Tag: Surender Reddy

  • ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ‘ಏಜೆಂಟ್’ ಹೊಸ ಪೋಸ್ಟರ್ ರಿಲೀಸ್

    ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ‘ಏಜೆಂಟ್’ ಹೊಸ ಪೋಸ್ಟರ್ ರಿಲೀಸ್

    ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ (Akhil Akkineni), ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ (Surender Reddy) ಕಾಂಬಿನೇಶನ್ ಹೈ ವೋಲ್ಟೇಜ್ ಸಿನಿಮಾ ‘ಏಜೆಂಟ್’ (Agent) ಬಿಡುಗಡೆಗೆ ಸಜ್ಜಾಗಿದೆ. ಟಾಲಿವುಡ್ ಅಂಗಳದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದಾದ ‘ಏಜೆಂಟ್’ ಏಪ್ರಿಲ್ 28ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.

    ಮೇಕಿಂಗ್ ವೀಡಿಯೋ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಹೊಸ ಪೋಸ್ಟರ್ ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ರಿಲೀಸ್ ಆಗಿದೆ. ಕೈಯಲ್ಲಿ ಗನ್ ಹಿಡಿದು ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಎಂಟ್ರಿ ಕೊಟ್ಟಿರುವ ಪೋಸ್ಟರ್ ಕಿಚ್ಚು ಹಚ್ಚಿದೆ. ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಟ್ಟಿದೆ. ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡು ಏಜೆಂಟ್ ಟೀಂ ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ನಿರ್ದೇಶಕ ಸುರೇಂದರ್ ರೆಡ್ಡಿ ಏಜೆಂಟ್ ಚಿತ್ರವನ್ನು ಇತರೆ ಸ್ಪೈ ಥ್ರಿಲ್ಲರ್ ಸಿನಿಮಾಗಳಿಗಿಂತಲೂ ಡಿಫ್ರೆಂಟ್ ಆಗಿ ತೆರೆ ಮೇಲೆ ತರುತ್ತಿದ್ದು ಇಬ್ಬರ ಕಾಂಬಿನೇಶನ್ ಮೇಲೆ ಸಿನಿ ಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಸಾಕ್ಷಿ ವೈದ್ಯ ಅಖಿಲ್ ಅಕ್ಕಿನೇನಿಗೆ ನಾಯಕಿಯಾಗಿ ನಟಿಸಿದ್ದು, ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಾಮಬ್ರಹ್ಮಂ ಸುಂಕರ AK ಎಂಟರ್ಟೈನ್ಮೆಂಟ್ಸ್ ಹಾಗೂ ಸುರೇಂದ್ರ 2 ಸಿನಿಮಾ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ ಕೊಲ್ಲ ಕಲಾ ನಿರ್ದೇಶನ, ಅಜೇಯ್ ಸುಂಕರ, ಪಾತಿ ದೀಪ ರೆಡ್ಡಿ ಸಹ ನಿರ್ಮಾಣ ಚಿತ್ರಕ್ಕಿದೆ. ಹಿಪ್ ಹಾಪ್ ಥಮೀಜಾ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಏಜೆಂಟ್ ಚಿತ್ರ ರಸೂಲ್ ಎಲ್ಲೋರೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿರುವ ಪ್ಯಾನ್ ಇಂಡಿಯಾ ಸಿನಿಮಾ ಏಜೆಂಟ್ ಬೇಸಿಗೆ ರಜೆ ದಿನಗಳಲ್ಲಿ ತೆರೆಗೆ ಬರ್ತಿದ್ದು, ಬಾಕ್ಸಾಫೀಸ್ ಧೂಳ್ ಎಬ್ಬಿಸಲು ಅಖಿಲ್ ಸನ್ನದ್ಧರಾಗಿದ್ದಾರೆ.

  • ಸೈರಾದಲ್ಲಿ ಕಿಚ್ಚ ಸುದೀಪ್ ಅಬ್ಬರ ನೋಡಿ!

    ಸೈರಾದಲ್ಲಿ ಕಿಚ್ಚ ಸುದೀಪ್ ಅಬ್ಬರ ನೋಡಿ!

    – ಕನ್ನಡ ಟ್ರೇಲರಲ್ಲಿ ಮೊಳಗಿತು ಸ್ವಾತಂತ್ರ್ಯ ಸಂಗ್ರಾಮದ ರಣಕಹಳೆ!

    ಬೆಂಗಳೂರು: ಕೇವಲ ದಕ್ಷಿಣ ಭಾರತ ಮಾತ್ರವಲ್ಲ; ಭಾರತೀಯ ಸಿನಿ ಪ್ರೇಕ್ಷಕರೆಲ್ಲ ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿರೋ ಚಿತ್ರ ಸೈರಾ ನರಸಿಂಹ ರೆಡ್ಡಿ. ಏಕಕಾಲದಲ್ಲಿಯೇ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಬಿಡುಗಡೆಯಾಗಲಿರೋ ಈ ಚಿತ್ರದ ಟ್ರೇಲರ್ ಇಂದು ಕನ್ನಡದಲ್ಲಿಯೂ ಬಿಡುಗಡೆಯಾಗಿದೆ. `ನರಸಿಂಹ ರೆಡ್ಡಿ ಸಾಮಾನ್ಯನಲ್ಲ. ಅವನು ಇತಿಹಾಸವನ್ನು ಸೃಷ್ಟಿಸಲು ಹೊರಟವನು. ಅವನೊಬ್ಬ ಯೋಗಿ. ಅವನೊಬ್ಬ ಯೋಧ. ಅವನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಖಡಕ್ ಹಿನ್ನೆಲೆ ಧ್ವನಿಯೊಂದಿಗೆ ಬಿಚ್ಚಿಕೊಳ್ಳೋ ಸೈರಾ ಟ್ರೇಲರ್ ಮೇಕಿಂಗ್ ಮೂಲಕ, ಪಾತ್ರಗಳ ಅಬ್ಬರದ ಲಕ್ಷಣಗಳ ಮೂಲಕ ಕನ್ನಡದ ಪ್ರೇಕ್ಷಕರನ್ನೆಲ್ಲ ಥ್ರಿಲ್ ಆಗುವಂತೆ ಮಾಡಿದೆ.

    ಈ ಕಥೆ ಬ್ರಿಟಿಷರ ವಿರುದ್ಧ ನಡೆದ ಸಂಗ್ರಾಮದ ಕಥೆಯನ್ನಾಧರಿಸಿದೆ. ಮೆಗಾ ಸ್ಟಾರ್ ಚಿರಂಜೀವಿ ಸೈರಾ ನರಸಿಂಹ ರೆಡ್ಡಿಯಾಗಿ ದೇಶ ಭಕ್ತಿಯನ್ನು ನರನಾಡಿಗಳಲ್ಲಿಯೂ ತುಂಬಿಕೊಂಡಿರೋ ಪಾತ್ರದ ಮೂಲಕ ಅಬ್ಬರಿಸಿದ್ದಾರೆ. ಈ ಟ್ರೇಲರ್ ಮಾತ್ರವಲ್ಲದೇ ಇಡೀ ಸಿನಿಮಾ ಕನ್ನಡ ಪ್ರೇಕ್ಷಕರಿಗೆ ಮತ್ತಷ್ಟು ಆಪ್ತವಾಗಲು ಸುದೀಪ್ ಅದರಲ್ಲೊಂದು ಪಾತ್ರವನ್ನು ನಿರ್ವಹಿಸಿರೋದೂ ಕಾರಣ. ಅವುಕು ಪ್ರಾಂತ್ಯದ ರಾಜನಾಗಿ ಸುದೀಪ್ ಇಲ್ಲಿ ಸೈರಾ ನರಸಿಂಹ ರೆಡ್ಡಿಗೆ ಸಾಥ್ ನೀಡಿದ್ದಾರೆ. ಅವರ ಪಾತ್ರದ ಚಹರೆಗಳೂ ಕೂಡಾ ಈ ಟ್ರೇಲರ್‍ನಲ್ಲಿ ಸ್ಪಷ್ಟವಾಗಿಯೇ ಕಾಣಿಸಿದೆ.

    ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ನಟನಟಿಯರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಅದರಲ್ಲಿಯೂ ಅಮಿತಾಭ್ ಬಚ್ಚನ್ ವೀರ ಸೇನಾನಿ ಸೈರಾ ನರಸಿಂಹ ರೆಡ್ಡಿಯ ಗುರು ಗೋಸಾಯಿ ವೆಂಕಣ್ಣನಾಗಿ, ಶಿಷ್ಯನನ್ನು ಬ್ರಿಟೀಷರ ವಿರುದ್ಧ ತಿರುಗಿ ಬಿದ್ದು ಸೆಣಸಲು ಪ್ರೋತ್ಸಾಹಿಸೋ ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ. ಸಿದ್ದಮ್ಮನ ಪಾತ್ರದಲ್ಲಿ ನಯನತಾರಾ, ಲಕ್ಷ್ಮಿಯ ಪಾತ್ರದಲ್ಲಿ ತಮನ್ನಾ, ರಾಜಪಾಂಡಿಯಾಗಿ ವಿಜಯ್ ಸೇತುಪತಿ, ವೀರರೆಡ್ಡಿಯಾಗಿ ಜಗಪತಿ ಬಾಬು ನಟಿಸಿದ್ದಾರೆ. ಈ ಎಲ್ಲ ಪಾತ್ರಗಳ ಪರಿಚಯವೂ ಈ ಟ್ರೇಲರ್ ಮೂಲಕವೇ ಆಗಿದೆ. ವಿಶೇಷವಾಗಿ ಕಿಚ್ಚ ಸುದೀಪ್ ಪಾತ್ರದ ಕನ್ನಡದ ಡೈಲಾಗ್ ಮೂಲಕವೇ ಸೈರಾ ಚಿತ್ರ ಕನ್ನಡಿಗರನ್ನು ಮತ್ತಷ್ಟು ಸೆಳೆದುಕೊಂಡಿದೆ.

    ಈ ಟ್ರೇಲರ್ ನಲ್ಲಿ ಪ್ರಧಾನವಾಗಿ ಕಾಣಿಸಿರೋದು ಮೇಕಿಂಗ್‍ನ ಅಬ್ಬರ. ಅದ್ಭುತವೆಂಬಂಥಾ ಮೇಕಿಂಗ್, ದೃಷ್ಯಾವಳಿಗಳೇ ಒಟ್ಟಾರೆಯಾಗಿ ಈ ಸಿನಿಮಾ ಮೂಡಿಬಂದಿರೋ ರೀತಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ. ಸೈರಾ ನರಸಿಂಹ ರೆಡ್ಡಿ ಕನ್ನಡಿಗರನ್ನು ಸೆಳೆದಿರೋದಕ್ಕೆ ಮತ್ತೊಂದು ಪ್ರಧಾನ ಕಾರಣವೂ ಇದೆ. ಅದು ಈ ಸಿನಿಮಾದಲ್ಲಿ ಕನ್ನಡದ ಹೆಮ್ಮೆಯ ಆಡಿಯೋ ಸಂಸ್ಥೆ ಲಹರಿ ಕೂಡಾ ಪ್ರಮುಖ ಭಾಗವಾಗಿರೋದು. ಲಹರಿ ಸಂಸ್ಥೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿಯೇ ಹೆಗ್ಗಳಿಕೆ ಹೊಂದಿರುವಂಥಾದ್ದು. ಈಗಾಗಲೇ ದಕ್ಷಿಣ ಭಾರತೀಯ ದೊಡ್ಡ ಚಿತ್ರಗಳ ಆಡಿಯೋ ಹಕ್ಕುಗಳನ್ನು ಲಹರಿ ಸಂಸ್ಥೆ ಖರೀದಿಸಿತ್ತು. ಆದರೀಗ ಸೈರಾ ನರಸಿಂಹ ರೆಡ್ಡಿಯ ಎಲ್ಲ ಭಾಷೆಗಳ ಆಡಿಯೋ ಹಕ್ಕುಗಳನ್ನೂ ಲಹರಿ ಸಂಸ್ಥೆ ಪಡೆದುಕೊಂಡಿದ್ದು ಈ ಮೂಲಕ ಈ ಬಹುನಿರೀಕ್ಷಿತ ಚಿತ್ರದ ಭಾಗವಾಗಿದೆ.