Tag: Surathkal Fazil Case

  • ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    ಉಡುಪಿ: ಸುರತ್ಕಲ್‌ನ ಯುವಕ ಫಾಜಿಲ್ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಇಯಾನ್ ಕಾರು ಬಳಸಿರುವ ಮಾಹಿತಿ ಹೊರ ಬಿದ್ದಿತ್ತು. ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿದ್ದು, ಇದೀಗ ಕಾರಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.

    ಪಡುಬಿದ್ರಿ ಠಾಣೆ ವ್ಯಾಪ್ತಿಯ ಕಾಜರಕಟ್ಟೆಯ ನಿರ್ಜನ ಪ್ರದೇಶದಲ್ಲಿ ಕಾರು ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಅದರಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ.

    ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಇನ್ನೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಕಣ್ತಪ್ಪಿಸಲು ಆರೋಪಿಗಳು ಟೋಲ್ ಗೇಟ್ ಅನ್ನು ತಪ್ಪಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ISIS ನಂಟು – ತುಮಕೂರಿನಲ್ಲೂ ಶಂಕಿತ ಉಗ್ರನ ಸೆರೆ

    ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿತ್ತು. 8 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಘಟನೆಯ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸದ ಕಾರಣ ಕಾರಿನ ಇತರ ಗುರುತುಗಳನ್ನು ಹಿಡಿದು ತನಿಖೆ ಮಾಡಲಾಗಿತ್ತು.

    ಇದೀಗ ಪತ್ತೆಯಾಗಿರುವ ಕಾರನ್ನೇ ಆರೋಪಿಗಳು ಬಳಸಿದ್ದರೆಯೇ ಎಂಬುದು ಇನ್ನೂ ದೃಢವಾಗಿಲ್ಲ. ಇದನ್ನೂ ಓದಿ: ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

    Live Tv
    [brid partner=56869869 player=32851 video=960834 autoplay=true]

  • ಉಡುಪಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಇಯಾನ್ ಕಾರ್ ಪತ್ತೆ 

    ಉಡುಪಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಇಯಾನ್ ಕಾರ್ ಪತ್ತೆ 

    ಉಡುಪಿ: ಸುರತ್ಕಲ್‌ ನ ಯುವಕ ಫಾಜಿಲ್‌ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ವೇಳೆ ಆರೋಪಿಗಳು ಇಯಾನ್‌ ಕಾರು ಬಳಸಿರುವ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ಉಡುಪಿ ಜಿಲ್ಲೆಯ ನಿರ್ಜನ ಪ್ರದೇಶವೊಂದರಲ್ಲಿ ಅಪರಿಚಿತ ಇಯಾನ್ ಕಾರೊಂದು  ಪತ್ತೆಯಾಗಿದೆ.
    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಇಯಾನ್ ಕಾರೊಂದು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸುರತ್ಕಲ್‍ನ ಫಾಜಿಲ್ ಹತ್ಯೆಯ ಬಳಿಕ ಇಯಾನ್ ಕಾರೊಂದರಲ್ಲಿ ಆರೋಪಿಗಳು ಎಸ್ಕೇಪ್ ಆಗಿರುವ ಬಗ್ಗೆ ಪೊಲೀಸರಿಗೆ ಅನುಮಾನವಿದೆ. ಈ ನಡುವೆ ಇದೀಗ ನಿರ್ಜನ ಪ್ರದೇಶದಲ್ಲಿ ಇಯಾನ್ ಕಾರ್ ಸಿಕ್ಕಿರಿವುದು ಇನ್ನಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್
    ಕಾರ್ ಪತ್ತೆಯಾದ ಸ್ಥಳಕ್ಕೆ ಕೂಡಲೇ ಮಂಗಳೂರು ಮತ್ತು ಉಡುಪಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿತ್ತು. 8 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಘಟನೆ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಆದರೆ ಕಾರಿನ ಇತರ ಗುರುತುಗಳನ್ನು ಹಿಡಿದು ವಿಚಾರಣೆ ನಡೆಸಿ ಕಾರಿನ ಮಾಲೀಕ ಅಜಿತ್‍ನನ್ನು ಬಂಧಿಸಲಾಗಿತ್ತು. ಆದರೆ ಕೃತ್ಯಕ್ಕೆ ಬಳಸಿದ್ದ ಕಾರ್ ನಾಪತ್ತೆಯಾಗಿತ್ತು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ
    ಅಜಿತ್‍ನಿಂದ ಆರೋಪಿಗಳು ಕಾರ್ ಬಾಡಿಗೆಗೆ ಪಡೆದು ಕೊಲೆ ಮಾಡಿ ಬಳಿಕ ಎಸ್ಕೇಪ್ ಆಗಿದ್ದರು. ನಂತರ ಮಂಗಳೂರು ಪೊಲೀಸರು ತನಿಖೆ ನಡೆಸಿದಾಗ ಅಜಿತ್ ಕಾರ್‍ನ ಮಾಲೀಕ ಎಂಬುದು ತಿಳಿದುಬಂದಿತ್ತು. ಕಾರ್ ನಾಪತ್ತೆಯಾಗಿರುವ ಬಗ್ಗೆ ಇಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ಹಂಚಿಕೊಂಡಿದ್ದರು.
    ಈ ಬೆನ್ನಲ್ಲೇ ಉಡುಪಿಯಲ್ಲಿ ಅಪರಿಚಿತ ಇಯಾನ್ ಕಾರೊಂದು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿರುವುದು ಅನುಮಾನ ಹುಟ್ಟುಹಾಕಿದ್ದು, ಆರೋಪಿಗಳು ಎಸ್ಕೇಪ್ ಆಗಿರುವ ಇಯೋನ್ ಕಾರು ಇದೇನಾ ಎಂಬ ಸತ್ಯ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

    ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

    – ಸುಳ್ಳು ಸುದ್ದಿ ಹರಡಿಸದಂತೆ ಕಮಿಷನರ್ ಮನವಿ

    ಮಂಗಳೂರು: ಸುರತ್ಕಲ್‍ನಲ್ಲಿ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಯ ವೇಳೆ ಇದ್ದ ಕಾರ್ ಮಾಲೀಕ ಅಜಿತ್ ಡಿಸೋಜನನ್ನು ಬಂಧಿಸಿದ್ದೇವೆ. ಅಜಿತ್‍ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

    ಮಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿದೆ. 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಆದರೆ ಕಾರಿನ ಇತರ ಗುರುತುಗಳನ್ನು ಹಿಡಿದು ವಿಚಾರಣೆ ನಡೆಸಿ ಕಾರಿನ ಮಾಲೀಕ ಅಜಿತ್‍ನನ್ನು ಬಂಧಿಸಿದ್ದೇವೆ. ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಹಲವು ಮಾಹಿತಿಗಳು ಸಿಕ್ಕಿದೆ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ

    ಇಯಾನ್ ಕಾರ್ ಮಾಲೀಕನನ್ನು ಕೋರ್ಟ್‍ಗೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆತನಿಂದ ಯಾರು ಕಾರ್ ಬಾಡಿಗೆ ಪಡೆದಿದ್ದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದರೆ ಕೊಲೆಗೆ ಬಳಸಿದ ಕಾರು ಸಿಕ್ಕಿಲ್ಲ. ಅದು ಆರೋಪಿಗಳ ಬಳಿಯೇ ಇರಬಹುದು. ಆರೋಪಿಗಳು ಅಜಿತ್‍ನಿಂದ ಕಾರ್ ಬಾಡಿಗೆಗೆ ಪಡೆದಿದ್ದರು. ಫಾಜಿಲ್ ತಂದೆ ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಲಾಲ್, ಜಟ್ಕಾ ಜಟಾಪಟಿಯೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಕಾರಣವಾಯ್ತಾ..?

    ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಬಗ್ಗೆ ಹರಡುತ್ತಿರುವ ವದಂತಿಗೆ ಕಿವಿ ಕೊಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಪೋಸ್ಟ್‌ಗಳನ್ನು ಹಾಕಿರುವವರ ವಿರುದ್ಧ 5 ಕೇಸ್ ದಾಖಲಾಗಿದೆ. 8 ಜನರ ತಂಡದಿಂದ ಸಾಮಾಜಿಕ ಜಾಲತಾಣಗಳನ್ನು ವಾಚ್ ಮಾಡಲಾಗುತ್ತಿದೆ. ಪೋಸ್ಟ್‌ ಹಾಕುವವರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಕೋಮುಗಳ ನಡುವೆ ಘರ್ಷಣೆ ಉಂಟು ಮಾಡುವಂತಹ ಪೋಸ್ಟ್‌ಗಳನ್ನು ಹಾಕುತ್ತಿದ್ದೀರಿ. ಈ ತರ ಪೋಸ್ಟ್‌ಗಳನ್ನು ಹಾಕವವರ ಮೇಲೆ ಕೇಸ್ ದಾಖಲಾಗುತ್ತದೆ. ಇದರಿಂದ ವರ್ಷಾನುಗಟ್ಟಲೆ ಕೋರ್ಟ್‌ಗೆ ಅಲೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೋಮು ಸೂಕ್ಷ್ಮ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ. 3 ದಿನಗಳ ಕಾಲ ಕಠಿಣ ಪರಿಸ್ಥಿತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

    ಈ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರೆಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿ ದುಷ್ಕೃತ್ಯ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 1ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ – 4 ತಾಲೂಕಿನ ಶಾಲೆಗಳಿಗೆ ರಜೆ

    ಕೇವಲ ಅಗತ್ಯ ಸೇವೆಗಳಿಗೆ, ಅಗತ್ಯ ಸಂಚಾರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೋಟೆಲ್, ಮಾಲ್‍ಗಳು ಸಹ ಬಂದ್ ಇರಲಿದೆ. ಈ ಮಧ್ಯೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಮುಖಂಡರು, ಎಲ್ಲ ಪಕ್ಷದ ನಾಯಕರು, ವಿವಿಧ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಇಂದು ಬೆಳಗ್ಗೆ 11ಕ್ಕೆ ಶಾಂತಿಸಭೆ ನಡೆಯಲಿದೆ. ಕರಾವಳಿ ಜಿಲ್ಲೆ ಈಗ ಖಾಕಿ ಭದ್ರಕೋಟೆಯಂತಾಗಿದೆ. ಇದನ್ನೂ ಓದಿ: ಈಗ ಲೋಕಸಭಾ ಚುನಾವಣೆ ನಡೆದರೆ ಎನ್‍ಡಿಎಗೆ 362 ಸ್ಥಾನ!

    ಬೆಳ್ಳಾರೆಯಲ್ಲಿ ಮಸೂದ್, ಪ್ರವೀಣ್ ಹತ್ಯೆ ಬೆನ್ನಲ್ಲೇ ಗುರುವಾರ ರಾತ್ರಿ ಮಂಗಳೂರು ನಗರದ ಹೊರವಲಯದ ಸುರತ್ಕಲ್‍ನಲ್ಲಿ ಫಾಜಿಲ್ ಎಂಬ ಯುವಕನನ್ನು ಹಂತಕರು ಕೊಚ್ಚಿ ಕೊಲೆ ಮಾಡಿದ್ದರು. ಆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಈ ನಡುವೆ ಈವರೆಗೂ ಫಾಜಿಲ್ ಹತ್ಯೆಗೆ ಕಾರಣವಾಗಲೀ, ಹಂತಕರಾಗಲಿ ಸಿಕ್ಕಿಲ್ಲ. ಆದರೆ, ಫಾಜಿಲ್ ಹತ್ಯೆ ಸಂಬಂಧ 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]