Tag: sureshkumar

  • ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದೇನೆ, 3 ವಾರ ವಿಶ್ರಾಂತಿ ಬೇಕು: ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಸುರೇಶ್‌ಕುಮಾರ್

    ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದೇನೆ, 3 ವಾರ ವಿಶ್ರಾಂತಿ ಬೇಕು: ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಸುರೇಶ್‌ಕುಮಾರ್

    ಬೆಂಗಳೂರು: ಕೆಲ ದಿನಗಳ ಹಿಂದೆ ಮಾಜಿ ಸಚಿವ, ಬಿಜೆಪಿ (BJP) ಶಾಸಕ ಸುರೇಶ್‌ಕುಮಾರ್ (S Sureshkumar) ಅನಾರೋಗ್ಯದ ಹಿನ್ನೆಲೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದು ಈಗ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

    ತಮ್ಮ ಅನಾರೋಗ್ಯ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ತನಗಾದ ಆರೋಗ್ಯ ಸಮಸ್ಯೆಯ ಬಗ್ಗೆ ದೀರ್ಘವಾದ ಪೋಸ್ಟ್ ಹಾಕಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

    ಪೋಸ್ಟ್ನಲ್ಲಿ ಏನಿದೆ?
    ನನ್ನ ಆರೋಗ್ಯ ಕಳೆದ ಆಗಸ್ಟ್ 20 ರಿಂದ ತೀವ್ರ ಸಮಸ್ಯೆಗೆ ಒಳಗಾಗಿತ್ತು. ಆಗಸ್ಟ್ 15 ರವರೆಗೆ ನಮ್ಮ ಕ್ಷೇತ್ರದಲ್ಲಿ ಸುಮಾರು 3 ಕಡೆ ಜನಸ್ಪಂದನ, ಆಗಸ್ಟ್ 14 ರಂದು ಮಧ್ಯರಾತ್ರಿ ರಾಷ್ಟ್ರಧ್ವಜ ಹಾರಿಸುವ ಭರ್ಜರಿ ಕಾರ್ಯಕ್ರಮ, ನಮ್ಮ ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಿದ ಅತ್ಯಂತ ಯಶಸ್ವಿ ಆಶು ಭಾಷಣ ಸ್ಪರ್ಧೆ, ಆಗಸ್ಟ್ 15 ರಂದು ಬೆಳಗ್ಗೆಯಿಂದ ಸಂಜೆಯವರೆಗೂ ಸ್ವಾತಂತ್ರ‍್ಯ ದಿನಾಚರಣೆಯ ಕಾರ್ಯಕ್ರಮಗಳು, ಆಗಸ್ಟ್ 16 ರಂದು ಕ್ಷೇತ್ರದ ರಾಮ ಮಂದಿರ ವಾರ್ಡಿನಲ್ಲಿ ಕೈಗೊಂಡ ಜನ ಸ್ಪಂದನ ಕಾರ್ಯಕ್ರಮ ಹೀಗೆ ಸಂಪೂರ್ಣವಾಗಿ ಕ್ಷೇತ್ರದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೆ. ಇದನ್ನೂ ಓದಿ: ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

    ಆಗಸ್ಟ್ 16, ವರಮಹಾಲಕ್ಷ್ಮಿ ಹಬ್ಬದಂದು ರಾಮಮಂದಿರ 4ನೇ ಬ್ಲಾಕ್‌ನ ಎಬಿಸಿ ಪಾರ್ಕ್ನಲ್ಲಿ ಮುಂಜಾನೆ ಜನಸ್ಪಂದನ ಕಾರ್ಯಕ್ರಮ ಯೋಜಿಸಲಾಗಿತ್ತು. ಅಂದು ಸಂಜೆ ಐದು ಗಂಟೆಯ ವೇಳೆಗೆ ನನ್ನ ಆರೋಗ್ಯ ಸ್ವಲ್ಪ ಹೆಚ್ಚೇ ಹದಗೆಟ್ಟಿತು. ಸಂಜೆ ವೇಳೆಗೆ ಎರಡು ಕಾಲುಗಳು ತುಂಬಾ ನೋಯಲು ಪ್ರಾರಂಭಿಸಿದವು. ಮಾರನೆಯ ದಿನ ಇಡೀ ದೇಹದಲ್ಲಿ ಒಂದಿಂಚು ಸಹ ನೋವು ಇಲ್ಲದ ಜಾಗ ನನಗೆ ಲಭ್ಯವಿರಲಿಲ್ಲ. ಅದರ ಮಾರನೆಯ ದಿನ ನನ್ನ ರಕ್ತ ಪರೀಕ್ಷೆ ಮಾಡಲಾಯಿತು. ಅದರಲ್ಲೂ ಯಾವುದೇ ಚಿನ್ಹೆ ಗೊತ್ತಾಗಲಿಲ್ಲ. ಇದನ್ನೂ ಓದಿ: ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ

    ಆಗಸ್ಟ್ 19 ರಂದು ನೋವು ತಡೆಯಲಾರದೆ ಬಾಧೆ ಎದುರಿಸಲಾಗದೇ ಆಸ್ಪತ್ರೆಗೆ ಸೇರಲೇಬೇಕಾಯಿತು. ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಕೊಟ್ಟು ಬುಧವಾರ ಅಂದರೆ 23 ಆಗಸ್ಟ್ ರಂದು ನನ್ನ ಡಿಸ್ಚಾರ್ಜ್ ಮಾಡಲಾಯಿತು. ಆದರೆ ಮಾರನೆಯ ದಿನ ಮತ್ತು ವಿಪರೀತ ದೇಹದಲ್ಲಿ ಅಸ್ತವ್ಯಸ್ತ ಉಂಟಾಯಿತು ಆಗ ವೈದ್ಯರು ತಪಾಸಣೆ ಮಾಡಿದ ಮೇಲೆ ನನಗೆ ಚಿಕನ್ ಗುನ್ಯಾ ಸಮಸ್ಯೆ ಗಂಭೀರ ಸ್ವರೂಪ ತಾಳಿದ್ದು ವೈದ್ಯರಿಂದ ತಿಳಿಯಿತು. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಅಲ್ಲಿಂದ ಪ್ರಾರಂಭವಾದ ನನ್ನ ಚಿಕನ್ ಗುನ್ಯಾ (Chikungunya) ವಿರುದ್ಧದ ಹೋರಾಟ ಇಂದು ಬೆಳಗ್ಗೆ ಒಂದು ಹಂತ ತಲುಪಿ, ಎಲ್ಲಾ ವೈದ್ಯರ ಉತ್ತಮ ಆರೈಕೆ, ಅಗತ್ಯ ಚಿಕಿತ್ಸೆ ಮೂಲಕ, ಆಸ್ಪತ್ರೆಯ ನರ್ಸ್ಗಳ ಕಾಳಜಿಯಿಂದ ಕೂಡಿದ ಸೇವೆಯ ಪರಿಣಾಮವಾಗಿ ಇಂದು ನಾನು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ತಮಗೆಲ್ಲ ಗೊತ್ತು ಚಿಕನ್ ಗುನ್ಯಾ ನಂತರದ ಪರಿಣಾಮ ಸುಧಾರಿಸಲು ಕನಿಷ್ಠ 3 ವಾರಗಳು ಬೇಕು. ವೈದ್ಯರುಗಳ ಸಲಹೆಯ ಮೇರೆಗೆ ನಾನು ಸುಧಾರಣೆಗಾಗಿ ನನ್ನ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಗುಣಮುಖವಾಗುವ ಹಾದಿಯಲ್ಲಿ ನನಗೆ ಮತ್ತೊಮ್ಮೆ ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ಅನೇಕ ಗೆಳೆಯರು ಕುಕ್ಕೆ ಸುಬ್ರಹ್ಮಣ್ಯದಿಂದ ಹಿಡಿದು, ಅಂಗಾಳ ಪರಮೇಶ್ವರಿ ದೇವಿಯವರೆಗೂ ವಿವಿಧ ಪೂಜೆ ಸಲ್ಲಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿರುವುದು ನನ್ನ ಮನ ತುಂಬಿ ಬಂದಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ

  • ಮೊದಲ ದಿನದ ಎಸ್‍ಎಸ್‍ಎಲ್‍ಸಿ  ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

    ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

    ಬೆಂಗಳೂರು: ಮೊದಲ ದಿನ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

    ಸೋಮವಾರ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮೊದಲ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು. ಇಂದು ಮೂರು ಕೋರ್ ವಿಷಯಗಳ ಪರೀಕ್ಷೆಗಳು ನಡೆದವು. ಮಕ್ಕಳು ಹೊಸ ಮಾದರಿ ಪರೀಕ್ಷಾ ಪದ್ಧತಿಯನ್ನು ಸುಲಭವಾಗಿ ಅರ್ಥೈಸಿಕೊಂಡು ಒಎಂಆರ್ ಶೀಟ್‍ಗಳಲ್ಲಿ ಗುರುತು ಮಾಡಿದರು. ಕೊಠಡಿ ಮೇಲ್ವಿಚಾಕರ ಮಾ‌ರ್ಗದರ್ಶನದಂತೆ ಒಎಂಆರ್ ಶೀಟ್‍ಗೆ ಮೊದಲು ರಿಜಿಸ್ಟರ್ ನಂಬರ್ ದಾಖಲಿಸಿ ಕೆಳಗಡೆ ಸಹಿ ಮಾಡಿ ನಂತರ ಸರಿಯುತ್ತರಗಳನ್ನು ಗುರುತಿಸಲಾರಂಭಿಸಿದರು.

    ಇಂದು ಬೆಂಗಳೂರಿನ ರಾಜಾಜಿನಗರದ ಫ್ಲಾರೆನ್ಸ್, ಕಡಾಂಬಿ, ಜಯನಗರದ ವಿಜಯಾ ಪ್ರೌಢಶಾಲೆ, ಬಿಇಎಸ್ ಪ್ರೌಢಶಾಲೆ, ಕಾರ್ಮಂಟ್ ಕಾನ್ವೆಂಟ್ ಶಾಲೆ, ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಸಾರಕ್ಕಿ ಪಬ್ಲಿಕ್ ಶಾಲೆ ಕೋಟೆ ಪ್ರದೇಶದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಲ್ಲ ಕಡೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಮಕ್ಕಳು ಅತ್ಯಂತ ಶಿಸ್ತಿನಿಂದ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ತಿಳಿಸಿದರು.

    ಕೆಲವೆಡೆ ಶಾಸಕರು ಮತ್ತು ಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಖುದ್ದಾಗಿ ಭೇಟಿ ನೀಡಿದ್ದಾರೆ ಮಕ್ಕಳನ್ನು ಹುರಿದುಂಬಿಸಿದ್ದಾರೆ. ಹಲವಾರು ಕಡೆಗಳಲ್ಲಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡಿದ್ದರು ಎಂದು ಹೇಳಿದ ಸಚಿವರು ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಜುಲೈ 26ಕ್ಕೆ ಬಿಎಸ್‍ವೈ ಮಹಾ ಭಾಷಣ? – ಸಿಎಂ ಬೆಂಬಲಿಗರು ಸೈಲೆಂಟ್

    ಮಕ್ಕಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ ಎಂದು ಸಚಿವರು ಹೇಳಿದರು.

    ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇ. ಹಾಜರಾತಿಯೂ ಸಹ ಈ ಬಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು.

    ಗಣಿತ ವಿಷಯಕ್ಕೆ 8,52,191 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,49,199 ಅಭ್ಯರ್ಥಿಗಳು ಹಾಜರಾಗಿ 2992 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.64 ಹಾಜರಾತಿ ಇದೆ. ಕಳೆದ ವರ್ಷ ಇದು 98.30 ಇತ್ತು.

    ವಿಜ್ಞಾನ ವಿಷಯಕ್ಕೆ 8,43,976 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,40,841 ಅಭ್ಯರ್ಥಿಗಳು ಹಾಜರಾಗಿ 3127 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.62 ಹಾಜರಾತಿ ಇದೆ. ಕಳೆದ ವರ್ಷ ಇದು 98.36 ಇತ್ತು.

    ಸಮಾಜ ವಿಜ್ಞಾನ ವಿಷಯಕ್ಕೆ 8,24,689 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,21,823 ಅಭ್ಯರ್ಥಿಗಳು ಹಾಜರಾಗಿ 2867 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.65 ಹಾಜರಾತಿ ಇದೆ. ಕಳೆದ ವರ್ಷ ಇದು 98.43 ಇತ್ತು.

    ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಆರೋಗ್ಯ ಇಲಾಖಾ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಎಲ್ಲ ಅಭ್ಯರ್ಥಿಗಳು ಮಾಸ್ಕ್‍ಗಳನ್ನು ಧರಿಸಿದ್ದರು. ಮಾಸ್ಕ್ ಧರಿಸದೇ ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್ ನೀಡಲಾಯಿತು ಎಂದು ಅವರು ವಿವರಿಸಿದರು.

    ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

    ಪರೀಕ್ಷಾ ಸಮಯದಲ್ಲಿ ಕಂಡು ಬಂದ ವಿಶೇಷತೆಗಳನ್ನು ಸಚಿವರು ಈ ಸಂರ್ಭದಲ್ಲಿ ವಿವರಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲಯದ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾವಣೆ ಬಗ್ಗೆ ವರ್ಷದ ಹಿಂದೆಯೇ ಹೇಳಿದ್ದೆ, ಅದು ಈಗ ನಿಜವಾಗ್ತಿದೆ: ಸಿದ್ದರಾಮಯ್ಯ

    ದಕ್ಷಿಣ ಕನ್ನಡ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಹಲವಾರು ಗಡಿ ಭಾಗದ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಒಟ್ಟು 770 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಒಬ್ಬ ನೊಂದಾಯಿತ ಅಭ್ಯರ್ಥಿ ಗೈರು ಹಾಜರಾಗಿದ್ದಾನೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.

    ಕಲಬುರ್ಗಿ ಜಿಲ್ಲೆಯ ಚಿಮ್ಮನಚೋಡ ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ತೀವ್ರ ಮಳೆಯಿಂದ ಶಾಲೆಗೆ ಹಾದು ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿ ರಸ್ತೆ ಬಂದ್ ಅಗಿತ್ತು. ಅದನ್ನು ನಿಗದಿತ ಅವಧಿಯಲ್ಲಿ ಸರಿಪಡಿಸಲಾದ ಬಳಿಕ ಎಲ್ಲ ಮಕ್ಕಳು ರಸ್ತೆಯಲ್ಲಿ ಸಾಗಿ ಪರೀಕ್ಷೆ ಬರೆದರು. ಕೋಲಾರದ ಕುರುಬರ ಪೇಟೆಯ ನಿವಾಸಿ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಖಾಸಗಿ ಅಭ್ಯರ್ಥಿಯಾದ ಅವರು ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಕೋಲಾರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಮಾಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆದ ಮಕ್ಕಳ ಉತ್ತರ ಪತ್ರಿಕೆಗಳನ್ನು ಪೊಲೀಸ್ ಕಣ್ಗಾವಲಿನಲ್ಲಿ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಂದು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡಲಾಗಿದೆ. ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.

    ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಲಸಿಕೆ ಪಡೆದಿದ್ದರು.  ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.  ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಯಾವುದೇ ಅಭ್ಯರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ತೊಡಗಿಲ್ಲ.

    ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ ಬರೆದ ಅಭ್ಯರ್ಥಿಗಳು 111  ಸನಿಹದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡ ವಲಸೆ ವಿದ್ಯಾರ್ಥಿಗಳು-10,693  ವಸತಿ ನಿಲಯಗಳಲ್ಲಿದ್ದು ಪರೀಕ್ಷೆ ಬರೆದವರು -2,870

    ಮುಖ್ಯೋಪಾಧ್ಯಾಯರ ಲಾಗಿನ್‍ನಿಂದ ಪ್ರವೇಶ ಪತ್ರಗಳನ್ನು ವಿತರಿಸಲಾಗಿದೆ. ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೂ ಬಿಇಒ ಮತ್ತು ಡಿಡಿಪಿಐ ಹಂತದಲ್ಲಿ ಪ್ರವೇಶ ಪತ್ರ ವಿತರಿಸಲಾಗಿದೆ. ಹಾವೇರಿ ಜಿಲ್ಲೆಯ ಚಿಕ್ಕೇರೂರು ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಿದ್ದರೂ ಶಾಲೆಯ ಶಿಕ್ಷಕರೊಬ್ಬರು ಶುಲ್ಕವನ್ನು ಮಂಡಳಿಗೆ ಪಾವತಿಸದೇ ಇರುವುದರಿಂದ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಾಗಿಲ್ಲ. ಆ 30 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯ 3 ಮತ್ತು ಕೊರಟಗೆರೆ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್ ಅವರಿಗೆ ಮುಂದೆ ಆಗಸ್ಟ್ ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಇದನ್ನೂ ಓದಿ: ಹಳ್ಳ ತುಂಬಿ ರಸ್ತೆ ಮಾರ್ಗ ಬಂದ್ – ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಗಳ ಪರದಾಟ

    ಮಕ್ಕಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ. ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು.

    ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲದಯ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಮಹಾರಾಷಚವ್ರದ ಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳದ 441 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಪರೀಕ್ಷಾ ಕೇಂದ್ರಗಳಿಗೆ ಮಹಾರಾಷ್ಟ್ರ ಭಾಗದ 152 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದರು. ಅವರೆಲ್ಲರಿಗೂ ಗಡಿ ಭಾಗದಿಂದ ವಾಹನ ವ್ಯವಸ್ಥೆ ಮಾಡಲಾಗಿತ್ತು.  ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.

  • ಭಾಷೆಯಾಗಿ ಕನ್ನಡ ಕಲಿಕೆ-ಯಾವುದೇ ರಾಜಿಗೂ ಅವಕಾಶವಿಲ್ಲ: ಸುರೇಶ್ ಕುಮಾರ್

    ಭಾಷೆಯಾಗಿ ಕನ್ನಡ ಕಲಿಕೆ-ಯಾವುದೇ ರಾಜಿಗೂ ಅವಕಾಶವಿಲ್ಲ: ಸುರೇಶ್ ಕುಮಾರ್

    ಬೆಂಗಳೂರು: ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

    ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಬುಧವಾರ ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಪ್ರಕಾರ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ. ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸಿ ಈ ಕಡ್ಡಾಯ ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದ್ದು, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವಂತಹುದ್ದಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಯಾವುದೇ ಆಗ್ರಹಕ್ಕೂ ಮಣಿಯದೇ ಕಟ್ಟುನಿಟ್ಟಾಗಿ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಕಲಿಸುವುದಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ ಬೇಡ – ಪೋಷಕರಿಂದ ಅಭಿಯಾನ

    ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಸದಾಶಯವನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಿಸಬೇಕು. ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೂ ಸಹ ಯಾವುದೇ ಆಗ್ರಹಗಳಿಗೆ ಮಣಿಯದೇ ಮತ್ತು ಕನ್ನಡ ಕಲಿಕೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಒಳಗಾಗದೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ, ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರೆಸುವುದು ಮತ್ತು ಈ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆ ನೀಡುವ ಕುರಿತು ಕೂಡಲೇ ಸುತ್ತೋಲೆಯೊಂದನ್ನು ಹೊರಡಿಸಬೇಕೆಂದು ಸಚಿವರು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತು ಆಯಾ ಮಟ್ಟದ ಇಲಾಖೆಯ ಅಧಿಕಾರಿಗಳು ಎಲ್ಲ ಶಾಲೆಗಳಿಗೂ ಭೇಟಿ ನೀಡಿ ಕಾಯ್ದೆಯ ಜಾರಿ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುವಂತೆ ಸಹ ಕೂಡಲೇ ನಿರ್ದೇಶನ ನೀಡಲಾಗಿದೆ. ಈಗಾಗಲೇ ಬೆಂಗಳೂರಿನ ಕೇಂದ್ರ ಪಠ್ಯಕ್ರಮದ ಶಾಲೆಗಳ ಪ್ರಾಚಾರ್ಯರು ಮತ್ತು ಮುಖ್ಯಸ್ಥರ ಸಭೆಯನ್ನೂ ನಡೆಸಿ ಈ ಕುರಿತು ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯವಾಗಿ ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ. ಯಾರೇ ಆಗಲಿ ಯಾವುದೇ ಭಾಷೆಯನ್ನು ಕಲಿಯುವುದರಿಂದ ಹೆಚ್ಚಿನ ಶಕ್ತಿ ಬರುತ್ತದೆ. ಹೆಚ್ಚಿನ ಭಾಷೆಗಳನ್ನು ಕಲಿಯುವುದರಿಂದ ಸಮೃದ್ಧ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಂತಾಗುತ್ತದೆ. ಇದನ್ನು ನಮ್ಮ ಪೋಷಕರು ಅರಿತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

  • ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉಚಿತ – ಎಸ್.ಸುರೇಶ್ ಕುಮಾರ್

    ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉಚಿತ – ಎಸ್.ಸುರೇಶ್ ಕುಮಾರ್

    – ಎಲ್ಲ ರಾಜ್ಯಗಳ ಶಿಕ್ಷಣ ಮಂತ್ರಿಗಳ ಸಭೆಯಲ್ಲಿ ಪ್ರತಿಪಾದನೆ

    ಬೆಂಗಳೂರು: ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

    ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ಪ್ರತಿಪಾದಿಸಿದರು.

    ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದರು.

    ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸಲಹಾತ್ಮಕವಾಗಿ ಹೇಳಿದೆ. ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದ್ದು, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆಯಾಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನ:ಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಿ, ಒಟ್ಟಾರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

    ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸುರೇಶ್ ಕುಮಾರ್ ಸಲಹೆ ನೀಡಿದರು.

    ಕೇಂದ್ರ ಸರ್ಕಾರದ ಈ ರೀತಿಯ ಸಮಾಲೋಚನಾ ಸಭೆಯು ಅಭಿನಂದನಾರ್ಹ ಪ್ರಯತ್ನ. ಇಂತಹ ಪ್ರಯತ್ನಗಳು ಸಂಕಷ್ಟದ ಸಂದರ್ಭದಲ್ಲಿ ಇಡೀ ನಾಗರಿಕ ಸಮಾಜಕ್ಕೆ ವಿಶ್ವಾಸವನ್ನು ಮೂಡಿಸುವಂತಹದ್ದಾಗಿವೆ ಎಂದರು. ಸಭೆಯಲ್ಲಿ ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು ಹಾಗೂ ಸಿ.ಬಿ.ಎಸ್.ಇ. ಮಂಡಳಿಯು ಸೇರಿದಂತೆ ಬಹುತೇಕ ರಾಜ್ಯಗಳು ಪರೀಕ್ಷೆ ನಡೆಸುವ ಪರವಾಗಿ ವಿಚಾರ ಮಂಡಿಸಿದರು. ಬಹುಪಾಲು ಸಚಿವರು ಪರೀಕ್ಷೆಗಳನ್ನು ನಡೆಸಲೇಬೇಕೆಂದು ಪ್ರತಿಪಾದಿಸಿದರು. ಸಭೆಯಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.

  • ಕೊರೊನಾ ಮಧ್ಯೆ ಶಾಲೆ ಆರಂಭ, ಸರ್ಕಾರಕ್ಕೆ 10 ‘ಪಬ್ಲಿಕ್’ ಪ್ರಶ್ನೆ – ಎಷ್ಟು ಮಕ್ಕಳಿಗೆ ಸೋಂಕು ಬಂದಿದೆ?

    ಕೊರೊನಾ ಮಧ್ಯೆ ಶಾಲೆ ಆರಂಭ, ಸರ್ಕಾರಕ್ಕೆ 10 ‘ಪಬ್ಲಿಕ್’ ಪ್ರಶ್ನೆ – ಎಷ್ಟು ಮಕ್ಕಳಿಗೆ ಸೋಂಕು ಬಂದಿದೆ?

    ಬೆಂಗಳೂರು: ಕೊರೋನಾ ತಾಂಡವವಾಡ್ತಿದೆ. ಖುದ್ದು ಕೇಂದ್ರ ಸರ್ಕಾರವೇ, ಮನೆಯಿಂದ ಹೊರಬರಬೇಡಿ ಎಂದು ಮಕ್ಕಳಿಗೆ, ವೃದ್ಧರಿಗೆ ಲಾಕ್‍ಡೌನ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಇದ್ಯಾವುದನ್ನು ಕಿವಿಗೆ ಹಾಕಿಕೊಳ್ಳದ ರಾಜ್ಯ ಸರ್ಕಾರ, ಜುಲೈ 1ರಿಂದ ಶಾಲೆಗಳನ್ನು ತೆರೆಯಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ.

    4ರಿಂದ ಏಳನೇ ತರಗತಿಯ ಮಕ್ಕಳಿಗೆ ಜುಲೈ 1ರಿಂದ, 1ನೇ ತರಗತಿಯಿಂದ 3ನೇ ತರಗತಿವರೆಗಿನ ಮಕ್ಕಳಿಗೆ, 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಜುಲೈ 15ರಿಂದ ಶಾಲೆ ನಡೆಸಲು ಪ್ಲಾನ್ ಮಾಡ್ತಿದೆ. ಇನ್ನು ಮೂರು ದಿನಗಳಲ್ಲಿ ಶಾಲೆಗೆ ಬರುವಂತೆ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.

    ಜೂನ್ 10ರಿಂದ ಪೋಷಕರ ಅಭಿಪ್ರಾಯ ಸಂಗ್ರಹಿಸಲು ಸಹ ಮುಂದಾಗಿದೆ. ಕಳೆದ ವಾರವಷ್ಟೇ ದಕ್ಷಿಣ ಕೊರಿಯಾದಲ್ಲಿ ಶಾಲೆಗಳ ಪುನಾರಂಭ ಆಗಿತ್ತು. ಈ ಬೆನ್ನಲ್ಲೇ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿದ್ದವು. ಹೀಗಾಗಿ ಕಳೆದ 2 ದಿನಗಳಲ್ಲಿ 500ಕ್ಕೂ ಹೆಚ್ಚು ಶಾಲೆಗಳನ್ನು ಅಲ್ಲಿ ಮತ್ತೆ ಮುಚ್ಚಲಾಗಿದೆ. ಕಣ್ಣಮುಂದೆಯೇ ಇಂಥಾ ಉದಾಹರಣೆ ಇದ್ರೂ ಕೂಡ ಸರ್ಕಾರ, ಶಾಲೆ ತೆರೆಯಲು ಬಹಳ ಉತ್ಸುಕವಾಗಿವೆ.

    ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರಿಂದ, ಪೋಷಕರಿಂದ, ಖಾಸಗಿ ಶಾಲೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕೆಲ ಪೋಷಕರಂತೂ ಈ ವರ್ಷ ನಾವು ಮಕ್ಕಳನ್ನು ಶಾಲೆಗೆ ಕಳಿಸಲ್ಲ ಎನ್ನುತ್ತಿದ್ದಾರೆ. ಹಿಂದೆ ಮುಂದೆ ನೋಡ್ದೇ, ಮಕ್ಕಳ ಹಿತ ಪರಿಗಣಿಸದೇ ಆತುರದ ಕ್ರಮಕ್ಕೆ ಮುಂದಾಗಿರುವ ಸರ್ಕಾರದ ನಡೆ ವಿರುದ್ಧ ನಿಮ್ಮ ಪಬ್ಲಿಕ್ ಟಿವಿ ಕೂಡ ಸ್ಕೂಲ್ ಬೇಕಾ ಹೆಸರಲ್ಲಿ ಅಭಿಯಾನ ಆರಂಭಿಸಿದೆ. ದೇಶದಲ್ಲಿ ಕೂಡ ಸಾಮಾಜಿಕ ಜಾಲತಾಣದಲ್ಲಿ ನೋ ವ್ಯಾಕ್ಸಿನ್, ನೋ ಸ್ಕೂಲ್ ಹೆಸರಲ್ಲಿ ದೊಡ್ಡಮಟ್ಟದ ಅಭಿಯಾನ ನಡೆಯುತ್ತಿದೆ. ಇದುವರೆಗೆ 4.70 ಲಕ್ಷಕ್ಕೂ ಹೆಚ್ಚು ಪೋಷಕರು ಈ ಅಭಿಯಾನ ಬೆಂಬಲಿಸಿ ಸಹಿ ಹಾಕಿದ್ದಾರೆ.

    ಸರ್ಕಾರಕ್ಕೆ ‘ಪಬ್ಲಿಕ್’ ದಶ ಪ್ರಶ್ನೆ:
    1. ಶಾಲೆಗಳಲ್ಲಿ 10 ವರ್ಷದೊಳಗಿನ ಮಕ್ಕಳ ರಕ್ಷಣೆ ಮಾಡೋದು ಸಾಧ್ಯನಾ?
    2. ಸಾಮಾಜಿಕ ಅಂತರ ಅಂತಾರೆ. ಇದು ಶಾಲೆಗಳಲ್ಲಿ ಅಷ್ಟು ಸುಲಭನಾ?
    3. ಆಟ, ಊಟದ ಸಮಯದಲ್ಲಿ ಮಕ್ಕಳನ್ನು ನಿಯಂತ್ರಣ ಮಾಡೋದು ಹೇಗೆ?
    4. ಮಕ್ಕಳು ತನ್ನ ಸ್ನೇಹಿತರ ಜೊತೆ ಸೇರಲ್ಲ ಅಂತಾ ಏನು ಗ್ಯಾರಂಟಿ?


    5. 6 ರಿಂದ 8 ಗಂಟೆ ಗಂಟೆಗಳ ಕಾಲ ಮಕ್ಕಳು ಮಾಸ್ಕ್ ಧರಿಸಿ ಇರಲು ಸಾಧ್ಯನಾ?
    6. ಪಾಳಿಯಲ್ಲಿ ತರಗತಿ ಅಂತಾರೆ. ಬೆಳಗ್ಗೆ ಬೇಗ ಮಕ್ಕಳು, ಶಿಕ್ಷಕರು ಬರೋಕೆ ಸಾಧ್ಯನಾ?
    7. ಬೆಳಗ್ಗೆ ಬಂದು ಸಂಜೆವರೆಗೂ ಪಾಠ ಮಾಡೋಕೆ ಒಬ್ಬ ಶಿಕ್ಷಕರಿಂದ ಸಾಧ್ಯನಾ?
    8. ಪ್ರತಿ ನಿತ್ಯ ಶಾಲಾ ಕೊಠಡಿಗಳು ಸ್ಯಾನಿಟೈಸ್ ಆಗಬೇಕು.. ಇದು ಸಾಧ್ಯನಾ?
    9. ಶಾಲಾ ವಾಹನದಲ್ಲಿ ಮಕ್ಕಳ ಸಾಮಾಜಿಕ ಅಂತರ ಮಾನಿಟರ್ ಮಾಡೋರು ಯಾರು?
    10. ಮಳೆಗಾಲ ಬೇರೆ ಶುರುವಾಗ್ತಿದೆ. ಈ ವೇಳೆ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ನಿತ್ಯ ಆರೋಗ್ಯ ತಪಾಸಣೆ ಸಾಧ್ಯ ಆಗುತ್ತಾ..?

    ಆನ್‍ಲೈನ್ ತರಗತಿಗೆ ವಿರೋಧ:
    ಆನ್‍ಲೈನ್ ತರಗತಿಗಳಿಗೆ ಪರ ವಿರೋಧ ವ್ಯಕ್ತವಾಗ್ತಿದೆ. ಪಕ್ಕದ ಕೇರಳದಲ್ಲಿ ಸರ್ಕಾರವೇ ಆನ್‍ಲೈನ್ ತರಗತಿ ಆರಂಭಿಸಿದ್ದು, ಇಂಟರ್ನೆಟ್ ಇಲ್ಲದೇ ಈ ತರಗತಿಗೆ ಹಾಜರಾಗದ್ದಕ್ಕೆ ಮಲಪ್ಪುರಂನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡ್ಕೊಂಡಿದ್ದಾಳೆ. ಕೇರಳ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಪ್ರತಿಭಟನೆಗಳು ಜೋರು ನಡೆಯುತ್ತಿದೆ.

     

    ಮಕ್ಕಳಿಗೂ ಕೊರೊನಾ
    ಕೊರೊನಾ ನಡುವೆ ಶಾಲೆಗಳನ್ನು ತೆರೆಯೋದು ಬೇಡ ಅಂತಾ ಕೂಗು ಎದ್ದಿರೋದಕ್ಕೂ ಕಾರಣವಿದೆ. ಮನೆಯಲ್ಲಿರುವ ಮಕ್ಕಳನ್ನು ಕೊರೊನಾ ವೈರಸ್ ಬಿಟ್ಟಿಲ್ಲ. ಸ್ಕೂಲ್, ಕಾಲೇಜ್ ಇರದ ಅವಧಿಯಲ್ಲಿ ಹೊರಗೇ ಸುತ್ತಾಡದೇ ಮನೆಯಲ್ಲೇ ಇದ್ದ ನೂರಾರು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಕಾರಣ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ.

    0-5 ವರ್ಷದ 142 ಮಕ್ಕಳಿಗೆ, 5-10 ವರ್ಷ 184 ಮಕ್ಕಳಿಗೆ ಕೊರೊನಾ ಬಂದಿದ್ದರೆ 10-20 ವರ್ಷದ 536 ಮಕ್ಕಳಿಗೆ ಸೋಂಕು ಬಂದಿದೆ.

  • SSLC ಪರೀಕ್ಷೆ ಕಡೆ ಗಮನ ಹರಿಸಿ ಡಿಸಿಗಳಿಗೆ ಸುರೇಶ್ ಕುಮಾರ್ ಪತ್ರ

    SSLC ಪರೀಕ್ಷೆ ಕಡೆ ಗಮನ ಹರಿಸಿ ಡಿಸಿಗಳಿಗೆ ಸುರೇಶ್ ಕುಮಾರ್ ಪತ್ರ

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದೆ, ಆತಂಕವಿಲ್ಲದೆ ಪರೀಕ್ಷೆಗಳು ಸುಗಮವಾಗಿ ನಡೆಯುತ್ತಿವೆ. ಡಿಸಿಗಳು, ಪೊಲೀಸ್ ಇಲಾಖೆ, ಪಿಯುಸಿ ಬೋರ್ಡ್ ಪರೀಕ್ಷೆಗೆ ಅಗತ್ಯ ಕ್ರಮ ತೆಗೆದುಕೊಂಡು ಪರೀಕ್ಷೆ ಯಶಸ್ವಿಯಾಗಿ ನಡೆಸುತ್ತಿದೆ. ಪಿಯುಸಿ ಎಕ್ಸಾಂ ಮುಗಿದ ಕೂಡಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿದೆ. ಹೀಗಾಗಿ ಪಿಯುಸಿ ಎಕ್ಸಾಂ ನಷ್ಟೆ ಪಾರದರ್ಶಕವಾಗಿ, ಸುಗಮವಾಗಿ ನಡೆಸಲು ಕೆಲಸ ಮಾಡುವಂತೆ ಎಲ್ಲಾ ಡಿಸಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

    ಯಾವುದೇ ಗೊಂದಲ, ಅಕ್ರಮ ಇಲ್ಲದೆ ಪರೀಕ್ಷೆ ನಸೆಸಲು ಡಿಸಿಗಳ ಸಹಕಾರ ಮುಖ್ಯ ಹೀಗಾಗಿ ಸಚಿವರೇ ಎಲ್ಲಾ ಡಿಸಿಗಳಿಗೂ ಪತ್ರ ಬರೆದು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಪರೀಕ್ಷೆಗಳು ಸುಲಲಿತವಾಗಿ ಹಾಗೂ ಮುಕ್ತ ವಾತಾವರಣದಲ್ಲಿ ನಡೆಯವಂತೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಇದಕ್ಕೆ ಪೊಲೀಸ್ ಇಲಾಖೆ, ಖಜಾನೆ, ಇಂಟಲಿಜೆನ್ಸ್ ಸೇರಿದಂತೆ ಎಲ್ಲ ಇಲಾಖೆಗಳೂ ಸಹಕರಿಸಿದ್ದು, ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿವೆ. ಪರೀಕ್ಷೆಗಳು ಸುಸೂತ್ರವಾಗಿ ನಿರ್ವಹಣೆಯಾಗಬೇಕಾದ ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಆಶಯಗಳು ಸಾಕಾರಗೊಳ್ಳಬೇಕಾದರೆ ಜಿಲ್ಲಾಧಿಕಾರಿಗಳ ಜವಾಬ್ದಾರಿ ಹಿರಿದಾಗಿದ್ದು, ಈ ಕುರಿತಂತೆ ಪರೀಕ್ಷಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಎಲ್ಲ ಅಧಿಕಾರಿ/ಸಿಬ್ಬಂದಿ ಅತಿ ಜಾಗರೂಕತೆಯಿಂದ ಮತ್ತು ಹೆಚ್ಚಿನ ಜವಾಬ್ದಾರಿಯಿಂದ ತೊಡಗಿಸಿಕೊಂಡು ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯುವಂತೆ ಜಿಲ್ಲಾಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕೆಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

    ಪರೀಕ್ಷೆಗೆ ಎಸ್‌ಎಸ್‌ಎಲ್‌ಸಿ ಬೋರ್ಡ್ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪ್ರಶ್ನೆ ಪತ್ರಿಕೆ ಇಡುವ ಖಜಾನೆಗೆ ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ 15 ನಿಮಿಷ ಸಮಯ ನೀಡಲಾಗಿದೆ. ಪರೀಕ್ಷಾ ಅಕ್ರಮ ತಡೆಗೆ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಾಗೃತ ದಳಗಳ ರಚನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ಯಾಡ್ ಇರಲಿದ್ದಾರೆ. ಪ್ರಶ್ನೆ ಪತ್ರಿಕೆ ರವಾನೆ ಮಾಡೋ ವಾಹನಕ್ಕೆ ಜಿಪಿಎಸ್ ಅಳವಡಿಕೆ ಮಾಡುವ ಕಾರ್ಯ ನಡೆಯುತ್ತಿದೆ.

  • ಪಕ್ಕೆಲುಬು ಶಿಕ್ಷಕನ ‘ಪಕ್ಕೆಲುಬು’ ಮುರಿದ ಸಚಿವ ಸುರೇಶ್ ಕುಮಾರ್

    ಪಕ್ಕೆಲುಬು ಶಿಕ್ಷಕನ ‘ಪಕ್ಕೆಲುಬು’ ಮುರಿದ ಸಚಿವ ಸುರೇಶ್ ಕುಮಾರ್

    ಬೆಂಗಳೂರು: ವಿದ್ಯಾರ್ಥಿಯಿಂದ ಪಕ್ಕೆಲುಬು ಪದ ಪದೇ ಪದೇ ಹೇಳಿಸಿ ಅವಮಾನ ಮಾಡಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದ ಶಿಕ್ಷಕನಿಗೆ ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂದು ಸಚಿವರನ್ನು ಭೇಟಿಯಾಗಿ ಅಮಾನತು ವಾಪಸ್ ಪಡೆಯುವಂತೆ ಮನವಿ ಮಾಡಿದ್ದ ಶಿಕ್ಷಕರಿಗೆ ಚೆನ್ನಾಗಿ ಪಾಠ ಮಾಡಿ ‘ಪಕ್ಕೆಲುಬು’ ಮುರಿದಿದ್ದಾರೆ.

    ಅಮಾನತು ಮಾಡಿದ ನಂತರ ಇವತ್ತು ಸ್ವತಃ ಸಚಿವರನ್ನು ಶಿಕ್ಷಕ ಭೇಟಿಯಾಗಿ ತನ್ನಿಂದ ತಪ್ಪಾಗಿದೆ. ಅಮಾನತು ವಾಪಸ್ ಪಡೆಯುವಂತೆ ಶಿಕ್ಷಕ ಕೇಳಿಕೊಂಡಿದ್ದಾರೆ. ಆದರೆ ಆ ಕ್ಷಮೆಯಲ್ಲಿ ಪಶ್ಚಾತ್ತಾಪ ಇರಲಿಲ್ಲ ಎನ್ನುವುದು ಸುರೇಶ್ ಕುಮಾರ್ ಅವರಿಗೆ ಗೊತ್ತಾಗುತ್ತಿದ್ದಂತೆ ಯಾವುದೇ ಕಾರಣಕ್ಕೂ ಅಮಾನತು ವಾಪಸ್ ಪಡೆಯುವುದಿಲ್ಲ ಅಂತ ಖಡಕ್ ಆಗಿ ಹೇಳಿ ಕಳಿಹಿಸಿದ್ದಾರೆ.

    ತಮ್ಮ ಫೇಸ್ ಬುಕ್ ನಲ್ಲಿ ಘಟನೆ ವಿವರವನ್ನು ಸ್ವತಃ ಸುರೇಶ್ ಕುಮಾರ್ ಬರೆದುಕೊಂಡಿದ್ದಾರೆ. ಕೇವಲ ಅಮಾನತು ರದ್ದುಗೊಳಿಸಲು ಮಾತ್ರ ಕ್ಷಮೆ ಕೇಳಿದ್ದಕ್ಕೆ ಸುರೇಶ್ ಕುಮಾರ್ ಗರಂ ಆಗಿದ್ದಾರೆ.

    ಸುರೇಶ್ ಕುಮಾರ್ ಪೋಸ್ಟ್ ನಲ್ಲಿ  ಏನಿದೆ?
    ಪಕ್ಕೆಲುಬು ವಿಡಿಯೋ ಖ್ಯಾತಿಯ ಶಿಕ್ಷಕರು ನನ್ನ ಬಳಿ ಬಂದಿದ್ದರು. ಅವರು ಆ ಮಗುವಿನ ಜೊತೆ ನಡೆಸಿರುವ ಆ ಕೃತ್ಯದ ಕುರಿತು ವಿಚಾರಿಸಿದಾಗ ಇನ್ನೂ ತಾನು ಮಾಡಿರುವುದು ತಪ್ಪು ಎಂದು ಅವರಿಗೆ ಅನಿಸಿಲ್ಲದಿರುವುದು ಸ್ಪಷ್ಟವಾಯಿತು.

    ಕೇವಲ ತನ್ನ ಅಮಾನತನ್ನು ರದ್ದುಗೊಳಿಸುವ ಉದ್ದೇಶದಿಂದ ‘ತಪ್ಪಾಯಿತು’ ಎಂದು ಹೇಳಿದರೇ ಹೊರತು, ಅವರ ಮುಖದಲ್ಲಿ ಪಶ್ಚಾತ್ತಾಪದ ಲವಲೇಶವೂ ಇರಲಿಲ್ಲ. “ನಿಮ್ಮ ಜೊತೆ ಈಗ ಮಾತನಾಡಿರುವುದನ್ನು ಸೋಷಿಯಲ್‍ಮೀಡಿಯಾಗೆ ಬಿಡಲೇ” ಎಂದು ಕೇಳಿದಾಗ “ದಯವಿಟ್ಟು ಬೇಡ” ಎಂದ ಆ ಶಿಕ್ಷಕರು ಆ ಆತಂಕದಿಂದ ಕೂಡಿದ ಮಗುವಿನ ವಿಡಿಯೋ ಮಾಡಿಕೊಂಡದ್ದು ಏಕೆ? ಸೋಷಿಯಲ್ ಮೀಡಿಯಾಗೆ ಬಿಟ್ಟದ್ದು ಏಕೆ ಎಂದು ಕೇಳಿದರೆ ಕೊಟ್ಟ ಉತ್ತರ ಹಾಸ್ಯಾಸ್ಪದವಾಗಿತ್ತು.

    ಆ ಮಗುವಿನ ಪೋಷಕರಿಗೆ ತೋರಿಸಲೆಂದು ವಿಡಿಯೋ ಮಾಡಿಕೊಂಡದ್ದೆಂದೂ ಮತ್ತು ತನ್ನ ಎಂಟು ವರ್ಷದ ಮಗ ಅದನ್ನು ಸೋಷಿಯಲ್ ಮೀಡಿಯಾಗೆ ಬಿಟ್ಟದ್ದೆಂದೂ ಆ ಶಿಕ್ಷಕ ಹೇಳಿದಾಗ ನನ್ನ ತಿರಸ್ಕಾರ ಹೆಚ್ಚಾಯಿತು.

    ಮೊದಲೇ ಸಿದ್ದಪಡಿಸಿಕೊಂಡು ಬಂದಿದ್ದ ಪತ್ರದಲ್ಲಿ ತನ್ನ ಮೇಲೆ ಬಂದಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವೆಂದೂ, ತನ್ನ ಅಮಾನತನ್ನು ವಾಪಸ್ಸುಪಡೆಯಬೇಕೆದೂ ಹೇಳುವ ವಿನಾ: ಒಂದು ಮಾತೂ ಸಹ ಆ ಮಗುವಿನ ಜೊತೆ ತಾನು ಮಾಡಿದ ಆ ಕೃತ್ಯದ ಬಗ್ಗೆ ಇರಲಿಲ್ಲ.

    ಆ ಮಗುವಿನ ಬಳಿ ಕ್ಷಮೆ ಕೇಳಿ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಬಿಡಲು ನೀವು ಸಿದ್ದರಿದ್ದೀರಾ ಎಂದು ಕೇಳಿದರೆ ಅವರ ಬಳಿ ಮಾತಿರಲಿಲ್ಲ. ನಾನು ಈಗ ಏನೂ ಹೇಳುವುದಿಲ್ಲ, ಒಂದೆರಡು ದಿನ ಕಳೆಯಲಿ ಎಂದು ಹೇಳಿ ಕಳಿಸಿದೆ. ಆಗಾದರೂ ಪಶ್ಚಾತ್ತಾಪ ಮೂಡಬಹುದೇ ನೋಡೋಣ.

  • ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

    ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

    ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ.

    ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಗುರುವಾರ ಬೆಳಗ್ಗೆ ರಾಜಭವನದಲ್ಲಿ ಬಿಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂತಸ ಗಳಿಗೆಯಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಬೆಳಗ್ಗೆ ಸರ್ಕಾರ ರಚನೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಿತು. ಶಾಸಕಾಂಗದ ನಾಯಕರಾಗಿ ಯಡಿಯೂರಪ್ಪನವರನ್ನು ಆಯ್ಕೆ ಮಾಡಿದ ಬಳಿಕ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ಸ್ಥಾಪನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

    ಸಂಜೆಯ ವೇಳೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದರು. ಹೀಗಾಗಿ ರಾಜ್ಯಪಾಲರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಹೆಚ್ಚಿತ್ತು. ಈಗ ರಾಜ್ಯಪಾಲರು ಬಿಜೆಪಿಗೆ ಅನುಮತಿ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗುವ ಸಾಧ್ಯತೆಯಿದೆ.

    ಬಿಎಸ್ ಯಡಿಯೂರಪ್ಪ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಈಗಾಗಲೇ ಅರ್ಚಕರು ಆಗಮಿಸಿದ್ದಾರೆ.

    https://twitter.com/nimmasuresh/status/996758894994182145

  • ಎಸಿಬಿ ಅಂದ್ರೆ `ಅಪ್ಪಟ ಕಾಂಗ್ರೆಸ್ ಬ್ಯುರೋ’: ಸುರೇಶ್ ಕುಮಾರ್

    ಎಸಿಬಿ ಅಂದ್ರೆ `ಅಪ್ಪಟ ಕಾಂಗ್ರೆಸ್ ಬ್ಯುರೋ’: ಸುರೇಶ್ ಕುಮಾರ್

    ಬೆಂಗಳೂರು: ಎಸಿಬಿ ಎಂದರೆ ಅಪ್ಪಟ ಕಾಂಗ್ರೆಸ್ ಬ್ಯುರೋ ಅಂತ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

    ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಈ ಬಗ್ಗೆ ಬರೆದುಕೊಂಡ ಸಚಿವರು, ಎಸಿಬಿ ರಚನೆಯ ಸಂದರ್ಭದಲ್ಲಿಯೇ ನಾವೆಲ್ಲರೂ ಅದರ ಹಿಂದಿನ ದುರಾಲೋಚನೆಯನ್ನು ಊಹಿಸಿದ್ದು ಇಂದು ಪೂರ್ತಿ ನಿಜವಾಗಿದೆ ಎಂದಿದ್ದಾರೆ.

    ಯಾವುದೇ ಸರಕಾರ ಲೋಕಾಯುಕ್ತ ಸ್ಥಾನದಲ್ಲಿ ಅಥವಾ ಅದಕ್ಕೆ ಪೂರಕವಾಗಿ ಮತ್ತೊಂದು ಸಂಸ್ಥೆಯನ್ನು ರಚಿಸುವಾಗ ಉದ್ದೇಶ ಮಹತ್ವದ್ದಾಗಿರಬೇಕಿತ್ತು. ಆದರೆ ಚರ್ಚೆಯ ಸಂದರ್ಭದಲ್ಲಿಯೇ ನಾವು ಎಸಿಬಿ ರಚನೆ ಹಿಂದಿನ ಕೆಟ್ಟ ಉದ್ದೇಶದ ಬಗ್ಗೆ ತಿಳಿಸಿದ್ದೆವು. ಇಂದು ಎಸಿಬಿ ರಾಜ್ಯ ಕಾಂಗ್ರೆಸ್ ಸರಕಾರದ ಸೇಡಿನ ರಾಜಕಾರಣದ ಒಂದು ಸಾಧನವಾಗಿಬಿಟ್ಟಿದೆ ಅಂತ ಹೇಳಿದ್ದಾರೆ.

    ಈ ಸಂಸ್ಥೆ ಇರುವುದೇ ಆಡಳಿತ ಕಾಂಗ್ರೆಸ್ ಪಕ್ಷದವರಿಗೆ ಯದ್ವಾ ತದ್ವಾ ಸ್ಪೀಡಿನಲ್ಲಿ ಕ್ಲೀನ್ ಚಿಟ್ ಕೊಡುವುದಕ್ಕೆ, ವಿರೋಧ ಪಕ್ಷದವರನ್ನು ಅದರಲ್ಲಿಯೂ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಬೇಕಾದ ರೀತಿಯಲ್ಲಿ ಕೇಸುಗಳನ್ನು ದಾಖಲಿಸಿ, ಬೇಕಾದ ರೀತಿ ಹಿಂಸೆ ಕೊಡಲು ಎಂಬುದು ಸ್ಪಷ್ಟವಾಗಿಬಿಟ್ಟಿದೆ ಅಂದಿದ್ದಾರೆ.

    ಕಾಂಗ್ರೆಸ್ ಪಕ್ಷದ ಆದೇಶಕ್ಕೆ ಕುಣಿಯದಿದ್ದರೆ, ಎಸಿಬಿ ಅಧಿಕಾರಿಗಳ ಎತ್ತಂಗಡಿ ಹೇಗೆ ರಾತ್ರೋರಾತ್ರಿ ಆಗುತ್ತದೆ ಎಂಬುದೂ ಈಗ ಎಲ್ಲರಿಗೂ ಗೊತ್ತಾಗಿಬಿಟ್ಟಿದೆ. ಎಸಿಬಿ ಇರುವುದೇ ಕಾಂಗ್ರೆಸ್ ಸರ್ಕಾರದ ಆಜ್ಞೆಗಳನ್ನು ಪರಿಪಾಲಿಸಲು. ಎಸಿಬಿ, ಆಡಳಿತ ಕಾಂಗ್ರೆಸ್ ಪಕ್ಷದ ಸಂಘಟನೆಯ ಒಂದು ಘಟಕ ಆಗಿಬಿಟ್ಟಿದೆ ಅಥವಾ ಎಸಿಬಿ ಅಂದರೆ “ಅಪ್ಪಟ ಕಾಂಗ್ರೆಸ್ ಬ್ಯೂರೋ” ಆಗಿದೆ! ಅಂತ ಸಚಿವರು ಅಭಿಪ್ರಾಯಿಸಿದ್ದಾರೆ.