Tag: Suresh Babu

  • ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

    ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

    – ಆ.11ರ ಒಳಗೆ ಸಮಾನ ಅನುದಾನ ಹಂಚಿಕೆಯಾಗದಿದ್ರೆ ಅಧಿವೇಶನದಲ್ಲಿ ಹೋರಾಟ ಎಚ್ಚರಿಕೆ

    ಬೆಂಗಳೂರು: ರಾಜ್ಯ ಸರ್ಕಾರ ಜೆಡಿಎಸ್ (JDS) ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕಾಣಿಸುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಕ್ಕೆ ಹಣ ಕೊಡುತ್ತಿಲ್ಲ. ಈ ಸರ್ಕಾರ ಅಭಿವೃದ್ಧಿ ಪರ ಇಲ್ಲ. ಈ ಸರ್ಕಾರದಲ್ಲಿ ಸುರ್ಜೇವಾಲ ಸೂಪರ್ ಸಿಎಂ ಆಗಿದ್ದಾರೆ. ಜನರು ಸುರ್ಜೇವಾಲಗೆ ಓಟ್ ಹಾಕಿದ್ರಾ? ಸುರ್ಜೇವಾಲ ಶಾಸಕರ ಜೊತೆ ಮಾತನಾಡುತ್ತಿದ್ದಾರೆ. ಸುರ್ಜೇವಾಲ ಹೇಳಿದ ಮೇಲೆ ಸಿಎಂ 50 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಸಿಎಂ ವಿಶೇಷ ಅಧಿಕಾರಿಗಳಿಗೆ ಪಟ್ಟಿ ಕೊಡಿ ಅಂತ ಶಾಸಕರಿಗೆ ಸಿಎಂ ಪತ್ರ ಬರೆದಿದ್ದಾರೆ. ದುಡ್ಡು ಇದ್ದರೆ ಇವರು ಯಾಕೆ ಹಣ ಕೊಡುತ್ತಿಲ್ಲ? ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಕೊಡೋಕೆ ಈ ಸರ್ಕಾರ ಮುಂದಾಗಿದೆ. ವಿಶೇಷ ಅನುದಾನ ಅಂತ ಬಿಡುಗಡೆ ಮಾಡಿ ಅದನ್ನು ಹೈಕಮಾಂಡ್‌ಗೆ ಕಪ್ಪ-ಕಾಣಿಕೆ ಕೊಡುತ್ತಿದ್ದಾರೆ ಅನ್ನಿಸುತ್ತಿದೆ. ಸಿಎಂ ಈ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಅನ್ಯ ಧರ್ಮಗಳ ಪಾಲನೆ – ತಿರುಪತಿಯ ನಾಲ್ವರು ನೌಕರರ ಅಮಾನತು

    ಕ್ಯಾಬಿನೆಟ್‌ನಲ್ಲಿ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ., ಬಿಜೆಪಿ ಅವರಿಗೆ 25 ಕೋಟಿ ರೂ. ಕೊಡೋಣ ಅಂತ ಚರ್ಚೆ ಆಗಿದೆ. ಜೆಡಿಎಸ್ ಶಾಸಕರಿಗೆ ಈಗಲೇ ಅನುದಾನ ಕೊಡೋದು ಬೇಡ ಅಂತ ಇವರು ಚರ್ಚೆ ಮಾಡಿದ್ದಾರೆ. ರಾಜ್ಯದಲ್ಲಿ 224 ಶಾಸಕರು ಒಂದೇ. ಇವರೇನು ಕೆಪಿಸಿಸಿಯಿಂದ ನಮಗೆ ಹಣ ಕೊಡುತ್ತಿಲ್ಲ. ಶಾಸಕರ ನಿಧಿಯಲ್ಲಿ ಹಣ ಕೊಡಬೇಕು. ಯಾವುದೇ ತಾರತಮ್ಯ ಮಾಡದೇ ಎಲ್ಲಾ ಶಾಸಕರಿಗೆ ಅನುದಾನ ಕೊಡಬೇಕು. ಇಲ್ಲದೇ ಹೋದರೆ ರಾಜ್ಯಾದ್ಯಂತ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

    ಜೆಡಿಎಸ್ ಶಾಸಕರಿಗೆ ಅನುದಾನ ಕೊಟ್ಟಿಲ್ಲ. ಈಗ ಮಾಡಿರೋ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಿಲ್ಲ. ಅವರ ಪಕ್ಷದವರಿಗೆ ಮಾತ್ರ ಹಣ ಬಿಡುಗಡೆ ಮಾಡುತ್ತಾರೆ. ಜೆಡಿಎಸ್ ಅವರಿಗೆ ಯಾಕೆ ಹಣ ಬಿಡುಗಡೆ ಮಾಡಿಲ್ಲ. ಎಲ್ಲಾ ಶಾಸಕರನ್ನು ಒಂದಾಗಿ ನೋಡಿ. ತಾರತಮ್ಯ ಮಾಡೋದು ಸರಿಯಲ್ಲ. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಶಾಸಕರಿಗೂ ಅನುದಾನ ಕೊಟ್ಟಿಲ್ಲ. ಸೂಪರ್ ಸಿಎಂ ಹೇಳಿದ ಮೇಲೆ ಕಾಂಗ್ರೆಸ್ ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ಆಗಸ್ಟ್ 11ರ ಒಳಗೆ ಸಮಾನವಾಗಿ ಅನುದಾನ ಹಂಚಿಕೆ ಆಗಬೇಕು. ಇಲ್ಲದೆ ಹೋದ್ರೆ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಖಡಕ್ ವಾರ್ನಿಮಗ್ ನೀಡಿದ್ದಾರೆ. ಇದನ್ನೂ ಓದಿ: Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

  • ಬೆಲೆ ಏರಿಕೆ ವಿರುದ್ಧ ಬಿಜೆಪಿ ಏಕಾಂಗಿ ಹೋರಾಟ ಮಾಡೋದು ಸರಿಯಲ್ಲ: ಸುರೇಶ್ ಬಾಬು

    ಬೆಲೆ ಏರಿಕೆ ವಿರುದ್ಧ ಬಿಜೆಪಿ ಏಕಾಂಗಿ ಹೋರಾಟ ಮಾಡೋದು ಸರಿಯಲ್ಲ: ಸುರೇಶ್ ಬಾಬು

    – ಗ್ಯಾರಂಟಿಗೆ ಹಣ ಹೊಂದಿಸಲು ಸರ್ಕಾರ ಬೆಲೆ ಏರಿಕೆ ಮಾಡ್ತಿದೆ ಎಂದು ಕಿಡಿ

    ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಏಕಾಂಗಿ ಹೋರಾಟಕ್ಕೆ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ. ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು(Suresh Babu) ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಬಿಜೆಪಿ ನಡೆ ಸರಿಯಲ್ಲ ಎಂದು ಕಿಡಿಕಾರಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ(BJP) ಇಂದಿನಿಂದ ಅಹೋರಾತ್ರಿ ಧರಣಿ ಮಾಡ್ತಿದೆ. ಆದರೆ ನಮ್ಮನ್ನ ಕರೆದಿಲ್ಲ. ಜೆಡಿಎಸ್‌ಗೆ(JDS) ಮೇಲುಗೈ ಆಗುತ್ತದೆ ಎಂದು ಬಿಜೆಪಿ ನಮ್ಮನ್ನ ಕರೆದಿಲ್ಲ. ಮುಡಾ ಪಾದಯಾತ್ರೆಯಲ್ಲಿ ಹೀಗೆ ಆಯ್ತು. ಈಗಲೂ ಹೀಗೆ ಆಗಿದೆ. ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇವೆ. ಒಟ್ಟಾಗಿ ಹೋರಾಟ ಮಾಡಬೇಕು. ರಾಜ್ಯದಲ್ಲಿ ಸಮನ್ವಯ ಸಾಧಿಸಲು ಒಂದು ಸಮಿತಿ ರಚಿಸಿಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿಗೆ ಬೆಂಕಿ – 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಬೆಂಕಿಗಾಹುತಿ

    ಮೊದಲಿಂದಲೂ ನಾವು ಸಮನ್ವಯ ಸಮಿತಿ ಮಾಡಿ ಎಂದು ಹೇಳ್ತಿದ್ದೇವೆ. ಒಟ್ಟಾಗಿ ಹೋರಾಟ ಮಾಡಿದರೆ ಪ್ರಬಲವಾಗಿ ಇರುತ್ತದೆ. ನಾವು ಒಟ್ಟಾಗಿ ಹೋರಾಟ ಮಾಡಿದರೆ ಸರ್ಕಾರಕ್ಕೆ ಭಯ ಇರುತ್ತದೆ. ನಮ್ಮ ಪಕ್ಷಕ್ಕೆ ಬಿಜೆಪಿ ಹೋರಾಟ ಬಗ್ಗೆ ನಮಗೆ ಯಾವುದೇ ಮಾಹಿತಿ ಕೊಟ್ಟಿಲ್ಲ. ದೇವೇಗೌಡ, ಕುಮಾರಸ್ವಾಮಿ ಅವರಿಗೂ ಕೇಳಿದೆ ಯಾರಿಗೂ ಹೇಳಿಲ್ಲ. ಇದು ಸರಿಯಾದ ಬೆಳವಣಿಗೆ ಅಲ್ಲ. ಇಬ್ಬರು ಒಟ್ಟಾಗಿ ಹೋಗಬೇಕು. ಈ ನಿಟ್ಟಿನಲ್ಲಿ ಎರಡು ಪಕ್ಷಗಳು ಕೂತು ಮಾಡಬೇಕು ಎಂದರು.

    ಸಮನ್ವಯದ ಕೊರತೆ ಬಗ್ಗೆ ಕೇಂದ್ರದ ನಾಯಕರಿಗೆ ಗೊತ್ತಿಲ್ಲ ಅನ್ನಿಸುತ್ತದೆ. ರಾಜ್ಯ ನಾಯಕರು ಇದನ್ನ ಮಾಡುತ್ತಿದ್ದಾರೆ. ನಿಖಿಲ್, ಬಿಜೆಪಿ ಅವರು ಘೋಷಣೆ ಮಾಡಿದರು ಎಂದು ನಾವು ಹೋರಾಟ ಮಾಡುತ್ತೇವೆ ಅಂತ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ(Vijayendra) ಅವರು ನಾವು ಪ್ರತ್ಯೇಕ ಹೋರಾಟ ಅಂತ ಹೇಳಿದ್ದಾರೆ. ಇದು ಅವರ ಮನಸ್ಥಿತಿ ತೋರಿಸುತ್ತದೆ. ಎರಡು ಪಕ್ಷಗಳು ಪ್ರತ್ಯೇಕವಾಗಿ ಹೋರಾಟ ಮಾಡೋದು ಸರಿಯಲ್ಲ. ಎರಡು ಪಕ್ಷದ ವರಿಷ್ಠರು ಇದರ ಬಗ್ಗೆ ಸಮನ್ವಯ ಮಾಡಬೇಕು. ಇಲ್ಲದೆ ಹೋದರೆ ಎರಡು ಪಕ್ಷಕ್ಕೆ ಸಮಸ್ಯೆ ಆಗುತ್ತದೆ. ರಾಜ್ಯಮಟ್ಟದಲ್ಲಿ ಹೊಂದಾಣಿಕೆ ಬಗ್ಗೆ ಮಾತಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ನಾವು ಎನ್‌ಡಿಎ ಅಂಗ ಪಕ್ಷ, ಅದನ್ನ ಬಿಜೆಪಿ ಅವರು ಅರ್ಥ ಮಾಡಿಕೊಳ್ಳಬೇಕು. ಸಂಬಂಧ ಕಿತ್ತು ಹೋಗೋಕೆ ಕ್ಷಣ ಮಾತ್ರ ಸಾಕು. ಆದರೆ ಒಟ್ಟಾಗಿ ಹೋಗೋದನ್ನ ರೂಢಿಸಿಕೊಳ್ಳಿ. ದೇವೇಗೌಡ, ಕುಮಾರಸ್ವಾಮಿ ಅವರು ಬಿಜೆಪಿ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದರು.

    ಗ್ಯಾರಂಟಿಗೆ ಹಣ ಹೊಂದಿಸಲು ಬೆಲೆ ಏರಿಕೆ:
    ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಜನರು ವಿರೋಧ ಮಾಡುವುದಿಲ್ಲ ಎಂಬ ಭಾವನೆಗೆ ಈ ಸರ್ಕಾರ ಬಂದಿದೆ. ಗ್ಯಾರಂಟಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡ್ತಿದ್ದಾರೆ. ಗ್ರಾಹಕರಿಗೆ ಹೊರೆ ಹಾಕುವ ಕೆಲಸ ಮಾಡ್ತಿದ್ದಾರೆ. ಹಾಲು, ನೀರು, ವಿದ್ಯುತ್ ಎಲ್ಲಾ ಬೆಲೆ ಏರಿಕೆ ಮಾಡಿದ್ದಾರೆ. ಈ ಸರ್ಕಾರ ಬಡವರ ಪರ ಇಲ್ಲದ ಸರ್ಕಾರ ಎಂದು ಕಿಡಿಕಾರಿದರು. ಇದನ್ನೂ ಓದಿ: ಅರ್ಥಶಾಸ್ತ್ರದ ಬಗ್ಗೆ ಗೊತ್ತಿರೋರು ಬೆಲೆ ಏರಿಕೆ ವಿರೋಧ ಮಾಡಲ್ಲ: ಆರ್.ವಿ.ದೇಶಪಾಂಡೆ

    ಕಾಂಗ್ರೆಸ್ ಅವರು ಚುನಾವಣೆಯಲ್ಲಿ ಗೆಲ್ಲೋಕೆ ಗ್ಯಾರಂಟಿ ಘೋಷಣೆ ಮಾಡಿದ್ರು. ಮತ ಪಡೆಯೋಕೆ ಯೋಜನೆ ತಂದರು. ಇಂತಹ ವ್ಯವಸ್ಥೆ ಆಗಬಾರದು. ಸರ್ಕಾರದ ಹಣ ಪಕ್ಷದ ಕಾರ್ಯಕರ್ತರಿಗೆ ಕೊಡ್ತಿದ್ದಾರೆ. ಈ ಸರ್ಕಾರ ಅನೇಕ ಅವ್ಯವಹಾರ ಮಾಡ್ತಿದೆ. ಸರ್ಕಾರದ ನೆಲೆ ಬೆಲೆ ಏರಿಕೆ ಖಂಡಿಸಿ ಹೋರಾಟ ಮಾಡಲಿದೆ. ವರಿಷ್ಠರ ಜೊತೆ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡೋದಾಗಿ ತಿಳಿಸಿದರು.

  • ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್‌ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್‌ ಬಾಬು

    ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್‌ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್‌ ಬಾಬು

    – ಚಿನ್ನ ಕಳ್ಳಸಾಗಣೆ ಕೇಸಲ್ಲಿ ಗೃಹ ಇಲಾಖೆಯೇ ಶಾಮೀಲು: ಜೆಡಿಎಸ್‌ ಶಾಸಕ ಆರೋಪ

    ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರಾಜ್ಯ ಸರ್ಕಾರ ಬೇಕಾದ್ರೆ, ರನ್ಯಾಗೆ (Ranya Rao) ಕ್ಲೀನ್‌ಚಿಟ್ ಕೊಟ್ಟರೂ ಆಶ್ಚರ್ಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ಅನುಮಾನ ವ್ಯಕ್ತಪಡಿಸಿದರು.

    ರನ್ಯಾ ರಾವ್ ಕೇಸ್ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂತಹ ಮಾಫಿಯಾಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡ್ತಿಲ್ಲ. ದಕ್ಷ ಅಧಿಕಾರಿಗಳು ಇದ್ದರೂ ಸರ್ಕಾರ ಸರಿಯಾಗಿ ಬಳಕೆ ಮಾಡಿಕೊಳ್ತಿಲ್ಲ. ರನ್ಯಾ ರಾವ್ ಅನೇಕ ಬಾರಿ ದುಬೈಗೆ ಹೋಗಿ ಬಂದಿದ್ದಾರೆ. ತಂದೆ IPS ಅಧಿಕಾರಿ ಅಂತ ರನ್ಯಾಗೆ ರಕ್ಷಣೆ ಕೊಡ್ತಿದ್ದಾರಾ ಎಂದು ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: EXCLUSIVE |ರನ್ಯಾ ಬಳಿ ಇದೆ ದುಬೈ ರೆಸಿಡೆಂಟ್ ವೀಸಾ – ಜಾಮೀನು ಸಿಕ್ರೆ ದೇಶ ಬಿಟ್ಟು ಹೋಗ್ತಾರಾ?

    ಪೊಲೀಸರ ರಕ್ಷಣೆಯಲ್ಲಿ ರನ್ಯಾ ಓಡಾಡಿದ್ದಾಳೆ. ಸರ್ಕಾರಕ್ಕೆ ನಾಚಿಕೆ ಆಗಬೇಕು.14 ಕೆಜಿ ಚಿನ್ನ ಸಾಗಾಣೆ ಮಾಡ್ತಾರೆ ಅಂದರೆ ಗೃಹ ಇಲಾಖೆ ಇದರಲ್ಲಿ ಶಾಮೀಲಾಗಿದೆ ಅನ್ನಿಸುತ್ತೆ. ಸಿಐಡಿ ತನಿಖೆ ಯಾಕೆ ವಾಪಸ್ ಪಡೆದ್ರಿ? ಇದು ನಮಗೆ ಅನುಮಾನ ಬರ್ತಿದೆ. ರನ್ಯಾ ರಾವ್ ಉಳಿಸೋಕೆ ಸರ್ಕಾರ ಮುಂದಾಗ್ತಿರುವ ಅನುಮಾನ ಬರ್ತಿದೆ ಎಂದು ತಿಳಿಸಿದರು.

    ರನ್ಯಾ ರಾವ್ ಉಳಿಸಲು ಈ ಸರ್ಕಾರದವರು ಬೇಕಾದ್ರೆ ಮುಡಾ ಕೇಸ್‌ನಲ್ಲಿ ಸೈಟ್ ವಾಪಸ್ ಕೊಟ್ಟಂತೆ ಚಿನ್ನವನ್ನ ದುಬೈಗೆ ವಾಪಸ್ ಇಟ್ಟು ಬಾ ಅಂತ ಹೇಳಿದ್ರೂ ಅಚ್ಚರಿಯಿಲ್ಲ ಎಂದು ಲೇವಡಿ ಮಾಡಿದರು. ರಾಜ್ಯ ಸರ್ಕಾರ ಬೇಕಾದ್ರೆ ರನ್ಯಾಗೆ ಕ್ಲೀನ್ ಚಿಟ್ ಕೊಡ್ತಾರೆ. ಸರ್ಕಾರದ ವರ್ತನೆ ನೋಡಿದ್ರೆ ನಮಗೆ ಅನುಮಾನ ಬರುತ್ತದೆ. ರನ್ಯಾ ಪ್ರಕರಣದಲ್ಲಿ ಇಬ್ಬರು ಸಚಿವರ ಹೆಸರು ಕೇಳಿ ಬಂದಿದೆ. ಯಾರು ಅ ಸಚಿವರು ಎಂಬುದು ತನಿಖೆ ಆಗಬೇಕು. ಯಾರೇ ಪ್ರಭಾವಿಗಳು ಇದ್ದರೂ ಕ್ರಮ ಆಗಬೇಕು. ಯಾರು ಇದರ ಹಿಂದೆ ಇದ್ದಾರೆ ಬೆಳಕಿಗೆ ಬರಬೇಕು. ಸಿಬಿಐ ಇದರ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ – ನಾಲ್ವರಿಗೆ ಸಿಬಿಐ ನೋಟಿಸ್‌

    ಕುಮಾರಸ್ವಾಮಿ ಇವತ್ತು ಇದ್ದಿದ್ದರೆ ಚೆನ್ನಾಗಿ ಇರುತ್ತಿತ್ತು. ಕುಮಾರಸ್ವಾಮಿ ಕೂಡಾ ಸುದ್ದಿಗೋಷ್ಠಿ ಮಾಡಲಿದ್ದಾರೆ. ಇಷ್ಟು ದಿನ ರನ್ಯಾ ಏರ್ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳನ್ನ ಕಣ್ಣು ತಪ್ಪಿಸಿ ಬಂದಿದ್ದಾಳೆ. ಇದೆಲ್ಲವನ್ನೂ ನೋಡಿದರೆ ಪೊಲೀಸರು ಶಾಮೀಲಾಗಿರುವ ಅನುಮಾನ ಇದೆ. ರಾಜ್ಯ ಸರ್ಕಾರದಿಂದ ಈ‌ ತನಿಖೆ ಆಗೊಲ್ಲ. ಸಿಬಿಐ ತನಿಖೆ ಆಗಬೇಕು ಎಂದರು.

  • ಚುನಾವಣೆ ಬಂದರೆ ಮಾತ್ರ ಗ್ಯಾರಂಟಿ ಹಣ ಹಾಕ್ತಾರೆ – ಸುರೇಶ್ ಬಾಬು ಕಿಡಿ

    ಚುನಾವಣೆ ಬಂದರೆ ಮಾತ್ರ ಗ್ಯಾರಂಟಿ ಹಣ ಹಾಕ್ತಾರೆ – ಸುರೇಶ್ ಬಾಬು ಕಿಡಿ

    ಬೆಂಗಳೂರು: ಚುನಾವಣೆ ಬಂದರೆ ಮಾತ್ರ ಗ್ಯಾರಂಟಿ ಹಣ ಹಾಕ್ತಾರೆ ಎಂದು ಜೆಡಿಎಸ್ ಶಾಸಕ ಸುರೇಶ್ ಬಾಬು (Suresh Babu) ಆಕ್ರೋಶ ಹೊರಹಾಕಿದ್ದಾರೆ.

    ಇಂದು ಗ್ಯಾರಂಟಿ ಯೋಜನೆ ಹಣ ವಿಳಂಬ, ಸಚಿವ ವೆಂಕಟೇಶ್‌ರಿಂದ ಎಂಜಿನಿಯರ್‌ಗೆ ಧಮ್ಕಿ ಹಾಕಿದ ಪ್ರಕರಣ ಖಂಡಿಸಿ ಜೆಡಿಎಸ್‌ನ ಶಾಸಕರು ಸುರೇಶ್ ಬಾಬು ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.ಇದನ್ನೂ ಓದಿ: ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂಟ್ರಿ

    ಪ್ರತಿಭಟನೆ ವೇಳೆ ಮಾತನಾಡಿದ ಅವರು, ಸರ್ಕಾರ ಅನೇಕ ಭಾಗ್ಯಗಳು ಕೊಡ್ತಿದೆ. ಬೇಕಾಬಿಟ್ಟಿ ಗ್ಯಾರಂಟಿ ಹಣ ಕೊಡ್ತಿದ್ದಾರೆ. ಚುನಾವಣೆ ಬಂದರೆ ಮಾತ್ರ ಗ್ಯಾರಂಟಿ ಹಣ ಹಾಕ್ತಾರೆ. ಗ್ಯಾರಂಟಿ ಹಣ ತಿಂಗಳ ಪ್ರಾರಂಭದ 1 ರಿಂದ 5ನೇ ತಾರೀಖಿನ ಒಳಗೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

    ಸಚಿವ ವೆಂಕಟೇಶ್ ಎಂಜಿನಿಯರ್‌ಗೆ ಧಮ್ಕಿ ಹಾಕಿದ್ದಾರೆ. ಸಚಿವರು ಹೀಗೆ ಮಾತಾಡೋದು ಸರಿಯಲ್ಲ. ಜೆಡಿಎಸ್ ಅವರಿಗೆ ಯಾಕೆ ಗುತ್ತಿಗೆ ಕೊಡ್ತೀರಾ ಎಂದು ಕೇಳುತ್ತಾರೆ. ಸಚಿವರು ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದು, ಕೂಡಲೇ ಕ್ಷಮೆ ಕೇಳಬೇಕು ಎಂದು ಕಿಡಿಕಾರಿದರು.

    ಗುತ್ತಿಗೆದಾರರಿಂದ ಕಮೀಷನ್ ಪಡೆಯುವ ಕೆಲಸ ಈ ಸರ್ಕಾರದಲ್ಲಿ ಆಗ್ತಿದೆ. ಈ ಸರ್ಕಾರಕ್ಕೆ ನಾಚಿಕೆ ಆಗುವುದಿಲ್ಲವಾ? ಸಿಎಂ ಅವರೇ ಕಮೀಷನ್ ಕೊಡಬೇಡಿ ಎಂದು ಹೇಳಿದ್ದಾರೆ. ಸಿಎಂ ಅವರೇ ಹೀಗೆ ಹೇಳ್ತಿದ್ದಾರೆ ಅಂದರೆ ಕಮೀಷನ್ ನಡೆಯುತ್ತಿದೆ ಎಂದರ್ಥ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಯಾವುದೇ ಇಲಾಖೆಗೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ರಾಜ್ಯದ ಬೊಕ್ಕಸದ ಹಣ ಎಲ್ಲಾ ಇಲಾಖೆಗೆ ವಿತರಣೆ ಮಾಡಬೇಕು. SCSP-TSP ಹಣವನ್ನ ಗ್ಯಾರಂಟಿಗೆ ಕೊಡೋದು ಸರಿಯಲ್ಲ. SC-ST ಜನರಿಗೆ ಮಾತ್ರ ಹಣ ನೀಡಬೇಕು. ಒಬ್ಬ ಮಂತ್ರಿ ಜೈಲಿಗೆ ಹೋಗಿ ಬಂದರು ನಾಚಿಕೆ ಆಗುವುದಿಲ್ಲ. ದಲಿತರ ವೋಟ್ ಮಾತ್ರ ನಿಮಗೆ ಬೇಕಾ? ಅವರ ಅಭಿವೃದ್ಧಿ ಬೇಡ್ವಾ? ದಲಿತರಿಗೆ ಈ ಸರ್ಕಾರ ಅನ್ಯಾಯ ಮಾಡ್ತಿದೆ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಬಾಯಿ ಚಪ್ಪರಿಸುವ ಟೊಮೆಟೊ ಸಾಸ್‌ನಲ್ಲಿ ಅಪಾಯಕಾರಿ ರಾಸಾಯನಿಕ ಬಳಕೆ!

     

  • ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಜಾರಿಯಾದ್ರೆ ರಕ್ತಪಾತವಾಗುತ್ತೆ: ಸುರೇಶ್ ಬಾಬು

    ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಜಾರಿಯಾದ್ರೆ ರಕ್ತಪಾತವಾಗುತ್ತೆ: ಸುರೇಶ್ ಬಾಬು

    ತುಮಕೂರು: ಈ ಜಿಲ್ಲೆಯ ಜನರು ರಕ್ತ ಕೊಡುತ್ತೇವೆ ಹೊರತು ರಾಮನಗರ (Ramanagara) ಜಿಲ್ಲೆಗೆ ನೀರು ತೆಗೆದುಕೊಂಡು ಹೋಗಲು ಯಾವುದೆ ಕಾರಣಕ್ಕೂ ಬಿಡುವುದಿಲ್ಲ ಎಂದು ಜೆಡಿಎಲ್‌ಪಿ ನಾಯಕ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು (Suresh Babu) ಎಚ್ಚರಿಕೆ ನೀಡಿದ್ದಾರೆ.

    ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ (Hemavathi Express Canal) ವಿರೋಧಿ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಎಲ್ಲಿಂದ ಪ್ರಾರಂಭವಾಗುತ್ತೋ ಅಲ್ಲಿಂದ ಪಾದಯಾತ್ರೆ ಶುರುಮಾಡಿದ್ದೇವೆ. ಇದು ನಮ್ಮ ಜಿಲ್ಲೆಯ ರೈತರ ಅಳಿವು-ಉಳಿವಿನ ಪ್ರಶ್ನೆ. ಗುಬ್ಬಿ, ತುಮಕೂರು ಸೇರಿದಂತೆ ಎಲ್ಲಾ ತಾಲೂಕುಗಳಿಗೂ ತೊಂದರೆಯಾಗಲಿದೆ. ಈ ಯೋಜನೆ ನಿಲ್ಲಿಸಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಅವರನ್ನು ಹಲವು ಬಾರಿ ಭೇಟಿಯಾಗಿದ್ದೇವೆ. ಅವರ ಧೋರಣೆ ಏನು ಎಂಬುದು ಗೊತ್ತಾಗಿದೆ. ನೀವು ಏನೇ ಮಾಡಿದರೂ ನೀರು ತೆಗೆದುಕೊಂಡು ಹೋಗುತ್ತೇವೆ ಅನ್ನೊದು ಅವರ ಧೋರಣೆ. ಅದೇಗೆ ನೀರನ್ನು ತೆಗೆದುಕೊಂಡು ಹೋಗುತ್ತೀರಾ ನೋಡೇ ಬಿಡೋಣ ಎಂದು ಸವಾಲ್ ಹಾಕಿದರು. ಇದನ್ನೂ ಓದಿ: DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    ತುಮಕೂರು ಜಿಲ್ಲೆಯವರು ಏನು ಬಳೆ ತೊಟ್ಟುಕೊಂಡು ಕುಳಿತಿಲ್ಲ. ಜಿಲ್ಲೆಯಲ್ಲಿ ಇಬ್ಬರು ಸಚಿವರು, ಏಳು ಜನ ಕಾಂಗ್ರೆಸ್ ಶಾಸಕರಿದ್ದಾರೆ. ನಿಮಗೇನಾದರೂ ಕಾಳಜಿ ಇದ್ದರೆ ಕೂಡಲೇ ಈ ಯೋಜನೆಯನ್ನು ನಿಲ್ಲಿಸಬೇಕು. ಹಿಂದೆ ಒಂದು ಸಲ ಜಿ.ಪಂ ಕೆಡಿಪಿ ಸಭೆಯಲ್ಲಿ ಕೆನಾಲ್ ವಿರುದ್ಧ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರೆಸೊಲ್ಯೂಷನ್ ಪಾಸ್ ಮಾಡಿದ್ದೇವೆ. ಹಾಗಾಗಿ ಈ ಯೋಜನೆಯನ್ನು ಹಿಂಪಡೆಯುವಂತೆ ಪರಮೇಶ್ವರ್ ಅವರು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು. ಕುಣಿಗಲ್ ಗಡಿ ದಾಟಿದ ಮೇಲೆ ನಿಮಗೆ ಹೇಗೆ ಬೇಕೋ ಹಾಗೆ ಮಾಡಿ. ನಮ್ಮ ಜಿಲ್ಲೆಯಿಂದ ಲಿಂಕ್ ಕೆನಾಲ್ ಬೇಡ. ಬೇರೆ ಯಾವುದೇ ಮಾರ್ಗದಲ್ಲಿ ಮಾಡಿಕೊಳ್ಳಿ ಎಂದು ಕಿಡಿಕಾರಿದರು. ಇದನ್ನೂ ಓದಿ: ನಬಾರ್ಡ್‌ನಿಂದ ರಾಜ್ಯಕ್ಕಲ್ಲ ಇಡೀ ದೇಶಕ್ಕೇ ಹಣ ಕಡಿಮೆಯಾಗಿದೆ, ಸಿಎಂ ಸುಳ್ಳು ಹೇಳಿದ್ದಾರೆ: ಜೋಶಿ

    ರಾಜ್ಯದ ಇತಿಹಾಸದಲ್ಲಿ ಮೂಲ ಯೋಜನೆಯನ್ನು ಡೈವರ್ಟ್ ಮಾಡಿ ನೀರು ತೆಗೆದುಕೊಂಡು ಹೋಗೋದು ಇದೇ ಮೊದಲು. ಮೂಲ ಯೋಜನೆ ಬಿಟ್ಟು ರಾಮನಗರ ಜಿಲ್ಲೆಗೆ ಯಾರ ಸ್ವಾರ್ಥಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ? ನಾವು ಇವತ್ತು ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇವೆ. ನೀವೇನಾದರೂ ತೊಡೆ ತಟ್ಟಿ ತೆಗೆದುಕೊಂಡು ಹೋಗುತ್ತೇವೆ ಅಂದರೆ ಇಲ್ಲಿ ರಕ್ತಪಾತ ಆಗುತ್ತೆ.ಈ ರಕ್ತಪಾತಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೂಡಲೇ ಈ ಯೋಜನೆಯನ್ನು ರದ್ದು ಮಾಡಬೇಕು. ನಮ್ಮ ಜಿಲ್ಲೆಗೆ ಬರುವ ನೀರನ್ನು ಒಂದು ಹನಿಯನ್ನೂ ಕೂಡ ಬಿಡಲ್ಲಾ. ಅಸೆಂಬ್ಲಿಯಲ್ಲೂ ಮಾತನಾಡುತ್ತೇವೆ. ಯೋಜನೆ ನಿಲ್ಲಿಸುವವರೆಗೂ ಜಿಲ್ಲೆಯ ಜನ ರೊಚ್ಚಿಗೆದ್ದು ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಾಂಬ್‌ ಸ್ಫೋಟಿಸಿ ಮೋದಿ ಹತ್ಯೆ ಮಾಡುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ

    ಈ ದೇಶದಲ್ಲಿ ಹೋರಾಟಗಳಿಗೆ ಕಿಮ್ಮತ್ತು ಕೊಡಲ್ಲಾ. ಆಡಳಿತ ಪಕ್ಷಕ್ಕೆ ಕಿವಿ, ಕಣ್ಣು, ಮೂಗು ಏನೂ ಕಾಣಿಸುವುದಿಲ್ಲ. ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆಗಿರುವುದಕ್ಕೆ ಕಾನೂನು ಹೋರಾಟ ಆದರೆ ಏನಾಗುತ್ತೆ? ಕಾನೂನು ಹೋರಾಟ ಒಂದು ಭಾಗ. ಜನರ ಮುಂದೆ ಯಾವ ಕಾನೂನು? ಜನ ರೊಚ್ಚಿಗೆದ್ದಾಗ ಸರ್ಕಾರ ತಲೆಬಾಗಬೇಕಾಗುತ್ತದೆ. ಗೃಹ ಸಚಿವರಿಗೆ ಹಾಗೂ ಜಿಲ್ಲೆಯ ಕಾಂಗ್ರೆಸ್‌ನ 7 ಶಾಸಕರಿಗೆ ಹೇಳುತ್ತಿದ್ದೇನೆ. ಶಾಶ್ವತವಾಗಿ ನೀವೆಲ್ಲಾ ಮಾಜಿಗಳಾಗುತ್ತೀರಿ. ಈ ಯೋಜನೆಗೆ ಏನಾದರೂ ಅವಕಾಶ ಕೊಟ್ಟರೆ ಕಾಂಗ್ರೆಸ್ ಅನ್ನು ಬೇರು ಸಮೇತ ಕಿತ್ತುಹಾಕುತ್ತಾರೆ ಎಂದು ಗುಡುಗಿದರು. ಇದನ್ನೂ ಓದಿ: ನಬಾರ್ಡ್‌ನಿಂದ ರಾಜ್ಯಕ್ಕಲ್ಲ ಇಡೀ ದೇಶಕ್ಕೇ ಹಣ ಕಡಿಮೆಯಾಗಿದೆ, ಸಿಎಂ ಸುಳ್ಳು ಹೇಳಿದ್ದಾರೆ: ಜೋಶಿ

  • ಕಾಂಗ್ರೆಸ್‌ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಸುರೇಶ್ ಬಾಬು ಸಲಹೆ

    ಕಾಂಗ್ರೆಸ್‌ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಸುರೇಶ್ ಬಾಬು ಸಲಹೆ

    ಬೆಂಗಳೂರು: ಕಾಂಗ್ರೆಸ್‌ನವರು (Congress) ಯೋಗೇಶ್ವರ್ (CP Yogeshwar) ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷದಲ್ಲೇ ಒಡಕು ತರುತ್ತಾರೆ ಹುಷಾರ್ ಎಂದು ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ಸಲಹೆ ನೀಡಿದ್ದಾರೆ.

    ನನಗೆ ಟಾಸ್ಕ್ ಕೊಟ್ಟರೆ ಜೆಡಿಎಸ್ (JDS) ಪಕ್ಷವನ್ನ ಖಾಲಿ ಮಾಡ್ತೀನಿ ಎಂಬ ಯೋಗೇಶ್ವರ್ ಮಾತಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರು ಯಾರು ಮಾರಾಟ ಆಗಲ್ಲ. ಹಿಂದೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಮಾಡುತ್ತೇನೆ ಎಂದು ಹೇಳಿದ್ದು ಯಾರು? 30 ಜನರನ್ನು ಆಪರೇಷನ್ ಮಾಡುತ್ತೇನೆ ಎಂದು ಇದೇ ಯೋಗೇಶ್ವರ್ ಹೇಳಿದ್ದರು. ಕಾಂಗ್ರೆಸ್ ಅಧ್ಯಕ್ಷರಿಗೆ ಯೋಗೇಶ್ವರ್ ಬಗ್ಗೆ ಎಚ್ಚರಿಕೆ ಇರಲಿ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ. ನಮ್ಮ ಶಾಸಕರು ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳು ಅಲ್ಲ. ನಮ್ಮ ಶಾಸಕರು ಸಿದ್ಧಾಂತದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಯಾರು ಪಕ್ಷ ಬಿಟ್ಟು ಹೋಗಲ್ಲ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಜಿ.ಟಿ.ದೇವೇಗೌಡರಿಗೆ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ: ಸುರೇಶ್ ಬಾಬು

    ಅನೇಕರು ಜೆಡಿಎಸ್ ಮುಗಿದೇ ಹೋಯಿತು ಎಂದು ಹೇಳಿದರು. ಮತ್ತೆ ಫಿನಿಕ್ಸ್ನಂತೆ ಎದ್ದು ಬಂತು. ರಾಜ್ಯದಲ್ಲಿ ಜೆಡಿಎಸ್ ಮುಗಿಸೋಕೆ ಎಂದು ಯೋಗೇಶ್ವರ್ ಹೀಗೆ ಹೇಳುತ್ತಿದ್ದಾರೆ. ಜೆಡಿಎಸ್ ಅನ್ನು ತೆಗೆಯೋಕೆ ಯಾರಿಂದಲೂ ಸಾಧ್ಯವಿಲ್ಲ.ಬೊಮ್ಮಾಯಿ, ದೇವೇಗೌಡರು, ಪಟೇಲ್‌ರು ಕಟ್ಟಿದ ಪಕ್ಷ ಇದು. ಇದು ಕಾರ್ಯಕರ್ತರ ಪಕ್ಷ. ಜೆಡಿಎಸ್ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ. ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಳೆ ಮಹಾರಾಷ್ಟ್ರ ಬಿಜೆಪಿ, ಶಿವಸೇನೆ, ಎನ್‌ಸಿಪಿ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ

  • ಜಿ.ಟಿ.ದೇವೇಗೌಡರಿಗೆ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ: ಸುರೇಶ್ ಬಾಬು

    ಜಿ.ಟಿ.ದೇವೇಗೌಡರಿಗೆ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ: ಸುರೇಶ್ ಬಾಬು

    ಬೆಂಗಳೂರು: ಜಿ.ಟಿ ದೇವೇಗೌಡರಿಗೆ (GT Devegowda) ಅಸಮಾಧಾನ ಇರೋದು ಸತ್ಯ. ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತನಾಡಿದರೆ ಎಲ್ಲವೂ ಸರಿ ಆಗಲಿದೆ ಎಂದು ಜೆಡಿಎಸ್ (JDS)  ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ತಿಳಿಸಿದ್ದಾರೆ.

    ಕುಮಾರಸ್ವಾಮಿ ವಿರುದ್ಧ ಜಿಟಿ ದೇವೇಗೌಡ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಿಟಿ ದೇವೇಗೌಡರಿಗೆ ಅಸಮಾಧಾನ ಇರೋದು ನಿಜ. ಅವರಿಗೆ ಸ್ಥಾನಮಾನದ ಬಗ್ಗೆ ಅಸಮಾಧಾನ ಇದೆ ಎಂದರು. ಇದನ್ನೂ ಓದಿ: ನಾಳೆ ಮಹಾರಾಷ್ಟ್ರ ಬಿಜೆಪಿ, ಶಿವಸೇನೆ, ಎನ್‌ಸಿಪಿ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ

    ಇವತ್ತು ನಾನು ಸುದ್ದಿಗೋಷ್ಠಿಗೆ ಬರಲು ಹೇಳಿದ್ದೆ, ಅವರು ಬರಲಿಲ್ಲ. ಚನ್ನಪಟ್ಟಣ ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆ ಬರುವಂತೆ ದೇವೇಗೌಡ ಕರೆ ಮಾಡಿದ್ದು ನಿಜ. ಆದರೆ ಅವರು ಬರಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬಿಜೆಪಿಗೆ ಸಿಎಂ ಪಟ್ಟ ಕೊಟ್ಟ ಶಿಂಧೆ – ಫಡ್ನಾವೀಸ್‌ ಮುಂದಿನ ಮುಖ್ಯಮಂತ್ರಿ?

  • ಕಾಂಗ್ರೆಸ್‌ನವ್ರು ಗನ್ ತಗೊಂಡು ಹೋದ್ರು, ಬುಲೆಟ್‌ಗಳು ಬಿಜೆಪಿ-ಜೆಡಿಎಸ್‌ನಲ್ಲಿವೆ: ಸುರೇಶ್ ಬಾಬು

    ಕಾಂಗ್ರೆಸ್‌ನವ್ರು ಗನ್ ತಗೊಂಡು ಹೋದ್ರು, ಬುಲೆಟ್‌ಗಳು ಬಿಜೆಪಿ-ಜೆಡಿಎಸ್‌ನಲ್ಲಿವೆ: ಸುರೇಶ್ ಬಾಬು

    ಬೆಂಗಳೂರು: ಸೈನಿಕ ಹೋದ್ರು ನಮಗೆ ಚಿಂತೆ ಇಲ್ಲ‌. ಕಾಂಗ್ರೆಸ್‌ನವರು ಗನ್ ತೆಗೆದುಕೊಂಡು ಹೋದ್ರು ಬುಲೆಟ್‌ಗಳು ಬಿಜೆಪಿ-ಜೆಡಿಎಸ್‌ನಲ್ಲಿ ಇವೆ ಎಂದು ಜೆಡಿಎಸ್ ನಾಯಕ ಸುರೇಶ್ ಬಾಬು (Suresh Babu) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ (C P Yogeshwar) ಕಾಂಗ್ರೆಸ್ (Congres) ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಮೈತ್ರಿಗೆ ಹಿನ್ನಡೆ ಆಗಿಲ್ಲ. ನಮಗೆ ಮುಂಚೆಯೇ ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆ ಎಂದು ಗೊತ್ತಿತ್ತು. ಮೈತ್ರಿಗೆ ಧಕ್ಕೆ ಬರಬಾರದು ಎಂದು ಕುಮಾರಸ್ವಾಮಿಯವರು ಕಾದು ನೋಡುವ ತಂತ್ರ ಮಾಡಿದ್ದರು ಎಂದು ತಿಳಿಸಿದ್ದಾರೆ.

    ಯೋಗೇಶ್ವರ್ MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಲೇ ಎಲ್ಲರಿಗೂ ಅವರ ಒಳ ಮರ್ಮ ಏನು ಎಂದು ಗೊತ್ತಾಯ್ತು. ಯೋಗೇಶ್ವರ್ 5-6 ಪಕ್ಷದ ಬಿ ಫಾರ್ಮ್ ತೆಗೆದುಕೊಂಡಿದ್ದರು. ಬಿಜೆಪಿ ಅಥವಾ NDAಯಿಂದ ನಿಂತಿದ್ರೆ ಅವರೇನು MLCಗೆ ರಾಜೀನಾಮೆ ಕೊಡುವ ಅವಶ್ಯಕತೆ ಇರಲಿಲ್ಲ. ಅವರು ರಾಜೀನಾಮೆ ಕೊಟ್ಟಾಗಲೇ ವಾಮಮಾರ್ಗ ಹಿಡಿದಿದ್ದಾರೆ ಎಂದು ಗೊತ್ತಿತ್ತು ಎಂದಿದ್ದಾರೆ.

    ಅವರು ಹೋಗಿದ್ದಕ್ಕೆ ನಾವ್ಯಾರು ಆತಂಕ ಪಡೋದಿಲ್ಲ. ನಾವು ಉತ್ತಮವಾದ ಅಭ್ಯರ್ಥಿಯನ್ನ ನಿರ್ಧಾರ ಮಾಡಿ NDA ಯಿಂದ ನಿಲ್ಲಿಸುತ್ತೇವೆ. ಬೇರೆ ಸಮುದಾಯದ ಮತ ಬರುತ್ತೆ, ಮುಸ್ಲಿಂ ಮತ ಬರುತ್ತೆ ಎಂದು ಹೋಗಿದ್ದಾರೆ. ಯೋಗೇಶ್ವರ್ ಮುಸ್ಲಿಮರ 4 ಎಕರೆ ಜಾಗ ಹೇಗೆ ಕಬಳಿಸಿದ್ರು ಎಂದು ಮುಸ್ಲಿಮರು ನಮ್ಮ ಬಳಿ ಮಾತಾಡಿದ್ದಾರೆ. ಇನ್ನೂ ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಯನ್ನ ಗೆಲ್ಲುಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

    ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

    ಬೆಂಗಳೂರು: ಬೆಂಗಳೂರು ಮಳೆಗೆ (Bengaluru Rain) ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಏನು ಇಲ್ಲ. ಇದಾ ಡಿಕೆ ಶಿವಕುಮಾರ್ (DK Shivakumar) ಅವರ ಬ್ರ‍್ಯಾಂಡ್ ಬೆಂಗಳೂರು (Brand Bengaluru) ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ಸರ್ಕಾರ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

    ಬೆಂಗಳೂರಿನ ಮಳೆ ಅವಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿವಕುಮಾರ್ ಹಾಗೂ ನನ್ನ ವಿಷನ್ ಬೇರೆ. ಬ್ರ‍್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಡ್ರೈನೇಜ್ ಸಿಸ್ಟಮ್ ಬೆಂಗಳೂರಿನಲ್ಲಿ ಹಾಳಾಗಿದೆ. ಇವರು ಬಂದು ಒಂದೂವರೆ ವರ್ಷ ಆಗಿದೆ. ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ನೂರೆಂಟು ಸಮಸ್ಯೆಗಳು ಅನ್ನಿಸುತ್ತದೆ. ಇಂತಹ ದೊಡ್ಡ ಸಿಟಿ, ಬೇರೆ ದೇಶ ನಮ್ಮ ಕಡೆ ಇನ್ವೆಸ್ಟ್ ಮಾಡೋಕೆ ನೋಡುತ್ತಿದೆ. ಆದರೆ ಒಂದು ದಿನ ಮಳೆ ಬಂದರೂ ಅದನ್ನು ಸರಿ ಮಾಡಲು ಆಗುತ್ತಿಲ್ಲ. ಸರಿಯಾದ ವ್ಯವಸ್ಥೆ ಮಾಡದ ಇವರು ಯಾವ ರೀತಿ ಬ್ರ‍್ಯಾಂಡ್ ಬೆಂಗಳೂರು ಮಾಡುತ್ತಾರೆ? ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇಂತಹ ದೊಡ್ಡ ಸಿಟಿಯಲ್ಲಿ ರಸ್ತೆ, ಚರಂಡಿ ಸರಿಯಾಗಿ ಮಾಡದ ಈ ಸರ್ಕಾರ ನಾಲಾಯಕ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಾಳೆಗರಿಯಲ್ಲಿ ಗದಾಯುದ್ಧ ಬರೆಯಲು ಮುಂದಾದ ಸಂಗಮೇಶ ಕಲ್ಯಾಣಿ

    ಬೆಂಗಳೂರಿನ 7 ಜನ ಮಂತ್ರಿಗಳಿಗೆ ಜನರ ಮುಂದೆ ಹೋಗೋಕೆ ಮುಖವಿಲ್ಲ. ಅನುದಾನ ಕೊಡೋಕೆ ಆಗುತ್ತಿಲ್ಲ. ಕಾರ್ಪೊರೇಷನ್ ಎಲೆಕ್ಷನ್ ಮಾಡೋಕೆ ಯೋಗ್ಯತೆ ಇಲ್ಲ. ಸಂವಿಧಾನ ಉಳಿಸುತ್ತೇನೆ ಎನ್ನುತ್ತಾರೆ. ಆದರೆ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಕಾರ್ಪೋರೇಷನ್ ಎಲೆಕ್ಷನ್ ಮಾಡುತ್ತಿಲ್ಲ. ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

    ಕಾಂಗ್ರೆಸ್ ಶಾಸಕರೇ ಅನುದಾನ ಕೊಡಿ ಇಲ್ಲ ಸಾಯುತ್ತೇನೆ ಅಂತ ಹೇಳೋ ಪರಿಸ್ಥಿತಿ ಬಂದಿರಲಿಲ್ಲ. ಬೆಂಗಳೂರು ಬ್ರ‍್ಯಾಂಡ್ ಬೆಂಗಳೂರು ಮಾಡೋಕೆ ಆಗಿಲ್ಲ. ರಾಮನಗರವನ್ನು ಬೆಂಗಳೂರು ದಕ್ಷಿಣ ಅಂತ ಮಾಡಿದ್ದಾರೆ. ಇದು ವ್ಯಾಪಾರ ಮಾಡೋಕೆ ಅಷ್ಟೇ. ಬೆಂಗಳೂರು ದಕ್ಷಿಣ ಮಾಡಲು ಹೊರಟಿರುವುದು ಅಭಿವೃದ್ಧಿ ಮಾಡಲು ಅಲ್ಲ. ಇವರ ಆಸ್ತಿ ಬೆಲೆ ಜಾಸ್ತಿ ಮಾಡಿಕೊಳ್ಳೋಕೆ ಮಾಡಿದ್ದಾರೆ ಅಷ್ಟೇ ಎಂದರು. ಇದನ್ನೂ ಓದಿ: ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

    ನೀರು ಮನೆಗೆ ನುಗ್ಗಿವೆ. ರಸ್ತೆಯಲ್ಲಿ ವಾಹನಗಳು ಮುಳುಗಿವೆ. ಜನರಿಗೆ ರಕ್ಷಣೆ ಕೊಡೋಕೆ ಆಗುತ್ತಿಲ್ಲ. ಇದು ಕೆಟ್ಟ ಸರ್ಕಾರ. ಕಾಂಗ್ರೆಸ್ ಅವರು ಬೇರೆ ಅವರ ಮೇಲೆ ದೂಷಣೆ ಮಾಡೋಕೆ ಎತ್ತಿದ ಕೈ. ಪರಿಸ್ಥಿತಿ ಸರಿ ಮಾಡೋ ಕೆಲಸ ಮಾಡುತ್ತಿಲ್ಲ. ಈಗಲಾದರೂ ಸರ್ಕಾರ ಗಮನಹರಿಸಲಿ. ಜನರು ನಿಮಗೆ ಒಳ್ಳೆಯ ಸ್ಥಾನವನ್ನ ಕೊಟ್ಟಿದ್ದಾರೆ ಅಂತ ಮನವರಿಕೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ದೂರಿನ ಬೆನ್ನಲ್ಲೇ ಸಚಿವ ಬೋಸರಾಜು ಸ್ಪಷ್ಟನೆ

  • ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ ಎಂದು ಜೆಡಿಎಸ್ (JDS) ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು (Suresh Babu) ಒತ್ತಾಯಿಸಿದ್ದಾರೆ.

    ಈ ಕುರಿತು ಜೆಪಿ ಭವನದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಮುಡಾ, ವಾಲ್ಮೀಕಿ ಹಗರಣದ ವಿರುದ್ಧ ನಾವು ಸದನದಲ್ಲಿ ಹೋರಾಟ ಮಾಡಿದ್ದೆವು. ಪಾದಯಾತ್ರೆ ಮಾಡಿದ್ದೆವು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿಯೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುತ್ತಾರೆ. ಏಕಾಏಕಿ ಯಾರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್‌ನವರು ಬಿಂಬಿಸೋದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಸಿಎಂ ಅವರು ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುತ್ತಾರೆ. ಸಿಎಂ ಅವರದ್ದು ತಪ್ಪಿಲ್ಲ ಅಂದರೆ ಮುಡಾ ಹಗರಣದ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸಿದ್ದರೆ ಇಂತಹ ಆತಂಕ ಬರುತ್ತಿರಲಿಲ್ಲ. ಯಾವಾಗ ಸದನದಿಂದ ನೀವು ಓಡಿ ಹೋದ್ರೋ ಆವಾಗ ಅನುಮಾನ ಸೃಷ್ಟಿ ಆಯಿತು. ಹೀಗಾಗಿ ಇಂತಹ ಸನ್ನಿವೇಶ ಎದುರಿಸಬೇಕಾಗಿದೆ. ಇದರಲ್ಲಿ ನಿಮ್ಮ ತಪ್ಪು ಇಲ್ಲ ಅಂದರೆ ಇರೋ ವಿಷಯ ರಾಜ್ಯದ ಜನರ ಮುಂದೆ ಇಡಿ. ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡೋ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ತಜ್ಞರ ಜೊತೆ ರಾಜ್ಯಪಾಲರು ಚರ್ಚೆ ಮಾಡಿದ್ದಾರೆ. ಅಂದಿನ ರಾಜ್ಯಪಾಲರು ತೀರ್ಮಾನ ಮಾಡಿದ್ದಾರೆ. ಮುಡಾ ಕೇಸ್‌ನಲ್ಲಿ ಸಾಕಷ್ಟು ಅನುಮಾನದ ವಿಷಯಗಳು ಇವೆ. ಮುಡಾ ಕೇಸ್ ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಡಿದ್ದಾರೆ ಎಂದರು. ಇದನ್ನೂ ಓದಿ: ಬಂಡೆ ಅನ್ನೋದೇ ಡೇಂಜರ್ – ಸಿದ್ದರಾಮಯ್ಯ ಸ್ಥಿತಿಗೆ ಪರೋಕ್ಷವಾಗಿ ಡಿಕೆಶಿ ಕಾರಣ ಎಂದ ಹೆಚ್‍ಡಿಕೆ

    ಟೆಲಿಫೋನ್ ಹಗರಣ ಬಂದಾಗ ರಾಮಕೃಷ್ಣ ಹೆಗಡೆ ಅವರು ರಾಜೀನಾಮೆ ಕೊಟ್ಟಿದ್ದರು. ಸಿದ್ದರಾಮಯ್ಯ ಕುಟುಂಬದ ಹಗರಣ ಆಗಿರುವುದರಿಂದ ಸಿಎಂ ಅವರು ರಾಮಕೃಷ್ಣ ಹೆಗಡೆ ತರಹ ರಾಜೀನಾಮೆ ನೀಡಬೇಕು. ರಾಜೀನಾಮೆ ಕೊಟ್ಟು ಸಿಎಂ ತನಿಖೆ ಎದುರಿಸಿದರೆ ಅವರಿಗೆ ಗೌರವ ಇರುತ್ತದೆ ಎಂದು ಆಗ್ರಹಿಸಿದರು. ಇದನ್ನೂ ಓದಿ:  ಕುಡಿದ ಮತ್ತಿನಲ್ಲಿದ್ದ ರೋಗಿಯಿಂದ ಮಹಿಳಾ ವೈದ್ಯೆ ಮೇಲೆ ಹಲ್ಲೆ

    ಕುಮಾರಸ್ವಾಮಿ, ಬಿಜೆಪಿ ಅವರು ಯಾಕೆ ಸರ್ಕಾರ ಅಸ್ಥಿರ ಮಾಡೋಕೆ ಹೋಗುತ್ತಾರೆ? ನೀವು ತಪ್ಪು ಮಾಡಿ ಸಿಕ್ಕಿ ಹಾಕಿಕೊಂಡರೆ ತಾನೇ ಬೇರೆ ಅವರು ಚಾಟಿ ಬೀಸೋ ಕೆಲಸ ಮಾಡೋದು. ಸರ್ಕಾರ ಮಾಡೋರು ಯಾವುದೇ ಹಗರಣದಲ್ಲಿ ಸಿಗದಂತೆ ಅಧಿಕಾರ ಮಾಡಬೇಕು. ವಾಲ್ಮೀಕಿ ಹಗರಣ ಎಲ್ಲರು ನೋಡಿದ್ದಾರೆ. ಮುಡಾ ಹಗರಣ ಆಗಿದೆ. ಇದನ್ನು ನೋಡಿಕೊಂಡು ಸುಮ್ಮನೆ ಇರೋಕೆ ವಿಪಕ್ಷಗಳು ಇದ್ದಾವಾ? ಎಂದು ಹರಿಹಾಯ್ದರು. ಇದನ್ನೂ ಓದಿ:  ಬೆಂಗಳೂರಲ್ಲಿ ಯುವತಿ ಮೇಲೆ ಅತ್ಯಾಚಾರ?

    ಸೋಮವಾರ ಕಾಂಗ್ರೆಸ್ ಅವರು ಪ್ರತಿಭಟನೆ ಮಾಡಲಿ. ಅವರು ಪ್ರತಿಭಟನೆ ಮಾಡಿ ಸಮರ್ಥನೆ ಮಾಡಿಕೊಳ್ಳೋಕೆ ಹೊರಟಿದ್ದಾರೆ. ಪ್ರತಿಭಟನೆ ಮಾಡೋದು ಬಿಟ್ಟು ಸಿಎಂ ಅವರು ಪಾರದರ್ಶಕವಾಗಿ ಇದ್ದಾರೆ. ತನಿಖೆ ಎದುರಿಸಿ ನಿಮ್ಮ ಬಳಿ ಇರೋ ಎಲ್ಲಾ ದಾಖಲಾತಿಗಳನ್ನ ಹೊರಗೆ ಕೊಟ್ಟು ಆರೋಪದಿಂದ ಹೊರಗೆ ಬನ್ನಿ. ಕಾನೂನು ಹೋರಾಟ ಮಾಡಿ ಅದರಲ್ಲಿ ಯಶಸ್ವಿಯಾಗಿ ಹೊರಗೆ ಬನ್ನಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಿಎಂ ಅಧಿಕೃತ ಎಕ್ಸ್ ಖಾತೆಯಲ್ಲಿ ಮೋದಿ ನಿಂದನೆ ಆರೋಪ – ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ