Tag: Syria

  • ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

    ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

    ಡಮಾಸ್ಕಸ್: ಸಿರಿಯಾ (Syria) ರಾಜಧಾನಿ ಡಮಾಸ್ಕಸ್‌ನ ನಗರದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಗೆ (Israel Bombs Attack) ಬೆಚ್ಚಿ ಲೈವ್‌ ನೀಡುತ್ತಿದ್ದ ಟಿವಿ ನಿರೂಪಕಿ ಎದ್ದು ಓಡಿರುವ ದೃಶ್ಯ ಕಂಡುಬಂದಿದೆ.

    ಹೌದು. ರಾಜಧಾನಿ ಡಮಾಸ್ಕಸ್‌ನಲ್ಲಿರುವ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ನಡೆಸಿದೆ. ಈ ವೇಳೆ ಬಾಂಬ್‌ ಬಿದ್ದ ಕಟ್ಟಡದ ಸುತ್ತ ದಟ್ಟ ಹೊಗೆ ಆವರಿಸಿದೆ. ಇತ್ತ ಬಾಂಬ್‌ ಶಬ್ಧ ಕೇಳುತ್ತಿದ್ದಂತೆ ಟಿವಿ ಆಂಕರ್‌ (TV Anchor) ಲೈವ್‌ನಿಂದಲೇ ಕಿರುಚಿಕೊಂಡು ಓಡಿದ್ದಾರೆ. ಈ ವಿಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ತೆಲಂಗಾಣ ಮಾಡೆಲ್ ಜಾತಿ ಜನಗಣತಿಗೆ ಕಾಂಗ್ರೆಸ್ ಮಣೆ- ಸಿದ್ದರಾಮಯ್ಯ ವರದಿ ಕಸದ ಬುಟ್ಟಿಗೆ: ಶಾಸಕ ಸುನಿಲ್ ಕುಮಾರ್ ವ್ಯಂಗ್ಯ

    ಈ ಕುರಿತು ತಮ್ಮ ಸೋಷಿಯಲ್‌ ಮೀಡಿಯಾ (Social Media) ಖಾತೆಯಲ್ಲಿ ಸಂದೇಶವೊಂದನ್ನ ಹಂಚಿಕೊಂಡಿರುವ ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಸಿರಿಯಾದಲ್ಲಿ ಸಮುದಾಯವನ್ನ ರಕ್ಷಿಸುತ್ತೇವೆ. ಡಮಾಸ್ಕಸ್‌ಗೆ ನೀಡಬೇಕಿದ್ದ ಎಲ್ಲಾ ಎಚ್ಚರಿಕೆಗಳು ಮುಗಿದಿವೆ, ಇನ್ನೇನಿದ್ದರೂ ದಾಳಿಯಷ್ಟೇ ಎಂದಿದ್ದಾರೆ. ಅಲ್ಲದೇ ಸುವೈದಾದಲ್ಲಿ ಇಸ್ರೇಲ್ ಮಿಲಿಟರಿ ಕಾರ್ಯನಿರ್ವಹಿಸುವುದನ್ನ ಮುಂದುವರಿಸುತ್ತೆ. ಸರ್ಕಾರಿ ಪಡೆಗಳು ಈ ಪ್ರದೇಶದಿಂದ ಹಿಂದೆ ಸರಿಯುವವರೆಗೂ ದಾಳಿ ಮಾಡುವುದನ್ನು ಮುಂದುವರಿಸುತ್ತದೆ. ಮುಂದೆ ಪ್ರತೀಕಾರದ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮತ್ತೆ ಸ್ಮಾರ್ಟ್ ಮೀಟರ್ ಹಗರಣ ಕೆದಕಿದ ಬಿಜೆಪಿ – ಸಚಿವ ಜಾರ್ಜ್ ವಿರುದ್ಧ ಖಾಸಗಿ ದೂರು

    ಏನಿದು ಘರ್ಷಣೆ?
    ದಕ್ಷಿಣ ಸಿರಿಯಾದ ಸುವೈದಾದಲ್ಲಿ ಕಳೆದ ಕೆಲ ದಿನಗಳಿಂದ ಅಲ್ಪಸಂಖ್ಯಾತ ಡ್ರೂಜ್ ಸಮುದಾಯ ಮತ್ತು ಬೆಡೋಯಿನ್ ಬುಡಕಟ್ಟು ಜನಾಂಗದ ಸಶಸ್ತ್ರ ಗುಂಪುಗಳ ನಡುವೆ ನಿರಂತರ ಘರ್ಷಣೆಗಳು ನಡೆಯುತ್ತಿವೆ. ಈ ನಡುವೆ ಡ್ರೂಜ್‌ ಸಮುದಾಯದ ಪರವಾಗಿ ನಿಂತಿರುವ ಇಸ್ರೇಲ್‌, ಸಂಘರ್ಷ ತಡೆಯಲು ಸ್ವೀಡಾ ಪಟ್ಟಣಕ್ಕೆ ತನ್ನ ಸೈನ್ಯ ಕಳುಹಿಸಿತ್ತು. ಆದಾಗ್ಯೂ ಸಿರಿಯಾ ಸಮುದಾಯದ ಜೊತೆಗೆ ಘರ್ಷಣೆಗೆ ಇಳಿದಿತ್ತು. ಇದರಿಂದಾಗಿ ಮಧ್ಯ ಪ್ರವೇಶಿಸಿರುವ ಇಸ್ರೇಲ್‌ ಸಿರಿಯಾದ ಮಿಲಿಟರಿ ಕ್ವಾಟ್ರಸ್‌ ಮೇಲೆ ದಾಳಿ ನಡೆಸಿದೆ.

    ಈ ವೇಳೆ ನೇರ ಪ್ರಸಾರದಲ್ಲಿ ಸುದ್ದಿ ನಿರೂಪಣೆ ಮಾಡುತ್ತಿದ್ದ ಟಿವಿ ನಿರೂಪಕಿ ಜೋರಾಗಿ ಕಿರುಚುತ್ತಲೇ ಎದ್ದು ಓಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತಷ್ಟು ಬಲ – ವಾಯುಪಡೆಗೆ 3 ಅಪಾಚೆ ಹೆಲಿಕಾಪ್ಟರ್‌, ಪಾಕ್ ಗಡಿಯಲ್ಲಿ ನಿಯೋಜನೆಗೆ ನಿರ್ಧಾರ

  • ಯುದ್ಧಪೀಡಿತ ಸಿರಿಯಾದಿಂದ 75 ಭಾರತೀಯರು ಸ್ಥಳಾಂತರ

    ಯುದ್ಧಪೀಡಿತ ಸಿರಿಯಾದಿಂದ 75 ಭಾರತೀಯರು ಸ್ಥಳಾಂತರ

    ಡಮಾಸ್ಕಸ್‌: ಯುದ್ಧಪೀಡಿತ ಸಿರಿಯಾದಿಂದ 75 ಮಂದಿ ಭಾರತೀಯರನ್ನು (Indians) ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಅಲ್ಲದೇ ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಒತ್ತು ನೀಡುತ್ತದೆ ಎಂದು ಒತ್ತಿ ಹೇಳಿದೆ.

    ಇಸ್ಲಾಮಿಕ್‌ ಬಂಡುಕೋರು ಸಿರಿಯಾ (Syria) ಅಧ್ಯಕ್ಷ ಬಶರ್ ಅಲ್ ಅಸ್ಸಾದ್ (Bashar al-Assad) ಸರ್ಕಾರವನ್ನು ಪತನಗೊಳಿಸಿದ್ದು, ಸ್ವತಂತ್ರ ಸರ್ಕಾರ ರಚಿಸಲು ಮುಂದಾಗಿದ್ದಾರೆ. ಈ ಬೆಳವಣಿಗಳ ನಡುವೆ 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಲಾಗಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿದ್ದ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ (ಯಾತ್ರಿಕರೂ) ಸೇರಿದ್ದಾರೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ವಿಮಾನ ಮಾಸ್ಕೋದಲ್ಲಿ ಲ್ಯಾಂಡ್‌ – ಪದಚ್ಯುತ ಸಿರಿಯಾ ಅಧ್ಯಕ್ಷ ಅಸ್ಸಾದ್‌ಗೆ ಪುಟಿನ್‌ ರಾಜಾಶ್ರಯ

    ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್‌ಗೆ ದಾಟಿದ್ದು, ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಭಾರತಕ್ಕೆ ಹಿಂತಿರುಗುತ್ತಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ನೋವಿಲ್ಲದ ಸಾವಿಗೆ ರಹದಾರಿ – ಯುಕೆನಲ್ಲಿ ಹೊಸ ಮಸೂದೆ ಮಂಡನೆ!

    ಭಾರತ ಸರ್ಕಾರವು ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಸಿರಿಯಾದಲ್ಲಿ ಉಳಿದಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಅವರ ತುರ್ತು ಸಹಾಯವಾಣಿ ಸಂಖ್ಯೆ +963 993385973 (ವಾಟ್ಸಾಪ್‌ನಲ್ಲಿಯೂ ಸಹ) ಮತ್ತು ಇಮೇಲ್ ಐಡಿ (hoc.damascus@mea.gov.in)ಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಭಾರತ ಸರ್ಕಾರವು ಸಿರಿಯಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. ಇದನ್ನೂ ಓದಿ: ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

  • ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

    ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

    ವಾಷಿಂಗ್ಟನ್‌: ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಅಮೆರಿಕ(USA) ಸಿರಿಯಾದ (Syria) ಮೇಲೆ ವೈಮಾನಿಕ ದಾಳಿ (Airstrikes) ನಡೆಸಿದೆ.

    ಸಿರಿಯಾ ಸರ್ವಾಧಿಕಾರಿ ಬಶರ್ ಅಲ್ ಅಸ್ಸಾದ್ (Bashar al-Assad) ಅವರ ಆಡಳಿತ ಕೊನೆಗೊಂಡ ಬೆನ್ನಲ್ಲೇ ಅಮೆರಿಕ ಐಸಿಸ್‌ (ISIS) ಉಗ್ರ ಸಂಘಟನೆಯ ನೆಲೆಯ ಮೇಲೆ ದಾಳಿ ನಡೆಸಿದೆ. ಮಧ್ಯ ಸಿರಿಯಾದಲ್ಲಿರುವ 75ಕ್ಕೂ ಹೆಚ್ಚು ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ.

    ಸರ್ವಾಧಿಕಾರಿ ಅಸ್ಸಾದ್‌ ದೇಶ ತೊರೆದ ನಂತರ ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ಉಗ್ರರು ಸಿರಿಯಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಘಟನೆ ವಶಪಡಿಸಿಕೊಂಡರೂ ಅಲ್ಲಿ ಐಸಿಸ್‌ ಉಗ್ರರು ಇನ್ನೂ ಇದ್ದಾರೆ. ಮುಂದಿನ ದಿನಗಳಲ್ಲಿ ಐಸಿಸ್‌ ಉಗ್ರರು ಚಿಗುರಿ ಮತ್ತೆ ಹೋರಾಟಕ್ಕೆ ಇಳಿಯಬಾರದು ಎಂಬ ಕಾರಣಕ್ಕೆ ಅಮೆರಿಕ ಏರ್‌ಸ್ಟ್ರೈಕ್‌ ನಡೆಸಿದೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ವಿಮಾನ ಮಾಸ್ಕೋದಲ್ಲಿ ಲ್ಯಾಂಡ್‌ – ಪದಚ್ಯುತ ಸಿರಿಯಾ ಅಧ್ಯಕ್ಷ ಅಸ್ಸಾದ್‌ಗೆ ಪುಟಿನ್‌ ರಾಜಾಶ್ರಯ

    ಪೂರ್ವ ಸಿರಿಯಾದಲ್ಲಿ ಅಮೆರಿಕ ಸುಮಾರು 900 ಪಡೆಗಳನ್ನು ಹೊಂದಿದೆ. ಈ ಸೈನಿಕರು ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸ್‌ನೊಂದಿಗೆ ಕೆಲಸ ಮಾಡುತ್ತಿದ್ದಾರೆ.

    ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಪ್ರತಿಕ್ರಿಯಿಸಿ, ಸಿರಿಯಾದಲ್ಲಿ ಸೃಷ್ಟಿಯಾಗಿರುವ ನಿರ್ವಾತದ ಲಾಭವನ್ನು ಪಡೆಯಲು ಐಸಿಸ್‌ ಪ್ರಯತ್ನಿಸುತ್ತಿದೆ. ಐಸಿಸ್‌ ಮೇಲೆ ಅಮೆರಿಕ ಕಣ್ಣಿಟ್ಟು ಅವರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.

    ಅಸ್ಸಾದ್ ಅಸ್ಸಾಂ ಆಡಳಿತದ ಪತನದಿಂದ ಜನತೆಗೆ ನ್ಯಾಯ ಸಿಕ್ಕಿದೆ. ಇದು ಸಿರಿಯಾದಲ್ಲಿ ದೀರ್ಘಕಾಲದಿಂದ ಬಳಲುತ್ತಿರುವ ಜನರಿಗೆ ಸಿಕ್ಕಿದ ಐತಿಹಾಸಿಕ ಕ್ಷಣ ಎಂದು ಹೇಳಿದರು.

    ಇಸ್ರೇಲ್‌ನಿಂದಲೂ ದಾಳಿ:
    ಇನ್ನೊಂದು ಕಡೆ ಇಸ್ರೇಲ್‌ ಸಿರಿಯಾದ ಮೇಲೆ ವಾಯು ದಾಳಿ ನಡೆಸಿದೆ. ಸೇನೆಯ ಕೇಂದ್ರ ಕಚೇರಿ, ಗುಪ್ತಚರ ಸಂಸ್ಥೆ ಮತ್ತು ಕಸ್ಟಮ್ಸ್‌ನ ಕಚೇರಿಗಳನ್ನು ಒಳಗೊಂಡ ಕಟ್ಟಡದ ಮೇಲೆ ದಾಳಿ ನಡೆದಿದೆ. ಇರಾನ್‌ನ ವಿಜ್ಞಾನಿಗಳು ಈ ಸಂಕೀರ್ಣದಲ್ಲಿ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದ್ದರು ಎಂದು ಇಸ್ರೇಲ್‌ ಈ ಹಿಂದೆ ಹೇಳಿಕೊಂಡಿತ್ತು.

  • ಕಣ್ಮರೆಯಾಗಿದ್ದ ವಿಮಾನ ಮಾಸ್ಕೋದಲ್ಲಿ ಲ್ಯಾಂಡ್‌ – ಪದಚ್ಯುತ ಸಿರಿಯಾ ಅಧ್ಯಕ್ಷ ಅಸ್ಸಾದ್‌ಗೆ ಪುಟಿನ್‌ ರಾಜಾಶ್ರಯ

    ಕಣ್ಮರೆಯಾಗಿದ್ದ ವಿಮಾನ ಮಾಸ್ಕೋದಲ್ಲಿ ಲ್ಯಾಂಡ್‌ – ಪದಚ್ಯುತ ಸಿರಿಯಾ ಅಧ್ಯಕ್ಷ ಅಸ್ಸಾದ್‌ಗೆ ಪುಟಿನ್‌ ರಾಜಾಶ್ರಯ

    ಮಾಸ್ಕೋ: ಪದಚ್ಯುತ ಸಿರಿಯಾದ (Syria) ಅಧ್ಯಕ್ಷ, ಸರ್ವಾಧಿಕಾರಿ ಬಶರ್ ಅಲ್-ಅಸ್ಸಾದ್ (Bashar al-Assad) ಮತ್ತು ಕುಟುಂಬಕ್ಕೆ ರಷ್ಯಾ (Russia) ರಾಜಾಶ್ರಯ (Asylum) ನೀಡಿದೆ. ಉಗ್ರರು ರಾಜಧಾನಿ ಡಮಾಸ್ಕಸ್‌ ವಶಪಡೆಯುತ್ತಿದ್ದಂತೆ ಭಾನುವಾರ ಮುಂಜಾನೆ ಸಿರಿಯಾ ತೊರೆದ ಅವರು ಮಾಸ್ಕೋಗೆ ಬಂದಿದ್ದಾರೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.

    ಮಾನವೀಯ ಆಧಾರದ ಮೇಲೆ ರಷ್ಯಾ (Russia) ಅವರಿಗೆ ಆಶ್ರಯ ನೀಡಿದೆ ಎಂದು ವರದಿಯಾಗಿದೆ. ರಷ್ಯಾ ಮೊದಲಿನಿಂದಲೂ ಅಸ್ಸಾದ್ ಸರ್ಕಾರದ ಬೆಂಬಲಕ್ಕೆ ನಿಂತಿತ್ತು. ಐಸಿಸ್‌ ಉಗ್ರರನ್ನು ಮಟ್ಟ ಹಾಕಲು ರಷ್ಯಾ ಅಸ್ಸಾದ್‌ಗೆ ಬೆಂಬಲ ನೀಡಿತ್ತು.  ಉಕ್ರೇನ್‌ ಮೇಲಿನ ದಾಳಿಯ ಸಮಯದಲ್ಲಿ ಅಸ್ಸಾದ್‌ ರಷ್ಯಾವನ್ನು ಬೆಂಬಲಿಸಿದ್ದರು. ಇದನ್ನೂ ಓದಿ: ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

    ಭಾನುವಾರ ಮುಂಜಾನೆ ಡಮಾಸ್ಕಸ್‌ನಿಂದ ಟೇಕಾಫ್‌ ಆದ ವಿಮಾನ ದಾರಿ ಮಧ್ಯೆ ಪಥವನ್ನು ಬದಲಾಯಿಸಿತ್ತು. ಅಷ್ಟೇ ಅಲ್ಲದೇ ವಿಮಾನ ಎತ್ತರವು ತಗ್ಗಿತ್ತು ದಿಢೀರ್‌ ಕಣ್ಮರೆಯಾಗಿತ್ತು. ಹೀಗಾಗಿ ವಿಮಾನ ಪತನ ಹೊಂದಿದ್ಯಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಈಗ ವಿಮಾನ ಸುರಕ್ಷಿತವಾಗಿ ರಷ್ಯಾದಲ್ಲಿ ಲ್ಯಾಂಡ್‌ ಆದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.

    ಶತ್ರುಗಳಿಗೆ ಸುಳಿವು ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶ ಪೂರ್ವಕವಾಗಿಯೇ ವಿಮಾನದ ಟ್ರಾನ್ಸ್‌ಪಾಂಡರ್ ಅನ್ನು ಸ್ವಿಚ್ ಆಫ್ ಮಾಡಲಾಗಿತ್ತು. ಹೀಗಾಗಿ ವಿಮಾನಗಳನ್ನು ಟ್ರ್ಯಾಕ್‌ ಮಾಡುವ ವೆಬ್‌ಸೈಟ್‌ಗಳಿಗೆ ಈ ಮಾಹಿತಿ ಲಭ್ಯವಾಗಿರಲಿಲ್ಲ.

     

  • ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

    ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

    – ಸಿರಿಯಾದ 3ನೇ ಅತಿದೊಡ್ಡ ನಗರ ಬಂಡುಕೋರರ ಹಿಡಿತಕ್ಕೆ

    ಡಮಾಸ್ಕಸ್‌: ಸಿರಿಯಾದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ, ಅವರಿಗೆ ಸಹಾಯ ಮಾಡಲು ಭಾರತೀಯ ರಾಜಭಾರ ಕಚೇರಿ (Indian Embassy) ಲಭ್ಯವಿದೆ. ಯುದ್ಧ ಪೀಡಿತ ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ರಾಯಭಾರ ಕಚೇರಿಯು ಕಾರ್ಯಾಚರಣೆ ಮುಂದುವರಿಸಿದ್ದು, ಎಲ್ಲಾ ಭಾರತೀಯ ವಿದ್ಯಾರ್ಥಿಗಳೊಂದಿಗೆ (Indian Students) ಸಂಪರ್ಕದಲ್ಲಿರುವುದಾಗಿ ತಿಳಿದುಬಂದಿದೆ.

    ಭಾರತೀಯರ ಸಹಾಯಕ್ಕಾಗಿ ಕಚೇರಿಯಲ್ಕಿ ತುರ್ತು ಸಹಾಯವಾಣಿ (ಮೊ.ಸಂ. +963 993385973 (ವಾಟ್ಸಾಪ್‌ ಸಹ ಇದೆ), ಇ-ಮೇಲ್‌ hoc.damascus@mea.gov.in) ಆರಂಭಿಸಲಾಗಿದೆ. ಯುದ್ಧಪೀಡಿತ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯರು ತಕ್ಷಣಕ್ಕೆ ಲಭ್ಯವಿರುವ ವಾಣಿಜ್ಯ ವಿಮಾನಗಳಲ್ಲಿ ಹೊರಟು ಭಾರತಕ್ಕೆ ತೆರಳಿ, ಉಳಿದವರು ಸುರಕ್ಷತೆ ಕಾಯ್ದುಕೊಳ್ಳಿ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ದೇಶ ತೊರೆಯುತ್ತಿದ್ದ ಸಿರಿಯಾ ಅಧ್ಯಕ್ಷನಿದ್ದ ವಿಮಾನ ಕಣ್ಮರೆ – ಕ್ಷಿಪಣಿ ದಾಳಿಗೆ ಪತನ?

    ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ದಂಗೆಕೋರರು ಸಿರಿಯಾದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬಿಕ್ಕಟ್ಟು ತಲೆದೋರಿದ್ದು, ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯರು ಆದಷ್ಟು ಬೇಗ ಹಿಂತಿರುಗುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಜೊತೆಗೆ ಮುಂದಿನ ಅಧಿಸೂಚನೆವರೆಗೆ ಭಾರತೀಯ ಪ್ರಜೆಗಳು ಸಿರಿಯಾ ಪ್ರಯಾಣವನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಕೆನಡಾ| ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ಭಾರತೀಯ ವಿದ್ಯಾರ್ಥಿಯನ್ನ ಗುಂಡಿಕ್ಕಿ ಹತ್ಯೆ – ಇಬ್ಬರು ಶಂಕಿತರ ಬಂಧನ

    3ನೇ ಅತಿದೊಡ್ಡ ನಗರ ಬಂಡುಕೋರರ ವಶ:
    ಇಸ್ಲಾಮಿ ಉಗ್ರಗಾಮಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (HTS) ನೇತೃತ್ವದ ಸಿರಿಯನ್ ಬಂಡುಕೋರರು ‌ದಾಳಿಯನ್ನು ತೀವ್ರಗೊಳಿಸಿದ್ದಾರೆ. ಸಿರಿಯಾದ 3ನೇ ಅತಿದೊಡ್ಡ ನಗರವಾದ ಹೋಮ್ಸ್ ಅನ್ನು ವಶಪಡಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ, ಈ ಬೆನ್ನಲ್ಲೇ ರಾಜಧಾನಿ ಡಮಾಸ್ಕಸ್‌ನ ಗಡಿ ತಲುಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಂಡುಕೋರರು ರಾಜಧಾನಿ ಡಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಸಿರಿಯಾ ತೊರೆದ ಅಧ್ಯಕ್ಷ ಅಸ್ಸಾದ್‌

    ಸಿರಿಯಾ ಅಧ್ಯಕ್ಷ ಪಲಾಯನ:
    ಇನ್ನೂ ಬಂಡುಕೋರರು ಸಿರಿಯಾ ರಾಜಧಾನಿ ಡಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಅಧ್ಯಕ್ಷ ಬಶರ್‌ ಅಲ್‌ ಅಸ್ಸಾದ್‌ ದೇಶ ತೊರೆದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮದ ಜೊತೆ ಮಾತನಾಡಿದ ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯದ ಮುಖ್ಯಸ್ಥ ರಾಮಿ ಅಬ್ದುಲ್‌ ರೆಹಮಾನ್, ಭಾನುವಾರ ಮುಂಜಾನೆ ವಿಮಾನದ ಮೂಲಕ ತೆರಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ದೇಶ ತೊರೆಯುತ್ತಿದ್ದ ಸಿರಿಯಾ ಅಧ್ಯಕ್ಷನಿದ್ದ ವಿಮಾನ ಕಣ್ಮರೆ –  ಕ್ಷಿಪಣಿ ದಾಳಿಗೆ ಪತನ?

    ದೇಶ ತೊರೆಯುತ್ತಿದ್ದ ಸಿರಿಯಾ ಅಧ್ಯಕ್ಷನಿದ್ದ ವಿಮಾನ ಕಣ್ಮರೆ – ಕ್ಷಿಪಣಿ ದಾಳಿಗೆ ಪತನ?

    ಡಮಾಸ್ಕಸ್‌: ಸಿರಿಯಾ ಅಧ್ಯಕ್ಷ ಬಶರ್‌ ಅಲ್‌ ಅಸ್ಸಾದ್‌ (Bashar al-Assad) ಅವರಿದ್ದ ವಿಮಾನ ಪತನಗೊಂಡಿದ್ಯಾ ಹೀಗೊಂದು ದೊಡ್ಡ ಪ್ರಶ್ನೆ ಎದ್ದಿದೆ.

    ಬಂಡುಕೋರರು ಸಿರಿಯಾ (Syria) ರಾಜಧಾನಿ ಡಮಾಸ್ಕಸ್‌ (Damascus) ಪ್ರವೇಶಿಸುತ್ತಿದ್ದಂತೆ ಅಧ್ಯಕ್ಷ ಬಶರ್‌ ಅಲ್‌ ಅಸ್ಸಾದ್‌ ಭಾನುವಾರ ಬೆಳಗ್ಗೆ ಸಿರಿಯಾವನ್ನು ತೊರೆದು ಅಜ್ಞಾತ ಸ್ಥಳದತ್ತ ತೆರಳಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈಗ ಅವರಿದ್ದ ವಿಮಾನ (Plane) ಮಧ್ಯದಲ್ಲೇ ಪತನಗೊಂಡಿದೆ ಎಂದು ವರದಿಯಾಗುತ್ತಿದೆ.

     

     

    ಡಮಾಸ್ಕಸ್‌ನಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿರುವಾಗ ಅವರಿದ್ದ ವಿಮಾನ ಪತನಗೊಂಡಿರಬಹುದು ಅಥವಾ ಹೊಡೆದುರುಳಿಸಲ್ಪಟ್ಟಿರಬಹುದು ಎಂದು ವರದಿಯಾಗಿದೆ. ಇಲ್ಲಿಯವರೆಗೆ ಅಸ್ಸಾದ್‌ ವಿಮಾನ ಏನಾಯ್ತು ಎನ್ನುವುದರ ಬಗ್ಗೆ ಯಾರೂ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

    Flightradar24.com ಮಾಹಿತಿಯ ಪ್ರಕಾರ ಸಿರಿಯನ್ ಏರ್ ಇಲ್ಯುಶಿನ್ Il-76T ವಿಮಾನ ಡಮಾಸ್ಕಸ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿದೆ. ವಿಮಾನವು ಆರಂಭದಲ್ಲಿ ಸಿರಿಯಾದ ಕರಾವಳಿ ಪ್ರದೇಶದ ಕಡೆಗೆ ಸಾಗುತ್ತಿತ್ತು. ದಾರಿ ಮಧ್ಯೆ ಅದು ವಿರುದ್ಧ ದಿಕ್ಕಿಗೆ ಸಾಗಿ ಕಣ್ಮರೆಯಾಗಿದೆ. ಇದನ್ನೂ ಓದಿ: ಬಂಡುಕೋರರು ರಾಜಧಾನಿ ಡಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಸಿರಿಯಾ ತೊರೆದ ಅಧ್ಯಕ್ಷ ಅಸ್ಸಾದ್‌

     

    ವಿಮಾನದ ಹಠಾತ್ ಕಣ್ಮರೆಯಾದ ಬೆನ್ನಲ್ಲೇ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕ್ಷಿಪಣಿ ದಾಳಿಯಿಂದ ವಿಮಾನ ಪತನಗೊಂಡಿರಬಹುದು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಲೆಬನಾನಿನ ವಾಯುಪ್ರದೇಶದ ಬಳಿ 3,650 ಮೀಟರ್‌ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ದಿಢೀರ್‌ 1,070 ಮೀಟರ್‌ಗೆ ಇಳಿದಿದೆ. ದಿಢೀರ್‌ ಇಳಿದಿದ್ದು ಮತ್ತು ಹಠಾತ್‌ ಕಣ್ಮರೆಯಾಗಿದ್ದನ್ನು ನೋಡಿದರೆ ವಿಮಾನವನ್ನು ಹೊಡೆದು ಉರುಳಿಸಿರಬಹುದು ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

     

  • ಬಂಡುಕೋರರು ರಾಜಧಾನಿ ಡಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಸಿರಿಯಾ ತೊರೆದ ಅಧ್ಯಕ್ಷ ಅಸ್ಸಾದ್‌

    ಬಂಡುಕೋರರು ರಾಜಧಾನಿ ಡಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಸಿರಿಯಾ ತೊರೆದ ಅಧ್ಯಕ್ಷ ಅಸ್ಸಾದ್‌

    ಡಮಾಸ್ಕಸ್‌: ಬಂಡುಕೋರರು ಸಿರಿಯಾ (Syria) ರಾಜಧಾನಿ ಡಮಾಸ್ಕಸ್‌ (Damascus) ಪ್ರವೇಶಿಸುತ್ತಿದ್ದಂತೆ ಅಧ್ಯಕ್ಷ ಬಶರ್‌ ಅಲ್‌ ಅಸ್ಸಾದ್‌ (Bashar al-Assad) ದೇಶವನ್ನು ತೊರೆದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

    ಮಾಧ್ಯಮದ ಜೊತೆ ಮಾತನಾಡಿದ ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯದ ಮುಖ್ಯಸ್ಥ ರಾಮಿ ಅಬ್ದುಲ್‌ ರೆಹಮಾನ್, ಭಾನುವಾರ ಮುಂಜಾನೆ ವಿಮಾನದ ಮೂಲಕ ತೆರಳಿದ್ದಾರೆ ಎಂದು ಪ್ರತಿಕ್ರಿಯಿಸಿದರು.

    ಬಂಡುಕೋರರು ಅಸ್ಸಾದ್‌ ಯುಗಾಂತ್ಯವಾಗಿದೆ ಎಂದು ಘೋಷಿಸುತ್ತಿದ್ದಂತೆ ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಅಲ್-ಜಲಾಲಿ ಅವರು ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಸಿದ್ಧವಾಗಿದೆ. ಜನರು ಆಯ್ಕೆ ಮಾಡುವ ನಾಯಕತ್ವಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ – ಕೂಡಲೇ ದೇಶವನ್ನು ತೊರೆಯಿರಿ; ಭಾರತೀಯರಿಗೆ ಸೂಚನೆ

     

    ಜುಲೈ 2000 ಇಸ್ವಿಯಲ್ಲಿ ಅಧಿಕಾರ ಸ್ವೀಕರಿಸಿದ್ದ ಬಶರ್‌ ಅಲ್‌ ಅಸ್ಸಾದ್‌ ಸರ್ಕಾರಕ್ಕೆ ರಷ್ಯಾ (Russia) ಮತ್ತು ಇರಾನ್‌ (Iran) ಬೆಂಬಲ ನೀಡಿತ್ತು. ಇಸ್ರೇಲ್‌ ಯುದ್ಧದಲ್ಲಿ ಇರಾನ್‌ ತೊಡಗಿಸಿಕೊಂಡಿದ್ದರೆ ಉಕ್ರೇನ್‌ ಯುದ್ಧದಲ್ಲಿ ರಷ್ಯಾ ತೊಡಗಿಸಿಕೊಂಡಿದೆ. ಈ ಎರಡು ದೇಶಗಳ ಯುದ್ಧದಲ್ಲಿ ತೊಡಗಿಸಿಕೊಂಡಿದ್ದರ ಪರಿಣಾಮ ಸಿರಿಯಾ ಈಗ ಏಕಾಂಗಿಯಾಗಿದೆ.

    ಸಿರಿಯಾದಲ್ಲಿ ಕಳೆದ 13 ವರ್ಷಗಳಿಂದ ಅಂತರ್ಯುದ್ಧ ನಡೆಯುತ್ತಿದೆ. ಈ ಹಿಂದೆ ಅಸ್ಸಾದ್ ವಿರೋಧಿ ಬಂಡಾಯಗಾರರಲ್ಲಿ ಒಗ್ಗಟ್ಟು ಇರಲಿಲ್ಲ. ಆದರೆ ಈ ಬಾರಿ ಎಲ್ಲರೂ ಒಗ್ಗಟ್ಟಾಗಿರುವ ಕಾರಣ ಬಂಡುಕೋರರ ಸಂಘಟನೆ ಶಕ್ತಿಯುತವಾಗಿದೆ.

    2011ರಲ್ಲಿ ಶಾಲೆಯ ಗೋಡೆಗಳ ಮೇಲೆ ಅಸ್ಸಾದ್ ವಿರೋಧಿ ಬರಹಗಳನ್ನ ಬರೆದ ಕೆಲ ಯುವಕರನ್ನು ಬಂಧಿಸಲಾಗಿತ್ತು. ಬಂಧಿತ ಯುವಕರಿಗೆ ಸರ್ಕಾರ ಹಿಂಸೆ ನೀಡುತ್ತಿದೆ ಎಂಬ ಆರೋಪ ಬಂದ ನಂತರ ಸಿರಿಯಾದಲ್ಲಿ ಅಂತರ್‌ ಯುದ್ಧ ಆರಂಭವಾಗಿತ್ತು.

     

  • ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ – ಕೂಡಲೇ ದೇಶವನ್ನು ತೊರೆಯಿರಿ; ಭಾರತೀಯರಿಗೆ ಸೂಚನೆ

    ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ – ಕೂಡಲೇ ದೇಶವನ್ನು ತೊರೆಯಿರಿ; ಭಾರತೀಯರಿಗೆ ಸೂಚನೆ

    ಡೆಮಾಸ್ಕಸ್‌: ಸಿರಿಯಾದಲ್ಲಿ (Syria) ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದರೆ. ಆದಷ್ಟು ಬೇಗ ಅಲ್ಲಿಂದ ಭಾರತಕ್ಕೆ ವಾಪಸ್‌ ಆಗಿ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.

    ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ದಂಗೆಕೋರರು ಸಿರಿಯಾದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬಿಕ್ಕಟ್ಟು ತಲೆದೋರಿದ್ದು, ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಅನಗತ್ಯ ಪ್ರಯಾಣ ಮುಂದೂಡಿ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾ ತೊರೆದು, ಆದಷ್ಟು ಬೇಗ ವಾಪಸ್‌ ಬನ್ನಿ ಎಂದು ಸಲಹೆ ನೀಡಿದೆ. ಇದನ್ನೂ ಓದಿ: ವಿಯೆಟ್ನಾಂ ಯುವತಿಯರಿಗೆ ಬಾಡಿಗೆಗೆ ಬಾಯ್‌ಫ್ರೆಂಡ್‌ ಬೇಕಂತೆ..; ಸೃಷ್ಟಿಯಾಗಿದೆ ಹೊಸ ಟ್ರೆಂಡ್‌ – ಯಾಕೆ ಗೊತ್ತಾ?

    ತುರ್ತು ಸಹಾಯವಾಣಿ ಸಂಖ್ಯೆಯನ್ನು (+963 993385973) ಡೆಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಾಗಿ ಹಂಚಿಕೊಳ್ಳಲಾಗಿದೆ. ಈ ಸಂಖ್ಯೆಗೆ WhatsApp ನಲ್ಲಿ ಓದಿದ ಹೇಳಿಕೆಯನ್ನು ಸಹ ಬಳಸಬಹುದು. ಜೊತೆಗೆ ತುರ್ತು ಇಮೇಲ್ ಐಡಿಯನ್ನು ಕೂಡ ಸೇರಿಸಬಹುದು.

  • ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

    ಏರೋಸ್ಪೇಸ್‌ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್‌, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್‌

    ಅಂಕಾರಾ: ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (TUSAS) ಪ್ರಧಾನ ಕಚೇರಿ ಮೇಲೆ ದಾಳಿ (Terror Attack) ನಡೆಸಿದ್ದಕ್ಕೆ ಪ್ರತಿಯಾಗಿ ಟರ್ಕಿ ವಾಯುಪಡೆಯು ಬುಧವಾರ ಇರಾಕ್ (Iraq) ಮತ್ತು ಸಿರಿಯಾದಲ್ಲಿನ (Syria) ಕುರ್ದಿಶ್ ಉಗ್ರಗಾಮಿಗಳ ಮೇಲೆ ವಾಯು ದಾಳಿ (Airstrikes) ನಡೆಸಿದೆ.

    ಈ ವೈಮಾನಿಕ ದಾಳಿಯಲ್ಲಿ 30ಕ್ಕೂ ಹೆಚ್ಚು ಗುರಿಗಳನ್ನು ನಾಶಗೊಳಿಸಲಾಗಿದೆ ಎಂದು ಟರ್ಕಿಯ (Turkey) ರಕ್ಷಣಾ ಸಚಿವಾಲಯ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ.

    ಕುರ್ದಿಶ್ ಉಗ್ರಗಾಮಿಗಳು (Kurdish Militants) ಏರೋಸ್ಪೇಸ್ ಕಚೇರಿ ಮೇಲೆ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿರುವುದು ವಿಶೇಷ. ರಕ್ಷಣಾ ಕಂಪನಿಯ ಮೇಲಿನ ದಾಳಿಯ ಹಿಂದೆ ಕುರ್ದಿಸ್ತಾನ್ ವರ್ಕರ್ಸ್ ಪಾರ್ಟಿ ಅಥವಾ ಪಿಕೆಕೆ ಕೈವಾಡವಿದೆ ಟರ್ಕಿ ರಕ್ಷಣಾ ಸಚಿವ ಯಾಸರ್ ಗುಲೇರ್ ಹೇಳಿದ್ದಾರೆ.

    ಇರಾಕ್‌ನಲ್ಲಿ ನೆಲೆ ಹೊಂದಿರುವ ಪಿಕೆಕೆ ಮತ್ತು ಸಿರಿಯಾದಲ್ಲಿರುವ ಕುರ್ದಿಶ್‌ ಉಗ್ರರ ಮೇಲೆ ಟರ್ಕಿ ನಿಯಮಿತವಾಗಿ ವಾಯುದಾಳಿಗಳನ್ನು ನಡೆಸಿಕೊಂಡೇ ಬಂದಿದೆ. ಕೊನೆಯ ಉಗ್ರನನ್ನು ನಿರ್ಮೂಲನೆ ಮಾಡುವರೆಗೂ ನಾವು ದಾಳಿ ನಡೆಸುತ್ತೇವೆ ಎಂದು ಗುಲೇರ್ ತಿಳಿಸಿದ್ದಾರೆ. ಇದನ್ನೂ ಓದಿ: ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬ್ರಿಕ್ಸ್‌ ಸಭೆಯಲ್ಲಿ ಭಾಗಿಯಾಗಿರುವ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್, ನಾನು ಈ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

    TUSAS ಸಂಸ್ಥೆ ನಾಗರಿಕ ಮತ್ತು ಮಿಲಿಟರಿ ವಿಮಾನಗಳು, ಮಾನವರಹಿತ ವೈಮಾನಿಕ ವಾಹನಗಳು, ರಕ್ಷಣಾ ಉಪಕರಣಗಳನ್ನು ಅಭಿವೃದ್ಧಿಪಡಿಸಿ ಜೋಡಿಸುತ್ತದೆ. ಕುರ್ದಿಶ್ ಉಗ್ರಗಾಮಿಗಳ ವಿರುದ್ಧದ ಹೋರಾಟದಲ್ಲಿ ಟರ್ಕಿ ಮೇಲುಗೈ ಸಾಧಿಸುವಲ್ಲಿ ಅದರ UAV ಗಳು ಪ್ರಮುಖ ಪಾತ್ರವಹಿಸಿದ್ದು ಸುಮಾರು 10 ಸಾವಿರ ಮಂದಿ ಉದ್ಯೋಗ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಇಬ್ಬರು ಉಗ್ರರು ಈ ಸಂಸ್ಥೆಯ ಮೇಲೆ ದಾಳಿ ನಡೆಸಿದ್ದಾರೆ.

     

    1980 ರ ದಶಕದಿಂದಲೂ ಕುರ್ದಿಶ್‌ಗಳು ಆಗ್ನೇಯ ಟರ್ಕಿಯಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಡುತ್ತಿದ್ದಾರೆ. ಇದನ್ನು ಟರ್ಕಿ ಮತ್ತು ಅದರ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಇದನ್ನು ಉಗ್ರ ಸಂಘಟನೆ ಎಂದು ಕರೆದಿವೆ.

     


    ಬುಧವಾರ ಶಸ್ತ್ರಸಜ್ಜಿತರಾಗಿ ಓರ್ವ ಪುರುಷ, ಮಹಿಳೆ TUSAS ಕಾಂಪ್ಲೆಕ್ಸ್‌ಗೆ ಆಗಮಿಸಿ ಮನಸ್ಸಿಗೆ ಬಂದಂತೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊನೆಗೆ ಭದ್ರತಾ ಪಡೆ ಇಬ್ಬರು ಹತ್ಯೆ ಮಾಡಿದ್ದಾರೆ.

  • ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

    ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್‌ ಲೀಡರ್‌ ಸೇಫ್‌

    ಬೈರೂತ್: ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ (Israeli Strikes) 22 ಮಂದಿ ಹತ್ಯೆಯಾಗಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಈ ದಾಳಿಯಲ್ಲಿ ಹಿಜ್ಬುಲ್ಲಾದ (Hezbollah) ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ.

    ಕಳೆದ 1 ವರ್ಷದಲ್ಲಿ ಇಸ್ರೇಲ್‌ (Israel) ನಡೆಸಿದ ಮಾರಣಾಂತಿಕ ದಾಳಿಗಳಲ್ಲಿ ಇದು ಒಂದು ಎನ್ನಲಾಗಿದೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯವುಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

    ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್‌ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ. ಆದ್ರೆ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಸ್ಪೇನ್‌ ಹಾಗೂ ಇಟಲಿ ದೇಶಗಳು ಆರೋಪಿಸಿವೆ.

    ಇತ್ತೀಚೆಗೆ ಇಸ್ರೇಲ್‌ ಹಿಜ್ಬುಲ್ಲಾದ 120 ಉಗ್ರ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿತ್ತು. ಆ ನಂತರ ನಡೆದ ಅತಿದೊಡ್ಡ ದಾಳಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
    ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.