Tag: surathkal

  • ಇನ್ನೂ ಮುಗಿಯದ ಸುರತ್ಕಲ್ ಟೋಲ್‍ಗೇಟ್ ವಿವಾದ- ಹೋರಾಟಗಾರರ ಮೇಲೆ ಎಫ್‍ಐಆರ್

    ಇನ್ನೂ ಮುಗಿಯದ ಸುರತ್ಕಲ್ ಟೋಲ್‍ಗೇಟ್ ವಿವಾದ- ಹೋರಾಟಗಾರರ ಮೇಲೆ ಎಫ್‍ಐಆರ್

    ಮಂಗಳೂರು: ಇಲ್ಲಿನ ಸುರತ್ಕಲ್ ಟೋಲ್‍ಗೇಟ್ (Surathkal Tollgate) ವಿವಾದ ಸದ್ಯದ ಮಟ್ಟಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಟೋಲ್‍ಗೇಟ್ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಹೋರಾಟಗಾರರ ಮೇಲೆ ಎಫ್‍ಐಆರ್ (FIR) ದಾಖಲಾಗಿದೆ. ಹೀಗಾಗಿ ಟೋಲ್ ಸಂಗ್ರಹ ನಿಲ್ಲುವವರೆಗೂ ರಾತ್ರಿ- ಹಗಲು ಅನಿರ್ದಿಷ್ಟ ಧರಣಿಗೆ ನಿರ್ಧರಿಸಿದ್ದಾರೆ.

    ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್‍ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್‍ಗೇಟ್ ಅಕ್ರಮ ಎಂದು ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪ ಪಡೆದಿತ್ತು. ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್‍ಗೇಟ್‍ನತ್ತ ನುಗ್ಗಿದ್ದ ಹೋರಾಟಗಾರರು, ಹೈಡ್ರಾಮಾ ನಡೆಸಿದ್ದು ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್‍ಗೇಟ್‍ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎರಡು ಎಫ್‍ಐಆರ್ ದಾಖಲಾಗಿದೆ.

    ಟೋಲ್‍ಗೇಟನ್ನು ನ.7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ದಿನಾಂಕಗಳು ಕಳೆದ ಆರು ವರ್ಷದಿಂದ ಆಗಿರೋದ್ರಿಂದ ಇದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಹೋರಾಟ ಸಮಿತಿ ಸಭೆ ಸೇರಿ ಮುಂದಿನ ಹೋರಾಟದ ಭಾಗವಾಗಿ ಅಕ್ಟೋಬರ್ 28 ರಿಂದ ಟೋಲ್‍ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಆಯೋಧ್ಯೆ ತೀರ್ಪು ವಿರೋಧಿಸಿ, ಗಲಾಟೆಗೆ ಕರಪತ್ರ ಹಂಚಿಕೆ – PFI ಸಂಘಟನೆಯ ಕುತಂತ್ರ ಮತ್ತಷ್ಟು ಬಯಲು

    ಟೋಲ್ ಗೇಟ್ ವಿಚಾರದಲ್ಲಿ ಈ ಬಾರಿ ಮಾಡು ಇಲ್ಲವೇ ಮಡಿ ಅನ್ನೋದಕ್ಕೆ ಹೋರಾಟಗಾರರ ಸಮಿತಿ ನಿರ್ಧರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿವಾದ – ಟೋಲ್ ಪ್ಲಾಜಾ ಮೇಲೇರಿ ಮಿಥುನ್ ರೈ ಆಕ್ರೋಶ

    ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿವಾದ – ಟೋಲ್ ಪ್ಲಾಜಾ ಮೇಲೇರಿ ಮಿಥುನ್ ರೈ ಆಕ್ರೋಶ

    ಮಂಗಳೂರು: ದಕ್ಷಿಣ ಕ್ನನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ (Surathkal Toll gate) ಬಳಿ ಇಂದು ಭಾರೀ ಹೈಡ್ರಾಮಾ ನಡೆಯುತ್ತಿದೆ.

    ಸುರತ್ಕಲ್ ಅಕ್ರಮ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು. ಇತ್ತ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ (Mithun Rai) ಟೋಲ್ ಪ್ಲಾಜಾ ಮೇಲೇರಿದರು. ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು. ಇದನ್ನೂ ಓದಿ: ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

    ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದೇ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಸಲಾಯಿತು. ಬ್ಯಾರಿಕೇಡ್ ಕಿತ್ತೆಸೆದು, ಟೋಲ್‍ಗೆ ಮುತ್ತಿಗೆ ಹಾಕಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಐವಾನ್ ಡಿಸೋಜ, ಮೊಯಿದ್ದೀನ್‍ಬಾವ, ಜೆ.ಆರ್ ಲೋಬೋ, ಮಿಥುನ್ ರೈ ಸೇರಿ ಹಲವರ ಬಂಧಿಸಲಾಗಿದೆ.

    ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಸುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳಲಾಗಿದ್ದು, 6 ಕೆಎಸ್‍ಆರ್ ಪಿ, 5 ಸಿಎಆರ್, 250 ಸಿವಿಲ್, 4 ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿದಂತೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುತ್ತೇವೆ ಎಂದ ಹೋರಾಟಗಾರಿಗೆ ಬಿಸಿ ಮುಟ್ಟಿಸಿದ ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಅಧಿಕೃತ ಆದೇಶಕ್ಕೆ ಮೊದ್ಲೇ NIA ತನಿಖೆ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಅಧಿಕೃತ ಆದೇಶಕ್ಕೆ ಮೊದ್ಲೇ NIA ತನಿಖೆ

    ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ತನಿಖೆಯನ್ನು ಹಸ್ತಾಂತರಿಸುವ ಮೊದಲೇ ಎನ್‍ಐಎಗೆ ತನಿಖೆಯನ್ನು ಪ್ರಾರಂಭಿಸಿದ್ದು, ಕೆಲವು ಮಾಹಿತಿಗಳನ್ನು ಸಂಗ್ರಹಿಸಿದೆ.

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್‍ಐಎ ಟೀಂ ಬೆಳ್ಳಾರೆಗೆ ಭೇಟಿ ನೀಡಿ ಸಹ ಕೆಲ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಆದರೆ, ಇನ್ನೂ ಅಧಿಕೃತವಾಗಿ ಪ್ರಕರಣ ಎನ್‍ಐಎ ವರ್ಗವಾಗಿಲ್ಲ. ಸದ್ಯದಲ್ಲೇ ಹಸ್ತಾಂತರ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕಾಗಿದ್ದು, ಹೊಸ ಹೊಸ ವಿಚಾರಗಳು ಬಯಲಾಗುತ್ತಿವೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಲ್ಲಿ ಇಬ್ಬರನ್ನು, ಕೇರಳದಲ್ಲಿ ಒಬ್ಬರನ್ನು ಪೊಲೀಸರು ಹೆಡೆ ಮುರಿಕಟ್ಟಿದ್ದಾರೆ. ಬೆಂಗಳೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಳ್ಯ ಮೂಲದ ಅಲ್ತಾಫ್ ಮತ್ತು ಇರ್ಫಾನ್‍ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇವರು ಪ್ರವೀಣ್ ಹತ್ಯೆಯ ದಿನ ಬೆಳ್ಳಾರೆಯಲ್ಲಿಯೇ ಇದ್ದರು ಎಂಬುದು ತಿಳಿದುಬಂದಿದೆ. ಪ್ರವೀಣ್ ಕೊಲೆಯಲ್ಲಿ ಇವರ ಪಾತ್ರ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಝಾಕೀರ್ ವಿರುದ್ಧ ಕೊಲೆಗಡುಕರಿಗೆ 2 ದಿನ ಆಶ್ರಯ ನೀಡಿ, ಬಿರಿಯಾನಿ ಪೂರೈಸಿದ್ದ ಆರೋಪವಿದೆ.

    ಇನ್ನೂ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ.  ಮಂಗಳೂರಲ್ಲಿ ಡಿಜಿಪಿ ಪ್ರವೀಣ್ ಸೂದ್ ಉನ್ನತ ಮಟ್ಟದ ಸಭೆ ನಡೆಸಿ, ಹಲವು ಸೂಚನೆ ನೀಡಿದ್ದಾರೆ. ಆರೋಪಿಗಳು ಯಾವುದೇ ಧರ್ಮೀಯರಾಗಿದ್ರೂ ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸುರತ್ಕಲ್‌ನಲ್ಲಿ ಬೀಚ್‌ನಲ್ಲಿ ಭಿನ್ನ ಕೋಮಿನ ಯುವಕನ ಜೊತೆ ಬಂದ ಯುವತಿ ಮೇಲೆ ರೇಪ್‌

    ಸುಹಾಸ್, ಮೋಹನ್, ಗಿರಿ ಮತ್ತು ಅಮಿತ್ ಎಂಬ ಪಾತಕಿಗಳು ಫಾಝಿಲ್ ಕೊಲೆಯಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದ್ದು, ಯಾವುದೇ ಕ್ಷಣದಲ್ಲಿ ಈ ನಾಲ್ವರನ್ನು ಬಂಧಿಸುವ ಸಂಭವ ಇದೆ. ಈ ಹಿಂದೆ ಹಲವು ಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಸುಹಾಸ್ ಇದರಲ್ಲೂ ಪ್ರಮುಖ ಆರೋಪಿ ಎನ್ನಲಾಗಿದೆ. ಅಮಿತ್ ಕಾರು ಚಾಲಕ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬೀಳಬೇಕಿದೆ. ಇದನ್ನೂ ಓದಿ: ಕಸದ ಜೊತೆ ಡಂಪಿಂಗ್ ಯಾರ್ಡ್‍ಗೆ ಡಂಪ್ ಆದ ಗಾರ್ಬೇಜ್ ಆಟೋ – ಚಾಲಕ ಅಪಾಯದಿಂದ ಪಾರು

    Live Tv
    [brid partner=56869869 player=32851 video=960834 autoplay=true]

  • ಸುರತ್ಕಲ್‌ನಲ್ಲಿ ಬೀಚ್‌ನಲ್ಲಿ ಭಿನ್ನ ಕೋಮಿನ ಯುವಕನ ಜೊತೆ ಬಂದ ಯುವತಿ ಮೇಲೆ ರೇಪ್‌

    ಸುರತ್ಕಲ್‌ನಲ್ಲಿ ಬೀಚ್‌ನಲ್ಲಿ ಭಿನ್ನ ಕೋಮಿನ ಯುವಕನ ಜೊತೆ ಬಂದ ಯುವತಿ ಮೇಲೆ ರೇಪ್‌

    ಮಂಗಳೂರು: ಫಾಜಿಲ್‌ ಹತ್ಯೆಯಿಂದ ಸುದ್ದಿಯಾಗಿದ್ದ ಸುರತ್ಕಲ್ ಈಗ ಅತ್ಯಾಚಾರ ಪ್ರಕರಣದಿಂದ ಸುದ್ದಿಯಾಗಿದೆ. ಬೀಚ್‌ನಲ್ಲಿ ಪ್ರಿಯಕರನ ಜೊತೆಗೆ ಬಂದಿದ್ದ ಯುವತಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

    ಯುವತಿ ನೀಡಿದ ದೂರಿನ ಆಧಾರದಲ್ಲಿ ಮುನಾಜ್‌ ಅಹಮದ್‌ ಎಂಬಾತನನ್ನು ಬಂಧಿಸಲಾಗಿದೆ. ಮೀನು ಲಾರಿಯಲ್ಲಿ ಡ್ರೈವರ್ ಆಗಿರುವ ರೇಪಿಸ್ಟ್ ಮುನಾಜ್ ಈ ಹಿಂದೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ. ಈಗ ಅತ್ಯಾಚಾರ ಆರೋಪಿಯಾಗಿರುವ ಮುನಾಜ್‌ನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಸುರತ್ಕಲ್ ಎನ್‌ಐಟಿಕೆ ಬೀಚ್ ಪರಿಸರಕ್ಕೆ ಜುಲೈ 27 ರಂದು ಹಿಂದೂ ಯುವಕನ ಜೊತೆ ಮಂಗಳೂರಿನ ಮುಸ್ಲಿಮ್‌ ಯುವತಿ ಬಂದಿದ್ದಳು. ಕಡಲ ತೀರದಲ್ಲಿ ಹಿಂದೂ ಯುವಕನ ಜೊತೆ ಮಾತನಾಡುತ್ತಿದ್ದ ವೇಳೆ ಮುನಾಜ್‌ ಅಹಮದ್‌ ಬಂದಿದ್ದಾನೆ.

    ಹಿಂದೂ ಯುವಕನ ಜೊತೆ ಯಾಕೆ ಸುತ್ತಾಡುತ್ತಿಯಾ ಎಂದು ಯುವತಿಯನ್ನು ಮುನಾಜ್‌ ತರಾಟೆಗೆ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಅಷ್ಟೇ ಅಲ್ಲದೇ ಯುವಕ ಮತ್ತು ಯುವತಿಯ ವಿಡಿಯೋ ಚಿತ್ರೀಕರಿಸಿ ಮನೆಯವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಖಾಸಗಿ ಬಸ್ – ಕಾರ್ ನಡುವೆ ಭೀಕರ ಅಪಘಾತ – ಓರ್ವ ಸಾವು, 6 ಮಂದಿಗೆ ಗಾಯ

    ಹಲ್ಲೆ ನಡೆದ ಮೇಲೆ ಯುವಕ ಸ್ಥಳದಿಂದ ಓಡಿ ಹೋಗಿದ್ದಾನೆ. ಬಳಿಕ ಬೀಚ್‌ ಪರಿಸರದಲ್ಲೇ ಯುವತಿಯ ಮೇಲೆ ಅತ್ಯಾಚಾರಗೈದಿದ್ದಾನೆ. ಅತ್ಯಾಚಾರ ಮಾಡಿದ ಬಳಿಕ ವೀಡಿಯೋ ಸೆರೆ ಹಿಡಿದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಸಂತ್ರಸ್ತ ಯವತಿ ಈ ಬಗ್ಗೆ ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಫಾಜಿಲ್ ಹತ್ಯೆ ಪ್ರಕರಣ – ಓರ್ವ ಆರೋಪಿ ವಶಕ್ಕೆ

    ಫಾಜಿಲ್ ಹತ್ಯೆ ಪ್ರಕರಣ – ಓರ್ವ ಆರೋಪಿ ವಶಕ್ಕೆ

    ಮಂಗಳೂರು: ಸುರತ್ಕಲ್‍ನ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆರೋಪಿ ಅಜಿತ್‌ ಎಂಬಾತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್‌ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ ಪೊಲೀಸರು‌ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ಘಟನೆ ವಿವರ:
    ಜುಲೈ 28 ರಂದು ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಫಾಜಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ. ಇದನ್ನೂ ಓದಿ:  ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಜಿಲ್ ಜುಲೈ 28ರ ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿತ್ತು. ಆ ಬಳಿಕ ಕರಾವಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಪರಿಸ್ಥಿತಿ ತಿಳಿಗೊಂಡಿದ್ದು, ಪೊಲೀಸರು ಶಾಂತಿಯುತ ವಾತಾವರಣ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸುರತ್ಕಲ್‌ನಲ್ಲಿ ಫಾಝಿಲ್‌ ಹತ್ಯೆ – 14 ಮಂದಿ ವಶಕ್ಕೆ

    ಸುರತ್ಕಲ್‌ನಲ್ಲಿ ಫಾಝಿಲ್‌ ಹತ್ಯೆ – 14 ಮಂದಿ ವಶಕ್ಕೆ

    ಮಂಗಳೂರು: ಸುರತ್ಕಲ್‌ನಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಹಿಂದೆ ಗಂಭೀರ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಸುರತ್ಕಲ್‌ನಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ಪ್ರತಿಕ್ರಿಯಿಸಿ, ಇಂದು ಫಾಝಿಲ್ ಅಂತ್ಯಕ್ರಿಯೆ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಬಳಿಕ ತನಿಖೆ ಮುಂದುವರೆಸುತ್ತೇವೆ. ಘಟನಾ ಸ್ಥಳದಲ್ಲಿನ ಸಿಸಿಟಿವಿ ಫೂಟೇಜ್ ಎಲ್ಲಾ ಚೆಕ್ ಮಾಡುತ್ತೇವೆ. ಹಂತಕರು ಬಳಕೆ‌ ಮಾಡಿದ ವಾಹನದ ನಂಬರ್ ಆಧರಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    ಪೊಲೀಸ್ ಇಲಾಖೆ ಮೇಲೆ ಜನ ಇಟ್ಟ ಭರವಸೆ ಈಡೇರಿಸುತ್ತೇವೆ. ಸೋಷಿಯಲ್ ಮೀಡಿಯಾ ಮೂಲಕ‌ ಅಪಪ್ರಚಾರ ಮಾಡಬಾರದು. ತನಿಖೆ ಮಾಡಿದ ಬಳಿಕ ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎನ್ನುವುದು ಗೊತ್ತಾಗುತ್ತೆ. ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಮಸೂದ್ ಮರ್ಡರ್ ಆದಾಗ 24 ಗಂಟೆಯಲ್ಲಿ ಆರೋಪಿಗಳ ಬಂಧಿಸಿದ್ದೇವೆ. ಪ್ರವೀಣ್ ಕೊಲೆ ಕೇಸ್‌ನಲ್ಲಿ ಇಬ್ಬರನ್ನು ಬಂಧಿಸಿದ್ದೇವೆ ಎಂದರು. ಇದನ್ನೂ ಓದಿ: ದಯವಿಟ್ಟು ಯಾರೂ ಪ್ರಚೋದನೆ ಕೊಡುವಂತಹ ಹೇಳಿಕೆ ಕೊಡಬೇಡಿ: ಯು.ಟಿ ಖಾದರ್

    ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕಾದ ಕ್ರಮ ತೆಗೆದುಕೊಂಡಿದೆ. ಇದು ಬಹಳ ಸವಾಲಿನ ಕೆಲಸವಾಗಿರುವುದರಿಂದ ನಾವು ಎದುರಿಸುತ್ತೇವೆ. ಮಂಗಳೂರು ಭಾಗದಲ್ಲಿ ಸ್ಪೆಷಲ್ ಡ್ರೈವ್ ನಡೆಸುತ್ತೇವೆ. ಸಾರ್ವಜನಿಕರ ಭಯ ಕಡಿಮೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಮಂಗಳೂರಿನ ಎಜೆ ಆಸ್ಪತ್ರೆಯಿಂದ ಫಾಝಿಲ್‌ ಮೃತದೇಹವನ್ನು ಇಂದು ಬೆಳಗ್ಗೆ ಮಂಗಳಪೇಟೆಯಲ್ಲಿರುವ ಮೊಹಿಯುದ್ದೀನ್ ಜುಮ್ಮಾ ಮಸೀದಿಗೆ ತರಲಾಯಿತು.

    ಮಸೀದಿಯ ಒಳಗೆ ಮೃತದೇಹ ಕೊಂಡು ಹೋಗಿ ನಮಾಝ್ ಮಾಡಲಾಯಿತು. ಮಸೀದಿಯಲ್ಲಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು. ಬಳಿಕ ಮಂಗಳಪೇಟೆಯ ಮಸೀದಿ ಹಿಂಭಾಗದಲ್ಲಿರುವ ದಫನ್ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

    ಮುಜಾಗ್ರತಾ ಕ್ರಮವಾಗಿ ಸುರತ್ಕಲ್ ಭಾಗದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ

    ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ

    ಮಂಗಳೂರು: ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ಹತ್ಯೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

    ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜಪೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ.

    ಅಂತರ್‌ ಜಿಲ್ಲೆ ಮತ್ತು ಅಂತರ್‌ ರಾಜ್ಯವನ್ನು ಸಂಪರ್ಕಿಸುವ ಗಡಿಯಲ್ಲಿ ಚೆಕ್‌ ಪೋಸ್ಟ್‌ಗಳನ್ನು ಹಾಕಲಾಗುತ್ತದೆ. ಗುರುವಾರ ರಾತ್ರಿ 10 ಗಂಟೆಯಿಂದ ಅನಾವಶ್ಯಕವಾಗಿ ರಸ್ತೆಗೆ ಇಳಿದರೆ ವ್ಯಕ್ತಿಗಳನ್ನು ಬಂಧಿಸಲಾಗುತ್ತದೆ. ವಾಹನವನ್ನು ಜಪ್ತಿ ಮಾಡಲಾಗುವುದು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಜನರು ಈ ಆದೇಶವನ್ನು ಪಾಲಿಸಬೇಕು ಎಂದು ಶಶಿಕುಮಾರ್‌ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಹತ್ಯೆಗೆ ನಡೆದಿದ್ದ ಪ್ಲಾನ್ ಬಿಚ್ಚಿಟ್ಟ ಬಂಧಿತ ಆರೋಪಿಗಳು

    ಮತ್ತೊಂದು ಕೊಲೆ:
    ದಕ್ಷಿಣ ಕನ್ನಡದಲ್ಲಿ ಕಳೆದ 10 ದಿನಗಳಲ್ಲಿ ಒಟ್ಟು ಮೂವರ ಬರ್ಬರ ಹತ್ಯೆ ನಡೆದಿದೆ. ಮಂಗಳೂರಿನ ಹೊರವಲಯದ ಸುರತ್ಕಲ್‍ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಜಿಲ್‍ನನ್ನು ನಾಲ್ವರು ದುಷ್ಕರ್ಮಿಗಳು ಹತ್ಯೆಗೈಯ್ದಿದ್ದಾರೆ. ಹೊಂಚು ಹಾಕಿ ಕಾದು ಕುಳಿತು ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

    ಗಾಯಾಳು ಫಾಜಿಲ್‍ನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.

    ಹಲವು ವರ್ಷಗಳಿಂದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ಫಾಜಿಲ್ ಸದ್ಯ ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಬಟ್ಟೆ ಅಂಗಡಿ ಬಳಿ ಸ್ನೇಹಿತರೊಂದಿಗೆ ಮಾತಾಡುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ.

    ಫಾಜಿಲ್‌ ಹತ್ಯೆ ಬಳಿಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಧಾರ್ಮಿಕ ಕೇಂದ್ರಗಳ ಬಳಿ ಪೊಲೀಸ್ ಗಸ್ತು ಹೆಚ್ಚಳಕ್ಕೆ ಸೂಚಿಸಲಾಗಿದೆ. ಹೊಯ್ಸಳ, ಚೀತಾ ವಾಹನ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು, ಕೆ.ಎಸ್.ಆರ್.ಪಿ ತುಕಡಿ ನಿಯೋಜನೆಗೂ ಸೂಚಿಸಲಾಗಿದೆ.

    ಈ ಮಧ್ಯೆ, ಮಂಗಳೂರಿನ ಸುರತ್ಕಲ್ ಹತ್ಯೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಿಎಂ ಬೊಮ್ಮಾಯಿ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಮ್ಮದ್ ಫಾಸಿಲ್ ಬರ್ಬರ ಹತ್ಯೆ- ಮಂಗಳೂರಿನ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

    ಮಹಮ್ಮದ್ ಫಾಸಿಲ್ ಬರ್ಬರ ಹತ್ಯೆ- ಮಂಗಳೂರಿನ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

    ಮಂಗಳೂರು: ಪ್ರವೀಣ್ ಹತ್ಯೆಯ ಬೆನ್ನಲ್ಲೆ ಮತ್ತೊಬ್ಬ ಯುವಕ ಫಾಸಿಲ್‌ನ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯ 4 ಠಾಣೆಗಳಲ್ಲಿ ನಿಷೇಧಾಜ್ಞೆ ಜಾರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ನೀಡಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದು, ಯಾವುದೇ ವಂದತಿಗೂ ಕಿವಿಗೊಡಬೇಡಿ. ಫಾಸಿಲ್‌ ಹತ್ಯೆಗೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುತ್ತೇವೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬಿಳಲಿದೆ ಎಂದು ತಿಳಿಸಿದ್ದಾರೆ.

    ಘಟನೆಯೇನು?: ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್(23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ನಡೆದಿದೆ. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಚಿಕಿತ್ಸೆ ಫಲಕಾರಿಯಾಗದೇ ಫಾಸಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    POLICE JEEP

    ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಸಿಲ್‌ ಅವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‍ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ

    ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್ ಎಂಆರ್‌ಪಿಎಲ್‍ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು. ಘಟನೆ ಸಂಬಂಧಿಸಿ ಸುರತ್ಕಲ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆಟೋ ಓಡಿಸಲು ಸೈ, ಅಡುಗೆಗೂ ಸೈ – ಸುರತ್ಕಲ್‍ನ ವಿಜಯಲಕ್ಷ್ಮಿ ಪಬ್ಲಿಕ್ ಹೀರೋ

    ಆಟೋ ಓಡಿಸಲು ಸೈ, ಅಡುಗೆಗೂ ಸೈ – ಸುರತ್ಕಲ್‍ನ ವಿಜಯಲಕ್ಷ್ಮಿ ಪಬ್ಲಿಕ್ ಹೀರೋ

    ಮಂಗಳೂರು: ಆಟೋಗಳನ್ನು ಹೆಚ್ಚಾಗಿ ಗಂಡಸರೇ ಓಡಿಸೋದು. ಬೆಂಗಳೂರಲ್ಲಿ ಅಲ್ಲೊಬ್ರು ಇಲ್ಲೊಬ್ರು ಹೆಂಗಸರು ಅಪರೂಪಕ್ಕೆ ಕಾಣಬಹುದು. ಈ ಸಾಲಿಗೆ ವಿಜಯಲಕ್ಷ್ಮಿ ಅವರು ಸೇರ್ಪಡೆಯಾಗಿದ್ದಾರೆ. ಗಂಡನನ್ನು ಕಳೆದುಕೊಂಡ ವಿಜಯಲಕ್ಷ್ಮಿ ಆಟೋ ಮೂಲಕ ಕುಟುಂಬ ನಿಭಾಯಿಸ್ತಿದ್ದಾರೆ.

    ಹೌದು. ಮಂಗಳೂರಿನ ಸುರತ್ಕಲ್ ಸಮೀಪದ ಹೊಸಬೆಟ್ಟು ನಿವಾಸಿ ವಿಜಯಲಕ್ಷ್ಮಿಯ ಪತಿ ಮೂರ್ತಿ ಸುರತ್ಕಲ್‍ನ ಆಟೋ ನಿಲ್ದಾಣದಲ್ಲಿ ಆಟೋ ಓಡಿಸ್ತಾ ಇಬ್ಬರು ಮಕ್ಕಳು-ಪತ್ನಿಯನ್ನು ಸಲಹುತಿದ್ದರು. ಆದರೆ, ಕಳೆದ ವರ್ಷ ಹೃದಯಾಘಾತದಿಂದ ಮೂರ್ತಿ ಸಾವನ್ನಪ್ಪಿದ್ದರು. ಹೀಗಾಗಿ, ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಜಯಲಕ್ಷ್ಮಿ ಅವರಿಗೆ ದಿಕ್ಕು ತೋಚದಂತಾಯ್ತು. ಕೊನೆಗೆ ಗಂಡ ಓಡಿಸುತ್ತಿದ್ದ ಆಟೋವನ್ನೇ ವಿಜಯಲಕ್ಷ್ಮಿ ತಮ್ಮ ಆಧಾರ ಮಾಡಿಕೊಂಡರು. ಈ ಹಿಂದೆಯೇ ವಿಜಯಲಕ್ಷ್ಮಿಗೆ ಪತಿ ಆಟೋ ಓಡಿಸೋದನ್ನು ಕಲಿಸಿದ್ದರು. ಜೊತೆಗೆ ಲೈಸೆನ್ಸ್ ಕೂಡ ಮಾಡಿಕೊಟ್ಟಿದ್ದು ಈಗ ಅನುಕೂಲಕ್ಕೆ ಬಂದಿದೆ.

    ಹೆಂಗಸಾಗಿ ಹೇಗಪ್ಪಾ ಆಟೋ ಓಡಿಸೋದು ಅಂತಿದ್ದ ವಿಜಯಲಕ್ಷ್ಮಿಗೆ ನೆರವಿಗೆ ಬಂದಿದ್ದು, ಸ್ಥಳೀಯ ರಿಕ್ಷಾ ಚಾಲಕರ ಸಂಘ ಹಾಗೂ ಸುರತ್ಕಲ್‍ನ ಆಪತ್ಬಾಂಧವ ಸಮಾಜದ ಸೇವಾ ಸಂಘ. ವಿಜಯಲಕ್ಷ್ಮಿ ಅವರಿಗೆ ಮೊದಲ ಬಾಡಿಗೆ ನೀಡಿ ಪ್ರೋತ್ಸಾಹಿಸುತ್ತಿದೆ.

    ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಆಟೋ ಓಡಿಸೋ ವಿಜಯಲಕ್ಷ್ಮಿ, ಮಧ್ಯಾಹ್ನದಿಂದ ರಾತ್ರಿ 10 ಗಂಟೆಯವರೆಗೂ ಸ್ಥಳೀಯ ಗೋಡಂಬಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತನ್ನಿಬ್ಬರು ಮಕ್ಕಳನ್ನು ಓದಿಸುತ್ತಿದ್ದಾರೆ.

  • ಬಾರ್‌ನಲ್ಲಿ ಗ್ಯಾಂಗ್ ವಾರ್- ಯುವಕನ ಎದೆಗೆ ಚುರಿ ಇರಿದ ಗೆಳೆಯ

    ಬಾರ್‌ನಲ್ಲಿ ಗ್ಯಾಂಗ್ ವಾರ್- ಯುವಕನ ಎದೆಗೆ ಚುರಿ ಇರಿದ ಗೆಳೆಯ

    – ಓರ್ವನ ಕೊಲೆ, ಮತ್ತೊಬ್ಬನಿಗೆ ಗಾಯ

    ಮಂಗಳೂರು: ಗೆಳೆಯರು ಪರಸ್ಪರ ಹೊಡೆದಾಡಿಕೊಂಡು ಓರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‍ನಲ್ಲಿ ನಡೆದಿದೆ.

    ಗುಡ್ಡೆಕೊಪ್ಲ ನಿವಾಸಿ ಸಂದೇಶ್ ಕರ್ಕೇರ (35) ಕೊಲೆಯಾದ ಯುವಕ. ಘಟನೆಯಲ್ಲಿ ಗಣೇಶ್ ಎಂಬಾತನಿಗೆ ಗಾಯವಾಗಿದ್ದು, ಆತನನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶುಕ್ರವಾರ ರಾತ್ರಿ ಸುರತ್ಕಲ್ ಖಾಸಗಿ ಬಾರ್ ಒಂದರಲ್ಲಿ ಘಟನೆ ನಡೆದಿದೆ.

    ಸಂದೇಶ್, ಗಣೇಶ್ ಹಾಗೂ ಕೆಲ ಸ್ನೇಹಿತರು ಶುಕ್ರವಾರ ರಾತ್ರಿ 11 ಗಂಟೆಗೆ ಬಾರ್‌ಗೆ ಹೋಗಿದ್ದರು. ಮದ್ಯದ ಅಮಲಿನಲ್ಲಿದ್ದಾಗ ಯಾವುದೋ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗೆಳೆಯನೊಬ್ಬ ಮಾರಕಾಸ್ತ್ರದಿಂದ ಸಂದೇಶ್ ಎದೆಗೆ ಇರಿದಿದ್ದಾನೆ. ಪರಿಣಾಮ ಆತ ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗೆ ಘಟನೆಯಲ್ಲಿ ಗಣೇಶ್ ಗಾಯಗೊಂಡಿದ್ದಾನೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಬಳಿಕ ಸಂದೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.