Tag: Supriya Sule

  • ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

    ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

    – ವಿಶ್ವ ವೇದಿಕೆಯಲ್ಲಿ ಪಾಕ್‌ ನಿಜ ಬಣ್ಣ ಬಯಲು ಮಾಡಲು ಮುಂದಾದ ಭಾರತ

    ನವದೆಹಲಿ: ಕಳೆದ ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ʻಆಪರೇಷನ್ ಸಿಂಧೂರʼದ ಮೂಲಕ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ಭಯೋತ್ಪಾದನೆ, ಉಗ್ರ ಪೋಷಿತ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಮುಖವಾಡವನ್ನ ಇಡೀ ವಿಶ್ವದ ಮುಂದೆ ಬಿಚ್ಚಿಡಲು ಸಜ್ಜಾಗಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳ 7 ಸಂಸದರ ನಿಯೋಗವನ್ನ ರಚಿಸಿದೆ.

    7 ಸಂಸದರ ನಿಯೋಗದ ಪಟ್ಟಿಗೆ ಕಾಂಗ್ರೆಸ್‌ ಸಂಸದ ಶಶಿ ತರೂ‌ರ್ (Shashi Tharoor) ಅವರ ಹೆಸರನ್ನೂ ಕೇಂದ್ರ ಸರ್ಕಾರ ಸೇರಿಸಿದೆ. ವಿಶೇಷವೆಂದರೆ ಕಾಂಗ್ರೆಸ್‌ನಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾದ ಪಟ್ಟಿಯಲ್ಲಿ 4 ಹೆಸರುಗಳ ಪೈಕಿ ಶಶಿ ತರೂರ್‌ ಅವರ ಹೆಸರೇ ಇಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ.

    Supriya sule

    ಆಪರೇಷನ್‌ ಸಿಂಧೂರದ ಬಳಿಕ ಶಶಿ ತರೂರ್‌ ಅವರು ಪ್ರಧಾನಿ ಮೋದಿ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದರು. ಇದರಿಂದ ʻಲಕ್ಷ್ಮಣ ರೇಖೆʼ ಮೀರಿದ್ದಾರೆ ಎಂದು ಕಾಂಗ್ರೆಸ್‌ನಿಂದಲೇ ಟೀಕೆಗೆ ಒಳಗಾಗಿದ್ದರು.

    ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮೇ 16ರಂದು ನಿಯೋಗಕ್ಕೆ 4 ಸಂಸದರ ಹೆಸರು ಶಿಫಾರಸು ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೋರಿದ್ದರು. ಅದರಂತೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯಂತೆ ಆನಂದ ಶರ್ಮಾ, ಗೌರವ್ ಗೊಗೊಯಿ, ಡಾ. ಸಯದ್ ನಾಸೀರ್ ಹುಸೇನ್ ಮತ್ತು ರಾಜ್ ಬ್ರಾರ್ ಅವರ ಹೆಸರುಗಳನ್ನು ಶಿಫಾರಸು ಮಾಡಿ ಶುಕ್ರವಾರ ಸಂಜೆಯೇ ಪಟ್ಟಿ ಕಳುಹಿಸಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

    ಸಂಸದೀಯ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಿರುವನಂತಪುರದ ಸಂಸದ ಕಾಂಗ್ರೆಸ್‌ನ ಶಶಿ ತರೂ‌ರ್ ಹೆಸರು ಮೊದಲನೆಯದ್ದಾಗಿದೆ. ಬಿಜೆಪಿ ಸಂಸದ ರವಿಶಂಕರ್‌ ಪ್ರಸಾದ್ ಮತ್ತು ಬೈಜಯಂತ್ ಪಾಂಡಾ, ಜೆಡಿಯು ಸಂಸದ ಸಂಜಯ್ ಜಾ, ಡಿಎಂಕೆ ಸಂಸದೆ ಕನಿಮೋಳಿ, ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ, ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ಅವರ ಹೆಸರುಗಳಿವೆ.

  • ಮನೆಯೊಳಗೆ ರಾಜಕೀಯ ಪ್ರವೇಶಿಸಬಾರದು: ಅಜಿತ್ ಪವಾರ್

    ಮನೆಯೊಳಗೆ ರಾಜಕೀಯ ಪ್ರವೇಶಿಸಬಾರದು: ಅಜಿತ್ ಪವಾರ್

    ಮುಂಬೈ: ಎನ್‌ಡಿಎ (NDA) ಜೊತೆ ಕೈ ಜೋಡಿಸಿರುವ ಅಜಿತ್ ಪವಾರ್ (Ajit Pawar) ಮೈತ್ರಿ ಕೂಟದಿಂದ ಹೊರ ಹೋಗುತ್ತಾರಾ ಈ ಪ್ರಶ್ನೆ ಈಗ ಎದ್ದಿದೆ.

    ಮನೆಯೊಳಗೆ ರಾಜಕೀಯ ಪ್ರವೇಶಿಸಬಾರದು. ಕುಟುಂಬದ ಮಧ್ಯೆ ಒಡಕು ಬಂದರೆ ಸಮಾಜ ಇಷ್ಟಪಡುವುದಿಲ್ಲ ಎಂದು ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ (Maharashtra)  ಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ತಪ್ಪನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಆಯ್ತು ಈಗ ಪಾಕ್‌ನಲ್ಲಿ ಪ್ರತಿಭಟನೆ – ಇಮ್ರಾನ್‌ ಬಿಡುಗಡೆಗೆ ಆಗ್ರಹಿಸಿ ಬೀದಿಗಿಳಿದ ಸಾವಿರಾರು ಬೆಂಬಲಿಗರು

    ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ಅಜಿತ್ ತನ್ನ ಪತ್ನಿ ಸುನೇತ್ರಾ ಪವಾರ್‌ರವರನ್ನು ಸೋದರ ಸಂಬಂಧಿ ಎನ್‌ಸಿಪಿ (ಶರದ್) ನಾಯಕಿ ಸುಪ್ರಿಯಾ ಸುಳೆ (Supriya Sule) ವಿರುದ್ಧ ಕಣಕ್ಕಿಳಿಸಿದ್ದರು. ಇದರಲ್ಲಿ ತಾವು ತಪ್ಪು ಮಾಡಿರುವುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡರು.

    ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಕಾರಣ ಈಗ ಆಜಿತ್ ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ. ಕೆಲವೇ ದಿನಗಳಲ್ಲಿ ಅವರು `ಮಹಾಯುತಿ’ ಮೈತ್ರಿ ಕೂಟದಿಂದ ಹೊರಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಕಂಡಕ್ಟರ್‌ಗಳಿಗೆ ಫಜೀತಿ ತಂದ ಶಕ್ತಿ ಯೋಜನೆ – ಮಹಿಳಾ ಪ್ರಯಾಣಿಕರಿಂದ ಕೆಲಸ ಕಳೆದುಕೊಳ್ಳೋ ಭೀತಿ

    ಶರದ್ ಪವಾರ್ (Sharad Pawar) ಅವರು ಎನ್‌ಸಿಪಿಯಿಂದ ಹೊರಬಂದು ತಮ್ಮದೇ ಪಕ್ಷವನ್ನು ಸ್ಥಾಪಿಸಿ ಬಿಜೆಪಿ-ಶಿವಸೇನೆ ಜೊತೆ ಅಜಿತ್ ಸೇರಿಕೊಂಡು ಈ ಹಿಂದೆ ಡಿಸಿಎಂ ಆಗಿದ್ದರು. ಆದರೆ ಈಗ ಶಿವಸೇನೆ ಜೊತೆ ಅಜಿತ್‌ಗೂ ಸಂಬಂಧ ಸರಿಯಿಲ್ಲ. ಹೀಗಾಗಿ ಅವರು ಮತ್ತೆ ಎನ್‌ಸಿಪಿ (ಶರದ್ ಬಣ) ಗೆ ಸೇರುವ ಸಾಧ್ಯತೆಗಳು ಇವೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

    ಲೋಕಸಭಾ ಚುನಾವಣೆಯಲ್ಲೂ ಅಜಿತ್ ಪವಾರ್ ಬಣದ ಅಭ್ಯರ್ಥಿಗಳು ಸೋತಿದ್ದರು. ಹೀಗಾಗಿ ಚುನಾವಣೆ ಘೋಷಣೆಯಾಗುವ ಮೊಲದು ಮೈತ್ರಿಯಿಂದ ಅಜಿತ್ ಪವಾರ್ ಹೊರ ಬರುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಈಗ ಪ್ರಕಟವಾಗುತ್ತಿವೆ. ಇದನ್ನೂ ಓದಿ: MUDA Scam | ಹೈಕೋರ್ಟ್‌ ತೀರ್ಪಿನ ಬಳಿಕ ರಾಜ್ಯದಲ್ಲಿ ಅಸಲಿ ಗೇಮ್‌ ಶುರು?

  • ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ

    ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ

    ಮುಂಬೈ: ವಿರೋಧ ಪಕ್ಷದ ನಾಯಕರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ. ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ (BJP) ಸೇರ್ಪಡೆಯಾಗುತ್ತಿದ್ದಾರೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ವಾಗ್ದಾಳಿ ನಡೆಸಿದ್ದಾರೆ.

    2009 ರಿಂದ ಪ್ರತಿನಿಧಿಸುತ್ತಿರುವ ಬಾರಾಮತಿ ಸಂಸದೀಯ ಕ್ಷೇತ್ರದಿಂದ ಹಿರಿಯ ರಾಜಕಾರಣಿ ಶರದ್ ಪವಾರ್ (Sharad Pawar) ಪುತ್ರಿ ಸುಪ್ರಿಯಾ ಸುಳೆ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. 1996 ರಿಂದ 2009ರ ವರೆಗೆ ಈ ಕ್ಷೇತ್ರದಲ್ಲಿ ಶರದ್‌ ಪವಾರ್‌ ಪ್ರತಿನಿಧಿಸಿದ್ದರು.

    ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ಬಿಜೆಪಿಗೆ ಅಡ್ಡಮತದಾನ ಮಾಡಿದ್ದ ನಾಲ್ವರು ಎಸ್‌ಪಿ ಶಾಸಕರಿಗೆ ‘ವೈ’ ಕೆಟಗರಿ ಭದ್ರತೆ

    ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಹೋದವರು ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್‌ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದೇ ವೇಳೆ ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನನ್ನ ಕೆಲಸ ಜನರ ಮುಂದೆ ಇದೆ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪವೂ ಇಲ್ಲ. ಹಾಗಾಗಿ ಬಾರಾಮತಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್‌ – ಆದೇಶದಲ್ಲಿ ಏನಿದೆ?

  • ಶರದ್‌ ಪವಾರ್‌, ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ

    ಶರದ್‌ ಪವಾರ್‌, ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ

    ಮುಂಬೈ: ಎನ್‍ಸಿಪಿ ನೇತಾರ ಶರದ್ ಪವಾರ್ (Sharad Pawar) ಶಿವಸೇನೆ ಉದ್ಧವ್ ಬಣದ ಮುಖಂಡ ಸಂಜಯ್ ರಾವತ್‍ಗೆ (Sanjay Raut) ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.

    ವಿಚಾರವಾದಿ ನರೇಂದ್ರ ದಾಬೋಲ್ಕರ್‌ಗೂ ಆದ ಗತಿಯೇ ನಿಮಗೂ ಆಗಲಿದೆ ಎಂದು ಶರದ್ ಪವಾರ್‌ಗೆ ಟ್ವಿಟ್ಟರ್ ಮೂಲಕ ಹತ್ಯೆ ವಾರ್ನಿಂಗ್ ನೀಡಿದ್ದಾರೆ. ಇದೇ ವೇಳೆ ಪವಾರ್ ಪುತ್ರಿ, ಎನ್‍ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ಅವರ ವಾಟ್ಸಪ್ ನಂಬರ್‌ಗೆ ಪವಾರ್ ಅವರನ್ನು ಹತ್ಯೆ ಮಾಡುವುದಾಗಿ ಸಂದೇಶಗಳು ಬಂದಿವೆ.

    ಈ ಬೆದರಿಕೆ ಸಂದೇಶಗಳ ಸಂಬಂಧ ತನಿಖೆ ನಡೆಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಸುಪ್ರಿಯಾ ಸುಳೆ ಒತ್ತಾಯಿಸಿದ್ದಾರೆ. ಸಂಜಯ್ ರಾವತ್‍ರನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ರಾವತ್ ಸಹೋದರ, ಶಾಸಕ ಸುನೀಲ್ ದೂರು ನೀಡಿದ್ದಾರೆ.


    ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನಾವೀಸ್ ಪ್ರತಿಕ್ರಿಯಿಸಿ, ಯಾವುದೇ ನಾಯಕರಿಗೆ ಬೆದರಿಕೆ ಹಾಕುವುದನ್ನು ಸಹಿಸುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

  • ಕಾರ್ಯಕ್ರಮ ಉದ್ಘಾಟನೆ ವೇಳೆ ಸುಪ್ರಿಯಾ ಸುಳೆ ಸೀರೆಗೆ ಹೊತ್ತಿಕೊಂಡ ಬೆಂಕಿ

    ಕಾರ್ಯಕ್ರಮ ಉದ್ಘಾಟನೆ ವೇಳೆ ಸುಪ್ರಿಯಾ ಸುಳೆ ಸೀರೆಗೆ ಹೊತ್ತಿಕೊಂಡ ಬೆಂಕಿ

    ಮುಂಬೈ: ಕಾರ್ಯಕ್ರಮವೊಂದರ ಉದ್ಘಾಟನೆ (Program Inauguration)  ವೇಳೆ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ಅವರ ಸೀರೆಗೆ ಬೆಂಕಿ (Fire) ಹೊತ್ತಿಕೊಂಡಿರುವ ಘಟನೆ ಪುಣೆಯ (Pune) ಹಿಂಜೆವಾಡಿಯಲ್ಲಿ ಭಾನುವಾರ ನಡೆದಿದೆ.

    ನಗರದಲ್ಲಿ ನಡೆದ ಕರಾಟೆ ಸ್ಪರ್ಧೆಯ ಉದ್ಘಾಟನೆ ವೇಳೆ ಬಾರಾಮತಿ ಸಂಸದೆಯ ಸೀರೆಗೆ (Saree) ಬೆಂಕಿ ಹೊತ್ತಿಕೊಂಡಿದೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಲು ವೇದಿಕೆಯಲ್ಲಿ ಮೇಜಿನ ಮೇಲೆ ಇರಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾಗಿದ್ದರು. ಸಂಸದೆ ಟೇಬಲ್ ಹತ್ತಿರ ಹೋಗುತ್ತಿದ್ದಂತೆ ಕೆಳಗಡೆ ಇರಿಸಲಾಗಿದ್ದ ದೀಪಕ್ಕೆ ತಾಗಿ ಸೀರೆಗೆ ಬೆಂಕಿ ತಗುಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಡಳಿತದಲ್ಲಿ ಭರವಸೆ ಉಚಿತ, ಸಾಲ ಖಚಿತ: ಸಚಿವ ಸುನಿಲ್ ಕುಮಾರ್ ವ್ಯಂಗ್ಯ

    ಸಂಸದೆ ತಕ್ಷಣವೇ ತಮ್ಮ ಕೈಗಳಿಂದ ಸೀರೆಗೆ ತಗುಲಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಈ ಬಗ್ಗೆ ತಿಳಿಸಿದ ಸುಳೆ ಹಿಂಜೆವಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯ ಉದ್ಘಾಟನೆ ವೇಳೆ ನನ್ನ ಸೀರೆಗೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿತ್ತು. ಆದರೆ ತಕ್ಷಣವೇ ಬೆಂಕಿಯನ್ನು ನಿಯಂತ್ರಿಸಲಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆದಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನ – ಐವರು ಪೊಲೀಸ್ ವಶಕ್ಕೆ

    ಘಟನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನನ್ನ ಬೆಂಬಲಿಗರು, ನಾಗರಿಕರು, ಪಕ್ಷದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳಿಗೆ ನಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಲು ಬಯಸುತ್ತೇನೆ. ನನ್ನ ಬಗೆಗಿನ ಪ್ರೀತಿ ಹಾಗೂ ಕಾಳಜಿಗೆ ಎಲ್ಲರನ್ನೂ ಗೌರವಿಸುತ್ತೇನೆ ಎಂದು ಸುಪ್ರಿಯಾ ಸುಳೆ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಸಂಚು ನಡೆಸ್ತಿದೆ- ಸಂಸತ್‍ನಲ್ಲಿಯೂ ಕ್ಯಾತೆ ತೆಗೆದ ಎನ್‍ಸಿಪಿ ಸಂಸದೆ

    ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಸಂಚು ನಡೆಸ್ತಿದೆ- ಸಂಸತ್‍ನಲ್ಲಿಯೂ ಕ್ಯಾತೆ ತೆಗೆದ ಎನ್‍ಸಿಪಿ ಸಂಸದೆ

    ನವದೆಹಲಿ: ಮಹಾರಾಷ್ಟ್ರ ವಿರುದ್ಧ ಕರ್ನಾಟಕ (Karnataka) ಸಂಚು ನಡೆಸ್ತಿದೆ. ಮಹಾರಾಷ್ಟ್ರದ (Maharashtra) ಸಮಗ್ರತೆಗೆ ಧಕ್ಕೆ ತರುವಂತಹ ಹೇಳಿಕೆಯನ್ನು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ ಎಂದು ಎನ್‍ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ಮೊದಲ ದಿನವೇ ಸಂಸತ್‍ನಲ್ಲಿ (Lokasabha) ಗುಡುಗಿದ್ದಾರೆ.

    ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಪದೇಪದೇ ಬಾಲ ಬಿಚ್ಚುತ್ತಿದೆ. ಹಿರೇಬಾಗೇವಾಡಿ ಘಟನೆ ಬಗ್ಗೆ ಕೇಂದ್ರಕ್ಕೆ ಫಡ್ನಾವೀಸ್ ದೂರು ಕೊಟ್ಟಿದ್ದಾರೆ. ಎಂಎನ್‍ಎಸ್ ಮತ್ತು ಶಿವಸೇನೆಯವರು ಪುಂಡಾಟ ಮೆರೆಯುತ್ತಿದ್ದಾರೆ. ಇನ್ನು, ದಾಳಿ ನಿಲ್ಲಿಸದಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದು ಕರ್ನಾಟಕಕ್ಕೆ ಶರದ್ ಪವಾರ್ ವಾರ್ನಿಂಗ್ ನೀಡುತ್ತಿದ್ದಾರೆ. ಇದೀಗ ಮೊದಲ ದಿನದ ಸಂಸತ್‍ನಲ್ಲಿ ಸಂಸದೆ ಸುಪ್ರಿಯಾ ಸುಳೆಯವರೂ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

    ಗಡಿಯಲ್ಲಿ ಮಹಾರಾಷ್ಟ್ರಿಗರ ಮೇಲೆ ಕರ್ನಾಟಕ ದಾಳಿ ನಡೆಸ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಗೃಹಮಂತ್ರಿ ಅಮಿತ್ ಶಾ ಮಧ್ಯಪ್ರವೇಶ ಮಾಡ್ಬೇಕು ಎಂದು ಆಗ್ರಹಿಸಿದ್ದಾರೆ. ಕೊಲೆ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ತಾಲಿಬಾನ್‌

    ಇದಕ್ಕೆ ಶಿವಕುಮಾರ್ ಉದಾಸಿ ತಿರುಗೇಟು ನೀಡಿದ್ದಾರೆ. ಗಡಿ ಕ್ಯಾತೆ ತೆಗೆದಿದ್ದೇ ಅವರು, ಸುಮ್ನೆ ಕನ್ನಡಿಗರ ಮೇಲೆ ಗೂಬೆ ಕೂರಿಸ್ತಿದ್ದಾರೆ ಎಂದಿದ್ದಾರೆ. ಆದರೆ, ಅದ್ಯಾಕೋ ಏನೋ ಬೊಮ್ಮಾಯಿ ಸರ್ಕಾರ ಮಾತ್ರ ಶಾಂತಿ ಮಂತ್ರ ಪಠಿಸುತ್ತಿದೆ. ಸಿಎಂ ಜೊತೆ ಚರ್ಚೆ ಬಳಿಕ ಮಾತಾಡಿದ ಸಚಿವ ಗೋವಿಂದ ಕಾರಜೋಳ ಅವರು ಕೂಡ, ಮಹಾರಾಷ್ಟ್ರದ ಪುಂಡರನ್ನು ತೆಗಳೋದಿಕ್ಕಿಂತಲೂ ಹೆಚ್ಚಾಗಿ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಿದಂತೆ ಕಂಡುಬಂತು. ಸಿದ್ದರಾಮಯ್ಯ ಬಯಸಿದಂತೆ ರಾಜಕೀಯ ಮಾಡೋಕೆ ಬಿಜೆಪಿ ಸಿದ್ಧವಿಲ್ಲ. ಯಾವಾಗ ಸಭೆ ಕರೆಯಬೇಕು ಅಂತ ನಮಗೆ ಗೊತ್ತಿದೆ ಎಂದರು. ಇನ್ನು, ಸಿಟಿ ರವಿ ಎಂದಿನಂತೆ, ನಾವೆಲ್ಲಾ ಭಾರತೀಯರು ಎಂಬ ಭಾವನೆ ಇಟ್ಕೊಂಡು ಕೆಲಸ ಮಾಡ್ಬೇಕು ಅಂತಾ ಬೋಧಿಸಿದರು. ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕ ಸಾವು

    Live Tv
    [brid partner=56869869 player=32851 video=960834 autoplay=true]

  • ಕಾರಿನಿಂದ ಇಳಿದು ಟ್ರಾಫಿಕ್ ಕ್ಲಿಯರ್ ಮಾಡಿದ ಸುಪ್ರಿಯಾ ಸುಲೆ

    ಕಾರಿನಿಂದ ಇಳಿದು ಟ್ರಾಫಿಕ್ ಕ್ಲಿಯರ್ ಮಾಡಿದ ಸುಪ್ರಿಯಾ ಸುಲೆ

    ಮುಂಬೈ: ಪುಣೆಯ ಹಡಪ್ಸರ್‌ನಲ್ಲಿ ಟ್ರಾಫಿಕ್ ಜಾಮ್ ಮಧ್ಯೆ ಸಿಲುಕಿ ಹಾಕಿಕೊಂಡ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (Nationalist Congress Party) (ಎನ್‍ಸಿಪಿ) ನಾಯಕಿ ಮತ್ತು ಸಂಸದೆ ಸುಪ್ರಿಯಾ ಸುಲೆ (MP Supriya Sule) ಅವರು ತಮ್ಮ ಕಾರಿನಿಂದ ಇಳಿದು ಟ್ರಾಫಿಕ್ ಕ್ಲಿಯರ್ ಮಾಡಲು ಪ್ರಯತ್ನಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಈ ವೀಡಿಯೋವನ್ನು ಸಂಸದೆ ಸುಪ್ರಿಯಾ ಸುಲೆ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಹಡಪ್ಸರ್‌ನಿಂದ (Hadapsar) ಸಾಸ್ವಾದ್‍ವರೆಗಿನ (Saswad) ಪಾಲ್ಖಿ ಹೆದ್ದಾರಿ (Palkhi Highway) ಕಡೆಗೆ ಹೆಚ್ಚಿನ ಗಮನ ನೀಡಬೇಕು. ಇಲ್ಲಿ ರಸ್ತೆಯ ಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂದರೆ ನಿರಂತರ ಟ್ರಾಫಿಕ್ ಜಾಮ್ ಇರುತ್ತದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ (Nitin Gadkari) , ಈ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ನಾನು ವಿನಂತಿಸುತ್ತೇನೆ. ದಯವಿಟ್ಟು ಈ ಬಗ್ಗೆ ಪಾಸಿಟಿವ್ ಆಗಿ ಯೋಚಿಸಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಕಳೆದ ಒಂದು ವಾರದಲ್ಲಿ ಪುಣೆಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಿಸಿದೆ. ಇದನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ – ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆ

    Live Tv
    [brid partner=56869869 player=32851 video=960834 autoplay=true]

  • ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡು – ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕ ಲೇವಡಿ

    ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡು – ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕ ಲೇವಡಿ

    ಮುಂಬೈ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್, ಸಂಸದೆ ಸುಪ್ರಿಯಾ ಸುಳೆ ವಿರುದ್ಧ `ರಾಜಕೀಯ ಅರ್ಥವಾಗದಿದ್ದರೆ, ಮನೆ ಹೋಗಿ ಅಡುಗೆ ಮಾಡು’ ಎಂಬ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದು ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಈ ಕುರಿತು ಮಾತನಾಡಿರುವ ಚಂದ್ರಕಾಂತ್ ಪಾಟೀಲ್, ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ವೆ ಎಂದು ಪ್ರಶ್ನಿಸಿ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

    Chandrakanth patil vs supriya

    ಇದರಿಂದ ಪಾಟೀಲ್ ವಿರುದ್ಧ ಮುಗಿಬಿದ್ದಿರುವ ಎನ್‌ಸಿಪಿ ನಾಯಕರು, ಮೊದಲು ನೀವು ಚಪಾತಿ ಒತ್ತುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

    ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, `ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ. ಅವರು ಹಾಗೆ ಮಾತನಾಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Supriya sule

    ಚಂದ್ರಕಾಂತ್ ಪಾಟೀಲ್ ಹೇಳಿಕೆ ವಿರುದ್ಧ ಕಿಡಿ ಕಾರಿರುವ ಸುಪ್ರಿಯಾ ಪತಿ ಸದಾನಂದ್ ಸುಳೆ, ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಹಾಗೂ ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ. ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಮೊದಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಅವರು ಸಭೆಯೊಂದರಲ್ಲಿ ಮಾತನಾಡುತ್ತಾ, ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದ ಬಗ್ಗೆ ತಿಳಿಯಲು ಅಲ್ಲಿನ ಸಿಎಂ ಅನ್ನು ಭೇಟಿಯಾಗಲು ತೆರಳಿದ್ದೆವು. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

    ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದು ಕೆಲವರನ್ನು ಭೇಟಿ ಮಾಡಿದರು. ಅದಾದ ಎರಡೇ ದಿನಗಳಲ್ಲಿ ಸ್ಥಳೀಯ ಚುನಾವಣೆಗೆ ಅವರು ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆ ಸಾಧ್ಯವಾಯಿತೆಂದು ನನಗೆ ತಿಳಿದಿಲ್ಲ ಎಂದು ಸುಪ್ರಿಯಾ ಸುಳೆ ಕಳವಳ ವ್ಯಕ್ತಪಡಿಸಿದ್ದರು.

  • ಒಡೆದ ಕುಟುಂಬ, ಪಕ್ಷ- ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಲೆ

    ಒಡೆದ ಕುಟುಂಬ, ಪಕ್ಷ- ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಲೆ

    -ಸುಪ್ರಿಯಾ ಕಣ್ಣಂಚಲ್ಲಿ ನೀರು

    ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಪುತ್ರಿ ಸಂಸದೆ ಸುಪ್ರಿಯಾ ಸುಲೆ, ಒಡೆದ ಕುಟುಂಬ ಮತ್ತು ಪಕ್ಷ ಎಂದು ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ.

    ಇಂದು ಎನ್‍ಸಿಪಿ ಶಾಸಕಾಂಗ ನಾಯಕ ಅಜಿತ್ ಪವಾರ್ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಶರದ್ ಪವಾರ್ ಅವರಿಗೂ ಸೂಚಿಸದೇ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸುಪ್ರಿಯಾ ಸುಲೆ, ಜೀವನದಲ್ಲಿ ಬೇರೆಯವರನ್ನು ಯಾಕೆ ನಂಬಬೇಕು ಎಂದು ಪ್ರಶ್ನೆ ಮೂಡುತ್ತಿದೆ. ನಾನು ಜೀವನದಲ್ಲಿ ನಂಬಿದವರಿಂದ ಈ ರೀತಿ ಮೋಸಕ್ಕೊಳಗಾಗಿರಲಿಲ್ಲ. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಶೀಘ್ರದಲ್ಲಿಯೇ ಉತ್ತರಿಸುತ್ತೇನೆ. ಒಬ್ಬ ವ್ಯಕ್ತಿಗೆ ಗೌರವ ನೀಡಿ, ಪ್ರೀತಿಯನ್ನು ಕೊಟ್ಟಿದ್ದಕ್ಕೆ ಪ್ರತಿಫಲವಾಗಿ ನಮಗೇನು ಸಿಕ್ತು ಎಂದು ಪ್ರಶ್ನೆ ಮಾಡುತ್ತಾ ಸುಪ್ರಿಯಾ ಕಣ್ಣಾಲಿಗಳು ತುಂಬಿಕೊಂಡವು. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ

    ನಾವು ಮೊದಲೇ ಎಲ್ಲ ಎನ್‍ಸಿಪಿ ಶಾಸಕರ ಸಹಿಯನ್ನು ಪಡೆದುಕೊಳ್ಳಲಾಗಿತ್ತು. ಶಾಸಕರ ಹಸ್ತಾಕ್ಷರವುಳ್ಳ ಪತ್ರಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಇಂದು ಸಂಜೆ ಶರದ್ ಪವಾರ್ ನೇತೃತ್ವದಲ್ಲಿ ಎಲ್ಲ ಶಾಸಕರ ಸಭೆಯನ್ನು ಕರೆಯಲಾಗಿದೆ ಎಂದು ಎನ್‍ಸಿಪಿ ಮುಖಂಡ ನವಾಬ್ ಮಲಿಕ್ ಹೇಳಿದ್ದಾರೆ.