Tag: Suttur Math

  • ಎಂತಹ ನಾಯಕರಾದರೂ ಸಿದ್ದರಾಮಯ್ಯ ನನ್ನಂತೆ ಒಬ್ಬ ಅಭ್ಯರ್ಥಿ: ಸೋಮಣ್ಣ

    ಎಂತಹ ನಾಯಕರಾದರೂ ಸಿದ್ದರಾಮಯ್ಯ ನನ್ನಂತೆ ಒಬ್ಬ ಅಭ್ಯರ್ಥಿ: ಸೋಮಣ್ಣ

    ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಂತಹ ನಾಯಕರಾದರು ಕೂಡ ಇಲ್ಲಿ ನನ್ನಂತೆ ಒಬ್ಬ ಅಭ್ಯರ್ಥಿ ಅಷ್ಟೇ ಎಂದು ಸಚಿವ ವಿ.ಸೋಮಣ್ಣ V.Somanna) ಗುರುವಾರ ಮೈಸೂರಿನಲ್ಲಿ (Mysuru) ಹೇಳಿದ್ದಾರೆ.

    ಸುತ್ತೂರು ಮಠಕ್ಕೆ (Suttur Math) ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಹಾಗೂ ಸಿದ್ದರಾಮಯ್ಯ ಒಂದೇ ಗರಡಿಯಲ್ಲಿ ಪಳಗಿದವರು. ವರುಣಾ ಕ್ಷೇತ್ರದಲ್ಲಿ ಈಗ ನಾನು ನೆಪ ಮಾತ್ರ. ಪಕ್ಷದಲ್ಲಿ ಯಾವ ಮುಖಂಡರು ಚಿಕ್ಕವರಲ್ಲ ಹಾಗೂ ದೊಡ್ಡವರಲ್ಲ. ಇಲ್ಲಿ ಪಕ್ಷ ಹಾಗೂ ಕಾರ್ಯಕರ್ತರು ದೊಡ್ಡವರು ಎಂದಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಪ್ರಚಾರಕ್ಕೆ ಯಾರು ಬರುತ್ತಾರೆ, ಯಾರು ಬರುವುದಿಲ್ಲ ಎಂಬ ಚರ್ಚೆ ಅನಗತ್ಯ. ಎಲ್ಲರೂ ಸೇರಿಯೇ ನನ್ನನ್ನು ವರುಣಾ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

    ನನಗೆ 75 ವರ್ಷವಾದ ಮೇಲೆ ಬಿಜೆಪಿಯಲ್ಲಿ ಯಾವ ಸ್ಥಾನ ಸಿಗುತ್ತದೆ ಎಂಬುದು ನನಗೆ ಗೊತ್ತು. ನಾನು ಇಲ್ಲಿ ಶಾಶ್ವತ ಅಲ್ಲ. ಹಾಗೆಂದು ಇದು ನನ್ನ ಕೊನೆಯ ಚುನಾವಣೆ ಅಥವಾ ರಾಜಕೀಯ ನಿವೃತ್ತಿ ಅಲ್ಲ. ನಮ್ಮ ಪಕ್ಷದ ನಿಯಮಗಳಂತೆ ನಾನು ಇರುತ್ತೇನೆ. ಪಕ್ಷದೊಳಗೆ ಯಾರಾದರೂ ಇಲ್ಲ ಸಲ್ಲದ್ದನ್ನು ಮಾತಾಡುತ್ತಾರೆ. ಅದನ್ನು ದೊಡ್ಡ ವಿಚಾರವಾಗಿ ಬಿಂಬಿಸುವ ಅಗತ್ಯವಿಲ್ಲ ಎಂದಿದ್ದಾರೆ.

    ಗೋವಿಂದರಾಜ ನಗರದ ಟಿಕೆಟ್ ವಿಚಾರ ಸಂಜೆಯೊಳಗೆ ಬಗೆಹರಿಯಲಿದೆ. ನಾಳೆಯಿಂದ ವರುಣಾ ಕ್ಷೇತ್ರದ ಪ್ರಚಾರ ಆರಂಭಿಸುತ್ತೇನೆ. ಕ್ಷೇತ್ರದ ಪ್ರತಿ ಹಳ್ಳಿಯನ್ನು ಸುತ್ತುತ್ತೇನೆ. ಏ.17 ರಂದು ವರುಣಾ (Varuna) ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ. ಏ.19 ರಂದು ಚಾಮರಾಜನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗುಡ್‌ ಬೈ

  • ರಾಮ ಮಂದಿರ ನಿರ್ಮಾಣಕ್ಕೆ ಸುತ್ತೂರು ಮಠದಿಂದ 10 ಲಕ್ಷ ದೇಣಿಗೆ

    ರಾಮ ಮಂದಿರ ನಿರ್ಮಾಣಕ್ಕೆ ಸುತ್ತೂರು ಮಠದಿಂದ 10 ಲಕ್ಷ ದೇಣಿಗೆ

    ಮೈಸೂರು: ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಶ್ರೀ ಸುತ್ತೂರು ಮಠ ಹಾಗೂ ಗಣಪತಿ ಸಚ್ಚಿದಾನಂದ ಆಶ್ರಮದಿಂದ ತಲಾ 10 ಲಕ್ಷ ರೂ. ದೇಣಿಗೆ ನೀಡಲಾಗುತ್ತಿದೆ.

    ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಶ್ರೀರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಮಾನದ ಸಂತರ ಸಮಾವೇಶದಲ್ಲಿ ಈ ಘೋಷಣೆ ಮಾಡಲಾಯಿತು. ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ ಎಂಬ ಸಂಕಲ್ಪದಿಂದ ಹಣ ನೀಡೋಣ. ಸರ್ಕಾರದ ಅನುದಾನ, ಶ್ರೀಮಂತರ ದುಡ್ಡಿನಿಂದ ಶ್ರೀರಾಮ ಮಂದಿರ ನಿರ್ಮಾಣವಾಗೋದು ಬೇಡ ಎಂಬುದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೇರಿದಂತೆ ಪ್ರತಿಯೊಬ್ಬರ ಆಶಯ. ದೇಶದ ಪ್ರತಿಯೊಬ್ಬ ಭಾರತೀಯ ಹಿಂದೂ ಸಮರ್ಪಿಸುವ ನಿಧಿಯಿಂದ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದೇ ಎಲ್ಲರ ಆಶಯ. ಇದನ್ನು ಪೂರೈಸಲು ಎಲ್ಲರೂ ಕೈಜೋಡಿಸೋಣ ಎಂದು ಸಮಾವೇಶದಲ್ಲಿ ನೆರೆದಿದ್ದ ಸಂತರು ಒಕ್ಕೊರಲಿನಿಂದ ಪ್ರತಿಪಾದಿಸಿದರು.

    ನಿಧಿ ಸಮರ್ಪಣ ಅಭಿಯಾನ ಪ್ರತಿ ಹಳ್ಳಿಗೂ ಬಂದ ಸಂದರ್ಭದಲ್ಲಿ ಆಯಾ ಭಾಗದ ಮಠಾಧೀಶರೇ ಜನರ ಬಳಿ ತೆರಳಿ ನಿಧಿ ಸಂಗ್ರಹಿಸಿ ಕೊಡಬೇಕು ಎಂದು ಸುತ್ತೂರು ಶ್ರೀ ಶಿವರಾತ್ರಿಶ್ವರ ದೇಶಿಕೇಂದ್ರ ಸ್ವಾಮೀಜಿ ಸಮಾವೇಶದಲ್ಲಿ ಹೇಳಿದರು. ಸುತ್ತೂರು ಶ್ರೀಗಳ ಹೇಳಿಕೆಗೆ ಸಮಾವೇಶದಲ್ಲಿ ಉಪಸ್ಥಿತರಿದ್ದ ಎಲ್ಲ ಮಠಾಧೀಶರು ಸಹಮತ ವ್ಯಕ್ತಪಡಿಸಿದ್ದರು.

  • ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳ ಪಾತ್ರ ಅಗಾಧ: ಸುತ್ತೂರು ಶ್ರೀ

    ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳ ಪಾತ್ರ ಅಗಾಧ: ಸುತ್ತೂರು ಶ್ರೀ

    ಚಿಕ್ಕೋಡಿ: ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳು ಹಾಗೂ ಸಂಘ ಸಂಸ್ಥೆಗಳ ಪಾತ್ರ ಅಗಾಧವಾಗಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ದುರದುಂಡೇಶ್ವರ ವಿದ್ಯಾವರ್ಧಕ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮತ್ತು ಕಾಯಕಯೋಗಿ ಬಸಗೌಡ ಪಾಟೀಲ್ ಅವರ ಕಂಚಿನ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಕಲಿಸಬೇಕಾದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಬಡ ಜನರಲ್ಲಿ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಮಠಗಳು ಹಾಗೂ ಸಂಘ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

    ಸಮಾರಂಭದಲ್ಲಿ ಆಶೀರ್ವಚನ ನೀಡಿದ ವಿಜಯಪುರ ಯೋಗಜ್ಞಾನಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಎಲ್ಲ ದಾನಕ್ಕಿಂತ ಶಿಕ್ಷಣ ದಾನ ಶ್ರೇಷ್ಠವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣದ ದಾನ ನೀಡುತ್ತಿರುವ ದುರದುಂಡೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯ ಜನ ಮೆಚ್ಚುಗೆಗೆ ಕಾರಣವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾ ದಾನ ನೀಡಿರುವ ಈ ಸಂಸ್ಥೆಯ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರು.

    ಸಮಾರಂಭದಲ್ಲಿ ಗದಗದ ತೊಂಟದ ಸಿದ್ದರಾಮ ಮಹಾಸ್ವಾಮೀಜಿಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಎ.ಬಿ.ಪಾಟೀಲ್, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಭಾಗವಹಿಸಿ ಹಲವಾರು ಮಾಠಾಧೀಶರು ಉಪಸ್ಥಿತರಿದ್ದರು.

  • ಕೈ ಕೈ ಹಿಡಿದು ಜ್ಯೋತಿ ಬೆಳಗಿದ್ರು ಎಚ್‍ಡಿಕೆ, ಬಿಎಸ್‍ವೈ

    ಕೈ ಕೈ ಹಿಡಿದು ಜ್ಯೋತಿ ಬೆಳಗಿದ್ರು ಎಚ್‍ಡಿಕೆ, ಬಿಎಸ್‍ವೈ

    ಮೈಸೂರು: ಶ್ರೀ ಕ್ಷೇತ್ರದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 103ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕೈ ಕೈ ಹಿಡಿದು ಜ್ಯೋತಿ ಬೆಳಗಿದ್ದಾರೆ.

    ನಗರದ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿ, ಬಳಿಕ ಎಚ್.ಡಿ.ಕುಮಾರಸ್ವಾಮಿಗೆ ಮೇಣದ ಬತ್ತಿ ನೀಡಿ ಜ್ಯೋತಿ ಬೆಳಗಿಸುವಂತೆ ತಿಳಿಸಿದರು. ಆಗ ಕುಮಾರಸ್ವಾಮಿ ತಮ್ಮ ಪಕ್ಕದಲ್ಲಿಯೇ ನಿಂತಿದ್ದ ಯಡಿಯೂರಪ್ಪ ಅವರನ್ನು ಕರೆದು ನೀವು ಕೈ ಜೋಡಿಸಿ ಎಂದರು. ಆಗ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರಿಬ್ಬರು ಸೇರಿ ಜ್ಯೋತಿ ಬೆಳಗಿದರು.

    ಉದ್ಘಾಟನೆ ಬಳಿಕ, ಅಕ್ಕಪಕ್ಕದಲ್ಲಿ ಕುಳಿತ್ತಿದ್ದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ರಾಜಕೀಯ ವೈಷಮ್ಯ, ವಿರೋಧ ಮರೆತು ಕೆಲ ಹೊತ್ತು ಮಾತುಕತೆ ನಡೆಸಿದರು. ಇನ್ನು ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬರು ಬಂದು ಯಡಿಯೂರಪ್ಪ ಅವರಿಗೆ ಚೀಟಿ ಕೊಟ್ಟು ಹೋಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv