Tag: Suttur Shree

  • ಆದೇಶ ಪಾಲನೆ ನಮ್ಮ ದೌರ್ಬಲ್ಯ ಅಲ್ಲ: ಸುತ್ತೂರು ಶ್ರೀ

    ಆದೇಶ ಪಾಲನೆ ನಮ್ಮ ದೌರ್ಬಲ್ಯ ಅಲ್ಲ: ಸುತ್ತೂರು ಶ್ರೀ

    ಮೈಸೂರು: ಕಾವೇರಿ ನೀರಿನ (Cauvery Water) ವಿಚಾರದಲ್ಲಿ ಕೊನೆಗೂ ಮೌನ ಮುರಿದ ಸುತ್ತೂರು ಶ್ರೀಗಳು (Suttur Shree) ಪತ್ರಿಕಾ ಪ್ರಕಟಣೆ ಮೂಲಕ ಕಾವೇರಿ ವಿಚಾರದಲ್ಲಿ ತಮ್ಮ ಧ್ವನಿ ಎತ್ತಿದ್ದಾರೆ.

    ಪತ್ರದ ವಿವರ: ಕಾವೇರಿ ನೀರಿನ ಸಮಸ್ಯೆ ಮತ್ತೊಮ್ಮೆ ಉಲ್ಬಣಿಸಿದೆ. ಪ್ರತಿವರ್ಷವೂ ಈ ಸಮಸ್ಯೆ ಉಂಟಾಗುತ್ತಲೇ ಇದೆ. ಶತಮಾನಗಳಿಂದ ಇದೊಂದು ಜ್ವಲಂತ ಸಮಸ್ಯೆಯಾಗಿದೆ. ಪ್ರಾರಂಭದ ದಿನಗಳಿಂದಲೂ ತಮಿಳುನಾಡು ತನಗೆ ಅಗತ್ಯವಾದುದಕ್ಕಿಂತ ಹೆಚ್ಚಿನ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಲೇ ಇದೆ. ಕರ್ನಾಟಕದ ಕಾವೇರಿ ನದಿ ಪಾತ್ರದ ರೈತರು ಸಂಕಷ್ಟಕ್ಕೆ ಒಳಗಾಗುತ್ತಲೇ ಇದ್ದಾರೆ.

    ಮೈಸೂರು- ಬೆಂಗಳೂರು ಇತರೆಡೆಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತಿದೆ. ಇದಕ್ಕೆ ಅಂತಿಮ ಪರಿಹಾರ ಯಾವಾಗ ಎಂಬುದೇ ಪ್ರಶ್ನಾರ್ಥಕವಾಗಿದೆ. ಕರ್ನಾಟಕ ಸರ್ಕಾರವು ಎಲ್ಲ ಸಂದರ್ಭಗಳಲ್ಲಿಯೂ ನೆರೆರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ತನಗೆ ಎಷ್ಟೇ ತೊಂದರೆಗಳಾದರು ನ್ಯಾಯಾಧೀಕರಣ ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಜನಾಭಿಪ್ರಾಯದ ಕಡು ವಿರೋಧದ ನಡುವೆಯೂ ಗೌರವಿಸಿ ಪಾಲಿಸುತ್ತ ಬಂದಿದೆ. ಇದನ್ನು ತಮಿಳುನಾಡಾಗಲಿ ಅಥವಾ ಸಂಬಂಧಪಟ್ಟವರು ಯಾರೇ ಆಗಲಿ ದೌರ್ಬಲ್ಯವೆಂದು ಭಾವಿಸಬಾರದು.

    ಈ ಸಮಸ್ಯೆಗೆ ಅಂತಿಮ ಪರಿಹಾರದ ಅಗತ್ಯವಿದೆ. ಮಳೆಯನ್ನು ಆಧರಿಸಿ ನೀರಿನ ಸಂಗ್ರಹದ ಆಧಾರದ ಮೇಲೆ ನೀರು ಹಂಚಿಕೆಯ ಬಗೆಗೆ ಪ್ರತಿವರ್ಷವೂ ಕ್ರಮ ತೆಗೆದುಕೊಳ್ಳಬೇಕಾದುದು ಅಗತ್ಯ. ಪ್ರತಿವರ್ಷ ಆಯಾ ಕಾಲಕ್ಕೆ ಸರಿಯಾಗಿ ಮಳೆಯಾದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಅನಾವೃಷ್ಟಿಯಾದಾಗಲೆಲ್ಲ ಈ ಸಮಸ್ಯೆ ಸಹಜವಾಗಿ ಉಂಟಾಗುತ್ತಲೇ ಇರುತ್ತದೆ. ಇದನ್ನೂ ಓದಿ: ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

    ಇದೀಗ ಉಲ್ಬಣಿಸಿರುವ ಸಮಸ್ಯೆಗೆ ಭಾರತ ಸರ್ಕಾರ, ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳು ಸಮಾಲೋಚಿಸಿ ಕರ್ನಾಟಕ-ತಮಿಳುನಾಡು ಹೊರತಾದ ಹೊರ ರಾಜ್ಯಗಳ ನೀರಾವರಿ ತಜ್ಞರ ಸಮಿತಿ ರಚಿಸಿ, ನೀರಿನ ಸಂಗ್ರಹಣೆಯ ವಾಸ್ತವಾಂಶವನ್ನು ಅಧ್ಯಯನ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುವುದು ಇಂದಿನ ತುರ್ತು ಅಗತ್ಯವಾಗಿದೆ.

    ಕರ್ನಾಟಕದ ಜನರ ಕುಡಿಯುವ ನೀರಿಗೆ, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಅಗತ್ಯವಾಗುವ ನೀರನ್ನು ಬಳಸಿಕೊಂಡು ನಂತರ ಹೆಚ್ಚಿನ ನೀರನ್ನು ತಮಿಳುನಾಡಿಗೂ ಅನುಕೂಲವಾಗುವಂತೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರೆಲ್ಲರು ಮುಂದಾಗಬೇಕೆಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿವಾದಿತ ಬಸ್ ನಿಲ್ದಾಣಕ್ಕೆ ರಾತ್ರೋರಾತ್ರಿ ನಾಮಫಲಕ – ಸುತ್ತೂರು ಶ್ರೀಗಳ, ಮೋದಿ ಫೋಟೋ ಬಳಕೆ

    ವಿವಾದಿತ ಬಸ್ ನಿಲ್ದಾಣಕ್ಕೆ ರಾತ್ರೋರಾತ್ರಿ ನಾಮಫಲಕ – ಸುತ್ತೂರು ಶ್ರೀಗಳ, ಮೋದಿ ಫೋಟೋ ಬಳಕೆ

    ಮೈಸೂರು: ಊಟಿ ಮುಖ್ಯ ರಸ್ತೆಯಲ್ಲಿನ ವಿವಾದಿತ ಬಸ್ ನಿಲ್ದಾಣಕ್ಕೆ ರಾತ್ರೋರಾತ್ರಿ ನಾಮಫಲಕ ಅಳವಡಿಕೆಯಾಗಿದೆ.

    ಮೈಸೂರಿನ (Mysuru) ಊಟಿ ಮುಖ್ಯ ರಸ್ತೆಯಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದು, ಈ ಬಸ್ ನಿಲ್ದಾಣಕ್ಕೆ ರಾತ್ರೋ, ರಾತ್ರಿ ಜೆಎಸ್‍ಎಸ್ (JSS) ಕಾಲೇಜ್ ಬಸ್ ನಿಲ್ದಾಣ ಎಂದು ನಾಮಫಲಕ ಅಳವಡಿಸಲಾಗಿದೆ. ಅಲ್ಲದೇ ಫಲಕದ ಒಂದು ಬದಿಯಲ್ಲಿ ಸುತ್ತೂರು ಆದಿ ಜಗದ್ಗುರುಗಳ ಹಾಗೂ ಸುತ್ತೂರು ಶ್ರೀ ರಾಜೇಂದ್ರ ಸ್ವಾಮೀಜಿಗಳ ಫೋಟೋ ಹಾಕಲಾಗಿದ್ದು, ಮತ್ತೊಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (BasavrajBommai) ಫೋಟೋವನ್ನು ಹಾಕಲಾಗಿದೆ.

    ಬಸ್ ನಿಲ್ದಾಣ ತೆರವಿಗೆ ಸಂಸದ ಪ್ರತಾಪ್ ಸಿಂಹ  (Pratap Simha) ಕೊಟ್ಟ ಡೆಡ್ ಲೈನ್ ಇವತ್ತು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಈ ಬದಲಾವಣೆ ನಡೆದಿದೆ. ಇದನ್ನೂ ಓದಿ: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    ಸೋಮವಾರ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದ ಪ್ರತಾಪ್ ಸಿಂಹ ಅವರು, ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ದರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಪಾರಂಪರಿಕವಾಗಿ ಗುಂಬಜ್ ನಿರ್ಮಾಣ – ತಜ್ಞರನ್ನು ಕಳಿಸಲು ಸರ್ಕಾರಕ್ಕೆ ರಾಮದಾಸ್ ಪತ್ರ

    Live Tv
    [brid partner=56869869 player=32851 video=960834 autoplay=true]

  • ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಹುಣಸೂರು ನೂತನ ಶಾಸಕ

    ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಹುಣಸೂರು ನೂತನ ಶಾಸಕ

    ಮೈಸೂರು: ಸುತ್ತೂರು ಮಠಕ್ಕೆ ಹುಣಸೂರು ನೂತನ ಕಾಂಗ್ರೆಸ್ ಶಾಸಕ ಹೆಚ್ ಪಿ ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

    ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ತೆರಳಿ ಸುತ್ತೂರು ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದರು. ನಂತರ ಸುತ್ತೂರು ಶ್ರೀಗಳು ಶಾಸಕ ಮಂಜುನಾಥ್ ಅವರನ್ನು ಆತ್ಮೀಯವಾಗಿ ಗೌರವಿಸಿದರು. ಶ್ರೀಗಳ ಜೊತೆ ಶಾಸಕ ಎಚ್ ಪಿ ಮಂಜುನಾಥ್ ಕೆಲ ಕಾಲ ಚರ್ಚೆ ನಡೆಸಿದರು.

    ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿಜೆಪಿಯ ವಿಶ್ವನಾಥ್ ಅವರನ್ನು ಹೆಚ್ ಪಿ ಮಂಜುನಾಥ್ ಸೋಲಿಸಿದ್ದರು. ಬಿಜೆಪಿ ಪರವಾಗಿ 52,998 ಮತಗಳು ಚಲಾವಣೆಯಾದರೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ 92,725 ಮತಗಳನ್ನು ಪಡೆದಿದ್ದರು. ಕಳೆದ ಬಾರಿ 8,575 ಮತಗಳ ಅಂತರದಿಂದ ಗೆದ್ದ ವಿಶ್ವನಾಥ್ ಈ ಬಾರಿ 39,727 ಮತಗಳ ಅಂತರದಿಂದ ಸೋತಿದ್ದರು.