ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಹಿತದೃಷ್ಟಿಯಿಂದ ಚುನಾವಣಾ ಆಯೋಗ ಮಹತ್ವ ನಿರ್ಧಾರವೊಂದನ್ನು ಕೈಗೊಂಡಿದೆ. 80 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಅಂಗವಿಕಲರು ಮನೆಯಲ್ಲೇ ಇದ್ದು ಮತ ಚಲಾಯಿಸಬಹುದು ಎಂದು ಆಯೋಗ ತಿಳಿಸಿದೆ.
ವೃದ್ಧರು, ಅಂಗವಿಕಲರು, ಕೊರೊನಾ ಸೋಂಕಿಗೆ ಒಳಗಾಗಿರುವವರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮನೆಯಲ್ಲೇ ಇದ್ದು ಅಭ್ಯರ್ಥಿಗಳಿಗೆ ಮತ ಚಲಾಯಿಸುವ ವ್ಯವಸ್ಥೆಯನ್ನು ಅವರಿಗೆ ಮಾಡಿಕೊಡಲಾಗುವುದು ಎಂದು ಆಯೋಗ ಹೇಳಿದೆ. ಇದನ್ನೂ ಓದಿ: RRR ಸಿನಿಮಾ ದೇಹವಾದರೆ ಅಜಯ್ ಆತ್ಮ, ಆಲಿಯಾ ಶಕ್ತಿ: ರಾಜಮೌಳಿ
ಉತ್ತರ ಪ್ರದೇಶ ಚುನಾವಣೆ ಕುರಿತು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮಾತನಾಡಿ, ವಿಳಂಬ ಮಾಡದೇ ಕೋವಿಡ್ ನಿಯಮಗಳನ್ನು ಪಾಲಿಸಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಹಾಲಿ ಸರ್ಕಾರದ ಅವಧಿ ಮೇ 14ಕ್ಕೆ ಮುಗಿಯಲಿದೆ. ಚುನಾವಣೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮನವಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆಯೋಗವು ಈಗಾಗಲೇ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದೆ. ಚುನಾವಣೆ ವೇಳೆ ಯಾವುದೇ ಭ್ರಷ್ಟ ಚಟುವಟಿಕೆಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫುಲ್ ಹ್ಯಾಪಿ ಮೂಡ್ನಲ್ಲಿರುವ ವಿರುಷ್ಕಾ!
ಆರೋಗ್ಯ ಕಾರ್ಯದರ್ಶಿ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಚುನಾವಣೆ ದಿನಾಂಕ ಘೋಷಣೆಯಾದಾಗ ಪರಿಸ್ಥಿತಿ ನೋಡಿಕೊಂಡು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.
ಲಕ್ನೋ: ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಮುಂದೂಡುವುದಿಲ್ಲ, ಬದಲಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
ದೇಶದ್ಯಾಂತ ಓಮಿಕ್ರಾನ್ ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಹಿನ್ನಲೆ ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡಿಕೆಗೆ ಕೇಳಿ ಬಂದ ಒತ್ತಡಕ್ಕೆ ಇಂದು ಸುದ್ದಿಗೋಷ್ಠಿಯಲ್ಲಿ ಆಯೋಗದ ತಿರ್ಮಾನ ತಿಳಿಸಿದರು. ಇದನ್ನೂ ಓದಿ: ರಿಕ್ಷಾ ಕೊಡಿಸೆಂದು ತಾಯಿ ಜೊತೆ ಜಗಳವಾಡ್ತಿದ್ದವ ಸಹೋದರನಿಂದ್ಲೇ ಕೊಲೆಯಾದ!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗ ಚುನಾವಣೆಗಳನ್ನು ಮುಂದೂಡುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಆಯೋಗವನ್ನು ಭೇಟಿ ಮಾಡಿ ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲು ಮನವಿ ಮಾಡಿವೆ. ಈ ಹಿನ್ನಲೆಯಲ್ಲಿ ಎಲ್ಲ ರೀತಿಯ ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವ ಮೂಲಕ ಚುನಾವಣೆಯನ್ನು ನಡೆಸಲಾಗುವುದು. ಜನವರಿ 5 ರಂದು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಚುನಾವಣಾ ಸಮಿತಿಯು ಮುಂದಿನ ವರ್ಷದ ಚುನಾವಣೆಯ ವೇಳಾಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ, ಮತದಾನದ ದಿನಾಂಕದಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್‍ಗಳನ್ನು ಅಳವಡಿಸಲಾಗುವುದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 1 ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‍ಕಾಸ್ಟಿಂಗ್ ಸೌಲಭ್ಯಗಳು ಲಭ್ಯವಿರುತ್ತವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ: ಸಿದ್ದರಾಮಯ್ಯ
80 ವರ್ಷಕ್ಕಿಂತ ಮೇಲ್ಪಟ್ಟ ಜನರು, ಅಂಗವಿಕಲರು ಮತ್ತು ಕೋವಿಡ್ ಪೀಡಿತ ಜನರು ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಚುನಾವಣಾ ಆಯೋಗವು ಅವರ ಮನೆ ಬಾಗಿಲಿಗೆ ತಲುಪುತ್ತದೆ, ಚುನಾವಣಾ ನೀತಿ ಸಂಹಿತೆಗಳನ್ನು ಆಯೋಗ ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದು ಸುಶೀಲ್ ಚಂದ್ರ ತಿಳಿಸಿದರು.
ಇದಕ್ಕೂ ಮುನ್ನ ಬುಧವಾರ, ಆಯೋಗದ ನಿಯೋಗವು ಜಿಲ್ಲಾಧಿಕಾರಿಗಳು, ಪೊಲೀಸ್ ಮುಖ್ಯಸ್ಥರು, ಆಯುಕ್ತರು, ಐಜಿಗಳು, ಡಿಐಜಿಗಳು ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿತು. ಮಂಗಳವಾರ ಉತ್ತರ ಪ್ರದೇಶದ ರಾಷ್ಟ್ರೀಯ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು. ಇದನ್ನೂ ಓದಿ: ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು
ಕಳೆದ ಸೋಮವಾರ, ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಹಿರಿಯ ಆರೋಗ್ಯ ಸಚಿವಾಲಯದ ಅಧಿಕಾರಿಗಳೊಂದಿಗೆ ಓಮಿಕ್ರಾನ್ ಬೆದರಿಕೆ ಮತ್ತು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಸುರಕ್ಷಿತವಾಗಿ ಚುನಾವಣೆ ನಡೆಸಲು ಅಗತ್ಯವಾದ ಕ್ರಮಗಳ ಕುರಿತು ಸಭೆ ನಡೆಸಿತ್ತು. ನಂತರ, ಕೇಂದ್ರ ಸರ್ಕಾರವು ಕೋವಿಡ್ ಲಸಿಕೆಯನ್ನು ಹೆಚ್ಚಿಸಲು, ಮಾದರಿ ಪರೀಕ್ಷೆಗಳನ್ನು ಹೆಚ್ಚಿಸಲು ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಸಲಹೆ ನೀಡಿತು.