ಪಾತ್ರಗಳಿಗಾಗಿ ಕಲಾವಿದರು ಕಸರತ್ತು ಮಾಡೋದು ಹೊಸದೇನೂ ಅಲ್ಲ. ಆದರೆ ಗಾಯಕ ಕಂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಇದೇ ಮೊದಲ ಬಾರಿಗೆ ಹೀರೋ ಆಗಿ ಅಭಿನಯಿಸಿದ್ದಾರೆ. ಅವರ ಮೊದಲ ಸಿನಿಮಾದ ಪಾತ್ರಕ್ಕಾಗಿ ಬರೋಬ್ಬರಿ 14 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅದು ಇನ್ಸ್ಪೆಕ್ಟರ್ ಪಾತ್ರಕ್ಕಾಗಿ ಎನ್ನುವುದು ವಿಶೇಷ.
ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸುತ್ತಿರುವ ‘ಸೂತ್ರಧಾರಿ’ ಚಿತ್ರದ ‘ಡ್ಯಾಶ್’ ಸಾಂಗ್ ಸಾಕಷ್ಟು ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ನಂತರ ಈ (Sutradhari) ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ ‘ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು’ ಎಂಬ ಹಾಡು ಬಿಡುಗಡೆ ಆಗಿ ಜನರ ಮನಸು ಸೆಳೆದಿದೆ. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ.
ಸೂತ್ರಧಾರಿ ಸಿನಿಮಾ ಕಿರಣ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿದ್ದು, ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರ ತಾರಾ ಬಳಗವಿದೆ.
ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸುತ್ತಿರುವ ‘ಸೂತ್ರಧಾರಿ’ ಚಿತ್ರದ ‘ಡ್ಯಾಶ್’ ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ ಸೂತ್ರಧಾರಿ (Sutradhari) ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ ‘ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಬಗ್ಗೆ ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ ‘ಡ್ಯಾಶ್ ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ (Vijay Eshwar) ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ ಎಂದು ನಿರ್ಮಾಪಕ ನವರಸನ್ (Navarasan) ತಿಳಿಸಿದರು.
ಸೂತ್ರಧಾರಿ ಸಿನಿಮಾದ ಡ್ಯಾಶ್ ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ ‘ಏನ್ ಮಾಡ್ಬೇಕು’ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎನ್ನುತ್ತಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.
ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ ಸೂತ್ರಧಾರಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
ಗಾಯಕನಾಗಿ, ಗೀತರಚನೆಕಾರನಾಗಿ, ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ, ಈಗ ನಾಯಕನಾಗಿಯೂ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ (Chandan Shetty) ‘ಸೂತ್ರಧಾರಿ’ (Sutradhari) ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಈ ಸಿನಿಮಾಗೆ ಡಬ್ಬಿಂಗ್ (Dubbing) ಕೆಲಸ ಆರಂಭವಾಗಿದ್ದು, ಇಂದಿನಿಂದ ಚಂದನ್ ಮಾತಿನ ಮರುಲೇಪನ ಮಾಡುತ್ತಿದ್ದಾರೆ. ಇದು ಇವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರವಾಗಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ (Kiran Kumar) ನಿರ್ದೇಶನ ಮಾಡುತ್ತಿದ್ದಾರೆ.
ಇದು ನನ್ನ ನಿರ್ಮಾಣದ ಐದನೇ ಚಿತ್ರ. ಈವರೆಗೂ ನಮ್ಮ ಸಂಸ್ಥೆಯ ಮೂಲಕ 180ಕ್ಕೂ ಹೆಚ್ಚು ಚಿತ್ರಗಳ ಇವೆಂಟ್ ನಡೆಸಿಕೊಟ್ಟಿದ್ದೇನೆ. ನಿರ್ದೇಶನದೊಂದಿಗೆ ವಿತರಕನಾಗೂ ಕಾರ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ಸೂತ್ರಧಾರಿ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ ತಂಡದವರೇ ಆದ ಕಿರಣ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಂದನ್ ಶೆಟ್ಟಿ ನಾಯಕನಾಗಿ, ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದಿದ್ದಾರೆ ನಿರ್ಮಾಪಕ ನವರಸನ್. ಇದನ್ನೂ ಓದಿ:ರಾಕಿ ಭಾಯ್ ಲೆಜೆಂಡ್ ಎಂದು ಹಾಡಿ ಹೊಗಳಿದ ಪೂಜಾ ಹೆಗ್ಡೆ
ನಾಯಕನಾಗಿ ನಾನು ಅಭಿನಯಿಸುತ್ತಿರುವ ಮೊದಲ ಚಿತ್ರ ‘ಎಲ್ರ ಕಾಲೆಳಿಯುತ್ತೆ ಕಾಲ’. ಆ ಚಿತ್ರ ರೆಟ್ರೊ ಶೈಲಿಯಲ್ಲಿ ಇರುತ್ತದೆ. ಸೂತ್ರಧಾರಿ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಕಿರಣ್ ಕುಮಾರ್ ಉತ್ತಮ ಕಥೆ ಬರೆದಿದ್ದಾರೆ. ಮರ್ಡರ್ ಮಿಸ್ಟರಿ ಕಥೆ ಅಂತ ಹೇಳಬಹುದು. ಈ ಚಿತ್ರಕ್ಕಾಗಿ ನಾನು ಹನ್ನೆರಡು ಕೆಜಿ ತೂಕ ಇಳಿಸಿಕೊಂಡಿದ್ದೀನಿ. ಸಂಗೀತ ನಿರ್ದೇಶನವನ್ನೂ ನಾನೇ ಮಾಡುತ್ತಿದ್ದೇನೆ. ಎಲ್ಲರೂ ಗುನಗುವಂತಹ ಹಾಡುಗಳನ್ನು ಕೊಟ್ಟಿದ್ದೇನೆ ಎಂದಿದ್ದಾರೆ ಚಂದನ್ ಶೆಟ್ಟಿ.
ಸೂತ್ರಧಾರಿ ಎಲ್ಲರಿಗೂ ಮೆಚ್ಚುಗೆಯಾಗುವಂತಹ ಕಥಾಹಂದರ ಹೊಂದಿದೆ. ನಾನು ನವರಸನ್ (Navarasan) ಅವರ ಬಳಿ ಸಹ ನಿರ್ದೇಶಕನಾಗಿ ಹಾಗೂ ಪಿ.ಕೆ.ಹೆಚ್ ದಾಸ್ ಅವರ ಹತ್ತಿರ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಹೇಳಿದ್ದ ನಿರ್ದೇಶಕ ಕಿರಣ್ ಕುಮಾರ್, ಅವಕಾಶ ಕೊಟ್ಟ ನವರಸನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಾಯಕಿಯಾಗಿ ಅಪೂರ್ವ (Apoorva), ಹಿರಿಯ ನಟ ತಬಲ ನಾಣಿ ಹಾಗೂ ಗಣೇಶ್ ನಾರಾಯಣ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.
ಗಾಯಕನಾಗಿ, ಗೀತರಚನೆಕಾರನಾಗಿ, ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ (Chandan Shetty) “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ. “ಸೂತ್ರಧಾರಿ” ಚಿತ್ರದ ಚಿತ್ರೀಕರಣ ಅಕ್ಟೋಬರ್ 10 ರಿಂದ ಆರಂಭವಾಗಲಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕರಾದ ಕೆ.ಸಿ.ಎನ್ ಕುಮಾರ್, ಗೋವಿಂದರಾಜು, ಸಂಜಯ್ ಗೌಡ, ಗಿರೀಶ್ ಹಾಗೂ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮುಂತಾದವರು ಸಮಾರಂಭಕ್ಕೆ ಆಗಮಿಸಿ “ಸೂತ್ರಧಾರಿ”ಗೆ (Sutradhari) ಶುಭ ಕೋರಿದರು. ಇದು ನನ್ನ ನಿರ್ಮಾಣದ ಐದನೇ ಚಿತ್ರ. ಈವರೆಗೂ ನಮ್ಮ ಸಂಸ್ಥೆಯ ಮೂಲಕ 180ಕ್ಕೂ ಹೆಚ್ಚು ಚಿತ್ರಗಳ ಇವೆಂಟ್ ನಡೆಸಿಕೊಟ್ಟಿದ್ದೇನೆ. ನಿರ್ದೇಶನದೊಂದಿಗೆ ವಿತರಕನಾಗೂ ಕಾರ್ಯ ನಿರ್ವಹಿಸಿದ್ದೇನೆ. ಪ್ರಸ್ತುತ “ಸೂತ್ರಧಾರಿ” ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ ತಂಡದವರೇ ಆದ ಕಿರಣ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಂದನ್ ಶೆಟ್ಟಿ ನಾಯಕನಾಗಿ, ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೇ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನವರಸನ್.
ನಾಯಕನಾಗಿ ನಾನು ಅಭಿನಯಿಸುತ್ತಿರುವ ಮೊದಲ ಚಿತ್ರ “ಎಲ್ರ ಕಾಲೆಳಿಯುತ್ತೆ ಕಾಲ”. ಆ ಚಿತ್ರ ರೆಟ್ರೊ ಶೈಲಿಯಲ್ಲಿ ಇರುತ್ತದೆ. “ಸೂತ್ರಧಾರಿ” ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಕಿರಣ್ ಕುಮಾರ್ ಉತ್ತಮ ಕಥೆ ಬರೆದಿದ್ದಾರೆ. ಮರ್ಡರ್ ಮಿಸ್ಟರಿ ಕಥೆ ಅಂತ ಹೇಳಬಹುದು. ಈ ಚಿತ್ರಕ್ಕಾಗಿ ನಾನು ಹನ್ನೆರಡು ಕೆಜಿ ತೂಕ ಇಳಿಸಿಕೊಂಡಿದ್ದೀನಿ. ಸಂಗೀತ ನಿರ್ದೇಶನವನ್ನೂ ನಾನೇ ಮಾಡುತ್ತಿದ್ದೇನೆ. ಎಲ್ಲರೂ ಗುನಗುವಂತಹ ಹಾಡುಗಳನ್ನು ಕೊಡುತ್ತೇನೆ ಎಂದು ಚಂದನ್ ಶೆಟ್ಟಿ ತಿಳಿಸಿದರು. ಇದನ್ನೂ ಓದಿ:ಹಾಲಿವುಡ್‌ಗೆ ಯಶ್ ಎಂಟ್ರಿ? ವಿಶ್ವದ ಟಾಪ್ ರೇಸರ್ ಲೇವಿಸ್ ಹ್ಯಾಮಿಲ್ಟನ್ ಭೇಟಿ
“ಸೂತ್ರಧಾರಿ” ಎಲ್ಲರಿಗೂ ಮೆಚ್ಚುಗೆಯಾಗುವಂತಹ ಕಥಾಹಂದರ ಹೊಂದಿದೆ. ನಾನು ನವರಸನ್ (Navarasan) ಅವರ ಬಳಿ ಸಹ ನಿರ್ದೇಶಕನಾಗಿ ಹಾಗೂ ಪಿ.ಕೆ.ಹೆಚ್ ದಾಸ್ ಅವರ ಹತ್ತಿರ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಹೇಳಿದ್ದ ನಿರ್ದೇಶಕ ಕಿರಣ್ ಕುಮಾರ್, ಅವಕಾಶ ಕೊಟ್ಟ ನವರಸನ್ ಅವರಿಗೆ ಧನ್ಯವಾದ ತಿಳಿಸಿದರು.
ತಮ್ಮ ಪಾತ್ರದ ಬಗ್ಗೆ ನಾಯಕಿ ಅಪೂರ್ವ (Apoorva), ಹಿರಿಯ ನಟ ತಬಲ ನಾಣಿ ಹಾಗೂ ಗಣೇಶ್ ನಾರಾಯಣ್ ಮಾತನಾಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಗೀತರಚನೆ ಮಾಡಿ, ಸಂಭಾಷಣೆ ಬರೆದಿರುವ ಕಿನಾಲ್ ರಾಜ್ ಹಾಗೂ ಸಂಕಲನಕಾರ ಸತೀಶ್ ಚಂದ್ರಯ್ಯ ತಮ್ಮ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.
Live Tv
[brid partner=56869869 player=32851 video=960834 autoplay=true]