ಧಾರವಾಡ: ಮದ್ಯಪ್ರಿಯರ ಕೆಲವೊಂದಿಷ್ಟು ಬೇಡಿಕೆಗಳು ನ್ಯಾಯಯುತವಾಗಿವೆ. ಮದ್ಯದ ಬಾಟಲಿಯ ಮೇಲೆ ವಿಮೆ ಮಾಡುವಂತೆ ಮದ್ಯಪ್ರಿಯರು ಬೇಡಿಕೆ ಇಟ್ಟಿದ್ದಾರೆ. ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ.
ಧಾರವಾಡದಲ್ಲಿ (Santosh Lad) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಸುವರ್ಣಸೌಧದ (Suvarna Vidhana Soudha) ಎದುರು ಮದ್ಯಪ್ರಿಯರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮದ್ಯದ ಬಾಟಲಿ ಮೇಲೆ ವಿಮೆ ಮಾಡಿದರೆ, ವಿಮೆ ಕಟ್ಟಲು ಅವರು ತಯಾರಿದ್ದಾರೆ. ಇದು ಎರಡೂ ಕಡೆ ಲಾಭ ಆಗುತ್ತದೆ. ವಿಮೆಯಿಂದ ಅವರ ಆರೋಗ್ಯಕ್ಕೆ ವಿಮೆ ಅನುಕೂಲ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್
ಮದ್ಯಪ್ರಿಯರ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಜೊತೆಗೆ ಚರ್ಚೆ ಮಾಡುತ್ತೇನೆ. ಇದು ಅವರ ಒಳ್ಳೆಯ ಸಲಹೆ. ಈ ಬೇಡಿಕೆಯ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದು ನಗುತ್ತ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ: ಮಗಳ ಬರ್ತ್‌ಡೇ ಆಚರಣೆಗೆ ಸುವರ್ಣ ಸೌಧವನ್ನು (Suvarna Vidhana Soudha) ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್ ಸಭಾಪತಿಗೆ (Legislative Council Chairman) ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ.
ಪತ್ರದಲ್ಲಿ ಏನಿದೆ?
ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ʼಹುಟ್ಟದಟ್ಟಿʼ ಮಾಡುವ ಪದ್ಧತಿಯಿದ್ದು, ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕೆಂದು ವಿನಂತಿ.
ಸದ್ಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸೇರಿದಂತೆ ಅನೇಕ ವಿಚಾರಗಳು ಚರ್ಚೆಯಾಗುತ್ತಿವೆ. ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರ ಕೂಡ ನಡೆಯುತ್ತಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಡಿಸೆಂಬರ್ 22 ರಂದು ಸುವರ್ಣ ಸೌಧದ (Suvarna Vidhana Soudha) ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡುವ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ (Panchamasali) ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mrityunjaya swamiji) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ (2A Reservation) ಘೋಷಿಸಲು ಸರ್ಕಾರಕ್ಕೆ ಡಿಸೆಂಬರ್ 19 ರವರೆಗೂ ಗಡುವು ನೀಡಲಾಗಿದೆ. ಮೀಸಲಾತಿ ಕೊಟ್ಟರೆ ವಿಜಯೋತ್ಸವ ಮಾಡುತ್ತೇವೆ. ಇಲ್ಲವಾದ್ರೆ ಡಿಸೆಂಬರ್ 22 ರಂದು ಸುವರ್ಣ ವಿಧಾನ ಸೌಧ ಮುತ್ತಿಗೆ ಹಾಕುತ್ತೇವೆ. ಮೀಸಲಾತಿಗಾಗಿ ಕಳೆದ ಎರಡು ವರ್ಷಗಳಿಂದ ಸುಧೀರ್ಘ ಹೋರಾಟ ಮಾಡಿದ್ದೇವೆ. ಡಿಸೆಂಬರ್ 19 ರಂದು ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿದ್ರು. ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಘೋಷಣೆ ಮಾಡುವ ಭರವಸೆ ಇದೆ. ಮುಖ್ಯಮಂತ್ರಿಗಳ ನಿಲುವು ನೋಡಿಕೊಂಡು ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್
ಇದೇ ಡಿಸೆಂಬರ್ 22 ರಂದು ಸುವರ್ಣಸೌಧದ ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡ್ತಿದ್ದೇವೆ. ನಾಳೆ ಸವದತ್ತಿ ಮತಕ್ಷೇತ್ರದಲ್ಲಿ ಪಂಚಮಸಾಲಿ ಮೀಸಲಾತಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮೀಸಲಾತಿ ಕೊಟ್ಟರೆ ಯಾವ ರೀತಿ ವಿಜಯೋತ್ಸವ ಮಾಡಬೇಕು. ಮೀಸಲಾತಿ ಕೊಡದಿದ್ದರೆ ಯಾವ ರೀತಿ ಉಗ್ರ ಹೋರಾಟ ಮಾಡಬೇಕು ಎಂಬ ಸ್ಪಷ್ಟವಾದ ತೀರ್ಮಾನ ಮಾಡುತ್ತೇವೆ. ಸವದತ್ತಿಯಿಂದ ಸುವರ್ಣ ವಿಧಾನ ಸೌಧವರೆಗೂ ಪಂಚಲಕ್ಷ ಪಾದಯಾತ್ರೆ ಮಾಡುತ್ತೇವೆ. ಈ ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ
ಸವದತ್ತಿ ಸಮಾವೇಶ ಸಂಜೆ 7 ಗಂಟೆಗೆ ಮುಕ್ತಾಯವಾಗಲಿದೆ. ಅಷ್ಟರೊಳಗಾಗಿ ರಾಜ್ಯ ಸರ್ಕಾರದ ನಿರ್ಧಾರ ಗೊತ್ತಾಗಲಿದೆ. ಸರ್ಕಾರದ ನಿರ್ಧಾರ ನೋಡಿಕೊಂಡು ಹೋರಾಟ ಮಾಡುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸವದತ್ತಿ ಸಮಾವೇಶ ಆಯೋಜನೆ ಮಾಡಿದ್ದೇವೆ. ವಿರಾಟ ಸಮಾವೇಶಕ್ಕೆ ನೂರು ಎಕರೆ ಪ್ರದೇಶದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಂಚಮಸಾಲಿ ಶಕ್ತಿ ಪ್ರದರ್ಶನಕ್ಕೆ ಸ್ವಯಂ ಪ್ರೇರಿತರಾಗಿ ರೊಟ್ಟಿ ಬುತ್ತಿಕಟ್ಟಿಕೊಂಡು ಬರಲಿದ್ದಾರೆ. ಯಡಿಯೂರಪ್ಪನವರು ಕೊಟ್ಟ ಮಾತು ತಪ್ಪಿದ್ದಕ್ಕೆ ಬಾಗಲಕೋಟೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ವಿ. ಅಂತಿಮವಾದ ಹೋರಾಟ ನಡೆಸಲು ನಾವು ಸನ್ನದ್ಧರಾಗಿದ್ದೇವೆ. ಮೀಸಲಾತಿ ನೀಡದಿದ್ದರೆ ಅಹೋರಾತ್ರಿ ಹೋರಾಟ ಮಾಡಲು ಬರುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಆಹ್ವಾನಿಸಿದ್ದಾರೆ. ಮೀಸಲಾತಿ ಕೊಡದಿದ್ದರೆ ಅಹೋರಾತ್ರಿ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ (Kittur Rani Chennamma) ಹಾಗೂ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ (Tourism Department) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (kannada and culture department) ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ: ಸಮಾವೇಶಕ್ಕೂ ಮುನ್ನವೇ ದೇವರ ಮೊರೆ ಹೋದ ಕಾಂಗ್ರೆಸ್ ನಾಯಕರು- ಬಳ್ಳಾರಿಯಲ್ಲಿ ಹೋಮ
ಬೆಂಗಳೂರಿನಲ್ಲಿ ಇಂದು “ರಾಜ್ಯಮಟ್ಟದ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ” ನೀಡಿ ಶುಭ ಹಾರೈಸಿದೆನು
ಸಚಿವರಾದ @GovindKarjol, ಶಾಸಕ ಮಹಾಂತೇಶ್ ದೊಡ್ಡಗೌಡರ್, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. pic.twitter.com/U6iD6HrZe1
ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಕಳೆದಿದೆ. ಮಧ್ಯೆ-ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು, ಅಂದು ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ (Bengaluru) ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳೆಸಿದೆ ಎಂದು ತಿಳಿಸಿದರು.
ಕಿತ್ತೂರಿನಲ್ಲಿ ಶಿಥಿಲಗೊಂಡಿರುವ ಪ್ರಸ್ತುತ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಈಗಾಗಲೇ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ಇದರೊಂದಿಗೆ ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ನಾಳೆ ನಡೆಯುವ ಅಧಿವೇಶನದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಸುವರ್ಣ ಸೌಧ ಮುತ್ತಿಗೆ ಹಾಕಲಾಗುತ್ತದೆ. ಕೃಷಿ ಕಾಯ್ದೆ ವಾಪಸ್ ಪಡೆಯುವವರೆಗೆ ನಿರಂತರ ಹೋರಾಟ ಮಾಡುತ್ತೇವೆ. ಸುಮ್ಮನೆ ಕೈ ಕಟ್ಟಿ ಕುಳಿತು ಕೊಳ್ಳುವ ಮಾತೇ ಇಲ್ಲ. ಅರೆಸ್ಟ್ ಮಾಡಿದರೂ ಹೆದರಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ವಿರೋಧಿ ಕೃಷಿ ಕಾಯ್ದೆ ಕೇಂದ್ರ ಸರ್ಕಾರವೇ ಹಿಂಪಡೆದಿದೆ. ರಾಜ್ಯ ಸರ್ಕಾರವೂ ಕೂಡಾ ವಾಪಸ್ ಪಡೆಯಬೇಕು. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೃಷಿ ಕಾಯ್ದೆಯನ್ನ ಜಾರಿಗೊಳಿಸಿದ್ದಾರೆ. ಭಾರತ ಸರ್ಕಾರ ರೈತರ ಒಂದು ವರ್ಷ ಹೋರಾಟ ನೋಡಿ ಕೃಷಿ ಕಾಯ್ದೆ ವಾಪಸ್ ಪಡೆದಿದ್ದಾರೆ. ರಾಜ್ಯ ಸರ್ಕಾರವೂ ಕೂಡ ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯುತ್ತಾರೆ ಅಂತಾ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಈ ಅಧಿವೇಶನದಲ್ಲಿ ಈ ವಿಷಯ ಮಂಡನೆ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೇವೆ. ಆದರೆ ಸರ್ಕಾರದ ನಡುವಳಿಕೆ ಬದಲಾಗಿ ಕಾಣುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು
ಕೇಂದ್ರ ಸರ್ಕಾರ ವಾಪಸ್ ಪಡೆದರೆ ರಾಜ್ಯ ಸರ್ಕಾರ ವಾಪಸ್ ಪಡೆಬೇಕು ಅಂತ ಕಾನೂನು ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಸಚಿವ ಮಾಧುಸ್ವಾಮಿ ರೈತರಿಗೆ ಕಾನೂನು ಪಾಠ ಹೇಳುತ್ತಿದ್ದಾರೆ. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯದೇ ಇದ್ದರೆ, ಬಿಜೆಪಿ ಕಾರ್ಯಕ್ರಮ ಎಲ್ಲಿ ಇರುತ್ತದೆ ಅಲ್ಲಲ್ಲಿ ಕಪ್ಪು ಬಾವುಟ ಹಿಡಿದು ರೈತರು ಪ್ರತಿಭಟನೆ ಮಾಡುತ್ತೇವೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ದಿಲ್ಲಿ ಮಾದರಿಯ ರೈತ ಹೋರಾಟ ಮಾಡುತ್ತೇವೆ. ಮಹಾಪಂಚಾಯತ ಸಭಾ ಕಾರ್ಯಕ್ರಮ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಇದರ ಪರಿಣಾಮ ಎದುರಿಸಲು ತಯಾರಾಗಬೇಕು. ಎಂದು ಈ ಮುಲಕ ಸಂದೇಶ ನೀಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ‘ಬೀಸ್ಟ್’ ಸಿನಿಮಾ ವಿಶೇಷ ಫೋಟೋ ಶೇರ್ ಮಾಡಿದ ಚಿತ್ರತಂಡ
ಬೆಳಗಾವಿ: ಜಿಲ್ಲೆಯಲ್ಲಿ 600 ರೂ. ಖರ್ಚು ಮಾಡಿ ಕಟ್ಟಲಾದ ವಿಧಾನಸೌಧ ಇಲ್ಲಿಯವರೆಗೂ ಅದು ಸರಿಯಾಗಿ ಉಪಯೋಗ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನಾ ನಿರತರ ಜೊತೆ ಸಂಧಾನ ನಡೆಸಿ ಮಾತನಾಡಿದ ಅವರು, ಸಿಎಂ ಮಾತಿನಿಂದ ಇಂದು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಹೀಗಾಗಿ ನಾನು ವಿರೋಧ ಪಕ್ಷದ ನಾಯಕನಾಗಿ ಇಲ್ಲಿಗೆ ಬಂದಿದ್ದೇನೆ. ದೇವೇಗೌಡರೆ ನಿಮ್ಮ ಮಗನೇ ಇವತ್ತು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಎಲ್ಲ ಭಾಗಕ್ಕೂ ಸರಿಯಾಗಿ ಅನುದಾನ ನೀಡಬೇಕು. ನಂಜುಂಡಪ್ಪ ವರದಿ ನನ್ನ ಬಳಿ ಬಂದಾಗ 1800 ಕೋಟಿ ಅನುದಾನವನ್ನು ಕೊಟ್ಟಿದ್ದೇನೆ. ಇಲ್ಲಿನ ಜನಕ್ಕೆ ನ್ಯಾಯ ಒದಗಿಸಿಕೊಡುವ ಕೆಲಸ ನಾನು ಮಾಡುತ್ತೇನೆ ಎಂದು ಹೇಳಿದರು.
ಸದ್ಯ 13 ಜಿಲ್ಲೆಯಲ್ಲಿ ಬಂದ್ ಮಾಡದೆ ಸಹಕರಿಸಿ, ಹೋರಾಟ ಹಿಂದೆ ಪಡೆಯಬೇಕು ಎಂದು ಹೋರಾಟಗಾರರಲ್ಲಿ ವಿನಂತಿಸಿದ ಅವರು, ಅಖಂಡ ಕರ್ನಾಟಕ ಕಟ್ಟಲು 13 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.
ಬೆಳಗಾವಿ: ಪಕ್ಷಕ್ಕೆ ಬರುವ ಕಾಂಗ್ರೆಸ್- ಜೆಡಿಎಸ್ ಮುಖಂಡರ ಬಳಿ ಚರ್ಚಿಸಿ ಅವರನ್ನು ಪಕ್ಷಕ್ಕೆ ಕರೆತನ್ನಿ ಎಂಬ ಬಿಎಸ್‍ವೈ ಹೇಳಿಕೆ ಬೆನ್ನಲ್ಲೆ ಬಿಜೆಪಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದರು.
ಡಿಕೆಶಿ ಗೆ ಟಾಂಗ್: ಇನ್ನು ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಆದ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ, ಅದು ಸಚಿವ ಡಿಕೆ ಶಿವಕುಮಾರ್ ವೈಯಕ್ತಿಕ ಅಭಿಪ್ರಾಯ. ಉಪಕಾರ ಮಾಡಿದವರನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಉಪಕಾರ ಮಾಡಿದ್ದಾರೆ ಎಂದರು.
ಇದೇ ವೇಳೆ ಸಿದ್ದರಾಮಯ್ಯ ಗುಂಪಿನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಆರೋಪಕ್ಕೂ ತಿರುಗೇಟುಕೊಟ್ಟ ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾಮಾಲೆ ಕಣ್ಣಿಗೆ ಕಾಣೋದು ಹಳದಿಯಂತೆ ಹಾಗೇ ನಾವೇನು ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹೊಸ ಬಜೆಟ್ ಕುರಿತು ಹೊಸ ಸರ್ಕಾರಕ್ಕೆ ಕೇವಲ ಸಲಹೆ ಕೊಟ್ಟಿದ್ದಾರೆ. ಸಲಹೆ ಸ್ವೀಕರಿಸುವುದು ಬಿಡುವುದು ಸಿಎಂ ಅವರಿಗೆ ಬಿಟ್ಟಿದ್ದು. ಹಿಂದಿನ ಸರ್ಕಾರದ ಯೋಜನೆ ಮುಂದುವರೆಸುವುದು ನಮ್ಮ ಉದ್ದೇಶ ಎಂದು ಹೇಳಿದರು.
ಉತ್ತರಕರ್ನಾಟಕ ನಾಯಕರಿಗೆ ನೀಡಲಿ: ಇದೇ ವೇಳೆ ಡಿಸಿಎಂ ಪರಮೇಶ್ವರ್ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿದರೆ ಒಳ್ಳೆಯದು. ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಎಚ್‍ಕೆ ಪಾಟೀಲ್ ಯಾರಿಗಾದರು ನೀಡಿದರೂ ಒಳ್ಳೆಯದು ಎಂದು ತಿಳಿಸಿದರು.