ಬೆಂಗಳೂರು: ಮಂತ್ರಿ ಡೆವಲಪರ್ಸ್ ಎಂ.ಡಿ ಸುಶೀಲ್ ಮಂತ್ರಿ ಮತ್ತು ಪುತ್ರ ಪ್ರತೀಕ್ ಮಂತ್ರಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಸೈಟ್, ಫ್ಲ್ಯಾಟ್ ನೀಡುವುದಾಗಿ ಹೂಡಿಕೆದಾರರಿಂದ ಹಣ ಪಡೆದು ವಂಚನೆ ಮಾಡಿರುವ ಆರೋಪದ ಅಡಿಯಲ್ಲಿ ತನಿಖೆ ನಡೆಸುತ್ತಿದ್ದ ಸಿಐಡಿ ನಿನ್ನೆ ರಾತ್ರಿ ಸುಶೀಲ್ ಮಂತ್ರಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್ ನಿಧನ – ನಾಳೆ ಕರ್ನಾಟಕದಲ್ಲೂ ಶೋಕಾಚರಣೆ
ಇಂದು ಮತ್ತು ನಾಳೆ ಕೋರ್ಟ್ ರಜೆ ಇರುವ ಕಾರಣ ಸೆ.12ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಸುಶೀಲ್ ಮಂತ್ರಿ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿದ್ದವು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್‌ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್‌ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.