Tag: Surya Kumar Yadav

  • ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸೇನೆಗೆ ಗೆಲುವು ಅರ್ಪಣೆ ಎಂದ ಸೂರ್ಯಗೆ ಐಸಿಸಿ ವಾರ್ನಿಂಗ್‌

    ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸೇನೆಗೆ ಗೆಲುವು ಅರ್ಪಣೆ ಎಂದ ಸೂರ್ಯಗೆ ಐಸಿಸಿ ವಾರ್ನಿಂಗ್‌

    ದುಬೈ: ಪಹಲ್ಗಾಮ್‌ ದಾಳಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಟೀಂ ಇಂಡಿಯಾ (Team India) ನಾಯಕ ಸೂರ್ಯಕುಮಾರ್‌ ಯಾದವ್‌ಗೆ (Suryakumar Yadav) ಐಸಿಸಿ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

    ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ನೀಡಿದ ದೂರನ್ನು ಸ್ವೀಕರಿಸಿದ ಐಸಿಸಿ (ICC) ಸೂರ್ಯಕುಮಾರ್‌ ಯಾದವ್‌ ಅವರ ವಿಚಾರಣೆ ನಡೆಸಿದೆ.

    ಪಿಸಿಬಿ ಸಲ್ಲಿಸಿದ ಎಲ್ಲಾ ಪುರಾವೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಸೂರ್ಯಕುಮಾರ್ ಅವರ ಹೇಳಿಕೆಗಳು ಕ್ರೀಡಾ ಸ್ಪೂರ್ತಿಗೆ ವಿರುದ್ಧವಾಗಿದೆ. ಹೀಗಾಗಿ ಸೂರ್ಯಕುಮಾರ್‌ ವಿರುದ್ಧ ಆರೋಪ ಹೊರಿಸುವಂತೆ ಮ್ಯಾಚ್‌ ರೆಫ್ರೀ ರಿಚಿ ರಿಚರ್ಡ್ಸನ್ ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ.  ಇದನ್ನೂ ಓದಿ:  ಫಿಫ್ಟಿ ಬಾರಿಸಿ ಫರ್ಹಾನ್‌ ಗನ್‌ ಸೆಲೆಬ್ರೇಷನ್ – ಪೆಹಲ್ಗಾಮ್ ದಾಳಿಯ ಉಗ್ರರಿಗೆ ಹೋಲಿಸಿದ ನೆಟ್ಟಿಗರು

    ಪಾಕಿಸ್ತಾನದ ಬ್ಯಾಟರ್‌ ಫರ್ಹಾನ್ ಸಾಹಿಬ್‌ಜಾದಾ ಮತ್ತು ಹ್ಯಾರಿಸ್ ರೌಫ್ ಮೈದಾನದಲ್ಲಿ ತೋರಿದ ವರ್ತನೆಗೆ ಸಂಬಂಧಿಸಿಂತೆ ಬಿಸಿಸಿಐ ನೀಡಿದ ದೂರಿನ ಬಗ್ಗೆ ನಾಳೆ ಇಬ್ಬರ ವಿಚಾರಣೆ ನಡೆಯಲಿದೆ.  ಎರಡೂ ತಂಡಗಳ ಆಟಗಾರರ ವಿರುದ್ಧ ಐಸಿಸಿ ಶಿಸ್ತುಕ್ರಮವನ್ನು ಕೈಗೊಂಡು ದಂಡ ವಿಧಿಸುವ ಸಾಧ್ಯತೆಯಿದೆ. ಇದನ್ನೂ ಓದಿ:  ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿದ ರೌಫ್‌ಗೆ ರುಬ್ಬಿದ ನೆಟ್ಟಿಗರು – ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಕಿಡಿ

    ಸೂರ್ಯ ಹೇಳಿದ್ದೇನು?
    ಸೆಪ್ಟೆಂಬರ್ 14 ರಂದು ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ನಂತರ ಮಾತನಾಡಿದ ಸೂರ್ಯ, ಪಹಲ್ಗಾಮ್ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು‌ ನಿಲ್ಲುತ್ತೇವೆ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆ. ಶೌರ್ಯವನ್ನು ಪ್ರದರ್ಶಿಸಿದ ನಮ್ಮ ಎಲ್ಲಾ ಸಶಸ್ತ್ರ ಪಡೆಗಳಿಗೆ ಈ ಗೆಲುವನ್ನು ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ಎಂದು ಹೇಳಿದ್ದರು.

  • Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಮುಂಬೈ: ಏಷ್ಯಾ ಕಪ್‌ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ. ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ.

    ಮಂಗಳವಾರ ಮಧ್ಯಾಹ್ನ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಘೋಷಿಸಲಾಯಿತು. ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ. ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್‌ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್‌ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.

    ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್.

    ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್. ಇದನ್ನೂ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

  • 161 ರನ್‌ಗೆ ಲಕ್ನೋ ಆಲೌಟ್‌ – ಮುಂಬೈಗೆ 54 ರನ್‌ಗಳ ಭರ್ಜರಿ ಜಯ

    161 ರನ್‌ಗೆ ಲಕ್ನೋ ಆಲೌಟ್‌ – ಮುಂಬೈಗೆ 54 ರನ್‌ಗಳ ಭರ್ಜರಿ ಜಯ

    – ಆರ್‌ಸಿಬಿ, ಡೆಲ್ಲಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಪಾಂಡ್ಯ ಪಡೆ

    ಮುಂಬೈ: ಆರಂಭದಲ್ಲಿ ಮುಗ್ಗರಿಸಿ ನಂತರ ಸತತ ಗೆಲುವುಗಳೊಂದಿಗೆ ಮಿಂಚುತ್ತಿರುವ ಮುಂಬೈ ಇಂದು ಮತ್ತೊಂದು ಜಯವನ್ನು ಮುಡಿಗೇರಿಸಿಕೊಂಡಿದೆ. ಪಾಂಡ್ಯ ಪಡೆ ಲಕ್ನೋ ವಿರುದ್ಧ 54 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಪಾಯಿಂಟ್‌ ಪಟ್ಟಿಯಲ್ಲಿ ಆರ್‌ಸಿಬಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 20 ಓವರ್‌ಗೆ 7 ವಿಕೆಟ್‌ ನಷ್ಟಕ್ಕೆ 215 ರನ್‌ ಗಳಿಸಿತು. 216 ರನ್‌ ಗುರಿ ಬೆನ್ನತ್ತಿದ ಲಕ್ನೋ ನಿಗದಿತ ಓವರ್‌ಗೆ 161 ರನ್‌ ಗಳಿಸಿ ಆಟೌಟ್‌ ಆಗಿ ಹೀನಾಯ ಸೋಲು ಕಂಡಿತು. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್‌ ಅಫ್ರಿದಿ

    ಮುಂಬೈ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದರು. ರಯಾನ್ ರಿಕೆಲ್ಟನ್ ಮತ್ತು ಸೂರ್ಯಕುಮಾರ್‌ ಯಾದವ್‌ ಅರ್ಧಶತಕ ಆಟದ ಮೂಲಕ ಗಮನ ಸೆಳೆದರು. ರಿಯಾನ್‌ 32 ಬಾಲ್‌ಗೆ 6 ಫೋರ್‌, 4 ಸಿಕ್ಸರ್‌ನೊಂದಿಗೆ 58 ಹಾಗೂ ಸೂರ್ಯಕುಮಾರ್‌ ಯಾದವ್‌ 28 ಬಾಲ್‌ಗೆ 4 ಫೋರ್‌, 4 ಸಿಕ್ಸರ್‌ನೊಂದಿಗೆ 54 ರನ್‌ ಗಳಿಸಿ ತಂಡಕ್ಕೆ ನೆರವಾದರು. ವಿಲ್‌ ಜಾಕ್ಸ್‌ 29, ನಮನ್ ಧೀರ್ (ಔಟಾಗದೇ) 25, ಕಾರ್ಬಿನ್ ಬಾಷ್ 20 ರನ್‌ಗಳೊಂದಿಗೆ ಮುಂಬೈ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು.

    ಲಕ್ನೋ ಪರ ಮಯಾಂಕ್‌ ಯಾದವ್‌, ಆವೇಶ್‌ ಖಾನ್‌ ತಲಾ 2, ಪ್ರಿನ್ಸ್‌ ಯಾದವ್‌, ದಿಗ್ವೇಶ್‌ ರಾಥಿ, ರವಿ ಬಿಷ್ಣೋಯ್‌ ತಲಾ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಈಡನ್‌ ಗಾರ್ಡನ್‌ನಲ್ಲಿ ಗೆದ್ದ ಮಳೆ – PBKS vs KKR ಪಂದ್ಯ ರದ್ದು, 4ನೇ ಸ್ಥಾನಕ್ಕೇರಿದ ಪಂಜಾಬ್‌

    ಮುಂಬೈ ನೀಡಿ 216 ರನ್‌ ಗುರಿ ನೀಡಿದ ಲಕ್ನೋ ಬ್ಯಾಟಿಂಗ್‌ನಲ್ಲಿ ಮುಗ್ಗಿರಿಸಿತು. 6 ಓವರ್‌ ಹೊತ್ತಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಮಿಚೆಲ್‌ ಮಾರ್ಷ್‌ 34, ಆಯುಷ್‌ ಬದೋನಿ 35, ನಿಕೊಲಸ್‌ ಪೂರನ್‌ 27, ಡೇವಿಡ್‌ ಮಿಲ್ಲರ್‌ 24 ರನ್‌ ಗಳಿಸಿದರು.

    ಉಳಿದಂತೆ ಯಾವ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು. ಈ ಆವೃತ್ತಿಯಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿರುವ ಕ್ಯಾಪ್ಟನ್ ರಿಷಬ್‌ ಪಂತ್‌‌ ಕಳೆಗುಂದಿದ್ದಾರೆ. ಪಂತ್ ಕೇವಲ 4 ರನ್‌ ಗಳಿಸಿ ಔಟಾಗಿದ್ದು,‌ ನಿರಾಸೆ ಮೂಡಿಸಿತು. ಲಕ್ನೋ ಬ್ಯಾಟರ್‌ಗಳನ್ನು ಪಾಂಡ್ಯ ಪಡೆ ಬೌಲರ್‌ಗಳು ಚೆಂಡಾಡಿದರು. ಕಳಪೆ ಬ್ಯಾಟಿಂಗ್‌ನಿಂದ ಲಕ್ನೋ ಅಂತಿಮವಾಗಿ 20 ಓವರ್‌ಗೆ 161 ರನ್‌ಗೆ ಆಲೌಟ್‌ ಆಯಿತು.

    ಮುಂಬೈ ಪರ ಜಸ್ಪ್ರಿತ್‌ ಬುಮ್ರಾ ಕಮಾಲ್‌ ಮಾಡಿದರು. ಪ್ರಮುಖ 4 ವಿಕೆಟ್‌ ಕಿತ್ತು ಮಿಂಚಿದರು. ಇವರ ಜೊತೆ ಜೊತೆಗೆ ಟ್ರೆಂಟ್‌ ಬೌಲ್ಟ್‌ ಕೂಡ 3 ವಿಕೆಟ್‌ ಕಬಳಿಸಿ ನಿರ್ಣಾಯಕ ಪಾತ್ರ ವಹಿಸಿದರು. ವಿಲ್‌ ಜಾಕ್ಸ್‌ 2, ಕಾರ್ಬಿನ್ ಬಾಷ್ 1 ವಿಕೆಟ್‌ ಪಡೆದರು.

  • ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಪತ್ನಿಯೊಂದಿಗೆ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೂರ್ಯಕುಮಾರ್‌ ಭೇಟಿ

    ಆಫ್ರಿಕಾ ವಿರುದ್ಧ ಸರಣಿ ಗೆದ್ದ ಬಳಿಕ ಪತ್ನಿಯೊಂದಿಗೆ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸೂರ್ಯಕುಮಾರ್‌ ಭೇಟಿ

    ಮಂಗಳೂರು: ಟೀಂ ಇಂಡಿಯಾದ ಟಿ20 ತಂಡದ ನಾಯಕ ಸೂರ್ಯ ಕುಮಾರ್ ಯಾದವ್ (Surya Kumar yadav) ಅವರು ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಭೇಟಿ ನೀಡಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿಯೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಸೂರ್ಯ ಕುಮಾರ್‌ ಯಾದವ್‌ ಆಶ್ಲೇಷ ಬಲಿ ಪೂಜೆ ,ಮಹಾಪೂಜೆ ಅಭಿಷೇಕವನ್ನು ನೆರವೇರಿಸಿದರು. ದೇವಸ್ಥಾನದ ವತಿಯಿಂದ ಯಾದವ್ ದಂಪತಿಗೆ ಗೌರವ ಸಮರ್ಪಿಸಲಾಯಿತು.

    ಈ ಹಿಂದೆ ಜುಲೈನಲ್ಲಿ ಟಿ20 ಕ್ರಿಕೆಟ್‌ ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್‌ ಮತ್ತು ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದನ್ನೂ ಓದಿ:IPL Mega Auction 2025: ಹರಾಜಲ್ಲಿ 13ರ ಬಾಲಕ!

    ನ.15 ರಂದು ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯ ನಡೆದಿತ್ತು. ದಾಖಲೆಯ 135 ರನ್‌ಗಳ ಜಯದೊಂದಿಗೆ 4 ಪಂದ್ಯಗಳ ಟಿ 20 (T20) ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದುಕೊಂಡಿತ್ತು.

     

  • ಸೂರ್ಯಕುಮಾರ್ ಯಾದವ್ ಕೈಗೆ ಗಂಭೀರ ಗಾಯ

    ಸೂರ್ಯಕುಮಾರ್ ಯಾದವ್ ಕೈಗೆ ಗಂಭೀರ ಗಾಯ

    ನವದೆಹಲಿ: ಬಾಂಗ್ಲಾದೇಶ (Bangladesh) ವಿರುದ್ಧದ ಟೆಸ್ಟ್ ಪಂದ್ಯಗಳ (Test Cricket) ಮುಂಚೆಯೇ ಭಾರತ ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಕೈಗೆ ಗಂಭೀರ ಗಾಯವಾಗಿದೆ.

    ಸೂರ್ಯಕುಮಾರ್ ಯಾದವ್ ಅವರು ಬುಚ್ಚಿ ಬಾಬು ಪಂದ್ಯಾವಳಿಯಲ್ಲಿ ಮುಂಬೈ (Mumbai) ತಂಡದ ಪರವಾಗಿ ಆಟವಾಡುತ್ತಿದ್ದಾರೆ. ತಮಿಳನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್‌ ಮಾಡುವಾಗ ಅವರ ಕೈಗೆ ಗಂಭೀರ ಗಾಯವಾಗಿದೆ.

    ಸೆ.5 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ (Duleep Trophy) ಸೂರ್ಯಕುಮಾರ್ ಅವರ ಹೆಸರಿದೆ. ಸೂರ್ಯಕುಮಾರ್‌ ಅವರ ಕೈ ಗಾಯ ಯಾವ ಪ್ರಮಾಣದ್ದು ಎನ್ನುವುದು ತಿಳಿದು ಬಂದಿಲ್ಲ.  ಇದನ್ನೂ ಓದಿ: 2025ರ ಐಪಿಎಲ್‌ನಲ್ಲೂ ಮಹಿ ಅಖಾಡಕ್ಕಿಳಿಯೋದು ಫಿಕ್ಸ್‌ – ಸುಳಿವು ಕೊಟ್ಟ ರೈನಾ

     

    2024ರ ಟಿ20 ವಿಶ್ವಕಪ್ ಚಾಂಪಿಯನ್ ಆದ ನಂತರ ಭಾರತ ತಂಡವು ಶ್ರೀಲಂಕಾ ತಂಡದ ವಿರುದ್ಧ ಸರಣಿ ಪಂದ್ಯಗಳನ್ನಾಡಿತ್ತು. ಸೂರ್ಯಕುಮಾರ್‌ ಯಾದವ್‌ ನೇತೃತ್ವದ ಟಿ20 ತಂಡ ಚಾಂಪಿಯನ್‌ ಆಗಿತ್ತು. ಕೆಲ ದಿನಗಳ ಹಿಂದೆ ಸೂರ್ಯಕುಮಾರ್‌ ಯಾದವ್‌ ಟೆಸ್ಟ್‌ ಪಂದ್ಯಗಳಿಗೆ ಮರಳುವ ಬಗ್ಗೆ ಮಾತನಾಡಿದ್ದರು. ಇದನ್ನೂ ಓದಿ: ವಿದ್ಯಾರ್ಥಿ ಭವನ ಹೋಟೆಲ್‌ನಲ್ಲಿ ಮಸಾಲೆ ದೋಸೆ ಸವಿದ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ

    ಸೆ.19 ರಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಸರಣಿ ಪಂದ್ಯಗಳು ಆಡಲಿದೆ. ದೇಶೀಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆಗಾರರು ಆಯ್ಕೆ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ಬಿಸಿಸಿಐ ಸೂರ್ಯಕುಮಾರ್‌ ಗಾಯದ ಬಗ್ಗೆ ಯಾವುದೇ ವಿವರ ನೀಡಿಲ್ಲ.


     

  • ಟಿ20 ವಿಶ್ವಕಪ್ ಗೆದ್ದ ಬಳಿಕ ಉಡುಪಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಭೇಟಿ

    ಟಿ20 ವಿಶ್ವಕಪ್ ಗೆದ್ದ ಬಳಿಕ ಉಡುಪಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಭೇಟಿ

    – ಪತ್ನಿ ಜೊತೆಗೆ ಆಗಮಿಸಿ ಉಡುಪಿ ದೇವಸ್ಥಾನದಲ್ಲಿ ಸ್ಟಾರ್ ಕ್ರಿಕೆಟರ್ ಪೂಜೆ ಸಲ್ಲಿಕೆ

    ಉಡುಪಿ: ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

    ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸ್ಟಾರ್ ಕ್ರಿಕೆಟರ್‌ಗೆ ಭವ್ಯ ಸ್ವಾಗತ ಕೋರಲಾಯಿತು.

    ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ದಂಪತಿ ಭೇಟಿ ನೀಡಿದರು. ದೇವಸ್ಥಾನದ ನಿರ್ಮಾಣ, ಕೆತ್ತನೆ ಶಿಲ್ಪಕಲೆಯ ಬಗ್ಗೆ ಕ್ರಿಕೆಟಿಗ ಮಾಹಿತಿ ಪಡೆದುಕೊಂಡರು.

    ಇಳಕಲ್ ಶಿಲೆಯಲ್ಲಿ ವಿಶಿಷ್ಟ ದೇವಾಲಯ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ಸುಮಾರು 40 ಕೋಟಿ ರೂ. ವೆಚ್ಚ ಮಾಡಲಾಗಿದೆ. ಗರ್ಭಗುಡಿ, ಉಚ್ಚಂಗಿ ಗುಡಿ, ಸುತ್ತುಪೌಳಿ ಕಾಮಗಾರಿ ಶೇ.90 ಭಾಗ ಪೂರ್ಣವಾಗಿದೆ. ಮಾರ್ಚ್ 2 ರಂದು ಬ್ರಹ್ಮ ಕಲಶ ಮಹೋತ್ಸವ ಜರುಗಲಿದೆ. ಒಟ್ಟು ಒಂಬತ್ತು ದಿವಸಗಳ ಕಾಲ ಧಾರ್ಮಿಕ ವಿಧಿವಿಧಾನ ನೆರವೇರಲಿದೆ.

    ದೇವಸ್ಥಾನಕ್ಕೆ ಭೇಟಿ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಯಿತು. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದೆ. ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ ಎಂದು ತಿಳಿಸಿದರು.

    ವರ್ಲ್ಡ್ಕಪ್ ಸೆಲೆಬ್ರೇಶನ್ ಜನಸ್ತೋಮ ನೋಡಿ ಬಹಳ ಖುಷಿಯಾಯಿತು. ಕಾಪುವಿನಲ್ಲಿ ಕೂಡ ಜನರು ಪ್ರೀತಿಯಿಂದ ಬರಮಾಡಿಕೊಂಡದ್ದು ಮನಸ್ಸಿಗೆ ಮುಟ್ಟಿತು. ದೇವಸ್ಥಾನದಲ್ಲಿ ಇಷ್ಟು ಮಂದಿ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಖುಷಿ ವ್ಯಕ್ತಪಡಿಸಿದರು.

    ‘ಕಾಪುದ ಅಮ್ಮ’ (ಕಾಪುವಿನ ತಾಯಿ) ಎಂದು ತುಳುವಿನಲ್ಲಿ ಮಾತನಾಡಿದ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್, ಟೀಮ್ ಇಂಡಿಯಾ ಕಪ್ತಾನನಾಗಿ ಕಾಪುವಿಗೆ ಬನ್ನಿ ಎಂದು ಅರ್ಚಕರು ಪ್ರಾರ್ಥನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿ, ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ. ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗಿದ್ದೇವೆ ಮನಸ್ಸಿಗೆ ಶಾಂತಿ ಸಿಕ್ಕಿದೆ ಎಂದು ಹೇಳಿದರು.

    ಸೂರ್ಯಕುಮಾರ್ ಪತ್ನಿ ದೇವಿಶಾ ಮಾತನಾಡಿ, ಕಾಪು ಮಾರಿಗುಡಿಗೆ ಬಂದು ಮನಸ್ಸಿಗೆ ಖುಷಿಯಾಗಿದೆ. ಐದು ವರ್ಷದ ಹಿಂದೆ ನಾವು ಒಮ್ಮೆ ಉಡುಪಿಗೆ ಬಂದಿದ್ದೆವು. ಮತ್ತೊಮ್ಮೆ ಕಾಪು ಅಮ್ಮನ ಭೇಟಿ ಮಾಡಬೇಕು ಎಂಬ ಇಚ್ಛೆ ಇತ್ತು. ಯಾವುದೇ ಟೂರ್ನಿ ಇಲ್ಲದಿದ್ದರೆ ದೇಗುಲ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಬರುತ್ತೇವೆ. ಕಾಪು ಮಾರಿಯಮ್ಮನನ್ನು ನೋಡಲು ಪತಿಯನ್ನೂ ಕರೆದುಕೊಂಡು ಬಂದಿದ್ದೇನೆ. ದೇವಿಯಲ್ಲಿ ಏನು ಪ್ರಾರ್ಥಿಸಿದ್ದೇನೆ ಎಂದು ಹೇಳುವುದಿಲ್ಲ. ದೇವರಿಗೆ ಸೇವೆ ಕೊಡಬೇಕು ಎಂಬ ಸಂಕಲ್ಪ ಇತ್ತು. ದೇವರಿಗೆ ಸಲ್ಲಿಸಿದ ಕಾಣಿಕೆಯನ್ನು ಹೇಳಿಕೊಳ್ಳಲು ಇಷ್ಟವಿಲ್ಲ. ಭಾರತವನ್ನು ಪ್ರತಿನಿಧಿಸಬೇಕು ಮತ್ತು ವರ್ಲ್ಡ್ ಕಪ್ ಗೆಲ್ಲಬೇಕು ಎಂಬುದು ಎಲ್ಲಾ ಕ್ರಿಕೆಟರ್‌ಗಳ ಕನಸು. ಒಂದು ಕನಸು ಸಾಕಾರಗೊಂಡಿದೆ ಎಂಬ ಖುಷಿ ಇದೆ. ಇಂತಹ ಹಲವಾರು ಕನಸುಗಳನ್ನು ಕಂಡು ಮುಂದೆ ಸಾಗಬೇಕಾಗಿದೆ ಎಂದರು.

  • ಟೀಂ ಇಂಡಿಯಾದಲ್ಲಿ ಆಡದಿದ್ರೂ ಐಪಿಎಲ್‍ನಲ್ಲಿ ಸಾಧನೆಗೈದ ಆಟಗಾರರು

    ಟೀಂ ಇಂಡಿಯಾದಲ್ಲಿ ಆಡದಿದ್ರೂ ಐಪಿಎಲ್‍ನಲ್ಲಿ ಸಾಧನೆಗೈದ ಆಟಗಾರರು

    ನವದೆಹಲಿ: ಐಪಿಎಲ್‍ನಲ್ಲಿ ಉತ್ತಮ ಸಾಧನೆ ಮಾಡಿದರು ಕೆಲ ಆಟಗಾರರು ಇನ್ನೂ ಟೀಂ ಇಂಡಿಯಾಗೆ ಆಯ್ಕೆಯಾಗುವಲ್ಲಿ ವಿಫಲರಾಗಿದ್ದಾರೆ. ಆದರೆ ಐಪಿಎಲ್‍ನಲ್ಲಿ ಮಾತ್ರ ಉತ್ತಮವಾಗಿ ಆಡಿಕೊಂಡು ಬರುತ್ತಿದ್ದಾರೆ.

    ಈ ಪಟ್ಟಿಯಲ್ಲಿ ನಮಗೆ ಮೊದಲು ಸಿಗುವುದು ಮುಂಬೈ ಇಂಡಿಯನ್ಸ್ ತಂಡ ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್, ಕಿಂಗ್ಸ್ ಇಲೆವೆನ್ ತಂಡದ ಸಂದೀಪ್ ಶರ್ಮಾ, ರಾಜಸ್ಥಾನ್ ರಾಯಲ್ಸ್ ತಂಡದ ರಾಹುಲ್ ತೆವಾಟಿಯಾ ಮತ್ತು ಶ್ರೇಯಸ್ ಗೋಪಾಲ್. ಈ ಎಲ್ಲರೂ ಉತ್ತಮವಾಗಿ ಆಡಿದರೂ ಕೂಡ ಟೀಂ ಇಂಡಿಯಾಗೆ ಸೆಲೆಕ್ಟ್ ಆಗುವಲ್ಲಿ ವಿಫಲರಾಗಿದ್ದಾರೆ.

    ಸೂರ್ಯ ಕುಮಾರ್ ಯಾದವ್: ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುವ ಯಾದವ್ ಓರ್ವ ಉತ್ತಮ ಬ್ಯಾಟ್ಸ್ ಮನ್ ಆಗಿ ಗುರುತಿಸಿಕೊಂಡಿದ್ದಾರೆ. ಐಪಿಎಲ್‍ನಲ್ಲಿ 101 ಪಂದ್ಯಗಳನ್ನು ಆಡಿರುವ ಸೂರ್ಯ 11 ಅರ್ಧಶತಕದ ಸಹಾಯದಿಂದ 2,024 ರನ್ ಸಿಡಿಸಿದ್ದಾರೆ. ಐಪಿಎಲ್-2020ರಲ್ಲಿ ಮುಂಬೈ ಇಂಡಿಯನ್ಸ್ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ಸೂರ್ಯ, 16 ಪಂದ್ಯಗಳಲ್ಲಿ 480 ರನ್ ಸಿಡಿಸಿ ಮಿಂಚಿದರು. ಜೊತೆಗೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗದ ಕಾರಣಕ್ಕೆ ವಿವಾದವನ್ನು ಮಾಡಿಕೊಂಡಿದ್ದರು.

    ಇಶಾನ್ ಕಿಶನ್: 22 ವರ್ಷದ ಈ ಮುಂಬೈ ಇಂಡಿಯನ್ಸ್ ಆಟಗಾರ ಈ ಬಾರಿಯ ಐಪಿಎಲ್‍ನಲ್ಲಿ ಭರ್ಜರಿ ಫಾರ್ಮ್‍ನಲ್ಲಿದ್ದರು. ತಮಗೆ ನೀಡಿದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡ ಕಿಶನ್ 14 ಪಂದ್ಯಗಳನ್ನಾಡಿ ನಾಲ್ಕು ಅರ್ಧಶತಕದ ಜೊತೆಗೆ 516 ರನ್‍ಗಳಿಸಿದರು. ಇದರ ಜೊತೆಗೆ ಈ ಬಾರಿಯ ಐಪಿಎಲ್‍ನಲ್ಲಿ 30 ಸಿಕ್ಸ್ ಸಿಡಿಸಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆ ಬರೆದರು. ದೊಡ್ಡ ಹೊಡೆತಗಳನ್ನು ಹೊಡೆಯುವ ಮೂಲಕ ಎಲ್ಲರ ಗಮನ ಸೆಳೆದರು.

    ಸಂದೀಪ್ ಶರ್ಮಾ: ಐಪಿಎಲ್ ಟೂರ್ನಿಯಲ್ಲಿ ಸಂದೀಪ್ ಶರ್ಮಾ ಬುಮ್ರಾ ಅವರಷ್ಟೇ ವಿಕೆಟ್ ಪಡೆದುಕೊಂಡಿದ್ದಾರೆ. ಆದರೆ ಸಂದೀಪ್ ಇನ್ನು ಟೀಂ ಇಂಡಿಯಾಗೆ ಆಯ್ಕೆಯಾಗಿಲ್ಲ. ಪವರ್ ಪ್ಲೇನಲ್ಲಿ ಸೂಪರ್ ಆಗಿ ಬೌಲ್ ಮಾಡುವ ಶರ್ಮಾ ಪವರ್ ಪ್ಲೇನಲ್ಲಿ 53 ವಿಕೆಟ್ ಪಡೆದು ಮೊದಲ ಆರು ಓವರಿನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಜೊತೆಗೆ ಐಪಿಎಲ್-2020ಯಲ್ಲಿ 13 ಪಂದ್ಯಗಳನ್ನಾಡಿ 14 ವಿಕೆಟ್ ಪಡೆದು ಮಿಂಚಿದರು.

    ರಾಹುಲ್ ತೆವಾಟಿಯಾ: ಈ ಬಾರಿಯ ಐಪಿಎಲ್‍ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ರಾಹುಲ್ ತೆವಾಟಿಯಾ ತನ್ನ ಅಬ್ಬರ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಗಮನ ಸೆಳೆದರು. ಜೊತೆಗೆ ಡೆತ್ ಓವರಿನಲ್ಲಿ ಒಳ್ಳೆಯ ಸ್ಟ್ರೈಕ್ ರೇಟ್‍ನಲ್ಲಿ ಬ್ಯಾಟ್ ಬೀಸಿ ಕ್ರೀಡಾಭಿಮಾನಿಗಳನ್ನು ಇಂಪ್ರೆಸ್ ಮಾಡಿದರು. ಈ ಬಾರಿ ರಾಜಸ್ಥಾನ್ ರಾಯಲ್ಸ್ ಪರ 14 ಪಂದ್ಯಗಳನ್ನಾಡಿದ ರಾಹುಲ್ 255 ರನ್ ಸಿಡಿಸಿ 10 ವಿಕೆಟ್ ಪಡೆದು ಮಿಂಚಿದರು. ಇವರ ಜೊತೆಗೆ ರಾಜಸ್ಥಾನ್ ತಂಡ ಶ್ರೇಯಸ್ ಗೋಪಾಲ್ ಸತತ ಎರಡು ಅವೃತ್ತಿಯಲ್ಲೂ 10 ವಿಕೆಟ್ ಪಡೆದರೂ ಟೀಂ ಇಂಡಿಯಾಗೆ ಆಯ್ಕೆಯಾಗಿಲ್ಲ.