Tag: Surat Court

  • ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ – ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದ ಸಿಎಂ

    ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ – ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದ ಸಿಎಂ

    ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ (Supreme Court) ಸಂವಿಧಾನದ ಆಶಯ ಎತ್ತಿಹಿಡಿದಿದೆ. ಇದರಿಂದ ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddarmaiah) ತಿಳಿಸಿದರು.

    ಅವರಿಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ (Rahul Gandhi) ಶಿಕ್ಷೆಯನ್ನ ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಮುಂದುವರೆಯುವ ರೀತಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ. ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಕಾನೂನನ್ನು ಎತ್ತಿಹಿಡಿಯುವ ಗೌರವಿಸುವ ಕೆಲಸವನ್ನ ಸುಪ್ರೀಂ ಕೋರ್ಟ್ ಮಾಡಿದೆ ಎಂದು ಶ್ಲಾಘಿಸಿದರು.

    ಹಿನ್ನೆಲೆ ಏನು?
    ರಾಹುಲ್‌ ಅವರು 2019ರ ಏಪ್ರಿಲ್‌ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ʻಮೋದಿʼ ಎಂಬ ಉಪನಾಮ (Modi Surname Remark) ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್‌ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

    ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಹುಲ್‌ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ – ಸೂರತ್‌ ನ್ಯಾಯಾಲಯ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ

    ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    ನವದೆಹಲಿ: ಮೋದಿ ಉಪನಾಮ ವಿವಾದ (Modi Surname Remark) ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ನೀಡಿದ ತೀರ್ಪನ್ನು ಸ್ವಾಗತಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಟ್ವೀಟ್‌ ಮಾಡಿದ್ದಾರೆ.

    ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ. ಭಾರತದ ಕಲ್ಪನೆಯನ್ನು ರಕ್ಷಿಸಿ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌, ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು. ಸತ್ಯಮೇವ ಜಯತೆ.. ಜೈ ಹಿಂದ್‌ ಎಂದು ಟ್ವೀಟ್‌ ಮಾಡಿತ್ತು.

    ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿ ತೀರ್ಪು ಪ್ರಕಟಿಸಿತು.

    ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಹುಲ್‌ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

    ರಾಹುಲ್‌ ಅವರು 2019ರ ಏಪ್ರಿಲ್‌ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್‌ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

    ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

    ಅಹಮದಾಬಾದ್: ಮಾನನಷ್ಟ ಪ್ರಕರಣದಲ್ಲಿ (Defamation Case) ಸೂರತ್ ನ್ಯಾಯಾಲಯ (Surat Court) ನೀಡಿದ್ದ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಇದೀಗ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ರಾಗಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court) ವಜಾ ಮಾಡಿದೆ.

    ಸುದೀರ್ಘ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ಆದೇಶ ಪ್ರಕಟಿಸಿದೆ. ಸೂರತ್ ನ್ಯಾಯಾಲಯ ನೀಡಿದ ಆದೇಶ ಸರಿಯಾಗಿದೆ ಮತ್ತು ಕಾನೂನುಬದ್ಧವಾಗಿದೆ ಎನ್ನುವ ಮೂಲಕ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

    ಶಿಕ್ಷೆಯ ತಡೆ ನಿರಾಕರಿಸುವುದರಿಂದ ರಾಹುಲ್ ಗಾಂಧಿ ಅವರಿಗೆ ಅನ್ಯಾಯವಾಗುವುದಿಲ್ಲ, ಶಿಕ್ಷೆಯನ್ನು ತಡೆಹಿಡಿಯಲು ಯಾವುದೇ ಸಮಂಜಸವಾದ ಕಾರಣವಿಲ್ಲ. ವಿಧಿಸಲಾದ ಆದೇಶವು ಸರಿ ಮತ್ತು ಕಾನೂನುಬದ್ಧವಾಗಿದೆ. ಅನರ್ಹತೆಯು ಕೇವಲ ಸಂಸದರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ. ಇದಲ್ಲದೆ ಅರ್ಜಿದಾರರ ವಿರುದ್ಧ ಹತ್ತು ಪ್ರಕರಣಗಳು ಬಾಕಿ ಉಳಿದಿವೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು

    ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಸಂಸದರಾಗಿ ತಮ್ಮ ಸ್ಥಾನಮಾನವನ್ನು ಅಮಾನತುಗೊಳಿಸಿರುವುದನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂದು ಆದೇಶ ನೀಡುವ ವೇಳೆ ನ್ಯಾಯಾಲಯ ಹೇಳಿದೆ.

    ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ? ಎನ್ನುವ ಹೇಳಿಕೆ ವಿರುದ್ಧ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹೆಚ್‌ಹೆಚ್ ವರ್ಮಾ, ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಮಾರ್ಚ್ 23 ರಂದು ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದರು. ಇದನ್ನೂ ಓದಿ: Karnataka Budget 2023: ಬೆಂಗಳೂರಿಗೆ ಸಿಂಹಪಾಲು ಸಾಧ್ಯತೆ- ಗರಿಗೆದರಿದ ಹಲವು ನಿರೀಕ್ಷೆಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸತ್ಯ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ – ಸರ್ಕಾರಿ ಬಂಗಲೆ ತೊರೆದ ರಾಗಾ

    ಸತ್ಯ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ – ಸರ್ಕಾರಿ ಬಂಗಲೆ ತೊರೆದ ರಾಗಾ

    ನವದೆಹಲಿ: ಸತ್ಯವನ್ನ ಮಾತನಾಡಿದ್ದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ತಿಳಿಸಿದ್ದಾರೆ.

    ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಶನಿವಾರ ದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದರು. ಜನಪಥ್‌ನಲ್ಲಿರುವ ತಾಯಿ ಸೋನಿಯಾಗಾಂಧಿ ಅವರ ನಿವಾಸಕ್ಕೆ ತಮ್ಮ ವಸ್ತುಗಳನ್ನು ಸಾಗಿಸಿದರು. ರಾಹುಲ್‌ ಗಾಂಧಿ ಅವರು ಬಂಗಲೆಯಿಂದ ವಸ್ತುಗಳನ್ನ ಸಾಗಿಸಲು ಸಹೋದರಿ ಪ್ರಿಯಾಂಕಾ ಗಾಂಧಿ ಸಹಾಯ ಮಾಡಿದರು. ಮನೆ ಖಾಲಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ತಮ್ಮ ತಾಯಿಯೊಂದಿಗೆ ಉಳಿಯುವುದಾಗಿ ತಿಳಿಸಿದರು.

    ಮುಂದುವರಿದು ಮಾತನಾಡಿ, ಹಿಂದೂಸ್ತಾನದ ಜನರು ನನಗೆ 19 ವರ್ಷಗಳ ಕಾಲ ಈ ಮನೆಯನ್ನ ನೀಡಿದ್ದಾರೆ. ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯ ಮಾತನಾಡಿದ್ದಕ್ಕಾಗಿ ಕಟ್ಟಿದ ಬೆಲೆಯಾಗಿದೆ. ಸತ್ಯವನ್ನ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧನಿದ್ದೇನೆ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

    ರಾಹುಲ್‌ ಗಾಂಧಿ ಅವರನ್ನು ಮನೆಯಿಂದ ಖಾಲಿ ಮಾಡಿಸಿರುವುದರ ಬಗ್ಗೆ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷದ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದು ಬಿಜೆಪಿ ಸರ್ಕಾರದ ರಾಜಕೀಯ ಸೇಡು ಹಾಗೂ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ ಎಂದು ಕಿಡಿ ಕಾರಿದ್ದಾರೆ. ಆದ್ರೆ ಬಿಜೆಪಿ ಇದು ನ್ಯಾಯಾಲಯದ ತೀರ್ಪು ಎಂದು ಸಮರ್ಥಿಸಿಕೊಂಡಿದೆ.

    ಏನಿದು ವಿವಾದ?
    ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ʻಪ್ರಧಾನಿ ಮೋದಿ ಓರ್ವ ಕಳ್ಳʼ ಎಂದು ಮೋದಿ ಉಪನಾಮ ಬಳಿಸಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿತ್ತು.

    ಇದರಿಂದ ರಾಹುಲ್‌ ಗಾಂಧಿ ಅವರ ಸಂಸತ್‌ ಸದಸ್ಯತ್ವವನ್ನು ರದ್ದುಗೊಳಿಸಲಾಗಿತ್ತು. ಈ ಬೆನ್ನಲ್ಲೇ ಲೋಕಸಭಾ ವಸತಿ ಸಮಿತಿ ಸಂಸದರಿಗೆ ನೀಡಲಾಗುವ ವಸತಿ ಗೃಹದ ಸೌಲಭ್ಯ ಹಿಂಪಡೆಯಲು ನಿರ್ಧರಿಸಿ ದೆಹಲಿಯಲ್ಲಿರುವ ತುಘಲಕ್ ಲೇನ್‌ ಬಂಗಲೆ ತೊರೆಯುವಂತೆ ಆದೇಶಿಸಿತ್ತು.

  • ರಾಹುಲ್‌ಗೆ ಹಿನ್ನಡೆ – ಜೈಲು ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾ

    ರಾಹುಲ್‌ಗೆ ಹಿನ್ನಡೆ – ಜೈಲು ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾ

    ಅಹಮದಾಬಾದ್‌: ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ (Defamation Case) ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ (Rahul Gandhi) ಹಿನ್ನಡೆಯಾಗಿದ್ದು ಗುಜರಾತ್‌ನ ಸೂರತ್‌ ಸೆಷನ್ಸ್‌ ಕೋರ್ಟ್‌ (Surat Court) ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    ಮೋದಿ ಉಪನಾಮಕ್ಕೆ (Modi Surname) ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್‌ ಗಾಂಧಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

    ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್. ಪಿ. ಮೊಗೇರ ಅವರು ಇಂದು ರಾಹುಲ್‌ ಅರ್ಜಿಯನ್ನು ವಜಾಗೊಳಿಸಿ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದಾರೆ. ಇದನ್ನೂ ಓದಿ: ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ : ಈಶ್ವರಪ್ಪ

    ಏನಿದು ಪ್ರಕರಣ?
    ಕಳೆದ ಲೋಕಸಭಾ ಚುನಾವಣಾ (Loksabha Election) ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Narendra Modi) ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ (BJP) ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

     

    ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ಮಾರ್ಚ್ 23 ರಂದು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆ ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು.

    2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ಲೋಕಸಭಾ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

  • ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇವೆ – ಕೈ ನಾಯಕ

    ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇವೆ – ಕೈ ನಾಯಕ

    ಚೆನ್ನೈ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ (Rahul Gandhi) 2 ವರ್ಷದ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ (Tamilnadu Congress) ಮುಖಂಡರೊಬ್ಬರು ನಾಲಿಗೆ ಹರಿಬಿಟ್ಟಿದ್ದಾರೆ.

    2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ʻಮೋದಿʼ ಉಪನಾಮ ಬಳಸಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಲಯ (Surat Court) ರಾಹುಲ್ ಅವರನ್ನು ದೋಷಿ ಪರಿಗಣಿಸಿ 2 ವರ್ಷ ಜೈಲುಶಿಕ್ಷೆ ವಿಧಿಸಿತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

    court order law

    ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಶ್ನಿಸಿ ತಮಿಳುನಾಡಿನ ದಿಂಡಿಗಲ್‌ನಲ್ಲಿ ಕಾಂಗ್ರೆಸ್‌ನ ಎಸ್ಸಿ-ಎಸ್ಟಿ ವಿಭಾಗದಿಂದ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಮುಖ್ಯಸ್ಥ ಮಣಿಕಂದನ್ (Manikandan) ಮಾತನಾಡುವಾಗ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮ ನಿಯಂತ್ರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತರಾಟೆ

    ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ಹೆಚ್.ವರ್ಮಾ ಅವರ ನಾಲಿಗೆ ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. 

    ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಣಿಕಂದನ್ ವಿರುದ್ಧ ಮೂರು ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ದಿಂಡಿಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ಮುಖಂಡನ ಹೇಳಿಕೆಗೆ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

  • ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ – ರಾಗಾ ಗುಡುಗು

    ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ – ರಾಗಾ ಗುಡುಗು

    ನವದೆಹಲಿ: ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುಡುಗಿದ್ದಾರೆ.

    ಮಾನಹಾನಿ ಪ್ರಕರಣದಲ್ಲಿ (Defamation Case) ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi) ಸೂರತ್ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯನ್ನು ಮೇ 3 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13ರ ವರೆಗೂ ಜಾಮೀನು ವಿಸ್ತರಿಸಿದೆ.

    ಜಾಮೀನು ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್‌ ಗಾಂಧಿ, ʻಸತ್ಯವೇ ನನ್ನ ಅಸ್ತ್ರʼ ಎಂದು ಗುಡುಗಿದ್ದಾರೆ. ಅಲ್ಲದೇ ಇದು ʻಮಿತ್ರಕಾಲʼದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ವಾಧಿಕಾರದ ವಿರುದ್ಧ ರಾಹುಲ್‌ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ

    ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್‌ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದಿದ್ದ ರಾಹುಲ್‌ ಗಾಂಧಿಗೆ 4 ಅಂತಸ್ತಿನ ಮನೆ ನೀಡಿದ ಕಾಂಗ್ರೆಸ್‌ ʻರಾಜಕುಮಾರಿʼ

    ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು. ಈ ಮೊಕದ್ದಮೆಯ ಅನ್ವಯ ರಾಹುಲ್‌ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿ, ಮೇಲ್ಮನವಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು.

    ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

  • ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

    ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

    ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. (more…)

  • ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು

    ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು

    ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬಿಗ್‌ ರಿಲೀಫ್‌ ಸಿಕ್ಕಿದ್ದು ಸೂರತ್‌ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಕೋರ್ಟ್‌ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್‌ ಕೋರ್ಟ್‌ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

    ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್‌ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿತ್ತು. ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು.