Tag: T.B Jayachandra

  • ಅಧಿಕಾರದಲ್ಲಿ ತೃಪ್ತಿ ಅನ್ನೋದು ಇರಲ್ಲ: ಟಿ.ಬಿ ಜಯಚಂದ್ರ

    ಅಧಿಕಾರದಲ್ಲಿ ತೃಪ್ತಿ ಅನ್ನೋದು ಇರಲ್ಲ: ಟಿ.ಬಿ ಜಯಚಂದ್ರ

    – ಬಿಜೆಪಿ, ಜೆಡಿಎಸ್‌ ನೀರಾವರಿ ಯೋಜನೆ ಬಗ್ಗೆ ಚರ್ಚಿಸಲಿ

    ಬೆಂಗಳೂರು: ಅಧಿಕಾರದಲ್ಲಿ ತೃಪ್ತಿ ಅನ್ನೋದು ಇರಲ್ಲ ಎಂದು ಕಾಂಗ್ರೆಸ್‌ನ (Congress) ಹಿರಿಯ ನಾಯಕ ಟಿ.ಬಿ ಜಯಚಂದ್ರ (T.B Jayachandra) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಸಚಿವ ಸಂಪುಟ ಪುನರ್‌ರಚನೆ ಆಗಬೇಕಾ? ಬೇಡ್ವಾ? ಎಂಬುದನ್ನು ವರಿಷ್ಠರು ತೀರ್ಮಾನ ಮಾಡ್ತಾರೆ. ಮಲ್ಲಿಕಾರ್ಜುನ ಖರ್ಗೆಯವರು ಸುದೀರ್ಘ ರಾಜಕಾರಣ ಮಾಡಿಕೊಂಡು ಬರ್ತಿದ್ದಾರೆ. ಅವರು ಇಡುತ್ತಿರೋ‌ ಹೆಜ್ಜೆ ಏನು ಅನ್ನೋದು ಗೊತ್ತಿಲ್ಲ. ನಾನು ಅವರನ್ನು ಭೇಟಿ ಮಾಡುತ್ತಲೇ ಇರುತ್ತೇನೆ ಎಂದಿದ್ದಾರೆ.

    ನೀರಾವರಿ ಸಚಿವರೊಂದಿಗೆ ಭೇಟಿ ಮಾಡುತ್ತೇವೆ, ಡಿ.ಕೆ ಶಿವಕುಮಾರ್ (D.K Shivakumar) ಸಹ ಬರ್ತಾರೆ.‌ ಅಧಿಕಾರದಲ್ಲಿ ತೃಪ್ತಿ ಎಲ್ಲಿಯೂ ಇಲ್ಲ. ಪಕ್ಷದ ಚೌಕಟ್ಟಿನಲ್ಲಿ ಕೊಟ್ಟಿರೋ ಹುದ್ದೆಯಲ್ಲಿ ಸಾಗುತ್ತಿದ್ದೇವೆ. ಏನಾದರೂ ಖರ್ಗೆಯವರು ಸಂಪುಟ ವಿಸ್ತರಣೆ ಆಗುತ್ತೆ ಅಂದ್ರೆ ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ.

    ಕಾರ್ಯಕರ್ತರಿಗೆ ಆತ್ಮವಿಶ್ವಾಸ ಮೂಡಿಸಬೇಕು. ಅದರ ಜವಾಬ್ದಾರಿ ಅಧ್ಯಕ್ಷರ ಮೇಲೆ ಇರುತ್ತದೆ. ಕಾರ್ಯಾಚರಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ, ಅದನ್ನು ಮಾಡುತ್ತಿದ್ದೇವೆ. 2028ರಲ್ಲಿ ಸಾಕಷ್ಟು ನಾಯಕರು ಸಿಎಂ ರೇಸ್‌ನಲ್ಲಿ ಇದ್ದಾರೆ. ನಾನು ಇದ್ದೇನೆ ಎಂದು ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 2028ರ ಭವಿಷ್ಯ ಈಗ ಮಾತಾಡೋದು ಬೇಡ. ಇನ್ನೂ ಮೂರು ವರ್ಷ ಇದೆ, ಹೀಗಾಗಿ ಅಭಿವೃದ್ಧಿ ಕಡೆಗೆ ಗಮನ ಹರಿಸೋಣ. ನೀರಾವರಿ ಯೋಜನೆ ಕುರಿತು ಕೆಲಸ ಮಾಡೋಣ ಎಂದಿದ್ದಾರೆ.

    ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನೀರಾವರಿ ವಿವಾದಕ್ಕೆ ತೆರೆ ಬೀಳುತ್ತದೆ ಎನ್ನುವುದಾದರೆ ರಾಜ್ಯದಲ್ಲಿ ಇರೋ ನೀರಾವರಿ ಯೋಜನೆ ಕುರಿತು ಚರ್ಚೆ ಮಾಡಲಿ. ಗೋದಾವರಿ ಅಂತರಾಜ್ಯ ವಿವಾದವಾಗಿದೆ. ಈ ರಾಜ್ಯದಲ್ಲಿ ಮೇಕೆ ದಾಟು, ಮಹಾದಾಯಿ ಯೋಜನೆ ಮಾಡಿ ಎಂದು ಹೇಳಬೇಕು ಆ ಕೆಲಸವನ್ನು ಎಂಪಿಗಳು ಮಾಡಬೇಕು ಎಂದಿದ್ದಾರೆ.

    ಉಸ್ತುವಾರಿ ಸಚಿವರ ಮೇಲೆ ಕೆಲವು ಕಡೆ ಅಸಮಧಾನ ವಿಚಾರ‌ವಾಗಿ, ಉಸ್ತುವಾರಿ ಸಚಿವರು ಸಚಿವರ ಬಗ್ಗೆ ಯಾರಾದರೂ ಆಕ್ಷೇಪ ಎತ್ತಿದ್ದಾರಾ? ಸಣ್ಣ ಸಣ್ಣ ವಿಚಾರ ಇರಬಹುದು ಅಷ್ಟೇ, ಅದನ್ನ ಚರ್ಚೆ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

  • ಬಾಯಿ ಮುಚ್ಚಿಕೊಂಡಿರಿ ಅಂತ ಖರ್ಗೆ ಹೇಳಿದ್ದಾರೆ, ಅದನ್ನು ಅರ್ಥ ಮಾಡ್ಕೋಬೇಕು: ಟಿ.ಬಿ.ಜಯಚಂದ್ರ

    ಬಾಯಿ ಮುಚ್ಚಿಕೊಂಡಿರಿ ಅಂತ ಖರ್ಗೆ ಹೇಳಿದ್ದಾರೆ, ಅದನ್ನು ಅರ್ಥ ಮಾಡ್ಕೋಬೇಕು: ಟಿ.ಬಿ.ಜಯಚಂದ್ರ

    ಬೆಂಗಳೂರು: ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರೋದ್ರಿಂದ ಅವರ ಸಂದೇಶ ಅರ್ಥ ಮಾಡಿಕೊಳ್ಳಬೇಕು. ಬಾಯಿ ಮುಚ್ಚಿಕೊಂಡು ಇರಿ ಅಂದರೆ ಸುಮ್ಮನಿರಬೇಕು ಎಂದು. ಅವರ ಈ ಹೇಳಿಕೆಯು ಎಲ್ಲದಕ್ಕೂ ತೆರೆ ಎಳೆದಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ (T B Jayachandra) ಸ್ಪಷ್ಟನೆ ನೀಡಿದರು.

    ಪಕ್ಷದ ನಾಯಕರು ದೆಹಲಿಗೆ ಹೋಗ್ತಿರೋ ವಿಚಾರ ಮತ್ತು ಸಿಎಂ ಹಾಗೂ ಕೆಪಿಸಿಸಿ (KPCC) ಬದಲಾವಣೆ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದರು. ಖರ್ಗೆ ಅವರು ಕರ್ನಾಟಕದ ಬಗ್ಗೆ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಲ್ಲ. ಕೆ.ಎನ್.ರಾಜಣ್ಣ ಪದೇ ಪದೇ ಹೇಳಿಕೆಯ ವಿಚಾರದಲ್ಲಿ ಯಾರು ಏನು ಹೇಳ್ತಾರೆ ಅನ್ನೋದಕ್ಕೆ ನಾನೇನು ಹೇಳಲ್ಲ. ನಾವೆಲ್ಲ ಹಿರಿಯರು, ನಾವು ಅರ್ಥ ಮಾಡಿಕೊಳ್ಳಬೇಕು. ಪದೇ ಪದೇ ಎಲ್ಲದಕ್ಕೂ ಉತ್ತರ ಕೊಡೋಕೆ ಆಗಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಮೂವರು ಪಾದಚಾರಿಗಳ ಮೇಲೆ ಹರಿದ ಕಾರು – ಓರ್ವ ಸಾವು

    ರಾಜಕಾರಣ ಒಂದೊಂದು ಸಂದರ್ಭದಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಆದರೆ ಬಿಜೆಪಿಯವರು ನಮ್ಮ ಸಿಎಂ ಮೇಲೆ ಆರೋಪ ಮಾಡಿದ್ದಾರೆ. ಅಪಪ್ರಚಾರ ಮಾಡಿ, ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ ಇಂದು ಸಿಎಂ ನಿರ್ದೋಷಿ ಎಂದು ತೀರ್ಪು ಬಂದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜಣ್ಣ ಮಾತಾಡಿದ್ದು ತಪ್ಪು – ಹಿರಿಯರು ತಪ್ಪು ಹಾದಿಯಲ್ಲಿ ಹೋದ್ರೆ ನಾವು ದಾರಿ ತಪ್ತೀವಿ: ಶಿವಗಂಗಾ ಬಸವರಾಜ್

    ಸ್ಥಳೀಯ ಸಂಸ್ಥೆ ಚುನಾವಣೆ ಆಗಿಲ್ಲ. ಪಂಚಾಯತ್ ಚುನಾವಣೆ ಆಗಿಲ್ಲ. ಹೀಗಾಗಿ ಸ್ಥಳೀಯ ಆಡಳಿತದ ಮೇಲೆ ಹೆಚ್ಚು ಗಮನ ಹರಿಸಬೇಕು. ನಾವು ಸ್ಥಳೀಯ ಚುನಾವಣೆ ಮೇಲೆ ಗಮನ ಹರಿಸಬೇಕು. ಆದರೆ ಈ ವೇಳೆ ಹೈಕಮಾಂಡ್‌ನವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ಈಗ ಯಾವುದೇ ಬದಲಾವಣೆ ಆಗಲ್ಲ ಅಂತ ಅನ್ನಿಸುತ್ತಿದೆ ಎಂದರು. ಇದನ್ನೂ ಓದಿ: Champions Trophy: ಟಿವಿಯಲ್ಲಿ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ ವೀಕ್ಷಿಸಿದ ಹೆಚ್‌ಡಿಕೆ

  • ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ.. ನಾನು ಕತ್ತಲಲ್ಲಿ ಇದ್ದೇನೆ:‌ ಟಿ.ಬಿ.ಜಯಚಂದ್ರ

    ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ.. ನಾನು ಕತ್ತಲಲ್ಲಿ ಇದ್ದೇನೆ:‌ ಟಿ.ಬಿ.ಜಯಚಂದ್ರ

    ಬೆಂಗಳೂರು: ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನಾನು ಕತ್ತಲಲ್ಲಿ ಇದ್ದೇನೆ ಎಂದು ನವದೆಹಲಿ ಪ್ರತಿನಿಧಿ ಶಾಸಕ ಟಿ.ಬಿ.ಜಯಚಂದ್ರ (T.B.Jayachandra) ಪ್ರತಿಕ್ರಿಯಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರದ ಬಗ್ಗೆ ನಾನು ಏನೂ ಮಾತನಾಡಲ್ಲ. ನಾನು ಕತ್ತಲಲ್ಲಿ ಕೂತಿದ್ದೇನೆ. ಕನ್ನಡಕ ಹಾಕಿಕೊಂಡಿದ್ದೇನೆ. ಈಗಾಗಲೇ ವರಿಷ್ಠರು ಬಂದು ಸೂಚನೆ ನೀಡಿ ಹೋಗಿದ್ದಾರೆ. ನಾನು ಕಾಂಗ್ರೆಸ್‌ನ (Congress) ಶಿಸ್ತಿನ ಸಿಪಾಯಿ. ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಂತರ ಡಿಕೆಶಿಯೇ ಸಿಎಂ ಆಗಬೇಕು: ಶಾಸಕ ಉದಯ್ ಗೌಡ

    ನಾನು ಕಣ್ಣು ಆಪರೇಷನ್ ಮಾಡಿಸಿಕೊಂಡು ನಾಲ್ಕು ದಿನ ಆಗಿದೆ. ಕತ್ತಲಲ್ಲಿ ಕೂತಿದ್ದೇನೆ. ಇವತ್ತಷ್ಟೆ ನನಗೆ ಟಿವಿ ನೋಡೋಕು ಬಿಡ್ತಿಲ್ಲ. ನಾನು ಕತ್ತಲಲ್ಲಿದ್ದೀನಿ. ಕನ್ನಡಕ ಹಾಕಿಕೊಂಡಿದ್ದೀನಿ. ಯಾವ ವಿಚಾರವೂ ಗೊತ್ತಿಲ್ಲ. ಏನ್ ಚರ್ಚೆ ಆಗಿದ್ಯೋ, ಆ ಗೋಜಿಗೆ ನಾನು ಹೋಗಿಲ್ಲ ಎಂದರು.

    ಜಾತಿಗಣತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ‌ ಕಾಲದಲ್ಲೇ ಮಾನದಂಡ ಇಟ್ಟುಕೊಂಡು ಕಾಂತರಾಜು ವರದಿ ಕೇಳಿದ್ದೆವು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಜಾತಿಗಣತಿ ಕೇಳಿದ್ವಿ. ಆ ವರದಿಯಲ್ಲಿ ಪರಿಪೂರ್ಣ ಏನಿದೆ ಅಂತ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ

    ಜಯಪ್ರಕಾಶ್ ಹೆಗ್ಡೆ ವರದಿ ಕೊಡ್ತೀವಿ ಅನ್ನೋದನ್ನ ಮಾಧ್ಯಮದಲ್ಲಿ ನೋಡಿದ್ದೇನೆ. ವರದಿ ಕೊಟ್ಟಾಗ ಸರ್ಕಾರ ಸ್ವೀಕಾರ ಮಾಡಬೇಕು. ವರದಿ ಸ್ವೀಕಾರದ ಬಳಿಕ ಜಾರಿ ಮಾಡೋದು ಬಿಡೋದು ಸರ್ಕಾರಕ್ಕೆ ಬಿಟ್ಟ ವಿಚಾರ. ಅಧಿಕೃತವಾಗಿ ಸರ್ಕಾರಕ್ಕೆ ವರದಿ ಒಪ್ಪಿಸುವ ಕೆಲಸ ಮಾಡಬೇಕಿದೆ. ಸದುದ್ದೇಶದ ಹಿನ್ನೆಲೆಯಲ್ಲಿ ಐವತ್ತೈದು ಮಾನದಂಡ ಇಟ್ಟುಕೊಂಡು ಜಾತಿಗಣತಿ ಮಾಡಿಸಿದ್ದೇವೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಬೆಂಗಳೂರು: ಸಿಎಂ ವಿರುದ್ಧದ ಹರಿಪ್ರಸಾದ್ (Hariprasad) ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು ಉಂಟಾಗಿದೆ ಎಂದು ಕಾಂಗ್ರೆಸ್‍ನ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (T.B Jayachandra) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹರಿಪ್ರಸಾದ್ ಅವರಿಗೆ ಹೈಕಮಾಂಡ್ ನೋಟಿಸ್ ನೀಡಿರುವ ವಿಚಾರವಾಗಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಹರಿಪ್ರಸಾದ್ ಕಾಂಗ್ರೆಸ್‍ನ (Congress) ಹಿರಿಯ ನಾಯಕರಾಗಿದ್ದಾರೆ. ನಾವೆಲ್ಲ ಒಂದೇ ಬಾರಿ ರಾಜಕೀಯಕ್ಕೆ ಬಂದವರು. ಅವರು ಎಐಸಿಸಿಯಲ್ಲಿ ಉನ್ನತ ಹುದ್ದೆಯಲ್ಲಿ ಇದ್ದರು. ಆದರೆ ಅವರು ಮಾತನಾಡುವಾಗ ಯೋಚನೆ ಮಾಡಬಹುದಿತ್ತು. ಇದು ಒಂದು ರೀತಿಯಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಾಗಿದೆ. ಅವರ ಹೇಳಿಕೆ ವಿಚಾರವಾಗಿ ಹೈಕಮಾಂಡ್ ನೋಟಿಸ್ ನೀಡಿದೆ. ಅದಕ್ಕೆ ಉತ್ತರ ಕೊಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ

    ಬಿಜೆಪಿ, ಜೆಡಿಎಸ್ ದೋಸ್ತಿ ವಿಚಾರವಾಗಿ, ಇತ್ತೀಚೆಗೆ ಯಾವುದೇ ತತ್ವ ಆಧಾರಗಳಿಲ್ಲದೆ ಹೊಂದಾಣಿಕೆ ನಡೆಯುತ್ತಿದೆ. ಜಾತ್ಯತೀತ ಎಂದು ಹೆಸರಿಟ್ಟುಕೊಂಡವರು ಬಿಜೆಪಿ ಜೊತೆ ಹೋಗುವುದು ಎಷ್ಟು ಸರಿ ಎನಿಸುತ್ತದೆ? ಜನ ಅದನ್ನು ಹೇಗೆ ಒಪ್ಪುತ್ತಾರೆ ಎನ್ನುವುದು ಚರ್ಚೆ ಆಗಬೇಕು ಎಂದಿದ್ದಾರೆ.

    ಕೇವಲ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮೈತ್ರಿ ಮಾಡಿಕೊಳ್ಳುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ ಈ ಮೈತ್ರಿಯಿಂದ ಕಾಂಗ್ರೆಸ್‍ಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರನೇ ಅಲೆಯಲ್ಲಿ ಯಾರು ಇರ್ತಾರೋ ಯಾರು ಹೋಗ್ತಾರೋ ಗೊತ್ತಿಲ್ಲ: ಜಯಚಂದ್ರ

    ಮೂರನೇ ಅಲೆಯಲ್ಲಿ ಯಾರು ಇರ್ತಾರೋ ಯಾರು ಹೋಗ್ತಾರೋ ಗೊತ್ತಿಲ್ಲ: ಜಯಚಂದ್ರ

    ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ 2 ವರ್ಷ ಬಾಕಿ ಇದೆ. ಅಷ್ಟರಲ್ಲಿ ಕೊರೊನಾ ಮೂರನೇ ಅಲೆ ಬಂದು ಯಾರು ಇರುತ್ತಾರೋ ಯಾರು ಹೋಗುತ್ತಾರೋ ಗೊತ್ತಿಲ್ಲ. ಈ ನಡುವೆ ಕಾಂಗ್ರೆಸ್ ನಲ್ಲಿ ಸಿಎಂ ಗಾದಿ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದು ಮಾಜಿ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ಈಗ ಸಿಎಂ ಯಾರು ಎಂಬ ಪ್ರಶ್ನೆ ಅಪ್ರಸ್ತುತ. 2023ರಲ್ಲಿ 125ಕ್ಕೂ ಹೆಚ್ಚು ಸ್ಥಾನ ಪಡೆದರೆ ಆಗ ಅಂದು ಆಯ್ಕೆಯಾದ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ಅಷ್ಟರಲ್ಲಿ ಸಿಎಂ ಅಭ್ಯರ್ಥಿ ಯಾರೂ ಅನ್ನುವ ಚರ್ಚೆ ಬೇಡ ಎಂದಿದ್ದಾರೆ.

    ಜತೆಗೆ ಕಾಂಗ್ರೆಸ್ ನಲ್ಲಿ ಯಾವ ಬಣನೂ ಇಲ್ಲ, ಗುಂಪುಗಾರಿಕೆನೂ ಇಲ್ಲ, ಅದು ಕೇವಲ ಮಾಧ್ಯಮದ ಸೃಷ್ಟಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನಾನು ಓಪನ್ ಹಾರ್ಟೆಡ್ ಏನೇ ಹೇಳಿದ್ರೂ ಓಪನ್ ಆಗಿ ಹೇಳ್ತೀನಿ: ಜಮೀರ್

  • ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ದೃಢ

    ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ದೃಢ

    ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ.

    ಇಂದು ಮಧ್ಯಾಹ್ನ ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟಿ.ಬಿ.ಜಯಚಂದ್ರ ಮನವಿ ಮಾಡಿಕೊಂಡಿದ್ದಾರೆ.

    ಶಿರಾ ಉಪಚುನಾವಣೆ ಫಲಿತಾಂಶ ನಾಳೆಯೇ ಪ್ರಕಟವಾಗಲಿದೆ. ಈ ಬಾರಿ ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕಾ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಗಳು ಸೇರಿದಂತೆ ಒಟ್ಟು 200ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

  • ಶಿರಾ ಉಪ ಚುನಾವಣೆ-ಟೆಂಪಲ್ ರನ್ ಆರಂಭಿಸಿದ ಟಿ.ಬಿ.ಜಯಚಂದ್ರ

    ಶಿರಾ ಉಪ ಚುನಾವಣೆ-ಟೆಂಪಲ್ ರನ್ ಆರಂಭಿಸಿದ ಟಿ.ಬಿ.ಜಯಚಂದ್ರ

    ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಹೆಸರು ಅಂತಿಮವಾಗುತ್ತಿದ್ದಂತೆ ಮಾಜಿ ಸಚಿವ ಜಯಚಂದ್ರ ಟೆಂಪಲ್ ರನ್ ಆರಂಭಿಸಿದ್ದಾರೆ. ಬೋರನಕಣಿವೆಯಲ್ಲಿರೋ ಶಿರಡಿ ಸಾಯಿಬಾಬ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿರುವ ಕೆಂಚಮ್ಮ ದೇವಾಲಯಕ್ಕೆ ಪತ್ನಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ.

    ಶಾಸಕ ಸತ್ಯನಾರಾಯಣ ಅವರ ಅಕಾಲಿಕ ಮರಣದಿಂದ ತೆರವಾಗಿರೋ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ರಾಜಕೀಯ ನಾಯಕರು ಈಗಾಗಲೇ ಕ್ಷೇತ್ರದ ಮೂಲೆಮೂಲೆಯಲ್ಲೂ ಮತ ಬೇಟಿಗಾಗಿ ಗಿರಕಿ ಹೊಡೆಯುತ್ತಿದ್ದಾರೆ. ಅದರಲ್ಲೂ ಕಾಂಗ್ರೆಸ್ ನಿಂದ ಪರಾಭವಗೊಂಡಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರಗೆ ಟಿಕೆಟ್ ನೀಡೋ ವಿಚಾರದಲ್ಲಿ ಮಾಜಿ ಶಾಸಕ ಕೆ.ಎನ್ ರಾಜಣ್ಣರೇ ಅಡ್ಡಗಾಲಾಕಿದ್ದರು.

    ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಉಪಚುನಾವಣೆ ಕುರಿತು ಸಭೆಯಲ್ಲಿ ಜಯಚಂದ್ರರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಟಿ.ಬಿ.ಜಯಚಂದ್ರ ಅವರ ಗೆಲುವಿಗಾಗಿ ನಾವೆಲ್ಲಾ ಕೆಲಸ ಮಾಡುತ್ತೇವೆ ಅಂತ ಮಾತು ಕೊಟ್ಟ ಬಳಿಕವಂತೂ ಜಯಚಂದ್ರ ಫುಲ್ ಆಕ್ಟೀವಾಗಿದ್ದಾರೆ. ಇಂದು ಬೆಳಗ್ಗೆಯಿಂದಲೇ ಟೆಂಪಲ್ ರನ್ ಆರಂಭಿಸಿದ್ದಾರೆ.

    ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಇರುತ್ತಾರೆ. ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದರು.

    ಬುಧವಾರ ಬೆಳಗ್ಗೆ ತಾನೇ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜಣ್ಣ, ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿ ಬಂದಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಅನ್ನೋದು ನನ್ನ ಅಭಿಪ್ರಾಯ. ಪಕ್ಷ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಜೊತೆಗೆ ಚುನಾವಣೆಗಾಗಿ ದುಡ್ಡು ಕೂಡ ಕೊಡಬೇಕು ಎಂದು ಹೇಳಿದ್ದರು. ಆದರೆ ಸಭೆ ನಂತರ ಅಧ್ಯಕ್ಷರ ಅಭಿಪ್ರಾಯಕ್ಕೆ ನಾವೆಲ್ಲರೂ ಸಾಥ್ ನೀಡುತ್ತೇವೆ ಎಂದು ಉಲ್ಟಾ ಹೊಡೆದಿದ್ದರು.

  • ಡಿಕೆಶಿ, ಸಿದ್ದರಾಮಯ್ಯ ಒಂದೇ ಕೈ ಎರಡು ಕಣ್ಣುಗಳಿದ್ದಂತೆ: ಟಿ.ಬಿ.ಜಯಚಂದ್ರ

    ಡಿಕೆಶಿ, ಸಿದ್ದರಾಮಯ್ಯ ಒಂದೇ ಕೈ ಎರಡು ಕಣ್ಣುಗಳಿದ್ದಂತೆ: ಟಿ.ಬಿ.ಜಯಚಂದ್ರ

    ಚಿಕ್ಕಬಳ್ಳಾಪುರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ಕೈ ಎರಡು ಕಣ್ಣುಗಳಿದ್ದಂತೆ ಅಂತ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

    ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯಗಳಿವೆಯಾ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಬ್ಬರು ಒಂದೇ ಕೈ ಎರಡು ಕಣ್ಣಾಗಿ ಕೆಲಸ ಮಾಡ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಭಿನ್ನಾಭಿಪ್ರಾಯಗಳಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಇದೆ. ಹೈಕಮಾಂಡ್ ತತ್ವ ಸಿದ್ದಾಂತಗಳಿವೆ. ಅದರಡಿಯಲ್ಲಿ ಎಲ್ಲರ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಭಿನ್ನಾಭಿಪ್ರಾಯ ಇದೆ ಯಾರೋ ಮಾಹಿತಿ ಹೇಳಬಹುದು. ಆದ್ರೆ ಯಾರು ಅದನ್ನ ನಂಬಬಾರದು ಎಂದರು.

    ಇದೇ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‍ಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿರುಗೇಟು ನೀಡಿದರು. ಪ್ರಜಾಪ್ರಭುತ್ವದ ಅರ್ಥ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ.ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದ ಬಿಜೆಪಿಯವರಿಂದ ನಾವು ಕಲಿಯಬೇಕಿಲ್ಲ. ಪ್ರಜಾಪ್ರಭುತ್ವದ ಸಿದ್ದಾಂತ ಒಪ್ಪಿರುವುದು ಕಾಂಗ್ರೆಸ್ ಪಕ್ಷ. ಹೋರಾಟದ ಹಿನ್ನೆಲೆ ದೇಶದಲ್ಲಿ ಜನತಂತ್ರ ವ್ಯವಸ್ಥೆ ಬಂದಿರೋದು. ನಿನ್ನೆ ಮೊನ್ನೆ ಬಿಜೆಪಿ ಸೇರಿದ ಸುಧಾಕರ್ ಅವರಿಂದ ನಾವು ಕಲಿಯಬೇಕಿಲ್ಲ. ಯಾವ ಕಾರಣಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ರು ಎಲ್ಲಿರಿಗೂ ಗೊತ್ತು.
    ಅಧಿಕಾರದ ಆಸೆಗಾಗಿ ಬಿಜೆಪಿ ಸೇರಿದ್ದು ಸುಧಾಕರ್ ಎಂದು ಟೀಕಿಸಿದರು.

  • ಶರಾವತಿ ಆಯ್ತು, ಈಗ ಬೆಂಗಳೂರಿಗೆ ಅಘನಾಶಿನಿ ನೀರು – ಸರ್ಕಾರಕ್ಕೆ ಜಯಚಂದ್ರ ಪ್ರಸ್ತಾಪ

    ಶರಾವತಿ ಆಯ್ತು, ಈಗ ಬೆಂಗಳೂರಿಗೆ ಅಘನಾಶಿನಿ ನೀರು – ಸರ್ಕಾರಕ್ಕೆ ಜಯಚಂದ್ರ ಪ್ರಸ್ತಾಪ

    ತುಮಕೂರು: ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದೇ ಪಶ್ಚಿಮಘಟ್ಟಕ್ಕೆ ಸೇರಿದ ಅಘನಾಶಿನಿ ನದಿ ನೀರಿನ ಯೋಜನೆಯ ಪ್ರಸ್ತಾವನೆಯನ್ನು ಮಾಜಿ ಸಚಿವ ಟಿ.ಬಿ.ಜಯಚಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕನ್ನಡದಲ್ಲಿ ಹರಿಯುವ ಅಘನಾಶಿನಿ ನದಿಯ ಸುಮಾರು 50-60 ಟಿಎಂಸಿ ನೀರನ್ನು ಬೆಂಗಳೂರಿಗೆ ಹರಿಸಬಹುದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಘನಾಶಿನಿ ನದಿಯಿಂದ ನೀರು ತರುವ ಯೋಜನೆಗೆ ಸರಿಸುಮಾರು 10-12 ಸಾವಿರ ಕೋಟಿ ರೂ. ಖರ್ಚಾಗಬಹುದು. ಈ ಯೋಜನೆ ಅನುಷ್ಠಾನಗೊಂಡರೆ ಚಿತ್ರದುರ್ಗ, ತುಮಕೂರು ಹಾಗೂ ಬೆಂಗಳೂರು ನಗರಕ್ಕೆ ಅನುಕೂಲ ಆಗಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

    ಈಗಾಗಲೇ ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಯೋಜನೆಗೆ ಮಲೆನಾಡು ಜನರು ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಮವಾರದಂದು ಸ್ವತಃ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಕೂಡ ಈ ಯೋಜನೆಯನ್ನು ವಿರೋಧಿಸಿ, ಬೆಂಗಳೂರು ಬೆಳೆಯುವುದನ್ನ ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳೆಸಿ. ಇಲ್ಲಿ ಸಾಕಷ್ಟು ನದಿಗಳಿವೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

    ಅಷ್ಟೇ ಅಲ್ಲದೆ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯಿಂದ ಅಪಾರ ಪರಿಸರ ನಾಶವಾಗುತ್ತದೆ. ಅದ್ದರಿಂದ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜುಲೈ 10 ರಂದು ಶರಾವತಿ ಉಳಿಸಿ ಹೋರಾಟ ಒಕ್ಕೂಟದ ಸಭೆ ಶಿವಮೊಗ್ಗ ಬಂದ್‍ಗೆ ಕರೆ ನೀಡಿದೆ.

    ಶನಿವಾರ ಜಿಲ್ಲೆಯ ನೌಕರರ ಭವನದಲ್ಲಿ ತಾಲೂಕು ಒಕ್ಕೂಟದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಶಿವಮೊಗ್ಗದ ವಿವಿಧ ಸಂಘ, ಸಂಸ್ಥೆಗಳ ಮತ್ತು ಜನಪ್ರತಿನಿಧಿಗಳು ಸೇರಿ ಈ ಯೋಜನೆ ಜಾರಿ ಆದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂದು ಈ ತೀರ್ಮಾನ ಕೈಗೊಂಡಿದೆ.

  • ಪ್ರಧಾನಿ ಮೋದಿಯನ್ನ ಜೀವಂತವಾಗಿ ಸುಡುವ ಕಾಲ ಬಂದಿದೆ: ಟಿ.ಬಿ.ಜಯಚಂದ್ರ

    ಪ್ರಧಾನಿ ಮೋದಿಯನ್ನ ಜೀವಂತವಾಗಿ ಸುಡುವ ಕಾಲ ಬಂದಿದೆ: ಟಿ.ಬಿ.ಜಯಚಂದ್ರ

    ತುಮಕೂರು: ರಾಜ್ಯ ರಾಜಕೀಯದಲ್ಲಿ ನಾಯಕರು ಸಭ್ಯತೆ ಮರೆತು ಹೇಳಿಕೆ ನೀಡುತ್ತಿದ್ದಾರೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಈ ಬಾರಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನೋಟು ನಿಷೇಧ ಖಂಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವರು, ನೋಟು ರದ್ದತಿಯಲ್ಲಿ ನನಗೆ 50 ದಿನ ಕಾಲವಕಾಶ ಕೊಡಿ ಇದರಲ್ಲಿ ಗೆದ್ದು ಬರುತ್ತೇನೆ. ಒಂದು ವೇಳೆ ಬರದಿದ್ದರೆ ನನ್ನನ್ನ ಜೀವಂತವಾಗಿ ಸುಡಿ ಅಂತಾ ಪ್ರಧಾನಿ ಮೋದಿಯವರೇ ಹೇಳಿದ್ದರು. ಅವರ ಮಾತಿನಂತೆ ಬಹುಶಃ ಜೀವಂತವಾಗಿ ಸುಡುವ ಕಾಲ ಇಂದು ಬಂದಿದೆ ಎಂದು ಕಿಡಿಕಾರಿದರು.

    ನರೇಂದ್ರ ಮೋದಿ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ರಾಜಿನಾಮೇ ನೀಡಿ ಮನೆಗೆ ಹೊಗಬೇಕು. ಕೇಂದ್ರ ಸರ್ಕಾರದ ನಡೆ ಕತ್ತೆಗೆ ಹೋಲಿಕೆಯಾಗುತ್ತದೆ. ಅದು ಎಂದಿಗೂ ಕೆಲಸ ಮಾಡಿಲ್ಲ. ಆ ಕೆಲಸ ಮಾಡಿದ್ದು ಗುಳ್ಳೆನರಿ. ಪ್ರತಿಭಟನೆಗೆ ಆ ಗುಳ್ಳೆನರಿ ತಂದಿದ್ದರೆ ಬಹಳ ಚೆನ್ನಾಗಿರುತ್ತಿತ್ತು ಎಂದ ಸಚಿವರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯನ್ನ ಗುಳ್ಳೆನರಿಗೆ ಹೋಲಿಸಿ ವ್ಯಂಗ್ಯವಾಡಿದರು.

    ಬಿಎಸ್‍ವೈ ಖಂಡನೆ:
    ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ವಿರುದ್ಧ ಕಿಡಿಕಾರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಸಹಿಸದೆ ಬುದ್ಧಿ ಸ್ಥಿಮಿತತೆ ಕಳೆದುಕೊಂಡವರಂತೆ ಮಾತನಾಡ್ತಿದ್ದಾರೆ. ಮಾಜಿ ಕಾನೂನು ಸಚಿವರಾಗಿದ್ದ ಜಯಚಂದ್ರ ಅವರ ಹೇಳಿಕೆ ಖಂಡನೀಯ. ಅವರ ಕೀಳುಮಟ್ಟದ, ಆಕ್ಷೇಪಾರ್ಹ ಹೇಳಿಕೆಗೆ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/