Tag: Swami Chaitanyananda Saraswati

  • 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ಲಕ್ನೋ: ಆಶ್ರಮದಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ (Swami Chaitanyananda Saraswati) ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ (Agra) ಬಂಧಿಸಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ ಸಂಪರ್ಕ ನಡೆಸಿದ ಆರೋಪಗಳಿವೆ.

    ದೆಹಲಿಯ (Delhi) ಶಾರದಾ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯರಾಗಿರುವ ಆರೋಪಿಯು ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016 ರಲ್ಲಿ ಸಹ ಎರಡು ಲೈಂಗಿಕ ಕಿರುಕುಳದ ದೂರು ದಾಖಲಾಗಿದ್ದವು. ಸ್ವಾಮೀಜಿ, ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆಸಿಕೊಂಡು ಉಚಿತ ವಿದೇಶ ಪ್ರವಾಸಗಳ ಆಮಿಷ ಒಡ್ಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದರು. ಮಹಿಳಾ ಹಾಸ್ಟೆಲ್‌ನಲ್ಲಿ ರಹಸ್ಯವಾಗಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆರೋಪಗಳು ಹೊರಬಿದ್ದ ನಂತರ, ಆಶ್ರಮದ ಆಡಳಿತ ಮಂಡಳಿ ಚೈತನ್ಯಾನಂದರನ್ನು ಅವರ ಹುದ್ದೆಯಿಂದ ಹೊರಹಾಕಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

    ವಿದ್ಯಾರ್ಥಿನಿಯರ ದೂರು ಏನು?
    ಸ್ವಾಮಿ ಚೈತನ್ಯಾನಂದ ಸರಸ್ವತಿ ಪಾರ್ಥ ಸಾರಥಿ, ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದಡಿಯಲ್ಲಿ ಪಿಜಿಡಿಎಂ ಕೋರ್ಸ್‌ಗಳನ್ನು ಕಲಿಯುತ್ತಿರುವ ಮಹಿಳಾ ವಿದ್ಯಾರ್ಥಿಗಳಿಗೆ ಅಶ್ಲೀಲ ಭಾಷೆಯನ್ನು ಬಳಸಿ ನಿಂದಿಸುತ್ತಿದ್ದರು, ಮತ್ತು ವಾಟ್ಸಪ್‌ನಲ್ಲಿ ಅಶ್ಲೀಲ ಸಂದೇಶಗಳನ್ನ ಕಳಿಸುತ್ತಿದ್ದರು. ಅಲ್ಲದೇ ದೈಹಿಕ ಸಂಪರ್ಕಕ್ಕೂ ಪ್ರಯತ್ನಿಸಿದ್ದರು. ಸಂಸ್ಥೆಯಲ್ಲಿನ ಕೆಲ ಮಹಿಳಾ ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳು ಅವರ ಬೇಡಿಕೆ ಈಡೇರಿಸುವಂತೆ ಮಹಿಳಾ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದರು. ಇದರಿಂದಾಗಿ ಸಾಕಷ್ಟು ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದರು.

    ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು, 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಈ ಪೈಕಿ 17 ಮಂದಿ ತಮ್ಮ ಮೇಲೆ ನಿಂದನೆಯ ಭಾಷೆ ಬಳಸಿದ್ದಾರೆ, ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆಂದು ಹೇಳಿಕೊಂಡಿದ್ದಾರೆ. ಇದಕ್ಕೆ ನಾವು ವಿರೋಧ ಮಾಡಿದಾಗ ಕೆಲ ಮಹಿಳಾ ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳು ಸಹಕರಿಸುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ಇದು ಒಂದು ದಿನದ ಸಮಸ್ಯೆಯಲ್ಲ ದೀರ್ಘಕಾಲದ ಸಮಸ್ಯೆ ಎಂದು ಹೇಳಿಕೊಂಡಿರುವುದಾಗಿ ದೆಹಲಿ ಪೊಲೀಸರು ಹೇಳಿದ್ದರು. ಇದನ್ನೂ ಓದಿ: ಸ್ವಾಮಿ ಚೈತನ್ಯಾನಂದ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

  • IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!

    IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!

    ನವದೆಹಲಿ: ದೆಹಲಿಯ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದ್ದು, ಮಾಜಿ ವಿದ್ಯಾರ್ಥಿ ಹಾಗೂ ಐಎಎಫ್‌ನ ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಕಾಮಪುರಾಣವೇ ಬಹಿರಂಗಗೊಂಡಿದೆ.

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ `ದೆಹಲಿ ಬಾಬಾ’ ಎಂದೇ ಖ್ಯಾತಿ ಪಡೆದಿದ್ದ ಚೈತನ್ಯಾನಂದ ಸ್ವಾಮೀಜಿ ಮತ್ತಷ್ಟು ಅವಾಂತರು ಬೆಳಕಿಗೆ ಬರ್ತಿವೆ. ಈ ಸ್ವಘೋಷಿತ ದೇವಮಾನವನ ರಾಸಲೀಲೆ ಬಗ್ಗೆ ಮಾಜಿ ವಿದ್ಯಾರ್ಥಿ ಹಾಗೂ ಐಎಎಫ್‌ನ ಗ್ರೂಪ್ ಕ್ಯಾಪ್ಟನ್‌ವೊಬ್ಬರು ಕೂಡ ಕೆಲ ದಿನಗಳ ಹಿಂದಷ್ಟೇ ಇ-ಮೇಲ್ ಕಳಿಸಿದ್ದರು. ಇದರಿಂದಾಗಿಯೇ ಕಾಮಿಸ್ವಾಮಿಯ ಬಣ್ಣ ಬಯಲಿಗೆ ಬಂದಿದೆ ಅಂತಲೂ ತಿಳಿದು ಬಂದಿದೆ.ಇದನ್ನೂ ಓದಿ: ನೀನು ಸುಂದರವಾಗಿ ಕಾಣ್ತೀಯಾ, ಬೇಬಿ I Love You: ಕಾಲೇಜು ವಿದ್ಯಾರ್ಥಿನಿಯರ ಬೆನ್ನುಬಿದ್ದಿದ್ದ ಸ್ವಾಮೀಜಿ

    ಇನ್ನೂ ದೌರ್ಜನ್ಯ ಪ್ರಕರಣದಲ್ಲಿ ಸಂಸ್ಥೆಯ ಡೀನ್ ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಚೈತನ್ಯಾನಂದ ತನ್ನ ನೆಲಮಹಡಿಯ ಕಚೇರಿಯನ್ನು ಲೈಂಗಿಕ ಕಿರುಕುಳದ ತಾಣವನ್ನಾಗಿ ಪರಿವರ್ತಿಸಿದ್ದ. ಸಂತ್ರಸ್ತರು ಮಾತನಾಡದಂತೆ ಅಥವಾ ಸಂಸ್ಥೆಯಿಂದ ಹೊರಹೋಗದಂತೆ ತಡೆಯಲು ಅವರ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಪಿಎಚ್‌ಡಿ, ಎಂಬಿಎ ಮಾಡಿರೋದಾಗಿಯೂ ಸ್ವಾಮೀಜಿ ಹೇಳಿಕೊಂಡಿದ್ದರು.

    ಏನಿದು ಪ್ರಕರಣ?
    62 ವರ್ಷದ ಸ್ವಾಮೀಜಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಲೈಂಗಿಕ ಕಿರುಕುಳ ಆರೋಪದ ಮೇಲೆ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    ಎಫ್‌ಐಆರ್‌ನಲ್ಲಿ ಕಿರುಕುಳ ನೀಡಿರುವ ಬಗ್ಗೆ ಯುವತಿಯರ ಹೇಳಿಕೆ ಉಲ್ಲೇಖವಾಗಿದೆ. EWS ಕೋಟಾದಡಿ ಬಂದ ವಿದ್ಯಾರ್ಥಿನಿಯರನ್ನು ಸ್ವಾಮೀಜಿ ಟಾರ್ಗೆಟ್ ಮಾಡುತ್ತಿದ್ದರು. ಸ್ಕಾಲರ್‌ಶಿಪ್ ಕೊಡಿಸುವ, ಅಂಕಗಳನ್ನು ಕಟ್ ಮಾಡುವ, ಮಾರ್ಕ್ಸ್ ಕಾರ್ಡ್ ಕೊಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ.

    ವಿದೇಶ ಪ್ರವಾಸದ ಆಫರ್ ನೀಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ತಡರಾತ್ರಿ ಮೆಸೇಜ್ ಮಾಡಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುತ್ತಿದ್ದರು. ಕಾಲೇಜಿನ ಡೀನ್ ಕೂಡ ಸ್ವಾಮೀಜಿಗೆ ಸಾಥ್ ನೀಡುತ್ತಿದ್ದರು. ಡೀನ್‌ಗೆ ದೂರು ನೀಡಲು ಬಂದರೆ, ಮೆಸೇಜ್‌ಗೆ ಪ್ರತಿಕ್ರಿಯೆ ನೀಡುವಂತೆ ಸಲಹೆ ನೀಡುತ್ತಿದ್ದರೆಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.ಇದನ್ನೂ ಓದಿ: ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ