Tag: suspended

  • ಉರ್ಫಿ ಜಾವೇದ್ ಇನ್ಸ್ಟಾ ಸಸ್ಪೆಂಡ್: ಕಂಗಾಲಾಗಿದ್ದ ನಟಿ

    ಉರ್ಫಿ ಜಾವೇದ್ ಇನ್ಸ್ಟಾ ಸಸ್ಪೆಂಡ್: ಕಂಗಾಲಾಗಿದ್ದ ನಟಿ

    ಮಾದಕ ಉಡುಗೆ ಮೂಲಕ ಫೇಮಸ್ ಆಗಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಅವರ ಇನ್ಸ್ಟಾ (Instagram) ಸಸ್ಪೆಂಡ್ ಆಗಿದೆ. ಅದನ್ನು ಕಂಡು ಉರ್ಫಿ ಕಣ್ಣೀರಿಟ್ಟಿದ್ದಾರೆ. ಈ ಮೂಲಕವೇ ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದ ಉರ್ಫಿ, ಇನ್ಸ್ಟಾ ಪೇಜ್ ಕಾಣದೇ ಇರುವುದಕ್ಕೆ ಆತಂಕಗೊಂಡಿದ್ದಾರೆ. ಸಸ್ಪೆಂಡ್ ಮಾಡಿರೋದಕ್ಕೆ ಕಾರಣವನ್ನೂ ಅವರು ಕೇಳಿದ್ದಾರೆ. ಅರೆಬರೆ ಬಟ್ಟೆ ಹಾಕಿಕೊಂಡು ಬೀದಿಗೆ ಇಳಿಯುವ ಉರ್ಫಿ ಬಗ್ಗೆ ಅನೇಕರು ರೊಚ್ಚಿಗೆದ್ದಿದ್ದಾರೆ. ಹಾಗಾಗಿ ಅದು ಸಸ್ಪೆಂಡ್ ಆಗಿದ್ಯಾ? ಗೊತ್ತಿಲ್ಲ. ಮತ್ತೆ ಅವರ ಪೇಜ್ ಅನ್ನು ಹಿಂದಿರುಗಿಸಿದ್ದಾರೆ. ನಟಿ ನಿಟ್ಟುಸಿರಿಟ್ಟಿದ್ದಾರೆ.

    ನಟಿ ಉರ್ಫಿ ಜಾವೇದ್ (Urfi Javed) ಅವರು ತಾವು ಧರಿಸುವ ಚಿತ್ರವಿಚಿತ್ರ ಬಟ್ಟೆಯಿಂದಲೇ ಗುರುತಿಸಿಕೊಂಡಿದ್ದಾರೆ. ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ. ಕೆಟ್ಟ ಕಾಮೆಂಟ್ಸ್ಗೆ ಡೊಂಟ್ ಕೇರ್ ಎನುತ್ತಾ ಸದಾ ಮೈ ಕಾಣುವ ಬಟ್ಟೆಗಳನ್ನೇ ಸದಾ ಧರಿಸುವ ಉರ್ಫಿ, ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದುಯಿದೆ. ಇದೀಗ ಅವರು ಯಾಕೆ ಹೀಗೆ ವಿಚಿತ್ರ ಬಟ್ಟೆಗಳನ್ನೇ ಆಯ್ಕೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಅವರೇ ಈ ಹಿಂದೆ ಉತ್ತರಿಸಿದ್ದಾರೆ.

    ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುವ ನಟಿ ಉರ್ಫಿ ಸಿನಿಮಾ ಮಾಡೋದ್ದಕ್ಕಿಂತ, ಟ್ರೋಲ್ ಮತ್ತು ಬಟ್ಟೆಯಿಂದಲೇ ಸಖತ್ ಸೌಂಡ್ ಮಾಡಿದ್ದಾರೆ. ಕೆಲದಿನಗಳ ಹಿಂದೆ ಮುಂಬೈ ಮನೆ ಬಾಡಿಗೆ ಕೊಡ್ತಿಲ್ಲ ನನಗೆ ಎಂದು ಉರ್ಫಿ ಗೋಗರೆದಿದ್ದರು. ಬಳಿಕ ತನಗೆ ಸಿನಿಮಾ ಆಫರ್ಸ್ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಸದಾ ಭಿನ್ನವಾಗಿರುವ ಧರಿಸಿನೊಂದಿಗೆ ಅಭಿಮಾನಿಗಳ ಮುಂದೆ ಬರುವ ಉರ್ಫಿ ಜಾವೇದ್ ಇಷ್ಟೊಂದು ಬೋಲ್ಡ್ ಆಗಿರೋದೇಕೆ ಎಂದು ಸಂದರ್ಶನವೊಂದರಲ್ಲಿ ನಟಿ ಮುಕ್ತವಾಗಿ ಮಾತನಾಡಿದ್ದಾರೆ.

    ಬಿಗ್ ಬಾಸ್ ಒಟಿಟಿಯಿಂದ (Bigg Boss Ott) ಉರ್ಫಿ ಜಾವೇದ್ ಜನಪ್ರಿಯತೆ ಗಳಿಸಿದರು. ‘ಹೌಸ್ ಅರೆಸ್ಟ್‘ (House Arrest) ಗೇಮ್ ರಿಯಾಲಿಟಿ ಶೋನ ಮೊದಲ ಸೀಸನ್ ನಲ್ಲಿಯೂ ಅವರು ಭಾಗವಹಿಸಿದ್ದರು. ಹಿಂದೆ ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದ ಉರ್ಫಿ, ಬಿಗ್ ಬಾಸ್ ಒಟಿಟಿ ಸೀಸನ್ 1 ರಲ್ಲಿ ಟಾಸ್ಕ್ ಗೆಲ್ಲಲು ಕಸದ ಚೀಲಗಳಿಂದ ಮಾಡಿದ ಉಡುಪನ್ನು ಧರಿಸಿ ಖ್ಯಾತಿ ಗಳಿಸಿದರು. ತಮ್ಮ ಸೃಜನಶೀಲತೆಗೆ ಮೆಚ್ಚುಗೆ ಪಡೆದರು. ಅಂದಿನಿದ ಉರ್ಫಿ ಸಾಮಾನ್ಯ ಉಡುಗೆಯನ್ನು ಧರಿಸಲೇ ಇಲ್ಲ. ಹಾಗಾಗಿ ನಟಿ ನಿರಂತರವಾಗಿ ಟ್ರೋಲ್ ಆಗ್ತಿರೋದರ ಬಗ್ಗೆ ಮಾತನಾಡಿದ್ದರು.

     

    ಉರ್ಫಿ, ಕೆಲವು ಜನರು ನನ್ನನ್ನು ಗೌರವಿಸುವುದಿಲ್ಲ. ನನ್ನೊಂದಿಗೆ ಕೆಲಸ ಮಾಡಲು ಯಾರೂ ಬಯಸುವುದಿಲ್ಲ. ನಾನು ಎಲ್ಲರ ಗಮನ ಸೆಳೆಯುವ ಸಲುವಾಗಿಯೇ ರೀತಿಯ ಬಟ್ಟೆಗಳನ್ನು ಧರಿಸುವುದು ಎಂದು ಉರ್ಫಿ ಒಪ್ಪಿಕೊಂಡಿದ್ದಾರೆ. ಆದರೆ ಕುರಿತು ಕಾಮೆಂಟ್ ಮಾಡಿದರೆ ನನಗೆ ಇಷ್ಟ ಆಗುವುದಿಲ್ಲ ಎಂದು ನಟಿ ಮಾತನಾಡಿದ್ದರು.

  • ನಟಿ ಅಪರ್ಣಾ ಜೊತೆ ಅನುಚಿತ ವರ್ತನೆ: ಕಾಲೇಜು ವಿದ್ಯಾರ್ಥಿ ಅಮಾನತು

    ನಟಿ ಅಪರ್ಣಾ ಜೊತೆ ಅನುಚಿತ ವರ್ತನೆ: ಕಾಲೇಜು ವಿದ್ಯಾರ್ಥಿ ಅಮಾನತು

    ತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ಕೇರಳದ ಕಾಲೇಜಿಗೆ ಅತಿಥಿಯಾಗಿ ಹೋಗಿದ್ದರು. ಈ ಸಮಯದಲ್ಲಿ ವೇದಿಕೆಯ ಮೇಲೆಯೇ ಆ ಕಾಲೇಜಿನ ವಿದ್ಯಾರ್ಥಿಯೊಬ್ಬ ನಟಿಯ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಆ ಹುಡುಗನ ನಡೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಮಹಿಳೆಯರ ರಕ್ಷಣೆ ಕುರಿತಾಗಿಯೂ ಚರ್ಚೆ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ನಟಿಗೆ ಕ್ಷಮೆ ಕೇಳಿದೆ.

    ಈ ಘಟನೆಯಿಂದಾಗಿ ನಮ್ಮ ಕಾಲೇಜಿಗೂ ಕೆಟ್ಟ ಹೆಸರು ಬಂದಿದೆ. ನಮಗೂ ತಲೆತಗ್ಗಿಸುವಂತಹ ವಿಚಾರವಿದು. ನಿಮ್ಮೊಂದಿಗೆ ಆ ಹುಡುಗ ಆ ರೀತಿ ನಡೆದುಕೊಂಡಿದ್ದು ತುಂಬಾ ನೋವಾಗಿದೆ. ಹಾಗಾಗಿ ಕ್ಷಮೆ ಕೇಳುತ್ತೇವೆ. ಕೇವಲ ಕ್ಷಮೆ ಮಾತ್ರವಲ್ಲ, ಆ ವಿದ್ಯಾರ್ಥಿಯನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ರೀತಿ ಯಾರೂ ನಡೆದುಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

    `ಸೂರರೈ ಪೊಟ್ರು’ (Soorarai Potru) ಸಿನಿಮಾದ ನಟಿ ಅಪರ್ಣಾ ಬಾಲಮುರಳಿ (Aparna Balamurali) ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಹಲವು ಭಾಷೆಗಳಲ್ಲಿ ಸಿನಿಮಾ ಮಾಡುತ್ತಿರುವ ನಟಿ ಅಪರ್ಣಾ ಇತ್ತೀಚೆಗೆ ಕೇರಳದ ಕಾಲೇಜಿಗೆ ಭೇಟಿ ನೀಡಿದ್ದರು. ʻತಂಕಂʼ (Tankam) ಸಿನಿಮಾ ಪ್ರಚಾರ ಕಾರ್ಯಕ್ಕಾಗಿ ಕೇರಳದ (Kerala) ಕಾಲೇಜಿಗೆ ಅಪರ್ಣಾ ಮತ್ತು ತಂಡ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಕುಳಿತಿದ್ದ ಅಪರ್ಣಾ ಕಡೆ ವಿದ್ಯಾರ್ಥಿಯೊಬ್ಬರು (Student) ಓಡಿ ಬಂದ. ಬಂದವನೇ ಅಪರ್ಣಾ ಕೈ ಹಿಡಿದು ಮಾತನಾಡಿದ, ಬಳಿಕ ಸೆಲ್ಫಿ ಕೇಳಿದ. ಅಪರ್ಣಾ ಕೂಡ ಸೆಲ್ಫಿ ಕೊಡಲು ಎದ್ದು ನಿಂತರು. ಆಗ ವಿದ್ಯಾರ್ಥಿ ಅಪರ್ಣಾ ಹೆಗಲ ಮೇಲೆ ಕೈ ಹಾಕಿದ. ಅಪರ್ಣಾ ಆತನಿಂದ ತಪ್ಪಿಸಿಕೊಂಡು ದೂರ ಹೋದರು.

    ಕಾಲೇಜು ವಿದ್ಯಾರ್ಥಿಯ ಕೆಟ್ಟ ವರ್ತನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಘಟನೆಯಿಂದ ಅಪರ್ಣಾ ತುಂಬಾ ಹಿಂಸೆ ಅನುಭವಿಸಿದ್ದಾರೆ. ಈ ಘಟನೆಯ ಬಳಿಕ ಕೆಲವು ವಿದ್ಯಾರ್ಥಿಗಳು ನಟಿಯ ಬಳಿ ಬಂದು ಕ್ಷಮೆ ಕೇಳಿದ್ದಾರೆ. ಬಳಿಕ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿ ಕೂಡ ಕ್ಷಮೆ ಕೇಳಿದ್ದಾರೆ. ನಾನು ನಿಮ್ಮ ದೊಡ್ಡ ಅಭಿಮಾನಿ, ನಿಮ್ಮ ಜೊತೆ ಹೀಗೆ ವರ್ತಿಸುವ ಯೋಚನೆ ನನ್ನಲ್ಲಿರಲಿಲ್ಲ ಎಂದು ಹೇಳಿದ್ದಾರೆ. ಘಟನೆ ನಡೆದ ವೇಳೆ `ತಂಕಂ’ ಚಿತ್ರತಂಡ ಒಂದು ಮಾತನಾಡದೇ ಸೈಲೆಂಟ್ ಆಗಿದ್ದಕ್ಕೆ ತಂಡದ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ತೆಲುಗು ಭಾಷೆಯ ಪುಷ್ಪ ಸಿನಿಮಾದ ಮಾದರಿಯಲ್ಲೇ ಸ್ಮಗ್ಲರ್ ಗಳಿಂದಲೇ ಪೊಲೀಸರು ದರೋಡೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ದರೋಡೆ ಮಾಡಿಸಿ ಸಿಕ್ಕಿಬಿದ್ದ ಇಬ್ಬರು ಹೆಡ್ ಕಾನ್‍ಸ್ಟೇಬಲ್‍ಗಳನ್ನು ಅಮಾನತು ಮಾಡಲಾಗಿದೆ.

    ಗಿರಿನಗರ ಹೆಡ್ ಕಾನ್‍ಸ್ಟೇಬಲ್ ಮೋಹನ್, ಮಹದೇವಪುರ ಹೆಡ್ ಕಾನ್‍ಸ್ಟೇಬಲ್ ಮಮತೇಶ್ ಗೌಡ ಅಮಾನತುಗೊಂಡಿದ್ದಾರೆ. ಇವರಿಬ್ಬರು 2018 ರಿಂದ ಸಿಸಿಬಿಯಲ್ಲಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೇ ಸಿಸಿಬಿಯಿಂದ ಗಿರಿನಗರ ಹಾಗೂ ಮಹಾದೇವಪುರ ಠಾಣೆಗೆ ವರ್ಗಾವಣೆಯಾಗಿದ್ದರು. ಸಿಸಿಬಿಯಲ್ಲಿ ಇದ್ದ ವೇಳೆ ರಕ್ತ ಚಂದನದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. ಹೀಗಾಗಿ ಅವರಿಬ್ಬರಿಗೆ ರಕ್ತಚಂದನ ದರೋಡೆ ಅಡ್ಡೆ ಹಾಗೂ ಗ್ಯಾಂಗ್‍ಗಳ ಬಗ್ಗೆ ತಿಳಿದಿತ್ತು. ಇದನ್ನೂ ಓದಿ: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    ಮೋಹನ್, ಮಮತೇಶ್ ಡಿಸೆಂಬರ್ 15 ರಂದು ಕಾರಿನಲ್ಲಿ ಹೊಸಕೋಟೆ ಸಂತೆ ಸರ್ಕಲ್ ಬಳಿ ದಾಳಿ ಮಾಡಿದ್ದರು. ಈ ವೇಳೆ ಟಾಟಾ ಏಸ್‍ನಲ್ಲಿ ತರುತ್ತಿದ್ದ ರಕ್ತ ಚಂದನವನ್ನು ಸೀಜ್ ಮಾಡಿದ್ದರು. ಅವರು ಸೀಜ್ ಮಾಡಿದ ರಕ್ತಚಂದನದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಆದರೆ 5 ದಿನಗಳ ನಂತರ ಸ್ಥಳೀಯರು ಹೊಸಕೋಟೆ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಹೊಸಕೋಟೆ ಪೊಲೀಸರು ಎಫ್‍ಐಆರ್ ಹಾಕಿ, ಹುಡುಕುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇಬ್ಬರೂ ಪರಾರಿಯಾಗಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್, ಮಮತೇಶ್ ಅವರನ್ನು ಅಮಾನತು ಮಾಡಲಾಗಿದೆ. ಐಜಿಪಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅಮಾನತುಗೊಂಡು 20 ದಿನ ಕಳೆದರೂ ಹೆಡ್ ಕಾನ್‍ಸ್ಟೇಬಲ್‍ಗಳ ಬಂಧನವಾಗಿಲ್ಲ.

    ಕೃತ್ಯ ಹೇಗೆ ಎಸಗುತ್ತಿದ್ದರು?
    ಮೋಹನ್, ಮಮತೇಶ್‍ಗೆ ಸಿಸಿಬಿಯಲ್ಲಿದ್ದ ವೇಳೆ ರಕ್ತ ಚಂದನದ ಸ್ಮಗ್ಲಿಂಗ್ ಅಡ್ಡೆಗಳ ಪರಿಚಯ ಆಗುತ್ತದೆ. ಅಲ್ಲದೇ ಆಂಧ್ರದಲ್ಲಿ ರಕ್ತಚಂದನದ ಮರಕಡಿಯಲು ಬೆಂಗಳೂರಿನಿಂದ ಕೂಲಿಗೆ ಜನ ಹೋಗುತ್ತಿರುತ್ತಾರೆ. ಅಂತಹವರನ್ನು ಮೋಹನ್, ಮಮತೇಶ್ ಪೊಲೀಸ್ ಬಾತ್ಮೀದಾರರಾಗಿ ಬಳಸಿಕೊಳ್ಳುತ್ತಿರುತ್ತಾರೆ. ರಕ್ತಚಂದನದ ಮರ ಕಡಿಯಲು ಬೆಂಗಳೂರಿನಿಂದ ಹೋದವರು ಮರ ಕಡಿದು ಲಾರಿಗೆ ತುಂಬಿಸುತ್ತಿದ್ದಂತೆ, ಲಾರಿಯ ನಂಬರ್ ಹಾಗೂ ಲಾರಿಯಲ್ಲಿ ಎಷ್ಟು ಲೋಡ್ ಇದೆ? ವಾಹನ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಸ್ಮಗ್ಲರ್‌ ಗಳು ಈ ಇಬ್ಬರು ಪೊಲೀಸರಿಗೆ ನೀಡುತ್ತಿದ್ದರು. ಇದನ್ನೂ ಓದಿ: ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ರಕ್ತ ಚಂದನ ವಶಕ್ಕೆ ಪಡೆಯುತ್ತಿದ್ದರು. ನಂತರ ಅದನ್ನು ಯಾರಿಗೂ ತೋರಿಸದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ರೀತಿ ಹಣಗಳಿಸಿರುವ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

  • 8 ಪೊಲೀಸರ ನೌಕರಿಗೆ ಕುತ್ತು ತಂದಿದ್ದ ರೇಪ್ ಆರೋಪಿ ಕೊನೆಗೂ ಅಂದರ್

    8 ಪೊಲೀಸರ ನೌಕರಿಗೆ ಕುತ್ತು ತಂದಿದ್ದ ರೇಪ್ ಆರೋಪಿ ಕೊನೆಗೂ ಅಂದರ್

    ಹುಬ್ಬಳ್ಳಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಪಾಲಾಗಿ ಪದೇ ಪದೇ ಪೊಲೀಸರಿಗರ ಚಳ್ಳೆ ಹಣ್ಣು ತಿನಿಸಿ ಪರಾರಿಯಾಗಿದ್ದ ಆರೋಪಿ ಕೊನೆಗೂ ಅಂದರ್ ಆಗಿದ್ದಾನೆ.

    ಬಸವರಾಜ ಕುರಡಗಿಮಠ ಬಂಧಿತ ಆರೋಪಿ. ಕೇಶ್ವಾಪುರ ಠಾಣೆಯ ಪೊಲೀಸರು ಈತನನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನಿಂದ ಒಟ್ಟು ಎಂಟು ಜನ ಪೊಲೀಸರು ನೌಕರಿಯನ್ನು ಕಳೆದುಕೊಂಡಿದ್ದಾರೆ. 48 ವರ್ಷದ ಈತ 2014ರಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. ಅಲ್ಲಿಂದ ಕಿಮ್ಸ್ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಪರಾರಿಯಾಗಿದ್ದ. ಆಗ ನಾಲ್ವರು ಪೊಲೀಸರು ಅಮಾನತುಗೊಂಡಿದ್ದರು.

    ನಂತರ ಮತ್ತೆ ಆತನ ಬಂಧನವಾಗಿತ್ತು. ಈ ಘಟನೆಯ ನಂತರ ಮತ್ತೆ ಜೈಲಿನಲ್ಲಿದ್ದ ಬಸವರಾಜ ಕುರಡಗಿಮಠ, ಅನಾರೋಗ್ಯದ ನೆಪವೊಡ್ಡಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಮತ್ತೆ ಅಲ್ಲಿಂದಲೂ ತಪ್ಪಿಸಿಕೊಂಡು ಪರಾರಿಯಾಗಿದ್ದ. ಆಗಲೂ ನಾಲ್ಕು ಪೊಲೀಸರು ಅಮಾನತುಗೊಂಡಿದ್ದರು.

    ಅಂದಿನಿಂದ ತಲೆಮರೆಸಿಕೊಂಡಿದ್ದ ಬಸವರಾಜನನನ್ನು ಹುಡುಕುತ್ತಿದ್ದ ಪೊಲೀಸರಿಗೆ ಆತ ಕಳೆದ ಒಂದು ವರ್ಷದಿಂದಲೂ ಚಳ್ಳೆಹಣ್ಣು ತಿನಿಸುತ್ತಿದ್ದ. ಆದರೆ ಕೇಶ್ವಾಪುರ ಠಾಣೆಯ ಇನ್ಸ್ ಪೆಕ್ಟರ್ ಸುರೇಶ್ ಕುಂಬಾರ ಅವರ ತಂಡ, ಮಂಗಳೂರು, ಉಡುಪಿ, ಶಿವಮೊಗ್ಗ ಸೇರಿದಂತೆ ಹಲವೆಡೆ ಹುಡುಕಾಡಿ, ಕೊನೆಗೆ ಮೈಸೂರಿನಲ್ಲಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದೆ.

  • ಪಾಕ್ ಪರ ಘೋಷಣೆ ಪ್ರಕರಣ- ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಅಮಾನತು

    ಪಾಕ್ ಪರ ಘೋಷಣೆ ಪ್ರಕರಣ- ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಅಮಾನತು

    ಹುಬ್ಬಳ್ಳಿ: ನಗರದ ಕೆಎಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪ ತೋರಿದ ಇನ್ಸ್‌ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ.

    ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 90 ದಿನದೊಳಗೆ ಪ್ರಕರಣದ ಜಾರ್ಜ್ ಶೀಟ್ ಸಲ್ಲಿಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ 2ನೇ ಜೆಎಂಎಫ್‍ಸಿ ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು.

    ಹೀಗಾಗಿ ಪ್ರಕರಣದಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರ ನಿರ್ಲಕ್ಷ ಕಂಡು ಬಂದಿತ್ತು. ಆದ್ದರಿಂದ ಕರ್ತವ್ಯ ಲೋಪ, ನಿರ್ಲಕ್ಷ್ಯತನಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಡಿಸೋಜಾರನ್ನು ಅಮಾನತು ಮಾಡಲಾಗಿದೆ.

    ಗುರುವಾರ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಜೆಎಂಎಫ್‍ಸಿ-2 ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ. ಪೊಲೀಸರ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ ಆರೋಪಿಸಿದ್ದರು.

    ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್ ಶೀಟ್ ಸಲ್ಲಿಸದೇ ಇರುವುದರಿಂದ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್ ಶೀಟ್ ದಾಖಲಿಸಬೇಕಾದ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ಆರೋಪಿಗಳು ಜಾಮೀನಿನ ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‍ಐ, ಪೇದೆ ಅಮಾನತು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‍ಐ, ಪೇದೆ ಅಮಾನತು

    ಕೊಪ್ಪಳ: ರೈತರನ್ನು ಸುಲಿಗೆ ಮಾಡಲು ಮುಂದಾಗಿದ್ದ ಜಿಲ್ಲೆಯ ಓರ್ವ ಪಿಎಸ್‍ಐ ಹಾಗೂ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿ ಎಸ್‍ಪಿ ಜಿ.ಸಂಗೀತಾ ಅವರು ಆದೇಶ ಹೊರಡಿಸಿದ್ದಾರೆ. ಅಮಾನತು ಆದ ಇಬ್ಬರು ಮಾಡಿದ ಅಕ್ರಮದ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಸುದ್ದಿ ಆಧರಿಸಿ ಅಮಾನತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

    ಕಾರಟಗಿ ಪೊಲೀಸ್ ಠಾಣೆಯ ಪಿಎಸ್‍ಐ ವಿಜಯಕೃಷ್ಣ ಹಾಗೂ ಅದೇ ಠಾಣೆಯ ಪೇದೆ ಭೀಮಣ್ಣ ಸೇವೆಯಿಂದ ಅಮಾನತು ಆದವರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕಂದಾ ಗ್ರಾಮದ ರೈತ ಭಾಷಾಸಾಬ್ ವಲಿಸಾಬ್ ಅವರಿಗೆ ವಿಜಯಕೃಷ್ಣ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ‘ದೂರು ಕೊಟ್ರೆ ಶೂಟ್ ಮಾಡ್ತೀನಿ’ – ಪಿಎಸ್‍ಐ ವಿರುದ್ಧ ಆರೋಪ

    ಶ್ರವಣಕುಮಾರ್ ಎಂಬಾತನ ಮಾತು ಕೇಳಿದ್ದ ಪಿಎಸ್‍ಐ ರೈತ ಭಾಷಾಸಾಬ್ ವಲಿಸಾಬ್‍ಗೆ ಬೆದರಿಕೆ ಹಾಕಿ, ಹಣಕ್ಕಾಗಿ ಪೀಡಿಸಿ ಆತನ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದರು. ಇದರಿಂದಾಗಿ ಭಾಷಾಸಾಬ್ ಎಸ್‍ಪಿ, ಮುಖ್ಯಮಂತ್ರಿ, ಗೃಹ ಸಚಿವರಿಗೆ ಹಾಗೂ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಇದನ್ನು ಆಧರಿಸಿ ಪಬ್ಲಿಕ್ ಟಿವಿ ಜನವರಿ 26ರಂದು ಪಿಎಸ್‍ಐ ವಿಜಯಕೃಷ್ಣ, ಪೇದೆ ಬೀಮಣ್ಣನದ ಹಣ ವಸಲಿ ಬಗ್ಗೆ ಸುದ್ದಿ ಮಾಡಿತ್ತು. ಕೊಪ್ಪಳ ಎಸ್‍ಪಿ ಸಂಗೀತಾ ಅವರು ಗಂಗಾವತಿ ಸಿಪಿಐ ಅವರಿಂದ ವರದಿ ತರಿಸಿಕೊಂಡು ಜನವರಿ 29ರಂದು ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಏನಿದು ಪ್ರಕರಣ?:
    ಕಾರಟಗಿ ಪೊಲೀಸ್ ಠಾಣೆ ಪೇದೆ ಭೀಮಣ್ಣ ಕಳೆದ ಮೂರು ತಿಂಗಳ ಹಿಂದೆ ಮುಕ್ಕುಂದ ಗ್ರಾಮದಲ್ಲಿ ಮರಳು ಸಾಗಾಟದ ಮಾಮೂಲಿ ವಸೂಲಿಗೆ ಪೊಲೀಸರು ಹೋಗಿದ್ದರು. ಆದರೆ ಭಾಷಾಸಾಬ್ ನಮ್ಮ ಗ್ರಾಮವು ನಿಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರಲ್ಲ ಎಂದು ಪೊಲೀಸರ ಬಳಿ ಗಲಾಟೆ ಮಾಡಿದ್ದರು. ಅಲ್ಲದೇ ಮೊಬೈಲ್‍ನಲ್ಲಿ ಗಲಾಟೆಯ ದೃಶ್ಯವನ್ನು ಸೆರೆಹಿಡಿದಿದ್ದರು. ಹೀಗಾಗಿ ಪೊಲೀಸರು ಭಾಷಾಸಾಬ್‍ರನ್ನ ಟಾರ್ಗೆಟ್ ಮಾಡಿದ್ದರು. ಆದ್ದರಿಂದಲೇ ಭಾಷಾಸಾಬ್ ವಿರುದ್ಧ ಸುಳ್ಳು ಕೇಸ್ ದಾಖಲು ಮಾಡಿ ಪೊಲೀಸರು ಹಗೆ ಸಾಧಿಸಿದ್ದರು.

    ಮಾಮೂಲಿ ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ಪೊಲೀಸರು ಟಾರ್ಗೆಟ್ ಮಾಡಿದ್ದರಿಂದ ಭಾಷಾಸಾಬ್ ಊರು ಬಿಟ್ಟು ಅಲೆಯುತ್ತಿದ್ದರು. ಅಷ್ಟೇ ಅಲ್ಲದೆ ಪಿಎಸ್‍ಐ ವಿಜಯಕೃಷ್ಣ ಗೂಂಡಾಗಳನ್ನ ಬಿಟ್ಟು ಭಾಷಾಸಾಬ್ ಅವರಿಗೆ ಧಮ್ಕಿ ಹಾಕಿದ್ದರು. ಉಸುಕು ದಂಧೆ ಮಾಡಿ ಪ್ರತಿ ತಿಂಗಳು 35 ಸಾವಿರ ರೂ. ಮಾಮೂಲಿ ನೀಡುವಂತೆ ಪಿಎಸ್‍ಐ ವಿಜಯಕೃಷ್ಣ ಅವರು ಕೇಳಿದ್ದ ಬಗ್ಗೆ ಭಾಷಾಸಾಬ್ ದೂರಿನಲ್ಲಿ ಉಲ್ಲೇಖಿಸಿದ್ದರು.

    ಇದೆಲ್ಲವನ್ನೂ ಮನಗಂಡ ಎಸ್‍ಪಿ ಸಂಗೀತಾ ಅವರು ಕರ್ತವ್ಯಲೋಪ, ಲಂಚಕ್ಕೆ ಬೇಡಿಕೆ, ಅಧಿಕಾರ ದುರುಪಯೋಗ, ಠಾಣಾ ವ್ಯಾಪ್ತಿ ಮೀರಿದ ವ್ಯಕ್ತಿಯ ಮೇಲೆ ದೌರ್ಜನ್ಯ, ಹಲ್ಲೆ ಮಾಡುವ ಮೂಲಕ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಕೀಳರಿಮೆ ಮೂಡುವಂತೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತಿನ ನಡವಳಿ) ನಿಯಮಗಳು 1965ರ ನಿಯಮದ ಪ್ರಕಾರ ಅಮಾನತಿನಲ್ಲಿಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

  • ಅಂಡರ್-19 ವಿಶ್ವಕಪ್ ತಂಡದ ಸ್ಟಾರ್ ಆಟಗಾರನಿಗೆ 1 ವರ್ಷದ ನಿಷೇಧದ ಬರೆ

    ಅಂಡರ್-19 ವಿಶ್ವಕಪ್ ತಂಡದ ಸ್ಟಾರ್ ಆಟಗಾರನಿಗೆ 1 ವರ್ಷದ ನಿಷೇಧದ ಬರೆ

    ನವದೆಹಲಿ: 2018ರ ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಶತಕ ಸಿಡಿಸಿದ್ದ ಆಟಗಾರ ಮಂಜೋತ್ ಕಾಲ್ರಾ ರಣಜಿ ಕ್ರಿಕೆಟ್‍ಗೆ 1 ವರ್ಷ ನಿಷೇಧವನ್ನು ಎದುರಿಸಿದ್ದಾರೆ. ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಬೋರ್ಡ್ (ಡಿಡಿಸಿಎ) ನಿಷೇಧವನ್ನು ವಿಧಿಸಿದ್ದು, ವಯಸ್ಸಿನ ತಪ್ಪು ಪ್ರಮಾಣ ಪತ್ರ ನೀಡಿ ವಯಸ್ಸನ್ನು ಮರೆಮಾಚಿದ ಆರೋಪವನ್ನು ಮಂಜೀತ್ ಕಾಲ್ರಾ ಎದುರಿಸುತ್ತಿದ್ದಾರೆ.

    ಎಡಗೈ ಬ್ಯಾಟ್ಸ್ ಮನ್ ಆಗಿರುವ ಮಂಜೋತ್ ಕಾಲ್ರಾ ಅಂಡರ್-19 ವಿಶ್ವಕಪ್ ನಲ್ಲಿ ಭಾರತ ತಂಡದ ಪರ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಆದರೆ ಕಾಲ್ರಾ ತಮ್ಮ ಅಂಡರ್-16 ಹಾಗೂ ಅಂಡರ್-19 ಕ್ರಿಕೆಟ್ ಆಡುವ ವೇಳೆ ಡೆಲ್ಲಿ ಸಂಸ್ಥೆಗೆ ನಕಲಿ ಪ್ರಮಾಣ ಪತ್ರ ನೀಡಿದ್ದರು.

    ಇಂತಹದ್ದೇ ಅಪರಾಧದಲ್ಲಿ ದೆಹಲಿ ತಂಡದ ಉಪನಾಯಕ ನಿತೀಶ್ ರಾಣಾ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ. ಶಿಸ್ತುಕ್ರಮದಿಂದ ಅವರಿಗೆ ವಿನಾಯಿತಿ ನೀಡಿ, ಹೆಚ್ಚಿನ ದಾಖಲೆಗಳನ್ನು ನೀಡಲು ಕೋರಲಾಗಿತ್ತು.

    ಡೆಲ್ಲಿ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರಾಗಿದ್ದ ನಿವೃತ್ತ ನ್ಯಾಯಮೂರ್ತಿ, ಬಾದರ್ ದುರಾಜ್ ಅಹ್ಮದ್ ಅವರು ತಮ್ಮ ಅಂತಿಮ ದಿನದಂದು ಆದೇಶವನ್ನು ಜಾರಿ ಮಾಡಿದ್ದಾರೆ. ಆದೇಶದ ಅನ್ವಯ ಕಾಲ್ರಾ 1 ವರ್ಷ ರಣಜಿ ಕ್ರಿಕೆಟ್ ಪಂದ್ಯಗಳನ್ನು ಆಡುವಂತಿಲ್ಲ. ಅಲ್ಲದೇ ಅಂಡರ್-23 ಕ್ರಿಕೆಟ್‍ಗೆ 2 ವರ್ಷ ನಿಷೇಧ ಮಾಡಲಾಗಿದೆ.

    ಬಿಸಿಸಿಐ ಮಾಹಿತಿಯ ಅನ್ವಯ ಕಾಲ್ರಾ 20 ವರ್ಷ, 351 ದಿನ ವಯಸ್ಸಾಗಿದ್ದು, ಕಳೆದ ವಾರ ಅಂಡರ್-23 ರಲ್ಲಿ ದೆಹಲಿ ತಂಡದಲ್ಲಿ ಬಂಗಾಳದ ವಿರುದ್ಧ ನಡೆದ ಪಂದ್ಯದಲ್ಲಿ ಭಾಗವಹಿಸಿದ್ದರು. ಈ ಪಂದ್ಯದಲ್ಲಿ ಕಾಲ್ರಾ 80 ರನ್ ಗಳಿಸಿದ್ದರು. ದೆಹಲಿ ತಂಡದಲ್ಲಿ ಶಿಖರ್ ಧವನ್ ಅವರ ಸ್ಥಾನವನ್ನು ರೀ-ಪ್ಲೇಸ್ ಮಾಡುವ ಎಂಬ ಭರವಸೆಯನ್ನು ಮೂಡಿಸಿದ್ದರು. ಐಪಿಎಲ್‍ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡೆಲ್ಲಿ ಕ್ರಿಕೆಟ್ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿನೋದ್ ತಿಹರಾ, ಈ ಹಿಂದೆ ನಿತೀಶ್ ರಾಣಾ ಎಂದು ಅಪರಾಧಿ ಎಂದು ಹೇಳಲಾಗದ ಅದೇ ಅಪರಾಧಕ್ಕೆ ಕಾಲ್ರಾ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಇದು ತಮಗೆ ಅಚ್ಚರಿಯನ್ನು ತಂದಿದ್ದು, ಬಾದರ್ ದುರಾಜ್ ಅಹ್ಮದ್ ಅವರು ತಮ್ಮ ಕರ್ತವ್ಯದ ಅಂತಿಮ ದಿನದ ರಾತ್ರಿ 11:30ರ ಮೊದಲು ಈ ಆದೇಶವನ್ನು ನೀಡಿದ್ದಾರೆ. ಈಗ ಇದು ಸ್ವಲ್ಪ ವಿಲಕ್ಷಣವಾಗಿ ಕಾಣುತ್ತಿದೆ. ಆದರೆ ಈ ಹುದ್ದೆಗೆ ಹೊಸಬರು ನೇಮಕವಾಗಿ ಕಾಲ್ರಾ ಮೇಲಿನ ನಿಷೇಧವನ್ನು ತೆರವು ಮಾಡುವವರೆಗೂ ನಾವು ಆತನನ್ನು ತಂಡಕ್ಕೆ ಪರಿಗಣಿಸಲು ಸಾಧ್ಯವಿಲ್ಲ. ನಾವು ಅಸಹಾಯಕರಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಹೆಸರಲ್ಲಿ ಸವಾರರಿಂದ ಹಣ ಪೀಕಿದ ಪೊಲೀಸರು ಅಮಾನತು

    ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಹೆಸರಲ್ಲಿ ಸವಾರರಿಂದ ಹಣ ಪೀಕಿದ ಪೊಲೀಸರು ಅಮಾನತು

    ಬೆಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಹೆಸರಲ್ಲಿ ಚಾಲಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಸಂಚಾರ ಪೊಲೀನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಅಮಾನತು ಮಾಡಲಾಗಿದೆ.

    ಅಶೋಕ್ ನಗರ ಸಂಚಾರ ಪೊಲೀಸ್ ಠಾಣೆ ಎಎಸ್‍ಐ ಮುನಿಯಪ್ಪ, ಪೇದೆಗಳಾದ ಗಂಗರಾಜು, ನಾಗರಾಜ್ ಅಮಾನತು ಮಾಡಿ ಆದೇಶ ಹೋರಡಿಸಲಾಗಿದೆ. ಸಂಚಾರ ಪೊಲೀಸರು ಖಾಸಗಿ ಆಲ್ಕೋಹಾಲ್ ಮೀಟರ್ ಬಳಿಸಿ ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೇ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದರು.

    ಸಂಚಾರ ಪೊಲೀಸರ ಹಣ ವಸೂಲಿ ದಂಧೆಯ ಬಗ್ಗೆ ಸಾರ್ವಜನಕರಿಂದ ಹಲವು ದೂರುಗಳು ಬಂದಿದ್ದವು. ದೂರದಾರರ ಸಹಾಯದಿಂದ ಶನಿವಾರ ಹಿರಿಯ ಪೊಲೀಸ್ ಅಧಿಕಾರಿಗಳು ಅವರನ್ನು ಬಂಧಿಸಲು ಪ್ಲ್ಯಾನ್ ರೂಪಿಸಿದ್ದರು. ಎಎಸ್‍ಐ ಮುನಿಯಪ್ಪ ನೇತೃತ್ವದಲ್ಲಿ ಪೇದೆಗಳು ಶ್ರೀನಿವಾಗಿಲು ಜಂಕ್ಷನ್ ಬಳಿ ಚಾಲಕರನ್ನು ತಡೆದು ನ್ಯಾಯಾಲಕ್ಕೆ ಹೋದರೆ 15 ಸಾವಿರ ರೂ. ಕಟ್ಟಬೇಕಾಗುತ್ತದೆ. ಇಲ್ಲಿ ಹಣ ಕಟ್ಟಿ ಅಂತ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಈ ವೇಳೆ ಬಂದ ಪೊಲೀಸ್ ಹಿರಿಯ ಅಧಿಕಾರಿಗಳ ತಂಡ ಹಿಡಿದು ದೂರು ದಾಖಲಿಸಿದ್ದಾರೆ.

    ಚಾಲಕರು ಹಾಗೂ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ ಮೂವರು ಸಂಚಾರ ಪೊಲೀಸರ ಮೇಲೆ ಕ್ರಿಮಿನಲ್ ಅಡಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಈ ಮೂವರು ಕಳೆದ ಒಂದು ವರ್ಷದಿಂದ ಇದೇ ರೀತಿ ಚಾಲಕರನ್ನು ಬೆದರಿಸಿ ಹಣ ವಸೂಲಿ ದಂಧೆ ನಡೆಸುತ್ತಿದ್ದದ್ದು ಬೆಳಕಿಗೆ ಬಂದಿದೆ.

  • ಪರ್ಸ್ ತೆಗೆದು ತೋರ್ಸಿ ಹಣ ಕೊಡು ಎಂದ ಪೇದೆಯನ್ನ ಮನೆಗೆ ಕಳುಹಿಸಿದ ಅಧಿಕಾರಿಗಳು

    ಪರ್ಸ್ ತೆಗೆದು ತೋರ್ಸಿ ಹಣ ಕೊಡು ಎಂದ ಪೇದೆಯನ್ನ ಮನೆಗೆ ಕಳುಹಿಸಿದ ಅಧಿಕಾರಿಗಳು

    – ಪೇದೆಗೆ ಸಾಥ್ ಕೊಟ್ಟ ಎಎಸ್‍ಐ ಸಹ ಅಮಾನತು

    ದಾವಣಗೆರೆ: ಸವಾರರಿಂದ ಹಣ ಪೀಕುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್‍ಪಿ ಹನುಮಂತರಾಯ ಆದೇಶ ಹೊರಡಿಸಿದ್ದಾರೆ.

    ದಾವಣಗೆರೆ ದಕ್ಷಿಣ ಸಂಚಾರಿ ಠಾಣೆಯ ಮುಖ್ಯ ಪೇದೆ ರವಿ ಹಾಗೂ ಎಎಸ್‍ಐ ಜಯಣ್ಣ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಪೇದೆ ರವಿ ಹಣ ಪಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಎಸ್‍ಪಿ ಹನುಮಂತರಾಯ ಅವರು, ಪೇದೆ ರವಿ ಹಾಗೂ ಇದಕ್ಕೆ ಸಹಕಾರ ನೀಡಿದ್ದ ಎಎಸ್‍ಐ ಜಯಣ್ಣ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

    ನಗರದ ಬಿ.ಪಿ. ರಸ್ತೆಯಲ್ಲಿ ಪೇದೆ ರವಿ ಸಂಚಾರ ನಿಯಮ ಉಲ್ಲಂಘಿಸಿ ಸವಾರರಿಗೆ ದಂಡ ಹಾಕದೆ, ಹಣ ಪಡೆಯುತ್ತಿದ್ದರು. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

    ಸವಾರರು ಸರ್ ನಮ್ಮ ಬಳಿ ಹಣ ಇಲ್ಲ. ಇಷ್ಟೇ ಇರೋದು ದಯವಿಟ್ಟು ತೆಗೆದುಕೊಳ್ಳಿ ಎಂದಿದ್ದರು. ಪೇದೆ ರವಿ ಮಾತ್ರ ಇಷ್ಟು ಸಾಕಾಗಲ್ಲ, ಪರ್ಸ್ ಚೆಕ್ ಮಾಡು, ತೋರಿಸು. ಹಣ ಇದೆ ಅಲ್ವಾ ಕೊಡು ಎಂದು ಪೀಡಿಸುವ ಮೂಲಕ ಸಾರ್ವಜನಿಕವಾಗಿ ಹಣ ಪಡೆದುಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಮುಖ್ಯ ಪೇದೆ ರವಿ ಪ್ರತಿನಿತ್ಯ ಇದೇ ರೀತಿ ಸವಾರರಿಂದ ಹಣ ವಸೂಲಿ ಮಾಡುತ್ತಾರೆ. ಹಣ ಪಡೆದಿದ್ದಕ್ಕೆ ಯಾವುದೇ ರಶೀದಿ ಸಹ ನೀಡಲ್ಲ. ದಂಡಕ್ಕೆ ರಶೀದಿ ಕೇಳಿದರೆ ಸಬೂಬು ಹೇಳಿ ಸವಾರರು ಕಳುಹಿಸುತ್ತಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದರೆ ಸೂಕ್ತ ದಾಖಲೆಗಳು ಇರಲಿಲ್ಲ. ಆದರೆ ಇತ್ತೀಚೆಗೆ ವೈರಲ್ ಆದ ವಿಡಿಯೋಯಿಂದ ಪೇದೆ ರವಿ ಸಿಕ್ಕಿ ಹಾಕಿಕೊಂಡಿದ್ದರು. ಬಳಿಕ ಅವರನ್ನು ವಿಚಾರಣೆ ನಡೆಸಿದಾಗ ಎಎಸ್‍ಐ ಜಯಣ್ಣ ಸಾಥ್ ನೀಡಿರುವುದು ತಿಳಿಸದು ಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಎಸ್‍ಪಿ ಹನುಮಂತರಾಯ ಅವರು ಅಮಾನತು ಮಾಡಿದ್ದಾರೆ.

  • ಕಾಂಗ್ರೆಸ್‍ನಿಂದ ರೋಷನ್ ಬೇಗ್ ಅಮಾನತು

    ಕಾಂಗ್ರೆಸ್‍ನಿಂದ ರೋಷನ್ ಬೇಗ್ ಅಮಾನತು

    ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಕಾಂಗ್ರೆಸ್‍ನಿಂದ ಅಮಾನತು ಮಾಡಿ ಕೆಪಿಸಿಸಿ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.

    ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಕೆಪಿಸಿಸಿ ನೀಡಿದ್ದ ದೂರನ್ನು ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ಕ್ರಮಕ್ಕೆ ಸಮ್ಮತಿಸಿದೆ. ತಕ್ಷಣವೇ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ವಿ.ವೈ.ಘೋರ್ಪಡೆ ತಿಳಿಸಿದ್ದಾರೆ.

    ರೋಷನ್ ಬೇಗ್ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು. ಆದರೆ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರೋಷನ್ ಬೇಗ್ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಪಕ್ಷ ದಯನೀಯವಾಗಿ ಸೋಲಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್-ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಬೇಕೆಂದು ಎಂದು ಕಿಡಿಕಾರಿದ್ದರು.

    ಲೋಕಸಭಾ ಚುನಾವಣೆಗೂ ಮುನ್ನ ನಾನೇ ಮುಂದಿನ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದರು. ಈಗ ಫಲಿತಾಂಶ ಬಂದ ಮೇಲೆ ಇದೆಲ್ಲ ಇಳಿಯಿತೆ ಸಿದ್ದರಾಮಯ್ಯ ಎಂದಿದ್ದ ರೋಷನ್ ಬೇಗ್, “ಇಳಿದು ಬಾ, ನೀ ಇಳಿದು ಬಾ” ಎಂದು ಸಿದ್ದರಾಮಯ್ಯ ಮಾದರಿಯನ್ನೇ ಅನುಕರಿಸಿ ನಟನೆಯ ಮೂಲಕ ವ್ಯಂಗ್ಯವಾಡಿದ್ದರು. ಅಷ್ಟೇ ಅಲ್ಲದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧವೂ ಕಿಡಿಕಾರಿದ್ದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ನಾಯಕರ ಕೆಂಗೆಣ್ಣಿಗೆ ಗುರಿಯಾಗಿದ್ದರು.

    ಐಎಂಎ ಹಗರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಮುಜುಗುರಕ್ಕೆ ಈಡಾಗುವುದನ್ನು ತಪ್ಪಿಸಲು  ಮುಂಜಾಗ್ರತಾ ಕ್ರಮವಾಗಿ ಮಾಜಿ ಸಚಿವರ ವಿರುದ್ಧ ಎಐಸಿಸಿ ಕ್ರಮಕೈಗೊಂಡಿದೆ ಎಂದು ಮೂಲಗಳಿಂದ ಕೇಳಿಬಂದಿದೆ.