Tag: Syrup

  • ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    ಚೆನ್ನೈ: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್ (Cough Syrup)ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ (Chennai) ಬಂಧಿಸಿದ್ದಾರೆ.

    ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ಕೋಲ್ಡ್ರಿಫ್ ಸಿರಪ್ ಅನ್ನು ನಿಷೇಧಿಸಲಾಯಿತು. ಈ ಬೆನ್ನಲ್ಲೇ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾ (Sresan Pharma) ಕಂಪನಿಯ ಮಾಲೀಕ ರಂಗನಾಥನ್ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು. ಇದನ್ನೂ ಓದಿ: ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ

    ಅಂತಿಮವಾಗಿ ಬುಧವಾರ ತಡರಾತ್ರಿ ಚೆನ್ನೈನಲ್ಲಿ ರಂಗನಾಥನ್‌ನನ್ನು ಬಂಧಿಸಲಾಗಿದೆ. ಸಿರಪ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾದ ಬಳಿಕ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ರಂಗನಾಥನ್‌ನನ್ನು ಚೆನ್ನೈನಿಂದ ಛಿಂದ್ವಾರಕ್ಕೆ ಪೊಲೀಸರು ಕರೆ ತರುತ್ತಿದ್ದು, ನಂತರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಈ ಹಿಂದೆ ಸ್ರೆಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮಧ್ಯಪ್ರದೇಶವಲ್ಲದೆ ರಾಜಸ್ಥಾನದಲ್ಲೂ ಈ ಸಿರಪ್ ಸೇವಿಸಿದ ನಂತರ ಮಕ್ಕಳು ಸಾವನ್ನಪ್ಪಿರುವ ವರದಿಗಳಿವೆ. ಕೋಲ್ಡ್ರಿಫ್ ಹೆಸರಿನ ಈ ಸಿರಪ್ ಸೇವಿಸಿದ ಮಕ್ಕಳಲ್ಲಿ ಕಿಡ್ನಿ ಸೋಂಕು ಕಾಣಿಸಿಕೊಂಡು, ಹೆಚ್ಚಿನ ಸಂಖ್ಯೆಯ ಮಕ್ಕಳು ಸಾವನ್ನಪ್ಪಿದ್ದರು. ಇದನ್ನೂ ಓದಿ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

    ತಪಾಸಣೆ ವೇಳೆ, ಫಾರ್ಮಾದ ಕಾರ್ಖಾನೆಯಲ್ಲಿ ಯಾವುದೇ ದಾಖಲೆಗಳಿಲ್ಲದ ಡಿಇಜಿ ಕಂಟೇನರ್‌ಗಳು ಪತ್ತೆಯಾಗಿದ್ದವು. ನಿಯಮಗಳ ಪ್ರಕಾರ ಕೇವಲ ಶೇ.0.1ರಷ್ಟು ಮಾತ್ರ ಡಿಇಜಿ ಬಳಸಲು ಅನುಮತಿ ಇದ್ದರೂ, ಈ ಕಂಪನಿಯು ಶೇ.46-48ರಷ್ಟು ಈ ವಿಷಕಾರಿ ರಾಸಾಯನಿಕವನ್ನು ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಬಳಸುತ್ತಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖೆಯು ಬಹಿರಂಗವಾಗಿದೆ. ಇದನ್ನೂ ಓದಿ: ಬಿಗ್‌ ಬಾಸ್‌ ಓಪನ್‌ ಬೆನ್ನಲ್ಲೇ ಮುಂಜಾನೆ ಮನೆ ಪ್ರವೇಶಿಸಿದ ಸ್ಪರ್ಧಿಗಳು

    ಇಷ್ಟಲ್ಲದೆ, ಕಂಪನಿಯು ಉತ್ತಮ ಉತ್ಪಾದನಾ ಪದ್ಧತಿಗಳ (ಜಿಎಂಪಿ) ಪ್ರಮಾಣಪತ್ರವನ್ನು ಸಹ ಹೊಂದಿರಲಿಲ್ಲ. ಆದರೂ, ಜೆನೆರಿಕ್ ಔಷಧಿಗಳನ್ನು ತಯಾರಿಸಿ ಮಾರಾಟವನ್ನು ಮಾಡುತ್ತಿತ್ತು. ತಮಿಳುನಾಡಿನ ಕಾಂಚೀಪುರಂನ ಕಾರ್ಖಾನೆಯಲ್ಲಿ ಈ ಲೋಪಗಳು ಪತ್ತೆಯಾದ ನಂತರ, ರಾಜ್ಯ ಔಷಧಿ ನಿಯಂತ್ರಣ ಪ್ರಾಧಿಕಾರವು ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಆದೇಶಿಸಿ, ಎಲ್ಲಾ ದಾಸ್ತಾನುಗಳನ್ನು ವಶಕ್ಕೆ ಪಡೆದಿತ್ತು. ಕಂಪನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ, ಪರವಾನಗಿಯನ್ನು ಅಮಾನತುಗೊಳಿಸಿತ್ತು. ಈ ಘಟನೆಯ ನಂತರ, ಕನಿಷ್ಠ ಒಂಬತ್ತು ರಾಜ್ಯಗಳು ಈ ಸಿರಪ್ ಅನ್ನು ನಿಷೇಧಿಸಿವೆ. ಇದನ್ನೂ ಓದಿ:ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

  • 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್ (Cough Syrup) ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ಅಲರ್ಟ್‌ ಆದ ರಾಜ್ಯ ಆರೋಗ್ಯ ಇಲಾಖೆ (Health Department) ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೇ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. ಮಲ್ಟಿಮೆಡಿಸನ್ ಒಳಗೊಂಡ ಸಿರಪ್‌ಗಳನ್ನ ಬಳಸಬಾರದು ಎಂದು ತಿಳಿಸಿದೆ. ಇದನ್ನೂ ಓದಿ: ಹರ್ಷ ಕೊಲೆ ಕೇಸ್‌ನ ಸಾಕ್ಷಿ ಅಮ್ಜದ್ ಹತ್ಯೆ – ಶಿವಮೊಗ್ಗಕ್ಕೆ ಮತ್ತೆ ಎಂಟ್ರಿ ಕೊಟ್ಟ ಎನ್‌ಐಎ

    ಇನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನ ಖರೀದಿಸಬಾರದು, ಬಳಸಬಾರದು. ಈ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು. ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸಿ. ಅವಧಿ ಮೀರಿದ ಔಷಧಿಗಳನ್ನ ನೋಡಿ ಬಳಸಬೇಕು. ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ ವಾಂತಿ ಅಥವಾ ಉಸಿರಾಟ ತೊಂದರೆ ಇದ್ದರೆ ಹತ್ತಿರದ ವೈದ್ಯರನ್ನ ಸಂಪರ್ಕಿಸಿ. ಔಷಧ ಅವಧಿ ಮುಗಿಯುವ ದಿನಾಂಕವನ್ನು ಪರಿಶೀಲಿಸಿ ಮತ್ತು ಲೇಬಲ್‌ಗಳನ್ನು ಎಚ್ಚರಿಕೆಯಿಂದ ಓದಿ ಎಂದು ಸೂಚಿಸಲಾಗಿದೆ. ಇದನ್ನೂ ಓದಿ: Bengaluru | ಪತಿಯೊಂದಿಗೆ ಗಲಾಟೆ – ಗೃಹಿಣಿ ನೇಣಿಗೆ ಶರಣು

    ಮಕ್ಕಳ ಸಿರಪ್ ಬಳಕೆಗೆ ಏನು ಗೈಡ್‌ಲೈನ್ಸ್?
    – ಚಿಕ್ಕಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ.
    – 1 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಸಿರಪ್ ನೀಡಬೇಡಿ.
    – 2.2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ಸಲಹೆ ಮೇರೆಗೆ ಮಾತ್ರ ಔಷಧಿ ನೀಡಬೇಕು.

    ಹಿರಿಯ ಮಕ್ಕಳಿಗೆ ಏನು ಸಲಹೆ?
    – ಕೆಮ್ಮಿನ ಸಿರಪ್ ವೈದ್ಯರ ಸಲಹೆ ಮೇರೆಗೆ ಸ್ವೀಕರಿಸಬೇಕು.
    – ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕಡಿಮೆ ಡೋಸ್ ಅನ್ನು ಬಳಸಬೇಕು.
    – ಬಹುಔಷಧ ಸಂಯೋಜನೆ ಇರುವ ಸಿರಪ್‌ಗಳನ್ನು ಬಳಸಬಾರದು.

    ಮನೆ ಮದ್ದುಗಳು:
    – ಸಾಕಷ್ಟು ದ್ರವರೂಪದ ಪದಾರ್ಥ ನೀಡುವುದು.
    – ಸಾಕಷ್ಟು ವಿಶ್ರಾಂತಿ ಮತ್ತು ನಿದ್ದೆ ಮಾಡಲು ಅವಕಾಶ ನೀಡುವುದು.
    – ಪೌಷ್ಠಿಕ ಆಹಾರ ನೀಡುವುದು.

    ಈ ರೋಗಲಕ್ಷಣಗಳು ಉಂಟಾದರೆ ವೈದ್ಯರನ್ನು ಸಂಪರ್ಕಿಸಿ:
    – ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ
    – ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು
    – ಅತಿಯಾದ ಜ್ವರ ಮತ್ತು ಆಹಾರ ಸೇವನೆ ಮಾಡದೇ ಇರೋದು
    – ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ

  • ಗ್ಯಾಂಬಿಯಾ ಬಳಿಕ ಈಗ ಉಜ್ಬೇಕಿಸ್ತಾನದಿಂದ ಆರೋಪ – 18 ಮಕ್ಕಳ ಸಾವಿಗೆ ಭಾರತದ ಸಿರಪ್ ಕಾರಣ

    ಗ್ಯಾಂಬಿಯಾ ಬಳಿಕ ಈಗ ಉಜ್ಬೇಕಿಸ್ತಾನದಿಂದ ಆರೋಪ – 18 ಮಕ್ಕಳ ಸಾವಿಗೆ ಭಾರತದ ಸಿರಪ್ ಕಾರಣ

    ತಾಷ್ಕೆಂಟ್: ಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ (Gambia) ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ (Cough Syrup) ಕಾರಣ ಎಂದು ಆರೋಪ ಹೊರಿಸಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ (Uzbekistan) ಕೂಡಾ ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ನ ಪಾತ್ರವಿದೆ ಎಂದು ಆರೋಪಿಸಿದೆ.

    ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ. ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ.

    ಸಿರಪ್‌ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳದೇ ಪೋಷಕರು ಮಕ್ಕಳಿಗೆ ಕೆಮ್ಮಿನ ಸಿರಪ್ ಅನ್ನು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚಿನ ಡೋಸ್ ನೀಡಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಹಲವರಿಗೆ T20 ಯಿಂದ ಬ್ರೇಕ್?

    ವರದಿಗಳ ಪ್ರಕಾರ, ಶೀತ ಹಾಗೂ ಜ್ವರ ಇದ್ದ ಮಕ್ಕಳಿಗೆ ಈ ಸಿರಪ್ ನೀಡಲಾಗುತ್ತದೆ. ಇದೀಗ 18 ಮಕ್ಕಳ ಸಾವಿನ ಬಳಿಕ ದೇಶದ ಎಲ್ಲಾ ಔಷಧಾಲಯಗಳಿಂದ ಡಾಕ್-1 ಮ್ಯಾಕ್ಸ್ ಮಾತ್ರೆಗಳು ಹಾಗೂ ಸಿರಪ್‌ಗಳನ್ನು ಹಿಂಪಡೆಯಲಾಗಿದೆ.

     

    ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವಿಗೆ ನೋಯ್ಡಾ ಮೂಲದ ಡ್ರಗ್ ಮೇಕರ್ ತಯಾರಿಸಿರುವ ಸಿರಪ್‌ನೊಂದಿಗೆ ಸಂಬಂಧವಿರುವ ಶಂಕೆಯ ಮೇಲೆ ಭಾರತ ತನಿಖೆಯನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಸೆಂಬ್ಲಿ ಎಲೆಕ್ಷನ್ ಮೇಲೆ ಬಿಜೆಪಿ ಚಾಣಾಕ್ಯನ ಕಣ್ಣು- ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

    Live Tv
    [brid partner=56869869 player=32851 video=960834 autoplay=true]

  • ಗ್ಯಾಂಬಿಯಾದ 66 ಮಕ್ಕಳ ಸಾವು – 4 ಕೆಮ್ಮಿನ ಸಿರಪ್ ವಿರುದ್ಧ ತನಿಖೆ ತೀವ್ರಗೊಳಿಸಿದ ಭಾರತ

    ಗ್ಯಾಂಬಿಯಾದ 66 ಮಕ್ಕಳ ಸಾವು – 4 ಕೆಮ್ಮಿನ ಸಿರಪ್ ವಿರುದ್ಧ ತನಿಖೆ ತೀವ್ರಗೊಳಿಸಿದ ಭಾರತ

    ನವದೆಹಲಿ: ಆಫ್ರಿಕಾ ಖಂಡದ ಗ್ಯಾಂಬಿಯಾದಲ್ಲಿ (Gambia) 66 ಮಕ್ಕಳ ಸಾವಿಗೆ ಭಾರತದ 4 ಕೆಮ್ಮಿನ ಸಿರಪ್ (Cough Syrup) ಉತ್ಪನ್ನಗಳು ಸಂಬಂಧಪಟ್ಟಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಎಚ್ಚರಿಸಿದ ಬಳಿಕ ಭಾರತ ಸರ್ಕಾರ ಹರಿಯಾಣ ಮೂಲದ ಫಾರ್ಮಾಸ್ಯುಟಿಕಲ್ ಸಂಸ್ಥೆಯ ವಿರುದ್ಧ ತನಿಖೆಯನ್ನು ತೀವ್ರಗೊಳಿಸಿದೆ.

    ಮೂಲಗಳ ಪ್ರಕಾರ WHO ಸೆಪ್ಟೆಂಬರ್ 29ರಂದು ಕೆಮ್ಮಿನ ಸಿರಪ್‌ಗಳ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾಗೆ (DCGI) ಎಚ್ಚರಿಕೆ ನೀಡಿದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತಕ್ಷಣವೇ ಈ ವಿಷಯವನ್ನು ಹರಿಯಾಣ ನಿಯಂತ್ರಣ ಪ್ರಾಧಿಕಾರದೊಂದಿಗೆ ಕೈಗೆತ್ತಿಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

    ಈ ಕೆಮ್ಮಿನ ಸಿರಪ್‌ಗಳನ್ನು ಹರಿಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ತಯಾರಿಸಿದೆ. ಸಂಸ್ಥೆ ಈ ಉತ್ಪನ್ನಗಳನ್ನು ಗ್ಯಾಂಬಿಯಾಗೆ ಮಾತ್ರವೇ ರಫ್ತು ಮಾಡಿದೆ ಎನ್ನಲಾಗುತ್ತಿದೆ. ಆದರೆ ಈ ಆರೋಪಗಳಿಗೆ ಕಂಪನಿ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದೆಹಲಿಯ ಪಿತಾಂಪುರದಲ್ಲಿರುವ ಸಂಸ್ಥೆಯ ಆಡಳಿತ ಕಚೇರಿ ಇಂದು ಬೆಳಗ್ಗೆ ಮುಚ್ಚಿರುವುದು ಕಂಡುಬಂದಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ತಾಪಮಾನ ಹೆಚ್ಚಳದಿಂದ ಆಪಲ್ ವಾಚ್ ಸ್ಫೋಟ

    ಬುಧವಾರ WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಭಾರತದ 4 ಶೀತ ಹಾಗೂ ಕೆಮ್ಮಿನ ಸಿರಪ್‌ಗಳು ಗ್ಯಾಂಬಿಯಾದ 66 ಮಕ್ಕಳ ಸಾವಿಗೆ ಕಾರಣವಾಗಿವೆ ಹಾಗೂ ಉತ್ಪನ್ನಗಳನ್ನು ಬಳಸಿದವರಲ್ಲಿ ಮೂತ್ರಪಿಂಡದ ಗಾಯಗಳು ಕಂಡುಬಂದಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಸಾವುಗಳು ಯಾವಾಗ ಸಂಭವಿಸಿವೆ ಎಂಬ ಸ್ಪಷ್ಟ ವಿವರಗಳನ್ನು ನೀಡಿಲ್ಲ.

    who

    ಇದೀಗ 4 ಕೆಮ್ಮಿನ ಸಿರಪ್‌ಗಳ ಮಾದರಿಗಳನ್ನು ಕೇಂದ್ರ ಮತ್ತು ಪ್ರಾದೇಶಿಕ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಇದರ ಫಲಿತಾಂಶ 3 ದಿನಗಳಲ್ಲಿ ಬರಲಿವೆ ಎಂದು ಮೂಲಗಳು ತಿಳಿಸಿವೆ.

    ಪ್ರೋಟೋಕಾಲ್ ಪ್ರಕಾರ, ಭಾರತದಿಂದ ರಫ್ತು ಮಾಡುವ ಯಾವುದೇ ಔಷಧವನ್ನು ಸ್ವೀಕರಿಸುವ ದೇಶಗಳು ಪರೀಕ್ಷೆಗಳನ್ನು ನಡೆಸಬೇಕು. ಆದರೆ ಗ್ಯಾಂಬಿಯಾದಲ್ಲಿ ಸರಿಯಾಗಿ ಪರೀಕ್ಷೆ ನಡೆಸಿರಲಿಲ್ಲವೇ ಅಥವಾ ಔಷಧದ ಹಾನಿಕಾರಕ ಅಂಶಗಳು ಪತ್ತೆಯಾಗದೇ ಹೋಗಿವೆಯೇ ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಇದನ್ನೂ ಓದಿ: 22 ಸಿಕ್ಸ್‌, 17 ಬೌಂಡರಿ – ಟಿ20ಯಲ್ಲಿ ಬರೋಬ್ಬರಿ 205 ರನ್‌ ಬ್ಲ್ಯಾಸ್ಟ್‌

    Live Tv
    [brid partner=56869869 player=32851 video=960834 autoplay=true]

  • ಭಾರತದ ಕೆಮ್ಮಿನ ಸಿರಪ್‌ನಿಂದ ಗ್ಯಾಂಬಿಯಾದ 66 ಮಕ್ಕಳ ಸಾವು: WHO ಎಚ್ಚರಿಕೆ

    ಭಾರತದ ಕೆಮ್ಮಿನ ಸಿರಪ್‌ನಿಂದ ಗ್ಯಾಂಬಿಯಾದ 66 ಮಕ್ಕಳ ಸಾವು: WHO ಎಚ್ಚರಿಕೆ

    ನವದೆಹಲಿ: ಭಾರತದಲ್ಲಿ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ 4 ಕೆಮ್ಮು ಹಾಗೂ ಶೀತದ ಸಿರಪ್‌ಗಳ (Cough Syrup) ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಬುಧವಾರ ಎಚ್ಚರಿಕೆ ನೀಡಿದೆ. ಈ ಸಿರಪ್‌ಗಳು ಆಫ್ರಿಕಾ ಖಂಡದ ಗ್ಯಾಂಬಿಯಾದಲ್ಲಿ (Gambia) 66 ಮಕ್ಕಳ ಸಾವಿಗೆ ಸಂಬಂಧಪಟ್ಟಿವೆ ಎಂದು ತಿಳಿಸಿದೆ.

    ಈ ಸಿರಪ್‌ಗಳ ಮಾದರಿಗಳನ್ನು ಸಂಗ್ರಹಿಸಿ ಈಗಾಗಲೇ ಪ್ರಯೋಗಾಲಯಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ಅವುಗಳ ವಿಶ್ಲೇಷಣೆಯಲ್ಲಿ ಹಾನಿಕಾರಕ ಅಂಶಗಳು ಒಳಗೊಂಡಿರುವುದು ಕಂಡುಬಂದಿರುವುದಾಗಿ ತಿಳಿಸಿದೆ. ಇದನ್ನೂ ಓದಿ: ದಸರಾ ರಜೆ ಮುಗಿಸಿ ಬೆಂಗಳೂರಿನತ್ತ ಜನ – ಬಸ್ ತುಂಬಿ ಟಾಪ್ ಮೇಲೂ ಪ್ರಯಾಣ

    4 ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದಾಗ ಅವು ಸ್ವೀಕಾರಾರ್ಹವಲ್ಲದ ಪ್ರಮಾಣದಲ್ಲಿ ಡೈಥಿಲೀನ್ ಗ್ಲೈಕೋಲ್ ಹಾಗೂ ಎಥಿಲೀನ್ ಗ್ಲೈಕೋಲ್ ಅನ್ನು ಮಾಲಿನ್ಯಕಾರಕಗಳಾಗಿ ಬಳಸಲಾಗಿದೆ ಎಂಬುದು ಖಚಿತವಾಗಿದೆ ಎಂದು ಡಬ್ಲ್ಯುಹೆಚ್‌ಒ ಎಚ್ಚರಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಪುಟಿನ್ ಜೊತೆ ಯಾವುದೇ ಮಾತುಕತೆ ನಡೆಸಲ್ಲ – ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ಸದ್ಯ ಈ ಉತ್ಪನ್ನಗಳನ್ನು ಬಳಸಿರುವುದರ ಅಡ್ಡ ಪರಿಣಾಮ ಗ್ಯಾಂಬಿಯಾದಲ್ಲಿ ಮಾತ್ರವೇ ಇಲ್ಲಿಯವರೆಗೆ ಕಂಡುಬಂದಿದೆ. ಈ ಉತ್ಪನ್ನಗಳನ್ನು ಇತರ ದೇಶಗಳಿಗೂ ವಿತರಿಸಲಾಗಿದೆ ಎಂಬುದು ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]