Tag: sureshgowda

  • Nagamangala Violence | ಪಿಎಫ್‌ಐ ಸಂಘಟನೆಯವರು ಮಾತ್ರವಲ್ಲ, ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ – ಸುರೇಶ್‌ಗೌಡ

    Nagamangala Violence | ಪಿಎಫ್‌ಐ ಸಂಘಟನೆಯವರು ಮಾತ್ರವಲ್ಲ, ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ – ಸುರೇಶ್‌ಗೌಡ

    ಮಂಡ್ಯ: ಕಳೆದ ಬುಧವಾರ ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಲ್ಲಿ ಬಾಂಗ್ಲಾದೇಶ ಲಿಂಕ್ ಇದೆ ಎಂದು ಅನುಮಾನ ವ್ಯಕ್ತಪಡಿಸಿ ಜೆಡಿಎಸ್‌ನ ಮಾಜಿ ಶಾಸಕ ಸುರೇಶ್‌ಗೌಡ (Suresh Gowda) ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಕಳೆದ ಬುಧವಾರ ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇರಳ ಹಾಗೂ ನಿಷೇಧಿತ ಪಿಎಫ್‌ಐ ಸಂಘಟನೆ ಲಿಂಕ್ ಇದೆ ಎಂಬ ಅನುಮಾನಗಳು ವ್ಯಕ್ತವಾಗಿದೆ. ಜೊತೆಗೆ ಈ ಕೃತ್ಯದಲ್ಲಿ ಬಾಂಗ್ಲಾದೇಶ (Bangladesh) ಲಿಂಕ್ ಸಹ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್‌- ಇಂದು ಸುಪ್ರೀಂನಲ್ಲಿ ವಿಚಾರಣೆ

    ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಎಸಗಿರುವ ಕೃತ್ಯದಿಂದ ಇಡೀ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಗಲಭೆ ನಡೆದ ಬಳಿಕ ಇದಕ್ಕೆ ಯಾರು ಕಾರಣ ಎಂದು ಪೊಲೀಸ್ ಇಲಾಖೆ ತನಿಖೆ ನಡೆಸಿತ್ತು. ಈ ಸಂಬಂಧ ಈಗಾಗಲೇ 55 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಕೇರಳದ ಮಲ್ಲಪುರಂ ಮೂಲದ ಯೂಸುಫ್ ಹಾಗೂ ನಾಸೀರ್ ಎಂಬುವವರು ಇದ್ದು, ಇವರು ನಿಷೇಧಿತ ಸಂಘಟನೆಯಾದ ಪಿಎಫ್‌ಐನಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಇದೀಗ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್‌ಐ (PFI) ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳ ಕೈವಾಡ ಸಹ ಇದೆ ಎಂಬಂತೆ ಕಾಣುತ್ತಿದೆ. ನಾಗಮಂಗಲ ತಾಲೂಕಿನ ಹಲವೆಡೆ ತೋಟದ ಮನೆಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಹಲವರು ನೆಲೆಸಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಪೊಲೀಸ್ ಇಲಾಖೆಗೆ ಹಾಗೂ ಆಗಿನ ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ. ಈ ತನಿಖೆಯನ್ನು ಎನ್‌ಐಎಗೆ ನೀಡಿದರೆ ಎಲ್ಲಾ ಸತ್ಯಗಳು ಹೊರಗೆ ಬರುತ್ತವೆ. ಹೀಗಾಗಿ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎನ್‌ಐಎಗೆ (NIA) ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ರಾತ್ರೋರಾತ್ರಿ ಸ್ಮಶಾನ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ

    ನಾಗಮಂಗಲದ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಾಂಗ್ಲಾದೇಶದವರ ಕೈವಾಡದ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆಯ ಜವಾಬ್ದಾರಿಯನ್ನು ಎನ್‌ಐಎಗೆ ಒಪ್ಪಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.

  • ಡಿಕೆಸು ಸೋಲಿಗೆ ಸಿದ್ದರಾಮಯ್ಯ & ಟೀಂ ಕಾರಣ: ಹೊಸ ಬಾಂಬ್ ಸಿಡಿಸಿದ ಸುರೇಶ್ ಗೌಡ

    ಡಿಕೆಸು ಸೋಲಿಗೆ ಸಿದ್ದರಾಮಯ್ಯ & ಟೀಂ ಕಾರಣ: ಹೊಸ ಬಾಂಬ್ ಸಿಡಿಸಿದ ಸುರೇಶ್ ಗೌಡ

    ತುಮಕೂರು: ಲೋಕಸಭಾ ಚುನಾವಣೆಯಲ್ಲಿ (Lok sabha election 2024) ಡಿ.ಕೆ ಸುರೇಶ್ (DK Suresh) ಸೋಲಿಗೆ ಸಿದ್ದರಾಮಯ್ಯ (CM Siddaramaiah) ಹಾಗೂ ಅವರ ಟೀಮ್ ಕಾರಣ ಎಂದು ಬಿಜೆಪಿ (BJP) ಶಾಸಕ ಸುರೇಶ್ ಗೌಡ (Sureshgowda) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರಿಯಬೇಕು ಎಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತಿದೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ. ಚುನಾವಣೆಗಿಂತ ಮೊದಲೇ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ ಹಾಗೂ ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ ಸುರೇಶ್ ಅವರನ್ನು 2 ಲಕ್ಷ ಮತಗಳ ಅಂತರದಿಂದ ಸೋಲಿಸ್ತಾರೆ ಎಂದು ನಾನು ಹೇಳಿದ್ದೆ. ಅದು ಈಗ ನಿಜವಾಗಿದ್ದು, ಅದ್ಕಕಿಂತ ಹೆಚ್ಚಿನ ಅಂತರದಲ್ಲಿ ಅವರು ಸೋತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆಯೂ ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಆಹ್ವಾನ

    ಡಿ.ಕೆ ಸುರೇಶ್ ಅವರ ಸೋಲು, ಸಂಚಿನ ಒಂದು ಭಾಗವಾಗಿದೆ. ಡಿ.ಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಬಾರದು. ಅವರ ನೈತಿಕತೆ ಕುಸಿಯಬೇಕು ಎಂದು ಹೀಗೆ ಮಾಡಿದ್ದಾರೆ. ಡಿಕೆಶಿ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭವಾಗಿ, ಕಾಂಗ್ರೆಸ್‍ನಲ್ಲಿ ಒಳಜಗಳ ಶುರುವಾಗಲಿದೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ. ಇನ್ನೂ ಸರ್ಕಾರ ಪತನವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಹೊಳೆನರಸೀಪುರದ ಪ್ರಜ್ವಲ್ ನಿವಾಸದಲ್ಲಿ ಎಸ್‍ಐಟಿಯಿಂದ ಸ್ಥಳ ಮಹಜರು

  • ಜೈಲಲ್ಲಿ ದೇವರಾಜೇಗೌಡ ಜೀವಕ್ಕೆ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

    ಜೈಲಲ್ಲಿ ದೇವರಾಜೇಗೌಡ ಜೀವಕ್ಕೆ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

    – ಪ್ರಕರಣದ ಖಳನಾಯಕರು, ಸಚಿವರು ಉಗ್ರರಂತೆ ವರ್ತಿಸುತ್ತಿದ್ದಾರೆ

    ಮಂಡ್ಯ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ (Devarajegowda) ಜೀವಕ್ಕೆ ಕಸ್ಟಡಿಯಲ್ಲಿರುವಾಗಲೇ ಅಪಾಯವಿದೆ ಎಂದು ಮಾಜಿ ಶಾಸಕ ಸುರೇಶಗೌಡ (Sureshgowda) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಹಲವು ತಿಂಗಳುಗಳ ಕಾಲ ದೇವರಾಜೇಗೌಡರನ್ನು ಕಸ್ಟಡಿಯಲ್ಲೇ ಇಡಲು ಸಂಚು ನಡೆದಿದೆ. ಈ ವೇಳೆ ಅವರ ಜೀವಕ್ಕೆ ದೊಡ್ಡ ಅಪಾಯವಿದೆ. ಇದು ನೂರಕ್ಕೆ ನೂರರಷ್ಟು ಸತ್ಯ. ಪ್ರಕರಣದ ಖಳನಾಯಕರು, ಸಚಿವರು ಭಯೋತ್ಪಾದಕರಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಆರೋಪ ಬಂದ್ಮೇಲೆ ಸಂಸದ ತನಿಖೆ ಎದುರಿಸೋದು ಸೂಕ್ತ: ನಿಖಿಲ್ ಕುಮಾರಸ್ವಾಮಿ

    ಪೆನ್ ಡ್ರೈವ್ ಪ್ರಕರಣದ (Prajwal Revanna Pendrive case )ಮೂಲ ರೂವಾರಿಗಳಿಗೆ ಸರ್ಕಾರದಿಂದ ರಾಜಾತಿಥ್ಯ ನೀಡಲಾಗುತ್ತಿದೆ. ಇದುವರೆಗೆ ಅವರಿಗೆ ನೋಟಿಸ್ ನೀಡದೆ, ಬಂಧಿಸದೆ ಆಟ ಆಡುತ್ತಿದ್ದಾರೆ. ಇತ್ತ ದೇವರಾಜೇಗೌಡ ಅವರನ್ನು ಷಡ್ಯಂತ್ರ ಮಾಡಿ ಬಂಧನ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಸತ್ಯತೆ ಬೇಕಿಲ್ಲ. ಸಚಿವರ ಹೆಸರು ಹೇಳಿದ್ರೆ ಪರಿಗಣನೆ ಮಾಡಲ್ಲ. ಮೂಲ ಹುಡುಕಿ ತನಿಖೆಯನ್ನೂ ಮಾಡಲ್ಲ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೋದಿ ಅಖಾಡಕ್ಕಿಳಿದಿರುವ ವಾರಣಾಸಿಯ ಇತಿಹಾಸ ಮಾತ್ರವಲ್ಲದೆ ರಾಜಕೀಯವೂ ಕುತೂಹಲಕಾರಿ!

  • ಮಂಡ್ಯದಲ್ಲಿ ಕುಡಿಯೋ ನೀರಿನಲ್ಲೂ ರಾಜಕೀಯ!

    ಮಂಡ್ಯದಲ್ಲಿ ಕುಡಿಯೋ ನೀರಿನಲ್ಲೂ ರಾಜಕೀಯ!

    – ಕೈ-ದಳ ನಡುವೆ ತಿಕ್ಕಾಟ

    ಮಂಡ್ಯ: ಜಿಲ್ಲೆಯಲ್ಲಿ ಕುಡಿಯುವ ನೀರಿನಲ್ಲೂ ರಾಜಕೀಯ ಶುರುವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತಿಕ್ಕಾಟ ನಡೆಯುತ್ತಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ನಾಗಮಂಗಲ-ಕುಣಿಗಲ್ ಗಡಿಯ ಮಾರ್ಕೋನಹಳ್ಳಿ ಡ್ಯಾಂ ನಿಂದ ನೀರು ಪೂರೈಸುವ ಯೋಜನೆ ಇದಾಗಿದೆ. ಇದರ ಶೇ.95 ಕಾಮಗಾರಿ ಪೂರ್ಣಗೊಂಡಿದ್ದು, ಅಂತಿಮ ಹಂತದಲ್ಲಿ ಯೋಜನೆಗೆ ಕೈ ಶಾಸಕ ಅಡ್ಡಿಪಡಿಸಿದ್ದಾರೆ. ನೀರು ಪಂಪ್ ಮಾಡುವ ಜಾಕ್‍ವೆಲ್ ಅಳವಡಿಕೆಯಿಂದ ಡ್ಯಾಂಗೆ ಅಪಾಯವೆಂಬ ನೆಪವೊಡ್ಡಿದ್ದಾರೆ.

    168 ಕೋಟಿ ರೂ. ವೆಚ್ಚದ 128 ಗ್ರಾಮ, ಆದಿಚುಂಚನಗಿರಿ ಕ್ಷೇತ್ರಕ್ಕೆ ನೀರು ಪೂರೈಸುವ ಯೋಜನೆ ಜಾಕ್‍ವೆಲ್ ಅಳವಡಿಸೋದಾದ್ರೆ ನನ್ನ ಸಮಾಧಿ ಮೇಲೆ ಅಳವಡಿಸಿ ಎಂದು ರಂಗನಾಥ್ ಸವಾಲು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯ ಡಿಸಿ, ತುಮಕೂರು ಎಡಿಸಿ ನೇತೃತ್ವದಲ್ಲಿ ಮಾರ್ಕೋನಹಳ್ಳಿ ಡ್ಯಾಂ ಬಳಿ ನಡೆದ ಸಂಧಾನ ಯತ್ನವೂ ವಿಫಲವಾಗಿದೆ.

    ಸಭೆಯಲ್ಲಿ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಣಿಗಲ್ ಶಾಸಕ ರಂಗನಾಥ್ ಭಾಗಿಯಾಗಿದ್ದಾರೆ. ತಾಂತ್ರಿಕ ದೋಷ ಇಲ್ಲ, ಜಾಕ್ ವೆಲ್ ನಿಂದ ಅಣೆಕಟ್ಟೆಗೆ ಅಪಾಯವಿಲ್ಲ ಅಧಿಕಾರಿಗಳು ತಿಳಿಸಿದರು. ತಾಂತ್ರಿಕ ದೋಷ ಇಲ್ಲ ಎನ್ನುತ್ತಿದ್ದಂತೆ ಕುಣಿಗಲ್ ತಾಲೂಕಿಗೆ ನೀರಿಲ್ಲ. ಎಲ್ಲಿಂದ ನಿಮಗೆ ನೀರು ಕೊಡೋದು ಎಂದು ರಂಗನಾಥ್ ತಮ್ಮ ವರಸೆ ಬದಲಿಸಿದ ಪ್ರಸಂಗವೂ ನಡೆಯಿತು. ಅಂತಿಮವಾಗಿ ಸಂಸದರು, ಕ್ಷೇತ್ರದ ಮುಖಂಡರ ಜತೆ ಚರ್ಚಿಸುವುದಾಗಿ ಹೇಳಿ ರಂಗನಾಥ್ ಸಭೆಯಿಂದ ನಿರ್ಗಮಿಸಿದರು.

    ನನ್ನ ಕ್ಷೇತ್ರದಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಮಾಡಿಯೇ ತೀರುತ್ತೇವೆಂದು ಇತ್ತ ನಾಗಮಂಗಲ ಶಾಸಕ ಸವಾಲು ಹಾಕಿದರು. ಗೌರವ ಕೊಡಬೇಕಿತ್ತು ಕೊಟ್ಟಿದ್ದೇವೆ. ಆದರೆ ಕಾಮಗಾರಿ ನಿಲ್ಲಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.