Tag: Syed Azeempeer Khadri

  • ಸಿಎಂ ಬಂಪರ್ ಗಿಫ್ಟ್ – ಹೆಸ್ಕಾಂ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ನೇಮಕ

    ಸಿಎಂ ಬಂಪರ್ ಗಿಫ್ಟ್ – ಹೆಸ್ಕಾಂ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ನೇಮಕ

    ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ (Congress) ಗೆಲುವು ಬೆನ್ನಲ್ಲೇ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ (Syed Azeempeer Khadri) ಕಾಂಗ್ರೆಸ್ ಬಂಪರ್ ಗಿಫ್ಟ್ ನೀಡಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ (HESCOM) ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿಯನ್ನು ಕಾಂಗ್ರೆಸ್ ನೇಮಕ ಮಾಡಿದೆ.

    ಶಿಗ್ಗಾಂವಿ ಉಪಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಖಾದ್ರಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಖಾದ್ರಿಗೆ ಉತ್ತಮ ಸ್ಥಾನಮಾನದ ಭರವಸೆ ನೀಡಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದರು. ಭರವಸೆ ಬೆನ್ನಲ್ಲೇ ಖಾದ್ರಿ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್‌ಗೆ ಬೆಂಬಲ ಸೂಚಿಸಿದ್ದರು. ಇದನ್ನೂ ಓದಿ: ಬಣ ಬಡಿದಾಟ ಜೋರು – ಯತ್ನಾಳ್‌ ಟೀಂ ವಿರುದ್ಧವೇ ಬಿಜೆಪಿಯಿಂದ ಪೊಲೀಸ್‌ ದೂರು

    ಅದರಂತೆಯೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಬೆನ್ನಿಗೆ ನಿಂತು ಗೆಲ್ಲಿಸಿದ್ದರು. ಇದೀಗ ಕೊಟ್ಟ ಮಾತಿನಂತೆಯೇ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ

  • ಶಿಗ್ಗಾಂವಿ ಉಪಚುನಾವಣೆ | ಖಾದ್ರಿ ಬೆಂಬಲಿಗರಿಂದ ಕಾಂಗ್ರೆಸ್‌ ಅಭ್ಯರ್ಥಿಯ ಕಾರಿನ ಗಾಜು ಪುಡಿಪುಡಿ 

    ಶಿಗ್ಗಾಂವಿ ಉಪಚುನಾವಣೆ | ಖಾದ್ರಿ ಬೆಂಬಲಿಗರಿಂದ ಕಾಂಗ್ರೆಸ್‌ ಅಭ್ಯರ್ಥಿಯ ಕಾರಿನ ಗಾಜು ಪುಡಿಪುಡಿ 

    ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ (Congress) ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Ahmed Khan Pathan) ಅವರ ಕಾರಿನ ಗಾಜನ್ನು ಟಿಕೆಟ್‌ ವಂಚಿತ ಅಜ್ಜಂ ಫೀರ್ ಖಾದ್ರಿ (Syed Azeempeer Khadri) ಅಭಿಮಾನಿಗಳು ಒಡೆದು ಹಾಕಿದ್ದಾರೆ.

    ಶಿಗ್ಗಾಂವಿ ಕಾಂಗ್ರೆಸ್‍ನಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದ್ದು, ಹೂಲಗೂರು ಗ್ರಾಮದಲ್ಲಿ ಖಾದ್ರಿ ಅಭಿಮಾನಿಗಳ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ತೆರಳಿದ್ದರು. ಆದರೆ ಮನವೊಲಿಕೆ ಯತ್ನ ವಿಫಲವಾಗಿದೆ. ಇದರ ಬೆನ್ನಲ್ಲೇ ಅಜ್ಜಂ ಫೀರ್ ಖಾದ್ರಿಯವರು ನಾಮಪತ್ರ ಸಲ್ಲಿಸಿದ್ದಾರೆ.

    ನಾಮಪತ್ರ ಸಲ್ಲಿಕೆ ಬಳಿಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ಸೋಲಿಸೋದಷ್ಟೆ ನನ್ನ ಗುರಿ ಎಂದು ಹೇಳಿದ್ದಾರೆ.

    ಟಿಕೆಟ್‌ ಹಂಚಿಕೆಯಾಗುತ್ತಿದ್ದಂತೆ ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ವಂಚಿತ ಅಜ್ಜಂ ಫೀರ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದರು.

    ಶಿಗ್ಗಾಂವಿ ಉಪಚುನಾವಣೆ ( Shiggoan By Election) ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ ಎಂದಿದ್ದರು.

    ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂ ಫೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್‌ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದಿದ್ದರು.

  • ಶಿಗ್ಗಾಂವಿ ಉಪಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ನಾಮಪತ್ರ ಸಲ್ಲಿಕೆ

    ಶಿಗ್ಗಾಂವಿ ಉಪಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ನಾಮಪತ್ರ ಸಲ್ಲಿಕೆ

    ಹಾವೇರಿ: ಶಿಗ್ಗಾಂವಿ ಉಪಚುನಾವಣೆ ( Shiggoan By Election)  ಹಿನ್ನೆಲೆ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ (Yasir Ahmed Khan Pathan) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

    ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ ಎಂದರು.   ಇದನ್ನೂ ಓದಿ: ಬಸ್‌ ಸೀಟಿಗಾಗಿ ಚಪ್ಪಲಿಯಲ್ಲಿ ಬಡಿದಾಡಿದ ಮಹಿಳೆಯರು

    ಹಾವೇರಿ (Haveri) ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂಪೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್‌ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಮ್ಮ ರಾಜ್ಯ ನಾಯಕರು ಅವರು ಜೊತೆಗೆ ಮಾತನಾಡುತ್ತಾರೆ. ಅವರ ಆರೋಪದಲ್ಲಿ ಹುರುಳು ಇಲ್ಲ. ತಮ್ಮ ಪಕ್ಷದ ಹಿರಿಯ ಮತ್ತು ಕ್ಷೇತ್ರದ ಜನರಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು.  ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

  • ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ – ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ ಆಕ್ರೋಶ

    ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ – ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ ಆಕ್ರೋಶ

    – ಯಾಸೀರ್ ಖಾನ್ ಮೇಲೆ 17 ಕೇಸ್ ಇದೆ

    ಹಾವೇರಿ: ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ ( Syed Azeempeer Khadri ) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಕ್ಷೇತರವಾಗಿ ಸ್ಪರ್ಧೆ ಮಾಡುವ ಕುರಿತು ಖಾದ್ರಿ ಚಿಂತನೆ ನಡೆಸಿದ್ದು, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಕೈಗೊಳ್ಳಲು ಖಾದ್ರಿ ಮುಂದಾಗಿದ್ದಾರೆ. ಶಿಗ್ಗಾವಿ ತಾಲೂಕು ಹುಲಗೂರು ಗ್ರಾಮದ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಬೆಂಬಲಿಗರ ಸಭೆ ನಡೆಸಿದರು. ಇದನ್ನೂ ಓದಿ: ಬೆಂಗಳೂರು| ಬೀಳುವ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಆರಂಭ

    ನಾನು ನಿಷ್ಟಾವಂತ ಕಾರ್ಯಕರ್ತ. ಇನ್ನೂ ಅವಕಾಶ ಇದೆ, ನನಗೆ ಟಿಕೆಟ್ ಕೊಡಲಿ. ಯಾಸೀರ್ ಖಾನ್ ಪಠಾಣ್ (Yasir Ahmed Khan Pathan) ಒಬ್ಬ ರೌಡಿಶೀಟರ್, ಅವನು ಬಿಜೆಪಿ ಏಜೆಂಟ್ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಜಾತಿ ನಿಂದನೆ ಕೇಸ್‌ನಲ್ಲಿ 98 ಮಂದಿಗೆ ಜೀವಾವಧಿ – ತೀರ್ಪು ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ದೋಷಿ ಸಾವು

    ಈ ಬಗ್ಗೆ ಖಾದ್ರಿ ಗುರುವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ 23 ವರ್ಷದಿಂದ ನಾನು ಕಾಂಗ್ರೆಸ್ ಕಟ್ಟಿದ್ದೇನೆ. ಒಮ್ಮೆ ಶಾಸಕನಾಗಿದ್ದೇನೆ, ಮೂರು ಬಾರಿ ಬಸವರಾಜ ಬೊಮ್ಮಾಯಿ ವಿರುದ್ಧ ಅತ್ಯಂತ ಕಡಿಮೆ ಅಂತರದಿಂದ ಸೋತಿದ್ದೇನೆ. ಬೊಮ್ಮಾಯಿ ವಿರುದ್ಧ ಆಗ ಯಾರೂ ಟಿಕೆಟ್ ಪಡೆಯಲು ತಯಾರು ಇರಲಿಲ್ಲ. ಅಂಥ ಸಂದರ್ಭದಲ್ಲಿ ನಾನು ನಿಂತಿದ್ದೇನೆ. ನಾನು ಸ್ಪರ್ಧೆ ಮಾಡಿದಾಗ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ನ ಯಾವ ಮುಖಂಡರು ಪ್ರಚಾರಕ್ಕೆ ಬರಲಿಲ್ಲ. ‘ಹೇ ಬೊಮ್ಮಾಯಿ ನಿಂತಿದ್ದಾರೆ ಹೇಗೆ ಪ್ರಚಾರ ಮಾಡಲಿ’ ಅನ್ನುತ್ತಿದ್ದರು. ಆ ಸಮಯದಲ್ಲಿ ಕೈ ಮುಗಿದು ಕೇಳಿದರೂ ಯಾರೂ ಪ್ರಚಾರಕ್ಕೆ ಬರಲಿಲ್ಲ. ಲಿಂಗಾಯತ ನಾಯಕರು, ಕುರುಬ, ನಾಯಕ ಸಮುದಾಯದ ಯಾವೊಬ್ಬ ನಾಯಕರೂ ಬಂದಿರಲಿಲ್ಲ. ಅವರೆಲ್ಲರು ಬಂದು ಪ್ರಚಾರ ಮಾಡಿದರೆ ನಾನು ಗೆದ್ದು ಬೊಮ್ಮಾಯಿ ಸೋಲುತಿದ್ದರು ಎಂದರು. ಇದನ್ನೂ ಓದಿ: ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಆರೋಪ – ಮಗ, ಸೊಸೆ ಅರೆಸ್ಟ್

    ನಾನು ಒಬ್ಬ ಅಲ್ಪಸಂಖ್ಯಾತ ಅನ್ನುವ ಕಾರಣಕ್ಕೆ ಬೇರೆ ಸಮುದಾಯದ ಯಾರೂ ಬಂದು ಪ್ರಚಾರ ಮಾಡಲಿಲ್ಲ. ಹೊಂದಾಣಿಕೆಯ ರಾಜಕಾರಣ ಮಾಡಿ ಬೊಮ್ಮಾಯಿಯನ್ನು ಗೆಲ್ಲಿಸಿದ್ದಾರೆ. ಈಗ ಹಾನಗಲ್ಲಿನ ಪಠಾಣ್‌ಗೆ ಟಕೆಟ್ ಕೊಟ್ಟಿದ್ದಾರೆ. ಅವನೊಬ್ಬ ರೌಡಿಶೀಟರ್, ಅವನ ಮೇಲೆ 17 ಕೇಸ್ ಇದೆ. ಕ್ಷೇತ್ರದ ಜನರು ಸ್ಥಳೀಯ ಅಭ್ಯರ್ಥಿಯನ್ನು ಬಯಸುತ್ತಾರೆ. ನಾನು ಸ್ಥಳೀಯನಾಗಿದ್ದೇನೆ, ಮುಂದಿನ ದಿನದಲ್ಲಿ ಪಿತೂರಿಯ ಎಲ್ಲಾ ವಿಚಾರ ಬಹಿರಂಗವಾಗಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ| ಬಾಬಾ ಸಿದ್ದಿಕಿ ಪುತ್ರ ಎನ್‌ಸಿಪಿಗೆ ಸೇರ್ಪಡೆ

    ನಾನು ಸಿದ್ದರಾಮಯ್ಯರ (CM Siddaramaiah) ಅಭಿಮಾನಿಯಾಗಿದ್ದೇನೆ. ಅವರ ವಿರುದ್ಧ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಟಿಕೆಟ್ ಕೈ ತಪ್ಪಿರುವ ಹಿಂದೆ ಕಾಣದ ಕೈಗಳ ಪಿತೂರಿ ನಡೆದಿದೆ, ಒಳ ಒಪ್ಪಂದ ಆಗಿದೆ ಎಂದು ಜನ ಮಾತಾಡಿಕೊಳ್ಳುತ್ತಾರೆ. ಗೂಂಡಾಗಿರಿ ಮಾಡಿದವನಿಗೆ ಟಿಕೆಟ್ ಕೊಟ್ಟಿದ್ದಾರೆ. ಸೋಲುವವರಿಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಪಕ್ಷೇತರವಾಗಿ ನಿಲ್ಲಲ್ಲು ಕಾರ್ಯಕರ್ತರ ಒತ್ತಡ ಹೆಚ್ಚಾಗಿದೆ. ನನ್ನ ಕಾರ್ಯಕರ್ತರು ವಿಷ ಕುಡಿಯಲು ಹೋಗಿದ್ದಾರೆ ಎಂದರು. ಇದನ್ನೂ ಓದಿ: ಬೀದರ್| ನೀರಿನ ತೊಟ್ಟಿಗೆ ಬಿದ್ದು ಬಾಲಕಿ ದುರ್ಮರಣ