ಶ್ರೀನಾಥೆ ನೀಡಿದ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಸುಪ್ರಿಯಾ ತಮ್ಮ ಇನ್​​ಸ್ಟಾಗ್ರಾಮ್​​ನಲ್ಲಿ ಕಂಗನಾ ರಣಾವತ್ ಅವರ ಹಾಟ್ ಫೋಟೊವೊಂದನ್ನು ಪೋಸ್ಟ್ ಮಾಡಿ ʻಕ್ಯಾ ಭಾವ್ ಚಲ್ ರಹಾ ಹೈ ಮಂಡಿ ಮೆ ಕೋಯಿ ಬತಾಯೇಗಾ? (ಮಂಡಿಯಲ್ಲಿನ ಏನ್ ರೇಟ್ ಇದೆ ಎಂದು ಯಾರಾದರೂ ಹೇಳುತ್ತೀರಾ?)ʼ ಎಂದು ಬರೆದುಕೊಂಡಿದ್ದರು. ವ್ಯಾಪಕ ಜನಾಕ್ರೋಶದ ನಂತರ ಆ ಪೋಸ್ಟ್ ಡಿಲೀಟ್ ಮಾಡಿದ್ದರು. ಇದರಿಂದ ಬಿಜೆಪಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರನ್ನೂ ನೀಡಿತ್ತು. ಇದರಿಂದ ಎಚ್ಚೆತ್ತ ಕಾಂಗ್ರೆಸ್‌ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಿಂದ ಸುಪ್ರಿಯಾ ಅವರನ್ನು ಕೈಬಿಟ್ಟಿತು ಎಂದು ಮೂಲಗಳು ತಿಳಿಸಿವೆ.

  • ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ – ಮೋದಿ ವಿರುದ್ಧ ಕಾಂಗ್ರೆಸ್ ದೂರು

    ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ – ಮೋದಿ ವಿರುದ್ಧ ಕಾಂಗ್ರೆಸ್ ದೂರು

    ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ (ಎನ್‌ಸಿಪಿಸಿಆರ್) ಕಾಂಗ್ರೆಸ್ ದೂರು ನೀಡಿದೆ.

    ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನತೆ ದೂರು ನೀಡಿದ್ದು, ಚುನಾವಣಾ ಆಯೋಗಕ್ಕೂ ದೂರಿನ ಪ್ರತಿ ಸಲ್ಲಿಸಲಾಗಿದೆ. ಗುಜರಾತ್ ಚುನಾವಣೆಯಲ್ಲಿ ಪ್ರಚಾರದ ವೇಳೆ ಬಾಲಕಿಯೊಬ್ಬಳು ಬಿಜೆಪಿ ಅಭಿವೃದ್ಧಿ ಬಗ್ಗೆ ಗುಜರಾತಿಯಲ್ಲಿ ಮಾತನಾಡುತ್ತಿರುವ ವಿಡಿಯೋವನ್ನು ಮೋದಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

    ಬಾಲಕಿ ಚುನಾವಣಾ ಪ್ರಚಾರ ಮಾಡಿದ್ದು ಹೇಗೆ?
    ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿಯೇ ಕುಳಿತುಕೊಂಡು ಬಾಲಕಿಯೊಬ್ಬಳು ಬಿಜೆಪಿ ಕುರಿತಂತೆ ಪದ್ಯವೊಂದನ್ನು ಹಾಡುತ್ತಾ, ಹೊಗಳಿರುವ ವೀಡಿಯೋ ಮಂಗಳವಾರ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಿಜೆಪಿ ಇದನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿತ್ತು. ಇದನ್ನೂ ಓದಿ: ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

    ಸುಮಾರು 57 ಸೆಕೆಂಡುಗಳಿರುವ ಈ ವೀಡಿಯೋದಲ್ಲಿ `ಬಿಜೆಪಿ, ಬಿಜೆಪಿ, ಬಿಜೆಪಿ, ಎಲ್ಲಿ ನೋಡಿದರೂ ಬಿಜೆಪಿ, ಪ್ರತಿಯೊಂದು ಚರ್ಚೆಯೂ ಬಿಜೆಪಿಯಿಂದಲೇ ಆರಂಭವಾಗುತ್ತದೆ ಮತ್ತು ಕೊನೆಗೊಳ್ಳುತ್ತದೆ. ಬಿಜೆಪಿಯನ್ನು ಸೋಲಿಸಲು ಜನ ನಾನಾ ಆಟಗಳನ್ನು ಆಡುತ್ತಿದ್ದಾರೆ ಎಂದು ಗುಜರಾತಿ ಭಾಷೆಯಲ್ಲಿ ಬಾಲಕಿ ಪದ್ಯ ಹಾಡಲು ಶುರು ಮಾಡಿದ್ದಾಳೆ. ಬಿಜೆಪಿಯನ್ನು ಪದ್ಯದ ಮೂಲಕ ಹೊಗಳುವುದನ್ನು ಕೇಳಿದ ಮೋದಿ ಅವರು ಕೊನೆಗೆ ಬಾಲಕಿಗೆ ಶಭಾಶ್ ಎಂದು ಮೆಚ್ಚುಗೆ ವ್ಯಕ್ತಪಡಿಸುವುದನ್ನು ಕಾಣಬಹುದಾಗಿದೆ.

    ನಂತರ ಮೋದಿ ಅವರ ಪಕ್ಕದಲ್ಲಿ ಕುಳಿತುಕೊಂಡು ಪದ್ಯ ಹೇಳುವಾಗ ಭಯವಾಗಲಿಲ್ಲವೇ ಎಂಬ ಮಾಧ್ಯಮವೊಂದರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಾಲಕಿ, ನಾನು ಕೋಣೆಗೆ ಹೋಗುವ ಮೊದಲು ಭಯಗೊಂಡಿದ್ದೆ. ಆದರೆ ಅವರು ನನ್ನ ಅಜ್ಜ ಎಂದು ನಾನು ಭಾವಿಸಿದೆ, ಆಮೇಲೆ ಭಯವಾಗಲಿಲ್ಲ ಎಂದು ಹೇಳಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]