Tag: T.S Nagabharana

  • ‘ಕೆಂಪೇಗೌಡ’ ಪಾತ್ರದಲ್ಲಿ ಡಾಲಿ- ಟಿ.ಎಸ್‌ ನಾಗಾಭರಣ ಆ್ಯಕ್ಷನ್ ಕಟ್

    ‘ಕೆಂಪೇಗೌಡ’ ಪಾತ್ರದಲ್ಲಿ ಡಾಲಿ- ಟಿ.ಎಸ್‌ ನಾಗಾಭರಣ ಆ್ಯಕ್ಷನ್ ಕಟ್

    ಹುನಿರೀಕ್ಷಿತ ಐತಿಹಾಸಿಕ ಚಿತ್ರ ‘ನಾಡಪ್ರಭು ಕೆಂಪೇಗೌಡ’ (Nadaprabhu Kempegowda Film) ಇದೀಗ ತನ್ನ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡುತ್ತಿದೆ. ಡಾಲಿ ಧನಂಜಯ (Daali Dhananjay) ಈಗ ಕೆಂಪೇಗೌಡ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

    ಮೇರು ಯೋಧ ಮತ್ತು ಬೆಂಗಳೂರಿನ ಕಾರಣಿಕ, ಕೆಂಪೇಗೌಡರ ಜೀವನ ಚರಿತ್ರೆಯನ್ನು ಹೇಳುವ ಕಥೆ ನಾಡಪ್ರಭು ಕೆಂಪೇಗೌಡ (Nadaprabhu Kempegowda) ಆಗಿದ್ದು, ಇದನ್ನು ಖ್ಯಾತ ನಿರ್ದೇಶಕ ಡಾ.ಟಿ.ಎಸ್.ನಾಗಾಭರಣ (T.S Nagabharana) ನಿರ್ದೇಶಿಸಲಿದ್ದಾರೆ. ಈ ಚಿತ್ರದಲ್ಲಿ ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್‌ನಲ್ಲಿ, ಧನಂಜಯ ಅವರ ಐತಿಹಾಸಿಕ ಲುಕ್ ಎಲ್ಲರ ಗಮನ ಸೆಳೆದಿದೆ.

     

    View this post on Instagram

     

    A post shared by Daali Dhananjaya (@dhananjaya_ka)

    ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಈ ಚಿತ್ರವನ್ನು ಡಾ.ಎಂ.ಎನ್.ಶಿವರುದ್ರಪ್ಪ ಮತ್ತು ಶುಭಂ ಗುಂಡಲ ಈಶ್ವರ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

    ಬಂಗಾರದ ಜಿಂಕೆ, ಜನುಮದ ಜೋಡಿ, ಕಲ್ಲರಳಿ ಹೂವಾಗಿ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳನ್ನು ನೀಡಿದ ಮೇರು ನಿರ್ದೇಶಕ ಡಾ.ಟಿ.ಎಸ್ ನಾಗಾಭರಣ ಅವರ ಎರಡು ದಶಕಗಳ ಕನಸಿನ ಕೂಸಾದ ‘ನಾಡಪ್ರಭು ಕೆಂಪೇಗೌಡ’, ಕನ್ನಡ ಚಿತ್ರರಂಗದಲ್ಲಿ ಬಹಳಷ್ಟು ಸದ್ದು ಮಾಡಿರುವ ಜೀವನ ಚರಿತ್ರೆಯ ಕಥನವಾಗಿದೆ.

    ಹಲವಾರು ವರ್ಷಗಳ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳಲು ಹೊರಟಿರುವ ನಾಗಾಭರಣಗೆ ಈ ಚಿತ್ರವು ಕಮ್ ಬ್ಯಾಕ್ ಆಗಲಿದೆ.

  • ನಟ, ನಿರ್ದೇಶಕ ಟಿ.ಎಸ್ ನಾಗಾಭರಣಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್

    ನಟ, ನಿರ್ದೇಶಕ ಟಿ.ಎಸ್ ನಾಗಾಭರಣಗೆ ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್

    ನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ (Nagabharana) ಅವರು ತುಮಕೂರು(Tumkur) ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ (Doctorate) ಪ್ರದಾನ ಮಾಡಲಾಗುವುದು. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ

    ನಿರ್ದೇಶಕ ನಾಗಾಭರಣ ಹಾಗೂ ಸಮಾಜ ಸೇವಕ ಆರ್‌.ಎಲ್ ರಮೇಶ್‌ಬಾಬು (R.L Ramesh Babu) ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಇವರಿಬ್ಬರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಕನ್ನಡ ಸಿನಿಮಾ, ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿರುವ ಟಿ. ಎಸ್. ನಾಗಾಭರಣ ಅವರು 35ಕ್ಕಿಂತ ಹೆಚ್ಚು ಸಿನಿಮಾಗಳ ನಿರ್ದೇಶನ ಮಾಡಿದ್ದಾರೆ.

    ಸಂತ ಶಿಶುನಾಳ ಶರೀಫ, ಚಿನ್ನಾರಿ ಮುತ್ತ, ನಾಗಮಂಡಲ, ಸಿಂಗಾರೆವ್ವ, ಕಲ್ಲರಳಿ ಹೂವಾಗಿ, ಅಲ್ಲಮ ಮುಂತಾದ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ನಾಗಾಭರಣ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ.

    ಹಾಗೆಯೇ ಗೌರವ ಡಾಕ್ಟರೇಟ್‌ಗೆ ಭಾಜನರಾಗುತ್ತಿರುವ ತುಮಕೂರು ಮೂಲದ ರಮೇಶ್‌ಬಾಬು ಸಮಾಜ ಸೇವಕರು ಹಾಗೂ ಕೈಗಾರಿಕೋದ್ಯಮಿಗಳು. ತಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ಭಗವಾನ್ ರೈಸ್ ಮಿಲ್, ಭಗವತಿ ಭಗವಾನ್ ರೈಸ್ ಮಿಲ್ ಮತ್ತು ರಾಜಲಕ್ಷಿ ಆಗ್ರೊ ಫುಡ್ಸ್ ಹೆಮ್ಮೆಯ ಮಾಲೀಕರಾದರು. ಈ ಮೂಲಕ 150ಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.

    ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ ರಚನೆ ಜಾರಿಗೆ ತರೋದು ಸರ್ಕಾರಕ್ಕೆ ಬಿಟ್ಟಿದ್ದು: ಟಿ.ಎಸ್. ನಾಗಾಭರಣ

    ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ ರಚನೆ ಜಾರಿಗೆ ತರೋದು ಸರ್ಕಾರಕ್ಕೆ ಬಿಟ್ಟಿದ್ದು: ಟಿ.ಎಸ್. ನಾಗಾಭರಣ

    ಧಾರವಾಡ: ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಯಬೇಕು ಎಂಬ ದೃಷ್ಠಿಯಿಂದ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕವನ್ನು ರಚನೆ ಮಾಡಲಾಗಿದ್ದು, ಇದನ್ನು ಅನುಷ್ಠಾನಕ್ಕೆ ತಂದಿದ್ದೆ ಆದಲ್ಲಿ, ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಕನ್ನಡದ ಚಳವಳಿಯನ್ನು ಹುಟ್ಟು ಹಾಕಿದ ಧಾರವಾಡ ಜಿಲ್ಲೆಯಲ್ಲೂ ಕನ್ನಡದ ಅನುಷ್ಠಾನ ಅರ್ಧಕ್ಕರ್ಧ ಆಗಿದೆ. ಇದಕ್ಕೆ ಅಧಿಕಾರಿಗಳ ಇಚ್ಛಾಶಕ್ತಿ ಹಾಗೂ ತಾತ್ಸಾರ ಭಾವನೆ ಕಾರಣ ಇರಬಹುದು. ಧಾರವಾಡವನ್ನು ಮಾದರಿ ಮಾಡುವ ಆಸೆ ನನಗಿದೆ. ಇಲ್ಲಿ ಕನ್ನಡದ ಅನುಷ್ಠಾನ ಅಚ್ಚುಕಟ್ಟಾಗಿ ಆಗಬೇಕಿದೆ ಎಂದರು. ಇದನ್ನೂ ಓದಿ: ನಡು ರಸ್ತೆಯಲ್ಲೇ ಜಿ.ಪಂ. ಸದಸ್ಯನಿಗೆ ದೊಣ್ಣೆಯಿಂದ ಹಿಗ್ಗಾಮುಗ್ಗ ಥಳಿಸಿದ್ರು

    ಕನ್ನಡ ಭಾಷೆ ಮೇಲಾಗುತ್ತಿರುವ ಅನ್ಯಾಯವನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಕಾನೂನು ಆಯೋಗದ ಸಹಕಾರದೊಂದಿಗೆ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕವನ್ನು ರಚಿಸಿ, ಒಂದು ವಾರದ ಹಿಂದೆ ಕಾನೂನು ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕೊಟ್ಟಿದ್ದೇವೆ. ಸಿಎಂ ಅವರಿಗೂ ಈ ವಿಧೇಯಕವನ್ನು ನೀಡಲಿದ್ದೇವೆ. ಸರೋಜಿನಿ ಮಹಿಷಿ ವರದಿಯಲ್ಲಿ ಅಂಶಗಳನ್ನೇ ಈ ವಿಧೇಯಕದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.

    ಎಲ್ಲಾ ವರದಿಗಳಿಗೂ ಕಾನೂನಿನ ಬಲ ಇಲ್ಲ. ವರದಿಗಳಿಗೆ ಬಲ ಬರಬೇಕಾದರೆ ಅವುಗಳು ಕಲಾಪದಲ್ಲಿ ಪಾಸಾಗಬೇಕು. ಧಾರವಾಡದಲ್ಲಿ ಮಾತ್ರ ಕನ್ನಡ ಅರ್ಧಕ್ಕರ್ಧ ಅನುಷ್ಠಾನಗೊಂಡಿಲ್ಲ. ಬೆಂಗಳೂರಿನಲ್ಲೂ ಭಾಷೆಯ ಸಮಸ್ಯೆ ಇದೆ. ಬೆಂಗಳೂರಿನಲ್ಲೂ ಭಾಷೆ ಅರ್ಧಕ್ಕರ್ಧ ಅನುಷ್ಠಾನಗೊಂಡಿದೆ. ಕನ್ನಡದ ಜಾಲತಾಣಗಳ ಮುಖಪುಟ ಮಾತ್ರ ಕನ್ನಡದಲ್ಲಿವೆ. ಕೇಂದ್ರೀಯ ವಿದ್ಯಾಲಯದ ಸಿಬಿಎಸ್‍ಸಿ ಪಠ್ಯಕ್ರಮದಲ್ಲಿ ಕನ್ನಡ ಇಲ್ಲ. ಅವು ತಮ್ಮದೇ ಆದಂತ ತೀರ್ಮಾನಗಳನ್ನು ತೆಗೆದುಕೊಂಡಿವೆ. ಐಚ್ಛಿಕ ವಿಷಯವಾಗಿ ಕನ್ನಡವನ್ನು ತೆಗೆದುಕೊಂಡಿವೆ. ಈ ನೆಲದ ಕಾನೂನನ್ನು ಯಾರೂ ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.

    Live Tv
    [brid partner=56869869 player=32851 video=960834 autoplay=true]

  • ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ‘ಕನ್ನಡ ನುಡಿ ಕಲಿಕೆ ಪಾಠಗಳ’ ಅಭಿಯಾನ ಆರಂಭ

    ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ‘ಕನ್ನಡ ನುಡಿ ಕಲಿಕೆ ಪಾಠಗಳ’ ಅಭಿಯಾನ ಆರಂಭ

    ಬೆಂಗಳೂರು: ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ‘ಕನ್ನಡ ನುಡಿ ಕಲಿಕೆ ಪಾಠಗಳ’ ವಿಶೇಷ ಅಭಿಯಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಅಭಿಪ್ರಾಯಪಟ್ಟು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರೂಪಿಸಲಾದ ‘ಕನ್ನಡ ನುಡಿ ಕಲಿಕೆ ಪಾಠಗಳ’ ಲಿಂಕ್ ಅನ್ನು ಇಂದು ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕನ್ನಡ ಭಾಷೆಯನ್ನು ಬೆಳೆಸುವ ಉದ್ದೇಶದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಅಭಿಯಾನಗಳನ್ನು ರೂಪಿಸಿ ನಡೆಸಿದೆ. ಕನ್ನಡದ ಮೇಲೆ ಆಸಕ್ತಿ ಇರುವ ಅನ್ಯಭಾಷಿಕರಿಗೆ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡೇತರರಿಗೆ ಕನ್ನಡ ಕಲಿಸುವ ಉದ್ದೇಶದಿಂದ ಕನ್ನಡ ನುಡಿ ಕಲಿಕೆ ಪಾಠಗಳು ವಿಶೇಷ ಅಭಿಯಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ. ಕನ್ನಡ ನುಡಿ ಕಲಿಕೆ ಪಾಠಗಳ ಮೂಲಕ ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡವನ್ನು ಕಲಿತು ಬಳಸುವಂತಾಗಲಿ. ಆ ಮೂಲಕ ಕನ್ನಡದ ಕಂಪು ಜಗತ್ತಿನಾದ್ಯಂತ ಪಸರಿಸುವಂತಾಗಲಿ ಎಂದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ಕಾರ್ಯ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ನಮ್ಮ ಮನೆಯಲ್ಲಿ ಅಲ್ಲಾ,ಏಸು ಫೋಟೋ ಇಟ್ಟಿಲ್ಲ- ಸತೀಶ್ ಸೈಲ್

    ಕನ್ನಡ ನುಡಿ ಕಲಿಕೆ ಪಾಠಗಳು ಸದ್ಯದಲ್ಲಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಮಾಡಲಾಗುವುದು. ಮೊದಲಿಗೆ ಪಾಠ 1 ಮತ್ತು ಪಾಠ 2 ಅನ್ನು ಅಪ್ ಲೋಡ್ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಉಳಿದ ಪಾಠಗಳನ್ನು ಅಪ್ ಲೋಡ್ ಮಾಡಲಾಗುವುದು. ಇದನ್ನೂ ಓದಿ: ಮಗಳು, ಇಬ್ಬರು ಪತ್ನಿಯರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಕೆಜಿಎಫ್ ಬಾಬು

    ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಹಾಗೂ ಕಾರ್ಯದರ್ಶಿಯವರಾದ ಡಾ.ಸಂತೋಷ ಹಾನಗಲ್ಲ ಉಪಸ್ಥಿತರಿದ್ದರು.

  • ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

    ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

    ಬೆಂಗಳೂರು: ಕೆಂಗೇರಿ ಮಾರ್ಗದ ಮೆಟ್ರೋ ವಿಸ್ತರಿತ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ಭಾರೀ ವಿರೋಧಕ್ಕೆ ಕಾರಣವಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಸರ್ಕಾರಕ್ಕೆ ಪತ್ರ ಬರೆದು ನಿಯಮ ಉಲ್ಲಂಘಿಸಿ ಕನ್ನಡ ಕಡೆಗಣನೆಗೆ ಕಾರಣರಾದ ಅಧಿಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ಮೆಟ್ರೋ ವತಿಯಿಂದ ಈ ಬಗ್ಗೆ ಕ್ಷಮೆ ಕೇಳಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ ಎಲ್ಲಾ ಫಲಕಗಳು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿಯೇ ಇದ್ದು, ಮುಖ್ಯ ವೇದಿಕೆಯ ಫಲಕವು ಮಾತ್ರ ಆಂಗ್ಲ ಭಾಷೆಯಲ್ಲಿ ಇದ್ದುದರಿಂದ ಹಲವಾರು ಆಕ್ಷೇಪಣೆಗಳು ಮಾಧ್ಯಮ ಮತ್ತು ಇತರೆ ಸಾಮಾಜಿಕ ಜಾಲಗಳಲ್ಲಿ ಬಂದಿರುತ್ತವೆ. ಈ ತಪ್ಪು ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಇದರ ಸಂಪೂರ್ಣ ಹೊಣೆ ನನ್ನದೆ ಎಂದು, ಆಗಿರುವ ತಪ್ಪಿಗೆ ವಿಷಾದಿಸುತ್ತಾ, ಇನ್ನು ಮುಂದೆ ಈ ರೀತಿಯ ತಪ್ಪುಗಳು ಆಗದಂತೆ ಕ್ರಮ ವಹಿಸುತ್ತೇನೆ ಮತ್ತು ಈ ತಪ್ಪನ್ನು ಮನ್ನಿಸಬೇಕೆಂದು ಈ ಮೂಲಕ ಕೋರಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

    ಟಿ.ಎಸ್ ನಾಗಾಭರಣ ಅವರು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ಪತ್ರ ಬರೆದು, ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಬರುವ ಎಲ್ಲಾ ಸರ್ಕಾರಿ, ಸರ್ಕಾರೇತರ, ಖಾಸಗಿ ಸಂಸ್ಥೆಗಳು ತಮ್ಮ ಆಡಳಿತದಲ್ಲಿ ಸಂಪೂರ್ಣ ಕನ್ನಡ ಅನುಷ್ಠಾನ ಮಾಡಬೇಕೆಂದು ಈಗಾಗಲೇ ಸಾಕಷ್ಟು ಆಜ್ಞೆ, ಆದೇಶ, ಸೂತ್ತೋಲೆಗಳು ಬಂದಿದ್ದರೂ ಪದೇ ಪದೇ ಕನ್ನಡ ಭಾಷೆಯ ಕಡೆಗಣನೆ ಅಖಂಡ ಕನ್ನಡಿಗರ ಮನಸ್ಸಿಗೆ ನೋವುಂಟು ಮಾಡುತ್ತಿದೆ. ಈಗ ನಮ್ಮ ಹೆಮ್ಮೆಯ ಸಾರಿಗೆ ಸಂಸ್ಥೆಗಳಲ್ಲೊಂದಾದ ಮೆಟ್ರೋ ಸಂಸ್ಥೆ ತಮ್ಮ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ಮಾಡಿದೆ. ಇದನ್ನೂ ಓದಿ: ಸೆ. 6ರಿಂದ 6 ರಿಂದ 8ನೇ ತರಗತಿ ಶಾಲೆ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ

    ದಿನಾಂಕ 29-08-2021ರಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದ ವೇದಿಕೆಯ ಪರದೆ (ಬ್ಯಾನರ್)ಯ ಮೇಲೆ ಆಡಳಿತ ಭಾಷೆಯಾದ ಕನ್ನಡವನ್ನು ಕಡೆಗಣಿಸಿ ಕೇವಲ ಆಂಗ್ಲ ಭಾಷೆಯನ್ನು ಹಾಕಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಕಷ್ಟು ಮೌಖಿಕ ಹಾಗೂ ಲಿಖಿತ ದೂರುಗಳು ಸಲ್ಲಿಕೆಯಾಗಿವೆ. ಅಲ್ಲದೇ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಗುರಿಯಾಗಿಸಿಕೊಂಡು ಟೀಕೆ ಟಿಪ್ಪಣಿಗಳನ್ನು ಮಾಡಿರುವುದು ತಾವು ಕೂಡ ಗಮನಿಸಿರಲು ಸಾಧ್ಯವಿದೆ. ಆಡಳಿತದಲ್ಲಿ ಕನ್ನಡವನ್ನು ಬಳಸುವಂತೆ ಈ ಹಿಂದೆ ನಡೆದ 2-3 ಪರಿಶೀಲನಾ ಸಭೆಗಳಲ್ಲಿ ತಮಗೆ ಸೂಚಿಸಲಾಗಿತ್ತು. ಮೇಲಾಗಿ ದಿನಾಂಕ 23, 24 ಮತ್ತು 25ರಂದು ಪ್ರಾಧಿಕಾರದಿಂದ ನಡೆದ ಸಾರಿಗೆ ವಲಯದಲ್ಲಿ ಕನ್ನಡ ಅನುಷ್ಠಾನದ ಅಭಿಯಾನದ ನಿಮಿತ್ತ ತಮ್ಮನ್ನು ಖುದ್ದು ಭೇಟಿ ಮಾಡಿ ಆಡಳಿತದಲ್ಲಿ ಶೇ.100ಕ್ಕೆ 100ರಷ್ಟು ಕನ್ನಡವನ್ನು ಬಳಸುವಂತೆ ಕೋರಲಾಗಿತ್ತು. ಆದಾಗ್ಯೂ ಕೂಡ ನಿಗಮದ ವರ್ತನೆ ಅಖಂಡ ಕನ್ನಡಿಗರ ಮನಸ್ಸಿಗೆ ನೋವುಂಟುಮಾಡಿದೆ. ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವುದೇ ನಮ್ಮ ಗುರಿ: ಅರುಣ್ ಸಿಂಗ್

    ಇದು ಮೇಲ್ಕಾಣಿಸಿದ ರಾಜ್ಯ ಸರ್ಕಾರದ ಆಡಳಿತ ಕನ್ನಡಪರ ಆಜ್ಞೆ-ಆದೇಶಗಳ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿ/ನೌಕರರ ಮೇಲೆ ಸುತ್ತೋಲೆ ಸಂಖ್ಯೆ:ಸಂಕಇ 39ಕೆಒಎಲ್ 2002, ದಿನಾಂಕ:13-06-2002ರನ್ವಯ ಶಿಸ್ತುಕ್ರಮವನ್ನು ಜಾರಿಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾನ್ಯ ಅಧ್ಯಕ್ಷರಾದ ಟಿ.ಎಸ್. ನಾಗಾಭರಣರು ಮೆಟ್ರೋ ರೈಲ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಶಿಸ್ತುಕ್ರಮಕ್ಕೆ ಪತ್ರ ಬರೆಯುವ ಮೂಲಕ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಪತ್ರ ಬರೆದಿದ್ದಾರೆ.

  • ಅರಣ್ಯ ವಸತಿ, ವಿಹಾರಧಾಮಗಳಲ್ಲಿ ಕನ್ನಡಿಗರನ್ನೇ ನೇಮಿಸಬೇಕು: ಟಿ.ಎಸ್ ನಾಗಾಭರಣ

    ಅರಣ್ಯ ವಸತಿ, ವಿಹಾರಧಾಮಗಳಲ್ಲಿ ಕನ್ನಡಿಗರನ್ನೇ ನೇಮಿಸಬೇಕು: ಟಿ.ಎಸ್ ನಾಗಾಭರಣ

    ಬೆಂಗಳೂರು: ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್)ಯು ಕರ್ನಾಟಕದ ವಿವಿಧ ಭಾಗಗಳಲ್ಲಿ ಹೊರ ರಾಜ್ಯದವರನ್ನು ನೇಮಿಸಿಕೊಂಡಿದ್ದು ಕೂಡಲೇ ಇವರನ್ನು ಬಿಡುಗಡೆಗೊಳಿಸಿ ಡಾ. ಸರೋಜಿನಿ ಮಹಿಷಿ ವರದಿಯನ್ವಯ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಟಿ.ಎಸ್ ನಾಗಾಭರಣ ಅವರು ಹೇಳಿದರು

    ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಂಗಳೂರಿನ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯಲ್ಲಿ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಬಿನಿ ಮತ್ತು ಬಂಡಿಪುರಗಳಲ್ಲಿರುವ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗೆ ಹೊರ ರಾಜ್ಯದವರನ್ನು ನೇಮಕ ಮಾಡಿರುವುದು ರಾಜ್ಯ ಸರ್ಕಾರದ ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ. ಹಾಗಾಗಿ ಕೂಡಲೇ ಅವರನ್ನು ತೆರವುಗೊಳಿಸಿ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಇಲ್ಲದಿದ್ದರೆ ಕ್ರಮವಹಿಸಲಾಗುವುದು ಎಂದು ಎಚ್ಚರಿಸಿದರು.

    ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗೆ ಸಂಬಂಧಿಸಿದ ವೆಬ್‍ಸೈಟ್‍ನಲ್ಲಿ ಆಯ್ಕೆ ಭಾಷೆಯಾಗಿ ಕನ್ನಡವನ್ನು ನೀಡಲಾಗಿದ್ದು, ಅದನ್ನು ಪ್ರಧಾನವಾಗಿ ಬಳಸುವಂತೆ ಸೂಚಿಸಿದರು. ಅಲ್ಲದೆ ವಿದೇಶಿಗರು ಭೇಟಿ ನೀಡುವುದರಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳಾದ ಜಾನಪರ, ಯಕ್ಷಗಾನ, ಕರ್ನಾಟಕದ ಆಹಾರ ಪದ್ಧತಿಗಳು ಸ್ಥಳೀಯ ಆಟಗಳನ್ನು ವಿದೇಶಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.

    ಇಂದಿನ ನಡೆದ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ ಮುರಳಿಧರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ. ವೀರಶೆಟ್ಟಿ, ಪ್ರಾಧಿಕಾರದ ಸದಸ್ಯರಾದ ಅಬ್ದುಲ್ ರೆಹಮಾನ್ ಪಾಷಾ, ಕೈಗಾರಿಕಾ ಸಂಘಗಳ ಒಕ್ಕೂಟದ ಕಾರ್ಯಾಧ್ಯಕ್ಷರಾದ ಸಿದ್ದಯ್ಯ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಜಯ ಶರ್ಮ, ಕಾರ್ಯಕಾರಿ ನಿರ್ದೇಶಕರಾದ ಎ.ಕೆ ಸಿಂಗ್, ಸಹಾಯಕ ಆಡಳಿತಾಧಿಕಾರಿ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.