ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ (T.D.Rajegowda) ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್
ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡದ ದೂರು ನೀಡಲಾಗಿತ್ತು.
ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜೇಗೌಡರ ನಿವಾಸ ಬಸಾಪುರದ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.





