Tag: T20 World Cup

  • ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    – ವಿಶ್ವವಿಜೇತರನ್ನು ನೋಡಲು ಇರುವೆಗಳಂತೆ ಮುತ್ತಿಕೊಂಡ ಫ್ಯಾನ್ಸ್‌
    – ಸಮುದ್ರವನ್ನೂ ಮೀರಿಸಿದ ಅಭಿಮಾನಿಗಳ ಸಾಗರ!

    ಮುಂಬೈ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಗೆದ್ದು ಐಸಿಸಿ ಪ್ರಶಸ್ತಿಯ ಬರ ನೀಗಿಸಿದ ʻವಿಶ್ವʼ ವಿಜೇತ ಟೀಂ ಇಂಡಿಯಾದ (Team India) ವಿಜಯಯಾತ್ರೆ ಶುರುವಾಗಿದೆ. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಅದ್ಧೂರಿ ಯಾತ್ರೆ ಆರಂಭವಾಗಿದೆ. ಇಲ್ಲಿಂದ ಸುಮಾರು 2 ಕಿಮೀ ವಿಜಯೋತ್ಸವ ಯಾತ್ರೆ ನಡೆಯಲಿದ್ದು, ನಂತರ ವಾಂಖೆಡೆ ಮೈದಾನ ತಲುಪಲಿದೆ.

    ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ, ಜಸ್ಪ್ರೀತ್‌ ಬುಮ್ರಾ ಸೇರಿದಂತೆ ವಿಶ್ವಕಪ್‌ ವಿಜೇತ ತಂಡ ತೆರೆದ ಬಸ್‌ನಲ್ಲಿ ಹೊರಟಿದೆ. ಪಕ್ಕದಲ್ಲೇ ಇದ್ದ ಸಮುದ್ರವನ್ನೂ ನಾಚಿಸುವಂತೆ ನೆರೆದಿದ್ದ ಅಭಿಮಾನಿಗಳ ಸಾಗರ ಕಂಡು ಆಟಗಾರರು ಹರ್ಷಗೊಂಡಿದ್ದಾರೆ. ಮೈಮೇಲೆ ರಾಷ್ಟ್ರಧ್ವಜ ಹೊದ್ದು, ಕೈಯಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ಅಭಿಮಾನಿಗಳೊಂದಿಗೆ ಸಂಭ್ರಮಿಸುತ್ತಾ ಕೈಬೀಸಿ ಮುಂದೆ ಸಾಗುತ್ತಿದ್ದಾರೆ.

    ವಿಜಯಯಾತ್ರೆಯಲ್ಲಿ ʻರೋಹಿತ್‌ ಭಾಯ್‌, ಕೊಹ್ಲಿ ಭಾಯ್‌ʼ ಘೋಷಣೆಗಳು ಮೊಳಗಿವೆ. ಬೆಳಗ್ಗೆಯಿಂದಲೇ ಕಾದು ನಿಂತಿದ್ದ ಅಭಿಮಾನಿಗಳು ಮಳೆಯಲ್ಲೂ ಉತ್ಸಾಹ ಕಳೆದಕೊಳ್ಳದೇ ವಿಶ್ವವೀರರನ್ನ ಸ್ವಾಗತಿಸಿದ್ದಾರೆ. ಸುಮಾರು 2 ಕಿಮೀ ವಿಜಯಯಾತ್ರೆ ತೆರಳಲಿದ್ದು, ನಂತರ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರು ಹಾಗೂ ಬಿಸಿಸಿಐ ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ಆಟಗಾರರಿಗೆ ಪ್ರದಾನ ಮಾಡಲಾಗುತ್ತದೆ.

    ವೀ

    ಅವಮಾನವಾದ ಜಾಗದಲ್ಲೇ ಸನ್ಮಾನ:
    ಮಾಜಿ ನಾಯಕ ಎಂ.ಎಸ್‌ ಧೋನಿ ಅವರ ನಾಯಕತ್ವದಲ್ಲಿ ಭಾರತ ತಂಡ ಚೊಚ್ಚಲ ಟಿ20 ವಿಶ್ವಕಪ್ ಗೆಲುವನ್ನು ಕ್ರಿಕೆಟ್‌ ಜಗತ್ತು ಮರೆಯುವಂತಿಲ್ಲ. ಹೌದು… 2007ರಲ್ಲಿ ಟೀಂ ಇಂಡಿಯಾಕ್ಕೆ ಅತ್ಯಂತ ಪ್ರತಿಷ್ಠೆಯ ಟೂರ್ನಿ ಅದಾಗಿತ್ತು. 2007ರ ಅದೇ ವರ್ಷ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ (2007 ODI World Cup) ಟೂರ್ನಿಯೂ ನಡೆದಿತ್ತು. ಆ ಆವೃತ್ತಿಯಲ್ಲಿ ಟೀಂ ಇಂಡಿಯಾ (Team India) ಲೀಗ್‌ ಹಂತದಲ್ಲೇ ಹೀನಾಯ ಸೋಲು ಕಂಡು ಹೊರಬಿದ್ದಿತ್ತು. ಇದಾದ ಬಳಿಕ ದೇಶಾದ್ಯಂತ ಪ್ರತಿಭಟನೆ ನಡೆದು, ಪ್ರಮುಖ ಆಟಗಾರರ ಮೆನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದಾದ ಕೆಲವೇ ದಿನಗಳಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯೂ ನಿಗದಿಯಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿ ಆಡಿದ್ದ ಖ್ಯಾತನಾಮರು ಟಿ20 ಆಡಲು ಹಿಂದೇಟು ಹಾಕಿದ್ದ ಕಾರಣ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಎಂ.ಎಸ್ ಧೋನಿ ಅವರಿಗೆ ನಾಯಕತ್ವದ ಹೊಣೆ ನೀಡಲಾಯಿತು. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನದೊಂದಿಗೆ ಟೀಂ ಇಂಡಿಯಾ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಎತ್ತಿ ಹಿಡಿಯಿತು. ಅಂದು ಸಹ ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳು ಟೀಂ ಇಂಡಿಯಾವನ್ನು ತವರಿಗೆ ಅದ್ಧೂರಿಯಾಗಿ ಸ್ವಾಗತಿಸಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕಲ್ಲುತೂರಾಟ ನಡೆಸಿದ್ದ ಅಭಿಮಾನಿಗಳು ಧೋನಿ ಬಳಗ ಕಪ್‌ ಎತ್ತಿ ಹಿಡಿಯುತ್ತಿದ್ದಂತೆ ಹೂವಿನ ಮಳೆ ಸುರಿಸಿದ್ದರು. ಇದೀಗ ರೋಹಿತ್‌ ಬಳಗವನ್ನು ಸ್ವಾಗತಿಸಿರುವುದು ಅದೇ ದೃಶ್ಯವನ್ನು ನೆನಪಿಸಿದೆ.

    ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್‌:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು.

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ಟೀಂ ಇಂಡಿಯಾ ಆಟಗಾರರು ಆಗಮಿಸಿದ ವಿಮಾನಕ್ಕೆ ವಾಟರ್ ಸೆಲ್ಯೂಟ್

    ಟೀಂ ಇಂಡಿಯಾ ಆಟಗಾರರು ಆಗಮಿಸಿದ ವಿಮಾನಕ್ಕೆ ವಾಟರ್ ಸೆಲ್ಯೂಟ್

    ಮುಂಬೈ: ಟಿ20 ವಿಶ್ವಕಪ್ ( T20 World Cup) ವಿಜೇತ ಟೀಂ ಇಂಡಿಯಾ (Team India) ಆಟಗಾರರು ಮುಂಬೈಗೆ ಆಗಮಿಸಿದ ವಿಮಾನಕ್ಕೆ ವಾಟರ್ ಸೆಲ್ಯೂಟ್ ( Water Salute) ಮಾಡಲಾಯಿತು.

    ನವದೆಹಲಿಯಿಂದ ಮುಂಬೈಗೆ ಆಟಗಾರರನ್ನು ಕರೆತಂದ ವಿಶೇಷ ವಿಮಾನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮಾಡಲಾಯಿತು. ವಿಶ್ವಕಪ್ ಗೆದ್ದ ಟೀಂ ಇಂಡಿಯಾಕ್ಕೆ ಗೌರವ ಸೂಚಕವಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ಈ ವಿಶೇಷ ಗೌರವವನ್ನು ಏರ್ಪಡಿಸಿದ್ದರು. ಇದನ್ನೂ ಓದಿ: ವಿಶ್ವಕಪ್ ಸಂಭ್ರಮ – ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

    ಇದಕ್ಕೂ ಮುನ್ನ ದೆಹಲಿಯಿಂದ ಮುಂಬೈಗೆ ಹೊರಡುವ ಮುನ್ನ ಟೀಂ ಇಂಡಿಯಾ ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಈ ವೇಳೆ ಮೋದಿ ಟೀಂ ಇಂಡಿಯಾ ನಾಯಕರಿಗೆ ಅಭಿನಂದಿಸಿ, ಬಳಿಕ ಆಟಗಾರರ ಜೊತೆ ಮಾತುಕತೆ ನಡೆಸಿದ್ದರು.

    ಆಟಗಾರರೊಂದಿಗೆ ಮೋದಿ ಮಾತುಕತೆ ನಡೆಸುತ್ತಿರುವ ವೀಡಿಯೋವನ್ನು ಪ್ರಧಾನಿ ಕಾರ್ಯಾಲಯ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಇದರಲ್ಲಿ ಆಟಗಾರರು ಮೋದಿ ಸುತ್ತ ಕುಳಿತು ಚರ್ಚೆಯಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿದೆ.

    ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ರೋಚಕ 7 ರನ್‍ಗಳ ಜಯ ಸಾಧಿಸಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್‍ನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

  • ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ಮುಂಬೈ: ಟಿ20 ವಿಶ್ವಕಪ್ (T20 World Cup) ವಿಜೇತ ಟೀಂ ಇಂಡಿಯಾದ (Team India) ವಿಕ್ಟರಿ ಪರೇಡ್‌ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು (Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಈ ನಡುವೆ ಕ್ರಿಕೆಟ್‌ ಆಟಗಾರರನ್ನು ಸ್ವಾಗತಿಸಲು ನಿಂತಿದ್ದ ಕೆಲ ಅಭಿಮಾನಿಗಳು ʻಮೋದಿ ಮೋದಿʼ ಘೋಷಣೆ ಕೂಗಿದ್ದಾರೆ.

    ಮುಂಬೈನ ನಾರೀಮನ್ ಪಾಯಿಂಟ್‌ನಿಂದ ಪರೇಡ್‌ ಆರಂಭವಾಗಲಿದ್ದು, ಸುಮಾರು 2 ಕಿಮೀ ವಿಜಯಯಾತ್ರೆ ನಡೆಯಲಿದೆ. ಬಳಿಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನೂ ಪ್ರದಾನ ಮಾಡಲಾಗುತ್ತದೆ. ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್‌ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಮೆರವಣಿಗೆಯಲ್ಲಿ ಕಾದು ನಿಂತಿರುವ ಕೆಲ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    ತೆರೆದ ಬಸ್​ನಲ್ಲಿ ರೋಡ್ ಶೋ:
    ಈಗಾಗಲೇ ಟೀಂ ಇಂಡಿಯಾದ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈ ತಲುಪಿಸಿದ್ದಾರೆ. ಏರ್‌ ಇಂಡಿಯಾದ ವಿಮಾನ ಮುಂಬೈ ತಲುಪುತ್ತಿದ್ದಂತೆ ವಿಶೇಷ ರೀತಿಯಲ್ಲಿ ವಾಟರ್‌ ಜೆಟ್‌ಗಳ ಮೂಲಕ ಸ್ವಾಗತ ಕೋರಲಾಗಿದೆ. ವಿಜಯಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದು, ‘ಮುಂಬೈನ ನಾರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಇದನ್ನೂ ಓದಿ: ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

  • T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    ಮುಂಬೈ: 2024ರ ಟಿ20 ವಿಶ್ವಕಪ್‌ ಗೆಲುವಿನ ನೆನಪಿನಾರ್ಥವಾಗಿ ಬಿಸಿಸಿಐನಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ʻನಮೋ ನಂ.1ʼ ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

    ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಚಾಂಪಿಯನ್‌ ಟೀಂ ಇಂಡಿಯಾ (Team India) ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಾರತಕ್ಕೆ ಆಗಮಿಸಿತು. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಯಿತು. ಜೂ. 1ರಂದು ಬಾರ್ಬಡೋಸ್‌ಗೆ ಭೀಕರ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಭಾರತಕ್ಕೆ ಬರುವುದು ತಡವಾಯಿತು. ಬುಧವಾರ ರಾತ್ರಿ ಏರ್‌ ಇಂಡಿಯಾ ವಿಶೇಷ ವಿಮಾನದಿಂದ ಹೊರಟ ಟೀಂ ಇಂಡಿಯಾ ಗುರುವಾರ ಬೆಳಗ್ಗೆ 6:00 ಗಂಟೆ ಹೊತ್ತಿಗೆ ಭಾರತ ತಲುಪಿತು.

    ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾ ಆಟಗಾರರು ಮುಂಬೈಗೆ ತೆರಳುವ ಮುನ್ನ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜೊತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ವಿಶ್ವಕಪ್‌ ಟ್ರೋಫಿ ಹಿಡಿದು ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

    ವಿಜಯಯಾತ್ರೆಗೆ ರೋಹಿತ್‌ ಆಹ್ವಾನ:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

  • ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ಮುಂಬೈ: ಟಿ20 ವಿಶ್ವಕಪ್ (T20 World Cup) ವಿಜೇತ ಟೀಂ ಇಂಡಿಯಾದ (Team India) ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು (Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಆದ್ರೆ ಅಭಿಮಾನಿಗಳ ಸಂಭ್ರಮಕ್ಕೆ ವರುಣ ತಡೆಯೊಡ್ಡಿದೆ.

    ಸದ್ಯ ಮುಂಬೈನಲ್ಲಿ ವರುಣ ಸಿಂಚನವಾಗುತ್ತಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಭಾರೀ ಮಳೆಯಾಗುತ್ತಿದೆ. ಆದ್ರೆ ಅಭಿಮಾನಿಗಳು ಮಳೆಗೂ ಜಗ್ಗದೇ ಮೈದಾನದಲ್ಲೇ ನಿಂತಿದ್ದಾರೆ. ಕೆಲವರಂತೂ ಮಳೆಯಲ್ಲೇ ನೆನೆದುಕೊಂಡು ಟೀಂ ಇಂಡಿಯಾ ಪರ ಘೋಷಣೆ ಕೂಗುತ್ತಿದ್ದಾರೆ. ಆಟಗಾರರು ಈಗಾಗಲೇ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ.

    ವಿಜಯಯಾತ್ರೆಗೆ ಹಿಟ್‌ಮ್ಯಾನ್‌ ಆಹ್ವಾನ:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

    ತೆರೆದ ಬಸ್​ನಲ್ಲಿ ರೋಡ್ ಶೋ:
    ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನಾರಿಮನ್‌ ಪಾಯಿಂಟ್‌ನಿಂದ ಸರಿಯಾಗಿ 5 ಗಂಟೆಗೆ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತ ಕೂಡ ಪ್ರದಾನ ಮಾಡಲಾಗುತ್ತದೆ.

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ವಿಶ್ವಕಪ್ ಸಂಭ್ರಮ – ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

    ವಿಶ್ವಕಪ್ ಸಂಭ್ರಮ – ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

    ನವದೆಹಲಿ: ಟಿ20 ವಿಶ್ವಕಪ್ (T20 World Cup) ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ (Team India) ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ. ಬಳಿಕ ಆಟಗಾರರ ಜೊತೆ ಮಾತುಕತೆ ನಡೆಸಿದ್ದಾರೆ.

    ಟಿ20 ವಿಶ್ವಕಪ್ ಗೆದ್ದ ಭಾರತ ತಂಡ ಬಾರ್ಬಡೋಸ್‍ನಿಂದ ದೆಹಲಿಗೆ ಇಂದು ಬೆಳಗ್ಗೆ ಆಗಮಿಸಿತು. ಐಟಿಸಿ ಮೌರ್ಯ ಹೋಟೆಲಿನಲ್ಲಿ ವಿಶ್ರಾಂತಿ ಪಡೆದ ಬಳಿಕ ಬೆಳಗ್ಗೆ ಪ್ರಧಾನಿ ಅಧಿಕೃತ ನಿವಾಸಕ್ಕೆ ಟೀಂ ಇಂಡಿಯಾ ತೆರಳಿತು. ನಿವಾಸಕ್ಕೆ ಆಗಮಿಸಿದ ತಂಡದ ಸದಸ್ಯರನ್ನು ಮೋದಿ ಅಭಿನಂದಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ಡೆಂಗ್ಯೂಗೆ ಆರೋಗ್ಯಾಧಿಕಾರಿ ನಿಧನ

    ಈ ವೇಳೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಆಟಗಾರರ ಬಳಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮೋದಿ ಅವರಿಗೆ ಕಪ್‌ ನೀಡಲಾಯಿತು. ಆದರೆ ಮೋದಿ ಅವರು ಕಪ್‌ ಹಿಡಿದುಕೊಳ್ಳದೇ ರೋಹಿತ್‌ ಶರ್ಮಾ ಮತ್ತು ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಕೈಯನ್ನು ಹಿಡಿದುಕೊಂಡು ನಿಂತುಕೊಂಡಿದ್ದು ವಿಶೇಷವಾಗಿತ್ತು.

    ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ 7 ರನ್ ಗಳ ಜಯ ಸಾಧಿಸಿತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್‍ನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ಶೀಘ್ರದಲ್ಲೇ ‘ಬಿಗ್ ಬಾಸ್’ ಶೋ ಶುರು- ಸ್ಪರ್ಧಿಗಳ ಲಿಸ್ಟ್‌ ಔಟ್‌

  • ಅಂಗಳದಲ್ಲಿ ನಾನು ಮಲಗಿದ್ದು ಯಾಕೆ – ಕೊನೆಗೂ ರಿವೀಲ್ ಮಾಡಿದ ರೋಹಿತ್ ಶರ್ಮಾ

    ಅಂಗಳದಲ್ಲಿ ನಾನು ಮಲಗಿದ್ದು ಯಾಕೆ – ಕೊನೆಗೂ ರಿವೀಲ್ ಮಾಡಿದ ರೋಹಿತ್ ಶರ್ಮಾ

    ಬ್ರಿಡ್ಜ್‌ಟೌನ್‌: ಟೀಂ ಇಂಡಿಯಾ (Team India) ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆದ್ದು ವಿಶ್ವಕಪ್ ಟಿ20 ವಿಶ್ವಕಪ್ (T20 World Cup) ಮುಡಿಗೇರಿಸಿಕೊಂಡಿದೆ. ಈ ವೇಳೆ ಟೀಂ ಇಂಡಿಯಾ ಆಟಗಾರರರು ವಿಭಿನ್ನವಾಗಿ ಸಂಭ್ರಮಿಸಿದ್ದರು. ಈ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಫೀಲ್ಡ್‌ನಲ್ಲಿ ನಿರಾಳವಾಗಿ ಕಣ್ಮುಚ್ಚಿ ದೀರ್ಘವಾಗಿ ಉಸಿರೆಳೆದಿದ್ದರು. ಇದೀಗ ನಾನ್ಯಾಕೆ ಹಾಗೆ ಮಾಡಿದ್ದೆ ಎಂಬುದನ್ನು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ನನಗೆ ವಿಶ್ವಕಪ್ ಗೆಲುವಿನ ಸಂಭ್ರಮವನ್ನು ವ್ಯಕ್ತಪಡಿಸಲು ಸೂಕ್ತ ಪದಗಳು ಸಿಗುತ್ತಿಲ್ಲ. ಆದರೂ ನಾನದನ್ನೂ ವ್ಯಕ್ತಪಡಿಸಲು ಬಯಸುತ್ತೇನೆ. ಕೋಟ್ಯಂತರ ಟೀಂ ಇಂಡಿಯಾ ಆಭಿಮಾನಿಗಳ ಕನಸು ನನಸಾದ ಆ ಸಂಭ್ರಮದಲ್ಲಿ ಹಾಗೆ ತೇಲಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಎರಡು ಮಹತ್ವದ ಜವಾಬ್ದಾರಿ – ಆರ್‌ಸಿಬಿಗೆ ದಿನೇಶ್‌ ಕಾರ್ತಿಕ್‌ ರಿಎಂಟ್ರಿ

    ಕಪ್ ಗೆದ್ದ ವೇಳೆ ಅವರು ಭಾರತಕ್ಕೆ ಟ್ರೋಫಿ ತಂದುಕೊಟ್ಟ ನೆಲದ ಮಣ್ಣನ್ನು ತಿನ್ನುವ ಮೂಲಕ ರೋಹಿತ್ ಶರ್ಮಾ ಕೃತಜ್ಞತೆಯನ್ನೂ ಸಲ್ಲಿಸಿದ್ದರು. ಅಲ್ಲದೇ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡು ರೋಹಿತ್ ಖುಷಿ ಹಂಚಿಕೊಂಡಿದ್ದರು. ಟ್ರೋಫಿಯನ್ನು ಅಪ್ಪಿಕೊಂಡು ಸಾರ್ಥಕತೆ ಮೆರೆದಿದ್ದರು. ಪತ್ನಿಯನ್ನು ಅಪ್ಪಿ ರೋಹಿತ್ ಆನಂದಭಾಷ್ಪ ಸುರಿಸಿದ್ದರು.

    ವಿಶ್ವಕಪ್ ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ರೋಹಿತ್ ಶರ್ಮಾ ಟಿ20 ವಿಶ್ವಕಪ್‍ಗೆ ಭಾವುಕ ವಿದಾಯ ಹೇಳಿದರು. ನಾನು ಟಿ20 ಕ್ರಿಕೆಟ್ ಆಡಲು ಪ್ರಾರಂಭಿಸಿದಾಗಿನಿಂದ ಅದನ್ನು ಆನಂದಿಸಿದ್ದೇನೆ. ಈ ಮಾದರಿಯ ಕ್ರಿಕೆಟ್‍ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ನಾನು ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ಕಪ್ ಗೆಲ್ಲುವ ಬಯಕೆಯಿತ್ತು, ಅದನ್ನು ಮಾಡಿದ್ದೇನೆ ಎಂದು ರೋಹಿತ್ ತಿಳಿಸಿದ್ದರು.

    ನನ್ನ ತಂಡದಲ್ಲಿ ಈ ರೀತಿಯ ಆಟಗಾರರನ್ನು ಹೊಂದಲು ನಾನು ತುಂಬಾ ಅದೃಷ್ಟಶಾಲಿಯಾಗಿದ್ದೇನೆ. ನನಗಾಗಿ ಮತ್ತು ಭಾರತಕ್ಕಾಗಿ ಆಡುತ್ತಿರುವ ಆಟಗಾರರಿಗೆ ನಿಜವಾಗಿಯೂ ಕೃತಜ್ಞರಾಗಿರಬೇಕು ಎಂದಿದ್ದರು. ಇದನ್ನೂ ಓದಿ: ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

  • ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

    ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

    ನವದೆಹಲಿ: ಟೀಂ ಇಂಡಿಯಾ (Team India) ಎರಡನೇ ಬಾರಿ ಟಿ20 ವಿಶ್ವಕಪ್‌ (T20 World Cup) ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ. ಈ ವಿಶ್ವದಾಖಲೆ ನಿರ್ಮಾಣಕ್ಕೆ 2023ರ ವಿಶ್ವಕಪ್‌ ಕ್ರಿಕೆಟ್‌ ನಂತರ ವೇದಿಕೆ ಸಜ್ಜು ಮಾಡಲಾಗಿತ್ತು.

    ಹೌದು. 2024ರ ಟಿ20 ವಿಶ್ವಕಪ್‌ ಜಯಿಸಲೇಬೇಕೆಂದು ಪಣ ತೊಟ್ಟಿದ್ದ ಬಿಸಿಸಿಐ (BCCI) ಆಸ್ಟ್ರೇಲಿಯಾ (Australia) ವಿರುದ್ಧ ಫೈನಲ್‌ ಪಂದ್ಯ ಸೋತ ನಂತರ ವಿಶ್ವಕಪ್‌ಗೆ ತಂಡವನ್ನು ಹೇಗೆ ಸಿದ್ಧಪಡಿಸಬೇಕೆಂದು ಗಂಭೀರವಾದ ಚರ್ಚೆ ನಡೆಸಿತು.

    ಈ ಚರ್ಚೆಯ ವೇಳೆ ಹಲವು ನಿರ್ಧಾರ ಕೈಗೊಳ್ಳಲಾಯಿತು. ಅದರಲ್ಲೂ ಮೂರು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಯಿತು. ಒಂದನೇಯದ್ದು ರೋಹಿತ್‌ ಶರ್ಮಾ (Rohit Sharma) ಮತ್ತು ವಿರಾಟ್‌ ಕೊಹ್ಲಿ (Virat Kohli) ಇನ್ನಿಂಗ್ಸ್‌ ಆರಂಭಿಸಬೇಕು, ಎರಡನೇಯದ್ದು ತಂಡದಲ್ಲಿ 4 ಮಂದಿ ಆಲ್‌ರೌಂಡರ್‌ ಇರಲೇಬೇಕು, ಮೂರನೇಯದ್ದು ಮೂವರು ಎಡಗೈ ಸ್ಪಿನ್ನರ್‌ ಇರಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.

    ಗಾಯವಾಗದ ಹೊರತು ಯಾವುದೇ ಕಾರಣಕ್ಕೂ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರನ್ನು ಬದಲಿಸಬಾರದು ಎಂಬ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದರೆ ಇಂಡಿಯಾ ಪರ ಆಡುವಾಗ ಮೂರನೇ ಕ್ರಮಾಂಕದಲ್ಲಿ ಬರುತ್ತಿದ್ದರು. ರೋಹಿತ್‌ ಜೊತೆ ಶುಭಮನ್‌ ಗಿಲ್‌, ಇಶನ್‌ ಕಿಶನ್‌, ಯಶಸ್ವಿ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸುತ್ತಿದ್ದರು. ಇದನ್ನೂ ಓದಿ: ಭಾರತ ಟಿ20 ವಿಶ್ವಕಪ್‌ ಗೆಲ್ಲುತ್ತೆ ಎಂದು ಭವಿಷ್ಯ ನುಡಿದಿದ್ದ ಜಯ್‌ ಶಾ – ವೀಡಿಯೋ ವೈರಲ್‌

    ಈ ವಿಶ್ವಕಪ್‌ನಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದಿದ್ದ ಕೊಹ್ಲಿ ಸೆಮಿಫೈನಲ್‌ವರೆಗೆ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದರು. 7 ಪಂದ್ಯಗಳಲ್ಲಿ ಕೇವಲ 75 ರನ್‌ ಸಿಡಿಸಿದ್ದ ಕೊಹ್ಲಿ ಫೈನಲ್‌ ಪಂದ್ಯದಲ್ಲಿ 76 ರನ್‌ ಸಿಡಿಸಿದ್ದರು. ಸಾಧಾರಣವಾಗಿ ಎರಡು, ಮೂರು ಪಂದ್ಯಗಳಲ್ಲಿ ಆಟಗಾರ ವಿಫಲನಾದರೆ ಆತನ ಬದಲು ಬೇರೊಬ್ಬ ಆಟಗಾರನನ್ನು ಆಡಿಸಲಾಗುತ್ತದೆ. ಎಲ್ಲಾ ತಂಡಗಳು ಈ ನಿರ್ಧಾರ ಕೈಗೊಳ್ಳುವುದು ಸಾಮಾನ್ಯ. ಆದರೆ ಭಾರತ ವಿರಾಟ್‌ ಕೊಹ್ಲಿ ಸತತ ಪಂದ್ಯಗಳಲ್ಲಿ ವಿಫಲವಾದರೂ ಅವರನ್ನು ಬದಲಾಯಿಸಲೇ ಇಲ್ಲ. ಸೆಮಿ ಫೈನಲ್‌ ವೇಳೆ ರೋಹಿತ್‌ ಶರ್ಮಾ, ರಾಹುಲ್‌ ದ್ರಾವಿಡ್‌ ಅವರು ಕೊಹ್ಲಿ ಫೈನಲ್‌ ಪಂದ್ಯದಲ್ಲಿ ಚೆನ್ನಾಗಿ ಆಡುತ್ತಾರೆ ಎಂದು ಭವಿಷ್ಯ ಸಹ ನುಡಿದಿದ್ದರು.

    ಸ್ಪಿನ್ನರ್‌ಗಳ ತಂಡಕ್ಕೆ ಬೇಕು ಹೌದು. ಆಯ್ಕೆ ಮಾಡುವಾಗ ಎಡಗೈ, ಬಲಗೈ ಬಗ್ಗೆ ಜಾಸ್ತಿ ತಂಡಗಳು ತಲೆ ಕೆಡಿಸಿಕೊಳ್ಳುವುದಿಲ್ಲ. ಒಬ್ಬರು ಎಡಗೈ ಇದ್ದರೆ, ಇಬ್ಬರು ಬಲಗೈ ಅಥವಾ ಇಬ್ಬರು ಬಲಗೈ ಇದ್ದರೆ ಒಬ್ಬರು ಎಡಗೈ ಸ್ಪಿನ್ನರ್‌ಗಳನ್ನು ಆಡಿಸುತ್ತಾರೆ. ಆದರೆ ಮೂವರು ಎಡಗೈ ಸ್ಪಿನ್ನರ್‌ಗಳನ್ನೇ ಟೀಂ ಇಂಡಿಯಾ ಗ್ರೂಪ್‌ 8, ಸೆಮಿ ಫೈನಲ್‌, ಫೈನಲ್‌ನಲ್ಲಿ ಆಡಿಸಿತ್ತು. ಕ್ರಿಕೆಟ್‌ನಲ್ಲಿ ಈ ರೀತಿಯ ನಿರ್ಧಾರ ಕೈಗೊಳ್ಳುವುದು ಬಹಳ ಅಪರೂಪ. ಕುಲದೀಪ್‌ ಯಾದವ್‌, ಅಕ್ಷರ್‌ ಪಟೇಲ್‌, ರವೀಂದ್ರ ಜಡೇಜಾ ಅವರು ತಮ್ಮ ಆಯ್ಕೆಯನ್ನು ಸರಿ ಎಂಬಂತೆ ನಿರೂಪಿಸಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಟ್ರೋಫಿ ತಂದುಕೊಟ್ಟ ನೆಲದ ಮಣ್ಣನ್ನು ತಿಂದ ರೋಹಿತ್‌ ಶರ್ಮಾ – ವೀಡಿಯೋ ವೈರಲ್‌

    4 ಮಂದಿ ಆಲ್‌ರೌಂಡರ್‌ಗಳಾಗಿ ಹಾರ್ದಿಕ್‌ ಪಟೇಲ್‌, ಅಕ್ಷರ್‌ ಪಟೇಲ್‌, ರವೀಂದ್ರ ಜಡೇಜಾ, ಶಿವಂ ದುಬೆ ಅವರನ್ನು ಆಯ್ಕೆ ಮಾಡಲಾಗಿತ್ತು. ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌ ಆಲ್‌ರೌಂಡರ್‌ಗಳಾಗಿ 11ರ ಒಳಗಡೆ ಸ್ಥಾನ ಪಡೆದಿದ್ದರು. ಶಿವಂ ದುಬೆಗೆ ಹೆಚ್ಚಿನ ಬೌಲಿಂಗ್‌ ಅವಕಾಶ ನೀಡದೇ ಇದ್ದರೂ ಅವರೊಬ್ಬ ಮಧ್ಯಮ ವೇಗಿ ಬೌಲರ್‌ ಆಗಿದ್ದಾರೆ.

    ನಾಲ್ವರು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಿದ್ದಕ್ಕೆ ಮಾಧ್ಯಮಗಳು ರೋಹಿತ್‌ ಶರ್ಮಾ ಅವರ ಬಳಿ ಪ್ರಶ್ನೆ ಕೇಳಿದ್ದವು. ಇದಕ್ಕೆ ರೋಹಿತ್‌, ಈ ವಿಚಾರದ ಬಗ್ಗೆ ನಾನು ಹೆಚ್ಚಿನ ವಿವರ ನೀಡಲು ಬಯಸುವುದಿಲ್ಲ. ನಮ್ಮ ವಿರುದ್ಧ ತಂಡದ ನಾಯಕರು ಇದನ್ನು ಕೇಳುತ್ತಾರೆ ಅಂತ ಅಂದುಕೊಂಡಿದ್ದೇನೆ. ನಾವು ಕೆರೆಬಿಯನ್‌ ನಾಡಿನಲ್ಲಿ ಸಾಕಷ್ಟು ಕ್ರಿಕೆಟ್‌ ಆಡಿದ್ದೇವೆ. ಪರಿಸ್ಥಿತಿ ಹೇಗಿವೆ ಅನ್ನುವುದು ನಮಗೆ ತಿಳಿದಿವೆ. ಪಂದ್ಯ ಬೆಳಗ್ಗೆ 10, 10:30ಕ್ಕೆ ಆರಂಭವಾಗುವ ಕಾರಣ ಇದರಲ್ಲಿ ಸ್ವಲ್ಪ ತಾಂತ್ರಿಕ ಅಂಶ ಅಡಗಿದೆ ಎಂದು ಹೇಳಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

  • ಕೊಹ್ಲಿ ಜೊತೆಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಹಿಟ್‌ಮ್ಯಾನ್‌ ವಿದಾಯ!

    ಕೊಹ್ಲಿ ಜೊತೆಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಹಿಟ್‌ಮ್ಯಾನ್‌ ವಿದಾಯ!

    ನವದೆಹಲಿ: ಸುದೀರ್ಘ 17 ವರ್ಷಗಳ ಬಳಿಕ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಶನಿವಾರ T20I ನಿವೃತ್ತಿ ಘೋಷಿಸಿದ್ದಾರೆ.

    ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತಿ ಘೋಷಿಸಿದರು. ಭಾರತದ ವಿಜಯೋತ್ಸವದ ಅಭಿಯಾನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ರೋಹಿತ್, ಏಕದಿನ ಮತ್ತು ಟೆಸ್ಟ್‌ಗಳಲ್ಲಿ ಭಾರತ ತಂಡ ಪ್ರತಿನಿಧಿಸುವುದನ್ನು ಮುಂದುವರಿಸುವುದಾಗಿ ಖಚಿತಪಡಿಸಿದರು. ಟಿ20 ವಿಶ್ವಕಪ್‌ ಟ್ರೋಫಿಯನ್ನು ಭಾರತದ ಮಡಿಲಿಗಿಟ್ಟು ಇಬ್ಬರೂ ಕ್ರಿಕೆಟಿಗರು ವಿದಾಯ ಹೇಳಿದ್ದಾರೆ.

    ಇದು ನನ್ನ ಕೊನೆಯ ಪಂದ್ಯವೂ ಆಗಿತ್ತು. ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಪ್ರಶಸ್ತಿ ಗೆಲುವನ್ನು ಪದಗಳಲ್ಲಿ ಹೇಳುವುದು ತುಂಬಾ ಕಷ್ಟ ಎಂದು ರೋಹಿತ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

    ಅಂತಾರಾಷ್ಟ್ರೀಯ ಟಿ20ಯಲ್ಲಿ ರೋಹಿತ್‌ ಶರ್ಮಾ ಒಟ್ಟು 159 ಪಂದ್ಯಗಳನ್ನಾಡಿದ್ದು, 4,231 ರನ್‌ ಗಳಿಸಿದ್ದಾರೆ. ಟಿ20 ಯಲ್ಲಿ 32 ಅರ್ಧಶತಕ ಮತ್ತು 5 ಶತಕ ಸಿಡಿಸಿ ಮಿಂಚಿದ್ದಾರೆ. ವಿರಾಟ್‌ ಕೊಹ್ಲಿ 125 ಪಂದ್ಯಗಳನ್ನಾಡಿದ್ದು, ಒಟ್ಟು 4,188 ರನ್‌ ಗಳಿಸಿದ್ದಾರೆ. ಕೊಹ್ಲಿ 38 ಅರ್ಧಶತಕ ಮತ್ತು 1 ಶತಕ ಸಿಡಿಸಿದ್ದಾರೆ.

    ಶನಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ನೀಡಿದ್ದ 177 ರನ್‌ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಉತ್ತಮ ಪ್ರದರ್ಶನ ನೀಡಿತ್ತು. ಕೊನೆ ಘಳಿಗೆಯಲ್ಲಿ 30 ಬಾಲ್‌ಗಳಿಗೆ 30 ರನ್‌ ಬೇಕು ಎಂದಿದ್ದಾಗ ಭಾರತಕ್ಕೆ ಟ್ರೋಫಿ ಕೈ ತಪ್ಪಿತು ಎಂದೇ ಭಾವಿಸಲಾಗಿತ್ತು. ಈ ಹಂತದಲ್ಲಿ ನಡೆದ ಮ್ಯಾಜಿಕ್‌ ಅಸಾಧಾರಣ. ಸಂದಿಗ್ಧ ಸನ್ನಿವೇಶದಲ್ಲಿ ಜಸ್ಪ್ರಿತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯ, ಅರ್ಷದೀಪ್‌ ಸಿಂಗ್‌ ಬೌಲಿಂಗ್‌ನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಕೊನೆ ಓವರ್‌ನಲ್ಲಿ ಪಾಂಡ್ಯ ಮಿಂಚಿದರು. ಈ ನಡುವೆ ಸೂರ್ಯಕುಮಾರ್‌ ಯಾದವ್‌ ಹಿಡಿದ ಕ್ಯಾಚ್‌ ಗಮನ ಸೆಳೆಯಿತು. ಕೊನೆಯದಾಗಿ ಭಾರತ 7 ರನ್‌ಗಳ ರೋಚಕ ಜಯ ಸಾಧಿಸಿ ಟ್ರೋಫಿಗೆ ಮುತ್ತಿಕ್ಕಿತು.

  • ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

    ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

    – ಸೂರ್ಯ, ಎಂತಹ ಅದ್ಭುತ ಕ್ಯಾಚ್‌ ಎಂದು ಬಣ್ಣಿಸಿದ ರಾಹುಲ್‌ ಗಾಂಧಿ

    ನವದೆಹಲಿ: 17 ವರ್ಷಗಳ ಬಳಿಕ ಭಾರತಕ್ಕೆ ಟಿ20 ವಿಶ್ವಕಪ್‌ (T20 World Cup) ತಂದುಕೊಟ್ಟ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಭಿನಂದನೆ ಸಲ್ಲಿಸಿದ್ದಾರೆ.

    ಚಾಂಪಿಯನ್ಸ್! ನಮ್ಮ ತಂಡವು T20 ವಿಶ್ವಕಪ್ ಅನ್ನು ಸ್ಟೈಲ್‌ನಲ್ಲಿ ಮನೆಗೆ ತಂದಿದೆ. ಭಾರತ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ವಿಶ್‌ ಮಾಡಿದ್ದಾರೆ. ಜೊತೆಗೆ ವೀಡಿಯೋ ಸಂದೇಶ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌; 7 ಪಂದ್ಯಗಳಲ್ಲಿ ಕೇವಲ 75 ರನ್‌, 8ನೇ ಪಂದ್ಯದಲ್ಲಿ ಕಿಂಗ್‌ ಕೊಹ್ಲಿ 76 ರನ್‌

    ಟೀಂ ಇಂಡಿಯಾ ವಿಶ್ವಕಪ್‌ ಅಷ್ಟೇ ಅಲ್ಲ, ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದೆ. ಒಂದೇ ಒಂದು ಪಂದ್ಯವನ್ನು ಸೋಲದಿರುವುದು ಸಣ್ಣ ಸಾಧನೆಯಲ್ಲ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

    ಈ ಅದ್ಭುತ ಗೆಲುವಿಗಾಗಿ ಭಾರತಕ್ಕೆ ಅಭಿನಂದನೆಗಳು. ಇಂದು, 140 ಕೋಟಿ ದೇಶವಾಸಿಗಳು ನಿಮ್ಮ ಅದ್ಭುತ ಪ್ರದರ್ಶನದ ಬಗ್ಗೆ ಹೆಮ್ಮೆಪಡುತ್ತಾರೆ. ನೀವು ವಿಶ್ವಕಪ್ ಗೆದ್ದಿದ್ದೀರಿ ಮತ್ತು ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದೀರಿ. ನೀವು ಒಂದು ಪಂದ್ಯವನ್ನೂ ಸೋತಿಲ್ಲ. ಅದು ಸಣ್ಣ ಸಾಧನೆಯಲ್ಲ. ನೀವು ಅದ್ಭುತ ವಿಜಯವನ್ನು ಸಾಧಿಸಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಪೋಸ್ಟ್‌ ಹಾಕಿದ್ದು, ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಎಂದಿಗೂ ಬತ್ತದ ಉತ್ಸಾಹದಿಂದ, ತಂಡವು ಕಠಿಣ ಪರಿಸ್ಥಿತಿಗಳಲ್ಲಿ ಸಾಗಿತು. ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮ ಕೌಶಲ್ಯವನ್ನು ಪ್ರದರ್ಶಿಸಿತು. ಫೈನಲ್‌ ಪಂದ್ಯದಲ್ಲಿ ಅಸಾಧಾರಣ ಗೆಲುವು. ಟೀಮ್ ಇಂಡಿಯಾ! ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಶ್ಲಾಘಿಸಿದ್ದಾರೆ.

    ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ರೋಹಿತ್ ಶರ್ಮಾ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಅದ್ಭುತ ವಿಶ್ವಕಪ್ ವಿಜಯ ಮತ್ತು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾಗೆ ಅಭಿನಂದನೆಗಳು! ಸೂರ್ಯ, ಎಂತಹ ಅದ್ಭುತ ಕ್ಯಾಚ್! ರೋಹಿತ್, ಈ ಗೆಲುವು ನಿಮ್ಮ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ರಾಹುಲ್, ಟೀಮ್ ಇಂಡಿಯಾ ನಿಮ್ಮ ಮಾರ್ಗದರ್ಶನವನ್ನು ಕಳೆದುಕೊಳ್ಳುತ್ತದೆ ಎಂದು ನನಗೆ ತಿಳಿದಿದೆ. ಅದ್ಭುತ ಮೆನ್‌ ಇನ್‌ ಬ್ಲ್ಯೂ ನಮ್ಮ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: 2 ಟಿ20 ವಿಶ್ವಕಪ್‌ – ಭಾರತದ ಪರ ವಿಶಿಷ್ಟ ದಾಖಲೆ ಬರೆದ ಹಿಟ್‌ಮ್ಯಾನ್‌

    ಭಾರತ ತಂಡವು ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿತು ಮತ್ತು ರೋಹಿತ್ ಶರ್ಮಾ ಮತ್ತು ಕಂಪನಿಯು 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಮನೆಗೆ ತಂದಿತು ಮತ್ತು 2011 ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವು.