Tag: Surpur

  • ಯಾದಗಿರಿ | ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿ

    ಯಾದಗಿರಿ | ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿ

    ಯಾದಗಿರಿ: ಹೃದಯಾಘಾತಕ್ಕೆ ಬಲಿಯಾಗಿದ್ದ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಸುರಪುರ (Surpur) ತಾಲೂಕಿನ ಕೆಂಭಾವಿಯಲ್ಲಿ (Kembhavi) ನಡೆದಿದೆ.ಇದನ್ನೂ ಓದಿ: ಅತ್ಯಾಚಾರ ಆರೋಪದಲ್ಲಿ ಬಂಧನ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ

    ತಮ್ಮ ಇರ್ಫಾನ್ ಪೇಶಮಾಮ್ (38) ಹಾಗೂ ಅಣ್ಣ ಶಮಶುದ್ದೀನ್ ಪೇಶಮಾಮ್ (42) ಮೃತರು.

    ಮಂಗಳವಾರ (ಸೆ.2) ಬೆಳಿಗ್ಗೆ ತಮ್ಮ ಇರ್ಫಾನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಈ ಸುದ್ದಿ ತಿಳಿದ ಅಣ್ಣ ಶಮಶುದ್ದೀನ್ ಗಾಬರಿಯಲ್ಲಿಯೇ ತಮ್ಮನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಮಾರ್ಗಮಧ್ಯದಲ್ಲಿಯೇ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ಮೋದಿ ತಿರುಗೇಟು

  • ಯಾದಗಿರಿ | ಕಲುಷಿತ ನೀರು ಸೇವನೆ ಶಂಕೆ – ಮೂವರು ಸಾವು, 20 ಮಂದಿ ಅಸ್ವಸ್ಥ

    ಯಾದಗಿರಿ | ಕಲುಷಿತ ನೀರು ಸೇವನೆ ಶಂಕೆ – ಮೂವರು ಸಾವು, 20 ಮಂದಿ ಅಸ್ವಸ್ಥ

    – ಆರು ಜನರ ಸ್ಥಿತಿ ಗಂಭೀರ

    ಯಾದಗಿರಿ: ಜಿಲ್ಲೆಯ ಸುರಪುರ (Surpur) ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ತಿಪ್ಪನಟಗಿ ಗ್ರಾಮದ ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು.ಇದನ್ನೂ ಓದಿ: ಬೇರೆ ಹೆಣ್ಣಿನ ಸಹವಾಸ, ಪತ್ನಿಗೆ ಕಿರುಕುಳ – ಡಿವೈಎಸ್‌ಪಿ ವಿರುದ್ಧ ಎಫ್‌ಐಆರ್‌

    ಕಳೆದ ಹತ್ತು ದಿನಗಳಿಂದ ತಿಪ್ಪನಟಗಿ ಗ್ರಾಮದ ಹಲವರು ವಾಂತಿ, ಭೇದಿಯಿಂದ ಬಳಲಿ, ಅಸ್ವಸ್ಥರಾಗುತ್ತಿದ್ದರು. ಈ ಹಿನ್ನೆಲೆ ಜನರು ಚಿಕಿತ್ಸೆಗಾಗಿ ಬೇರೆ ಬೇರೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಆದರೆ ದಾಖಲಾದ ಮೂರೇ ದಿನಗಳಲ್ಲಿ ಮೂರು ಜನರು ಸಾವನ್ನಪ್ಪಿದ್ದು, ಆರು ಜನರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರು ಚೇತರಿಸಿಕೊಂಡಿದ್ದು, 20 ಜನರು ಅಸ್ವಸ್ಥರಾಗಿದ್ದಾರೆ.

    ಈ ಹಿನ್ನೆಲೆ ಸ್ಥಳಕ್ಕೆ ಸುರಪುರ ಟಿಹೆಚ್‌ಓ (THO) ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವರದಿ ನೀಡುವಂತೆ ವೈದ್ಯರಿಗೆ ತಿಳಿಸಿದ್ದಾರೆ.

    ಈ ಸಂಬಂಧ ಯಾದಗಿರಿ (Yadagiri) ಡಿಹೆಚ್‌ಓ (DHO) ಡಾ. ಮಹೇಶ್ ಬಿರಾದಾರ ಪ್ರತಿಕ್ರಿಯೆ ನೀಡಿದ್ದು, ತಿಪ್ಪನಟಗಿ ಗ್ರಾಮದಲ್ಲಿನ ವಾಂತಿ-ಭೇದಿ ಪ್ರಕರಣಗಳು ನಮ್ಮ ಗಮನಕ್ಕೆ ಬಂದಿದೆ. ನಮ್ಮ ಆರೋಗ್ಯ ಇಲಾಖೆಯ ಟಿಹೆಚ್‌ಓ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಸಾವಿಗೀಡಾದವರು ಹಲವು ಕಾಯಿಲೆಯಿಂದ ಬಳಲುತ್ತಿದ್ದರು. ಜೊತೆಗೆ ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಮೆದುಳಿನ ರೋಗದಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ವಾಂತಿ-ಭೇದಿ ಸಾವಿಗೆ ನಿಖರ ಕಾರಣವಲ್ಲ. ಸದ್ಯ ಇದೇ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿದ್ದಾರೆ. ಗ್ರಾಮಸ್ಥರು ಆತಂಕಪಡುವ ಪರಿಸ್ಥಿತಿ ಇಲ್ಲ ಎಂದರು.

    ಸಾವಿಗೆ ನಿಖರವಾದ ಕಾರಣದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಳೆದ ಹತ್ತು ದಿನಗಳ ಹಿಂದೆ ಕುಡಿಯುವ ನೀರನ್ನು ತಪಾಸಣೆ ಮಾಡಲಾಗಿತ್ತು. ವರದಿಯಲ್ಲಿ ನೀರು ಕುಡಿಯಲು ಯೋಗ್ಯವಿದೆ ಎಂದು ಬಂದಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಸಂಪೂರ್ಣ ತನಿಖೆ ಬಳಿಕ ಎಲ್ಲಾ ಸತ್ಯ ಹೊರಬರಲಿದೆ ಎಂದ ತಿಳಿಸಿದರು. ಇದನ್ನೂ ಓದಿ: ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

  • ಪೊಲೀಸ್ ಠಾಣೆಗೆ ಬೆಂಕಿ ಹಚ್ಚತ್ತೀನಿ-ಮಾಜಿ ಶಾಸಕನ ಅವಾಜ್

    ಪೊಲೀಸ್ ಠಾಣೆಗೆ ಬೆಂಕಿ ಹಚ್ಚತ್ತೀನಿ-ಮಾಜಿ ಶಾಸಕನ ಅವಾಜ್

    ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಪೊಲೀಸರ ಮೇಲೆ ದರ್ಪ ಮೆರೆದಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಶಾಸಕರು ಸೇರಿದಂತೆ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಶುಕ್ರವಾರ ಬೆಳಗ್ಗೆ ಠಾಣೆಗೆ ಮಾಜಿ ಶಾಸಕರ ಪುತ್ರ ರಾಜಾ ವೇಣುಗೋಪಾಲ ನಾಯಕ ಹಾಗು ಸಂಗಡಿಗರು ಕರ್ತವ್ಯ ನಿರತ ಶಂಭುರಾವ್, ಬಸವರಾಜ್ ಮತ್ತು ಶರಣಗೌಡ ಎಂಬವರಿಗೆ ಅವಾಚ್ಯಪದಗಳಿಂದ ನಿಂದಿಸಿದ್ದಾರೆ. ಕೆಲ ಸಮಯದ ಬಳಿಕ ಠಾಣೆಗೆ ಬಂದ ರಾಜಾ ವೆಂಕಟಪ್ಪ ನಾಯಕ, ಡಿಎಸ್‍ಪಿ ಮತ್ತು ಸಿಪಿಐ ಎಲ್ಲಿ? ಅವರನ್ನು ಕರೆಸಿ ಎಂದು ಅವಾಚ್ಯಪದಗಳನ್ನು ಬಳಕೆ ಮಾಡಿ ಬೈದಿದ್ದಾರೆ. ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ ಎಂದು ಕರ್ತವ್ಯ ನಿರತ ಪೊಲೀಸರಿಗೆ ಅವಾಜ್ ಹಾಕಿ ಎಲ್ಲರೂ ಹಿಂದಿರುಗಿದ್ದಾರೆ.

    ಘಟನೆ ಬಳಿಕ ಪೊಲೀಸ್ ಸಿಬ್ಬಂದಿ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಜೀವಬೆದರಿಕೆ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಸೇರಿದಂತೆ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಧಿಕಾರಿಗಳ ನಿರ್ಲಕ್ಷ್ಯ: 8 ದಿನಗಳಿಂದ ತೊಗರಿ ಮಾರಾಟ ಮಾಡಲು ಹರಸಾಹಸ ಪಡುತ್ತಿದ್ದಾರೆ ಯಾದಗಿರಿ ರೈತರು

    ಅಧಿಕಾರಿಗಳ ನಿರ್ಲಕ್ಷ್ಯ: 8 ದಿನಗಳಿಂದ ತೊಗರಿ ಮಾರಾಟ ಮಾಡಲು ಹರಸಾಹಸ ಪಡುತ್ತಿದ್ದಾರೆ ಯಾದಗಿರಿ ರೈತರು

    ಯಾದಗಿರಿ: ಜಿಲ್ಲೆಯಲ್ಲಿ ಕಳೆದ 8 ದಿನಗಳಿಂದ ತೊಗರಿ ಕೇಂದ್ರ ಬಂದ್ ಆದ ಪರಿಣಾಮ ರೈತರು ತಾವು ಕಷ್ಟದಿಂದ ಬೆಳೆದ ತೊಗರಿಯನ್ನು ಮಾರಾಟ ಮಾಡಲು ಕಷ್ಟಪಡುತ್ತಿದ್ದಾರೆ.

    ಕಳೆದ 8 ದಿನಗಳಿಂದ ರೈತರು ಸಾವಿರಾರು ಕ್ವಿಂಟಲ್ ತೊಗರಿ ಧಾನ್ಯಗಳನ್ನು ವಾಹನದಲ್ಲಿ ಹಾಕಿಕೊಂಡು ಕೃಷಿ ಉತ್ಪನ್ನ ಮಾರುಕಟ್ಟೆಗೆ ತೆಗೆದುಕೊಂಡು ಬರುತ್ತಿದ್ದಾರೆ. ಆದರೆ ತೊಗರಿ ಖರೀದಿ ಕೇಂದ್ರದಲ್ಲಿ ಖರೀದಿಸುವರು ಇಲ್ಲದಂತಾಗಿದೆ. ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಕುಸಿತದ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ವಿಂಟಲ್ ತೊಗರಿಗೆ 5500 ರೂಪಾಯಿಯ ಬೆಂಬಲ ಬೆಲೆಯೊಂದಿಗೆ ತೊಗರಿ ಖರೀದಿಸುತ್ತಿದೆ. ಕೇಂದ್ರ ಸರಕಾರದ ಭಾರತೀಯ ಆಹಾರ ನಿಗಮವು ತೊಗರಿ ಖರೀದಿ ಕೇಂದ್ರ ತೆಗೆದು ತೊಗರಿ ಖರೀದಿ ಮಾಡಲಾಗುತ್ತಿತ್ತು.

    ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಹೊರಭಾಗದ ಹಸನಾಪುರನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕಳೆದ 8 ದಿನಗಳಿಂದ ತೊಗರಿ ಖರೀದಿ ಕೇಂದ್ರಕ್ಕೆ ಅಧಿಕಾರಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ. ಭಾರತೀಯ ಆಹಾರ ನಿಗಮದ ಅಧಿಕಾರಿಗಳು ಖರೀದಿ ಮಾಡದೇ ನಿಷ್ಕಾಳಜಿ ತೋರಿಸುತ್ತಿದ್ದಾರೆ. ಈ ಹಿಂದೆ ಕೂಡ ಸಮರ್ಪಕವಾಗಿ ತೊಗರಿ ಖರೀದಿ ಮಾಡಿಲ್ಲ. ಈಗ ಮತ್ತೆ ರೈತರಿಂದ ತೊಗರಿ ಖರೀದಿ ಮಾಡಲು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಗಳು ಕೇಳಿ ಬರುತ್ತಿವೆ.

    ತೊಗರಿ ಖರೀದಿ ಕೇಂದ್ರ ಸ್ಥಗಿತ ಹಿನ್ನೆಲೆಯಲ್ಲಿ ಜಿಲ್ಲೆಯ ಅನ್ನದಾತರು ಕಂಗಾಲಾಗಿದ್ದಾರೆ. ಬಿಸಿಲಿನ ತಾಪವೂ ಹೆಚ್ಚಾಗಿದ್ದು ರೈತರು ತಾವು ಬೆಳೆದ ತೊಗರಿಯನ್ನು ತೆಗೆದುಕೊಂಡು ಖರೀದಿ ಕೇಂದ್ರಕ್ಕೆ ಬಂದು ಹೋಗುತ್ತಿದ್ದಾರೆ. ಇನ್ನು ಕೆಲ ರೈತರು ಸಾಗಾಟ ವೆಚ್ಚಕ್ಕೆ ಹೆದರಿ ಎಪಿಎಂಸಿಯಲ್ಲಿ ಕುಳಿತಿದ್ದಾರೆ. ಹಗಲು ರಾತ್ರಿಯನ್ನದೇ ತೊಗರಿ ಯಾರಾದ್ರು ಕಳ್ಳತನ ಮಾಡಬಹುದೆಂದು ತಾವು ಮಾರಾಟಕ್ಕೆ ತಂದಿದ್ದ ಧಾನ್ಯಗಳನ್ನು ರಕ್ಷಿಸಿಕೊಳ್ಳುತ್ತಿದ್ದಾರೆ. ಸರಿಯಾಗಿ ಊಟ ನಿದ್ದೆ ಇಲ್ಲದೇ ರೈತರು ತೊಗರಿ ಖರೀದಿ ಕೇಂದ್ರದ ಬಾಗಿಲು ಯಾವಾಗ ತೆಗೆಯುತ್ತೆ ಎಂದು ಕಾಯುತ್ತಿದ್ದಾರೆ. ಇನ್ನು ಮುಂದಾದ್ರು ಈ ಅಧಿಕಾರಿಗಳ ಮೇಲೆ ಸರ್ಕಾರ ಕ್ರಮ ಜರುಗಿಸುವ ಮೂಲಕ ರೈತರ ನೆರವಿಗೆ ಬರಬೇಕಿದೆ.