Tag: suresh kumar

  • ಪುನರ್ವಸತಿ ಕಾರ್ಯಕರ್ತರ ಗೌರವಧನ 1,000 ರೂ. ಹೆಚ್ಚಳ – ಲಕ್ಷ್ಮಿ ಹೆಬ್ಬಾಳ್ಕರ್‌

    ಪುನರ್ವಸತಿ ಕಾರ್ಯಕರ್ತರ ಗೌರವಧನ 1,000 ರೂ. ಹೆಚ್ಚಳ – ಲಕ್ಷ್ಮಿ ಹೆಬ್ಬಾಳ್ಕರ್‌

    – ಖಾಯಂಗೊಳಿಸಲು ಅವಕಾಶವಿಲ್ಲ ಎಂದ ಸಚಿವೆ

    ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು (Rehabilitation Workers) ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು.

    ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್ ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು. ಇದನ್ನೂ ಓದಿ: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ಪ್ರಸ್ತುತ 5,601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ಉತ್ತರಿಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

  • 46 ರೂ. ಆಗಿದ್ರೂ 50 ರೂ. ಟಿಕೆಟ್‌ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು

    46 ರೂ. ಆಗಿದ್ರೂ 50 ರೂ. ಟಿಕೆಟ್‌ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು

    ಬೆಂಗಳೂರು: 46 ರೂ. ಟಿಕೆಟ್‌ ಮೊತ್ತ ಆಗಿದ್ದರೂ ಪ್ರಯಾಣಿಕರಿಂದ 50 ರೂ. ಪ್ರಯಾಣ ಶುಲ್ಕ ವಿಧಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ (KSRTC) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.

    ಪ್ರಯಾಣಿಕರೊಬ್ಬರು ಜುಲೈ 2ರ ರಾತ್ರಿ 9 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಿಂದ ಅಲಂಗಾರು ಕಡೆಗೆ ಸ್ಲೀಪರ್‌ ಬಸ್ಸಿನಲ್ಲಿ (Sleeper Bus) ಹೊರಟ್ಟಿದ್ದಾರೆ. ಟಿಕೆಟ್‌ ದರ 46 ರೂ. ಆಗಿದ್ದರೂ ನಿರ್ವಾಹಕ 50 ರೂ. ಪಡೆದಿದ್ದಾನೆ.

    ಈ ಟಿಕೆಟಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಪೋಸ್ಟ್‌ ಶೇರ್‌ ಮಾಡಿ ರಾಜ್ಯ ಸಾರಿಗೆ ಸಚಿವರು ಅಥವಾ ಸಂಬಂಧಪಟ್ಟ ಅಧಿಕಾರಿ ಇದಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಕೇಳಿದ್ದರು. ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿ ಹಿಂದೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: `ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು

     

    ಕೆಎಸ್‌ಆರ್‌ಟಿಸಿ ಸ್ಪಷ್ಟನೆ ಏನು?
    ಈ ವ್ಯವಸ್ಥೆಯು ಪ್ರತಿಷ್ಠಿತ ಸಾರಿಗೆಗಳಲ್ಲಿ(ಪ್ರೀಮಿಯಂ ಸೇವೆ ನೀಡುವ 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿತ್ತು. ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಮತ್ತು ಇಟಿಎಂ ಯಂತ್ರಗಳಲ್ಲಿ ಚಿಲ್ಲರೆ ಸಮಸ್ಯೆಯಿಂದ ಪ್ರಯಾಣ ದರವನ್ನು ರೌಂಡ್‌ ಆಫ್‌ ಮಾಡಲು ಆದೇಶಿಸಲಾಗಿತ್ತು. ಇದನ್ನೂ ಓದಿ: ಒಂದು ಗಡಿ, ಮೂರು ವಿರೋಧಿಗಳು; ಆಪರೇಷನ್‌ ಸಿಂಧೂರದಲ್ಲಿ ಪಾಕ್‌-ಚೀನಾ-ಟರ್ಕಿ ನಂಟು ಬಹಿರಂಗಪಡಿಸಿದ ಸೇನಾ ಉಪಮುಖ್ಯಸ್ಥ

    ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಲು ಪಿಒಎಸ್‌ ಯಂತ್ರಗಳನ್ನು ಹಾಗೂ ಇಟಿಎಂ ಯಂತ್ರಗಳಲ್ಲಿ ಯಪಿಐ ವ್ಯವಸ್ಥೆ ಒದಗಿಸಿದ್ದರಿಂದ ಪ್ರಯಾಣ ದರವನ್ನು ರೌಂಡ್‌ ಆಫ್‌ ಮಾಡುವ ಅವಶ್ಯಕತೆ ಇಲ್ಲದಿರುವುದರಿಂದ ಈಗ ಈ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ. ಈ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು, ತಂತ್ರಾಂಶದಲ್ಲಿ ಈ ಸಂಬಂಧ ಬದಲಾವಣೆ ಮಾಡುವ ಕ್ರಮ ಪ್ರಗತಿಯಲ್ಲಿರುತ್ತದೆ.

  • ಕಮಿಷನರ್‌, ಪೊಲೀಸರ ಸಸ್ಪೆಂಡ್‌ ಖಂಡಿಸಿ ಪ್ರತಿಭಟನೆ – ಹೆಡ್‌ಕಾನ್‌ಸ್ಟೇಬಲ್‌ ಜೊತೆ ಫೋನಲ್ಲಿ ಮಾತನಾಡಿ ಸುರೇಶ್‌ ಕುಮಾರ್‌ ಬೆಂಬಲ

    ಕಮಿಷನರ್‌, ಪೊಲೀಸರ ಸಸ್ಪೆಂಡ್‌ ಖಂಡಿಸಿ ಪ್ರತಿಭಟನೆ – ಹೆಡ್‌ಕಾನ್‌ಸ್ಟೇಬಲ್‌ ಜೊತೆ ಫೋನಲ್ಲಿ ಮಾತನಾಡಿ ಸುರೇಶ್‌ ಕುಮಾರ್‌ ಬೆಂಬಲ

    ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಕಮಿಷನರ್‌ ದಯಾನಂದ್‌ ಸೇರಿ ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ ನಡೆಸಿದ ಹೆಡ್‌ಕಾನ್‌ಸ್ಟೇಬಲ್‌ಗೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಪೊಲೀಸರ ಅಮಾನತು ಖಂಡಿಸಿದ ಹೆಡ್‌ಕಾನ್‌ಸ್ಟೇಬಲ್ ನರಸಿಂಹ ರಾಜು ಜೊತೆ ಫೋನ್‌ನಲ್ಲಿ ಶಾಸಕರು ಮಾತನಾಡಿದ್ದಾರೆ. ಅಲ್ಲದೇ, ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

    ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಶಾಸಕ ಸುರೇಶ್‌ ಕುಮಾರ್‌ ಅವರು, ನಾನು ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆಯನ್ನು ಕೇಳಿಕೊಳ್ಳುವುದೇನೆಂದರೆ ನರಸಿಂಹ ರಾಜು ಅವರ ಅಳಲು ಇಡೀ ಪೊಲೀಸ್ ಇಲಾಖೆಯ ಅಳಲು ಎಂಬುದನ್ನು ಗಮನಿಸಲಿ. ಪ್ರಾಮಾಣಿಕ ಮನಸ್ಸಿನಿಂದ ಇವರು ಮಾಡಿರುವ ಪ್ರತಿಭಟನೆಯನ್ನು ಸಕಾರಾತ್ಮಕವಾಗಿ ಕಾಣಲಿ. ಯಾವುದೇ ಕಾರಣಕ್ಕೂ ಈ ನಿಷ್ಠಾವಂತ ಪೊಲೀಸ್ ಪೇದೆಯ ಮೇಲೆ ಯಾವುದೇ ಕಠಿಣ ಕ್ರಮ ಜರುಗಿಸದಿರಲಿ ಎಂದು ತಿಳಿಸಿದ್ದಾರೆ.

    ಸಾಮಾನ್ಯ ಪೊಲೀಸ್ ಪೇದೆಯ ನೈತಿಕ ಸ್ಥೈರ್ಯ ಕುಸಿದು ಹೋದರೆ, ಇಲಾಖೆಯನ್ನು ಸರಿಪಡಿಸುವುದು ಬಹಳ ಕಷ್ಟವಾಗುತ್ತದೆ. ಇಂತಹ ಪೊಲೀಸ್ ಸಿಬ್ಬಂದಿ ಬೀದಿಯಲ್ಲಿ ಗಸ್ತು ಹೊಡೆಯುತ್ತಿದ್ದಾರೆ ಎಂಬ ಕಾರಣದಿಂದ ನಾವೆಲ್ಲ ಮನೆಯಲ್ಲಿ ಮನೆಗಳಲ್ಲಿ ನೆಮ್ಮದಿಯಿಂದ ಇದ್ದೇವೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಇಡೀ ಸಮಾಜ ದಯಾನಂದ್‌ರಿಂದ ಹಿಡಿದು ನರಸಿಂಹರಾಜು ವರೆಗೆ ಇರುವ ನಿಷ್ಠಾವಂತ ಅಧಿಕಾರಿಗಳ ಪರವಾಗಿ ನಿಲ್ಲಲು ಇದು ಸರಿಯಾದ ಸಮಯ, ಸರಿಯಾದ ಕಾರಣ, ಸರಿಯಾದ ಗಳಿಗೆ. ರಾಜ್ಯ ಸರ್ಕಾರ ಮುಟ್ಟು ವಿದ್ಯಮಾನವನ್ನು ಯಾವುದೇ ಸೇಡಿನ ಮನೋಭಾವವಿಲ್ಲದೆ, ಪ್ರಾಂಜಲ ಮನಸ್ಸಿನಿಂದ ವಿಮರ್ಶಿಸಿ ವಿವೇಚನಾಯುಕ್ತ ಹೆಜ್ಜೆ ಇಡಬೇಕು ಎಂದು‌ ಶಾಸಕ ಸುರೇಶ್‌ ಕುಮಾರ್ ಆಗ್ರಹಿಸಿದ್ದಾರೆ.

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್‌ ಕಮಿಷನರ್‌ ದಯಾನಂದ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿದೆ. ಸರ್ಕಾರದ ನಡೆಯನ್ನು ಖಂಡಿಸಿ ಹೆಡ್‌ಕಾನ್‌ಸ್ಟೇಬಲ್‌ವೊಬ್ಬರು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೊ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು.

  • ಹಾಲಿನ ಬೆಲೆ 9 ರೂ. ಏರಿಕೆ – ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ ಎಂದ ಸುರೇಶ್‌ ಕುಮಾರ್‌

    ಹಾಲಿನ ಬೆಲೆ 9 ರೂ. ಏರಿಕೆ – ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ ಎಂದ ಸುರೇಶ್‌ ಕುಮಾರ್‌

    – ಮುಂದೆ ಸೇವಿಸುವ ಗಾಳಿಗೂ ದರ ಏರಿಸಬಹುದು
    – ಬೆಲೆಏರಿಕೆ ಕಾಂಗ್ರೆಸ್ ಅಘೋಷಿತ ಗ್ಯಾರಂಟಿ

    ಬೆಂಗಳೂರು: ಕಾಂಗ್ರೆಸ್‌ ಸರ್ಕಾರ (Congress Government) ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು (Milk Price) 9 ರೂ. ಏರಿಕೆ ಮಾಡಿದೆ. ಈಗ ಹಾಲಿನ ದರ, ಮುಂದೆ ನೀರಿನ ದರ, ಆಮೇಲೆ ವಿದ್ಯುತ್ ದರ, ಬಹುಶಃ ಸೇವಿಸುವ ಗಾಳಿಗೂ ಬೆಲೆ ನಿಗದಿ ಪಡಿಸುವ ದಿನ ಬಹಳ ದೂರ ಇಲ್ಲ ಎಂದು ಬಿಜೆಪಿ ಶಾಸಕ ಮಾಜಿ ಸಚಿವ ಸುರೇಶ್‌ ಕುಮಾರ್‌ (Suresh Kumar) ಆಕ್ರೋಶ ಹೊರ ಹಾಕಿದ್ದಾರೆ.

    ಹಾಲಿನ ದರ ಹೆಚ್ಚಿಸಿ ರೈತರಿಗೆ ಪ್ರೋತ್ಸಾಹಧನ ನೀಡ ಬೇಕೆಂಬುದು ಒಪ್ಪಿತ ಮಾತು. ಹಾಗೆಂದ ಮಾತ್ರಕ್ಕೆ ಗ್ರಾಹಕರ ಜೇಬಿನಿಂದ ಕಿತ್ತು ಕೊಡುವುದು ಕಾಂಗ್ರೆಸ್‌ ಸರ್ಕಾರ ಹೇಳಿಕೊಳ್ಳುವ ಸಾಮಾಜಿಕ ನ್ಯಾಯದ ಪರಿಕಲ್ಪನೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಫಿಕ್ಸೆಡ್ ಚಾರ್ಜ್ ದರ 25 ರೂ. ಏರಿಕೆ

     

    ಪೋಸ್ಟ್‌ನಲ್ಲಿ ಏನಿದೆ?
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ, ಆಗಸ್ಟ್ 2023 ರಲ್ಲಿ, ಹಾಲಿನ ಬೆಲೆ ಲೀಟರ್‌ಗೆ 3 ರೂ.ಗಳಷ್ಟು ಏರಿಕೆಯಾಯಿತು. ಅದಾದ ಬಳಿಕ 2024ರ ಜೂನ್‌ 26ಕ್ಕೆ ನಂದಿನಿಯ ಎಲ್ಲಾ ಹಾಲಿನ ಬೆಲೆಯನ್ನು 2 ರೂಪಾಯಿ ಏರಿಕೆ ಮಾಡಿತು. ಈಗ ಮತ್ತೊಂದು ಸುತ್ತಿನ ಹಾಲಿನ ಬೆಲೆ ಏರಿಕೆಯಾಗಿದೆ. ಏಪ್ರಿಲ್‌ 1 ರಿಂದ ಹಾಲಿನ ದರ ಲೀಟರ್‌ 4 ರೂಪಾಯಿ ಏರಿಕೆ ಘೋಷಣೆ ಮಾಡಿದೆ. ಇದನ್ನೂ ಓದಿ: ಸರ್ಕಾರವೇ ಹಣ ಕೊಡೋಕೆ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ: ಸಚಿವ ರಾಜಣ್ಣ

    ಇದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲೀಟರ್ ಹಾಲಿನ ಬೆಲೆಯಲ್ಲಿ 9 ರೂಪಾಯಿ ಏರಿಕೆ ಮಾಡಿದಂತಾಗಿದೆ. ಇನ್ನೊಂದು ವಿಚಾರವೇನೆಂದರೆ ಬರೀ ಹಾಲು ಮಾತ್ರವಲ್ಲ ಮೊಸರು ಕೂಡ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಿದೆ.

    ಎಲ್ಲಾ ಪೋಷಕಾಂಶಗಳನ್ನು ಹೊಂದಿದ ಸಂಪೂರ್ಣ ಆಹಾರದಲ್ಲಿ ಮೊಟ್ಟೆಯನ್ನು ಹೊರತುಪಡಿಸಿದರೆ ಹಾಲಿಗೆ ಮೊದಲ ಅಗ್ರಸ್ಥಾನ. ಬಹುಶಃ ನಗರ ಪ್ರದೇಶದಲ್ಲಿ ಶ್ರೀಮಂತರು ಮಾತ್ರ ಹಾಲನ್ನು ಬಳಸಬೇಕೆ? ಬಡ ಮಧ್ಯಮ‌ ವರ್ಗ ಹಾಲನ್ನು ಬಳಸಬಾರದೇ? ಹಾಲು ಹಾಲಾಹಲವಾಗುವ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಈ ಸರ್ಕಾರ.

    ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ ಎಂಬ‌ ಈ ನಿಲುವು ರಾಜ್ಯದ ಆರ್ಥಿಕ ವ್ಯವಸ್ತೆ ದಿಕ್ಕೆಟ್ಟಿರುವ ದ್ಯೋತಕವಾಗಿದೆ. ಈಗ ಹಾಲಿನ ದರ, ಮುಂದೆ ನೀರಿನ ದರ, ಆಮೇಲೆ ವಿದ್ಯುತ್ ದರ, ಬಹುಶಃ ಸೇವಿಸುವ ಗಾಳಿಗೂ ಬೆಲೆ ನಿಗದಿ ಪಡಿಸುವ ದಿನ ಬಹಳ ದೂರ ಇಲ್ಲ.

    ರಾಜ್ಯ ಕಾಂಗ್ರೆಸ್ ಸರ್ಕಾರದ ನಿರಂತರ ಬೆಲೆ ಏರಿಕೆಯ ಬರೆಯಿಂದ ಬಳಲುತ್ತಿರುವ ಜನಸಾಮಾನ್ಯರಿಗೆ ಇಂದು ಹಾಲಿನ ದರ ಏರಿಕೆ ಮಾಡಿ ಮತ್ತೆ ಸುಲಿಗೆ ಮಾಡುವ ಕಾರ್ಯ ಮುಂದುವರೆಸಿದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ. ಬೆಲೆಏರಿಕೆ ಕಾಂಗ್ರೆಸ್ ಅಘೋಷಿತ ಗ್ಯಾರಂಟಿ ಎಂಬುದು ಪ್ರತಿನಿತ್ಯ ರುಜುವಾತು ಆಗುತ್ತಿದೆ. ನಿಜಕ್ಕೂ ರಾಜ್ಯದ ಜನರ ಪಾಲಿಗೆ ಬೆಲೆ ಏರಿಕೆಯ ಗ್ಯಾರಂಟಿ ಕೊಟ್ಟಿರುವ ಅತ್ಯಂತ ಅಮಾನವೀಯ ಹಾಗೂ ಖಂಡನೀಯ.

     

  • ಬಿಜೆಪಿ ಮಾಜಿ ಸಚಿವ ಸುರೇಶ್‌ ಕುಮಾರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ

    ಬಿಜೆಪಿ ಮಾಜಿ ಸಚಿವ ಸುರೇಶ್‌ ಕುಮಾರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್‌. ಸುರೇಶ್‌ ಕುಮಾರ್‌ (S Suresh Kumar) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಬೆಂಗಳೂರು (Bengaluru) ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Teachers Day| ಉತ್ತಮ ಪ್ರಾಂಶುಪಾಲ, ಉತ್ತಮ ಉಪನ್ಯಾಸಕ ಪ್ರಶಸ್ತಿ ಘೋಷಣೆ

    ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ:
    ಸುರೇಶ್‌ ಕುಮಾರ್‌ ಅವರಿಗೆ ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್‌ಕುಮಾರ್‌ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿ ಆಗಿದ್ದರು. ಆದ್ರೆ ಕಳೆದ 3-4 ದಿನಗಳ ಹಿಂದೆ ತೀವ್ರ ಜ್ವರಕ್ಕೆ ತುತ್ತಾಗಿದ್ದರು.

    ಮಂಗಳವಾರ ರಾತ್ರಿ ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಅಶ್ಲೀಲ ಚಿತ್ರ ಸರ್ಚಿಂಗ್‌ – ಕೇರಳದ 455 ಕಡೆ ದಾಳಿ, 6 ಬಂಧನ

  • ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

    ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

    ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ.

    ಪತ್ರದಲ್ಲಿ ಏನಿದೆ?
    ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು ಅರಣ್ಯ ಬಫರ್ ವಲಯದಲ್ಲಿ 2003 – 2004 ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರ ಫಲವಾಗಿ ಇಂದು 1500 ಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿರುವುದಿಲ್ಲ. 20 ವರ್ಷ ಕಳೆದು ಹೋಗಿದ್ದರೂ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಒಟ್ಟಿಗೆ ಕುಳಿತು ಚರ್ಚಿಸಿ ಪ್ರಸ್ತುತ ಭೂಮಿಯ ಮಾಲೀಕತ್ವದ ಬಗ್ಗೆ ಒಂದು ಒಪ್ಪಂದಕ್ಕೆ ಬರಲು ಸಾಧ್ಯವಾಗದೇ ಇರುವುದು ನಿಜಕ್ಕೂ ವಿಷಾದನೀಯ. ಬಿಡಿಎಯಿಂದ ನಿವೇಶನ ಪಡೆದು 20 ವರ್ಷಗಳು ಆದರೂ ತಮ್ಮ ನಿವೇಶನದಲ್ಲಿ ಒಂದು ಗೂಡು ಕಟ್ಟಿಕೊಳ್ಳುವ ಈ ಎಲ್ಲಾ ಸಂತ್ರಸ್ತ ಹಂಚಿಕೆದಾರರ ಆಸೆಗೆ ಕಣ್ಣೀರು ಎರಚುವಂತೆ ಮಾಡಿದೆ ಬಿಡಿಎ ಉದಾಸೀನ – ಬೇಜಾವ್ದಾರಿ ಮನಸ್ಥಿತಿ. ಇದನ್ನೂ ಓದಿ: Wayanad landslides – ಕಂಬನಿ… ಖಾಲಿಯಾಗಿದೆ…!

     

    ಹಾಗೆಯೇ ಸ್ವಾಧೀನತೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ದಾವೆಗಳು ಬಾಕಿ ಇರುವುದರಿಂದ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಹಾಗೂ ಅಂಜನಾಪುರ ದಂತಹ ಕೆಲವು ಬಿಡಿಎ ನಿರ್ಮಿತ ಬಡಾವಣೆಗಳಲ್ಲಿನ ಸುಮಾರು ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಅವರ ಪರಿಸ್ಥಿತಿ, ಸಂಕಟ ಹೇಳತೀರದು. ಅಲ್ಲದೆ ಇಲ್ಲಿನ ಕೆಲವು ಲೇಔಟ್ ಗಳಲ್ಲಿ ಭೂ ಸ್ವಾಧೀನಕ್ಕೆ ಒಳಪಟ್ಟ ಅನೇಕ ಜಮೀನುಗಳ ಮಾಲೀಕರು ತಮ್ಮ ಭೂಮಿಗೆ ಬದಲಾಗಿ ಪರಿಹಾರದ ರೂಪದಲ್ಲಿ ಬಿಡಿಎ ನೀಡುವ ನಿವೇಶನಗಳ ಪರಿಹಾರದ ಮಂಜೂರಾತಿಗಾಗಿ ಅನೇಕ ಸಮಯದಿಂದ ಎದುರು ನೋಡುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಮೊದಲಿಗೆ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಮತ್ತು ಅಂಜನಾಪುರ ದಂತಹ ಬಡಾವಣೆಗಳಲ್ಲಿ ನಿವೇಶನ ಹಂಚಿಕೆಯಾಗಿ ಬಿಡಿಎಗೆ ಹಣ ಪಾವತಿ ಮಾಡಿ ನಿವೇಶನ ನೋಂದಣಿ ಮಾಡಿಕೊಂಡರೂ ನಾನಾ ಕಾರಣಗಳಿಂದ ನಿವೇಶನ ಸ್ವಾಧೀನ ಸಿಗಲು ಸಾಧ್ಯವಾಗದೇ ಇರುವ ಅರ್ಜಿದಾರರ ಮತ್ತು ಭೂ ಮಾಲೀಕರ ಪರಿಪಾಟಲುಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇವರ ಕುಂದು ಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುವ ಮುನ್ನ ಮೊದಲಿಗೆ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕಾಗಿರುವುದು ಸಮಂಜಸ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್‌ ಹೋದರೆ ದಂಡದ ಜೊತೆ ಜೈಲು!

    ಇವರಿಗೆ ಮೊದಲಿಗೆ ನ್ಯಾಯಯುತವಾಗಿ ನಿವೇಶನ ಒದಗಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಬೇಡಿಕೆ ಕೂಡ ಆಗಿದೆ. ಬಿಡಿಎ ಪರ್ಯಾಯ ನಿವೇಶನಗಳನ್ನು ಒದಗಿಸುವ ಮೊದಲು ಈ ಎಲ್ಲಾ ಭೂಬಾಧಿತ ನಿವೇಶನ ಹಂಚಿಕೆದಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ಇದಕ್ಕಾಗಿ ವ್ಯಾಪಕ ಪ್ರಚಾರವನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

    ಇದರಿಂದ ಬಿಡಿಎಗೆ ಹಂಚಿಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ. ಜೊತೆಗೆ ಹಂಚಿಕೆದಾರರಿಂದ ಭವಿಷ್ಯದಲ್ಲಿ ನ್ಯಾಯಾಲಯದಲ್ಲಿ ದಾವೆಗಳನ್ನು ಹೂಡುವುದನ್ನು ಪೂರ್ಣವಾಗಿ ನಿಲ್ಲಿಸಬಹುದು ಮತ್ತು ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದು. ಹಂಚಿಕೆದಾರರ ಶಾಪದಿಂದಲೂ ಬಿಡಿಎ ವಿಮುಕ್ತಿಗೊಳ್ಳಬಹುದು.

  • ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿಐಡಿಗೆ ವರ್ಗಾವಣೆ – ಕ್ರಮ ಪ್ರಶ್ನಿಸಿ ಗೃಹ ಸಚಿವರಿಗೆ ಸುರೇಶ್‌ ಕುಮಾರ್‌ ಪತ್ರ

    ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿಐಡಿಗೆ ವರ್ಗಾವಣೆ – ಕ್ರಮ ಪ್ರಶ್ನಿಸಿ ಗೃಹ ಸಚಿವರಿಗೆ ಸುರೇಶ್‌ ಕುಮಾರ್‌ ಪತ್ರ

    ಬೆಂಗಳೂರು: ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರನ್ನು ಸಿಐಡಿಗೆ ವರ್ಗಾವಣೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ಗೆ (G.Parameshwara) ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಪತ್ರ ಬರೆದಿದ್ದಾರೆ.

    ಬೆಂಗಳೂರು ನಗರದ ಹಲಸೂರು ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಂಜುನಾಥ್ ವರ್ಗಾವಣೆ ಕುರಿತು ಗೃಹ ಇಲಾಖೆಯ ಕ್ರಮವನ್ನು ಪ್ರಶ್ನಿಸಿರುವ ಶಾಸಕ ಸುರೇಶ್‌ ಕುಮಾರ್‌, ಈ ಬಗ್ಗೆ ಸ್ಪಷ್ಟನೆ ಕೇಳಿ ಬರೆದಿದ್ದಾರೆ. ಇದನ್ನೂ ಓದಿ: ಕುದಿಯೋ ನೀರಿಗೆ ಖಾರದ ಪುಡಿ ಬೆರೆಸಿ ಪತಿ ಮೇಲೆ ಎರಚಿ ಬೆದರಿಕೆ ಹಾಕಿದ್ಳು!

    ನಗರ ಪೊಲೀಸ್ ಆಯುಕ್ತರು ಒಂದು ವಿದ್ಯಮಾನದಲ್ಲಿ ಮಂಜುನಾಥ್ ಅವರ ವಿಚಾರಣೆ ನಡೆಸಿದ ನಂತರ ಅಮಾನತು ಮಾಡಿದ್ದಾರೆ. ಈ ಮಾಹಿತಿ ಮಾಧ್ಯಮದ ಮೂಲಕ ನನಗೆ ತಿಳಿಯಿತು. ಅದೇ ಸುದ್ದಿಯಲ್ಲಿ ಮತ್ತೊಂದು ಅಚ್ಚರಿಯ ಮಾಹಿತಿಯನ್ನೂ ಓದಿದೆ. ಅಮಾನತುಗೊಂಡ ಆ ಪೊಲೀಸ್ ಇನ್‌ಸ್ಪೆಕ್ಟರನ್ನು ಅದರ ಬೆನ್ನಲ್ಲೇ ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ನನ್ನಲ್ಲಿ ಕೆಲವು ಪ್ರಶ್ನೆಗಳು ಉದ್ಭವವಾಗಿವೆ ಎಂದು ಪತ್ರದಲ್ಲಿ ಬರೆದಿದ್ದಾರೆ.

    ಆ ಪೊಲೀಸ್ ಇನ್‌ಸ್ಪೆಕ್ಟರನ್ನು ಆಯುಕ್ತರು ಅಮಾನತು ಮಾಡಿದ ಆದೇಶ ಇಂದು ಯಾವ ಸ್ಥಿತಿಯಲ್ಲಿದೆ? ಅಮಾನತುಗೊಂಡ ಹಿಂದೆಯೇ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿಸಿರುವ ಹಿಂದಿನ ಶಕ್ತಿ ಯಾವುದು? ಆ ಪೊಲೀಸ್ ಅಧಿಕಾರಿಯನ್ನು ಕರ್ತವ್ಯಲೋಪದ ಕಾರಣ ಅಮಾನತು ಮಾಡಿದ ಪೊಲೀಸ್‌ ಆಯುಕ್ತರಿಗೆ ಇದರಿಂದ ನೈತಿಕ ಬಲ ಕುಸಿದಂತೆ ಆಗಿಲ್ಲವೇ? ಸಿಐಡಿ ಎಂದರೆ ಇಂತಹ ಕರ್ತವ್ಯಲೋಪ ಎಸಗಿರುವವರನ್ನು, ಅದಕ್ಷತೆ ತೋರಿಸುವವರನ್ನು, ಭ್ರಷ್ಟಾಚಾರ ಪ್ರಕರಣ ಎದುರಿಸುವವರನ್ನು ವರ್ಗಾವಣೆ ಮಾಡುವ ಒಂದು ಕೇಂದ್ರವೇ? ಪೊಲೀಸ್ ಇಲಾಖೆಯಲ್ಲಿ ಸಿಐಡಿ ವಿಭಾಗಕ್ಕೆ ಯಾವುದೇ ಮಹತ್ವ ಇಲ್ಲವೇ? ತಾವು ಈ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ. ಇದನ್ನೂ ಓದಿ: 3 ಸಾವಿರ ರೂ. ಸಾಲ ಮರುಪಾವತಿಸದ್ದಕ್ಕೆ ವ್ಯಕ್ತಿಯ ಬೆತ್ತಲೆ ಮೆರವಣಿಗೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಬಗ್ಗೆ ಶಿಕ್ಷಕನಿಂದ ಅವಹೇಳನಕಾರಿ ಪೋಸ್ಟ್- ಶಿಕ್ಷಣ ಸಚಿವರಿಗೆ ಸುರೇಶ್ ಕುಮಾರ್ ದೂರು

    ಚಂದ್ರಯಾನ-3 ಬಗ್ಗೆ ಶಿಕ್ಷಕನಿಂದ ಅವಹೇಳನಕಾರಿ ಪೋಸ್ಟ್- ಶಿಕ್ಷಣ ಸಚಿವರಿಗೆ ಸುರೇಶ್ ಕುಮಾರ್ ದೂರು

    ಬೆಂಗಳೂರು: ಕೋಟ್ಯಂತರ ಭಾರತೀಯರ ಕನಸಾದ ಚಂದ್ರಯಾನ-3 (Chandrayaan-3) ಉಪಗ್ರಹವನ್ನು ಹೊತ್ತ ಮಾರ್ಕ್-3 ನೌಕೆ ನಭಕ್ಕೆ ಹಾರಿದೆ. ಆದರೆ ಈ ಕುರಿತು ಕನ್ನಡ ಉಪನ್ಯಾಸಕನೊಬ್ಬ ಮಾಡಿರುವ ಪೋಸ್ಟ್ ವಿವಾದ ಎಬ್ಬಿಸಿದ್ದು, ಇದೀಗ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (Suresh Kumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ (Madhu Bangarappa) ದೂರು ನೀಡಿದ್ದಾರೆ.

    ಮಲ್ಲೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹುಲಿಕುಂಟೆ ಮೂರ್ತಿ (Hulikunte Murthy) ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಮಾಡಿದ್ದಾನೆ. ಇದನ್ನು ಗಮನಿಸಿದ ಮಾಜಿ ಶಿಕ್ಷಣ ಸಚಿವರು, ಇಂತಹ ಬೇಜವಾಬ್ದಾರಿ ಉಪನ್ಯಾಸಕ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಇಂಥವರ ಬಗ್ಗೆ ಎಚ್ಚರಿಕೆ ವಹಿಸುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

    ಪತ್ರದಲ್ಲೇನಿದೆ..?: ಬೆಂಗಳೂರು ಮಲ್ಲೇಶ್ವರಂ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಉಪನ್ಯಾಸಕ ಹುಲಿಕುಂಟೆ ಮೂರ್ತಿ ತಮ್ಮ ಅಭಿವ್ಯಕ್ತಿ ಸ್ವತಂತ್ರ್ಯವನ್ನು ತಮ್ಮ ಸ್ವೇಚ್ಛಾಚಾರವನ್ನಾಗಿ ತೋರಿದ್ದಾರೆ. ಚಂದ್ರಯಾನ-3 ಉಡಾವಣೆಯಾದ ದಿನವೇ ಉಪನ್ಯಾಸಕ ತನ್ನ ಟ್ವಿಟ್ಟರ್ ಅಕೌಂಟ್ ಮೂಲಕ ‘ಚಂದ್ರಯಾನ ಈ ಸಲ ತಿರುಪತಿ ನಾಮವೇ ಗತಿ ಅನಿಸತ್ತೆ’ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ 8 ವಲಯಗಳಲ್ಲಿ ಕುಡಿಯಲು ನೀರು ಯೋಗ್ಯವಲ್ಲ!

    ಇಂತಹ ವ್ಯಕ್ತಿ ನಮ್ಮ ವಿದ್ಯಾರ್ಥಿಗಳಿಗೆ ಯಾವ ರೀತಿ ಪ್ರೇರಣೆ ನೀಡಲು ಸಾಧ್ಯ?. ಹುಲಿಕುಂಟೆ ಮೂರ್ತಿಯಿಂದ ಈ ಕುರಿತು ಸ್ಪಷ್ಟೀಕರಣ ಕೇಳುವುದು ಹಾಗೂ ಮತ್ತೊಮ್ಮೆ ಈ ರೀತಿಯ ಬೇಜವಾಬ್ದಾರಿ ನಡವಳಿಕೆ ಜರುಗದಂತೆ ಎಚ್ಚರವಹಿಸಲು ಎಚ್ಚರಿಕೆ ನೀಡಬೇಕು ಎಂದು ಸುರೇಶ್ ಕುಮಾರ್ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆಯ ಮುನ್ಸೂಚನೆ ಹಿನ್ನೆಲೆ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ: ಸುರೇಶ್ ಕುಮಾರ್ ಮನವಿ

    ಮಳೆಯ ಮುನ್ಸೂಚನೆ ಹಿನ್ನೆಲೆ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ: ಸುರೇಶ್ ಕುಮಾರ್ ಮನವಿ

    ಬೆಂಗಳೂರು: ಕರ್ನಾಟಕ ವಿಧಾನಸಭೆ (Karnataka Assembly Election 2023) ಗೆ ಇಂದು ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ (Suresh Kumar) ಮನವಿ ಮಾಡಿಕೊಂಡಿದ್ದಾರೆ.

    ಆರ್‍ಆರ್ ನಗರ (RR Nagar) ದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ವೋಟಿಂಗ್ ಕಡಿಮೆಯಾಗುವ ಬಗ್ಗೆ ಮಾಹಿತಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಹೆಚ್ಚು ಮತದಾನ ಆಗಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

    ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ ಎಂದು ಮನವಿ ಮಾಡಿಕೊಂಡ ಅವರು, ಈ ಸಲ ಚುನಾವಣೆ ಮಹತ್ವ ಪಡೆದುಕೊಂಡಿದೆ. ಮೊದಲು ತಾಯಿ ಜೊತೆ ಮತದಾನ ಮಾಡುತ್ತಿದ್ದೆ. ನಂತರ ಪತ್ನಿ ಮತ್ತು ಮಗಳು ಮತದಾನದಲ್ಲಿ ಭಾಗಿಯಾಗಿದ್ದಾರೆ. ಒಟ್ಟಿನಲ್ಲಿ ಸದಾ ಕುಟುಂಬ ಸಮೇತ ಮತದಾನದಲ್ಲಿ ಭಾಗಿಯಾಗ್ತಿದ್ದೇವೆ ಎಂದರು.
    ಸುರೇಶ್ ಕುಮಾರ್ ತಾಯಿ ಸುಶೀಲಮ್ಮ ಮಾತನಾಡಿ, ಇದು ನನ್ನ ಕೊನೆಯ ಮತದಾನ ಅನ್ನಿಸ್ತಿದೆ. ಮಗನಿಗೆ ಮತದಾನ ಮಾಡಿದ್ದೇನೆ ಅಂತಾ ಮಗನ ಬಗ್ಗೆ ಭಾವುಕರಾದ ಅವರು, 1952 ರಿಂದ ಮತದಾನ ಮಾಡ್ತೀದ್ದೇನೆ ಎಂದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯುಕೆಜಿ ಮಗುವನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆಗೆ ನೋಟಿಸ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯುಕೆಜಿ ಮಗುವನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆಗೆ ನೋಟಿಸ್

    ಆನೇಕಲ್: ಯುಕೆಜಿ (UKG) ಮಗುವನ್ನು ಫೇಲ್ ಮಾಡಿ ಎಡವಟ್ಟು ಮಾಡಿದ ಸುದ್ದಿ ಪಬ್ಲಿಕ್ ಟಿವಿಯಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದ್ದಂತೆಯೇ ಇದೀಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ನೋಟಿಸ್ ಜಾರಿ ಮಾಡಿದೆ.

    ಸೆಂಟ್ ಜೋಸೆಫ್ ಚಾರ್ಮಿನೆಡ್ ಶಾಲೆಗೆ ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ನೋಟಿಸ್ ಜಾರಿ ಮಾಡಿದ್ದಾರೆ. ಅನುತ್ತೀರ್ಣ ಮಾಡಿರುವ ಕುರಿತು ಮಾಹಿತಿ ಕೇಳಿದ್ದಾರೆ. ನಿಯಮಾನುಸಾರ 9ನೇ ತರಗತಿಯವರೆಗೆ ಅನುತ್ತೀರ್ಣ ಮಾಡುವಂತಿಲ್ಲ. ಯುಕೆಜಿ ಮಗುವನ್ನು ಯಾಕೆ ಅನುತ್ತೀರ್ಣ ಮಾಡಿದ್ದೀರಿ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣ (Social Media) ದಲ್ಲಿ ಹರಿದಾಡುತ್ತಿದೆ. ಇದು ಶಿಕ್ಷಣ ಇಲಾಖೆಗೆ ಮುಜುಗರ ತರುವಂತ ವಿಚಾರ. ಆದಕಾರಣ ಸಂಪೂರ್ಣ ಲಿಖಿತ ವಿವರಣೆಯನ್ನು ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ಒಂದು ವೇಳೆ ತಪ್ಪಿದ್ದಲ್ಲಿ ನಿಮ್ಮ ಶಾಲೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ

    ಸದ್ಯ ಶಿಕ್ಷಣ ಸಂಸ್ಥೆ ಸ್ಪಷ್ಟೀಕರಣ ನೀಡಲು ತಡಕಾಡುತ್ತಿದೆ. ಈ ಬಗ್ಗೆ ಪ್ರಾಂಶುಪಾಲರು, ಡಿಜಿಟಲ್ ಎಂಟ್ರಿಯಲ್ಲಿ ಆಗಿರುವ ಪ್ರಮಾದ ಎಂದಿದ್ದಾರೆ. ಪರೀಕ್ಷೆಯಲ್ಲಿ `ಸಿ’ ಗ್ರೇಡ್ ಕೊಟ್ಟಿದ್ದೆವು. ಸಿಸ್ಟಂ ಎಂಟ್ರಿಯಲ್ಲಿ ಎಡವಟ್ಟಾಗಿದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿನಿ ತಂದೆ ಗಮನಕ್ಕೆ ಇ-ಮೇಲ್ ಮೂಲಕ ತರಲಾಗಿದೆ ಎಂದು ಪ್ರಾಂಶುಪಾಲ ಸಾಜು ಇ-ಮೇಲ್ ಗಳನ್ನ ತೋರಿಸಿದ್ದಾರೆ.

    ಏನಿದು ಘಟನೆ..?: ಆನೇಕಲ್ (Anekal) ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಯುಕೆಜಿ ಓದುತ್ತಿದ್ದ ಮಗುವನ್ನು ಫೇಲ್ ಮಾಡಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಶಾಲೆಯ ಆಡಳಿತ ಮಂಡಳಿ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ (Suresh Kumar) ಟ್ವೀಟ್ ಮಾಡಿದ್ದು, ಮಗುವನ್ನು ಏನು ಮಾಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಕೂಡ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k